Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶಿರಿಯಾರ ಗ್ರಾಮದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಆನ್‌ಲೈನ್ ಉದ್ಯೋಗ ಹಗರಣದಲ್ಲಿ ಒಟ್ಟು 28,01,095 ರೂ. ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ನಿವಾಸಿ ಹಾಗೂ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಶಶಿಧರ್ (31) ಎಂಬುವರು ಕಳೆದ 15 ದಿನಗಳಿಂದ ಬೆಂಗಳೂರಿನ ಖಾಸಗಿ ಕಂಪನಿಯೊಂದಕ್ಕೆ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಮೇ 29 ರಂದು, ಅವರಿಗೆ ತಮ್ಮ ಮೊಬೈಲ್ ಫೋನ್‌ಗೆ ಗೂಗಲ್‌ನಲ್ಲಿ ರೆಸ್ಯೂಮ್ ಸಲ್ಲಿಸುವ ಬಗ್ಗೆ ಸಂದೇಶವೊಂದು ಬಂದಿದೆ. ಲಿಂಕ್ ಅನ್ನು ಕ್ಲಿಕ್ ಮಾಡಿದಾಗ, ಅವರಿಗೆ ಟೆಲಿಗ್ರಾಮ್ ಅಪ್ಲಿಕೇಶನ್‌ಗೆ ಮರುನಿರ್ದೇಶಿಸಲಾಯಿತು. ಅಲ್ಲಿ ಶರ್ಮಾಯ್ ರಾಣಿ ಎಂಬ ವ್ಯಕ್ತಿ ಅವರನ್ನು ಸಂಪರ್ಕಿಸಿದ್ದಾರೆ. ಶರ್ಮಾಯ್ ರಾಣಿ ಅವರು ಶಶಿಧರ್ ಅವರನ್ನು ‘ಕಿಂಗ್ಸ್ ಡಿಜಿಲಕ್ಸ್ ಪ್ರೈವೇಟ್ ಲಿಮಿಟೆಡ್’ ಎಂಬ ಟೆಲಿಗ್ರಾಮ್ ಗುಂಪಿಗೆ ಸೇರಿಸಿದರು. ಅಲ್ಲಿ ಅವರಿಗೆ ಆನ್‌ಲೈನ್ ಕಾರ್ಯಗಳನ್ನು ನೀಡಲಾಯಿತು. ಆರಂಭದಲ್ಲಿ, ದೂರುದಾರರು ಕೆಲವು ಕಾರ್ಯಗಳನ್ನು ಪೂರ್ಣಗೊಳಿಸಿ ಹಣವನ್ನು ಪಡೆದರು. ಇದು ಗುಂಪಿನ ಬಗ್ಗೆ ಅವರ ನಂಬಿಕೆಯನ್ನು ಹೆಚ್ಚಿಸಿತು. ನಂತರ, ಆರೋಪಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಆರ್ಥಿಕ ಸಮಸ್ಯೆಯ ಕಾರಣದಿಂದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು. ಕಟ್ಟಡ ಕಾರ್ಮಿಕರ ಮಕ್ಕಳು ಕಟ್ಟಡ ಕಾರ್ಮಿಕರಾಗದೆ, ಉನ್ನತ ವ್ಯಾಸಂಗ ಪಡೆದು ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯುವಂತಾಗಬೇಕು. ಈ ದಿಸೆಯಲ್ಲಿ ವಿದ್ಯಾಭ್ಯಾಸಕ್ಕೆ ಮಕ್ಕಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪುಸ್ತಕ ಮತ್ತಿತರ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷ ಜಿ.ವೆಂಕಟೇಶ ಶೆಣೈ ಹೇಳಿದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕ ಇದರ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಭಾನುವಾರ ಜರಗಿದ 8ನೇ ವರ್ಷದ ಪುಸ್ತಕ ವಿತರಣಾ ಮತ್ತು ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕ ಅಧ್ಯಕ್ಷ ಚಿಕ್ಕ ಮೊಗವೀರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್.ತಾಂಡೇಲ, ನಿವೃತ್ತ ಪಿಎಲ್‌ಡಿ ಬ್ಯಾಂಕ್ ಮ್ಯಾನೇಜರ್ ಪೂರ್ಣಿಮಾ ಭವಾನಿಶಂಕರ, ಗಂಗೊಳ್ಳಿ ಗ್ರಾಪಂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಆಡಳಿತದಲ್ಲಿ ನಡೆಯುತ್ತಿದ್ದು, ಶಾಲಾ ಆರಂಭದ ಸಮಯದಲ್ಲಿ ಶಿಕ್ಷಕರೊಂದಿಗೆ ಆಡಳಿತ ಮಂಡಳಿಯ ಸಭೆಯು ಸೋಮವಾರದಂದು ಜರುಗಿತು. ಪ್ರಗತಿ ಪರಿಶೀಲನೆಯ ಸಲುವಾಗಿ, ನಡೆದ ಈ ಸಭೆಯಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಟ್ರಸ್ಟಿಗಳಾದ ಎ. ನಾರಾಯಣ ರಾವ್ ಮಾತನಾಡಿ, ಶಿಕ್ಷಕರು ತಮ್ಮನ್ನು ತಾವು ಅಧ್ಯಾಪನ ಕಾರ್ಯದಲ್ಲಿ ಸದಾ ತೊಡಗಿಸಿಕೊಳ್ಳಬೇಕು. ಪುಸ್ತಕದ ವಿಚಾರ ತಲುಪಿಸುವುದರ ಜೊತೆಗೆ ಅವರಲ್ಲಿ ಉತ್ತಮ ಸಂಸ್ಕಾರಗಳನ್ನು ಬಿತ್ತಬೇಕು. ಶಿಕ್ಷಣಸಂಸ್ಥೆ ಹೆಸರು ಮಾಡುವುದು ಉತ್ತಮ ಅಧ್ಯಾಪಕ ವೃಂದದಿಂದಲೇ. ಶಿಕ್ಷಕವೃತ್ತಿ ಅತ್ಯಂತ ಗುರುತರವಾದ ಕೆಲಸ. ತನ್ನ ವ್ಯಕ್ತಿತ್ವವನ್ನು ವಿಕಾಸಗೊಳಿಸಿಕೊಂಡು ತಾಳ್ಮೆಯಿಂದ ವರ್ತಿಸಬೇಕು. ಮಕ್ಕಳ ಮಾತನ್ನು ಕೇಳುವ ಗುಣ ಬೆಳೆಸಿಕೊಳ್ಳಬೇಕು. ಉತ್ತಮಸಂಸ್ಕಾರವಂತರನ್ನಾಗಿ ವಿದ್ಯಾರ್ಥಿಗಳನ್ನು ರೂಪಿಸಬೇಕಾದುದು ತಮ್ಮ ಆದ್ಯ ಕರ್ತವ್ಯವಾಗಿದೆ. ನನ್ನಿಂದ ನೂರಾರು ಜನ ಕಲಿಯುತ್ತಿದ್ದಾರೆಂಬ ಜ್ಞಾನವಿದ್ದು, ಕಾರ್ಯದಲ್ಲಿತೊಡಗಿಕೊಳ್ಳಿ ಎಂದು ಶಿಕ್ಷಕರಿಗೆ ಕಿವಿಮಾತುಗಳನ್ನಾಡಿದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಟ್ರಸ್ಟಿಗಳಾದ ಗಣೇಶ್ ಕಾಮತ್ ಮಾತನಾಡುತ್ತಾ ನಾವು ಕೊಡಪಾನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 108ನೇ ತಿಂಗಳ ಕಾರ್ಯಕ್ರಮ ವಿಷ್ಣು ಸಹಸ್ರನಾಮದೊಂದಿಗೆ ಆರಂಭವಾಯಿತು. ನಿವೃತ್ತ ಶಿಕ್ಷಕ ಸದಾಶಿವ ಐತಾಳ್, ಉಪ್ಪಿನಕುದ್ರು ಅಧ್ಯಕ್ಷತೆಯನ್ನು ವಹಿಸಿದ್ದರು. ವಸಂತಿ ಆರ್. ಪಂಡಿತ್ ಅವರನ್ನು ಗೊಂಬೆಯಾಟ ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ವರದರಾಯ ಕಾಮತ್ ಮತ್ತು ವೀಣಾ ಕಾಮತ್ ಅವರನ್ನು ಗೌರವಿಸಲಾಯಿತು. ವಸಂತಿ ಆರ್. ಪಂಡಿತ್, ಕುಂದಾಪುರ ಅವರು ನಡೆಸಿಕೊಟ್ಟ ಭಜನ್ ಸಂಧ್ಯಾ ಕಾರ್ಯಕ್ರಮ ಅದ್ಭುತವಾಗಿ ಮೂಡಿ ಬಂತು. ವೇದಿಕೆಯಲ್ಲಿ ನಿವೃತ್ತ ಪ್ರಾಂಶುಪಾಲ ಎಮ್. ರತ್ನಾಕರ ಪೈ, ಉಪನ್ಯಾಸಕಿ ಮಾಲತಿ ಜಿ. ಪೂಜಾರಿ, ಶ್ರೀರಕ್ಷಾ ಎಸ್. ಪೈ, ವಸಂತಿ ಆರ್. ಪಂಡಿತ್ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ಶಾಮ್ ಜಿ.ಎನ್.ಪೂಜಾರಿ, ಗಂಗೊಳ್ಳಿ ಇವರ ಕೊಳಲು ವಾದನ ಹಾಗೂ ಆಕಾಂಕ್ಷಾ ಎಸ್. ಪೈ ಅವರ ಭಾವಗೀತೆ ಪ್ರೇಕ್ಷಕರ ಗಮನ ಸೆಳೆಯಿತು. ಆಕಾಂಕ್ಷಾ ಎಸ್. ಪೈ ಪ್ರಾರ್ಥಿಸಿದರು. ಭಾಸ್ಕರ್ ಕೊಗ್ಗ ಕಾಮತ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು, ರಂಗಸ್ಥಳ ಉಪ್ಪುಂದ ಹಾಗೂ  ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇವರ ಸಹಯೋಗದಲ್ಲಿ ಉಪ್ಪುಂದದ ರೈತ ಸಿರಿ ಸಭಾಭವನದಲ್ಲಿ ಭಾವ ಕವಿ ಪ್ರಸಿದ್ಧ ಸಾಹಿತಿ ಡಾ. ಎಚ್.ಎಸ್. ವೆಂಕಟೇಶ್ ಮೂರ್ತಿ ಅವರಿಗೆ “ಭಾವ ನಮನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇದರ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಡಾ. ವೆಂಕಟೇಶ್ ಮೂರ್ತಿ ಅವರ ಸಾಹಿತ್ಯ ಸಾಧನೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಅಧ್ಯಕ್ಷತೆಯನ್ನು “ರಂಗಸ್ಥಳ” ಉಪ್ಪುಂದ  ಇದರ ಅಧ್ಯಕ್ಷರಾದ ಯು.ಎಚ್.ರಾಜಾರಾಮ ಭಟ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಚ್.ಎಸ್.ವಿ ಅವರ ಕುರಿತು ಅಧ್ಯಾಪಕ ಸಂದೀಪ ದೇವಾಡಿಗ “ನುಡಿ ನಮನ” ಸಲ್ಲಿಸಿದರು. ಬೈಂದೂರು ಸುರಭಿ ಅಧ್ಯಕ್ಷ ಆನಂದ ಮದ್ದೋಡಿ ಅವರು ಆಶಯ ನುಡಿಗಳನ್ನಾಡಿದದರು. ಸಂದೀಪ ದೇವಾಡಿಗ ಸ್ವಾಗತಿಸಿ, ರಂಗಸ್ಥಳ ಉಪ್ಪುಂದ ಕಾರ್ಯದರ್ಶಿಗಳಾದ ಗಣೇಶ್ ಉಪ್ಪುಂದ ಧನ್ಯವಾದ ಗೈದರು. ಕಾರ್ಯಕ್ರಮವನ್ನು ರಾಮಕೃಷ್ಣ ದೇವಾಡಿಗ ಉಪ್ಪುಂದ ನಿರ್ವಹಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್‌ನಿಂದ ಜೂನ್ 19 ರಂದು ಕುಂದಾಪುರ ಹಾಗೂ ಬೈಂದೂರಿನ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕುಂದಾಪುರದ ಸರಕಾರಿ ಪ. ಪೂ. ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಬೆಂಗಳೂರಿನ ಕಾನ್ಪಿಡೆಂಟ್ ಡೆಂಟಲ್ ಇಕ್ವಿಪ್‌ಮೆಂಟ್ ಪ್ರೈ. ಲಿ.ನ ಆಡಳಿತ ನಿರ್ದೇಶಕರಾದ ಡಾ| ಸುಭಾಶ್ಚಂದ್ರ ಶೆಟ್ಟಿ ಸಮಾರಂಭ ಉದ್ಘಾಟಿಸಲಿದ್ದಾರೆ. ಎರಡು ದಶಕಗಳಿಂದ ಹಲವು ಸಮಾಜಾಭಿವೃದ್ಧಿ ಕಾರ್ಯಗಳನ್ನು ಕಾರ್ಯಗತಗೊಳಿಸಿರುವ ಗಿಳಿಯಾರು ಕುಶಲ ಹೆಗ್ಡೆ ಟ್ರಸ್ಟ್ ಅರ್ಹ ವಿದ್ಯಾರ್ಥಿಗಳಿಗೆ, ಕ್ರೀಡಾಪಟುಗಳಿಗೆ, ಅನಾರೋಗ್ಯ ಪೀಡಿತರಿಗೆ, ಅಸಹಾಯಕರಿಗೆ, ಶಿಕ್ಷಣ ಸಂಸ್ಥೆಗಳಿಗೆ ನೆರವು ನೀಡುತ್ತಾ ಬಂದಿದ್ದು, ಈ ಸೇವಾ ಕಾರ್ಯಗಳು ನಿರಂತರ ಮುಂದುವರಿಯಲಿವೆ ಎಂದು ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ತಿಳಿಸಿದ್ದಾರೆ. ದಿ. ಗಿಳಿಯಾರು ಕುಶಲ ಹೆಗ್ಡೆಯವರು ನಮ್ಮನ್ನಗಲಿ 25 ವರ್ಷಗಳಾಗುತ್ತಿದ್ದು, ಅವರ ಸ್ಮರಣಿಕೆಯಲ್ಲಿ ಸಮುದಾಯ ಸಭಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ವೆಬ್‌ಸೈಟ್ https://www.kaushalkar.com/ ನಲ್ಲಿ ಆನ್‌ಲೈನ್ ಮೂಲಕ ಜೂನ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kaad.karnataka.gov.in ಅಥವಾ ನಿಗಮದ ಸಹಾಯವಾಣಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಅಖಿಲ ಭಾರತ ಮಟ್ಟದ ಯುಜಿ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಒಂದೇ ಕ್ಯಾಂಪಸ್‌ನ ಕ್ಲಾಸ್‌ರೂಮ್ ವ್ಯವಸ್ಥೆಯಲ್ಲಿ ಅಖಿಲ ಭಾರತ ಮಟ್ಟದ ಟಾಪ್ ಎಐಆರ್‌ 10,000 ರ‍್ಯಾಂಕ್‌ಗಳಲ್ಲಿ 75 ವಿದ್ಯಾರ್ಥಿಗಳು ಸ್ಥಾನ ಪಡದು ಶ್ರೇಷ್ಠ ಸಾಧನೆ ಮೆರೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು 600ಕ್ಕೂ ಅಧಿಕ ಒರ್ವ ವಿದ್ಯಾರ್ಥಿ, 550ಕ್ಕೂ ಅಧಿಕ 21 ವಿದ್ಯಾರ್ಥಿಗಳು, 500ಕ್ಕೂ ಅಧಿಕ 116 ವಿದ್ಯಾರ್ಥಿಗಳು, 450ಕ್ಕೂ ಅಧಿಕ 401 ವಿದ್ಯಾರ್ಥಿಗಳು, 400ಕ್ಕೂ ಅಧಿಕ 596 ವಿದ್ಯಾರ್ಥಿಗಳು ಅಂಕ ಪಡೆದಿದ್ದಾರೆ. ರಾಷ್ಟçಮಟ್ಟದಲ್ಲಿ ಅಖಿಲ ಭಾರತ ಮಟ್ಟದ ಟಾಪ್ 1,000 ರ‍್ಯಾಂಕ್‌ನ ಒಳಗೆ 9 ವಿದ್ಯಾರ್ಥಿಗಳು ಹಾಗೂ ಟಾಪ್ 2,000 ಒಳಗೆ 20 ವಿದ್ಯಾರ್ಥಿಗಳು ಹಾಗೂ ಟಾಪ್ 5,000 ರ‍್ಯಾಂಕ್‌ಗಳಲ್ಲಿ 48 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ. ಪ್ರೇಕ್ಷಾ ಎಂ.