Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ವಿಶ್ವವಿನಾಯಕದ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಗಳಿಸಿ ಸಾಧನೆಯನ್ನು ತೊರಿರುತ್ತಾರೆ. ವಿದ್ಯಾರ್ಥಿಗಳಾದ ಆರ್ಯಾನ್ಶ್ ಭಟ್, ಹಶ್ಮಿತ್ ಗಣೇಶ್, ವಿ. ಗೌತಮ್, ಶ್ರೀಜಿತ್, ಅನೀಶ್ ಶೆಟ್ಟಿ, ಅವನಿ ಶೆಟ್ಟಿ, ದಿವಿನ್ ಪಿ. ಶೆಟ್ಟಿ ಹಾಗೂ ಮನೀಶ್ ಕಟಾ ಹಾಗೂ ಕುಮಿಟೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಗಳಿಸಿ ಶಾಲೆ ಹಾಗೂ ಊರಿಗೆ ಕೀರ್ತಿಯನ್ನು ತಂದಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮೇನೇಜಿಂಗ್ ಡೈರೆಕ್ಟರ್ ಪ್ರಭಾಕರ ಶೆಟ್ಟಿಯವರು, ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ ಆಲ್ಮೇಡಾರವರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ನ.9: ನವೆಂಬರ್ 7ರಂದು ಹೊಸಾಡು ಗ್ರಾಮದಲ್ಲಿ ನಡೆದ ಮಖ್ಯಮಂತ್ರಿಗಳ ಸರ್ಕಾರಿ ಕಾರ್ಯಕ್ರಮಕ್ಕೆ ಬೈಂದೂರು ವಲಯದ ಶಿಕ್ಷಕರು, ಪೋಷಕರು ಹಾಗೂ ಸಿಬ್ಬಂದಿಗಳು ಭಾಗವಹಿಸುವಂತೆ ಸೂಚಿಸಿದ್ದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಎಂ. ಜಿ. ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಈ ಆದೇಶ ಹೊರಡಿಸಿದ್ದಾರೆ. ಶಿಕ್ಷಕರು / ಶಾಲಾ ಪೋಷಕರು / ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯದ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಹಾಜರಾಗಲು / ಭಾಗವಹಿಸಲು ಅವರು ಪತ್ರಮುಖೇನ ಸೂಚಿಸಿದ್ದರು. ಹೀಗೆ ಕಾರ್ಯಕ್ರಮಕ್ಕೆ ಭಾಗವಹಿಸಲು ಸೂಚಿಸಿರುವುದುಕುರಿತಂತೆ ಸದರಿಯವರ ವಿರುದ್ಧದ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಈ ಕೂಡಲೇ ಜಾರಿಗೆ ಬರುವಂತೆ ಕರ್ನಾಟಕ ನಾಗರೀಕ ಸೇವಾ ಅಧಿನಿಯಮದಡಿಯಲ್ಲಿ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಲಾಗಿದೆ. ಸದ್ಯ ಮಂಗಳೂರು ಡಯಟ್‌ನಲ್ಲಿ ಖಾಲಿ ಇರುವ ಹಿರಿಯ ಉಪನ್ಯಾಸಕರ ಹುದ್ದೆಗೆ ವರ್ಗಾಯಿಸಿ ಆದೇಶಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಅಂದಿನ ಕಷ್ಟಕಾಲದಲ್ಲಿ ಮದ್ರಾಸ್ ಟೀ ಸ್ಟಾಲ್ ಇಟ್ಟುಕೊಂಡು ಜೀವನ ನಡೆಸಿದ ಯು.