Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ನೂತನ ಹಾಗೂ ನವೀಕರಣ ಅರಿವು ಶೈಕ್ಷಣಿಕ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಡಿ ಸಹಾಯಧನ / ಸಾಲ ಸೌಲಭ್ಯ ಪಡೆಯಲು ಅಲೆಮಾರಿ ಮತ್ತು ಅರೆ ಅಲೆಮಾರಿ ಹಾಗೂ ಅದರ ಉಪಜಾತಿಗಳಿಗೆ ಸೇರಿರುವ ಅರ್ಹ ಫಲಾಪೇಕ್ಷಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್‌ನಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kaad.karnataka.gov.in , ನಿಗಮದ ಕೇಂದ್ರ ಕಚೇರಿ ದೂ.ಸಂಖ್ಯೆ: 080-22374832, 22374833 ಅಥವಾ ಜಿಲ್ಲಾ ಕಚೇರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಸ್ತುವಿಗಿಂತ ಪ್ರೀತಿ ಮುಖ್ಯ ಎನ್ನುವುದರ ಜೊತೆಗೆ ವಸ್ತುಗಳಿಗೆ ನೀಡಿದ ಆಕಾರ, ಅದರ ಗುರಿ ತಲುಪುವಲ್ಲಿ ಸಹಾಯವಾಗುತ್ತದೆ ಎನ್ನುವುದನ್ನು ಶ್ರೀಕೃಷ್ಣ ಹೇಳಿದ. ಹೀಗಾಗಿ ವಿದ್ಯಾರ್ಥಿಗಳು ಶ್ರೀಕೃಷ್ಣನ ಬದುಕಿನ ತತ್ವಗಳನ್ನು ಅರ್ಥೈಸಿಕೊಳ್ಳುವ ಮೂಲಕ ಸರಿಯಾದ ಜೀವನವನ್ನು ರೂಪಿಸಿಕೊಳ್ಳಿ ಎಂದು ಉಡುಪಿಯ ಶ್ರೀಕೃಷ್ಣ ಮಠದ ದಿವಾನರಾದ ಡಾ. ಉದಯ್ ಕುಮಾರ್ ಸರಳತ್ತಾಯ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮತ್ತು ಗಣಕ ವಿಜ್ಞಾನ ವಿಭಾಗದ ಜಂಟಿಯಾಗಿ ಆಯೋಜಿಸಿದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಉಪ-ಪ್ರಾಂಶುಪಾಲರಾದ ಡಾ. ಚೇತನ್‌ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್, ಕಾರ್ಯಕ್ರಮ ಸಂಯೋಜಕರಾದ ರೇಷ್ಮಾ ಶೆಟ್ಟಿ, ರಶ್ಮಿ ಗಾವಡಿ, ಮೇಘಾ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಎಸ್.ವಿ.ಟಿ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ನಡೆದ ಜಿಲ್ಲಾ ಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ತೆಕ್ಕಟ್ಟೆಯ ವಿಶ್ವ ವಿನಾಯಕ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶಮಂತ್ ಅವರು 71 ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಈ ಸಾಧನೆಯ ಮೂಲಕ ಅವರು ಸೆಪ್ಟೆಂಬರ್ 24 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೇವಲ ಅಂಕಗಳು ಮತ್ತು ಪದವಿಗೆ ಸೀಮಿತರಾಗದೆ, ಪರಿಣಾಮಕಾರಿ ಸಂವಹನ ಕೌಶಲ್ಯ, ಬಹುಮುಖ ಪ್ರತಿಭೆ, ವಿಮರ್ಶಾತ್ಮಕ ಚಿಂತನೆ ಹಾಗೂ ವಿವಿಧ ಕ್ಷೇತ್ರಗಳ ಜನರೊಂದಿಗೆ ಉತ್ತಮ ಸಂಪರ್ಕ ಬೆಳೆಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಬೇಕು ಎಂದು ಆಳ್ವಾಸ್ ಎಂಬಿಎ ಕಾಲೇಜಿನ ಸಹಾಯಕ ಪ್ರಾಧ್ಯಪಕಿ ದಿಶಾ ಸಿ. ಶೆಟ್ಟಿ ನುಡಿದರು. ಅವರು ಆಳ್ವಾಸ್ ಕಾಲೇಜು (ಸ್ವಾಯತ್ತ), ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಭಾಗವು ಶುಕ್ರವಾರ ಆಯೋಜಿಸಿದ್ದ ಅತಿಥಿ ಉಪನ್ಯಾಸದಲ್ಲಿ ಮಾತನಾಡಿದರು. ವೈಯಕ್ತಿಕ ಬದುಕು ಹಾಗೂ ವೃತ್ತಿಜೀವನದಲ್ಲಿನ ಸಂವಹನದ ಸ್ವರೂಪದಲ್ಲಿ ವ್ಯತ್ಯಾಸವಿದೆ. ವೈಯಕ್ತಿಕ ಜೀವನದಲ್ಲಿ ವ್ಯಕ್ತಿಯು ತನ್ನ ಆಯ್ಕೆಯಂತೆ ಮಾತನಾಡಬಹುದು. ಆದರೆ ವೃತ್ತಿಜೀವನದಲ್ಲಿ ಸಾಂಸ್ಕೃತಿಕ ಭಿನ್ನತೆ, ಭಾಷಾ ವೈವಿಧ್ಯ ಹಾಗೂ ವಿಭಿನ್ನ ಹಿನ್ನೆಲೆಯ ಜನರೊಂದಿಗೆ ಪರಿಣಾಮಕಾರಿಯಾಗಿ ಸಂವಹನ ನಡೆಸುವ ಸಾಮರ್ಥ್ಯ ಮಹತ್ವದ ಪಾತ್ರ ವಹಿಸುತ್ತದೆ. ವಿಭಿನ್ನ ಹಿನ್ನೆಲೆಯ ಜನರೊಂದಿಗೆ ಮುಕ್ತವಾಗಿ ಮಾತನಾಡುವ ಮತ್ತು ಉತ್ತಮ ಸಂಬಂಧ ಬೆಳೆಸಿಕೊಳ್ಳುವ ಸಾಮರ್ಥ್ಯವು ವಿದ್ಯಾರ್ಥಿಗಳ ಮುಂದಿನ ಬದುಕಿನಲ್ಲಿ ಹಲವು ಹೊಸ ಅವಕಾಶಗಳಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ಇವರ ಜಂಟಿ ಆಶ್ರಯದಲ್ಲಿ ವಿಶ್ವಕರ್ಮ ಯಜ್ಞ ಮಹೋತ್ಸವದ ಪ್ರಯುಕ್ತ ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನ ಚೇಂಪಿ ಇಲ್ಲಿ ಗುರುವಾರ ಜರಗಿತು. ಸಭೆಯಲ್ಲಿ ಅಂತರಾಷ್ಟ್ರೀಯ ಅಂದ ಕ್ರಿಕೆಟ್ ಕ್ರೀಡಾಪಟು ಕಾವ್ಯ ವಿ ಆಚಾರ್ ರಿಪ್ಪನ್ ಪೇಟೆ ಅವರನ್ನು ಸನ್ಮಾನಿಸಲಾಯಿತು. ಸಮಾಜ ಸೇವಕ ಕೃಷ್ಣಯ್ಯ ಆಚಾರ್ ಬನ್ನಾಡಿ ಇವರನ್ನು ವಿಶೇಷವಾಗಿ ಗೌರವಿಸಲಾಯಿತು. ಇದೇ ವೇಳೆ ಉತ್ಸವದ ಅಂಗವಾಗಿ ಏರ್ಪಡಿಸಿದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದರಿಗೆ ಬಹುಮಾನ ವಿತರಣೆ. ಹಿರಿಯ ನಾಗರಿಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ, ಗೋಪಾಲಕೃಷ್ಣ ಆಚಾರ್ಯ ದತ್ತಿನಿಧಿ ವಿತರಣೆ ಜರಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘದ ಅಧ್ಯಕ್ಷರ ಮಣೂರು  ಸುಬ್ರಾಯ ಆಚಾರ್ಯ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವೈದ್ಯರಾದ ಡಾ. ಅಶೋಕ್ ಆಚಾರ್ಯ , ಅಧ್ಯಾಪಕಿ ಶಕುಂತಲಾ ಗಂಗಾಧರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿ (ದ) ವತಿಯಿಂದ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ನೂತನ ಹಾಗೂ ನವೀಕರಣ ಅರಿವು ಶೈಕ್ಷಣಿಕ ಸಾಲ ಯೋಜನೆ, ಆಧುನಿಕ ಲ್ಯಾಂಡ್ರಿ (ಪ್ರಸ್ತುತ ಸಾಲಿನ ಹೊಸ ಯೋಜನೆ), ಸ್ವಾವಲಂಬಿ ಸಾರಥಿ ಯೋಜನೆ ಮತ್ತು ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಡಿ ಸಾಲ – ಸಹಾಯಧನ ಸೌಲಭ್ಯ ಪಡೆಯಲು ಮಡಿವಾಳ ಹಾಗೂ ಇದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್‌ನಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kmmd.karnataka.gov.in/en , ನಿಗಮದ ಕೇಂದ್ರ ಕಚೇರಿ ದೂ.ಸಂಖ್ಯೆ: 080-22374832, 22374833 ಅಥವಾ ಜಿಲ್ಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಓಮ್ನಿಯಾನ್ ಪ್ರೀಮಿಡಿಯಾ ಪ್ರೈವೇಟ್ ಲಿಮಿಟೆಡ್, ರೀಗಲ್ ಎಂಟ್ರಿ, 3 ನೇ ಮಹಡಿ, ಕರಾವಳಿ ಬೈಪಾಸ್ ಬಳಿ, ಅಂಬಲಪಾಡಿ ಉಡುಪಿ ಇಲ್ಲಿ ಸೆಪ್ಟಂಬರ್ 21 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. 