ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ & ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದರು. ಅವರು ಕೋಟ ವಿವೇಕ ಹೈಸ್ಕೂಲ್ ಆವರಣದಲ್ಲಿ, ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ ಇವರ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಹೊಳಪು-2022 ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ನಗರ ಸ್ಥಳಿಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ವ್ಯಕ್ತಿಗೆ ಎಲ್ಲಾ ರೀತಿಯ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳ ನಿವಾರಣೆ ಸೇರಿದಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಲು ಅಗತ್ಯವಿರುವ ಶಕ್ತಿಯನ್ನು ಕ್ರೀಡೆಯಲ್ಲಿ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಡೆಯಬಹುದಾಗಿದೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಸಂವಿಧಾನ ದಿನವನ್ನು ಗ್ರಾಮ ಪಂಚಾಯತ್ನಲ್ಲಿ ಶನಿವಾರ ಆಚರಿಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ೧೯೪೯ರ ನವೆಂಬರ್ ೨೬ರಂದು ಸಂವಿಧಾನವನ್ನು ಅಂಗೀಕರಿಸಲಾಗಿದ್ದು, ಪ್ರತಿವರ್ಷ ಈ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ದೇಶದ ಸಾರ್ವಭೌಮತೆ, ಜಾತ್ಯಾತೀತತೆ, ಜನತಂತ್ರಾತ್ಮಕ ಗಣರಾಜ್ಯವನ್ನಾಗಿ ರೂಪಿಸಿಸಲು ಸಹಕಾರಿಯಾಗಿದೆ ಎಂದು ಹೇಳಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ಬಿ.ಲಕ್ಷ್ಮೀಕಾಂತ ಮಡಿವಾಳ, ಬಿ.ರಾಘವೇಂದ್ರ ಪೈ, ಬೈರು ಬಸವ ಖಾರ್ವಿ, ಶಾಂತಿ ಖಾರ್ವಿ, ಸಖು ಉದಯ, ಸುಮಿತಾ ಶೇರುಗಾರ್, ಸಾವಿತ್ರಿ ಖಾರ್ವಿ, ರೇಖಾ ಖಾರ್ವಿ, ನಿರ್ಮಲಾ ಪೂಜಾರಿ, ಗ್ರಾಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಉಡುಪಿ ಮತ್ತು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ (ರಿ), ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಅವರು ಉದ್ಘಾಟಿಸಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಕೀಲರಾದ ಸಂತೋಷ ಶೆಟ್ಟಿ ಗಿಳಿಯಾರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ ನಡೆಯಿತು. ಉಡುಪಿಯ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ವಿಲ್ಫ್ರೆಡ್ ಡಿಸೋಜಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ. ಗೊಂಡ ಸ್ವಾಗತಿಸಿದರು. ಭಂಡಾರ್ಕಾರ್ಸ್ ಕಾಲೇಜಿನ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ರಕ್ಷಿತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕೈಗಾರಿಕಾ ಸಂಸ್ಥೆಯ ವೀಕ್ಷಣೆ ಹಾಗೂ ಅಧ್ಯಯನ ವಿಷಯಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಕೇಂದ್ರಗಳಿಗೆ ಭೇಟಿ ನೀಡಿದರು. ಉಡುಪಿ ಜಿಲ್ಲೆಯ ಉಪ್ಪೂರಿನ ಬಳಿ ಇರುವ ಕೆ.