ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ಗಣಕಯಂತ್ರ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಾಜೇಶ್ವರಿಗೆ 553 ಅಂಕ ದೊರೆತಿದ್ದು, ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ. ಈಕೆ ಕುಂದಾಪುರ ನಿವಾಸಿ ನಾಗಾರ್ಜುನ ಹಾಗೂ ಸರೋಜಾ ದಂಪತಿಗಳ ಪುತ್ರಿ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶ್ರೀ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿನಿ ಸೃಷ್ಟಿ ಶೇ.95 ಫಲಿತಾಂಶ ಪಡೆದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ. ಒಟ್ಟು 569 ಅಂಕ ಪಡೆದಿರುವ ಸೃಷ್ಟಿ ಇಂಗ್ಲೀಷ್ನಲ್ಲಿ 91, ಹಿಂದಿ 85, ಫಿಜಿಕ್ಸ್ 97, ಕೆಮಿಸ್ಟ್ರಿ 96, ಮ್ಯಾಥ್ಸ್ 100 ಕಂಪ್ಯೂಟರ್ ಸೈನ್ಸ್ ನಲ್ಲಿ 100 ಅಂಕ ಪಡೆದಿದ್ದಾಳೆ. ಈಕೆ ಉಪ್ರಳ್ಳಿ ಮಡಿಹಿತ್ಲು ಬಾಬು ಪೂಜಾರಿ ಹಾಗೂ ಶ್ರೀಮತಿ ದಂಪತಿಗಳ ಪುತ್ರಿಯಾಗಿದ್ದಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ರ್ಯಾಂಕ್ ದೊರೆತಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಾಹುಲ್ ಪೂಜಾರಿ 588 ಅಂಕ ಗಳಿಸಿ ರಾಜ್ಯಕ್ಕೆ 9ನೇ ಸ್ಥಾನ ಪಡೆದಿದ್ದರೆ, ವೈಷ್ಣವಿ 587 ಅಂಕ ಗಳಿಸಿ ರಾಜ್ಯಕ್ಕೆ 10ನೇ ಸ್ಥಾನ ಪಡೆದಿದ್ದಾಳೆ. ಕಾಲೇಜು ಈ ಭಾರಿ ಶೆ.93.23 ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂಧಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ವಕ್ವಾಡಿ ಗುರುಕುಲ ಪದವಿಪೂರ್ವ ಕಾಲೇಜು ಶೈಕ್ಷಣಿಕ ವರ್ಷ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದಿರುತ್ತದೆ. ಒಟ್ಟು ವಿದ್ಯಾರ್ಥಿಗಳಲ್ಲಿ ಶೇ.48.14 ಉನ್ನತ ಶ್ರೇಣಿಯಲ್ಲಿ, ಶೇ.51.85 ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ವಿಜ್ಞಾನ ವಿಭಾಗದಲ್ಲಿ ಶೇ.41.66 ವಾಣಿಜ್ಯ ವಿಭಾಗದಲ್ಲಿ 53.33 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೆರ್ಗಡೆ ಹೊಂದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅನನ್ಯ ಆರ್. ಶೆಟ್ಟಿ (578), ದೀಕ್ಷಾ ಎಚ್. ಶೆಟ್ಟಿ(576), ಶ್ರೇಯಾ ಜೆ. ಹೆಗ್ಡೆ (568), ಶ್ರಾವ್ಯಾ ಶೆಟ್ಟಿ(565), ವಿ.ಆರ್.ಭುವನ ಗೌಡ(546), ಶ್ರೇಯಸ್ ಶೆಟ್ಟಿ(535),ತನ್ವಿ ಜಿ. ಶೆಟ್ಟಿ(523), ಶ್ರೀರಕ್ಷಾ ಕೆ.