ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವಕರು ದೇಶದ ಭವಿಷ್ಯ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ದೇಶವನ್ನು ಮುನ್ನಡೆಸುವ ಯುವಜನರು ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದಿ ಭವಿಷ್ಯದಲ್ಲಿ ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಅಂದು ಕುಂಜಿಬೆಟ್ಟುವಿನ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಂಬಾಕು ಮುಕ್ತ ಯುವ ಅಭಿಯಾನ 3.0 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಂಬಾಕು ಸೇವನೆ ಒಂದು ಸಾಮಾಜಿಕ ಪಿಡುಗು. ಸರಕಾರದ ಮುಂದೆ ತಂಬಾಕು ಸೇವನೆಯನ್ನು ನಿಷೇಧಿಸುವ ಸಮಸ್ಯೆ ಒಂದೆಡೆಯಾದರೆ, ಯುವ ಜನತೆಯನ್ನು ತಂಬಾಕು ಚಟದಿಂದ ದೂರ ಇರಿಸುವ ಕಾರ್ಯವನ್ನು ನಿಭಾಯಿಸುವ ಸಮಸ್ಯೆ ಇನ್ನೊಂದೆಡೆ. ತಂಬಾಕು ಸೇವನೆಯಿಂದ ದೈಹಿಕ ಮತ್ತು ಮಾನಸಿಕವಾಗಿ ತೀವ್ರವಾದ ದುಷ್ಪರಿಣಾಮಗಳಾಗುತ್ತವೆ. ಸಮಾಜದಲ್ಲಿ ಇದೊಂದು ಗಂಭೀರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡುಬಿದ್ರಿಯ ಆಳ್ವಾಸ್ ಪಿಯು ಕ್ಯಾಂಪಸ್ ನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಅಬಾಕಸ್ ಮತ್ತು ಮನೋ-ಅಂಕಗಣಿತ (ಮೆಂಟಲ್ ಅರಿಥ್ ಮೆಟಿಕ್) ಸ್ಪರ್ಧೆಯಲ್ಲಿ ವಿದ್ಯಾರಣ್ಯ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ. 5ನೇ ತರಗತಿಯ ಕೆ. ಅದ್ವಿಕ್ ಶೆಟ್ಟಿ, 6ನೇ ತರಗತಿಯ ದ್ರಿಶಾ ಎಚ್. ಶೆಟ್ಟಿ ಒಂದನೇ ವಿಭಾಗದ ಸ್ಪರ್ಧೆಯಲ್ಲಿ ಮೊದಲ ಸ್ಥಾನದೊಂದಿಗೆ ವಿಜೇತರಾದ ವಿದ್ಯಾರ್ಥಿಗಳು. ಕೆ. ಅದ್ವಿಕ್ ಶೆಟ್ಟಿ ಹೆಸ್ಕತ್ತೂರು ಕೃಷ್ಣ ಶೆಟ್ಟಿ ಹಾಗೂ ದೀಪಾ ದಂಪತಿಯ ಪುತ್ರ, ದ್ರಿಶಾ ಎಚ್. ಶೆಟ್ಟಿ ಜನ್ನಾಡಿಯ ಹರ್ಷವರ್ಧನ್ ಶೆಟ್ಟಿ ಹಾಗೂ ಸೌಮ್ಯ ಹೆಚ್. ಶೆಟ್ಟಿ ದಂಪತಿಯ ಪುತ್ರಿ. ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ.ಲಿ. ಆಯೋಜಿಸಿದ್ದ 20ನೇ ರಾಜ್ಯಮಟ್ಟದ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ.ಲಿ. ಆಯೋಜಿಸಿದ್ದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಕಾಂಪಿಟಿಷನ್ ಮೂಡಬಿದ್ರಿ ಆಳ್ವಾಸ್ ಪಿಯು ಕ್ಯಾಂಪಾಸ್‌ನಲ್ಲಿ ನಡೆಯಿತು. ಇದರಲ್ಲಿ ರಾಜ್ಯದ ವಿವಿಧ ಜಿಲ್ಲೆಯಿಂದ ಸುಮಾರು 2,000 ವಿದ್ಯಾರ್ಥಿಗಳು ಭಾಗವಹಿಸಿದ್ದು, ಇದರಲ್ಲಿ ಕೋಟ ಎಜುಕೇರ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿಗಳು ಭಾಗವಹಿಸಿದ್ದು ಅನೀಕ್ಷ ಎಂ. ಪ್ರಥಮ ಸ್ಥಾನ, ಸಿದ್ಧಾಂತ ಕುಂದರ್ ದ್ವಿತೀಯ ಸ್ಥಾನ, ಆತಿಷ್ ಎಸ್. ಪೂಜಾರಿ, ದ್ವಿತೀಯ ಸ್ಥಾನ, ಅಥರ್ವ ಆರ್. ಕೊಠಾರಿ ತೃತೀಯ ಸ್ಥಾನ, ಅದಿತಿ ಮೊಗವೀರ ಚತುರ್ಥ ಸ್ಥಾನ, ರಿಷಿ ಆರ್. ಮೊಗವೀರ ಚತುರ್ಥ ಸ್ಥಾನ ಪಡೆದಿದ್ದಾರೆ. ಅವರುಗಳಿಗೆ ಪ್ರಸನ್ನ ಕೆ. ಮತ್ತು ಸುಪ್ರೀತ ಮೊಗವೀರ ತರಬೇತುದಾರರಾಗಿದ್ದಾರೆ. ಕೋಟ ಎಜುಕೇರ್ ಸಂಸ್ಥೆಯ ನಿರ್ದೇಶಕರಾದ ಚೇತನ್ ಎಂ. ಬಂಗೇರ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಮಾನಸಿಕ ಆರೋಗ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಎ.ವಿ. ಬಾಲಿಗ ಸ್ಮಾರಕ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮವು ದೀಪ ಪ್ರಜ್ವಲನ ಮತ್ತು ಅಧಿಕೃತ ಉದ್ಘಾಟನೆಯೊಂದಿಗೆ ಆರಂಭವಾಯಿತು. ವಿದ್ಯಾರ್ಥಿನಿ ಟೆಸ್ಕಾ ಅವರು ದಿನದ ಮಹತ್ವವನ್ನು ವಿವರಿಸಿ, 2025ರ ವಿಶ್ವ ಮಾನಸಿಕ ಆರೋಗ್ಯ ದಿನದ ಧ್ಯೇಯ “ಸೇವೆಗಳ ಪ್ರವೇಶ: ಆಪತ್ತು ಮತ್ತು ತುರ್ತು ಪರಿಸ್ಥಿತಿಯಲ್ಲಿನ ಮಾನಸಿಕ ಆರೋಗ್ಯ” ಎಂಬುದನ್ನು ಉಲ್ಲೇಖಿಸಿದರು. ಕಾರ್ಯಕ್ರಮದಲ್ಲಿ ಎ.ವಿ. ಬಾಳಿಗ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಸುರೇಶ್ ಹಾಗೂ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಹಾಯಕ ಉಪನ್ಯಾಸಕಿ ಚೇತನಾ ಆರ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಿನ್ಸಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ನಾಟಕವನ್ನು ಪ್ರದರ್ಶಿಸಿ, ಮಾನಸಿಕ ಆರೋಗ್ಯ ಜಾಗೃತಿ ಮತ್ತು ಸಮುದಾಯದ ಕಲ್ಯಾಣದ ವಿವಿಧ ಅಂಶಗಳನ್ನು ಒತ್ತಿ ಹೇಳಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತ್ರಿವರ್ಣ ಆರ್ಟ್ ಕ್ಲಾಸ್ ಅವರು ನಡೆಸಿದ ಆರ್ಟ್ ಎಕ್ಸಿಬಿಷನ್ ನಲ್ಲಿ ಭಾಗವಹಿಸಿ “ದ ಬೆಸ್ಟ್ ಪಬ್ಲಿಕ್ ವಿವ್” ಪ್ರಶಸ್ತಿ ಪಡೆದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ನಿಶ್ಚಿತಾ ವಿ. ಹರಗನಹಳ್ಳಿ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಹೆಚ್ಚು ಭಾಷೆಗಳನ್ನು ನಾವು ಕಲಿತಷ್ಟು ನಮ್ಮ ಜ್ಞಾನದ ಪರಿಧಿ ವಿಸ್ತಾರಗೊಳ್ಳುತ್ತಾ ಹೋಗುತ್ತದೆ. ಭಾಷಾ ಸಾಮರಸ್ಯದ ಮೂಲಕ ಸೌಹಾರ್ದಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್.ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಹಾಗು ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ರೋಟರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಪೂರ್ವಭಾವಿಯಾಗಿ ನಡೆದ ಭಾಷಾ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಕಾರ್ಯದರ್ಶಿ ಕಾರ್ತಿಕ್ ಬಿ. ಖಾರ್ವಿ ಶುಭ ಹಾರೈಸಿದರು. ವಿದ್ಯಾರ್ಥಿ ಪ್ರತಿನಿಧಿ ಲಕ್ಷ್ಮಿನಿಮಿತ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅಮೂಲ್ಯ ಮತ್ತು ಮಾದರಿ ಕನ್ನಡ ಭಾಷೆಯ ಮಹತ್ವದ ಕುರಿತು ಮಾತನಾಡಿದರು. ದೀಪಾಲಿ, ಶ್ರಾವ್ಯ, ಸಾನಿಕ ಪ್ರಾರ್ಥಿಸಿದರು. ಎಸ್.ವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಮಾಜದ ಸೇವೆಗಾಗಿ ತನ್ನ ಜೀವಿತ ಅವಧಿಯನ್ನು ಸಮರ್ಪಿಸುವ ಸಾಮಾಜಿಕ ಕಾರ್ಯಕರ್ತರ ಸೇವೆ ಅನನ್ಯವಾಗಿದೆ. ಅದೇ ರೀತಿ ತನ್ನ ಹುಟ್ಟುಹಬ್ಬವನ್ನು ಆಶ್ರಮದ ನಿವಾಸಿಗಳ ಜತೆ ಆಚರಿಸಿಕೊಳ್ಳುವ ಭರತ್ ಗಾಣಿಗ ಇವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್ ಹೇಳಿದರು. ಅವರು ಮಂಗಳವಾರ ಸಾಲಿಗ್ರಾಮದ ಹೊಸಬದುಕು ಆಶ್ರಮದಲ್ಲಿ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಕೋಟದ ಸಾಮಾಜಿಕ ಕಾರ್ಯಕರ್ತ ಭರತ್ ಗಾಣಿಗ ಅವರು ನೀಡಿದ ಬಟ್ಟೆ ಹಾಗೂ ಊಟೋಪಚಾರ ವಿತರಿಸಿ ಮಾತನಾಡಿದರು. ಸಮಾಜಕ್ಕಾಗಿ ಸೇವೆ ಸಲ್ಲಿಸುವುದರ ಜತೆಗೆ ಹುಟ್ಟುಹಬ್ಬವನ್ನು ಅರ್ಥಪೂರ್ಣಗೊಳಿಸುವ ನಿಟ್ಟಿನಲ್ಲಿ ಇಂಥಹ ಕಾರ್ಯ ಸಮಾಜಕ್ಕೆ ಇನ್ನಷ್ಟು ಸೇವಾ ಕೈಂಕರ್ಯ ತುಂಬಲು ಪ್ರೇರಣೆಯಾಗಿದೆ. ಹಸಿದ ಜೀವಕ್ಕೆ ಚೈತನ್ಯ ತುಂಬುವ ಹೊಸಬದುಕು ಆಶ್ರಮದ ಮುಖ್ಯಸ್ಥರ ಕಾರ್ಯ ಅತ್ಯಂತ ಶ್ಲಾಘನೀಯ ಎಂದರು. ಇದೇ ವೇಳೆ ಬಟ್ಟೆ ಪರಿಕರವನ್ನು ಗಣ್ಯರ ಮೂಲಕ ಹೊಸಬದುಕು ಆಶ್ರಮದ ಮುಖ್ಯಸ್ಥರಾದ ವಿನಯಚಂದ್ರ ಸಾಸ್ತಾನ, ಪತ್ನಿ ರಾಜಶ್ರೀ ಹಸ್ತಾಂತರಿಸಿಕೊಂಡರು. ಈ ಸಂದರ್ಭದಲ್ಲಿ ಕೋಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ರಾಜ್ಯೋತ್ಸವದ ಶುಭಾವಸರದಲ್ಲಿ ಕನ್ನಡ ಸಂಸ್ಕೃತಿಯ ಪ್ರಚಾರ ಹಾಗೂ ಓದುಗರಲ್ಲಿ ಪುಸ್ತಕಾಭಿರುಚಿ ಬೆಳೆಸುವ ಉದ್ದೇಶದಿಂದ ಕಾರ್ಕಳ ಹಾಗೂ ಮೂಡುಬಿದಿರೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ವಿಶೇಷ ರಿಯಾಯಿತಿಯಲ್ಲಿ ಪುಸ್ತಕ ಮಾರಾಟ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ ಸಾಹಿತ್ಯ, ಕಾದಂಬರಿ, ಪ್ರಬಂಧ, ಜೀವನ ಚರಿತ್ರೆ, ಮಕ್ಕಳ ಸಾಹಿತ್ಯ ಸೇರಿದಂತೆ ವಿವಿಧ ವಿಷಯಗಳ ನೂರಾರು ಪುಸ್ತಕಗಳು ವಿಶೇಷ ರಿಯಾಯಿತಿ ದರದಲ್ಲಿ ಲಭ್ಯವಿರಲಿವೆ. ಕನ್ನಡ ಸಾಹಿತ್ಯ ಕ್ಷೇತ್ರದ ಮಹನೀಯರ ಕೃತಿಗಳ ಜೊತೆಗೆ ಯುವ ಲೇಖಕರ ಹೊಸ ಕೃತಿಗಳು, ಹೊಸ ಪ್ರಕಾಶನಗಳು ಹಾಗೂ ಜನಪ್ರಿಯ ಪುಸ್ತಕಗಳು ಈ ಮೇಳದ ಆಕರ್ಷಣೆಯಾಗಿದೆ. 