Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ರೈಲು ನಿಲ್ದಾಣದ ಪ್ರಯಾಣಿಕರ ಬಹು ದಿನಗಳ ಬೇಡಿಕೆ ಈಡೇರಿದೆ. ಸುಮಾರು 2.40 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪ್ರಯಾಣಿಕರ ಸೌಲಭ್ಯಗಳು ಜಿಲ್ಲಾಡಳಿತದ ಸಹಕಾರದೊಂದಿಗೆ ಲೋಕಾರ್ಪಣೆಗೊಂಡಿದೆ. ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಉಡುಪಿ ರೈಲ್ವೆ ನಿಲ್ದಾಣಕ್ಕೆ ಹೊಸ ಕಾಯಕಲ್ಪ ನೀಡಿ ಹೊಸ ಮೆರುಗಿನೊಂದಿಗೆ ಕರಾವಳಿ ಭಾಗದ ಜನರಿಗೆ ಲಭ್ಯವಾಗಲಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿ ರೈಲು ನಿಲ್ದಾಣ ಪರಿಸರದಲ್ಲಿ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿ. ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಕರಾವಳಿ ಜಿಲ್ಲೆಗಳ ಎಲ್ಲ ರೈಲು ನಿಲ್ದಾಣಗಳ ಮೇಲ್ದರ್ಜೆಗಾಗಿ 100 ಕೋಟಿ ರೂ ಗಳ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅನುಮೋದನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಥಮ ಹಂತದ ಕಾಮಗಾರಿಗಳಲ್ಲಿ ಪ್ಲಾಟ್ ಫಾರ್ಮ್ 2 ಅನ್ನು 2.6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಹಿರಿಯ ನಾಗರಿಕರ ಅನುಕೂಲಕ್ಕಾಗಿ 3 ಲಿಫ್ಟ್ಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶಿಕ್ಷಕ ವರ್ಗಕ್ಕೆ ಪ್ರಾಥಮಿಕ ಚಿಕಿತ್ಸೆಯ ಅರಿವು ಮೂಡಿಸುವ ಕಾರ್ಯಗಾರವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರದ ಸಹಯೋಗದಲ್ಲಿ ನಡೆಸಲಾಯಿತು. ಡಾ. ಕಿರ್ತೀ ಮಾತನಾಡಿ, ಪ್ರಥಮ ಚಿಕಿತ್ಸೆಯ ಜ್ಞಾನದ ಅಗತ್ಯತೆಯನ್ನು ತಿಳಿಸುತ್ತಾ ಪ್ರಾಥಮಿಕ ಚಿಕಿತ್ಸೆಯನ್ನು ನಮ್ಮವರಿಗಾಗಿ ನಾವು ತಿಳಿಯಬೇಕಾದದ್ದು ಅತ್ಯಗತ್ಯ. ಕೇವಲ ತಿಳಿದರೆ ಸಾಕಾಗಲ್ಲ ಅದನ್ನು ನಮ್ಮರಿಗೆ ತಿಳಿಸುವ ಹೊಣೆಗಾರಿಕೆಯೂ ನಮ್ಮೆಲ್ಲರ ಮೇಲಿದೆ. ಸಹಾಯವನ್ನು ಬಯಸುವ ಜೀವದ ಸಹಾಯಕ್ಕೆ ಧಾವಿಸಬೇಕಾದರೆ ಮೊಟ್ಟ ಮೊದಲು ನಾವು ಸಹಾಯ ಮಾಡುವ ಯೋಗ್ಯತೆಯನ್ನು ಹೊಂದಿರಬೇಕಾಗುತ್ತದೆ. ನಮ್ಮ ಒಳಗಡೆಯ ಭಯವನ್ನು ದೂರ ಮಾಡಿಕೊಳ್ಳಲು, ನಮ್ಮಿಂದ ನೊಂದ ಜೀವಕ್ಕೆ ಅಪಾಯ ಆಗದಿರಬೇಕಾದರೆ, ನಮ್ಮ ಜೀವ ಸುರಕ್ಷವಾಗಿರಬೇಕಾದರೆ ನಾವು ಪ್ರಾಥಮಿಕ ಚಿಕಿತ್ಸೆಯ ಜ್ಞಾನ ಹೊಂದಿರಲೇ ಬೇಕಾಗುತ್ತದೆ ಎಂದು ತಿಳಿಸುತ್ತಾ ಪ್ರಾತ್ಯಕ್ಷತೆಯ ಮೂಲಕ ಅಗ್ನಿ ಅಪಘಾತ, ಮೂಳೆ ಮುರಿತ, ವಿವಿಧ ಅಂಗಾಂಗಗಳಲ್ಲಿ ಉಂಟಾದ ಗಾಯಗಳ ಪ್ರಥಮ ಚಿಕಿತ್ಸೆಯ ವಿಚಾರಗಳನ್ನು ಮತ್ತು ಸಿಪಿಆರ್ ನಡೆಸುವ ವಿಧಾನಗಳನ್ನು ವಿವರಿಸಿದರು. ಶ್ರೀ ಸಿದ್ಧಿ ಪ್ರತಿಷ್ಠಾನದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಬಾರಕೂರು ಬಂಡೀಮಠ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕ್ಷೇತ್ರ ನಾಗರಡಿಯಲ್ಲಿ ಮಂಗಳವಾರ ಮತ್ತು ಬುಧವಾರ ನಾನಾ ಧಾರ್ಮಿಕ ಕಾರ್ಯಕ್ರಮದೊಂದಿಗೆ  ಮಕರ ಸಂಕ್ರಾಂತಿ ಉತ್ಸವ ಜರುಗಿತು. ಮಂಗಳವಾರ ಬೆಳಿಗ್ಗೆ ಬಡಾ ಗಣಪತಿ ದೇವಸ್ಥಾನದಲ್ಲಿ ಗಣಹೋಮ, ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮತು ವಿಶ್ವನಾಥೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ ಮತ್ತು ರುದ್ರಾಭಿಷೇಕ, ಕಲ್ಪೋಕ್ತ ಪೂಜೆ, ನಾಗರಡಿಯಲ್ಲಿ ಋಕ್ ಸಂಹಿತಾ ಪಾರಾಯಣ, ಮಹಾ ಪೂಜೆ ಜರುಗಿತು. ಮಂಗಳವಾರ ಸಂಜೆ ಭಜನೆ, ರಂಗಪೂಜೆ, ನಾಗರಡಿಯಲ್ಲಿ ಕಾಯಿ ಪೂಜೆ, ನಾಗದೇವರ ಪ್ರಸನ್ನ ಪೂಜೆ, ಹಾಲಿಟ್ಟು ಸೇವೆ ಬಳಿಕ ಮಾರಿ ಹೊರಡಲಿದ್ದು ಊರಿನ 4 ಭಾಗಕ್ಕೆ ನಾಗಪಾತ್ರಿಯವರೊಂದಿಗೆ ಸಾತ್ವಿಕವಾದ ಬಲಿಯೊಂದಿಗೆ ಮಾರಿ ಪೂಜೆ ಜರುಗಿತು. ಬುಧವಾರ ಮುಂಜಾನೆ ನಾಗಮಂಡಲ, ನಾಗದರ್ಶನ, ತುಲಾಭಾರ ಸೇವೆ, ಸ್ವರಸೇವೆ 2 ದಿನವೂ ಅನ್ನ ಸಂತರ್ಪಣೆಯಲ್ಲಿ ಮತ್ತು ಪೂಜೆ ಉತ್ಸವದಲ್ಲಿ ಸಹಸ್ರಾರು ಮಂದಿಭಾಗವಹಿಸಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ (ಪ್ರಾಥಮಿಕ ಶಾಲಾ ವಿಭಾಗ) ಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಬಹುಮಾನ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಈ ಸಮಾರಂಭಕ್ಕೆ ಗೌರವಾನ್ವಿತ ಅತಿಥಿಗಳಾಗಿ ಡಾ. ಉದಯಕುಮಾರ್ ತಲ್ಲೂರು (ಸಾಮಾಜಿಕ ನ್ಯಾಯ ಸಮಿತಿ ಹಾಗೂ ಆಹಾರ ಸಮಿತಿಯ  ಅಧ್ಯಕ್ಷರು, ಗ್ರಾಮಪಂಚಾಯತ್  ತಲ್ಲೂರು) ಹಾಗೂ  ಡಾ. ಎಂ. ದಿನೇಶ್ ಹೆಗ್ಡೆ (ನಿವೃತ್ತ ಪ್ರಾಂಶುಪಾಲರು, ಶ್ರೀ ಶಾರದಾ  ಕಾಲೇಜು, ಬಸ್ರೂರು) ಅವರು ಆಗಮಿಸಿದ್ದರು. ಡಾ. ಉದಯಕುಮಾರ್ ತಲ್ಲೂರು ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಇಂದು ಮನೆ ಹಾಗೂ ಶಾಲೆಯಲ್ಲಿ ಲಭ್ಯವಿರುವ ಸೌಕರ್ಯಗಳನ್ನು ಸರಿಯಾಗಿ ಸದುಪಯೋಗಪಡಿಸಿಕೊಂಡು ಚೆನ್ನಾಗಿ ಅಭ್ಯಾಸ ಮಾಡಲು ಹೇಳಿದರು. ಮಾದಕವಸ್ತುಗಳು, ಟಿವಿ ಹಾಗೂ ಮೊಬೈಲ್ ಪೋನ್ಗಳ ಆಕರ್ಷಣೆಯಿಂದ ದೂರವಿದ್ದು, ಬೆಳಿಗ್ಗೆ ಬೇಗನೆ ಎದ್ದು ವ್ಯಾಯಾಮ ಮಾಡುತ್ತಾ, ಚಟುವಟಿಕೆಯಿಂದ ಕೂಡಿದ ಆರೋಗ್ಯಕರ ಹಾಗೂ ಉತ್ತಮ ಜೀವನಶೈಲಿಯನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು. ಇನ್ನೊರ್ವ ಅತಿಥಿಗಳಾಗಿ ಆಗಮಿಸಿದ್ದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕಾಡೆಮಿಯ ವೆಬ್‌ಸೈಟ್‌ನಲ್ಲಿ ತಿಳಿಸಿರುವ ಶೀರ್ಷಿಕೆಯಲ್ಲಿ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿಕೊಂಡು 5 ಪುಟಗಳ ಸಾರಲೇಖವನ್ನು ಬರೆದು ಜನವರಿ 23 ರ ಒಳಗಾಗಿ ರಿಜಿಸ್ಟಾçರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಇವರಿಗೆ ಕಳುಹಿಸಬಹುದಾಗಿದೆ. ಸಾರಲೇಖ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆಲೋಶಿಪ್ ನೀಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ https://janapada.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಈ ವರ್ಷ ಬೈಂದೂರು ವಿಧಾನಸಭಾ ಕ್ಷೇತ್ರದ 43 ಪಂಚಾಯತ್‌ಗಳಲ್ಲಿ ಗ್ರಾಮೋತ್ಸವ ನಡೆಯುತ್ತಿದ್ದು, ಈ ಕಾರ್ಯಕ್ರಮದ ಮೂಲಕ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜನರಿಗೆ ಸರಕಾರದ ಸೌಲಭ್ಯ ದೊರಕಿಸಿಕೊಡುವ ಪ್ರಯತ್ನ ಮಾದರಿಯಾಗಿದೆ. ಗ್ರಾಮೋತ್ಸವ ಕಲ್ಪನೆ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಗ್ರಾಮದ ಜನರಿಗೆ ಸೇವೆ ನೀಡುವ ಈ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಗ್ರಾಮ ಪಂಚಾಯತ್ ಗುಜ್ಜಾಡಿ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಸಮೃದ್ಧಿ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ಗುಜ್ಜಾಡಿ ಸಹಭಾಗಿತ್ವದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಪರಿಕಲ್ಪನೆಯ ಬೈಂದೂರು ಉತ್ಸವ-2026ರ ಅಂಗವಾಗಿ ಗುಜ್ಜಾಡಿ ಗ್ರಾಮ ಪಂಚಾಯತ್ ವಠಾರದಲ್ಲಿ ಮಂಗಳವಾರ ನಡೆದ ಗುಜ್ಜಾಡಿ ಗ್ರಾಮೋತ್ಸವ-2026 ಉದ್ಘಾಟಿಸಿ ಮಾತನಾಡಿದರು. ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಕಾರ್ಯಕ್ರಮದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಪಿಎಂಈಜಿಪಿ ಹಾಗೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ದುರಸ್ಥಿ ಮತ್ತು ಸೇವೆ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಬ್ರಹ್ಮಾವರ ಮಯೂರ ಫೋಟೋಗ್ರಫಿ ಸ್ಟುಡಿಯೋ ಮಾಲಕಿ, ಛಾಯಾಕಿರಣ ರಾಜ್ಯ ಪ್ರಶಸ್ತಿ ಪುರಸ್ಕೃತೆ ಹಾಗೂ ಗ್ರಾಮೀಣ ಮಟ್ಟದಲ್ಲಿ ಮೊದಲ ಮಹಿಳಾ ಫೋಟೋಗ್ರಫರ್ ಪ್ರಶಸ್ತಿಗೆ ಭಾಜನರಾದ ಸುಜಾತಾ ಅಂದ್ರಾದೇ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟಿಸಿ, ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ತಾನು ಶಿಬಿರಾರ್ಥಿಯಾಗಿದ್ದಾಗ ತರಬೇತಿಯ ಬಗೆಗೆ ಅವರಿಗಿದ್ದ ಕಲ್ಪನೆ ಹಾಗೂ ತರಬೇತಿಯ ಅವಧಿಯಲ್ಲಿ ಅವರು ಪಡೆದುಕೊಂಡ ಅನುಭವವನ್ನು ಹಂಚಿಕೊಂಡರು. ಜೊತೆಗೆ ಅವರು ಪಟ್ಟಂತಹ ಕಠಿಣ ಪರಿಶ್ರಮ, ಕೆಲಸದ ಮೇಲೆ ಅವರಿಗಿದ್ದ ಆಸಕ್ತಿ, ಆತ್ಮವಿಶ್ವಾಸ,  ಶ್ರದ್ಧೆಯಿಂದಾಗಿ ಇವತ್ತು ಯಶಸ್ಸಿನ ಹಂತವನ್ನು ತಲುಪಿದ್ದೇನೆ ಎಂದರು. ಫೋಟೋಗ್ರಫಿ ಕ್ಷೇತ್ರದಲ್ಲಿ ಮಹಿಳಾ ಉದ್ಯಮಿಯಾಗಿ ಹೊರಬಂದಾಗ, ತಾನು ಎದುರಿಸಿದ ಟೀಕೆಗಳನ್ನು ಮೆಟ್ಟಿ ನಿಂತು ಹೇಗೆ ಆತ್ಮಸ್ಥೈರ್ಯದಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಪಡೆಯಲು ಧನಾತ್ಮಕ ಮನೋಭಾವ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ. ಪ್ರತಿಯೊಬ್ಬರೂ ದೊಡ್ಡ ಕನಸುಗಳನ್ನು ಕಾಣಬೇಕು ಮತ್ತು ಅವುಗಳನ್ನು ನನಸಾಗಿಸುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಚರಿತ್ರೆಯಲ್ಲಿ ನೂರಕ್ಕೆ ನೂರು ಶೇಖಡಾ ಸಾಧನೆಗಳು ಸಾಧ್ಯವಾದದ್ದು ಪ್ರೇರಣೆ ಹಾಗೂ ಪ್ರೋತ್ಸಾಹದಿಂದ” ಎಂದು ರಾಷ್ಟ್ರ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರ ರಾಜೇಂದ್ರ ಭಟ್ ಹೇಳಿದರು. ಅವರು ಇಲ್ಲಿನ ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್‌ ಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ “ಹದಿಹರೆಯದವರ ಮನಸ್ಸುಗಳ ಸಬಲೀಕರಣ” (ಎಂಪವರಿಂಗ್ ಯಂಗ್ ಮೈಂಡ್ಸ್) ಎಂಬ ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅವರು ಮಾತನಾಡಿ, “ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ಶಿಕ್ಷಣ ನೀಡಿದರೆ ಸಾಲದು. ಆಧುನಿಕ ಜೀವನದ ಸವಾಲುಗಳನ್ನು ಎದುರಿಸಲು ಮೌಲ್ಯಾಧಾರಿತ ಶಿಕ್ಷಣದ ಅಗತ್ಯವಿದೆ. ಇಂತಹ ಕಾರ್ಯಾಗಾರಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟದ ಮಹಿಳಾ ಮಂಡಲಕ್ಕೆ ತನ್ನದೆ ಆದ ವಿಶಿಷ್ಟ ಕಾರ್ಯಕ್ರಮಗಳಿಂದ ಈ ಸಮಾಜದಲ್ಲಿ ಗುರುತಿಸಿಕೊಂಡಿದೆ. ಈ ಸಂಸ್ಥೆ ನಮ್ಮೂರಿನ ಅತಿ ಹಿರಿಯ ಸಂಸ್ಥೆ ಎಂಬ ಹೆಗ್ಗಳಿಕೆ ಇದೆ ಎಂದು ಕೋಟದ ಧರ್ಮರತ್ನಾಕರ ಆನಂದ್ ಸಿ. ಕುಂದರ್ ಹೇಳಿದರು ಅವರು ಕೋಟದ ಅಮೃತೇಶ್ವರೀ ದೇಗುಲದ ಸಮೀಪ ಕೋಟ ಮಹಿಳಾಮಂಡಲ ಇದರ 61ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಅಶಕ್ತರಿಗೆ, ವಿದ್ಯಾರ್ಥಿಗಳಿಗೆ ಸಹಾಯಹಸ್ತದ ಜೊತೆ ಹಿರಿಯ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವ ಈ ಸಂಸ್ಥೆ ಕ್ರಿಯಾಶೀಲ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದರು. ಕುಂದಾಪುರದ ಪ್ರಸಿದ್ಧ ಲೆಕ್ಕಪರಿಶೋಧಕರಾದ ಟಿ.ಎನ್. ಪ್ರಭು ಹಿಂದೂ ಸಂಪ್ರದಾಯದಲ್ಲಿ ಮಹಿಳೆಯರ ಸ್ಥಾನಮಾನ ಈ ಸಮಾಜದಲ್ಲಿ ಮಹಿಳೆಯನ್ನು ಯಾವ ರೀತಿಯಲ್ಲಿ ಗೌರವಿಸಲಾಗುತ್ತದೆ, ಭಗವದ್ಗೀತೆಯ ಕೆಲ ಮೂಲ ಸಾರಾಂಶವನ್ನು ಸಭೆಯಲ್ಲಿ ಮುಂದಿಟ್ಟರು. ಮಹಿಳಾ ಮಂಡಲದ ಅಧ್ಯಕ್ಷೆ ಗೀತಾ ಎ. ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಮಹಿಳಾ ಮಂಡಲದ ಸದಸ್ಯೆ ಸುಶೀಲ ನಾಗೇಶ್ ಅವರನ್ನು ಸಾಧಕ ಮಹಿಳಾ ಗೌರವ ನೀಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಂಡಿರುವ ಎರಡನೇ ಹಂತದ ಕಚ್ಚಾತೈಲ ಸಂಗ್ರಹಣೆ ಕಾಮಗಾರಿಯನ್ನು ಕೈಗೊಳ್ಳುವಾಗ ಸ್ಥಳೀಯ ಜನಸಾಮಾನ್ಯರಿಗೆ ತೊಂದರೆ ಉಂಟಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತೆಯನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿ ಕಚ್ಚಾತೈಲ ಸಂಗ್ರಹಣೆ ಘಟಕದ ಎರಡನೇ ಹಂತದ ಕಾಮಗಾರಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಚ್ಚಾತೈಲ ಸಂಗ್ರಹಣಾ ಘಟಕದ ಅಭಿವೃದ್ಧಿಗೆ ಅಗತ್ಯವಿರುವ ಭೂಮಿಯನ್ನು ಸಾರ್ವಜನಿಕರಿಂದ ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆದರೆ ಕೆಲವರಿಗೆ ಪರಿಹಾರದ ಹಣವನ್ನು ನೀಡಿರುವುದಿಲ್ಲ ಎಂದು ಕೇಳಿ ಬರುತ್ತಿದೆ. ಈ ಘಟಕಕ್ಕೆ ಭೂಮಿ ನೀಡಿರುವ ಭೂ ಮಾಲೀಕರಿಗೆ ಪರಿಹಾರದ ಹಣವನ್ನು ಶೀಘ್ರದಲ್ಲಿಯೇ ನೀಡಬೇಕೆಂದು ಕೆ.ಐ.ಎ.ಡಿ.ಬಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಎರಡನೇ ಹಂತದ ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸುತ್ತಮುತ್ತ ಪ್ರದೇಶಗಳ…

Read More