3ಡಿ / ಪೋಟೋಶಾಪ್ ಮತ್ತು ಅಕೌಂಟಿಂಗ್ ಹುದ್ದೆಗಳಿಗೆ ಪಿ.ಯು.ಸಿ, ಎಂ.ಕಾಮ್ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿ. (ದ) ವತಿಯಿಂದ ಅನುಷ್ಠಾನಗೊಳಿಸಲಾದ ಹೊಸತು ಹಾಗೂ ನವೀಕರಣ ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಾಂಗಕ್ಕೆ ಆರ್ಥಿಕ ನೆರವು (ನವೀಕರಣ) ಹಾಗೂ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆಗಳ ಸೌಲಭ್ಯ ಪಡೆಯಲು ಪ್ರವರ್ಗ -1ರ 6(ಎ) ಯಿಂದ 6 (ಎ.ಕೆ) ವರೆಗೆ ಬರುವ ಬೆಸ್ತ, ಅಂಬಿಗ/ ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಖಾರ್ವಿ, ಮೊಗವೀರ ಮತ್ತು ಇದರ ಉಪ ಜಾತಿಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://ambigaradevelopment.karnataka.gov.in ನಿಗಮದ ದೂ.ಸಂಖ್ಯೆ:…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜು) ವತಿಯಿಂದ ಭಂಡಾರ್ಕಸ್ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ 74 ಕೆ.ಜಿ ವಿಭಾಗದಲ್ಲಿ ತೆಕ್ಕಟ್ಟೆಯ ವಿಶ್ವ ವಿನಾಯಕ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶಮಂತ್ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನು ಗೆದ್ದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಗಣೇಶೋತ್ಸವ ಕಾರ್ಯಕ್ರಮದ ಮೂಲಕ ಕೋಟ ಸಾರ್ವಜನಿಕ ಗಣೇಶೋತ್ಸವ ಸಾಮಾಜಿಕ ಸೇವಾ ಕಾರ್ಯವನ್ನು ನಿಜಕ್ಕೂ ಶ್ಲಾಘನೀಯ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಗುರುವಾರ ಕೋಟದ ಅಮೃತೇಶ್ವರೀ ದೇಗುಲದ ಸಭಾಂಗಣದಲ್ಲಿ ಕೋಟದ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಗಣೇಶೋತ್ಸವ ಸಾಂಸ್ಕೃತಿಕವಾಗಿ ಜನಮಾನಸದಿ ನೆಲೆಯೂರಿ ಜಾತಿ ಮತ ಭೇದ ತೊರೆದು ಆಚರಿಸುವ ಉತ್ಸವವಾಗಿ ರೂಪುಗೊಂಡಿದೆ ಎಂದರು. ಈ ಸಂದರ್ಭದಲ್ಲಿ ಕೋಟ ಗ್ರಾಮಸಹಾಯಕ ರಾಜು ಕುಂದರ್,ನ್ಯಾಯವಾದಿ ಕರುಣಾಕರ ನಾಯ್ಕ್,ಅಟಲ್ ಜೀ ಕೇಂದ್ರದ ಗಿರೀಶ್ ಪೂಜಾರಿ ಇವರುಗಳನ್ನು ಸನ್ಮಾನಿಸಲಾಯಿತು. ಇದೇವೇಳೆ ಉತ್ಸವದಲ್ಲಿ ಹಮ್ಮಿಕೊಂಡ ಇತರ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮದಲ್ಲಿ ವಿಜೇತರಾದರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಭಾಧ್ಯಕ್ಷತೆಯನ್ನು ಸಮಿತಿಯ ಗೌರವಾಧ್ಯಕ್ಷ ಆನಂದ್ ಸಿ. ಕುಂದರ್ ವಹಿಸಿದ್ದರು. ಕಾರ್ಯಕ್ರಮವನ್ನು ಸಮಿತಿಯ ಅಧ್ಯಕ್ಷ ಜಿ.ಎಸ್. ಆನಂದ್ ದೇವಾಡಿಗ ಉದ್ಘಾಟಿಸಿ, ಸ್ವಾಗತಿಸಿದರು. ಮುಖ್ಯ ಅಭ್ಯಾಗತರಾಗಿ ಮಂದಾರ್ತಿ ದೇಗುಲದ ಅಭ್ಯಂತರ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು‌. ಸಲಹಾ ಸಮಿತಿಯ ಪ್ರಭಾಕರ್ ಅಡಿಗ ಪ್ರಾಸ್ತಾವಿಕ…

Read More