ಎ(516) ಹಾಗೂ ವಿಜ್ಞಾನ ವಿಭಾಗದಲ್ಲಿ ಸಾನಿಯಾ ಶೇಖ್ (562), ದಿಶಾ ಎಚ್. ಶೆಟ್ಟಿ(538), ಭವಿಷ್ ಎಸ್. ಶೆಟ್ಟಿ(535), ವರ್ಷಿತ್ ಎಮ್(529), ಬಸವರಾಜ್ ಮಠದ್(521) ಇವರು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಭೋದಕ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.21: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಏಪ್ರಿಲ್ 25 ಮತ್ತು 26 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 33/11 ಕೆ.ವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಉಡುಪಿ-2 ಮತ್ತು ಉಡುಪಿ-3 ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಉಡುಪಿ ನಗರ ಪ್ರದೇಶಗಳಾದ ಅಜ್ಜರಕಾಡು, ಕೋರ್ಟ್ ರಸ್ತೆ, ಕೋರ್ಟ್ ಬ್ಯಾಕ್ ರಸ್ತೆ, ಪಿ.ಡಬ್ಲ್ಯೂ.ಡಿ ಆಫೀಸ್, ತೆಂಕಪೇಟೆ, ಕೆ.ಎಂ.ಮಾರ್ಗ, ಮಾರುತಿ ವಿಥೀಕಾ, ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಕನಕದಾಸ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆ.ವಿ ಬ್ರಹ್ಮಾವರ, ಮಾಬುಕಳ, ಉಪ್ಪೂರು, ಚೇರ್ಕಾಡಿ ಫೀಡರ್ ಮಾರ್ಗದಲ್ಲಿ, 110/11ಕೆ.ವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆ.ವಿ ಶಾಂತಿವನ ಫೀಡರ್ ಮಾರ್ಗದಲ್ಲಿ ಹಾಗೂ 110/11 ಕೆ.ವಿ ಮಧುವನ ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆ.ವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್. ಶೆಟ್ಟಿ ಪಿಯುಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅರ್ಪಿತಾ ನರಸಿಂಹ ಪೂಜಾರಿಗೆ 554 ಅಂಕ ದೊರೆತಿದ್ದು, ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ. ಈಕೆ ಕೆರ್ಗಾಲು ಗ್ರಾಮದ ನಿವಾಸಿ ನರಸಿಂಹ ಪೂಜಾರಿ ಹಾಗೂ ಚಂದ್ರಾವತಿ ದಂಪತಿಗಳ ಪುತ್ರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯು 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಕುಂದಾಪುರ ಎಕ್ಸಲೆಂಟ್ ಪಿ.ಯು ಕಾಲೇಜಿನ ಐವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ರ್ಯಾಂಕ್ ಪಡೆದಿದ್ದು ಸಂಸ್ಥೆಗೆ ಹೆಮ್ಮೆ ತಂದಿರುತ್ತಾರೆ. ಸಂಸ್ಥೆಯ ವಿದ್ಯಾರ್ಥಿನಿ ವಾಸವಿ ಬೋಳಾರ್ ವಿಜ್ಞಾನ ವಿಭಾಗದಲ್ಲಿ 592 ಅಂಕ ಪಡೆದು ರಾಜ್ಯಕ್ಕೆ 5ನೇ ರ್ಯಾಂಕ್ ಹಾಗೂ ಉಡುಪಿ ಜಿಲ್ಲೆಗೆ 3ನೇ ರ್ಯಾಂಕ್ ಪಡೆದಿರುತ್ತಾಳೆ. ಪ್ರಸ್ತುತ ಎಕ್ಸಲೆಂಟ್ ಪಿ.ಯು ಕಾಲೇಜಿನಲ್ಲಿ ಪಿ.ಸಿ.ಎಮ್.