ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಗ್ರಾಮಪಂಚಾಯತ್ನ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಹಾಗೂ ಘಟಕದ ಮುಖ್ಯಸ್ಥೆ ಭವ್ಯ ಇವರೊಂದಿಗೆ ಕಸ ವಿಲೇವಾರಿ ಹಾಗೂ ವಿಂಗಡನಾ ಕ್ರಮಗಳ ಕುರಿತು ಚರ್ಚಿಸಿ ಅಲ್ಲಿನ ಸಿಬ್ಬಂದಿಗಳ ಕಾರ್ಯವೈಕರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಪಂಚಾಯತ್ ಆಡಳಿತಾಧಿಕಾರಿ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸದಸ್ಯರು, ಸಂಸದರ ಆಪ್ತ ಕಾರ್ಯದರ್ಶಿ ಹರೀಷ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹರ್ತಟ್ಟು ಯುವಕ ಮಂಡಲ ಕೋಟ 6ನೇ ವರ್ಷದ ಕಾರ್ಯಕ್ರಮದ ಅಂಗವಾಗಿ ಕೋಟ ಸಿ.ಎ. ಬ್ಯಾಂಕ್ ಹಿಂಭಾಗ ಪ್ರದೇಶದಲ್ಲಿ ಬುಧವಾರ ವೇ.ಮೂ ಜನಾರ್ದನ ಅಡಿಗ ಸಾಲಿಗ್ರಾಮ ಮತ್ತು ಮಿಥುನ್ ಅಡಿಗ ಅವರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ಲಕ್ಷ್ಮೀ ನಾರಾಯಣ ಹೃದಯ ಹೋಮ ಸತ್ಯನಾರಾಯಣ ಕಥಾಶ್ರವಣ ಸಂಪನ್ನಗೊಂಡಿತು. ಈ ಹಿನ್ನಲ್ಲೆಯಲ್ಲಿ ಸಾವಿರಾರು ಜನ ಅನ್ನಸಂತರ್ಪಣೆಯಲ್ಲಿ ಭಾಗಿಯಾದರಲ್ಲದೆ ರಾತ್ರಿ ನಡೆದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಗಾನ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಶ್ರೀ ಕ್ಷೇತ್ರ ಪಾವಂಜೆ ಮೇಳದವರಿಂದ ಅದ್ಧೂರಿಯ ಯಕ್ಷಗಾನ ಬಪ್ಪನಾಡು ಕ್ಷೇತ್ರ ಮಹಾತ್ಮ ಯಕ್ಷಗಾನ ಪ್ರದರ್ಶನವನ್ನು ಕಣ್ತುಂಬಿಕೊಂಡರು. ಅಪರಾಹ್ನ ರಾಮಾಮೃತ ಭಗವತ್ ಭಜನಾ ಮಂಡಳಿ ಕೋಟ ರಾಮ ಸಂಕೀರ್ತನೆ, ರಾತ್ರಿ ಪಟ್ಲ ಫೌಂಡೇಶನ್ ಪ್ರವರ್ತಕ ಪಟ್ಲ ಸತೀಶ್ ಶೆಟ್ಟಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಮಹೇಂದ್ರ ಪೂಜಾರಿ, ಪ್ರಮುಖರಾದ ಕೀರ್ತಿಶ ಪೂಜಾರಿ, ತಿಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಫೆಬ್ರವರಿ 28, 2026ರ ಮಧ್ಯಾಹ್ನದಿಂದ ಅಮೆರಿಕ ಹಾಗೂ ಇಸ್ರೇಲ್ ದೇಶಗಳು ಇರಾನ್ ದೇಶದ ಮೇಲೆ ಯುದ್ಧ ಪ್ರಾರಂಭಿಸಿದ ಪರಿಣಾಮವಾಗಿ ಇರಾನ್ ದೇಶವು ಕೊಲ್ಲಿದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ಪ್ರತಿ ದಾಳಿ ನಡೆಸುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಇಲ್ಲಿ ನೆಲೆಸಿರುವ ಭಾರತೀಯರಲ್ಲಿ, ಕನ್ನಡಿಗರಾಗಲಿ ಹಾಗೂ ಅವರ ಕುಟುಂಬದ ಸದಸ್ಯರು ಭಾರತದಲ್ಲಿರುವ ಸಂಬಂಧಿಕರು ಸ್ನೇಹಿತರು ಯಾವುದೇ ರೀತಿಯ ಆತಂಕಕ್ಕೊಳಗಾಗದೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ಪರಿಸ್ಥಿತಿಯು ಸಾಮಾನ್ಯ ರೀತಿ ಬರುವವರೆಗೆ ತಾಳ್ಮೆಯಿಂದ ಇರಲು ಕೋರಲಾಗುತ್ತಿದೆ ಎಂದು ಕತಾರ್ನ ಐ.ಸಿ.ಬಿ.ಎಫ್. ಮಾಜಿ ಜಂಟಿ ಕಾರ್ಯದರ್ಶಿ, ಭಾರತೀಯ ಸ್ಪೋರ್ಟ್ಸ್ ಸೆಂಟರ್ ಸಲಹಾ ಸಮಿತಿ ಸದಸ್ಯ ಸುಬ್ರಹ್ಮಣ್ಯ ಹೆಬ್ಬಾಗಿಲು ತಿಳಿಸಿದ್ದಾರೆ. ಕತಾರಿನ ದೋಹಾದಲ್ಲಿರುವ ಜನಸಾಮಾನ್ಯರಿಗೆ, ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ಕತಾರ್ ದೇಶದ ಆಂತರಿಕ ಮಂತ್ರಾಲಯಗಳು ಸೂಚನೆಗಳನ್ನು ನೀಡುತ್ತಿವೆ. 01ಮಾರ್ಚ್ 2026ರಿಂದ ವೈದ್ಯಕೀಯ ಹಾಗೂ ನಾಗರೀಕ ಸರಬರಾಜು ಸೇವೆಗಳನ್ನು ಹೊರತುಪಡಿಸಿ ಇನ್ನು ಯಾವುದೇ ಮತ್ತಿತರ ಸಂಸ್ಥೆಗಳು ಹಾಗೂ ಶಾಲೆಗಳು ಮುಖಾಮುಖಿ ಚಟುವಟಿಕೆಗಳನ್ನು ನಡೆಸುತ್ತಿಲ್ಲ. ಕರೋನ ಮಹಾಮಾರಿಯು ತಾಂಡವವಾಡುತ್ತಿದ್ದ ಕಾಲಾದಂತೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಘಟಕ ಸಂಯುಕ್ತ ಆಶ್ರಯದಲ್ಲಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಶ್ರೀ ಸಾಯಿ ಮ್ಯಾನ್ ಪವರ್ ಸಪೊರ್ಟ್ ಸರ್ವಿಸಸ್ ಇದರ ಹೆಚ್. ಆರ್. ಆದ ಗುರುಮೂರ್ತಿ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನಕ್ಕೆ ಹೆಚ್ಚಿನ ಉದ್ಯೋಗ ಅವಕಾಶಗಳಿದ್ದು ಅದಕ್ಕೆ ಪೂರಕವಾದ ವೃತ್ತಿ ಕೌಶಲ್ಯಗಳನ್ನು ಬೆಳೆಸಿಕೊಂಡು ತಮ್ಮ ವೃತ್ತಿ ಬದುಕುಗಳನ್ನು ರೂಪಿಸಿಕೊಳ್ಳಬೇಕೆಂದು ಎಂದರು. ಕಾರ್ಯಕ್ರಮದಲ್ಲಿ ವಾಣಿಜ್ಯ ಘಟಕದ ಮುಖ್ಯಸ್ಥರಾದ ಡಾ. ರವಿಚಂದ್ರ, ಸಂದೀಪ ಕೆ. ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ಉಪನ್ಯಾಸಕ ಡಾ. ವಿಶ್ವನಾಥ ಆಚಾರ್ಯ ಕಾರ್ಯಕ್ರಮ ಸಂಯೋಜಿಸಿದರು. ಕಾಲೇಜಿನ ವಿದ್ಯಾಥಿಗಳು ವಿವಿಧ ಕಂಪನಿಗಳಾದ ಮದರಸನ್, ಟಯೋಟ, ಟಾಟಾ ಇಲೆಕ್ಟ್ರಾನಿಕ್ಸ್, ಪಾಕ್ಸ್ಕಾನ್ ಮೊದಲಾದ ಕಂಪನಿಗಳಲ್ಲಿ ಉದ್ಯೋಗ ಪ್ರಸ್ತಾಪ ಪತ್ರವನ್ನು ಪಡೆದಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅರಾಟೆ ಸೇತುವೆ ಬಳಿ, ಸೌಪರ್ಣಿಕಾ ನದಿಯಲ್ಲಿ ಮಳಿ ಚಿಪ್ಪು ಹೆಕ್ಕತ್ತಿದ್ದ ಯುವಕನೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ತಕ್ತಿ ಹಂಗಳೂರಿನ ಚಂದ್ರ (39) ಎಂದು ಗುರುತಿಸಲಾಗಿದೆ. ಚಂದ್ರ ಹಾಗೂ ಅವರ ಭಾವ ಅಜಿತ್ ಅವರು ಅರಾಟೆ ಸೇತುವೆ ಬಳಿ ಮಳಿ ಹೆಕ್ಕಲು ಹೋಗಿದ್ದರು. ನೀರಿಗೆ ಇಳಿದ ಸ್ವಲ್ಪ ಸಮಯದ ನಂತರ ಚಂದ್ರ ಅವರು ಕಾಣದೇ ಇದ್ದು, ಹುಡುಕಾಟ ನಡೆಸಲಾಗಿದೆ. ಮರುದಿನ ಬೆಳಗ್ಗೆ ಆರಾಟೆ ಸೇತುವೆ ಬಳಿಯ ನದಿಯಲ್ಲಿ ಚಂದ್ರ ಅವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಹಿಳೆ ಇಂದು ಸರ್ವಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದಾಳೆ ಅಲ್ಲದೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ತ್ರೀ ಮಾನ್ಯತೆಯ ಸಮಾಜದ ಕೊಡುಗೆ ಅನನ್ಯ ಎಂದು ಉಪನ್ಯಾಸಕಿ, ಸಾಹಿತಿ ಪಾರ್ವತಿ ಐತಾಳ್ ಹೇಳಿದರು. ಅವರು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಸಭಾಂಗಣದಲ್ಲಿ ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇವರ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಿಳೆ ಮನೆಯ ಗಂಭೀರ ವಾತಾವರಣದಲ್ಲೂ ಹೊರ ಸಮಾಜದೊಂದಿಗೆ ಗುರುತಿಸಿಕೊಂಡಿದ್ದಾಳೆ. ಎಷ್ಟೆ ಸಂಕಷ್ಟದ ಸಮಯದಲ್ಲೂ ತಾನೇ ಹೊರೆ ಹೊತ್ತು ಸಂಸಾರವನ್ನು ಮುನ್ನೆಡೆಸುತ್ತಿದ್ದಾಳೆ. ಅಂತಹ ಮಹಿಳೆ ಸಮಾಜಕಟ್ಟುವ ಕಾಯಕಕ್ಕೂ ಸೈ ಎಸಿಕೊಂಡಿದ್ದಾಳೆ ಎಂದರು. ಈ ವೇಳೆ ಸಾಧಕ ಮಹಿಳೆ ಕೆ.ಎಂ.ಎಫ್ ಮಾಜಿ ನಿರ್ದೇಶಕಿ ಜಾನಕಿ ಹಂದೆ ಅವರನ್ನು ಗುರುತಿಸಿ ಗೌರವಿಸಲಾಯಿತು. ವಿಶೇಷವಾಗಿ ಮಹಾಲಿಂಗೇಶ್ವರ ವಿಪ್ರ ಮಹಿಳಾ ಭಜನಾ ಸಂಘವನ್ನು ಸನ್ಮಾನಿಸಲಾಯಿತು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಡಾ. ಕೆ.ಎಸ್. ಕಾರಂತ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಸಭೆಯ ಅಧ್ಯಕ್ಷತೆ ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಅಧ್ಯಕ್ಷೆ ವನಿತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೈಲಿನ ಬಾಗಿಲ ಬಳಿ ನಿಂತು