ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸಂತೆ ಮಾರ್ಕೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದ ಬಸ್ ಪಲ್ಟಿಯಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಕುಂದಾಪುರ ಕೆಎಸ್ಆರ್ಟಿಸಿ ಡಿಪ್ಪೋದಿಂದ ಹೊರಟು ಬಸ್ ನಿಲ್ದಾಣಕ್ಕೆ ತೆರಳುವ ವೇಳೆ ಡಿವೈಡರ್ನಲ್ಲಿ ಯೂಟರ್ನ್ ತೆಗೆದುಕೊಳ್ಳುವಾಗ ಬೈಂದೂರಿನತ್ತ ಸಾಗುತ್ತಿದ್ದ ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿದ್ದು ಬಸ್ ಚಾಲಕ ಭಾಸ್ಕರ್ ಎನ್. ನಾಯ್ಕ ಗಾಯಗೊಂಡಿದ್ದಾರೆ. ನಿರ್ಲಕ್ಷ್ಯ ಹಾಗೂ ಅತಿ ವೇಗದ ಚಾಲನೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆ ಪಿಎಸ್ಐ ನಾಸೀರ್ ಹುಸೇನ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಘಟನೆಯಿಂದಾಗಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ಥವಾಯಿತು. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ನೈಕಂಬ್ಳಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಆಯ್ಕೆ ಸಭೆ ನೆಡೆಯಿತು. ಅಧ್ಯಕ್ಷರಾಗಿ ಪ್ರೀತಮ್ ಶೆಟ್ಟಿ ಹಿಂಡೆಲ್ಸು ಮತ್ತು ಕಾರ್ಯದರ್ಶಿಯಾಗಿ ಚಂದ್ರ ಶೆಟ್ಟಿ ಕೊಳೂರು ಆಯ್ಕೆಯಾದರು. ಸಮಿತಿಯ ಸದಸ್ಯರಾಗಿ ಕರುಣಾಕರ ಶೆಟ್ಟಿ ನಿರ್ಕೋಡ್ಲು, ಚಂದ್ರ ಶೆಟ್ಟಿ ನಾಯ್ಕರಮನೆ, ಸತೀಶ್ ಆಚಾರ್ಯ, ಸಂಜೀವ ಶೆಟ್ಟಿ ಗಾಣದಾಡಿ, ಮಂಜುನಾಥ ಪೂಜಾರಿ, ರಾಜೀವ ಶೆಟ್ಟಿ ಆಸೂರು, ಕೊರಗಯ್ಯ ಶೆಟ್ಟಿ ಮಲ್ಲೋಡು, ಆನಂದ ಶೆಟ್ಟಿ ಕೆಳಾಮನೆ, ಶೇಖರ ಶೆಟ್ಟಿ ಬೆಟ್ಟಿನಮನೆ, ಮಂಜುನಾಥ ಮಡಿವಾಳ, ರಮೇಶ್ ಆಚಾರ್ಯ ಆಯ್ಕೆಯಾದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಈ ಹಿಂದೆ ಬಿಜೆಪಿ ಅಧಿಕಾರ ನಡೆಸಿದ್ದರೂ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯಲಾಗಿರಲಿಲ್ಲ. ಈ ಭಾರಿ ಬಿಜೆಪಿ ಕಾರ್ಯಕರ್ತರ ಉತ್ಸಾಹವನ್ನು ಕಂಡಾಗ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150ಕ್ಕೂ ಅಧಿಕ ಸ್ಥಾನ ದೊರೆಯುವ ಭರವಸೆ ಮೂಡಿದೆ ಎಂದು ಮಾಜಿ ಉಪಮುಖ್ಯ ಮಂತ್ರಿ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಕರ್ನಾಟಕದ ಆಯೋಜಿಸಿರುವ ವಿಜಯ ಸಂಕಲ್ಪ ಯಾತ್ರೆಯು ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲಕ್ಕೆ ಆಗಮಿಸಿದ್ದು, ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಯೊಬ್ಬ ಜನ ಸಾಮಾನ್ಯರಿಗೂ ಬಿಜೆಪಿ ಪಕ್ಷದ ಸಾಧನೆಗಳನ್ನು ತಿಳಿಸುವ ಉದ್ದೇಶದ ಈ ವಿಜಯ ಸಂಕಲ್ಪ ಯಾತ್ರೆ ಸಂಘಟಿಸಲಾಗಿದ್ದು, ಅದು ಅತ್ಯಂತ ಯಶಸ್ವಿಯಾಗಿದೆ. ನಿರೀಕ್ಷೆಗೂ ಮೀರಿ ಜನರಿಂದ ಸ್ಪಂಧನೆ ದೊರೆತಿದೆ. ಬಿಜೆಪಿ ಸಂಘಟನಾತ್ಮಕವಾಗಿ ಚುನಾವಣೆಗೆ ಸಜ್ಜಾಗಿದ್ದು, ರಾಷ್ಟ್ರರಕ್ಷಣೆ ಹಾಗೂ ಧರ್ಮ ರಕ್ಷಣೆಯನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಎಂದರು. ಶಿವಮೊಗ್ಗ ಲೋಕಸಭಾ ಸಂಸದ ಬಿ. ವೈ. ರಾಘವೇಂದ್ರ ಮಾತನಾಡಿ, ರಾಹುಲ್ ಗಾಂಧಿ ಭಾರತದಲ್ಲಿ ಪ್ರಜಾಪ್ರಭುತ್ವ ಕಣ್ಮರೆಯಾಗಿದೆ ಎಂದು ಬ್ರಿಟನ್ನಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ದಕ್ಷಿಣ ಭಾರತದ ಪ್ರಸಿದ್ದ ತೀರ್ಥಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ವಾರ್ಷಿಕ ಮನ್ಮಹಾರಥೋತ್ಸವ ಬುಧವಾರ ಸಡಗರ ಸಂಭ್ರಮದಿಂದ ಜರುಗಿತು. ದೇವಳದ ತಂತ್ರಿ, ಪ್ರಧಾನ ಅರ್ಚಕ ಡಾ.ಕೆ. ರಾಮಚಂದ್ರ ಅಡಿಗ ನೇತೃತ್ವದಲ್ಲಿ ಮುಹೂರ್ತ ಮಂಗಳಾರತಿ, ಪಂಚಾಮೃತ ಅಭಿಷೇಕ, ಕ್ಷಿಪ್ರಬಲಿ, ವಿಶೇಷ ಭೂತ ಬಲಿ, ರಥಾರೋಹಣ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ವಿವಿಧ ಭಾಗಗಳಿಂದ ಕ್ಷೇತ್ರಕ್ಕೆ ಆಗಮಿಸಿದ ಸಹಸ್ರಾರು ಭಕ್ತರು ಮಧ್ಯಾಹ್ನ ದೇವಳದ ಭೋಜನಶಾಲೆಯಲ್ಲಿ ಅನ್ನಪ್ರಸಾದ ಸ್ವೀಕರಿಸಿದರು. ಸಂಜೆ ನಡೆದ ರಥೋತ್ಸವದಲ್ಲಿ ಸಾವಿರಾರು ಭಕ್ತರು ರಥ ಎಳೆದು ಸಂಭ್ರಮಿಸಿದರು. ಕೊಲ್ಲೂರು ಕ್ಷೇತ್ರದ ಅಧಿದೇವತೆ ಹಾಗೂ ಗ್ರಾಮದೇವತೆ ಶ್ರೀ ಮೂಕಾಂಬಿಕಾ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಮಾ.೦೮ರಂದು ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವದ ಪ್ರಯುಕ್ತ ಊರಿನ ಹತ್ತು ಸಮಸ್ತರು, ಭಕ್ತಾದಿಗಳು ಸೇರಿ ತಮ್ಮ ಅಂಗಡಿ ಮುಂಗಟ್ಟು, ಮನೆ, ಬೀದಿಗಳನ್ನು ವಿಶೇಷವಾದ ವಿದ್ಯುದ್ದೀಪಗಳಿಂದ ಅಲಂಕರಿಸಿದ್ದರು. ಗುರುವಾರ ರಾತ್ರಿ ದೇವರ ಅವಭ್ರತಸ್ನಾನ ನಡೆಯಲಿದೆ. ಶುಕ್ರವಾರ ಬೆಳಿಗ್ಗೆ ಮಹಾಪೂರ್ಣಾಹುತಿ, ಧ್ವಜಾವರೋಹಣ, ಪೂರ್ಣಕುಂಭಾಭಿಷೇಕದ ನಂತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 5 ವರ್ಷದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಒಂದೇ ಸರಕಾರದ ಅವಧಿಯಲ್ಲಿ ಅನುಮೋದನೆ ದೊರೆತು ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು, ಜನರ ತೆರಿಗೆ ಹಣವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಿದೆ ಎಂಬುದನ್ನು ಡಬ್ಬಲ್ ಇಂಜಿನ್ ಸರಕಾರ ತೋರಿಸಿ ಕೊಟ್ಟಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಬುಧವಾರ ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ ತಾಲೂಕು ಕೇಂದ್ರಕ್ಕೆ ಅವಶ್ಯವಿದ್ದ ನೂತನ ಆಡಳಿತ ಸೌಧಕ್ಕೆ 10 ಕೋಟಿ ಅನುದಾನ ಮಂಜೂರಾಗಿ ಎರಡು ವರ್ಷದಲ್ಲಿ ಸುಂದರ ಕಟ್ಟಡ ತಲೆಯೆತ್ತಿದೆ. 