ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಮಂಡಲದ ವತಿಯಿಂದ ಹಿಂದೂ ಸಂಗಮದ ಶೋಭಯಾತ್ರೆ ಸಮಾವೇಶವು ವಿಜೃಂಬಣೆಯಿಂದ ಇತ್ತೀಚಿಗೆ ಜರಗಿತು. ಹಿಂದೂ ಮುಖಂಡರಾದ ಶಿವರಾಮ ಉಡುಪ ಸಾಲಿಗ್ರಾಮ ಶೋಭಯಾತ್ರೆಗೆ ಚಾಲನೆ ನೀಡಿದರು. ವಿವಿಧ ಭಾಗಗಳಿಂದ ಆಗಮಿಸಿದ ಮಹಿಳಾ ಭಜನಾ ತಂಡ, ಮಕ್ಕಳ ಭಜನಾ ತಂಡ, ಪುರುಷ ಹಾಗೂ ಮಹಿಳಾ ಚಂಡೆ ಬಳಗದಿಂದ ಚಂಡೆ ವಾದನ, ಹಲವಾರು ಪುಟಾಣಿಗಳು ವೇಷಭೂಶಣಗಳಿಂದ ಕೂಡಿದ ಟ್ಯಾಬ್ಲೋ, ಶಿವಾಜಿ ಮೂರ್ತಿಯನ್ನು ಹೊತ್ತು ಭಾರತಾಂಭೆಯ ಭಾವಚಿತ್ರವನ್ನು ಹೊತ್ತ ವಾಹನ ರಥಗಳು ಶೋಭಯಾತ್ರೆಯಲ್ಲಿ ಕಂಡು ಬಂದವು. ಸಾಲಿಗ್ರಾಮ ಬಸ್ಸು ನಿಲ್ದಾಣದಿಂದ ಆರಂಭಗೊಂಡ ಶೋಭಾಯಾತ್ರೆ ಶ್ರೀ ಗುರುನರಸಿಂಹ ದೇವಸ್ಥಾನದ ಬಯಲು ರಂಗಮಂದಿರವನ್ನು ತಲುಪಿತು. ಸಭಾಕಾರ್ಯಕ್ರಮಕ್ಕೆ ಸಾಲಿಗ್ರಾಮ ದೇವಸ್ಥಾನದ ಪ್ರದಾನ ಅರ್ಚಕ ಜನಾರ್ದನ ಅಡಿಗ ಅವರು ಗೋ ಪೂಜೆಯ ಮೂಲಕ ಚಾಲನೆ ನೀಡಿದರು. ಸಮಾವೇಶದ ಸಭಾಧ್ಯಕ್ಷತೆಯನ್ನು ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಅಧ್ಯಕ್ಷ ಡಾ. ಕೆ.ಎಸ್. ಕಾರಂತ್ ವಹಿಸಿದ್ದರು. ದಿಕ್ಸೂಚಿ ಭಾಷಣವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉಡುಪಿ ಜಿಲ್ಲಾ ಕಾಲೇಜು ವಿದ್ಯಾರ್ಥಿ ಪ್ರಮುಖ್ ಅಜಿತ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಲಾಡಿ, ಗ್ರಾಮ ಪಂಚಾಯತ್ ಹಾಲಾಡಿ, ಜೆಸಿಐ ಹಾಲಾಡಿ- ವಾರಾಹಿ, ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ, ಶಿರೂರು-ಮುದ್ದುಮನೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಮಂಗಳವಾರದಂದು ಹಾಲಾಡಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶೋಕ್ ಶೆಟ್ಟಿ ಚೋರಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಾಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಹೇಮಂತ್, ಶಿರೂರು ಮುದ್ದುಮನೆಯ ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞ ಡಾ. ಮನೋಜ್ ಭಟ್, ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯ ಸಂಚಾಲಕ ಯು. ಶಂಕರ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಜನಾರ್ಧನ ಹಾಲಾಡಿ, ಗುರುಪ್ರಸಾದ ಶೆಟ್ಟಿ, ಜೆಸಿಐ ಹಾಲಾಡಿ ಘಟಕದ ಅಧ್ಯಕ್ಷರಾದ ಪ್ರದೀಪ ಹಾಲಾಡಿ, ಲೇಡಿ ಜೆಸಿಐ ಅಧ್ಯಕ್ಷೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಸಂದೇಶಗಳ ಪರಿಚಯಕ್ಕಾಗಿ ’ಗೀತಾ ಸಂದೇಶ ಸಾರ’ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಗೀತಾಜ್ಞಾನ ಯಜ್ಞ ವೇದಿಕೆಯ ಪ್ರಧಾನ ಗುರುಗಳಾದ ಸುಬ್ರಾಯ ನಂದೋಡಿ, ಕಾಸರಗೋಡು ಅವರು ಆಗಮಿಸಿದ್ದರು. ಪಂಚಾಂಗಪಠನವನ್ನು ವೀಕ್ಷಾ ನಡೆಸಿದರೆ, ಕೃಪಾಲಿ ಗೀತಾಮಹಾತ್ಮ್ಯೆಯನ್ನು ಪಠಿಸಿದರೆ, ಮಯೂರ ಜ್ಞಾನಕಿರಣವನ್ನು ಪಠಿಸಿದನು. ನಂತರ ಗೀತಾ ಜ್ಞಾನ ಯಜ್ಞದ ಪ್ರಧಾನ ಗುರುಗಳಾದ ಸುಬ್ರಾಯ ನಂದೋಡಿ ಅವರು ಮಾತನಾಡಿ, ಜೀವನವನ್ನು ಬೆಳಗಿಸುವ ಗ್ರಂಥ ಭಗವದ್ಗೀತೆ. ಚಂಚಲವಾದ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಂಡು ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಶಕ್ತಿಯಾಗಬೇಕು. ಸ್ವಾತಂತ್ರ್ಯ ಪಡೆದ ಶತಮಾನೋತ್ಸವದಲ್ಲಿ ಭಾರತ ದೇಶದ ಪ್ರತಿಯೊಬ್ಬ ನಾಗರಿಕನೂ ಭಗವದ್ಗೀತೆಯ ಜ್ಞಾನವನ್ನು ಹೊಂದಿದವನಾಗಬೇಕು. ಮನೆ ಮನೆಗಳಲ್ಲೂ ನಿತ್ಯ ಭಗವದ್ಗೀತೆಯ ಅಧ್ಯಯನ ಆಗಬೇಕು ಎಂದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಮಾತನಾಡಿ, ವಿದ್ಯೆಯನ್ನು ಜೀವನದ ಬಾಲ್ಯದಲ್ಲಿ ಹೊಂದಿದರೆ ಸಾಧಿಸುವಾತಗೆ ಸಾವಿರಾರು ಅವಕಾಶಗಳು ಬಂದೊದಗುತ್ತವೆ. ತಾನು, ತನ್ನ ಮನೆ, ತನ್ನ ಊರು, ತನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿಗೆ ಖಾಲಿ ಇದ್ದ ಎರಡು ಸಮಿತಿ ಸದಸ್ಯರ ಹುದ್ದೆಗಳನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿ ಸದಸ್ಯರುಗಳಾಗಿ ಉಡುಪಿಯ ಅಜಿತ್ ಆರಾಡಿ ಹಾಗೂ ಬೈಂದೂರಿನ ಉದಯ ಶಂಕರ್ ಪಡಿಯಾರ್ ಅವರನ್ನು ಸರ್ವಾನುಮತಿಯಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಹರೀಶ್ ಕುಂದರ್, ರಾಜ್ಯ ಸಮಿತಿ ಸದಸ್ಯ ಅಸ್ಟೋ ಮೋಹನ್, ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಿನ್ನ ಖರೀದಿಸುವ ನೆಪದಲ್ಲಿ ಅಂಗಡಿಯಿಂದ ಚಿನ್ನದ ಸರ ಎಗರಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕುಂದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಂಗಡಿ ಸಿಬ್ಬಂದಿಗಳ ಕಣ್ಣು ತಪ್ಪಿಸಿ ಸುಮಾರು 09 ಗ್ರಾಮ ಮೌಲ್ಯದ 1,25,000 ರೂ ಬೆಲೆ ಬಾಳುವ ಚಿನ್ನದ ಸರವನ್ನು ಕಳವುಗೈದ ಆರೋಪಿ ರಮೇಶ (42) ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಕಳ್ಳತನ ಮಾಡಿದ ಚಿನ್ನದ ಚೈನ್ ಮತ್ತು ಆತನ ವಶದಲ್ಲಿದ್ದ ರೂಪಾಯಿ 33,000/- ಹಣವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ನಗರದ ಶಾಸ್ತ್ರೀಸರ್ಕಲ್ ಬಳಿಯ ಇರುವ ಎಸ್.ಪಿ.ಜಿ ಗೋಲ್ಡ್ & ಡೈಮಂಡ್ ಅಂಗಡಿಗೆ ಬಂದು ಚಿನ್ನವನ್ನು ತೆಗೆದುಕೊಳ್ಳುವ ನೆಪದಲ್ಲಿ ಅಂಗಡಿಯ ಕೆಲಸದವರಿಂದ ಚಿನ್ನದ ಸರವನ್ನು ನೋಡಿ ಅವರ ಕಣ್ಣು ತಪ್ಪಿಸಿ ಸುಮಾರು 09 ಗ್ರಾಮ ಮೌಲ್ಯದ 125000 ರೂ ಬೆಲೆ ಬಾಳುವ ಚಿನ್ನದ ಸರವನ್ನು ಕಳವುಗೈದಿದ್ದ. ಕುಂದಾಪುರ ಪೊಲೀಸ್ ಠಾಣಾ ನಿರೀಕ್ಷಕರಾದ ಜಯರಾಮ್ ಡಿ. ಗೌಡ ಸಾರಥ್ಯದಲ್ಲಿ, ಠಾಣಾ ಪಿಎಸ್ಐ ನಂಜಾನಾಯ್ಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ (66) ಸೋಮವಾರ ಅಲ್ಪಕಾಲದ ನಿಧನರಾಗಿದ್ದಾರೆ. ರಾಜಕೀಯ ಬದುಕಿನ ಆರಂಭದಲ್ಲಿ ಜನತಾದಳದಲ್ಲಿ ಗುರುತಿಸಿಕೊಂಡಿದ್ದ ಅವರು ಮುಂದೆ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಕಾಂಗ್ರೆಸ್ ಪಕ್ಷದ ವಿವಿಧ ಜವಬ್ದಾರಿಗಳನ್ನು ನಿರ್ವಹಿಸಿ ತ್ರಿಸ್ತರ ಆಡಳಿತವನ್ನು ಪ್ರತಿನಿಧಿಸಿದ್ದರು. 1987ರಲ್ಲಿ ತ್ರಾಸಿ ಪಂಚಾಯತ್ ನಲ್ಲಿ ಪ್ರಪ್ರಥಮ ಅಧ್ಯಕ್ಷರಾಗಿದ್ದವರು. 2007ರಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮುಂದೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪಂಚಗಂಗಾವಳಿ ಸೊಸೈಟಿ ಸ್ಥಾಪಕಾಧ್ಯಕ್ಷರಾಗಿ, ಗಂಗೊಳ್ಳಿಯ ಪಂಚಗಂಗಾವಳಿ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ ವಿವಿಧ ಸಹಕಾರ ಸಂಘಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಗುಜ್ಜಾಡಿಯ ಭಾಸ್ಕರ ಪೈ ಸ್ಮಾರಕ ಶಾಲೆಯ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ಶಾಲೆಯ ಅಭಿವೃದ್ಧಿಯಲ್ಲಿ ಶ್ರಮಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಬೈಂದೂರು ತಾಲೂಕು ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಪಾರ ದೈವಭಕ್ತರಾಗಿದ್ದ ಅವರು, ಅನೇಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ಜಗತ್ತಿನಲ್ಲಿರುವುದು ಒಂದೇ ಧರ್ಮ, ಅದು ಹಿಂದು ಧರ್ಮ ನಾವು ನಮ್ಮ ಜೀವನವನ್ನು ಚೆನ್ನಾಗಿ ನಿರ್ವಹಿಸಿಕೊಂಡು ಹೋಗುತ್ತಿರುವಾಗ ನಮ್ಮ ಆಚರಣೆಗಳಿಂದ ಉಳಿದ ನಮ್ಮವರಿಗೆ ತೊಂದರೆಯಾಗದಂತೆ ಬದುಕುವುದೇ ಧರ್ಮ. ಉಳಿದೆಲ್ಲವುಗಳು ಮತಗಳು. ಜಾತಿ ಪದ್ಧತಿ ಮತ್ತು ಅಸೂಯೆ ನಮ್ಮ ಧರ್ಮಕ್ಕೆ ದೊಡ್ಡ ಕಂಟಕಗಳು. ಜಾತಿ ಜಾತಿ ಹೆಸರಿನಲ್ಲಿ ಹಿಂದುಗಳನ್ನು ಒಡೆದು ಹಾಕಲಾಗುತ್ತಿದೆ. ನಾವೆಲ್ಲ ಒಂದು ನಾವೆಲ್ಲರೂ ಹಿಂದು ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ನಮ್ಮ ಸಂಸ್ಕೃತಿ, ಧರ್ಮಕ್ಕೆ ಜೀವ ಕೊಡಲೂ ಸಿದ್ಧರಾಗಿರಬೇಕು ಎಂದು ಬೈಂದೂರು ಯಳಜಿತ್ನ ಶ್ರೀ ರಾಮಕೃಷ್ಣಾಶ್ರಮದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಹೇಳಿದರು. ಹಿಂದು ಸಂಗಮ ಆಯೋಜನ ಸಮಿತಿ ಗಂಗೊಳ್ಳಿ ಮಂಡಲ ಇದರ ವತಿಯಿಂದ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಹಿಂದು ಸಂಗಮ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಹಿಂದು ಧರ್ಮ ಉಳಿಸಿಕೊಳ್ಳಲು ಕಾರ್ಯಪ್ರವೃತರಾಗದೆ, ಪಾಶ್ಚಾತ್ಯ ಸಂಸ್ಕೃತಿಗೆ ಮೊರೆ ಹೋಗಿ ಆ ದಿಸೆಯಲ್ಲಿ ಮುಂದುವರಿದರೆ ಮೂರೇ ತಲೆಮಾರಿನಲ್ಲಿ ಈ ಧರ್ಮ ನಶಿಸಿಹೋಗುತ್ತದೆ ಎಂದು ಸ್ವಾಮಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೇನಾಪುರ ಗ್ರಾಮದ ಗುಡ್ಡಮ್ಮಾಡಿಯ ಸಾಲಾಡಿ ಎಂಬಲ್ಲಿ ಟ್ಯಾಟೂ ಹಾಕಿಸುವ ವಿಷಯಕ್ಕೆ ಸಂಬಂಧಿಸಿ ಜಗಳ ನಡೆದು ಎದೆಗೆ ಗುಂಡು ಹಾರಿಸಿದ ಘಟನೆ ನಡೆದಿದೆ. ಮಣಿಪಾಲ ದಶರಥ ನಗರದ ವಿವೇಕ್ ಯು. ಹಚ್ಚೆ ಹಾಕುವ ಕೆಲಸ ಮಾಡಿಕೊಂಡಿದ್ದು, ಪರಿಚಯದ ಸಾಗರ್ ಗೆ ಮನೆಯಲ್ಲಿ ಅರ್ಧ ಹಚ್ಚೆ ಹಾಕಿಸಿ ನಂತರ ಟ್ಯಾಟೂವನ್ನು ಪೂರ್ತಿಗೊಳಿಸಲು ಸಾಗರನ ಬಾಡಿಗೆ ಮನೆಯಾದ ಗುಡ್ಡಮ್ಮಾಡಿಗೆ ಆಗಮಿಸಿದ್ದರು. ಅಲ್ಲಿ ಮಲಗಿದ್ದಾಗ ಸಾಗರ್ ಹಚ್ಚೆ ಸರಿಯಾಗಿಲ್ಲವೆಂದು ತಕರಾರು ತೆಗೆದು ಜಗಳ ಮಾಡಿದ್ದ. ಸುಮಂತ್ ಹಾಗೂ ಆದಿತ್ಯ ಎಂಬುವವರು ವಿವೇಕ್ ರನ್ನು ಹಗ್ಗದಿಂದ ಕಟ್ಟಿಹಾಕಿ ಕಿರುಕುಳ ನೀಡಿ ಹಲ್ಲೆ ಮಾಡಿದರು. ಬಳಿಕ ಸಾಗರ್ ಏರ್ ಗನ್ ತಂದು ವಿವೇಕ್ ನ ಎದೆಗೆ ಗುಂಡು ಹಾರಿಸಿದ್ದಾನೆ. ಗಾಯಾಳು ವಿವೇಕ್ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಎಸ್ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಇನ್ನು ಉಳಿದವರ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿಶೇಷ ಅಧಿವೇಶನದ ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯರಾದ ಪಿ.ಎಚ್. ಪೂಜಾರಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಜಿಎಸ್ಟಿ ಹಾಗೂ ಆದಾಯ ತೆರಿಗೆ ಇಲಾಖೆಗಳ ದಾಖಲೆಯಲ್ಲೂ ಇದೇ ರೀತಿ ತೋರಿಸುತ್ತಿದ್ದು, ಇದರಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದು, ಸರ್ಕಾರದ ಹಾಗೂ ನಮ್ಮ ಇಲಾಖೆಯದ್ದು ಯಾವುದೇ ತಪ್ಪಿಲ್ಲ ಎಂದರು. ರಾಜ್ಯದಲ್ಲಿ ಸುಮಾರು 1.26 ಕೋಟಿ ಫಲಾನುಭವಿಗಳಿದ್ದು, ಕೆಲ ಫಲಾನುಭವಿಗಳು ಕೆಲವೊಂದು ವ್ಯವಹಾರ ನಡೆಸುವಾಗ ಜಿಎಸ್ಟಿ, ಆದಾಯ ತೆರಿಗೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ. ಗೃಹಲಕ್ಷ್ಮೀಗಾಗಿಯೇ ನಿರ್ಮಿಸಲಾಗಿರುವ ಸಾಫ್ಟ್ ವೇರ್ನಲ್ಲಿ ಜಿಎಸ್ಟಿ, ಆದಾಯ ತೆರಿಗೆ ಅಂತ ತೋರಿಸಿದರೆ ಬದಲಾವಣೆ ಮಾಡಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅಡಿಕೆ ಮರವೇರಿ ಸಿಂಗಾರ ಹೂವು ಕೊಯ್ಯುವಾಗ ಮರ ತುಂಡಾಗಿ ಕಾರ್ಮಿಕ ಕೆಳಗೆ ಬಿದ್ದ ಮೃತಪಟ್ಟ ಘಟನೆ ಸೋಮವಾರ ಸಾಲಿಗ್ರಾಮ ಸಮೀಪ ಗುಂಡ್ಮಿಯಲ್ಲಿ ಸಂಭವಿಸಿದೆ. ಗುಂಡ್ಮಿ ನಿವಾಸಿ ಶ್ರೀನಿವಾಸ ಪೂಜಾರಿ (45) ಮೃತಪಟ್ಟ ವ್ಯಕ್ತಿ. ಅವರು ತೆಂಗಿನಮರ ಮತ್ತು ಅಡಿಕೆ ಮರ ಹತ್ತಿ ಕಾಯಿ ಹಾಗೂ ಅಡಿಕೆ ಕೊಯ್ಯುವ ಕೆಲಸ ಮಾಡಿಕೊಂಡಿದ್ದರು. ಸೋಮವಾರ ಬೆಳಗ್ಗೆ ಗುಂಡ್ಮಿ ಗ್ರಾಮದ ಕಾಶ್ಮೀರಿ ಎಂಬಲ್ಲಿ ಪದ್ಮನಾಭ ಹೊಳ್ಳ ಎನ್ನುವವರ ಮನೆಯಲ್ಲಿ ಅಡಿಕೆ ಮರದ ಸಿಂಗಾರ ಹೂವು ತೆಗೆಯಲು ಹೊಗಿದ್ದ ಸಂದರ್ಭ ಮರವೇರಿದ್ದಾಗ ಅಡಿಕೆ ಮರ ತುಂಡಾಗಿದ್ದು ಸಮೀಪದಲ್ಲಿದ್ದ ನಾಗನ ಕಟ್ಟೆಯ ಮಾಡಿನ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಕೋಟ ಸರಕಾರಿ ಆಸ್ಪತ್ರೆಗೆ ಕರೆತರಲಾಯಿತು ಆದರೆ ಅಷ್ಟರೊಳಗೆ ಮೃತಪಟ್ಟಿದ್ದರು. ಅವರು ಮನೆಗೆ ಆಧಾರಸ್ತಂಭವಾಗಿದ್ದು ಕಾಯಿ ತೆಗೆಯಲು ಹಾಗೂ ಸಿಂಗಾರ ಹೂವು ತೆಗೆಯುವ ಕೆಲಸದಲ್ಲಿ ಸಾಕಷ್ಟು ಹೆಸರುಗಳಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತಿಯರನ್ನು ಅಗಲಿದ್ದಾರೆ. ಈ ಬಗ್ಗೆ…
