Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವ ವಿವಿಧ ಕಾರ್ಯಕ್ರಮಗಳನ್ನು ಇಲಾಖೆಗಳ ಸಹಯೋಗದೊಂದಿಗೆ ಯಶಸ್ವಿಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಡೆಸುವ ಕುರಿತು ಚರ್ಚಿಸಲು ಆಯೋಜಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೆಪ್ಟಂಬರ್ 15 ರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನನ್ನ ಮತ ನನ್ನ ಹಕ್ಕು ಎಂಬ ಧ್ಯೇಯ ವಾಕ್ಯದಡಿ ಜಿಲ್ಲಾ ಮಟ್ಟದಲ್ಲಿ ಚಿಕತ್ರಕಲೆ, ಛಾಯಾಚಿತ್ರ, ಭಾಷಣ ಸ್ಪರ್ಧೆ, ಸೈಕಲ್ ರ್ಯಾಲಿ ಹಾಗೂ ಮೋಟಾರ್ ಬೈಕ್ ರ‍್ಯಾಲಿಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಎಲ್ಲಾ ಸ್ಪರ್ಧೆಗಳ ಯಶಸ್ಸಿಗೆ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ. 15 ರಂದು ನನ್ನ ಮತ ನನ್ನ ಹಕ್ಕು, ಗಾಂಧಿ ಭಾರತ ಹಾಗೂ ಸಂವಿಧಾನ ಪೀಠಿಕೆ ಎಂಬ ಶೀರ್ಷಿಕೆಯಡಿ ಶಿಕ್ಷಣ ಇಲಾಖೆಯ ಹಾಗೂ ವಸತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿಕೋಟ: ಕೋಟ ರೋಟರಿ ಕ್ಲಬ್ ಸಿಟಿ ಸದಸ್ಯತ್ವ ಅಭಿವೃದ್ಧಿಯಲ್ಲಿ ಜಿಲ್ಲೆಯಲ್ಲಿಯೇ ಪ್ರಥಮ ಪ್ರಶಸ್ತಿ ಪಡೆಯುವುದರೊಂದಿಗೆ ಒಟ್ಟು 12 ಜಿಲ್ಲಾ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಇತ್ತೀಚೆಗೆ ಹೋಟೆಲ್ ಕೋಸ್ಟಲ್ ಪ್ಯಾರಾಡೈಸ್ ಪಾಂಡೇಶ್ವರ ಇಲ್ಲಿ ನಡೆದ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಿಕಟಪೂರ್ವ ಜಿಲ್ಲಾ ಗವರ್ನರ್ ದೇವಾನಂದ ರೋಟರಿ ಕೋಟ ಸಿಟಿ ನಿಕಟಪೂರ್ವ ಅಧ್ಯಕ್ಷ ಅನಿಲ್ ಸುವರ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು. ಕಳೆದ ಸಾಲಿನಲ್ಲಿ ಕ್ಲಬ್ ಮಾಡಿದ ಸಮಾಜಮುಖಿ ಕಾರ್ಯಕ್ರಮಗಳನ್ನು ಪರಿಗಣಿಸಿ ಈ ಪ್ರಶಸ್ತಿಗಳನ್ನು ನೀಡಲಾಗಿದೆ. ಈ ಸಂದರ್ಭ ಜಿಲ್ಲಾ ಗವರ್ನರ್ ಪಾಲಾಕ್ಷ ಕೆ., ಅವಾರ್ಡ್ಸ ಕಮಿಟಿ ಚೇರ್‌ಮನ್ ಬಿ.ಸಿ.ಗೀತಾ, ವೈಸ್ ಚೇರ್‌ಮನ್ ಜೈ ಕಿಶನ್ ಶೆಟ್ಟಿ, ಕ್ಲಬಿನ ನಿಕಟಪೂರ್ವ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 8 ಅಂಗನವಾಡಿ ಕಾರ್ಯಕರ್ತೆ ಹಾಗೂ 35 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್‌ಲೈನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ, ನಂತರ ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ, ಮೂರನೇ ಹಂತದಲ್ಲಿ ಅರ್ಜಿದಾರರು ತಮಗೆ ಸಂಬAಧಿಸಿದ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಮೂರನೇ ಹಂತದಲ್ಲಿ ಎಲ್ಲಾ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿದ ಬಳಿಕ ಅರ್ಜಿ ಮುದ್ರಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕುಂದಾಪುರ ದೂ.ಸಂಖ್ಯೆ: 08254-230807 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರಿನಲ್ಲಿ ನಡೆದ ಜಿಲ್ಲಾಮಟ್ಟದ 14ರ ವಯೋಮಾನದ ನೆಟ್‌ಬಾಲ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿಯರ ತಂಡವು ಪ್ರಥಮ ಸ್ಥಾನ ಗಳಿಸುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೆಯೇ 14ರ ವಯೋಮಾನದ ಬಾಲಕರ ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡು ಒಟ್ಟು ಇಪ್ಪತ್ತೆರಡು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಅಜಯ್ ಶ್ರೀ 7ನೇ ತರಗತಿ, ಅಪೇಕ್ಷ 5ನೇ ತರಗತಿ, ಪ್ರಜ್ಞ 8ನೇ ತರಗತಿ, ಆರಾಧ್ಯ 8ನೇ ತರಗತಿ, ಚಾರ್ವಿ 7ನೇ ತರಗತಿ, ವೈಭವಿ 7ನೇ ತರಗತಿ, ಶರಣ್ಯ 7ನೇ ತರಗತಿ, ಆರ್ಯನ್ ಖಾರ್ವಿ 8ನೇ ತರಗತಿ, ರಜತ್ 8ನೇ ತರಗತಿ, ಅಭಿಲಾಷ್ 8ನೇ ತರಗತಿ, ಶ್ರೇಯಸ್ ಖಾರ್ವಿ 8ನೇ ತರಗತಿ, ಗಗನ್ ಖಾರ್ವಿ 8ನೇ ತರಗತಿ,ರಿತೇಶ್ 10ನೇ ತರಗತಿ, ಪ್ರವೀಶ್ 9ನೇ ತರಗತಿ, ಸಮರ್ಥ್ 10ನೇ ತರಗತಿ, ರತಿಕ್ 10ನೇ ತರಗತಿ, ವಿಶಾಂತ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ದೇಶದ ಖ್ಯಾತ ಹಿನ್ನಲೆ ಸಂಗೀತ ನಿರ್ದೇಶಕ ಇಳಯರಾಜ್ ಅವರು ದೇವರಿಗೆ ಸುಮಾರು ರೂ. 4 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟ ಸಹಿತ ಆಭರಣಗಳು ಹಾಗೂ ವೀರಭದ್ರ ದೇವರಿಗೆ ರಜತ ಕಿರೀಟ ಸಹಿತ ಖಡ್ಗವನ್ನು ಸೇವಾ ರೂಪದಲ್ಲಿ ಸಮರ್ಪಿಸಿದರು. ಅವರು ಈ ಹಿಂದೆಯೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಬೆಲೆಬಾಳುವ ವಜ್ರದ ಕಿರೀಟ ಸೇರಿದಂತೆ ಹಲವು ವಸ್ತುಗಳನ್ನು ಕೊಡುಗೆಯಾಗಿ ನೀಡಿದ್ದರು. ದೇವಳದ ಅರ್ಚಕ ಶ್ರೀಧರ ಅಡಿಗ ಅವರ ನೇತೃತ್ವದಲ್ಲಿ ಸಮರ್ಪಣೆ ಕಾರ್ಯದ ಧಾರ್ಮಿಕ ವಿವಿಧಾನ ನಡೆಯಿತು. ವಜ್ರಕಿರೀಟ ಸಹಿತ ಆಭರಣಗಳನ್ನು ಕೊಲ್ಲೂರು ದೇವಳದ ಓಲಗಮಂಟದಿಂದ ವೈಭವದ ಮೆರವಣೆಗೆಯ ಮೂಲಕ ದೇಗುಲಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭ ಇಳಯರಾಜ್ ಕುಟುಂಬದವರನ್ನು ದೇಗುಲದ ಆಡಳಿತ ಮಂಡಳಿಯ ವತಿಯಿಂದ ಗೌರವಿಸಲಾಯಿತು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಾಬು ಶೆಟ್ಟಿ, ಸದಸ್ಯರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭವಿಷ್ಯದ ಭವ್ಯ ಭಾರತವನ್ನು ಕಟ್ಟುವ ಕೆಲಸ ಇಂದಿನ ಯುವಜನತೆಯ ಮೇಲಿದೆ. ದೇಶವನ್ನು ಸುಪರ್ ಪವರ್ ಆಗಬೇಕು ಅಂದರೆ ಮೊದಲು ಇಂದಿನ ಯುವ ಜನತೆ ಆ ನಿಟ್ಟಿನಲ್ಲಿ ಕನಸು ಕಾಣಬೇಕು ಎಂದು ಉಡುಪಿ ಜಿಲ್ಲಾ ಪೋಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಕರೆ ನೀಡಿದರು. ಅವರು ಬುಧವಾರದಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜೆಸಿಐ ಸಹಯೋಗದಲ್ಲಿ ಕಾಲೇಜಿನ ಭರವಸೆ ಗುಣಮಟ್ಟ ಭರವಸೆ ಕೋಶ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯೂಥ್ ರೆಡ್ ಕ್ರಾಸ್ ಮತ್ತು ಎನ್.ಸಿ.ಸಿ ನೇವಿ ಮತ್ತು ಆರ್ಮಿ ಘಟಕಗಳು ಆಶ್ರಯದಲ್ಲಿ ನಡೆದ ಮಾದಕ ವ್ಯಸನದ ದುಷ್ಪರಿಣಾಮಗಳು, ಸೈಬರ್ ಅಪರಾಧ, ವೃತ್ತಿ ಮಾರ್ಗದರ್ಶನ ಕುರಿತ ವಿಶೇಷ ಉಪನ್ಯಾಸ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಒಂದು ಗುರಿಯನ್ನು ಇಟ್ಟುಕೊಂಡು ಆ ಗುರಿಯಲ್ಲಿ ಸಫಲತೆ ಪಡೆಯುವವರೆಗೂ ಸುತ್ತ ಪ್ರಯತ್ನ ಪಡಬೇಕು. ಯಾವುದೇ ಕಾರಣಕ್ಕೂ ಮಧ್ಯೆ ನಿಲ್ಲಿಸಬಾರದು. ನಿರಂತರವಾದ ಅಪರಿಚಿತ ಪ್ರಯತ್ನ ಮತ್ತು ಛಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಡಿ ಕನ್ಯಾಣ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ  ಪ್ರಭಾಕರ ಮೆಂಡನ್ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ನಡೆಯಿತು. ಸಭೆಯಲ್ಲಿ ಒಕ್ಕೂಟದ ವಿಸ್ತರಣಾಧಿಕಾರಿಗಳಾದ ಸರಸ್ವತಿ ಮೇಡಮ್ ಒಕ್ಕೂಟದಿಂದ ಹೈನುಗಾರಿಕೆಗೆ ಸಿಗುವ ಸೌಲಭ್ಯಗಳ ಮಾಹಿತಿಯನ್ನು ನೀಡಿದರು. ಸಂಘದ ಅಧ್ಯಕ್ಷರು ಸಂಘವು ವರದಿ ವರ್ಷದಲ್ಲಿ ಸದಸ್ಯರಿಗೆ 20%  ಡಿವಿಡೆಂಟ್ ನೀಡುವುದೆಂದು ಘೋಷಿಸಿದರು ಹಾಗೂ ಹಾಲಿನ ಪ್ರಮಾಣ ಹೆಚ್ಚಿಗೆ ಮಾಡುವ ಬಗ್ಗೆ ಹೈನುಗಾರಿಕೆ ಮಾಡಲು ಪ್ರೋತ್ಸಾಹ ಪೂರಕವಾಗುವ ಎಲ್ಲಾ ಕಾರ್ಯಕ್ರಮ ಕೈಗೊಳ್ಳಲು ಸಂಘದ ಆಡಳಿತ  ಮಂಡಳಿ ಸಿದ್ಧವಿದೆ ಎನ್ನುವ ಭರವಸೆಯನ್ನು ನೀಡಿದರು. ಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ಸುಮತಿ ನಿರ್ದೇಶಕರಾದ ಸದಾಶಿವ ಐತಾಳ್, ರಘುರಾಮ್ ಮೆಂಡನ್, ವಿಶ್ವನಾಥ ಪೂಜಾರಿ, ಲಕ್ಷ್ಮೀ ಮರಕಾಲ್ತಿ, ಕಾವೇರಿ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಉಮೇಶ ಐತಾಳ್ ಸ್ವಾಗತಿಸಿ ಹಾಗೂ ವರದಿಯನ್ನು ಮಂಡಿಸಿದರು. ಸಂಘದ ನಿರ್ದೇಶಕರಾದ ನಾಗೇಂದ್ರ ನಾವಡ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಅಸ್ಪೃಶ್ಯತೆ ಹಾಗೂ ಅಸಮಾನತೆಯ ವಿರುದ್ಧ ವಿದ್ಯೆ ಎನ್ನುವ ಅಸ್ತ್ರ ಮಾತ್ರವೇ ಸೆಟೆದು ನಿಲ್ಲಲು ಸಾಧ್ಯ ಎನ್ನುವ ಸಂದೇಶ ನೀಡಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳು ಒಂದೇ ಜಾತಿ, ಒಂದೇ ಮತ ಎನ್ನುವ ಅಚಲವಾದ ತತ್ವವನ್ನು ಪ್ರತಿಪಾದಿಸಿದ್ದರು. ಅಂದು ಸಮಾಜದಲ್ಲಿ ಬೇರೂರಿದ್ದ ಅಸಮಾನತೆಯ ವಿರುದ್ಧ ಶಾಂತಿ ಮಾರ್ಗದಲ್ಲಿ ಸಾಮಾಜಿಕ ಕ್ರಾಂತಿಯನ್ನು ಮಾಡಿದ್ದರು. ಅವರ ಚಿಂತನೆಗಳು ಶೋಷಿತ ವರ್ಗಕ್ಕೆ ಭವ್ಯ ಬೆಳಕಾಗಿ ಸಾವಿರಾರು ವರ್ಷಗಳ ಕಾಲ ಧಮನಿತ ವರ್ಗದ ರಕ್ಷಾ ಕವಚವಾಗಿರುತ್ತದೆ ಎಂದು ರತನ್ ರಮೇಶ ಪೂಜಾರಿ ಹೇಳಿದರು. ಅವರು ಗಂಗೊಳ್ಳಿ ಬಿಲ್ಲವರ ಸಮಾಜ ಸೇವಾ ಸಂಘ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಪ್ರಯುಕ್ತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಗುರು ಸಂದೇಶದ ಕಾಲ್ನಡಿಗೆ ಜಾಥಾದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ಇದರ ಅಧ್ಯಕ್ಷ ಗೋಪಾಲ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ ವಿದ್ಯಾರ್ಥಿಗಳ ಬದುಕು ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುವ ಶಿಕ್ಷಕನ ಪಾತ್ರ. ಶಿಕ್ಷಣ ಪದ್ಧತಿ ಬದಲಾದ ಈ ಕಾಲಘಟ್ಟದಲ್ಲಿ ಅತೀ ಮುಖ್ಯ. ತಂತ್ರಜ್ಞಾನಗಳು ಮಾಹಿತಿಯನ್ನಷ್ಟೇ ನೀಡುತ್ತವೆ. ಆದರೆ ಶಿಕ್ಷಕ ಸಂಸ್ಕಾರಯುತವಾದ ವಿದ್ಯೆಯನ್ನು ಕಲಿಸುವಾತ. ಈ ನಿಟ್ಟಿನಲ್ಲಿ ತಂದೆ ತಾಯಿಯನ್ನು ಗೌರವಿಸುವಂತೆ ವಿದ್ಯಾರ್ಥಿಗಳು ಗುರುಗಳನ್ನು