785 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ಈಗಾಗಲೇ ಚಾಲನೆ ದೊರೆತಿದ್ದು, 43 ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರತಿ ಮನೆಗೂ ನೀರಿನ ಪೂರೈಕೆ ಮಾಡಲಾಗುತ್ತದೆ. ಮೀನುಗಾರರಿಗೆ ಅನುಕೂಲವಾಗುವ ಯೋಜನೆ, ಬಂದರು ಸೇರಿದಂತೆ ಮೂಲಭೂತ ಸೌಲಭ್ಯಗಳೊಂದಿಗೆ ಪ್ರವಾಸೋದ್ಯಮ, ಕೈಗಾರಿಕೋದ್ಯಮ ಅವಭಿವೃದ್ಧಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ನೆರವಿನಿಂದಾಗಿ ವಿಶೇಷ ಒತ್ತು ನೀಡಲಾಗಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆಯಲ್ಲಿ ವೇಳೆ ಸಂಸದರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಅವರ ಅಭಿಮಾನಿಗಳು ಅಧಿಕಾರಿಗಳು ಹಾಗೂ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ ಘಟನೆ ಬುಧವಾರ ನಡೆದಿದೆ. ತಾಲೂಕು ಆಡಳಿತ ಸೌಧದ ಉದ್ಘಾಟನೆಯ ವೇದಿಕೆಯಲ್ಲಿ ಹಾಕಲಾಗಿದ್ದ ಕಾರ್ಯಕ್ರಮದ ಕಟೌಟ್ನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರ ಪೋಟೋ ಚಿಕ್ಕದಾಗಿ ಮುದ್ರಿಸಿದ್ದು, ಉಸ್ತುವಾರಿ ಸಚಿವರು ಹಾಗೂ ಶಾಸಕರ ಪೋಟೋವನ್ನು ದೊಡ್ಡದಾಗಿ ಹಾಕಲಾಗಿತ್ತು. ಇದು ಆಡಳಿತ ಸೌಧಕ್ಕೆ ಅನುದಾನ ಮಂಜೂರು ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಸಂಸದರಿಗೆ ಮಾಡಿದ ಅವಮಾನ ಎಂದು ಅಭಿಮಾನಿಗಳು ಜಿಲ್ಲಾಧಿಕಾರಿಗಳನ್ನು ಸ್ಥಳದಲ್ಲಿಯೇ ಪ್ರಶ್ನಿಸಿದ್ದಾರೆ. ಅಲ್ಲದೇ ಸಂಸದರನ್ನು ನಿರ್ಲಕ್ಷ್ಯಿಸಿರುವುದನ್ನು ಖಂಡಿಸಿ ವೇದಿಕೆಯ ಕೆಳಗಿನಿಂದ ಸಂಸದರಿಗೆ ಜೈಕಾರ ಹಾಕಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಮಾಜಿ ತಾಪಂ ಉಪಾಧ್ಯಕ್ಷ, ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ಶೆಟ್ಟಿ ಕಡ್ಕೆ ಮಾತನಾಡಿ, ಬೈಂದೂರು ತಾಲೂಕಿಗೆ ಅತಿ ಹೆಚ್ಚು ಅನುದಾನ ತಂದವರು ಸಂಸದ ಬಿ.ವೈ. ರಾಘವೇಂದ್ರ ಅವರು ಎಂಬುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಭಾಗವಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ಬೈಂದೂರು ಕ್ಷೇತ್ರದಲ್ಲಿ ನಡೆದ ವಿಜಯ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಬಾಳೆಹಿತ್ಲು ಮಲಿಯನಮನೆ ರಸ್ತೆಯ ಮನೆ ಭೇಟಿ ನೀಡಿ ಕರಪತ್ರ ನೀಡಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಕೋರಿದರು. ಈ ವೇಳೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಶೆಟ್ಟಿ, ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಪ್ರಭಾರಿ ಉದಯ ಕುಮಾರ ಶೆಟ್ಟಿ, ರಾಜ್ಯ ಸಂಚಾಲಕ ರಾಜೇಂದ್ರ, ಸಹ ಸಂಚಾಲಕ ದತ್ತಾತ್ರೇಯ, ಕಿಶೋರ ಕುಮಾರ, ಬಿಜೆಪಿ ಮಂಡಲದ ಅಧ್ಯಕ್ಷ ನೆಲ್ಯಾಡಿ ದೀಪಕ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರ್, ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಅನಿತಾ ಶ್ರೀಧರ್, ರಾಜೇಶ್ ಕಾವೇರಿ, ಸದಾನಂದ ಉಪ್ಪಿನಕುದ್ರು, ಸ್ಥಳೀಯರಾದ ರಾಜಶೇಖರ ದೇವಾಡಿಗ, ಚಂದ್ರಶೇಖರ ದೇವಾಡಿಗ, ದುರ್ಗ ದೇವಾಡಿಗ, ಉಮೇಶ ದೇವಾಡಿಗ, ಮಂಜುನಾಥ ಗಾಣಿಗ, ಕೆ.…