10% ನಿಂದ 50%ನ ವರೆಗೆ ರಿಯಾಯಿತಿ ಸಿಗಲಿದೆ. ಈ ವಿಶೇಷ ಮೇಳವು ದಿನಾಂಕ 01-11-2025 ರಿಂದ 09-11-2025 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಗ್ಗೆ ಸಮಯ 9.00ರಿಂದ ಸಂಜೆ ಸಮಯ 9.00ರ ವರೆಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ. ಎಲ್ಲಾ ಪುಸ್ತಕ ಪ್ರೇಮಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಾಶಕರು ಕೋರಿದ್ದಾರೆ. ಕನ್ನಡದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿ ನಿರ್ವಹಣಾಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ವ್ಯವಹಾರ ಯೋಜನೆ ಪ್ರಸ್ತುತಿಯನ್ನು ನಿರ್ವಹಣಾಶಾಸ್ತ್ರ ವಿಭಾಗದಿಂದ ನಡೆಸಲಾಯಿತು. ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಅನುಭವ ಮೂಡಿಸಲೆಂದು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ವಿದ್ಯಾರ್ಥಿಗಳು ಏಳು ವಿಧದ ವ್ಯವಹಾರದ ಯೋಜನೆಯನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ವಹಿಸಿದ್ದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಡುಪಿ ಅಜ್ಜರಕಾಡು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕಿ ಡಾ. ದಿವ್ಯಾ ಎಂ.ಎಸ್. ಹಾಗೂ ಕೋಟ-ಪಡುಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ರಾಮಚಂದ್ರ ಭಟ್ ಅವರು ಆಗಮಿಸಿದ್ದರು. ಕಾಲೇಜಿನ ಉಪನ್ಯಾಸಕರಾದ ಗಣೇಶ್ ಪೈ. ಎಂ., ಡಾ. ಶೇಖರ ಬಿ., ಡಾ. ಉದಯ ಶೆಟ್ಟಿ ಕೆ., ಡಾ. ಭಾಗೀರಥಿ ನಾಯ್ಕ, ಕುಮಾರ ದೊಡ್ಡಮನಿ ಹಾಗೂ ಅಮಿತಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನಿರ್ವಹಣಾಶಾಸ್ತ್ರ ವಿಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ನಾಟ್ಯಾಂಜಲಿ ಕಲಾ ನಿಕೇತನದಲ್ಲಿ ನೃತ್ಯಗುರು ವಿದುಷಿ ಕಲಾಶ್ರೀ ಪುನೀತ್ ಆಚಾರ್ಯ ಅವರು ತಮ್ಮ ನೃತ್ಯ ಶಿಷ್ಯೆಯರಿಗೆ ಗೆಜ್ಜೆಪೂಜೆ ಕಾರ್ಯಕ್ರಮವನ್ನು ಬಸ್ರೂರಿನ ಶ್ರೀ ದೇವಿ ಅಮ್ಮನವರ ದೇವಸ್ಥಾನದಲ್ಲಿ ಏರ್ಪಡಿಸಿದ್ದರು. ಗೋಧೂಳಿಯ ಸಮಯದಲ್ಲಿ ತಾಯಿಗೆ ಪೂಜೆ ನೆರವೇರಿಸಿ ವಿದ್ಯಾರ್ಥಿಗಳ ಗೆಜ್ಜೆಗೆ ದೇವಿಯ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ, ಪ್ರಸಾದದೊಂದಿಗೆ ಶಿಷ್ಯೆಯರಿಗೆ ಗೆಜ್ಜೆ ನೀಡಿ ಹರಸಿದರು ಮತ್ತು ವಿದ್ಯಾರ್ಥಿಗಳು ಗುರುಕಾಣಿಕೆ ನೀಡಿ ತಮ್ಮ ಗೌರವ ಅರ್ಪಿಸಿದರು. ಅಲ್ಲದೆ ಶ್ರೀ ದೇವಿಯ ಮುಂದೆ ತಮ್ಮ ತಮ್ಮ ಹೆಜ್ಜೆಗಳ ಪ್ರದರ್ಶನ ನೀಡಿ ಕಲಾ ಸೇವೆ ನೆರವೇರಿಸಿದರು. ಸುಮಾರು 70 ರಿಂದ 75 ನೃತ್ಯಾಸಕ್ತ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಔಪಚಾರಿಕವಾಗಿ ವಿದುಷಿ ಕಲಾಶ್ರೀ ಪುನೀತ್ ಆಚಾರ್ಯರವರ ನೃತ್ಯ ಶಿಷ್ಯೆಯರಾಗಿ ಪಾದಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕರು, ಕುಟುಂಬದವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