ಎಂ.ಎಫ್ ನಂದಿನಿ ಡೈರಿ ಸ್ಥಾವರಕ್ಕೆ ವಿದ್ಯಾರ್ಥಿಗಳು ಭೇಟಿ ಕೊಟ್ಟು ಹಾಲಿನ ಪಾಶ್ಚರೀಕರಣ ಮತ್ತು ಹಾಲನ್ನು ಪ್ಯಾಕೇಟುಗಳಲ್ಲಿ ಸಂಗ್ರಹಿಸುವ ವಿಧಾನಗಳ ಬಗ್ಗೆ ತಿಳಿದುಕೊಂಡರು. ಹಾಲಿನಿಂದ ತಯಾರಾಗುವ ವಿವಿಧ ತಿಂಡಿ – ತಿನಿಸುಗಳು, ಸಂಗ್ರಹಿಸುವ ವಿಧಾನಗಳು ಹಾಗೂ ವಿತರಣಾ ಕ್ರಮಗಳ ಬಗ್ಗೆ ಅರಿತುಕೊಂಡರು. ಆ ಬಳಿಕ ಪೆರ್ಡೂರಿನ ಬುಕ್ಕಿ ಗುಡ್ಡೆಯಲ್ಲಿರುವ ಶ್ರೀ ಗುರು ಆರ್ಯುವೇದಿಕ್ ಕೈಗಾರಿಕಾ ಕೇಂದ್ರಕ್ಕೆ ಭೇಟಿ ನೀಡಿ ವಿವಿಧ ಆರ್ಯುವೇದ ಔಷಧಗಳನ್ನು ತಯಾರಿಸುವ ವಿಧಾನ ಹಾಗೂ ಅದರ ಉಪಯೋಗಗಳ ಬಗ್ಗೆ ತಿಳಿದುಕೊಂಡರು. ಈ ಒಂದು ದಿನದ ಕೈಗಾರಿಕಾ ಸಂಸ್ಥೆಗಳಿಗೆ ಭೇಟಿ ಹಾಗೂ ವೀಕ್ಷಣೆ ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆಯ ವಿಶ್ವವಿನಾಯಕ ನ್ಯಾಷನಲ್ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ವಾರ್ಷಿಕ ಕ್ರೀಡೋತ್ಸವ ಇತ್ತಿಚಿಗೆ ಜರುಗಿತು. ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಸುದೀಪ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕ್ರೀಡೆ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರೊಂದಿಗೆ ಉತ್ತಮ ಸಾಧನೆ ಮಾಡಿದರೆ ಬದುಕನ್ನು ಕಟ್ಟಿಕೊಳ್ಳಬಹುದೆಂದು ಎಂದರು. ಸಮಾರೋಪ ಸಮಾರಂಭದಲ್ಲಿ ನಿವೃತ್ತ ದೈಹಿಕ ಶಿಕ್ಷಕರಾದ ಹೆಚ್, ಮೀರಾ ಸಾಹೇಬ್ರವರು ಮಾತನಾಡಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಇದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂದು ತಿಳಿಸಿದರು. ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ’ಆಲ್ಮೇಡಾರವರು ಮಾತನಾಡಿ ಕ್ರೀಡೆಗಳು ಶಿಸ್ತು, ಸಂಯಮ ಹಾಗೂ ಏಕಾಗ್ರತೆಯನ್ನು ಕಲಿಸುವಲ್ಲಿ ಸಹಕಾರಿಯಾಗಿದೆ ಎಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಭಾಕರ ಶೆಟ್ಟಿಯವರು ಮಕ್ಕಳ ಉತ್ಸಾಹ ಹಾಗೂ ಸ್ಪರ್ಧಾ ಮನೋಭಾವವನ್ನು ಪ್ರಶಂಸಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಡ್ರಿಲ್, ಯೋಗ, ಲೇಜಿಮ್, ಡಂಬಲ್ಸ್, ಹೂಪ್ಸ್, ಕರಾಟೆ, ಮೊದಲಾದ ಸಾಹಸ ಕ್ರೀಡೆಗಳನ್ನು ಪ್ರದರ್ಶಿಸಿದರು. ದೈಹಿಕ ಶಿಕ್ಷಕರುಗಳಾದ ಆನಂದ್ ಹಾಗೂ ಪ್ರದೀಪ್ ಕುಮಾರ್ ಶೆಟ್ಟಿಯವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ಜಂಟಿ ಆಶ್ರಯದಲ್ಲಿ ನೆತ್ತರ ನೆರವು ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಕ್ತದ ವರ್ಗೀಕರಣದ ಮಹತ್ವವನ್ನು ಮತ್ತು ರಕ್ತದ ಅನಿವಾರ್ಯತೆಯನ್ನು ವಿದ್ಯಾರ್ಥಿಗಳಿಗೆ ಹೇಳಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಯುವ ರೆಡ್ ಕ್ರಾಸ್ ಸಂಯೋಜನಾಧಿಕಾರಿಯಾದ ಶ್ರೀ ಸತ್ಯನಾರಾಯಣ್ ಪುರಾಣಿಕ್ ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯಗಳಲ್ಲಿ ಸೇವಾ ಮನೋಭಾವನೆ ಬಹುಮುಖ್ಯ ಪಾತ್ರ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಸುಭದ್ರ ಸಮಾಜPÉÌ ಆರೋಗ್ಯಯುತ ಯುವಶಕ್ತಿ ಅವಶ್ಯಕ ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಕೋಶಾಧಿಕಾರಿಯಾದ ಶಿವರಾಮ್ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿ ಚೇತನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆಯಲ್ಲಿ ಯುವ ರೆಡ್ಕ್ರಾಸ್ ಘಟಕದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಯುವ ರೆಡ್ಕ್ರಾಸ್ ಘಟಕ ಕುಂದಾಪುರ ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಯಿತು. ಕುಂದಾಪುರ ರೆಡ್ಕ್ರಾಸ್ ಘಟಕದ ಸಂಚಾಲಕರಾದ ಜಯಕರ ಶೆಟ್ಟಿಯವರು ರೆಡ್ಕ್ರಾಸ್ ಸಂಸ್ಥೆಯ ಮೂಲತತ್ವ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಸುನೀತ ವಿ ವಹಿಸಿದ್ದರು. ವೇದಿಕೆಯಲ್ಲಿ ರೆಡ್ಕ್ರಾಸ್ ಸಂಸ್ಥೆಯ ಗಣೇಶ್ ಆಚಾರ್ಯ, ಸೀತಾರಾಮ್ ಶೆಟ್ಟಿ, ಶಿವರಾಮ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ನಿತ್ಯಾನಂದ ವಿ. ಗಾಂವಕರ, ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಸುಬ್ರಮಣ್ಯ. ಎ, ರೆಡ್ಕ್ರಾಸ್ ಘಟಕದ ವಿದ್ಯಾರ್ಥಿ ಪ್ರತಿನಿಧಿಗಳಾದ ರಜತ್ ಹಾಗೂ ಸಿಂಚನಾ ಉಪಸ್ಥಿತರಿದ್ದರು. ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ಸಂಚಾಲಕರಾದ ರಾಜಣ್ಣ ಕಾರ್ಯಕ್ರಮವನ್ನು ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಲ್ಲವ ಸಮಾಜ ಸೇವಾ ಸಂಘ ರಿ. ಕೊಡೇರಿ ಇವರ ಆಶ್ರಯದಲ್ಲಿ ಕೊಡೇರಿ ಹಕ್ರೆಮಠ ಶ್ರೀ ಜೈನ ಜಟ್ಟಿಗೇಶ್ವರ ದೇವರ 76ನೇ ವರ್ಷದ ಕಂಬಳೋತ್ಸವವು ನ.21ರಂದು ಕೊಡೇರಿಯಲ್ಲಿ ವಿಜೃಂಭಣೆಯಿಂದ ನಡೆಯಿತು. ಪ್ರತಿವರ್ಷ ಸಾಂಪ್ರದಾಯಕವಾಗಿ ಜರಗುವ ಈ ಐತಿಹಾಸಿಕ ಕಂಬಳೋತ್ಸವಕ್ಕೆ ಊರ ಮತ್ತು ಅಕ್ಕಪಕ್ಕದ ಊರಿನ ಕೋಣಗಳಲ್ಲದೆ ದೂರದ ಭಟ್ಕಳದಿಂದ ಬಾರ್ಕುರು ವರೆಗಿನ ಕೋಣಗಳನ್ನು ಮಾಲಕರು ತರುವುದಲ್ಲದೆ ಈ ಕಂಬಳೋತ್ಸವದಲ್ಲಿ ಜರಗುವ ಸ್ಪರ್ಧೆಯಲ್ಲಿ ಭಾಗವಹಿಸಿ ಸಂಭ್ರಮಿಸುವುದು ವಿಶೇಷವಾಗಿದೆ ಸುಮಾರು 60ಜೋಡಿ ಕೋಣಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿದ್ದು ಕಡಿಮೆ ಅವಧಿಯಲ್ಲಿ ಗುರಿ ತಲುಪಿದ ಕೋಣಗಳು ತಮ್ಮ ಮಾಲಕರಿಗೆ ಶಾಶ್ವತ ಫಲಕಗಳೊಂದಿಗೆ ನಗದು ಬಹುಮಾನಗಳನ್ನು ತಂದು ಕೊಡುವಲ್ಲಿ ಯಶಸ್ವಿಯಾದವು. ಕೋಣಗಳು ತಮ್ಮ ಸವಾರನೊಂದಿಗೆ ನಿಗದಿತ ಗುರಿ ತಲುಪಲು ತೆಗೆದುಕೊಂಡ ಸಮಯವನ್ನು ಗುರುತಿಸಲು ಸೆನ್ಸಾರ್ ಅಳವಡಿಸಲಾಗಿದ್ದು ಆ ಮೂಲಕ ಕಡಿಮೆ ಅವಧಿಯಲ್ಲಿ ಗುರಿ ತಲುಪಿದ ಕೋಣಗಳನ್ನು ವಿಜೇತ ಕೋಣಗಳೆಂದು ಘೋಷಿಸಿ ಅವುಗಳ ಮಾಲಕರುಗಳಿಗೆ ನಗದು ಪುರಸ್ಕಾರದೊಂದಿಗೆ ಶಾಶ್ವತ ಫಲಕ ನೀಡಿ ಗೌರವಿಸಲಾಯಿತು ಭಾಗವಹಿಸಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ದುಬೈ: ಕನ್ನಡಿಗರು ದುಬೈನ ಮತ್ತು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ (KPCC) ಯ ಸಹಯೋಗದೊಂದಿಗೆ “67 ನೇ ಕರ್ನಾಟಕ ರಾಜ್ಯೋತ್ಸವ” ಹಾಗೂ ಒಂದನೇ “ವಿಶ್ವ ಕನ್ನಡ ಹಬ್ಬ”ವನ್ನು ಇಂಡಿಯನ್ ಹೈಸ್ಕೂಲ್ನ ಶೇಖ್ ರಶೀದ್, ದುಬೈ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮೈಸೂರಿನ ರಾಜವಂಶಸ್ಥರಾದ ಯದುವೀರ್ ಚಾಮರಾಜ ಒಡೆಯರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಮ್ ಅಲ್ ಕುವೈನ್ನ ರಾಜಮನೆತನದಿಂದ ಹಿಸ್ ಹೈನೆಸ್ ಶೇಖ್ ರಶೀದ್ ಬಿನ್ ಮಜಿದ್ ಅಲ್ ಮುಲ್ಲಾಮಹರ್ಷಿ ಆನಂದ ಗುರೂಜಿ, ಬಸವ ರಮಾನಂದ ಸ್ವಾಮಿ; ಸಿ ಸೋಮಶೇಖರ್, ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಅಧ್ಯಕ್ಷ ಡಾ. ಚಿತ್ರನಟ ವಿಜಯ ರಾಘವೇಂದ್ರ, ಪ್ರೇಮಾ, ಭವ್ಯ, ವಸಿಷ್ಠ ಸಿಂಹ, ಪ್ರಥಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕೆಪಿಸಿಸಿಯ ಪ್ರಮುಖ ಸಂಘಟಕರು, ಅಧ್ಯಕ್ಷರು ಶಿವಕುಮಾರ್ ನಾಗರನವಿಲೆ ನೇತೃತ್ವದಲ್ಲಿ ಕರ್ನಾಟಕದಿಂದ ಬೃಹತ್ ತಂಡವನ್ನು ಹೊಂದಿದ್ದರು ಮತ್ತು ರವಿ ಸಂತು, ಪ್ರಸಾದ್ ಶೆಟ್ಟಿ, ಸುಧಾ, ಪಲ್ಲವಿ, ಪಾರ್ಥ, ಹೇಮಲತಾ ಅವರ ತಂಡವಾಗಿತ್ತು. ದುಬೈನಿಂದ ಗಲ್ಫ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ಥೆರೆಸಾ ವಿದ್ಯಾಸಂಸ್ಥೆಯ ಏಳನೇ ತರಗತಿ ವಿದ್ಯಾರ್ಥಿ ರೋಶನ್ ಆರ್. ಜಿಲ್ಲಾ ಮಟ್ಟದ 100 ಮೀ. ಓಟದ ಸ್ವರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು, ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ. ವಿಜೇತ ವಿದ್ಯಾರ್ಥಿಗೆ ಮದರ್ ಥೆರೆಸಾ ಸಂಸ್ಥೆಯ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