ಶೇಷಗಿರಿ ಶ್ಯಾನುಭಾಗ್ ಅವರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಶಿಕ್ಷಣ ನೀಡಿ, ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಂತೆ ಮಾಡಿದ್ದರು. ಶೇಷಗಿರಿ ಶ್ಯಾನುಭಾಗ್ ಅವರ ಜನ್ಮ ಶತಾಬ್ದಿ ಅಂಗವಾಗಿ ಅವರ ಹೆಸರನ್ನು ಸ್ಮರಣೆ ಮಾಡಿಕೊಂಡು ಅವರ ಪುತ್ರ ಯು.ವಸಂತ ಶ್ಯಾನುಭಾಗ್ ಅವರು ಶಿಶು ಮಂದಿರದ ಮಕ್ಕಳಿಗೆ ಹಣ್ಣುಹಂಪಲು ಮತ್ತು ಸಿಹಿತಿಂಡಿಗಳನ್ನು ವಿತರಿಸಿರುವುದು ಸ್ತುತ್ಯಾರ್ಹವಾದುದು ಎಂದು ಗಂಗೊಳ್ಳಿ ಜಿಎಸ್ವಿಎಸ್ ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ ಕಾಮತ್ ಹೇಳಿದರು. ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ಬುಧವಾರ ಯು. ಶೇಷಗಿರಿ ಶ್ಯಾನುಭಾಗ್ ಅವರ ಜನ್ಮ ಶತಾಬ್ದಿ ಅಂಗವಾಗಿ ಶಿಶು ಮಂದಿರದ ಮಕ್ಕಳಿಗೆ ಹಣ್ಣುಹಂಪಲು ಮತ್ತು ಸಿಹಿತಿಂಡಿಗಳನ್ನು ವಿತರಿಸಿ ಅವರು ಮಾತನಾಡಿದರು. ಶಿಶು ಮಂದಿರದ ಅಧ್ಯಕ್ಷೆ ಸವಿತಾ ಯು.ದೇವಾಡಿಗ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಯು.ಶ್ರೀಕಾಂತ ಶೆಣೈ ಗಂಗೊಳ್ಳಿ ಶುಭ ಹಾರೈಸಿದರು. ಯು.ದಿವಾಕರ ಶ್ಯಾನುಭಾಗ್, ಯು.ಶಶಾಂತ ಶೆಣೈ, ಶಿಶು ಮಂದಿರದ ಸದಸ್ಯರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುಣ್ಣಾರಿಯ ಎಕ್ಸಲೆಂಟ್ ಪಿ.ಯು ಕಾಲೇಜು ಮತ್ತು ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಹಾಗೂ ಪರೀಕ್ಷಾ ಸಿದ್ಧತೆಯ ಉಪನ್ಯಾಸ ಕಾರ್ಯಾಗಾರವು ಇತ್ತೀಚಿಗೆ ನಡೆಯಿತು. ಕಾರ್ಯಗಾರದಲ್ಲಿ ಉಪನ್ಯಾಸಕರಾಗಿದ್ದ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಿದ ಸತೀಶ ಆರ್ ಮೈಸೂರು ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ, ಇಂದಿನ ಮಕ್ಕಳು ಮುಂದಿನ ಪ್ರಜೆಗಳು, ಇಂದಿನ ಯುವಕರೇ ನಾಳಿನ ನೇತಾರರು, ನೀವು ಈ ದೇಶವನ್ನು ಮುನ್ನೆಡೆಸಿ ರಕ್ಷಿಸುವವರು ಎಂದು ಹೇಳುತ್ತಾ, ಯಶಸ್ಸಿನ ರಹಸ್ಯವಿರುವುದು ಏಕಾಗ್ರತೆಯಲ್ಲಿ ಎಂಬ ಸತ್ಯವನ್ನು ವಿದ್ಯಾರ್ಥಿಗಳು ಅರಿಯಬೇಕೆಂದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಅಪೂರ್ವ ಜ್ಞಾನವನ್ನು ಪಡೆಯಬಲ್ಲ ಅಪಾರ ಶಕ್ತಿ ಅಡಗಿದೆ ಎನ್ನುವುದರಲ್ಲಿ ಸಂಶಯವಿಲ್ಲ. ಶಿಸ್ತುಬದ್ಧ ಯೋಗಾಸನಗಳು ನರಮಂಡಲವನ್ನು ಬಲಗೊಳಿಸುವುದಲ್ಲದೆ ಚುರುಕಾಗಿಸುವುದರಿಂದ ಏಕಾಗ್ರತೆಗೆ ಬಹಳ ಸಹಕಾರಿಯಾಗುತ್ತದೆ. ಹಾಗೂ ನಮ್ಮ ಜೀವನದಲ್ಲಿ ಯಾವುದೇ ಕೆಲಸ ಮಾಡಿದರೂ ವ್ಯವಸ್ಥಿತವಾಗಿ ಮಾಡಬೇಕೆಂದರು. ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರು ಹಾಗೂ ಎಕ್ಸ್ಲೆಂಟ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಡಾ. ರಮೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳು ವ್ಯಕ್ತಿತ್ವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುವೈತ್: ಗಲ್ಫ್ ರಾಷ್ಟ್ರ ಕುವೈತ್ ನಲ್ಲಿ ಕಳೆದ 20 ವರ್ಷಗಳಿಂದ ಕರ್ನಾಟಕ ಮೂಲದ ಹಲವಾರು ಸಂಘ-ಸಂಸ್ಥೆಗಳಲ್ಲಿ ಆಡಳಿತ ಮಂಡಳಿ, ಕಾರ್ಯಕಾರಿ ಸಮಿತಿಗಳಲ್ಲಿ ಸೇವೆ ಸಲ್ಲಿಸಿರುವ ಹಾಗೂ ಪ್ರಸ್ತುತ ಕುವೈತ್ ಕನ್ನಡ ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ, ಸುರೇಶ್ ರಾವ್ ನೇರಂಬಳ್ಳಿಯವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿಯವರು ಕನ್ನಡ ಸಾಹಿತ್ಯ ಪರಿಷತ್ತಿನ ಕುವೈತ್ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಕುವೈತ್ ನಲ್ಲಿ ಕನ್ನಡ ಹಾಗೂ ಕನ್ನಡ ಪರ ಸೇವೆಯ ಅಂಗವಾಗಿ ಪ್ರಪ್ರಥಮ ಕನ್ನಡ ಚಲನಚಿತ್ರ ಬಿಡುಗಡೆ ಹಾಗೂ ನಂತರದ ನಿರಂತರ ಚಲನಚಿತ್ರಗಳ ವಿತರಣೆ ಮತ್ತು ಪ್ರದರ್ಶನ, ಸಮಾಜ ಸೇವೆಯ ಭಾಗವಾಗಿ ಕೋವಿಡ್ ನಮಹಾಮಾರಿಯ ಸಮಯದಲ್ಲಿ ಭಾರತೀಯರಿಗಾಗಿ, ವೈಯಕ್ತಿಕವಾಗಿ ಹಾಗೂ ಇತರ ಸಂಘಟನೆಗಳ ಸಹಯೋಗದೊಂದಿಗೆ ನೆಡೆಸಿದ ದಿನಸಿ ಮತ್ತು ಆಹಾರ ಪೊಟ್ಟಣಗಳ ವಿತರಣೆ, ಜೀವರಕ್ಷಕ ಔಷಧಗಳ ವಿತರಣೆ, ಅತಂತ್ರರಾಗಿ ಭಾರತಕ್ಕೆ ಮರಳಲು ಕಾಯುತ್ತಿದ್ದ ಪ್ರಯಾಣಿಕರಿಗೆ ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳ ಸಹಯೋಗದೊಂದಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಕಳೆದ ಮೂರು ವರ್ಷಗಳಿಂದ ಕೋವಿಡ್ ಕಾರಣದಿಂದ ಆನ್ಲೈನ್‌ಗೆ ಸೀಮಿತವಾಗಿದ್ದ ಕಾರ್ಯಕ್ರಮಗಳು ಈ ವರ್ಷ ಎಲ್ಲರೂ ಜೊತೆಗೂಡಿ ಆಚರಿಸುತ್ತಿರುವುದಕ್ಕೆ ಸಂತಸವಾಗುತ್ತಿದೆ. ಕತಾರ್‌ನಲ್ಲಿ ಪ್ರಪಂಚದ ಅತಿ ಪ್ರತಿಷ್ಟಿತ ಪಂದ್ಯಾವಳಿ ಫಿಫಾ ನಡಯುತ್ತಿರುವ ವಷದಲ್ಲಿ ಸಂಘವು ರಾಜ್ಯೋತ್ಸವ ಆಚರಿಸಿರವುದು ಹೆಮ್ಮೆಯ ವಿಷಯ ಎಂದು ಕತಾರ್ ಕನ್ನಡ ಸಂಘದ ಅಧ್ಯಕ್ಷ ಮಹೇಶ ಗೌಡ ಹೇಳಿದರು. ಕತಾರ್ ಕರ್ನಾಟಕ ಸಂಘದ ಆಶ್ರಯದಲ್ಲಿ ಕರ್ನಾಟಕ ಸಂಘದ ಸೋದರ ಸಂಸ್ಥೆಗಳಾದ ತುಳುಕೂಟ ಕತಾರ್, ಬಂಟ್ಸ್ ಕತಾರ್, ಮಂಗಳೂರು ಕಲ್ಚರಲ್ ಅಸೋಸಿಯೇಷನ್, ಬಿಲ್ಲವಾಸ್ ಕತಾರ್, ಮಂಗಳೂರು ಕ್ರಿಕೆಟ್ ಕ್ಲಬ್ ಸಹಯೋಗದಲ್ಲಿ ಶುಕ್ರವಾರ ದೋಹಾದ ಡಿ. ಪಿ. ಎಸ್. ಶಾಲೆಯಲ್ಲಿ ಆಯೋಜಿಸಿದ 67ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು. ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್. ನಾಗಾಭರಣ ಇವರಿಗೆ “ಕತಾರ್ ಕನ್ನಡ ಸಮ್ಮಾನ್” ಪ್ರಶಸ್ತಿ ಪ್ರದಾನಿಸಿ ಸನ್ಮಾನಿಸಲಾಯಿತು. ಅಲ್ಲದೇ ಕನ್ನಡ ನಾಡಿನ ರಂಗಭೂಮಿ, ಕಲಾತ್ಮಕ ಹಾಗೂ ವಾಣಿಜ್ಯ ಚಲನಚಿತ್ರಗಳ ಹೆಸರಾಂತ ಕಲಾವಿದರು, ನಿರ್ಮಾಪಕರು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅಂದುಕಾ ಎ. ಎಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೈಂದೂರಿನ ಸಂಘದ ಕಛೇರಿಯಲ್ಲಿ ಗುರುವಾರ ಜರುಗಿದ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಂಘದ ಗೌರವಾಧ್ಯಕ್ಷರಾಗಿ ಎಸ್. ಜನಾರ್ದನ ಮರವಂತೆ, ಕಾರ್ಯದರ್ಶಿಯಾಗಿ ಅರುಣ ಕುಮಾರ್ ಶಿರೂರು, ಉಪಾಧ್ಯಕ್ಷರಾಗಿ ಉದಯ ಪಡಿಯಾರ್, ಕೊಶಾಧಿಕಾರಿಯಾಗಿ ಸುನಿಲ್ ಹೆಚ್. ಜಿ., ಬೈಂದೂರು, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನರಸಿಂಹ ಬಿ. ನಾಯಕ್, ರಾಮ ಬಿಜೂರು, ಗಿರೀಶ್ ಶಿರೂರು, ಕೃಷ್ಣ ಬಿಜೂರು ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ನ.9: ನಶೆ ಏರಿಸುವ ಗಾಂಜಾ ಮೊದಲಾದ ಪದಾರ್ಥಗಳು ಜೀವನ ನೆಮ್ಮದಿ ಕಿತ್ತು ತಿನ್ನುವುದಲ್ಲದೆ, ಸಮಾಜದ ಸ್ವಾಸ್ಥ್ಯ ಕೆಡಿಸಿ, ಕೌಂಟುಂಬಿಕ ಬದುಕು ನಾಶ ಮಾಡುತ್ತಿದೆ. ಯುವ ಸಮಾಜ ಜಾಗೃತಿ ಹೆಜ್ಜೆ ಇಡಬೇಕು ಎಂದು ಇಲ್ಲಿನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಕ್ ಹೇಳಿದರು. ಜನಸೇವಾ ಟ್ರಸ್ಟ್ ಮೂಡುಗಿಳಿಯಾರು, ಡಾ. ಬಿ.ಬಿ. ಹೆಗ್ಡೆ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘ ಆಶ್ರಯದಲ್ಲಿ ಕುಂದಾಪುರ ಪದವಿಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ನಡೆದ ಗಾಂಜಾ ವಿರುದ್ಧ ಜಾಗೃತ ನಡಿಗೆ ವಾಕಥಾನ್ ಒಂದು ಹೆಜ್ಜೆ ಒಂದ ಅಮುಲು ಮುಕ್ತ ಭಾರತಕ್ಕಾಗಿ ನಡೆದ ಕಾರ್ಯಕ್ರಮದಲ್ಲಿ ಡೋಲು ನುಡಿಸಿ ಉದ್ಘಾಟಿಸಿ ಮಾತನಾಡಿ ನಶಾ ಪ್ರಪಂಚ ಕಾಲೇಜು ಕರಿಡಾರ್‌ಗಳಿಗೂ ಪ್ರವೇಶ ಪಡುತ್ತಿರುವುದ ಬೇಸರದ ವಿಷಯವಾಗಿದ್ದು, ಸಮಾಜದ ಎಚ್ಚರಿಸುವ ಕಾರ್ಯ ಮಾಡಬೇಕಿದೆ ಎಂದರು. ಕುಂದಾಪುರ ಹಿರಿಯ ಸಿವಿಲ್ ನ್ಯಾಯಾಧೀಶ ರಾಜು ಎನ್., ಕುಂದಾಪುರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಗಾಗಿ ಬಿಸಿನೆಸ್ ಡೇ ಕಾರ್ಯಕ್ರಮವನ್ನು ನ.12ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರಾಗಿಣಿ ಅವರು ಮಾಹಿತಿ ನೀಡಿದರು. ಕುಂದಾಪುರ ಪ್ರೆಸ್ ಕ್ಲಬ್’ನಲ್ಲಿ ಮಂಗಳವಾರ ಆಯೋಜಿಸಲಾದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ನೀಡಬೇಕೆಂಬ ಉದ್ದೇಶದಿಂದ ಬಿಸಿನೆಸ್ ಡೇ ಹಮ್ಮಿಕೊಳ್ಳಲಾಗಿದ್ದು ನ.12ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ತನಕ ಕಾರ್ಯಕ್ರಮ ನಡೆಯಲಿದೆ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ತಂಡವನ್ನು ರಚಿಸಿಕೊಂಡು ತಮ್ಮ ಅಭಿರುಚಿಗೆ ತಕ್ಕಂತೆ ಅಂಗಡಿಗಳನ್ನು ತೆರೆದು, ಸಣ್ಣ ಬಂಡವಾಳವನ್ನು ಹೂಡಿ ಲಾಭ ಪಡೆಯುವ ಬಗೆ, ಭಾವನಾತ್ಮಕ, ಸಾಮಾಜಿಕ ಸಂಬಂಧಗಳ ಮೌಲ್ಯವನ್ನು ಅರ್ಥ ಮಾಡಿಕೊಳ್ಳುವುದು, ವಿದ್ಯಾರ್ಥಿಗಳ ಸೃಜನಶೀಲತೆಗೆ ಮೆರಗು ದೊರಕಿಸಲು, ಸ್ವ ಉದ್ಯೋಗದ ಕುರಿತು ಮಾಹಿತಿ, ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿದರೇ ಯಶಸ್ಸು ತಮ್ಮ ಕಡೆ ಒಲಿಯುತ್ತದೆ ಎನ್ನುವುದನ್ನು ಮನವರಿಕೆ ಮಾಡಿ ಕೊಡುವ ನಿಟ್ಟಿನಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ನ.07: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಳದ ವತಿಯಿಂದ ಅವರನ್ನು ಗೌರವಿಸಲಾಯಿತು. ಈ ವೇಳೆ ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಶಾಸಕ ಸುಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯರುಗಳಾದ ಜಯಾನಂದ ಹೋಬಳಿದಾರ್, ಗೋಪಾಲಕೃಷ್ಣ ನಾಡ, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಶರತ್ ಕುಂಆರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಇದನ್ನೂ ಓದಿ:► ಮೀನುಗಾರರು, ರೈತ ಕೂಲಿಕಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಣೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ – https://kundapraa.com/?p=63074 .

Read More