ಕುಂದಾಪುರ ವಿಧಾನಸಭಾ ಕ್ಷೇತ್ರದ ಚುನಾವಣೆ ಮಾದರಿ ನೀತಿ ಸಂಹಿತೆ, ಸಿದ್ಧತೆ ಬಗ್ಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಲ್ಲಕ್ಕಿರುವಂತೆ ಸಾಹಿತ್ಯದ ಕಾಲಘಟ್ಟಗಳಿಗೂ ಏಳುಬೀಳುಗಳಿವೆ. ವ್ಯಾವಹಾರಿಕತೆ, ಬಾಹುಬಲ ಪ್ರಬಲವಾಗಿರುವ ಈಗಿನದು ಅದರ ಹಿನ್ನಡೆಯ ಕಾಲ. ಆದರೂ ಆಗಾಗ, ಅಲ್ಲಲ್ಲಿ ಬೆಳಕು ಗೋಚರಿಸುತ್ತಿರುವುದರಿಂದ ನಿರಾಸೆ ತಾಳಬೇಕಿಲ್ಲ ಎಂದು ಆಕಾಶವಾಣಿಯ ವಿಶ್ರಾಂತ ನಿಲಯ ನಿರ್ದೇಶಕ ಡಾ. ವಸಂತಕುಮಾರ ಪೆರ್ಲ ಹೇಳಿದರು. ಉಳ್ಳೂರು ಮೂಕಜ್ಜಿ ಪ್ರತಿಷ್ಠಾನದ ಆಶ್ರಯದಲ್ಲಿ ನಾಗೂರು ಒಡೆಯರಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ನಡೆದ ಬವಳಾಡಿ ಹೆಬ್ಬಾರ ಕುಟುಂಬದ ಸಹೋದರ, ಸಹೋದರಿಯರು ರಚಿಸಿದ್ದ ಸಂಪ್ರದಾಯದ ಹಾಡುಗಳ ಸಂಗ್ರಹ ’ಪದ್ಯಪಂಚಾಮೃತ’ ಹೊತ್ತಗೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಪದ್ಯಪಂಚಾಮೃತದಲ್ಲಿ ಸಂಗ್ರಹಿಸಿರುವ ಮೊಗೇರಿ ಪಾರ್ವತಿ ಅಡಿಗ, ಉಳ್ಳೂರು ಸರಸ್ವತಿ ಉಡುಪ, ಬವಳಾಡಿ ವೆಂಕಟರಮಣ ಹೆಬ್ಬಾರ, ಹಿರಿಯಣ್ಣ ಹೆಬ್ಬಾರ, ಸೀತಾರಾಮ ಹೆಬ್ಬಾರ ಅವರ ಕೃತಿಗಳ ಭಾಷಾ ಸಮೃದ್ಧಿ, ಭಾವ ಪರಿಪುಷ್ಟತೆ ಮತ್ತು ರಚನಾ ಕೌಶಲ ಬೆರಗುಗೊಳಿಸುತ್ತವೆ. ಎಲ್ಲ ಹಾಡುಗಳೂ ಸರ್ವಾಂಗ ಸುಂದರವಾಗಿವೆ. ಒಂದೊಮ್ಮೆ ನಾಡಿನ ಗ್ರಾಮೀಣರ ಬಾಯಿಯಲ್ಲಿ ವಿಜೃಂಭಿಸಿದ್ದ ಕನ್ನಡದ ಸಂಪ್ರದಾಯದ ಹಾಡುಗಳು ಮರೆವಿಗೆ ಸರಿಯುತ್ತಿರುವ ಈ ಕಾಲದಲ್ಲಿ ಅವುಗಳನ್ನು ಸಂಗ್ರಹಿಸಿ ಪ್ರಕಟಿಸಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಬೈಂದೂರು ಮತ್ತು ಜೆಸಿಐ ಬೈಂದೂರು ಸಿಟಿ ಇವರ ಆಶ್ರಯದಲ್ಲಿ ಸೆಂಟರ್ ಫಾರ್ ಅಪ್ಲೈಡ್ ಥಿಯೇಟರ್ ಸೈನ್ಸ್ ಮೈಸೂರು ಮತ್ತು ಚಿತ್ರದುರ್ಗ ಇವರ ತರಬೇತಿ ಸಂಪನ್ಮೂಲ ಸಹಕಾರದಲ್ಲಿ ಕಲೆಯೊಂದಿಗೆ ಕಲಿಕೆ ಐದು ದಿನಗಳ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದ ಇತ್ತೀಚಿಗೆ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಜಿಎಂ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ವಿಕಸನವೇ ಶಿಕ್ಷಣದ ಗುರಿಯಾಗಿದ್ದು ಶಿಕ್ಷಕರು ಸಹಪಠ್ಯ ಚಟುವಟಿಕೆಗಳೊಂದಿಗೆ ಪಠ್ಯ ವಿಷಯಗಳನ್ನು ಆಸಕ್ತಿಯಿಂದ ಕಲಿಯುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸಬೇಕು ಎಂದು ಶಿಬಿರಕ್ಕೆ ಶುಭ ಹಾರೈಸಿದರು. ಜೆಸಿಐ ಬೈಂದೂರು ಸಿಟಿ ಅಧ್ಯಕ್ಷರಾದ ನರೇಂದ್ರ ಶೇಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿಬಿರದ ಸಂಪೂರ್ಣ ಪ್ರಯೋಜನವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆಯಬೇಕು ಆ ಮೂಲಕ ಶಿಬಿರದ ಯಶಸ್ವಿಗೆ ಸಹಕರಿಸಿ ಎಂದು ಹೇಳಿದರು. ಶಿಬಿರದಸಂಪನ್ಮೂಲ ವ್ಯಕ್ತಿಯಾಗಿ ರಂಗಕರ್ಮಿ ನಾ ಶ್ರೀನಿವಾಸ್ ಮೈಸೂರು ಮತ್ತು ರಾಧಾ ಕೊಡಗು ಶಿಬಿರದ ಕುರಿತು ಮಾಹಿತಿ ನೀಡಿದರು. ಮುಖ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ಯಾನದ ತೊಟದಮನೆ ಸುಧಾಕರ ಶೆಟ್ಟಿ ಅವರ ಮನೆಯ ಆವರಣದಲ್ಲಿ ಶಾಸನವೊಂದು ಪತ್ತೆಯಾಗಿದ್ದು, ಇದು ಹಳೆಗನ್ನಡ ಲಿಪಿಯ ಸಂಸ್ಕೃತ ಭಾಷೆಯನ್ನು ಒಳಗೊಂಡಿದೆ. ಕಾಲಮಾನ ಉಲ್ಲೇಖ:ಬಾದಾಮಿ ಚಾಲುಕ್ಯರ ವಿನಯಾದಿತ್ಯರ ಉಲ್ಲೇಖ ಈ ಶಾಸನದಲ್ಲಿ ಕಂಡು ಬಂದಿದ್ದು, ವಿನಯಾದಿತ್ಯರ ಕಾಲಮಾನ ಕ್ರಿ.ಶ 680 ರಿಂದ ಕ್ರಿ.ಶ 696 ಆಗಿರುತ್ತದೆ.ಹಾಗೇ ಆಳುಪರ ಪಾಂಡ್ಯ ಆಳುಪೇಂದ್ರ ಚಿತ್ರವಾಹನ ಕಾಲಮಾನವಾಗಿ ಕ್ರಿ.ಶ. 680 ರಿಂದ 730 ಆಗಿರುತ್ತದೆ. ವಿನಯಾದಿತ್ಯ ಹಾಗೂ ಚಿತ್ರವಾಹನರ ಕಾಲಮಾನ ಸರಿ ಹೊಂದುವಂತೆ ಸಿಕ್ಕಿರುವ ಈ ಶಾಸನಕ್ಕೆ 1327 ರಿಂದ 1343 ವಷ೯ದ ಪ್ರಾಚೀನ ಶಾಸನವಾಗಿದೆ (ಬಾದಾಮಿ ಚಲುಕ್ಯರ ವಿನಯಾದಿತ್ಯರ ಉಲ್ಲೇಖಿತ ತುಳುನಾಡಿನ ಪ್ರಾಚೀನ ಶಾಸನ) ಆಳುವರಸನ ಮಗ ಚಿತ್ರವಾಹನ ಬಾದಾಮಿ ಚಲುಕ್ಯರ ವಿನಯಾದಿತ್ಯರ ಮಗಳು ರಾಣಿ ಕುಂಕುಮಾ ಮಹಾದೇವಿಗೂ ಆಳುಪರ ಚಿತ್ರವಾಹನರ ಜೊತೆ ಕೌಟುಂಬಿಕ ಸಂಬಂಧಗಳನ್ನು ಬೆಳೆಸಿಕೊಳ್ಳುತ್ತಾರೆ. ಅದರಂತೆ ಕರಾವಳಿಯಲ್ಲಿ ಸುಧೀಘ೯ ವಷ೯ಗಳ ಕಾಲ ಆಳ್ವಿಕೆ ನಡೆಸಿದ ಆಳುಪರ ಸಂಬಂಧಗಳು ಬಾದಾಮಿ ಚಲುಕ್ಯರೊಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ, ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಕೊಠಡಿ ಸಂಖ್ಯೆ ಎ 204 ರಲ್ಲಿ ಚುನಾವಣಾ ಸಂಬಂಧ ದೂರುಗಳ ನಿರ್ವಹಣಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಚುನಾವಣೆಗೆ ಸಂಬಂದಪಟ್ಟ ದೂರುಗಳಿದ್ದಲ್ಲಿ cVIGIL App ಮೂಲಕ, ಮತದಾರರ ಸಹಾಯವಾಣಿ ಕೇಂದ್ರ 1950 ಹಾಗೂ ಸ್ಥಿರ ದೂರವಾಣಿ ಸಂಖ್ಯೆ 0820-2574991 ಗೆ ಕರೆ ಮಾಡುವ ಮೂಲಕ ಹಾಗೂ National Grievances Redressal System ಆನ್ಲೈನ್ ಮೂಲಕ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ದೂರುಗಳ ಪರಿಹಾರ ಮತ್ತು ಮತದಾರರ ಸಹಾಯವಾಣಿಯ ನೋಡೆಲ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಉದ್ದಿಮೆದಾರರಿಗೆ 2023-24 ನೇ ಸಾಲಿನಲ್ಲಿ ವ್ಯಾಪಾರ ಆನ್ಲೈನ್ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ನೀಡಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಆನ್ಲೈನ್ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ಪಡೆಯಲು ಬಾಕಿ ಹಾಗೂ ನವೀಕರಿಸದೇ ಇರುವವರು ಈ ಕೂಡಲೇ ದಂಡ ಪಾವತಿಯೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 1ರ ನಂತರ 2023-24ನೇ ಸಾಲಿನ ಪರವಾನಿಗೆ ನವೀಕರಣಕ್ಕೆ ಅವಕಾಶ ಕಲ್ಪಿಸಲಾಗುವುದು. ಪರವಾನಿಗೆ ಪಡೆದು ಉದ್ದಿಮೆ ನಡೆಸದೇ ಇರುವವರು ಲಿಖಿತ ಮಾಹಿತಿ ನೀಡಿ, ಉದ್ದಿಮೆ ಪರವಾನಿಗೆ ರದ್ದುಪಡಿಸದಿದ್ದಲ್ಲಿ ಉದ್ದಿಮೆ ಶುಲ್ಕ ಹಾಗೂ ದಂಡ ವಿಧಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪಟ್ಟಣ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.2: ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಎಂಸಿಎಂಸಿ ಸಮಿತಿಯ ಅನುಮತಿ ಕಡ್ಡಾಯವಾಗಿದ್ದು, ಸಮಿತಿಯ ಅನುಮತಿ ಪಡೆಯದೇ ಜಾಹೀರಾತು ಪ್ರಕಟಿಸಿದಲ್ಲಿ ಸಂಬAದಪಟ್ಟವರ ವಿರುದ್ದ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಎಚ್ಚರಿಕೆ ನೀಡಿದ್ದಾರೆ. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಎಂಸಿಎಂಸಿ ಕಚೇರಿಗೆ ಭೇಟಿ ನೀಡಿ ಮಾತನಾಡುತ್ತಾ, ಜಾಹೀರಾತುಗಳ ಪ್ರಕಟಣೆ ಬಗ್ಗೆ ಅನುಮತಿ ಪಡೆಯುವ ಕುರಿತಂತೆ, ಜಿಲ್ಲಾ ಎಂಸಿಎAಸಿ ಸಮಿತಿಗೆ ಜಾಹೀರಾತು ಪ್ರಕಟಣೆ ಕೋರಿ ಲಿಖಿತ ಅರ್ಜಿಯನ್ನು ಸಲ್ಲಿಸಿ, ಅಗತ್ಯ ಅನುಮತಿ ಪಡೆದ ನಂತರವೇ ಜಾಹೀರಾತು ಪ್ರಕಟಿಸಬೇಕು ಎಂದು ಅವರು ಹೇಳಿದರು. ಚುನಾವಣಾ ಪ್ರಚಾರಕ್ಕಾಗಿ ಮುದ್ರಣಗೊಂಡ ಕರಪತ್ರಗಳ ಮೇಲೆ ಅದನ್ನು ಮುದ್ರಣ ಮಾಡಿದ ಮುದ್ರಕರ ಹೆಸರು, ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ʼರಾಷ್ಟ್ರೀಯ ಸೇವಾ ಯೋಜನೆ ಘಟಕʼ ಮತ್ತು ʼಮತದಾರ ಸಾಕ್ಷರತಾ ಸಂಘʼ ದಿಂದ ‘ಮತದಾನ ಜಾಗೃತಿ’ ಕಾರ್ಯಕ್ರಮ ಜರುಗಿತು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶಿವಕುಮಾರ ಪಿ.ವಿ “ಮತದಾರರ ಜಾಗೃತಿಯು ದೇಶದ ಪ್ರಜಾಪ್ರಭುತ್ವ ರಕ್ಷಣೆಗೆ ಎಷ್ಟು ಮಹತ್ವವಾಗಿದೆ ಎಂಬುದನ್ನು ವಿವರಿಸಿದರು.” ಎನ್. ಎಸ್. ಎಸ್ ಘಟಕ 1ರ ಸಂಚಾಲಕರಾದ ನವೀನ್ ಹೆಚ್ ಜೆ ಸಾಗ್ವತಿಸಿದರು. ಪ್ರಾಂಶುಪಾಲರಾದ ನಾಗರಾಜ ಶೆಟ್ಟಿಯವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಎನ್. ಎಸ್. ಎಸ್ ಘಟಕ 2 ರ ಸಂಚಾಲಕರಾದ ಡಾ. ಸೋಮೇಶ್ವರಿಯವರು ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಎಪ್ರಿಲ್ 07, 08, ಹಾಗೂ 09 ರಂದು ಪ್ರತಿದಿನ ಸಂಜೆ 6:30ಕ್ಕೆ ಇಲ್ಲಿನ ಶಾರದಾ ವೇದಿಕೆಯಲ್ಲಿ ಜರುಗಲಿದೆ. ಬೈಂದೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಸುರಭಿ ಅಧ್ಯಕ್ಷ ನಾಗರಾಜ ಪಿ. ಅವರು ಮಾಹಿತಿ ನೀಡಿ, ಭರತನಾನಾಟ್ಯ, ಸಂಗೀತ, ರಂಗಭೂಮಿ, ಚಿತ್ರಕಲೆ, ಯಕ್ಷಗಾನ, ಜಾದೂ ಮೊದಲಾದ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಹಾಗೂ ಹವ್ಯಾಸಿ ಕಲಾವಿದರುಗಳಿಗೆ ತರಬೇತಿ ನೀಡುತ್ತಾ ಸಾಂಸ್ಕೃತಿಕ ಛಾಪು ಮೂಡಿಸಿರುವ ಸುರಭಿ ಬೈಂದೂರು 23ನೇ ವರ್ಷದ ಸಂಭ್ರಮದೊಂದಿಗೆ ಮುನ್ನಡೆಯುತ್ತಿದೆ. ಪ್ರತಿವರ್ಷದಂತೆ ಈ ಭಾರಿ 3 ದಿನಗಳ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು. ಎ.7ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕುಂದಾಪುರ ಶ್ರೀ ರಾಮ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ನಾಗರಾಜ ಕೆ. ಅವರು ಉತ್ಸವಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಬಸ್ರೂರು ಶಾರದಾ ಕಾಲೇಜಿಗೆ ಪಾರ್ವತಿ ಜಿ. ಐತಾಳ್ ನೀಡಿರುವ ಸುಮಾರು 20 ಸಾವಿರ ಮೌಲ್ಯದ ಪುಸ್ತಕವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಚಂದ್ರಾವತಿ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೋಟರಿ ಕುಂದಾಪುರದ ಅಧ್ಯಕ್ಷ ವೆಂಕಟೇಶ್ ನಾವುಂದ ಪುಸ್ತಕದ ಅಭಿರುಚಿಯ ಬಗ್ಗೆ ತಿಳಿಸಿದರು. ರೋಟರಿ ಕ್ಲಬ್ ಪ್ರಾಜೆಕ್ಟ್ ಚೇರ್ಮನ್ ಮುತ್ತಯ್ಯ ಶೆಟ್ಟಿ ಪುಸ್ತಕ ಯಾಕೆ ಓದಬೇಕು ಎನ್ನುವ ಅರಿವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಲೈಬ್ರೆರಿಯಾ ವ್ಯವಸ್ಥಾಪಕರು ಶಾಲಾ ಶಿಕ್ಷಕರ ವರ್ಗದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಕರಾದ ಸಂದೀಪ್ ಕೆ ಸ್ವಾಗತಿಸಿ ಧನ್ಯವಾದ ಮಾಡುವುದರೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.