ಗೌರವಿಸುವಂತಾಗಬೇಕು ಎಂದು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟರಮಣ ಬಿ. ನಾಯಕ್ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿಗಳಾದ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಉದಯ್ ನಾಯ್ಕ್ ಮಾತನಾಡಿ, ಶಿಕ್ಷಕರಿಗೆ ಬಹುದೊಡ್ಡ ಕೊಡುಗೆ ವಿದ್ಯಾರ್ಥಿಗಳು ಕೊಡುವ ಗೌರವ ಮತ್ತು ಸನ್ನಡತೆ ಅಂತಹ ಸನ್ನಡತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಿ ಎಂದರು. ಈ ವೇಳೆ ವೆಂಕಟರಮಣ ಬಿ. ನಾಯಕ್ ಹಾಗೂ ಉದಯ್ ನಾಯ್ಕ್ ಅವರನ್ನು ಸನ್ಮಾನಿಸಿ, ಗುರು ನಮನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಇಂದಿನ ಶಿಕ್ಷಣದಲ್ಲಿ ವೈದ್ಯಕೀಯ ಅಥವಾ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಮಾತ್ರ ಅವಕಾಶಗಳಿವೆ ಎಂಬ ತಪ್ಪು ಕಲ್ಪನೆ ಬೆಳೆಯುತ್ತಿದೆ.  ಆದರೆ ವಿದ್ಯಾರ್ಥಿಯೂ ತನ್ನ ಆಸಕ್ತಿ, ಸಾಮರ್ಥ್ಯ ಮತ್ತು ಕನಸುಗಳಿಗೆ ತಕ್ಕಂತೆ ವಿಭಿನ್ನ ವೃತ್ತಿ ಕ್ಷೇತ್ರಗಳನ್ನು ಆರಿಸಿಕೊಳ್ಳಬಹುದು ಎಂದು ಬೆಂಗಳೂರಿನ ಭಾರತೀಯ  ವಿಜ್ಞಾನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಸಕ್ಷಮ್ ಜೈನ್ ನುಡಿದರು. ಅವರು ಆಳ್ವಾಸ್ ಪದವಿಪೂರ್ವ ಕಾಲೇಜು ಆಯೋಜಿಸಿದ್ದ “ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಗಾರ” ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಲೆ, ಸಾಹಿತ್ಯ, ಸಂಗೀತ, ನೃತ್ಯ, ನಾಟಕ, ಚಿತ್ರಕಲೆ ಮುಂತಾದ ಅನೇಕ ಸೃಜನಾತ್ಮಕ ಕ್ಷೇತ್ರಗಳು ವಿದ್ಯಾರ್ಥಿಗಳಿಗೆ ದೊಡ್ಡ ಯಶಸ್ಸನ್ನು ನೀಡಬಲ್ಲವು. ವಿಜ್ಞಾನ ಮತ್ತು ಸಂಶೋಧನೆ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳನ್ನು ಮಾಡುವುದು, ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವುದು ವಿದ್ಯಾರ್ಥಿಗಳಿಗೆ ಲಭ್ಯವಿರುವ ಇನ್ನೊಂದು ದೊಡ್ಡ ಅವಕಾಶ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಆಸಕ್ತಿ ಮತ್ತು ಕನಸುಗಳಿಗೆ ತಕ್ಕಂತೆ ಶಿಕ್ಷಣದ ಅನೇಕ ದಾರಿಗಳಲ್ಲಿ ಒಂದನ್ನು ಆರಿಸಿಕೊಳ್ಳಬೇಕು ಎಂದರು. ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಾದ…

Read More