ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಮತ್ತು ಸರಕಾರಿ ಪ್ರೌಢಶಾಲೆ ಬಸ್ರೂರು ಇದರ ಸಹಯೋಗದಲ್ಲಿ ’ಮಕ್ಕಳಿಗಾಗಿ ಕಾರಂತರು’ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ’ಡಾ. ಕಾರಂತರ ಪರಿಚಯ ರಂಗವಲ್ಲಿಯ ಮೂಲಕ ಕಾರಂತರು ಕಾರ್ಯಕ್ರಮವು ಬಸ್ರೂರು ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿತು. ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾರಂತರನ್ನು ಸರಳ ರೀತಿಯಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ರಂಗವಲ್ಲಿಯ ಮೂಲಕ ಕಾರಂತರು ಕಾರ್ಯಕ್ರಮವನ್ನು ಹಮ್ಮಿ ಕೊಂಡಿದ್ದು, ಎಲ್ಲಾ ಕ್ಷೇತ್ರಗಳಲ್ಲಿಯೂ ಕಾರ್ಯನಿರ್ವಹಿಸಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಕಾರಂತರ ಮೇರು ವ್ಯಕ್ತಿತ್ವದ ಕುರಿತು ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವುದು ಅತೀ ಅವಶ್ಯ ಎಂದರು. ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಜಿ.ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಚೋಮನ ದುಡಿ ಚಲನಚಿತ್ರದ ಔಚಿತ್ಯವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿದ ಶ್ರೀ ಬಸ್ರೂರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಬಿ.ಎಲ್.ಓ ಹಾಗೂ ಬಿ.ಎಲ್.ಎ ಗಳು ಅತ್ಯಂತ ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ಜಾಗರೂಕತೆಯಿಂದ ನಿರ್ವಹಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುವಲ್ಲಿ ಸಕ್ರಿಯ ಪಾತ್ರ ವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಬುಧವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ, ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ – 2026 ಕ್ಕೆ ಸಂಬಂಧಿಸಿದಂತೆ, ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಬಿ.ಎಲ್.ಓ ಮತ್ತು ಬಿ.ಎಲ್.ಎ ಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಯಶಸ್ಸು ಪಾರದರ್ಶಕ ಮತದಾರರ ಪಟ್ಟಿಯ ಮೇಲೆ ಅವಲಂಬಿತವಾಗಿರುತ್ತದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ಬಿ.ಎಲ್.ಓ ಹಾಗೂ ಬಿ.ಎಲ್.ಎ ಗಳು ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಹಾಗೂ ನೈಜ ಮತದಾರರು ಯಾವುದೇ ಕಾರಣಕ್ಕೂ ಮತದಾನ ಪ್ರಕ್ರಿಯೆಯಿಂದ ವಂಚಿತರಾಗದಂತೆ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದರು. ಸಂಪೂರ್ಣ ಪರಿಷ್ಕೃತವಾದ ಹೊಸ ಮತದಾರರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹತ್ವಾಕಾಂಕ್ಷೆಯ ಸಿದ್ದಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ತಕ್ಷಣ ಪುನರಾರಂಭಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ. ಸಿದ್ದಾಪುರ ಏತ ನೀರಾವರಿ ಯೋಜನೆ ಎಲ್ಲಾ ತಾಂತ್ರಿಕ ಹಾಗೂ ತಜ್ಞರ ಸಮಿತಿಗಳ ಅನುಮೋದನೆ ಪಡೆದು ಆರಂಭಗೊಂಡಿದ್ದು, ಯೋಜನೆ ಪೂರ್ಣಗೊಂಡಲ್ಲಿ 7 ರಿಂದ 8 ಗ್ರಾಮಗಳ ಸುಮಾರು 1,200 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ರೈತ ಸಮುದಾಯದ ಬಹುಕಾಲದ ಬೇಡಿಕೆಯಾಗಿರುವ ಈ ಯೋಜನೆಯ ಕಾಮಗಾರಿಯು ಈಗಾಗಲೇ ಶೇ.56 ರಷ್ಟು ಪೂರ್ಣಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಆದರೆ ಕೆಲವು ತಪ್ಪು ಮಾಹಿತಿಗಳ ಆಧಾರದ ಮೇಲೆ ಯೋಜನೆಯ ಕಾಮಗಾರಿಗೆ ತಡೆ ಉಂಟಾಗಿದ್ದು, ಕಳೆದ 6 ರಿಂದ 7 ತಿಂಗಳಿನಿಂದ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದೆ. ವರಾಹಿ ನದಿಯಲ್ಲಿ ಸುಮಾರು 3,000 ಕ್ಯೂಸೆಕ್ಸ್ ನೀರಿನ ಹರಿವು ಲಭ್ಯವಿದ್ದು, ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಕಲಿಕೆ ಮಾತ್ರವಲ್ಲದೆ ಅನೇಕ ಮೌಲ್ಯಗಳು, ಶಿಸ್ತು, ಆತ್ಮವಿಶ್ವಾಸವನ್ನು ಮೈಗೂಡಿಸಿಕೊಳ್ಳಬೇಕೆಂಬ ಸದುದ್ದೇಶದಿಂದ ಪ್ರಾರಂಭವಾದ ಕ್ರಿಯೇಟಿವ್ ಸಂಸ್ಥೆಯ ವಿನೂತನ ಪರಿಕಲ್ಪನೆ ಕ್ರಿಯೇಟಿವ್ ಸ್ಫೂರ್ತಿ ಮಾತು ಕಾರ್ಯಕ್ರಮದ 15 ಸರಣಿ ಕಾರ್ಯಕ್ರಮವು ಸಪ್ತಗಿರಿ ವೇದಿಕೆಯಲ್ಲಿ ಜರುಗಿತು. ಖ್ಯಾತ ವಾಗ್ಮಿಗಳು, ರಾಷ್ಟ್ರೀಯ ಜೆಸಿಐ ತರಬೇತುರಾರರಾದ ಕೆ. ರಾಜೇಂದ್ರ ಭಟ್ ಕಾರ್ಯಕ್ರಮವನ್ನು ನಡೆಸಿಕೊಟ್ಟು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅನೇಕ ಸಾಮರ್ಥ್ಯಗಳಿವೆ ಅದನ್ನು ಶೋಧಿಸಿ ಹೊರತೆಗೆದಾಗ ಅವರಿಗೆ ತಮ್ಮ ಸಾಮರ್ಥ್ಯದ ಅರಿವು ಉಂಟಾಗುತ್ತದೆ. ಓದು ಅನ್ನುವುದು ಭಾವನಾತ್ಮಕವಾದಾಗ ಅದು ಸಾರ್ಥಕತೆಯನ್ನು ಪಡೆಯುತ್ತದೆ. ತಾಳ್ಮೆ ವಿದ್ಯಾರ್ಥಿಯನ್ನು ಉತ್ತುಂಗ ಮಟ್ಟಕ್ಕೆ ಕೊಂಡೊಯ್ಯುತ್ತದೆ. ವಿದ್ಯಾರ್ಥಿಗಳು ನಿರ್ಭೀತಿಯಿಂದ ಕೆಲಸ ಕಾರ್ಯಗಳನ್ನು ಮಾಡಿದಾಗ ಯಶಸ್ಸನ್ನು ಕಾಣಲು ಸಾಧ್ಯ. ಸರಳ ಜೀವನ ಶೈಲಿಯನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕೆಂದು ವಿವಿಧ ಪ್ರಾತ್ಯಕ್ಷಿಕೆ ಗಳ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಕಾಲೇಜಿನ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಅವರು ಸಂಸ್ಥೆಯಲ್ಲಿ ನಡೆಯುವ ಪಾಠ ಪ್ರವಚನಗಳು ಹಾಗೂ ಶೈಕ್ಷಣಿಕ ವರ್ಷದಲ್ಲಿ ನಡೆಯುವ ಅನೇಕ ಕಾರ್ಯಕ್ರಮಗಳ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಪಾಂಡೇಶ್ವರ ಮೂಡಹಡು 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ರವಿ ಕುದ್ರು, ನಾರಾಯಣ ವಿ ಆಚಾರ್, ವಿಜಯ್ ಆಚಾರ್, ಉಪಾಧ್ಯಕ್ಷರಾಗಿ ಗಣೇಶ್ ಆಚಾರ್, ಕಾರ್ಯದರ್ಶಿಯಾಗಿ ವಿಘ್ನೇಶ ಸಾಧನ,ದಿನೇಶ್ ಬಾಂದವ್ಯ ಜೊತೆ ಕಾರ್ಯದರ್ಶಿ ಮಮತಾ, ಭುವನ,ಸಾಗರ, ರಾಘವೇಂದ್ರ ಆಚಾರ್, ಕೋಶಧಿಕಾರಿಯಾಗಿ ನಾಗೇಂದ್ರ, ಕಲಾ ಕಾರ್ಯದರ್ಶಿಯಾಗಿ ವಿಜಯ ಮೂಡಕಟ್ಟು, ವಿಜೇತ್ ಆಚಾರ್, ಜೊತೆ ಕಲಾ ಕಾರ್ಯದರ್ಶಿಯಾಗಿ ಆದರ್ಶ್ ಆಚಾರ್ ಸುಜಾತಾ ವೆಂಕಟೇಶ, ಜ್ಯೋತಿ ಚಂದ್ರ ನಾಯ್ಕ್, ರತ್ನ, ಕ್ರೀಡಾ ಕಾರ್ಯದರ್ಶಿಯಾಗಿ ರತ್ನಕರ ಆಚಾರ್, ಶ್ಯಾಮಲ ವಿಜಯ್, ಜೊತೆ ಕ್ರೀಡಾ ಕಾರ್ಯದರ್ಶಿ ಮೀನಾ ರವಿ, ಶ್ರೇಯಸ್, ಕಾರ್ತಿಕ್ ಮಣಿ, ಅಭಯ ಅಹನ್, ಜ್ಯೋತಿ, ನಾಗರತ್ನ, ಸೀಮಾ ವಿಜಯ್, ಕಾವೇರಿ ಆಯ್ಕೆಯಾಗಿದ್ದಾರೆ. ಅಲಂಕಾರ ಸಮಿತಿಯಲ್ಲಿ ಚಂದ್ರ, ನಾಗರಾಜ, ರವಿಕಿರಣ, ಸುಧಾಕರ್ ಆಚಾರ್, ಮೆರವಣಿಗೆ ಉಸ್ತುವಾರಿಯಾಗಿ ರವೀಶ್ ಶ್ರೀಯಾನ್, ರಕ್ಷಿತ್ ಹೊಳ್ಳ,ಗಣೇಶ್ ಬೆಣ್ಣೆಕುದ್ರು, ಪ್ರಶಾಂತ್, ರಾಘವೇಂದ್ರ ಪೂಜಾರಿ, ಶಾಲಿನಿ, ವಿಮಲಾ, ಗೀತಾ ಮೇಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಗ್ಧತೆಯಿಂದ ಪ್ರೌಢತೆಯತ್ತ ಸಾಗುವ ಸ್ಥಿತ್ಯಂತರದ ಅವಧಿಯಲ್ಲಿರುವ ವಿದ್ಯಾರ್ಥಿಗಳು ಸರಿ-ತಪ್ಪುಗಳ ಬಗ್ಗೆ ನಿಖರವಾದ ತಿಳುವಳಿಕೆಯನ್ನು ಪಡೆಯುತ್ತಿರಬೇಕು. ಅಲ್ಲದಿದ್ದರೆ, ಒಂದು ಕೆಟ್ಟ ಸಹವಾಸ, ಒಂದು ತಪ್ಪು ನಡವಳಿಕೆ, ಒಂದು ವ್ಯಸನ ಬದುಕಿಗೇ ಅಪಾಯಕಾರಿಯಾಗಬಹುದು. ಆದ್ದರಿಂದ ಪ್ರತಿಯೊಬ್ಬರಲ್ಲಿ ವಿದ್ಯೆಯ ಜೊತೆಗೆ ವಿವೇಕವೂ ಇರಬೇಕು ಎಂದು ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು. ಅವರು ಇಲ್ಲಿನ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ- ಸ್ವಸಹಾಯ ಸಂಘ ಗಳ ಆಶ್ರಯದಲ್ಲಿ ಆಯೋಜಿಸಲಾದ ‘ ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ -ಸ್ವಸಹಾಯ ಸಂಘಗಳು, ಕುಂದಾಪುರ ಘಟಕ- ಇದರ ಅಧ್ಯಕ್ಷರಾದ ಉಮೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಸ್ವಸಹಾಯ ಸಂಘಗಳಿಂದ ದೊರೆಯುವ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅರ್ಥಶಾಸ್ತ್ರ ಉಪನ್ಯಾಸಕಿ ನಾಗರತ್ನಾ ಅವರು ಪ್ರಾರ್ಥನೆ ಮಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟು ವಿತರಣೆ ಯೋಜನೆ, ಮತ್ಸ್ಯವಾಹಿನಿ ಯೋಜನೆಯಡಿ ಮೀನು ಮಾರಾಟಕ್ಕೆ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯ ಹಾಗೂ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ ಸಾಧನಗಳನ್ನು ಉಚಿತವಾಗಿ ವಿತರಿಸುವ ಯೋಜನೆಗಳನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಆಸಕ್ತ ಮೀನುಗಾರರು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ನಲ್ಲಿ ಸಲ್ಲಿಸಬೇಕು. ಮೂಲ ಅರ್ಜಿಯನ್ನು ದಾಖಲಾತಿಗಳೊಂದಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಛೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಕೂಟರ್‌ಗೆ ಕಾರು ಢಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ಇಲ್ಲಿನ ಕಸಬಾ ಗ್ರಾಮದ ಆಭರಣ ಜ್ಯುವೆಲ್ಲರ್ ಶಾಫ್ ಹತ್ತಿರ, ಪ್ರಭಾತ್ ಟ್ರೇಡರ್ಸ್ ಶಾಪ್ ಎದುರುಗಡೆ ಪುರಸಭಾ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಗಾಯಗೊಂಡ ವ್ಯಕ್ತಿ ಕೆ. ವೆಂಕಟರಮಣ ಶೆಣೈ ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರನ್ನು ಚಾಲಕ ವಿಶ್ವೇಶ್ ಯಾವುದೇ ಸೂಚನೆ ನೀಡದೆ ವೇಗ ಹಾಗೂ ನಿರ್ಲಕ್ಷ್ಯತನದಿಂದ ಮುಂದಕ್ಕೆ ಚಲಾಯಿಸಿ ವೆಂಕಟರಮಣ ಶೆಣೈ ಅವರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದಾರೆ. ಇದರ ಪರಿಣಾಮ ಅವರಿಗೆ ಎಡಕಾಲಿನ ಮುಂಗಾಲು ಗಂಟಿಗೆ ಒಳ ಜಕಂ ಹಾಗೂ ಪಾದದ ಬಳಿ ತರಚಿದ ಗಾಯವಾಗಿದೆ. ಗಾಯಗೊಂಡ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 75,600 ರೂ. ಗಳಂತೆ ವಿಮಾ ಕಂತಿನ ದರವನ್ನು ಪ್ರತಿ ಹೆ.ಗೆ 1512 (2%) ರೂ. ಗಳಂತೆ ನಿಗಧಿಪಡಿಸಿದ್ದು, ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ ಪಾಸ್ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ವಾಣಿಜ್ಯ ಬ್ಯಾಂಕ್‌ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ, ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಅಧಿಸೂಚಿತ ಘಟಕದಲ್ಲಿ ಬೆಳೆ ವಿಮಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಬಿಎ ವಿಭಾಗದ ವತಿಯಿಂದ ಒಂದು ದಿನದ ಇಂಡಸ್ಟ್ರಿಯಲ್ ವಿಸಿಟ್ ಕೈಗೊಳ್ಳಲಾಯಿತು. ಈ ಪ್ರಯುಕ್ತ ಸ್ಥಳೀಯ ACEBOND ಕೈಗಾರಿಕೆಗೆ ಭೇಟಿ ನೀಡಿದರು. ಈ ಭೇಟಿಯ ವಿದ್ಯಾರ್ಥಿಗಳಿಗೆ ಕೈಗಾರಿಕಾ ಕಾರ್ಯ ವೈಖರಿ ಹಾಗೂ ನಿರ್ವಹಣಾ ಪದ್ಧತಿಗಳ ಬಗ್ಗೆ ಪ್ರಾಯೋಗಿಕ ಜ್ಞಾನ ಪಡೆದುಕೊಂಡರು .ಭೇಟಿಯ ವೇಳೆ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ, ಗುಣಮಟ್ಟ ನಿಯಂತ್ರಣ, ಮಾನವ ಸಂಪನ್ಮೂಲ ನಿರ್ವಹಣೆ, ಮಾರುಕಟ್ಟೆ ತಂತ್ರಗಳು ಹಾಗೂ ಹಣಕಾಸು ನಿರ್ವಹಣೆಯ ಕುರಿತು ಕಂಪನಿಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಂಪನಿಯ ವಿವಿಧ ವಿಭಾಗಗಳನ್ನು ವೀಕ್ಷಿಸಿದ ವಿದ್ಯಾರ್ಥಿಗಳು ಕೈಗಾರಿಕಾ ಕಾರ್ಯಾಚರಣೆಯ ನೈಜ ಅನುಭವವನ್ನು ಪಡೆದರು.ಕಂಪನಿಯ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಕೈಗಾರಿಕಾ ಕ್ಷೇತ್ರದಲ್ಲಿನ ಅವಕಾಶಗಳು, ಸವಾಲುಗಳು ಹಾಗೂ ವೃತ್ತಿ ಬೆಳವಣಿಗೆಯ ಕುರಿತು ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ತಮ್ಮ ಸಂದೇಹಗಳನ್ನು ನಿವಾರಿಸಿಕೊಂಡು, ನಿರ್ವಹಣಾ ಶಿಕ್ಷಣದೊಂದಿಗೆ ಪ್ರಾಯೋಗಿಕ ಅನುಭವದ ಮಹತ್ವವನ್ನು ಅರಿತುಕೊಂಡರು.ಈ ಕೈಗಾರಿಕಾ ಭೇಟಿಯು ವಿದ್ಯಾರ್ಥಿಗಳ ಶೈಕ್ಷಣಿಕ ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಕೈಗಾರಿಕಾ ಕ್ಷೇತ್ರದ ಬಗ್ಗೆ ಹೆಚ್ಚಿನ…