ಸಿ ವಿಭಾಗದಲ್ಲಿ ಅಭ್ಯಾಸಿಸಿರುತ್ತಾಳೆ. ವಿದ್ಯಾರ್ಥಿ ಅಮೋಘ ಶೆಟ್ಟಿ ವಾಣಿಜ್ಯ ವಿಭಾಗದಲ್ಲಿ 591 ಅಂಕ ಪಡೆದು ರಾಜ್ಯಕ್ಕೆ 7ನೇ ರ್ಯಾಂಕ್ ಹಾಗೂ ಉಡುಪಿ ಜಿಲ್ಲೆಗೆ 4ನೇ ಸ್ಥಾನಿಯಾಗಿ ಹೊರಹೊಮ್ಮುವುದರ ಜೊತೆಗೆ ಮೂರು ವಿಷಯಗಳಲ್ಲಿ 100 ಕ್ಕೆ 100ಅಂಕಗಳನ್ನು ಗಳಿಸಿರುತ್ತಾನೆ. ವಿದ್ಯಾರ್ಥಿಗಳಾದ ಸ್ನೇಹ 590 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 8ನೇ ರ್ಯಾಂಕ್ಗಳಿಸಿ ಉಡುಪಿ ಜಿಲ್ಲೆಗೆ 5ನೇ ಸ್ಥಾನಿಯಾಗಿ ಹೊರ ಹೊಮ್ಮಿದರೆ, ಪ್ರಣಿತಾ ಅಡಿಗ 588 ಅಂಕಗಳನ್ನು ಪಡೆಯುವುದರ ಮೂಲಕ 9ನೇ ರ್ಯಾಂಕ್ ಹಾಗೂ ಶ್ರೀನಿಧಿ ಶೆಟ್ಟಿ 587 ಅಂಕಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕುಂದಾಪುರ ತಾಲೂಕು ಘಟಕದ ವತಿಯಿಂದ ತ್ರಾಸಿಯ ಮಸ್ಜಿದ್ ಎ ರಹಮತ್ ನಲ್ಲಿ ತಾಲೂಕು ಅಧ್ಯಕ್ಷರಾದ ಎಸ್. ದಸ್ತಗೀರ್ ಕಂಡ್ಲೂರು ರವರ ಅಧ್ಯಕ್ಷತೆಯಲ್ಲಿ ಪವಿತ್ರ ರಮಝಾನ್ ತಿಂಗಳ ಪ್ರಯುಕ್ತ “ಸೌಹಾರ್ದ ಇಫ್ತಾರ್ ಕೂಟ” ಮತ್ತು ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಸಮಿತಿ ಸದಸ್ಯರಾದ ಹುಸೇನ್ ಕೊಡಿಬೇಂಗ್ರೆ ವಿಷಯ ಮಂಡಿಸಿದರು. ಅತಿಥಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಮುಹಮ್ಮದ್ ರಫೀಕ್ ಗಂಗೊಳ್ಳಿ, ಜಮಾಅತುಲ್ ಮುಸ್ಲಿಮೀನ್ ಗಂಗೊಳ್ಳಿಯ ಅಧ್ಯಕ್ಷರಾದ ಹಸೈನಾರ್ ಗಂಗೊಳ್ಳಿ, ಮಸ್ಜಿದ್ ಎ ರಹಮತ್ ತ್ರಾಸಿಯ ಕಾರ್ಯದರ್ಶಿ ಮಾಸ್ಟರ್ ರಫೀಕ್, ಜೈ ಭೀಮ್ ಅಧ್ಯಕ್ಷರಾದ ಜಗದೀಶ್ ಗಂಗೊಳ್ಳಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತಾಲೂಕು ಕೋಶಾಧಿಕಾರಿ ಮುಜಾವರ್ ಅಬು ಮುಹಮ್ಮದ್ ಕುಂದಾಪುರ, ಜಿಲ್ಲಾ ಸಮಿತಿ ಸದಸ್ಯರಾದ ಶಾಬಾನ್ ಹಂಗಳೂರು, ಜಿ. ರೆಹಾನ್ ತ್ರಾಸಿ, ತಾಲೂಕು ಸಮಿತಿ ಸದಸ್ಯರಾದ ಝಹೀರ್ ನಾಖುದಾ ಗಂಗೊಳ್ಳಿ, ಅಬ್ದುಲ್ ಖಾದರ್ ಮೂಡಗೋಪಾಡಿ, ಮುಹಮ್ಮದ್ ರಫೀಕ್ ವಂಡ್ಸೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಐಶ್ವರ್ಯ ಖಾರ್ವಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 6ನೇ ರ್ಯಾಂಕ್ ಪಡೆದಿರುತ್ತಾಳೆ. ಕಾಲೇಜಿನ ವಿಧ್ಯಾರ್ಥಿಗಳು 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದ ಐಶ್ವರ್ಯ ಖಾರ್ವಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 6ನೇ ರ್ಯಾಂಕ್ ಪಡೆದಿರುತ್ತಾಳೆ. ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲಿಯೇ ವಿವಿಧ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ ಪೂರ್ಣಗೊಳಿಸಿ, ದ್ವೀತಿಯ ಪಿ.ಯು.ಸಿ.ಗೆ ನೇರವಾಗಿ ನಮ್ಮ ಕಾಲೇಜಿನಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.
