Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2022 – 23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯಿತ್ ಆಯ್ಕೆಯಾಗಿದ್ದು, ಅ.2ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು. ಗಾಂಧಿ ಜಯಂತಿ ದಿನ ಹಮ್ಮಿಕೊಂಡ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಕಾಲ್ತೋಡು ಗ್ರಾಮ ಪಂಚಾಯತ್ ಪರವಾಗಿ ಪಂಚಾಯತ್ ಅಧ್ಯಕ್ಷರಾದ ಬಿ. ಅಣ್ಣಪ್ಪ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿಯು ಚರಕದ ಸ್ಮರಣಿಕೆ ಪ್ರಶಸ್ತಿ ಪತ್ರ ಹಾಗೂ ಪಂಚಾಯತ್ ಕಾಮಗಾರಿಗೆ 5 ಲಕ್ಷ ರೂಪಾಯಿ ಬಹುಮಾನ ಒಳಗೊಂಡಿದೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಪಂಚಾಯತ್ ರಾಜ್‌ ಇಲಾಖೆಯ ಉಮಾಮದೇವನ್ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2022 – 23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯಿತಿಗೆ ದೊರೆತಿದೆ. ಗಾಂಧಿ ಜಯಂತಿ ದಿನ ಹಮ್ಮಿಕೊಂಡ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಗ್ರಾಮ ಪಂಚಾಯತ್ ಪರವಾಗಿ ಪಂಚಾಯತ್ ಅಧ್ಯಕ್ಷರಾದ ಪ್ರಭಾಕರ್ ಮೆಂಡನ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರರಾವ್ ಅವರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಪ್ರಶಸ್ತಿಯು ಚರಕದ ಸ್ಮರಣಿಕೆ ಪ್ರಶಸ್ತಿ ಪತ್ರ ಹಾಗೂ ಪಂಚಾಯತ್ ಕಾಮಗಾರಿಗೆ 5 ಲಕ್ಷ ರೂಪಾಯಿ ಬಹುಮಾನ ಒಳಗೊಂಡಿದೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಪಂಚಾಯತ್ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಮದೇವನ್ ದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಗಾಯಗೊಂಡಿದ್ದ ಇಲ್ಲಿನ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರಿಗಾರ್ (42) ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಬೆಳಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಚಿಕ್ಕನಸಾಲು ರಸ್ತೆ ಬಳಿ ನಡೆದ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಕಾರು ಡ್ರೈವ್ ಮಾಡುತ್ತಿದ್ದ ರಾಘವೇಂದ್ರ ಹಾಗೂ ಎದುರಿನ‌ ಕಾರಿನ ಡ್ರೈವರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದೇ ವೇಳೆ ಎದುರಿನ ಕಾರಿನಲ್ಲಿದ್ದ ವ್ಯಕ್ತಿ ರಾಘವೇಂದ್ರ ಅವರಿಗೆ ಚೂರಿ ಇರಿದಿದ್ದರು. ಬಳಿಕ‌ ಚೂರಿ ಇರಿತಕ್ಕೊಳಗಾದ ರಾಘು ಅವರ ತಕ್ಷಣ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಘಟನೆಗೆ ಪೂರ್ವ ದ್ವೇಷ ಕಾರಣ ಅನ್ನುವ ಮಾತುಗಳು ಕೇಳಿಬಂದಿದ್ದು ಈ ನಿಟ್ಟಿನಲ್ಲಿ ಆರೋಪಿ ಪತ್ತೆಗಾಗಿ ತನಿಕೆ ಹಾಗೂ ಡಿವೈಎಸ್‌ಪಿ ಅವರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢ ಶಾಲೆಯಲ್ಲಿ ಜಂಟಿಯಾಗಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಕಾಲೇಜು ಹಾಗೂ ಪ್ರೌಢಶಾಲೆಯ ಸಿಬ್ಬಂದಿಗಳು ಗಾಂಧೀಜಿ ಹಾಗೂ ಶಾಸ್ತ್ರೀಯವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಗಾಂಧೀಜಿ ಹಾಗೂ ಶಾಸ್ತ್ರೀಯವರ ಜೀವನ ಹಾಗೂ ತತ್ವಾದರ್ಶಗಳ ಕುರಿತು ಮಾತನಾಡಿದರು.ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳವರ ಸ್ವಾಗತಿಸಿ ವಂದಿಸಿದರು. ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಬೋಧಕ,ಬೋಧಕೇತರ ವೃಂದದವರು,ಪ್ರೌಢಶಾಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಹಾಗೂ ಉಭಯ ಸಂಸ್ಥೆಗಳ ವಿದ್ಯಾರ್ಥಿಗಳು ಜನತಾ ಕ್ರೀಡಾಂಗಣವನ್ನು ಸ್ವಚ್ಚಗೊಳಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹುಬ್ಬಳ್ಳಿಯಲ್ಲಿ ಜರುಗಿದ 14ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ವಿಜೇತಳಾದ ಬ್ರಹ್ಮಾವರ ಲಿಟಲ್‌ರಾಕ್ ಇಂಡಿಯನ್ ಸ್ಕೂಲ್‌ನ 6ನೇ ತರಗತಿ ವಿದ್ಯಾರ್ಥಿನಿ ಶಿಖಾ ಬಿಜೂರು ರಾಷ್ಟ್ರ ಮಟ್ಟದ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ. ಕುಂದಾಪುರದ ಇವೊಲ್ಯೂಷನ್ ಅಕಾಡೆಮಿ ಆಫ್ ಮೆಟೀರಿಯಲ್ ಆರ್ಟ್ಸ್ & ಫಿಟ್‌ನೆಸ್ ಸಂಸ್ಥೆಯಲ್ಲಿ ಗುರು ಗ್ರಷಮೇಶ್ ಕುಂದರ್ ಅವರಲ್ಲಿ ತರಬೇತಿ ಪಡೆಯುತ್ತಿರುವ ಶಿಖಾ ಬಿಜೂರು, ಅಖಿಲ ಕರ್ನಾಟಕ‌ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಆಯೋಜಿಸಿದ ರಾಜ್ಯ ಮಟ್ಟದ ಸ್ವರ್ಧೆಯಲ್ಲಿ 10 ವರ್ಷದೊಳಗಿನ ವೈಯಕ್ತಿಕ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಳು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಸಾಧನೆಗೈದಿರುವ ಶಿಖಾ, ಶ್ರೀಧರ್ ಬಿಜೂರು ಹಾಗೂ ದೀಪಿಕಾ ಅವರ ಪುತ್ರಿ

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ.ಕುಂದಾಪುರ: ನಗರದ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರೆಗಾರ್ ಎಂಬುವರಿಗೆ ಅಪರಿಚಿತನೊಬ್ಬ ಚೂರಿ ಇರಿದು ಪರಾರಿಯಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಇರಿತಕ್ಕೊಳಗಾದ ರಾಘವೇಂದ್ರ ಗಂಭೀರ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರದ ಚಿಕನ್ ಸಾಲ್ ರಸ್ತೆ ಅಂಚೆ ಕಚೇರಿ ಬಳಿಯ ನ್ಯೂ ಡೆಲ್ಲಿ ಬಜಾರ್ ಅಂಗಡಿಯೆದುರು ಬನ್ಸ್ ರಾಘು ಯಾನೆ ರಾಘವೇಂದ್ರ ತನ್ನ ಹೊಂಡಾ ಸಿಟಿ ಕಾರಿನಲ್ಲಿ ಬಂದಿದ್ದು, ಇದೇ ಸಂದರ್ಭ ವ್ಯಾಗನರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ತಗಾದೆ ತೆಗೆದು ರಾಘವೇಂದ್ರ ತೊಡೆಗೆ ಚೂರಿ ಹಾಕಿ ಕಾರಿನಲ್ಲಿ ಪರಾರಿಯಾಗಿದ್ದಾನೆ. ಘಟನೆಗೆ ಹಳೆ ದ್ವೇಷವೇ ಕಾರಣವಿರಬಹುದು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ವೃತ್ತ ನಿರೀಕ್ಷಕ ನಂದಕುಮಾರ್, ಎಸ್‌ಐ ವಿನಯ್ ಕೊರ್ಲಹಳ್ಳಿ ಹಾಗೂ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕುಂದಾಪುರ: ಚೂರಿ ಇರಿತಕ್ಕೆ ಒಳಗಾದ ವ್ಯಕ್ತಿ ಸಾವು – https://kundapraa.com/?p=69346 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಸಿದ್ಧಾಪುರ: ಇಲ್ಲಿನ ಕಡ್ರಿ ಕಾಂಪ್ಲೆಕ್ಸ್ನಲ್ಲಿ ಶ್ರೀ ಬ್ರಾಹ್ಮಿ ಗ್ರಾಮೀಣ ವಿಕಾಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆಗೊಂಡಿತು. ಕಮಲಶಿಲೆ ದೇವಳದ ಆಡಳಿತ ಮೊಕ್ತೇಸರ ಸಚ್ಚಿದಾನಂದ ಚಾತ್ರ ನೂತನ ಸೊಸೈಟಿಯನ್ನು ಉದ್ಘಾಟಿಸಿ ಮಾತನಾಡಿ, ‘ಒಳ್ಳೆಯ ಉದ್ದೇಶಕ್ಕೆ ಸಾಲ ಸೌಲಭ್ಯ ವಿತರಿಸುವ ಮೂಲಕ ಜನರ ಏಳಿಗೆಗೆ ಸಹಕರಿಸುವ ಸಹಕಾರಿ ಸಂಸ್ಥೆಯಾಗಲಿ ಎಂದು ಹೇಳಿದರು. ಲಾಕರ್ ಉದ್ಘಾಟಿಸಿದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, “ಸಹಕಾರಿ ಸಂಸ್ಥೆಗಳು ಸಮಾಜ ಕಟ್ಟುವ ಸಂಸ್ಥೆಗಳು, ಸಂಸ್ಥೆಯಿಂದ ರೈತಾಪಿ ಕುಟುಂಬಗಳ ಅಭಿವೃದ್ಧಿಗೆ ಸಾಲ ಸೌಲಭ್ಯ ನೀಡುವ ಮೂಲಕ ಗ್ರಾಮೀಣದಲ್ಲಿ ಮಾದರಿ ಸಂಸ್ಥೆಯಾಗಿ ಬೆಳೆಯಲಿ ಎಂದರು. ಕ್ಯಾಂಪೋ ಅಧ್ಯಕ್ಷ ಎ. ಕಿಶೋರ್ ಕುಮಾರ್ ಪಾಸ್ ಪುಸ್ತಕ ಬಿಡುಗಡೆಗೊಳಿಸಿದರು. ಮಾನಂಜೆ ವಿಎಸ್ಎಸ್ ಅಧ್ಯಕ್ಷ ಶಂಕರನಾರಾಯಣ ಯಡಿಯಾಳ ಸಾಲ ಪತ್ರ ಬಿಡುಗಡೆಗೊಳಿಸಿದರು. ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ಎ. ಕಂಪ್ಯೂಟರ್ ಹಾಗೂ ಸಂಪಿಗೇಡಿ ಸಂಜೀವ ಶೆಟ್ಟಿ ಸ್ವಸಹಾಯ ಗುಂಪು ಉದ್ಘಾಟಿಸಿದರು. ಸಿದ್ದಾಪುರ ಗ್ರಾಪಂ ಅಧ್ಯಕ್ಷೆ ಲತಾ ಶೆಟ್ಟಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಮಣಿಪಾಲ್ ಆರೋಗ್ಯಕಾರ್ಡ್ (MAC) ಪ್ರಾರಂಭಿಸಲಾಗಿದ್ದು ನೊಂದಣಿ ಪ್ರಕ್ರಿಯೆ ಆರಂಭವಾಗಿದೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ ಹೇಳಿದರು. ಅವರು ಕುಂದಾಪುರದಲ್ಲಿ ಜರುಗಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಮಣಿಪಾಲ್ ಆರೋಗ್ಯ ಕಾರ್ಡ್ 2023ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 300 / -, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 600/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 750/-. ಇದೊಂದು ಹೆಚ್ಚುವರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಕಟ್ಟಡ ಸಾಮಾಗ್ರಿ ಸಾಗಾಟದ ಲಾರಿಗಳಿಗೆ ಜಿ ಪಿ ಎಸ್ ಅಳವಡಿಕೆಗೆ ಅಕ್ಟೋಬರ್ 7 ರವೆರೆಗೆ ಕಾಲಾವಕಾಶ ನೀಡಲು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಉಡುಪಿ ಜಿಲ್ಲೆಯ ಐದು ಮಂದಿ ಶಾಸಕರು ಮತ್ತು ಪ್ರತಿಭಟನಾ ನಿರತ ಲಾರಿ ಮಾಲಕರ ಪ್ರತಿನಿಧಿಗಳ ಜೊತೆ ಗುರುವಾರ ಸಂಜೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಿತು. ಈ ಸಂಧರ್ಭದಲ್ಲಿ ಉಡುಪಿ ಜಿಲ್ಲೆಯ ಲಾರಿ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಕಳೆದ ಎರಡು ದಿನಗಳಿಂದ ಕಟ್ಟಡ ಸಾಮಗ್ರಿ ಸಾಗಾಟ ಬಂದ್ ಮೂಲಕ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾಡಳಿತ ಮತ್ತು ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಲಾರಿ ಮಾಲೀಕರ ಸಮಸ್ಯೆ, ಕಟ್ಟಡ ಸಾಮಾಗ್ರಿ ಬಂದ್ ನಿಂದ ಬಡ ಕೂಲಿ ಕಾರ್ಮಿಕರ ಹಾಗೂ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಭೆಯಲ್ಲಿ ಜಿಲ್ಲಾಧಿಕಾರಿ ಡಾಕ್ಟರ್ ಕೆ. ವಿದ್ಯಾ ಕುಮಾರಿ, ಶಾಸಕರಾದ…

Read More