ಬೈಂದೂರು ಕ್ಷೇತ್ರಕ್ಕೆ ಅನುದಾನ ಬಂದಿದ್ದರೆ, ಅದಕ್ಕೆ ಶಾಸಕ ಸುಕುಮಾರ ಶೆಟ್ಟಿ ಅವರು ಕಾರಣರಲ್ಲ!ಗೋಪಾಲ ಪೂಜಾರಿ ಅವರ ಕಾಲದಲ್ಲೇ ಬೈಂದೂರು ಸರ್ವತೋಮುಖ ಅಭಿವೃದ್ಧಿಯತ್ತ ದಾಪುಗಾಲಿರಿಸಿತ್ತುಬೈಂದೂರು ಕ್ಷೇತ್ರ ಕಾಂಗ್ರೆಸ್ ಪಕ್ಷದ ಭದ್ರಕೋಟೆ. ಈ ಭಾರಿ ಗೆಲುವು ನಮ್ಮದೇ – ಮದನ್ ಕುಮಾರ್ ಉಪ್ಪುಂದ
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ,ಮಾ.14: ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾರ್ಚ್ 15ರಿಂದ ಮಾರ್ಚ್ 19ರವರೆಗೆ ಕರಾವಳಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಗುಡುಗು ಸಹಿತ ಸಿಡಿಲು ಸಹಿತ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ಝಳಕ್ಕೆ ಜನ ತತ್ತರಿಸಿ ಹೋಗಿದ್ದು, ಮಂಗಳೂರು, ಸುಳ್ಯ ಮುಂತಾದೆಡೆ ಪ್ರಖರ ಬಿಸಿಲಿಗೆ ಮನೆಯಿಂದ ಹೊರಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ಪ್ರಖರತೆ ಹೆಚ್ಚಿದ್ದು, ಕಳೆದ ಕೆಲವು ದಿನಗಳಲ್ಲಿ ಜನ ಬಿಸಿ ಗಾಳಿಯನ್ನೂ ಅನುಭವಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಕಾರ್ಯನಿರತ ಸಂಘ ಉಡುಪಿ ಜಿಲ್ಲಾ ಸಂಘದ ಅಧೀನ ಸಂಸ್ಥೆಯಾದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ) ಇದರ ನೂತನ ತಾಲೂಕು ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನಮಠ ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಆಯ್ಕೆಯಾಗಿದ್ದಾರೆ. ಮಂಗಳವಾರ ನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ನಾಗರಾಜ ರಾಯಪ್ಪನಮಠ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾದರು. ಉಳಿದಂತೆ ಉಪಾಧ್ಯಕ್ಷರಾಗಿ ಚಂದ್ರಮ ತಲ್ಲೂರು, ರಾಘವೇಂದ್ರ ಪೈ, ಜೊತೆ ಕಾರ್ಯದರ್ಶಿಗಳಾಗಿ ಯೋಗೀಶ ಕುಂಭಾಶಿ ಹಾಗೂ ರಾಘವೇಂದ್ರ ಬಳ್ಕೂರು, ಕೋಶಾಧಿಕಾರಿಯಾಗಿ ಲೋಕೇಶ್ ಆಚಾರ್ಯ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಕುಮಾರ್, ಶಶಿಧರ ಹೆಮ್ಮಾಡಿ, ಮಂಜುನಾಥ ಶೆಣೈ ಜನ್ನಾಡಿ, ಸತೀಶ್ ಆಚಾರ್ಯ ಉಳ್ಳೂರು, ವಿನಯ್ ಪಾಯಸ್, ರಾಮಕೃಷ್ಣ ಹೇರಳೆ, ಶ್ರೀಕಾಂತ ಹೆಮ್ಮಾಡಿ, ಸಂತೋಷ್ ಕುಂದೇಶ್ವರ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ರಾಜೇಶ್ ಶೆಟ್ಟಿ ಅಲೆವೂರು ಚುನಾವಣೆ ಪ್ರಕ್ರಿಯೆ…
