ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎನ್.ಎಂ.ಎ.ಎಂ.ಐ.ಟಿ. ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ಮುಂಬರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಪ್ರಥಮ ವರ್ಷದ ಮೊದಲ ಬ್ಯಾಚ್ ವಿದ್ಯಾರ್ಥಿಗಳಿಗೆ ಒರಿಯಂಟೇಶನ್ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಕೋಡ್ ಜಿಂಗ್ ಇದರ ಸಿಇಓ ಆಗಿರುವ ಶ್ರೀನಿವಾಸ ಪ್ರಭು ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅವರು ತಮ್ಮ ಆರಂಭಿಕ ಶೈಕ್ಷಣಿಕ ಜೀವನದಲ್ಲಿ ತಾವು ಎದುರಿಸಿದ ಸವಾಲುಗಳ ಬಗ್ಗೆ ವಿವರಿಸುತ್ತ, ನಿರಂತರ ಪ್ರಯತ್ನ, ಸ್ವಯಂ ಶಿಸ್ತು ಮತ್ತು ತಮ್ಮ ಇಚ್ಛಾಶಕ್ತಿಯಿಂದ ಅವರು ಕ್ರಮೇಣ ಈ ಅಡೆತಡೆಗಳನ್ನು ನಿವಾರಿಸಿಕೊಂಡರು ಎಂಬುದಾಗಿ ಹೇಳಿದರು. ಕಠಿಣ ಪರಿಶ್ರಮ ಮತ್ತು ದೃಢ ಸಂಕಲ್ಪದಿಂದ ಮಿತಿಗಳನ್ನು ಸಾಮರ್ಥ್ಯಗಳಾಗಿ ಪರಿವರ್ತಿಸಬಹುದು ಎಂಬುದನ್ನು ಸಭಿಕರ ಮನಮುಟ್ಟುವಂತೆ ಹೇಳಿದರು. ಉಪ ಪ್ರಾಂಶುಪಾಲರಾದ ಡಾ. ಮೆಲ್ವಿನ್ ಡಿಸೋಜ ಅವರು ವಿದ್ಯಾರ್ಥಿಯ ಶೈಕ್ಷಣಿಕ ಪಯಣದಲ್ಲಿ, ಕಾಲೇಜು ಸೇರಿದ ನಂತರವೂ ಪೋಷಕರು ವಹಿಸುವ ನಿರ್ಣಾಯಕ ಪಾತ್ರವನ್ನು ಒತ್ತಿ ಹೇಳಿದರು. ವಿವಿಧ ವಿಭಾಗದ ಡೀನ್ ಅವರು ಮಾತನಾಡಿ, ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳು , ಪ್ಲೇಸ್ಮೆಂಟ್ ವಿಭಾಗದ ತರಭೇತಿ ಇನ್ನಿತರ ವಿಷಯಗಳ ಬಗ್ಗೆ ವಿವರಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬ್ರಹ್ಮಾವರದ ಎಸ್ಎಮ್ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್ಕಂಟ್ರಿ ಚಾಂಪಿಯನ್ಶಿಫ್ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಪುರುಷರ ವಿಭಾಗದಲ್ಲಿ ಮೊದಲ 5 ಸ್ಥಾನಗಳನ್ನು ಆಳ್ವಾಸ್ ಕಾಲೇಜಿನ ಓಟಗಾರರು ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನ ಮೋಹಿತ್ (ಪ್ರಥಮ), ಆದೇಶ್ ಕುಮಾರ್ (ದ್ವಿತೀಯ), ಶುಭಂ(ತೃತೀಯ), ರೋಹಿತ್(4ನೇ ಸ್ಥಾನ), ಹರೇಂದ್ರ(5ನೇ ಸ್ಥಾನ) ಪಡೆದು ಸತತ 21ನೇ ವರ್ಷ ಕುರುಂಜಿ ವಿಶ್ವನಾಥ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡರು. ಮಹಿಳೆಯರ ವಿಭಾಗದಲ್ಲಿ ಮೊದಲ 6 ಸ್ಥಾನಗಳನ್ನು ಆಳ್ವಾಸ್ ಕಾಲೇಜು ಓಟಗಾರರು ಪಡೆದುಕೊಂಡರು. ಆಳ್ವಾಸ್ನ ತಮಿಶಿ (ಪ್ರಥಮ), ನಿರ್ಮಲಾ(ದ್ವಿತೀಯ), ಭಾಗೀರಥಿ(ತೃತೀಯ), ಯಶಿ(4ನೇ ಸ್ಥಾನ), ಜ್ಯೋತಿ (5ನೇ ಸ್ಥಾನ), ಮನೀಷಾ(6ನೇ ಸ್ಥಾನ) ಪಡೆದು ಸತತ 21ನೇ ವರ್ಷ ಕೈಕುರೆ ಶ್ರೀ ರಾಮಣ್ಣ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ಗಂಟಿಹೊಳೆ ನಿವಾಸಿ ಕೃಷ್ಣ ಶೆಟ್ಟಿ (42) ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತಲೆಗೆ ಏಟು ತಗುಲಿತ್ತು. ಸೋಮವಾರ ಬೆಳಗ್ಗೆ ನೋವು ಕಾಣಿಸಿದ್ದು, ಕೂಡಲೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಪರೀಕ್ಷಿಸಿ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ ಮೇರೆಗೆ ಮರಳಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂಜೆ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪದೆಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕುಂಭಾಸಿಯ ಆನೆಗುಡ್ಡೆ ಸ್ವಾಗತಗೋಪುರ ಬಳಿ ಮಂಗಳವಾರ ರಾತ್ರಿ ಕುಂದಾಪುರದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನ್ಸುಲೇಟರ್ ಲಾರಿಯೊಂದು ಉಡುಪಿಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಬುಲೆಟ್ ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ. ಸವಾರರಾದ ಮಾರಣಕಟ್ಟೆಯ ಗಣೇಶ್ ಪೂಜಾರಿ ಮತ್ತು ಪ್ರದೀಪ್ ಗೌಡ ಎಂದು ಗುರುತಿಸಲಾಗಿದೆ. ಕುಂಭಾಸಿಯಿಂದ ಕೊರವಡಿಗೆ ವಿರುದ್ಧ ದಿಕ್ಕಿನಲ್ಲಿ ಹೋದ ಇನ್ಸುಲೇಟರ್ ಲಾರಿಯೊಂದು ಬುಲೆಟ್ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಇನ್ಸುಲೇಟರ್ನ ಕೆಳಭಾಗದಲ್ಲಿ ಬೈಕ್ ಸಿಲುಕಿ ಜಖಂಗೊಂಡಿದೆ. ಬುಲೆಟ್ನ್ನು ಸ್ಥಳೀಯರ ಸಹಕಾರದಿಂದ ಎಳೆದು ಹೊರ ತೆಗೆಯಲಾಗಿದೆ. ಇಬ್ಬರು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂದರ್ಭ ಕುಂದಾಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇವರ ನೇತೃತ್ವದಲ್ಲಿ ಆಯೋಜಿಸಿರುವ ಕುಂದಾಪುರ ತಾಲೂಕು ಮಟ್ಟದ 17ರ ವಯೋಮಾನದ ಹುಡುಗರ ಕ್ರಿಕೆಟ್ ಪಂದ್ಯಾಟದಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಅನುಜ್ ಈಶ್ವರ ಅಂಬ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈತ ಬಾಗಲಕೋಟೆಯ ಬನಹಟ್ಟಿಯ ಈಶ್ವರ ಹಾಗೂ ಅಶ್ವಿನಿ ದಂಪತಿಯ ಪುತ್ರ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ಹಾಗೂ ಸೂರ್ಯ ತರಬೇತಿ ನೀಡಿದ್ದರು. ವಿದ್ಯಾರ್ಥಿಗೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯ ಪ್ರದೀಪ್ ಕೆ. ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗರ್ಭಿಣಿಯರು ಆಹಾರ ಕ್ರಮಗಳನ್ನು ಸಮರ್ಪಕವಾಗಿ ಗುಣಮಟ್ಟದ ಆಹಾರ ಕ್ರಮಗಳನ್ನು ಅನುಸರಿಸುವಂತೆ ಕೋಟದ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ ಹೇಳಿದರು. ಅವರು ಕೋಟತಟ್ಟು ಪಡುಕರೆ ಅರಮದೇಗುಲದ ಸಮೀಪದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಕೋಟತಟ್ಟು ಗ್ರಾಮಪಂಚಾಯತ್, ಸಮುದಾಯ ಆರೋಗ್ಯ ಕೇಂದ್ರ ಕೋಟ ಇವರ ಆಶ್ರಯದಲ್ಲಿ ಕೇಂದ್ರ ಸರಕಾರದ ಪೋಷಣ್ ಅಭಿಯಾನ, ಅನ್ನಪ್ರಾಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರ ಯೋಜನೆಗಳು ಆರೋಗ್ಯವಂತ ಸಮಾಜಕ್ಕೆ ಪೂರಕ ವಾತಾವರಣ ಕಲ್ಪಿಸುತ್ತಿದ್ದು ಇದರ ಸದ್ಭಳಕೆ ಮಾಡಿಕೊಳ್ಳಲು ಕರೆ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ತಿಂಗಳಾಯ ವಹಿಸಿದ್ದರು. ಈ ಸಂದರ್ಭದಲ್ಲಿ ಒಂದು ವರ್ಷದ ಒಳಗಿನ ಪುಟಾಣಿಗಳಿಗೆ ಅನ್ನಪ್ರಾಶನ ಹಾಗೂ ಐವರು ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನೆರವೆರಿತು. ಕಾರ್ಯಕ್ರಮದಲ್ಲಿ ವಿವಿಧ ತರದ ತರಕಾರಿ ವಸ್ತುಗಳ ಪ್ರದರ್ಶನ ವಿವಿಧ ಪೌಷ್ಟಿಕಾಹಾರ ಸಾಮಾಗ್ರಗಳು ಗಮನ ಸೆಳೆದವು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು LE-5 ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಸಾಕಷ್ಟು ಮುಂಚಿತವಾಗಿ AE-5 ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆದು, ತಾಲೂಕು ಮಟ್ಟದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವ ಪರವಾನಿಗೆ ನೀಡಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆಯನ್ನು ನೀಡುವ ಬಗ್ಗೆ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸ್ಫೋಟಕ ಕಾಯಿದೆ ಮತ್ತು ನಿಯಮ 2008 ರ ಶೆಡ್ಯೂಲ್-IV ರಡಿಯಲ್ಲಿ ಜಿಲ್ಲಾ ವ್ಯಾಪ್ತಿಯ ಈಗಾಗಲೇ ಸಮಿತಿಯು ನಿಗದಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ, ಅರ್ಜಿಗಳನ್ನು ಜಿಲ್ಲಾಧಿಕಾರಿಯವರ ಕಚೇರಿಯಿಂದ ಅಥವಾ ಆನ್ಲೈನ್ LSDA Portalನಲ್ಲಿ ಪಡೆದು…
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಪುಟ್ ಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಲೆನ್ ನಿಕ್ಸೆನ್ , ಹಾಗೂ ನಿಖಿಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ತಾಲೂಕಿನ 52ನೇ ಹೇರೂರಿನಲ್ಲಿರುವ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ (RUDSET) ಯು ಯುವಕ – ಯುವತಿಯರಿಗಾಗಿ 45 ದಿನಗಳ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿ ಹಮ್ಮಿಕೊಂಡಿದೆ. ತರಬೇತಿಯಲ್ಲಿ ಎಮ್.ಎಸ್.ಆಫೀಸ್, ನುಡಿ, ಬರಹ, ಪೋಟೋಶಾಪ್, ಕೋರಲ್ಡ್ರಾ, ಪೇಜ್ ಮೇಕರ್ ಜೊತೆಗೆ ಉದ್ಯಮಶೀಲತಾ ತರಬೇತಿ ನೀಡಲಾಗುತ್ತದೆ. ತರಬೇತಿ ಹಾಗೂ ಈ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಆಸಕ್ತರು ತಮ್ಮ 4 ಪಾಸ್ಪೋರ್ಟ್ ಸೈಜ್ ಪೋಟೋ, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ಬುಕ್, ಮಾಕ್ಸ್ ಕಾರ್ಡ್, ಆದಾಯ ಪ್ರಮಾಣ ಪತ್ರದೊಂದೊಗೆ ರುಡ್ ಸೆಟ್ ಸಂಸ್ಥೆಯನ್ನು ಸಂಪರ್ಕಿಸಬಹುದಾಗಿದೆ. ಮಾಹಿತಿಗಾಗಿ ಸಂಪರ್ಕಿಸಿ: 7022560492, 9844086383