ಮೊಬೈಲ್ನಲ್ಲಿ ಮಾತನಾಡುತ್ತಿರುವಾಗ ಆಕಸ್ಮಿಕವಾಗಿ ಆಯ ತಪ್ಪಿ ಬಿದ್ದು ಯುವಕ ಮೃತಪಟ್ಟ ಘಟನೆ ತಾಲೂಕಿನ ಕಿರಿಮಂಜೇಶ್ವರದಲ್ಲಿ ಸಂಭವಿಸಿದೆ. ಕೊಲ್ಲಮ್ ಜಿಲ್ಲೆಯ ನಿವಾಸಿ ಸೇಪು ರಹೇಮಾನ್ (33) ಮೃತರು. ಅವರು ಸಂಬಂಧಿಕರೊಂದಿಗೆ ಗೋವಾ ಮಡಗಾಂವ್ನಿಂದ ತ್ರಿವೆಂಡ್ರಮ್ ನಾರ್ತ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲಿನಲ್ಲಿ ಹೊರಟಿದ್ದು, ಮೊಬೈಲ್ ನಲ್ಲಿ ಮಾತಾಡಿಕೊಂಡು ಸೀಟಿನಿಂದ ಹೊರಗಡೆ ಬಂದು ಬಾಗಿಲ ಸಮೀಪ ಮಾತಾಡಿಕೊಂಡಿದ್ದಾಗ ಬೈಂದೂರು ಕಿರಿಮಂಜೇಶ್ವರದ ಹೈಸ್ಕೂಲ್ ಹತ್ತಿರ ಚಲಿಸುತ್ತಿದ್ದ ರೈಲಿನಿಂದ ಆಯ ತಪ್ಪಿ ಕೆಳಗೆ ಟ್ರಾಕ್ ಗೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಲ್ಲುಕೋರೆ ಹೊಂಡಕ್ಕೆ ಬಿದ್ದು ಯುವಕ ಮೃತಪಟ್ಟ ಘಟನೆ ಗುರುವಾರ ಸಾಹೇಬ್ರಕಟ್ಟೆ ಸಮೀಪ ಗರಿಕೇಮಠದಲ್ಲಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ತಮಿಳುನಾಡು ಮೂಲದ ಅರುಣ್ (30) ಎಂದು ಗುರುತಿಸಲಾಗಿದೆ ಅವರು ಯಡ್ತಾಡಿ ಗ್ರಾಮದ ಗರಿಕೆಮಠದಲ್ಲಿ ಬಶಿರ್ ಮತ್ತು ಶರತ್ ಶೆಟ್ಟಿ ಅವರು ನಡೆಸುವ ಶಿಲೆಗಲ್ಲು ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಸಂಬಂಧಿಯೋರ್ವರನ್ನು ನೋಡಲು ಬಂದಿದ್ದರು. ಆಗ ನೀರಿನಲ್ಲಿ ಸ್ನಾನ ಮಾಡುತ್ತಿದ್ದಾಗ ಮುಳುಗಿ ಮೃತಪಟ್ಟಿರುತ್ತಾರೆ. ಕಲ್ಲುಕೋರೆ ತುಂಬಾ ಆಳವಿದ್ದ ಕಾರಣ ಶವವನ್ನು ಈಶ್ವರ ಮಲೈ ಅವರನ್ನು ಕರೆಸಲಾಯಿತು. ಅವರು ಶವವನ್ನು ಮೇಲೆತ್ತಿದರು. ಬ್ರಹ್ಮಾವರ ಪೊಲೀಸ್ ಠಾಣೆ ಉಪನಿರೀಕ್ಷಕ ಅಶೋಕ್ ಮಲಬಾಗಿಲು ಹಾಗೂ ತಂಡದವರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಮೃತರ ಸಂಬಂಧಿ ತಂಗವೇಲು ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಕುವೆಂಪು ಸಭಾಂಗಣದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ ‘ಭಾಷಾ ವೈವಿಧ್ಯತೆ ಮತ್ತು ದಕ್ಷಿಣ ಭಾರತದ ಅಸ್ಮಿತೆ’ ಎಂಬ ಶೀರ್ಷಿಕೆಯಡಿ ನಡೆದ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವು ಭಾಷಾ ವೈವಿಧ್ಯತೆ, ನೀತಿ ಅಸಮತೋಲನ ಹಾಗೂ ದ್ರಾವಿಡ ಭಾಷೆಗಳ ಭವಿಷ್ಯದ ಕುರಿತ ಪ್ರಮುಖ ಚರ್ಚೆಗಳಿಗೆ ವೇದಿಕೆಯಾಯಿತು. ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಹಂಪಿ ಕನ್ನಡ ವಿವಿಯ ಕುಲಪತಿಗಳಾದ ಡಾ ಡಿ. ವಿ. ಪರಮಶಿವಮೂರ್ತಿ, ಭಾಷೆ ಭಾವನಾತ್ಮಕ ಹಾಗೂ ಸಾಂಸ್ಕೃತಿಕ ಬಂಧಗಳನ್ನು ಬೆಸೆಯುವ ಪ್ರಮುಖ ಸಾಧನವಾಗಿದ್ದು, ಅದು ಎಲ್ಲರನ್ನು ಒಗ್ಗೂಡಿಸುವ ಕೆಲಸ ಮಾಡಬೇಕು. ಭಾಷೆಗಳು ಒಗ್ಗೂಡಿಸುವ ಬದಲು ಹಲವಾರು ಸಂದರ್ಭಗಳಲ್ಲಿ ಸಂಘರ್ಷಗಳಿಗೆ ಕಾರಣವಾಗುತ್ತಿರುವುದರ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿ, “ಭಾಷಾ ವೈವಿಧ್ಯತೆಯನ್ನು ಹೆಮ್ಮೆಯಿಂದ ಸ್ವೀಕರಿಸಬೇಕು; ಇರ್ಷ್ಯೆಯಿಂದಲ್ಲ,” ಎಂದು ಅಭಿಪ್ರಾಯಪಟ್ಟರು. ಭಾಷೆಯು ಜ್ಞಾನ ಮತ್ತು ಅರಿವಿನ ವಿಸ್ತರಣೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರಂಜಾನ್ ಮಾಸ ಪವಿತ್ರವಾದ ಮಾಸದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪಸರಿಸಿಕೊಂಡಿದೆ ಎಂದು ಹೂಡೆ ಐಡಿಯಲ್ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಇದ್ರಿಸ್ ಹೂಡೆ ಹೇಳಿದರು. ಅವರು ಶುಕ್ರವಾರ ರಂಜಾನ್ ಹಬ್ಬದ ಪ್ರಯುಕ್ತ ಕೋಟ ಜಾಮಿಯಾ ಮಸ್ಜಿದ್ ಇಲ್ಲಿ ರಮದಾನ್ ಈದ್ ಸಂದೇಶ 2026 ಅರ್ಹರಿಗೆ ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಸಹಾಯಧನ ಚೆಕ್ ವಿತರಿಸಿ ಮಾತನಾಡಿದರು. ಕುರಾನ್ ಉದ್ದೇಶ ಜಗತ್ತದಲ್ಲಿ ಸೌಹಾರ್ದತೆ, ಶಾಂತಿ, ನೆಮ್ಮದಿಯ ವಾತಾವರಣದ ಜೊತೆಗೆ ಬೆರೆತು ಜೀವಿಸುವುದಾಗಿದೆ, ಈ ದಿಸೆಯಲ್ಲಿ ರಂಜಾನ್ ಮಾಸದ ಉಪವಾಸ ಅರ್ಥಪೂರ್ಣ ಭಕ್ತಿಯೊಂದಿಗೆ ಸಾಮರಸ್ಯದ ಬದುಕಿಗೆ ಮುನ್ನುಡಿ ಬರೆದಿದೆ ಇದಕ್ಕೆ ಕೋಟದ ಈ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದರು. ಇದೇ ವೇಳೆ ಆಯ್ದ ಹಿಂದೂ ಅಶಕ್ತ,ಅನಾರೋಗ್ಯ ಪೀಡಿತರಿಗೆ ನೆರವನ್ನು ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಕೋಟತಟ್ಟುವಿನ ಎಂಟು ಕೊರಗ ಕುಟುಂಬಗಳಿಗೆ ಚೇರ್ ಅನ್ನು ಹಸ್ತಾಂತರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕೋಟ ಜಾಮಿಯಾ ಮಸ್ಜಿದ್ ಅಧ್ಯಕ್ಷ ಪ್ಲೆಸೆಂಟ್ ಇಬ್ರಾಹಿಂ ಸಾಹೇಬ್ ಕೋಟ ವಹಿಸಿ ಸ್ವಾಗತಿಸಿ,ಪ್ರಾಸ್ತಾವಿಕ ನುಡಿಗಳನ್ನಾಡಿದರು.…