ಎಸ್ 82ನೇ ರ‍್ಯಾಂಕ್‌, ಲಿಖಾ ತಡಪ್ 235ನೇ ರ‍್ಯಾಂಕ್‌,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ. 04 ರಂದು ನಡೆಸಿದ ನೀಟ್‌ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಸುಮಂತ ಗೌಡ ಎಸ್. ಡಿ. 99.92 ಪರ್ಸಂಟೈಲ್‌ ನೊಂದಿಗೆ 596 ಅಂಕಗಳನ್ನು ಗಳಿಸಿ ರಾಷ್ಟ್ರಮಟ್ಟದಲ್ಲಿ 1623ನೇ ರ‍್ಯಾಂಕ್‌, ಪ್ರಜ್ವಲ್ ಎಸ್. ಎನ್ 99.68 ಪರ್ಸಂಟೈಲ್‌ ನೊಂದಿಗೆ 588 ಅಂಕಗಳನ್ನು ಗಳಿಸಿ, ರಾಷ್ಟ್ರಮಟ್ಟದಲ್ಲಿ 2483ನೇ ರ‍್ಯಾಂಕ್‌, ರಾಜೇಶ್ ಹೆಚ್ ಎ 99.85 ಪರ್ಸಂಟೈಲ್‌ ನೊಂದಿಗೆ 583 ಅಂಕಗಳಿಸಿ ರಾಷ್ಟ್ರಮಟ್ಟದಲ್ಲಿ 3025ನೇ ರ‍್ಯಾಂಕ್‌ ಪಡೆದು ಅಭೂತಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಸಾತ್ವಿಕ್ ಭಂಡಾರಿ 560, ಹೇಮಂತ್ ಕುಮಾರ್ 551, ಪ್ರಾಪ್ತಿ ಶೆಟ್ಟಿ 541, ಪ್ರಥಮ್ ಪಟೇಲ್ ಹೆಚ್. ಡಿ 539, ಸಂಗೀತಾ ಬಿ. ಎಮ್ 536, ಶ್ರೀನಿಧಿ ಡಿ 531, ವಿನಯ್ ಎಸ್ 523, ಸ್ನೇಹಾ ಬಸವರಾಜ್ ಬಿ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟದ ಪಂಚವರ್ಣ ಸಂಘಟನೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಅವರ ಪರಿಸರ ಕಾಳಜಿ ಆಂದೋಲನ ಮನೆ ಮನಗಳನ್ನು ತಲುಪುತ್ತಿದೆ ಇದು ಅಭಿನಂದನೀಯ ಎಂದು ಶಿಕ್ಷಣ ತಜ್ಞ, ಯಕ್ಷಗುರು ಎಂ.ಎನ್. ಮಧ್ಯಸ್ಥ ಅಭಿಪ್ರಾಯಪಟ್ಟರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ ಇವರ ಸಹಯೋಗದೊಂದಿಗೆ ಹಾಲು ಉತ್ಪಾದಕರ ಸಹಕಾರಿ ಸಂಘ ಮಣೂರು ಇವರ ಸಂಯೋಜನೆಯೊಂದಿಗೆ ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಅನ್ನಪೂರ್ಣ ನರ್ಸರಿ ಪೇತ್ರಿ ಕೊಡ ಮಾಡಿದ ಗಿಡಗಳನ್ನು ನಡುವ 256ನೇ ಭಾನುವಾರದ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಕಾರ್ಯಕ್ರಮದಲ್ಲಿ ಗಿಡ ವಿತರಿಸಿ, ಮಾತನಾಡಿದರು. ಸಂಘ ಸಂಸ್ಥೆಗಳು ಸಮಾಜಮುಖಿ ಚಿಂತನೆಗಳೊಂದಿಗೆ ಕಾರ್ಯನಿರ್ವಹಿಸುವುದು ಸಹಜ ಆದರೆ ಪಂಚವರ್ಣ ಸಂಘಟನೆ ಪರಿಸರಕ್ಕಾಗಿ ಪ್ರತಿ ಭಾನುವಾರ ತಮ್ಮನ್ನು ಅರ್ಪಿಸಿಕೊಂಡಿದೆ. ಕಳೆದ ಐದಾರು ವರ್ಷಗಳಿಂದ ಕೋಟ ಸುತ್ತಮುತ್ತಲಿನ ಪರಿಸರದಲ್ಲಿ ಹಸಿರು…

Read More