Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ಬ್ರಹ್ಮಾವರ, ರೋಟರ್ಯಾಕ್ಟ್ ಕ್ಲಬ್ ಬ್ರಹ್ಮಾವರ, ಇಂಟರ್ಯಾಕ್ಟ್ ಕ್ಲಬ್, ಕಳತ್ತೂರು ಸಂತೆಕಟ್ಟೆ ಪ್ರೌಢಶಾಲೆ, ಜೇಸಿಐ ಕಲ್ಯಾಣಪುರ, ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ಇವರ ಸಂಯುಕ್ತ ಆಶ್ರಯದಲ್ಲಿ ಪರೀಕ್ಷಾ ಸವಾಲುಗಳು, ವೃತ್ತಿ ಮಾರ್ಗದರ್ಶನ ಮತ್ತು ಆರೋಗ್ಯ – ನೈರ್ಮಲ್ಯ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಕಳತ್ತೂರು ಸಂತೆಕಟ್ಟೆಯ ಶಾಲಾ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸಂಧ್ಯಾ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ರೋಟರಿ ಕ್ಲಬ್ ಬ್ರಹ್ಮಾವರದ ಅಧ್ಯಕ್ಷರಾದ ಸತೀಶ್ ಶೆಟ್ಟಿ ಅವರು ವಹಿಸಿ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿ ಜೇಸಿ ತರಬೇತುದಾರ ನರೇಂದ್ರ ಕುಮಾರ್ ಕೋಟ ಅವರು ಪರೀಕ್ಷಾ ಸವಾಲುಗಳು ಹಾಗೂ ವೃತ್ತಿ ಮಾರ್ಗದರ್ಶನ ತರಬೇತಿಯನ್ನು ನಡೆಸಿಕೊಟ್ಟರು. ಕರ್ಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯಾಧಿಕಾರಿ ಶ್ರೀಮತಿ ಧನುಶ್ರೀಯವರು ವಿದ್ಯಾರ್ಥಿಗಳಲ್ಲಿ ಆರೋಗ್ಯ ಹಾಗೂ ನೈರ್ಮಲ್ಯದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಸೀನಿಯರ್ ಛೇಂಬರ್ ಉಡುಪಿ ಟೆಂಪಲ್ ಸಿಟಿ ಲೀಜನ್‌ನ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಯಡ್ತರೆ ನಾಕಟ್ಟೆಯಲ್ಲಿ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಪರಿವಾರ ಶಕ್ತಿಗಳ ದಿವ್ಯ ಸನ್ನಿಧಿಯಲ್ಲಿ ಚತುರ್ಥ ಪ್ರತಿಷ್ಠಾವರ್ಧಂತ್ಯುತ್ಸವ ಹಾಗೂ ಸಾನ್ನಿಧ್ಯ ಕಲಶೋತ್ಸವ – ಅನ್ನಸಂತರ್ಪಣೆ, ಬೈದರ್ಕಳ ಸಂದರ್ಶನ, ಅಗೇಲು ಸೇವಾ – ಶ್ರೀ ಪಂಜುರ್ಲಿ ಕೋಲ ಸೇವೆಯು ಜ.25 ರವಿವಾರದಂದು ನಡೆಯಲಿದೆ. ಬೆಳಿಗ್ಗೆ 8.30 ರಿಂದ ರಾತ್ರಿ 12.30 ರವರೆಗೆ ತನಕ ಕ್ಷೇತ್ರ ತಂತ್ರಿಗಳಾದ ವೇ.ಮೂ. ಕುತ್ಯಾರು ಕೇಂಜ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ ಸಾನ್ನಿಧ್ಯ ಕಲಶೋತ್ಸವ – ಅನ್ನಸಂತರ್ಪಣೆ ಹಾಗೂ ಸಾಯಂಕಾಲ 4.30ರಿಂದ ರಾತ್ರಿ 8.00 ರ ತನಕ ಶ್ರೀ ಬ್ರಹ್ಮ ಬೈದರ್ಕಳ ಸಹಿತ ಪರಿವಾರ ಶಕ್ತಿಗಳ ಪ್ರೀತ್ಯರ್ಥ, ಅಗೇಲು ಸೇವೆ – ಬೈದರ್ಕಳ ಸಂದರ್ಶನ – ಗೆಂಡ ಸೇವೆ – ಅನ್ನಸಂತರ್ಪಣೆ ನಡೆಯಲಿದೆ. ಅದೇ ದಿನ ರಾತ್ರಿ ಶ್ರೀ ಪಂಜುರ್ಲಿ ದೈವದ ಸಾನಿಧ್ಯವೃದ್ಧಿಗೋಸ್ಕರ ಸಿರಿ ಸಿಂಗಾರದ ಕೋಲ ಸೇವೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಎಸ್.‌ ರಾಜು ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ ಇತ್ತೀಚೆಗೆ ಐಎಂಜೆ ಸಂಸ್ಥೆಗಳಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು. ಸಿಬ್ಬಂದಿಗಳಲ್ಲಿ ಆರೋಗ್ಯ ಜಾಗೃತಿ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳನ್ನು ಮೊದಲೇ ಪತ್ತೆಹಚ್ಚುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ರವರೆಗೆ ಐಎಂಜೆ ಸಂಸ್ಥೆಗಳ ಆರೋಗ್ಯ ವಿಜ್ಞಾನ ಬ್ಲಾಕ್‌ನಲ್ಲಿ ನಡೆಸಲಾಯಿತು. ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಹೃದ್ರೋಗಶಾಸ್ತ್ರದಲ್ಲಿ ಜೂನಿಯರ್ ರೆಸಿಡೆಂಟ್ ಡಾ. ಸಮೃದ್ಧ ರೈ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವರು ಹೃದಯ ಆರೋಗ್ಯದ ಮಹತ್ವ, ತಡೆಗಟ್ಟುವ ಕ್ರಮಗಳು, ಆರೋಗ್ಯಕರ ಜೀವನಶೈಲಿ ಅಭ್ಯಾಸಗಳು ಮತ್ತು ಹೃದ್ರೋಗಶಾಸ್ತ್ರ ಮತ್ತು ಆರೋಗ್ಯಕರ ಹೃದಯವನ್ನು ಕಾಪಾಡಿಕೊಳ್ಳುವ ಕಲೆಯ ಕುರಿತು ಒಳನೋಟಗಳನ್ನು ಹಂಚಿಕೊಂಡರು. ಮತ್ತೊಬ್ಬ ವಿಶೇಷ ಅತಿಥಿ ಐಎಂಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಎಸ್. ಎನ್. ಭಟ್ ಅವರು ಕಾರ್ಯಕ್ರಮಕ್ಕೆ ಹಾಜರಿದ್ದರು ಮತ್ತು ಸಿಬ್ಬಂದಿ ನಿಯಮಿತ ಆರೋಗ್ಯ ತಪಾಸಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸಿದರು. ಕಾರ್ಯಕ್ರಮದಲ್ಲಿ ಐಎಂಜೆ ಸಂಸ್ಥೆಗಳ ಅಡಿಯಲ್ಲಿರುವ ಎಲ್ಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಅಮಾಸೆಬೈಲು: ತಾಲೂಕಿನ ಮಚ್ಚಟ್ಟು ಗ್ರಾಮದ ಆಯಿಮುಳ್ಳು ಎಂಬಲ್ಲಿ ಮನೆ ಬಾಗಿಲು ಮುರಿದು ಕಳವು ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಗುಲಾಬಿ ಬೋವಿ (60), ಗಂಡ ನಾಗು ಬೋವಿ ಅವರು ಅಮಾಸೆಬೈಲು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗುಲಾಬಿ ಬೋವಿ ಅವರು ತಮ್ಮ ಗಂಡನೊಂದಿಗೆ ಆಯಿಮುಳ್ಳು ಪ್ರದೇಶದಲ್ಲಿ ವಾಸವಿದ್ದು, ಗೋವಿಂದ ಕೊಡ್ಗಿ ಅವರ ಮನೆಯ ತೋಟದ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಜ.21ರಂದು ಎಂದಿನಂತೆ ಬೆಳಿಗ್ಗೆ ಕೆಲಸಕ್ಕೆ ತೆರಳಿದ್ದು, ಮಧ್ಯಾಹ್ನ ಊಟದ ವೇಳೆಗೆ ಗುಲಾಬಿ ಬೋವಿ ಅವರು ಮನೆಗೆ ಬಂದಿದ್ದರು. ಬಳಿಕ ಸಂಜೆ 3 ಗಂಟೆ ಸುಮಾರಿಗೆ ಮರುಕಳಿಸಿ ಕೆಲಸಕ್ಕೆ ಹೋಗುವಾಗ ಮನೆಯ ಹಿಂಬದಿ ಮರದ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಿ, ಮುಂಬದಿ ಬಾಗಿಲಿಗೆ ಹೊರಗಿನಿಂದ ಬೀಗ ಹಾಕಿದ್ದರು. ಸಂಜೆ ಸುಮಾರು 6 ಗಂಟೆಗೆ ಮನೆಗೆ ಹಿಂತಿರುಗಿದಾಗ ಮುಂಬದಿ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಿರುವುದು ಕಂಡು ಅನುಮಾನಗೊಂಡು ಹಿಂಬದಿ ಬಾಗಿಲು ಮೂಲಕ ಒಳಗೆ ಪ್ರವೇಶಿಸಿದ ವೇಳೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವಾರ್ಷಿಕ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಅತ್ಯಮೂಲ್ಯ ಭಾಗ. ಕಲಿತಿರುವುದನ್ನು ಮನನ ಮಾಡಿಕೊಳ್ಳುವಲ್ಲಿ ಒಂದಿಷ್ಟು ಸಲಹೆ, ಪರೀಕ್ಷೆ ಬರೆಯುವ ಕ್ರಮ ಫಲಿತಾಂಶ ಹೆಚ್ಚಿಸುವಲ್ಲಿ ಶ್ರಮವಹಿಸಿ ಗುಣಮಟ್ಟದ ಗರಿಷ್ಠ ಮಟ್ಟದ ಫಲಿತಾಂಶ ದಾಖಲಿಸಿದರೆ ಗೀತಾನಂದ ಪೌಂಡೇಶನ್‌ನಿಂದ ವಿದ್ಯಾರ್ಥಿ ವೇತನ ಹಾಗೂ ಸಂಮಾನ ಮಾಡಲಾಗುವುದು ಎಂದು ಗೀತಾನಂದ ಟ್ರಸ್ಟ್ ಪ್ರವರ್ತಕ ಆನಂದ ಸಿ. ಕುಂದರ್ ನುಡಿದರು. ಅವರು ಇತ್ತೀಚಿಗೆ ಗೀತಾನಂದ ಫೌಂಡೇಶನ್ ಮಣೂರು ಪಡುಕರೆ, ಮೊಗವೀರ ಯುವ ಸಂಘಟನೆ ಕೋಟ, ಮನಸ್ಮಿತಾ ಫೌಂಡೇಶನ್ ಕೋಟ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಮಣೂರು ಪಡುಕರೆ ಇಲ್ಲಿನ ಹತ್ತನೆ ತರಗತಿ ವಿದ್ಯಾರ್ಥಿಗಳಿಗೆ 3 ದಿನದ ಪ್ರೇರಣಾ ಶಿಬಿರವನ್ನು ಉದ್ಘಾಟಿಸಿ ಮಾತಾನಾಡಿದರು. ಸಮಾರಂಭದಲ್ಲಿ ಉಪಸ್ಥಿತರಿರುವ ಡೆನ್ನಿಸ್ ಚಾಂಜಿ ಕೆ. ಪ್ರಾಂಶುಪಾಲರು ಮಣೂರು ಪಡುಕರೆ ಅವರ ವಿದ್ಯಾರ್ಥಿಗಳಿಗೆ ಶುಭಾಷಯ ಸಲ್ಲಿಸುವರೊಂದಿಗೆ ಪದವಿ ಪೂರ್ವ ಶಿಕ್ಷಣ ಕಡಿಮೆ ಶುಲ್ಕದಲ್ಲಿ ಕಲಿಯಲು ತಮ್ಮ ಸಂಸ್ಥೆಯಲ್ಲಿ ಅನುಕೂಲ ಇದೆ ಎಂದರು. ಕಾರ್ಯಕ್ರಮದ ಆಯೋಜನೆಯಲ್ಲಿ ಸಹಕರಿಸಿದ ಮೊಗವೀರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿ.ಎಸ್. ಫೌಂಡೇಶನ್, ಜನವರಿ 2026ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ಶಯನಾ ಸಿ. ಶೆಟ್ಟಿ, ಸಂಪತ್, ಸಂಜನಾ, ರಾಹುಲ್ ಶ್ರೀಯಾನ, ಗಣೇಶ್, ಮಾನ್ಯ, ಕಿಶನ್, ನಿಖಿಲ್, ಸಿಂಚನ, ಸುರಕ್ಷಾ ಮೊಗವೀರ, ರೋಶನ್, ವರ್ಷಿತಾ ಯು.ಡಿ., ರಕ್ಷಿತ್, ಸಹನಾ ಹಾಗೂ ಸಿಂಚನ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ-ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಸ್ತೆ ಸುರಕ್ಷಾ ನಿಯಮವನ್ನು ಪಾಲಿಸುವುದರಿಂದ ಸಾರ್ವಜನಿಕರು ಧೈರ್ಯದಿಂದ ಓಡಾಡಬಹುದು. ಅಪಘಾತ ಮುಕ್ತ ಸಮಾಜ ನಿರ್ಮಿಸಬಹುದು ಹಾಗೂ ಅಮಾಯಕರ ಸಾವು ನೋವುಗಳನ್ನು ತಡೆಗಟ್ಟಲು ಸಾಧ್ಯ. ಈ ನೆಲೆಯಲ್ಲಿ ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರು ರಸ್ತೆ ಸುರಕ್ಷತೆಗೆ ಸಂಬಂಧಿಸಿದ ನಿಯಮಗಳನ್ನು ಅಳವಡಿಸಿಕೊಂಡು ದೈನಂದಿನ ಚಟುವಟಿಕೆಯಲ್ಲಿ ಈ ನಿಯಮಗಳನ್ನು ಪಾಲಿಸಬೇಕು ಎಂದು ಕುಂದಾಪುರ ಸರ್ಕಲ್ ಇನ್ಸಪೆಕ್ಟರ್ ಜಯರಾಮ ಗೌಡ ಹೇಳಿದರು. ಅವರು ಸ್ಥಳೀಯ ಆರ್.ಎನ್.ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷಾ ಸಪ್ತಾಹದ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಲೈಸೆನ್ಸ್ ಇಲ್ಲದೇ ವಾಹನ ಚಲಾಯಿಸುವುದು ಸರಿಯಾದ ದಾಖಲೆಗಳಿಲ್ಲದೆ ವಾಹನ ಚಲಾಯಿಸುವುದು, ಅತಿವೇಗವಾಗಿ ಚಲಾಯಿಸುವುದು, ಮಾದಕ ದ್ರವ್ಯ ಸೇವಿಸಿ ವಾಹನ ಚಲಾಯಿಸುವುದು ಕಾನೂನು ಪ್ರಕಾರ ತಪ್ಪು. ಈ ಕಾನೂನುಗಳನ್ನು ಉಲ್ಲಂಘಿಸದೇ ವಾಹನ ಸವಾರರು ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮದ ಮಹತ್ವವನ್ನು ವಿವರಿಸಿದರು. ಪೋಲಿಸ್ ಕಾನ್ಸ್ಟೆಬಲ್ ಗಿರೀಶ್‌, ಕಾಲೇಜಿನ ಬೋಧಕ ಹಾಗೂ ಬೋಧಕೇತರರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ,ಕೋಟ: ಕೋಟೇಶ್ವರ ಗ್ರಾಮದ ಮಾರ್ಕೋಡು ನಿವಾಸಿ ಗಣೇಶ ದೇವಾಡಿಗ (47) ಅವರು ಎದೆ ನೋವಿನಿಂದ ಇತ್ತೀಚಿಗೆ ಮೃತಪಟ್ಟಿದ್ದಾರೆ. ಅವರು ಕೋಟೇಶ್ವರ ಹಳವಳ್ಳಿ ಬೀಚ್ ರಸ್ತೆಯ ಬಳಿ ಗ್ಯಾರೇಜ್ ನಲ್ಲಿ ಮೆಕ್ಯಾನಿಕ್ ಕೆಲಸ ಮಾಡಿಕೊಂಡಿದ್ದು ರಾತ್ರಿ ಕೆಲಸ ಮುಗಿಸಿ ಕುಂದಾಪುರ ವಿನಾಯಕ ಜಂಕ್ಷನ್ ಬಳಿ ಆಟೋದಲ್ಲಿ ಕುಳಿತು ಎದೆ ನೋವು ಆಗುತ್ತಿರುವುದಾಗಿ ತಿಳಿಸಿದಾಗ ಅವರನ್ನು ಕುಂದಾಪುರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿನ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ಸೇವಾಸಿಂಧು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯಕ್ಷಗಾನ ಕಲೆಯ ಕಲಾವಿದರು ಸಮಾಜಕ್ಕೆ ಒಳ್ಳೆಯ ಮೌಲ್ಯಗಳನ್ನು ಹಾಗೂ ಉತ್ತಮ ಸಂದೇಶಗಳನ್ನು ನೀಡುವಂತಾಗಬೇಕು. ಯಾವುದೇ ಕಲಾವಿದ ಪ್ರಸಂಗದ ಚೌಕಟ್ಟು ಮೀರಿ ವ್ಯವಹರಿಸುವುದು ಕಲೆಯ ಬೆಳವಣಿಗೆಗೆ ಮಾರಕ. ಕಾರ್ಕಡ ಶ್ರೀನಿವಾಸ ಉಡುಪ ಮತ್ತು ಶ್ರೀಧರ ಹಂದೆಯವರು ಸಾಲಿಗ್ರಾಮ ಮಕ್ಕಳ‌ಮೇಳದ ಮೂಲಕ ಕಳೆದ ಐದು ದಶಕಗಳಿಂದ ಕಿರಿಯರಿಂದ ಹಿರಿಯರಿಗೆ ರಸದೂತಣ ನೀಡಿದ್ದಾರೆ. ಉಡುಪ ಮತ್ತು ಹಂದೆಯವರ ಬದುಕು ಎಲ್ಲರಿಗೂ ಆದರ್ಶ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ ಹೆಗ್ಡೆ ಹೇಳಿದರು. ಅವರು ಇಲ್ಲಿನ ಸಾಲಿಗ್ರಾಮ ಮಕ್ಕಳ‌ ಮೇಳ ಕೋಟದ ಪಟೇಲರ ಮನೆಯಂಗಣದಲ್ಲಿ ಆಯೋಜಿಸಿದ ಉಡುಪ ಸಂಸ್ಮರಣೆ ಮತ್ತು ಉಡುಪ ಹಂದೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಮಕ್ಕಳ ಮೇಳದ ಅಧ್ಯಕ್ಷ ಬಲರಾಮ ಕಲ್ಕೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಾಡೋಜ ಜಿ. ಶಂಕರ್, ಗೀತಾನಂದ ಫೌಂಡೇಶನ್‌ನ ಆನಂದ ಸಿ. ಕುಂದರ್, ಕಲ್ಕೂರ ಪ್ರತಿಷ್ಠಾನದ ಪ್ರದೀಪ ಕುಮಾರ ಕಲ್ಕೂರ, ಕರ್ಣಾಟಕ ಬ್ಯಾಂಕ್ ಹಿರಿಯ ಅಧಿಕಾರಿ ವಾದಿರಾಜ್, ಮಕ್ಕಳ…

Read More