ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ರಾಜ್ಯೋತ್ಸವದ ಶುಭಾವಸರದಲ್ಲಿ ಕನ್ನಡ ಸಂಸ್ಕೃತಿಯ ಪ್ರಚಾರ ಹಾಗೂ ಓದುಗರಲ್ಲಿ ಪುಸ್ತಕಾಭಿರುಚಿ ಬೆಳೆಸುವ ಉದ್ದೇಶದಿಂದ ಕಾರ್ಕಳ ಹಾಗೂ ಮೂಡುಬಿದಿರೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ವಿಶೇಷ ರಿಯಾಯಿತಿಯಲ್ಲಿ ಪುಸ್ತಕ ಮಾರಾಟ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ ಸಾಹಿತ್ಯ, ಕಾದಂಬರಿ, ಪ್ರಬಂಧ, ಜೀವನ ಚರಿತ್ರೆ, ಮಕ್ಕಳ ಸಾಹಿತ್ಯ ಸೇರಿದಂತೆ ವಿವಿಧ ವಿಷಯಗಳ ನೂರಾರು ಪುಸ್ತಕಗಳು ವಿಶೇಷ ರಿಯಾಯಿತಿ ದರದಲ್ಲಿ ಲಭ್ಯವಿರಲಿವೆ. ಕನ್ನಡ ಸಾಹಿತ್ಯ ಕ್ಷೇತ್ರದ ಮಹನೀಯರ ಕೃತಿಗಳ ಜೊತೆಗೆ ಯುವ ಲೇಖಕರ ಹೊಸ ಕೃತಿಗಳು, ಹೊಸ ಪ್ರಕಾಶನಗಳು ಹಾಗೂ ಜನಪ್ರಿಯ ಪುಸ್ತಕಗಳು ಈ ಮೇಳದ ಆಕರ್ಷಣೆಯಾಗಿದೆ. 10% ನಿಂದ 50%ನ ವರೆಗೆ ರಿಯಾಯಿತಿ ಸಿಗಲಿದೆ. ಈ ವಿಶೇಷ ಮೇಳವು ದಿನಾಂಕ 01-11-2025 ರಿಂದ 09-11-2025 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಗ್ಗೆ ಸಮಯ 9.00ರಿಂದ ಸಂಜೆ ಸಮಯ 9.00ರ ವರೆಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ. ಎಲ್ಲಾ ಪುಸ್ತಕ ಪ್ರೇಮಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಾಶಕರು ಕೋರಿದ್ದಾರೆ. ಕನ್ನಡದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿ ನಿರ್ವಹಣಾಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ವ್ಯವಹಾರ ಯೋಜನೆ ಪ್ರಸ್ತುತಿಯನ್ನು ನಿರ್ವಹಣಾಶಾಸ್ತ್ರ ವಿಭಾಗದಿಂದ ನಡೆಸಲಾಯಿತು. ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಅನುಭವ ಮೂಡಿಸಲೆಂದು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ವಿದ್ಯಾರ್ಥಿಗಳು ಏಳು ವಿಧದ ವ್ಯವಹಾರದ ಯೋಜನೆಯನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ವಹಿಸಿದ್ದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಡುಪಿ ಅಜ್ಜರಕಾಡು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕಿ ಡಾ. ದಿವ್ಯಾ ಎಂ.ಎಸ್. ಹಾಗೂ ಕೋಟ-ಪಡುಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ರಾಮಚಂದ್ರ ಭಟ್ ಅವರು ಆಗಮಿಸಿದ್ದರು. ಕಾಲೇಜಿನ ಉಪನ್ಯಾಸಕರಾದ ಗಣೇಶ್ ಪೈ. ಎಂ., ಡಾ. ಶೇಖರ ಬಿ., ಡಾ. ಉದಯ ಶೆಟ್ಟಿ ಕೆ., ಡಾ. ಭಾಗೀರಥಿ ನಾಯ್ಕ, ಕುಮಾರ ದೊಡ್ಡಮನಿ ಹಾಗೂ ಅಮಿತಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನಿರ್ವಹಣಾಶಾಸ್ತ್ರ ವಿಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ನಾಟ್ಯಾಂಜಲಿ ಕಲಾ ನಿಕೇತನದಲ್ಲಿ ನೃತ್ಯಗುರು ವಿದುಷಿ ಕಲಾಶ್ರೀ ಪುನೀತ್ ಆಚಾರ್ಯ ಅವರು ತಮ್ಮ ನೃತ್ಯ ಶಿಷ್ಯೆಯರಿಗೆ ಗೆಜ್ಜೆಪೂಜೆ ಕಾರ್ಯಕ್ರಮವನ್ನು ಬಸ್ರೂರಿನ ಶ್ರೀ ದೇವಿ ಅಮ್ಮನವರ ದೇವಸ್ಥಾನದಲ್ಲಿ ಏರ್ಪಡಿಸಿದ್ದರು. ಗೋಧೂಳಿಯ ಸಮಯದಲ್ಲಿ ತಾಯಿಗೆ ಪೂಜೆ ನೆರವೇರಿಸಿ ವಿದ್ಯಾರ್ಥಿಗಳ ಗೆಜ್ಜೆಗೆ ದೇವಿಯ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ, ಪ್ರಸಾದದೊಂದಿಗೆ ಶಿಷ್ಯೆಯರಿಗೆ ಗೆಜ್ಜೆ ನೀಡಿ ಹರಸಿದರು ಮತ್ತು ವಿದ್ಯಾರ್ಥಿಗಳು ಗುರುಕಾಣಿಕೆ ನೀಡಿ ತಮ್ಮ ಗೌರವ ಅರ್ಪಿಸಿದರು. ಅಲ್ಲದೆ ಶ್ರೀ ದೇವಿಯ ಮುಂದೆ ತಮ್ಮ ತಮ್ಮ ಹೆಜ್ಜೆಗಳ ಪ್ರದರ್ಶನ ನೀಡಿ ಕಲಾ ಸೇವೆ ನೆರವೇರಿಸಿದರು. ಸುಮಾರು 70 ರಿಂದ 75 ನೃತ್ಯಾಸಕ್ತ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಔಪಚಾರಿಕವಾಗಿ ವಿದುಷಿ ಕಲಾಶ್ರೀ ಪುನೀತ್ ಆಚಾರ್ಯರವರ ನೃತ್ಯ ಶಿಷ್ಯೆಯರಾಗಿ ಪಾದಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕರು, ಕುಟುಂಬದವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾತೋರಾತ್ರಿ ವ್ಯಕ್ತಿಯೊಬ್ಬರ ಖಾತೆಯಿಂದ ಅನಾಮಿಕರು ಹಣ ಲಪಟಾಯಿಸಿದ ಘಟನೆ ನಡೆದಿದೆ. ತೆಕ್ಕಟ್ಟೆಯ ಭಾರತ್ ಪೆಟ್ರೋಲ್ ಬಂಕ್ ಸಮೀಪದ ರಮೇಶ್ ಮರಕಾಲ ಅವರ ಖಾತೆಯಿಂದ ಮಧ್ಯರಾತ್ರಿ 12.23ರ ಸುಮಾರಿಗೆ ಐಎಂಪಿಎಸ್ ಮೂಲಕ ಯೂನಿಯನ್ ಬ್ಯಾಂಕ್ ಖಾತೆಯಿಂದ 90 ಸಾವಿರ ರೂ. ಹಣ ಡ್ರಾ ಆಗಿದೆ. ಯಾವುದೇ ಒಟಿಪಿ ವಿನಂತಿ ಇಲ್ಲ, ಯಾವುದೇ ಅನಧಿಕೃತ ಆ್ಯಪ್ ಡೌನ್ ಲೋಡ್ ಮಾಡಿಲ್ಲ. ನಿದ್ದೆಯಲ್ಲಿದ್ದ ವೇಳೆ, ಮೊಬೈಲ್ ಉಪಯೋಗ ಕೂಡ ಮಾಡದೇ ಇದ್ದ ಸಂದರ್ಭದಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ ಹಣ ಡ್ರಾ ಆಗಿದ್ದು ಅವರು ಸೈಬರ್ ವಂಚನೆಯ ದೂರು ದಾಖಲಿಸಿದ್ದಾರೆ. ಕದ್ದ ಹಣವು ಕೋಲ್ಕತ್ತಾದ ಬ್ಯಾಂಕ್‌ಗೆ ಖಾತೆಗೆ ಜಮೆಯಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳಮುಖಿಯರನ್ನು ಸಮಾಜ ಸಮಾನತೆಯಿಂದ ಒಪ್ಪಿಕೊಂಡಾಗ ನಮ್ಮಲ್ಲಿಯೂ ಆತ್ಮವಿಶ್ವಾಸ ಬೆಳೆಯುತ್ತದೆ. ಇನ್ನೂ ಹೆಚ್ಚಿನ ಸಾಧನೆ ಮಾಡಲು ಅವಕಾಶ ದೊರೆಯುತ್ತದೆ. ತೃತೀಯ ಲಿಂಗಿಯಾದಾಗ ಕುಟುಂಬದ ಬೆಂಬಲ ಮತ್ತು ಸಹಕಾರ ಅಗತ್ಯ ಮತ್ತು ಸಮಾಜವು ಅವರನ್ನು ಸರ್ವ ಸಮನಾಗಿ ಕಾಣುವಂತಾದಾಗ ಮಾತ್ರ ತೃತೀಯ ಲಿಂಗಿಗಳ ಬದುಕು ಹಸನಾಗಲು ಸಾಧ್ಯ ಎಂದು ಉಡುಪಿ ಜಿಲ್ಲೆಯ ಮೊದಲ ಮಂಗಳ ಮುಖಿ ಶಿಕ್ಷಕಿ ಕ್ರಿಸ್ಟಿಕಾ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಲಿಂಗತ್ವ ಅಲ್ಪಸಂಖ್ಯಾತರ ಬದುಕಿನ ಒಳ-ಹೊರಗು’ ಎಂಬ ವಿಷಯದ ಕುರಿತು ಮಾತನಾಡಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ಸಿಂಚನಾ ಅತಿಥಿಗಳನ್ನು ಪರಿಚಯಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಬೇಳೂರು ಸರ್ಕಾರಿ ಶಾಲೆಗೆ ಎಜ್ಯುಕೇಶನ್ ‘ಟ್ರಸ್ಟ್ ಹೆಸರಿನಲ್ಲಿ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ದೇಣಿಗೆ ಪಡೆದು ವಂಚಿಸಿದ ಪ್ರಕರಣ ನಡೆದಿದೆ. ಎಜ್ಯುಕೇಶನ್ ‘ಟ್ರಸ್ಟ್ ಹೆಸರಿನಲ್ಲಿ ಸುಳ್ಳು ಟ್ರಸ್ಟ್ ಡೀಡುಗಳನ್ನು ನೋಂದಾಯಿಸಿಕೊಂಡು ಬೇಳೂರು ಗ್ರಾಮದ ವ್ಯಾಪ್ತಿಯ ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ದೇಣಿಗೆ ಪಡೆದು, ಪ್ರತೀ ವರ್ಷ ಆಡಿಟ್ ಮಾಡದೆ, ಗ್ರಾಮ ಪಂಚಾಯತ್ ಕಟ್ಟಡವನ್ನೇ ಟ್ರಸ್ಟಿನ ಕಚೇರಿಯೆಂದು ಟ್ರಸ್ಟ್ ಡೀಡ್ ನಲ್ಲಿ ನಮೂದಿಸಿ, ಬೇಳೂರು ಪ್ರೌಢಶಾಲೆಯ ತರಗತಿಯ ಅವಧಿಯಲ್ಲಿ ಟ್ರಸ್ಟಿನ ಸಭೆಗಳನ್ನು ನಡೆಸಿ ಸರಕಾರದ ಸುತ್ತೋಲೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ಚಾರ್ಮಕ್ಕಿ ಸಂಸ್ಥೆಯವರು ನೀಡಿದ ಬಸ್ಸನ್ನೇ ಟ್ರಸ್ಟ್ ನೀಡಿದ್ದೆಂದು ಹೇಳಿದ್ದಲ್ಲದೇ ಇಂಧನ ತುಂಬಿದ ಹಣವನ್ನೂ ನೀಡದೇ ಬಾಕಿ ಉಳಿಸಲಾಗಿದೆ. ಟ್ರಸ್ಟ್‌ನಲ್ಲಿ ಹಣಕಾಸಿನ ವಂಚನೆ ನಡೆದಿದೆ ಎಂದು ಸಭೆಯಲ್ಲಿ ಬಹಿರಂಗವಾದ ಬಳಿಕ 12 ಮಂದಿ ಮೇಲೆ ನ್ಯಾಯವಾದಿ ಅವಿನಾಶ್ ಶೆಟ್ಟಿ ಅವರು ದಾಖಲೆಗಳ ಸಮೇತ ಲಿಖಿತ ದೂರು ನೀಡಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಭಿವೃದ್ಧಿಯ ಹಾದಿಯಲ್ಲಿ ಮುಂಚೂಣಿಯಲ್ಲಿರುವ ದೇಶಗಳು ಉದ್ಯಮಶೀಲತೆ ಮತ್ತು ತಾಂತ್ರಿಕ ಶಿಕ್ಷಣಕ್ಕೆ ನೀಡಿದ ಆದ್ಯತೆಯಿಂದವೇ ಈ ಯಶಸ್ಸು ಲಭಿಸಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನುಡಿದರು. ಅವರು ಸೋಮವಾರ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ ಹಾಗೂ ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್ ಅವರ ಸಂಯುಕ್ತ ಆಶ್ರಯದಲ್ಲಿ ಮೂಡಬಿದಿರೆಯಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಉದ್ಯಮಶೀಲತೆ ಮತ್ತು ಸ್ಟೆಮ್ ಕುರಿತು ಐದು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸಮಾಜದ ಅಭಿವೃದ್ಧಿಗೆ ಯುವಕರು ವಿಮರ್ಶೆಗಿಂತ ಕ್ರಿಯೆಗೆ ಆದ್ಯತೆ ನೀಡಬೇಕು. ಸಮಾಜದ ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ಹುಡುಕಿ, ಆವಿಷ್ಕಾರಾತ್ಮಕ ಚಿಂತನೆ ಮೂಲಕ ಬದಲಾವಣೆ ತರಬೇಕು. ಸಮಸ್ಯೆಗಳನ್ನು ಪರಿಹರಿಸುವಲ್ಲಿ ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಯೇ ಪ್ರಗತಿಯ ಕೀಲಿಕೈ ಎಂದರು. ಜೀವನದಲ್ಲಿ ಯಶಸ್ವಿಯಾದ ಪ್ರತೀ ವ್ಯಕ್ತಿಗಳು, ತಮ್ಮ ಜೀವನದ ಆರಂಭದಲ್ಲಿ ಎನ್‌ಸಿಸಿ, ಎನ್‌ಎಸ್‌ಎಸ್ ಹಾಗೂ ಸ್ಕೌಟ್ಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬ್ರಹ್ಮಾವರ ತಾಲೂಕಿನ ಕೋಟ ವಲಯದ ಕೋಟತಟ್ಟು ಕಾರ್ಯಕ್ಷೇತ್ರದ ಶ್ರೀ ನಂದಿಕೇಶ್ವರ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಹೊಲಿಗೆ ತರಬೇತಿ ಕೇಂದ್ರವನ್ನು ಕೋಟವಲಯದ ಜನಜಾಗೃತಿ ಅಧ್ಯಕ್ಷ ಜಯರಾಮ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಹೊಲಿಗೆ ಕಲಿತು ಮಹಿಳೆಯರು ಹೊಲಿಯಲು ಪ್ರಾರಂಭಿಸಿದರೆ ತನ್ನ ಸಂಸಾರವನ್ನುಉತ್ತಮ ರೀತಿಯಿಂದ ನಿರ್ವಹಣೆ ಸಾಧ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ತಾಲೂಕು ಯೋಜನಾಧಿಕಾರಿಯಾದ ರಮೇಶ್ ಪಿ.ಕೆ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸರಸ್ವತಿ, ತಾಲೂಕು ಜನಜಾಗ್ರತಿ ವೇದಿಕೆ ಸದಸ್ಯರಾದ ಚಂದ್ರ ಆಚಾರ್ಯ, ಒಕ್ಕೂಟದ ಅಧ್ಯಕ್ಷೆ ಪ್ರೇಮ, ಶೌರ್ಯ ವಿಪತ್ತು ಸದಸ್ಯರಾದ ಭಾಸ್ಕರ ಆಚಾರ್ಯ ಮತ್ತು ರಮೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜ್ಞಾನವಿಕಾಸ ಸಮನ್ವಯ ಅಧಿಕಾರಿ ಪುಷ್ಪಲತಾ ನಿರೂಪಿಸಿ, ಕೋಟ ವಲಯದ ಮೇಲ್ವಿಚಾರಕರಾದ ನಾಗೇಶ್ ಎನ್. ಸ್ವಾಗತಿಸಿ, ತರಬೇತಿ ಶಿಕ್ಷಕಿ ಶೋಭಾ ಶ್ರೀಯಾನ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಆಯೋಜಿಸಿದ್ದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ ಸ್ಪರ್ಧೆಯು ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 2000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ತಲ್ಲೂರಿನ ಸದ್ವಿನ್ ಎಸ್. ಆಚಾರ್ಯ ಪ್ರಥಮ ಸ್ಥಾನ ಪಡೆದು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಈತ ಜಯಶ್ರೀ ಮತ್ತು ಸದಾನಂದ ಆಚಾರ್ಯ ಅವರ ಪುತ್ರರಾಗಿದ್ದಾರೆ. ಪ್ರಸ್ತುತ ತಲ್ಲೂರು ಜಯರಾಣಿ ಆಂಗ್ಲ ಮಾದ್ಯಮ ಶಾಲೆಯಲ್ಲಿ 4ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರಿಗೆ ಕುಂದಾಪುರ ಸೆಂಟರ್ ನ ಮಖ್ಯಸ್ಥ ಪ್ರಸನ್ನ ಕೆ. ಬಿ., ಬೋಧಕಿ ಮಹಾಲಕ್ಷ್ಮಿ ಮತ್ತು ದೀಪಾ ಅವರು ತರಬೇತಿ ನೀಡಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಆಯೋಜಿಸಿದ್ದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ ಸ್ಪರ್ಧೆಯು ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 2000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಕುಂದಾಪುರದ ಇಂಪನಾ ಆರ್. ಅವರು Z–X ಲೆವೆಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಅವರು ಐಡಿಯಲ್ ಪ್ಲೇ ಅಬಾಕಸ್ ಕುಂದಾಪುರ ಕೇಂದ್ರದ ಮುಖ್ಯಸ್ಥರಾದ ಪ್ರಸನ್ನ ಕೆ.ಬಿ. ಅವರಿಂದ ತರಬೇತಿ ಪಡೆದಿರುತ್ತಾರೆ. ಶಿಕ್ಷಕರಾದ ಮಹಾಲಕ್ಷ್ಮಿ ಮತ್ತು ದೀಪಾ ಅವರು ಮಾರ್ಗದರ್ಶನ ನೀಡಿರುತ್ತಾರೆ. ಅವರು ಕುಂದಾಪುರದ ನಿವಾಸಿಯಾಗಿದ್ದು, ದೀಪಿಕಾ ಜಿ. ಮತ್ತು ರಾಘವೇಂದ್ರ ಶೇರೆಗಾರ್ ಅವರ ಪುತ್ರಿಯಾಗಿದ್ದಾರೆ. ಪ್ರಸ್ತುತ ಅವರು ಕುಂದಾಪುರದ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
