Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಾಗೂರು ಕೊಡೇರಿಯ ಕುಳ್ಳಿ ಗೋವಿಂದ ಖಾರ್ವಿ (72 ವರ್ಷ) ಅವರು ಗುರುವಾರ ಬೆಳಗಿನ ಜಾವ ನಿಧನರಾದರು. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಸೇವೆ ಮತ್ತು ಜನಪರ ಕಾಳಜಿಯ ಮೂಲಕ ಜನಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದ ಅವರು, ತಮ್ಮ ಸರಳತೆ ಮತ್ತು ಸೇವಾಭಾವದಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಐರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರಗಳ ಸಭೆ ಇತ್ತೀಚಿಗೆ ಸಾಸ್ತಾನದ ಶಿವಕೃಪಾ ಕಲ್ಯಾಣ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಐರೋಡಿ ಗ್ರಾ.ಪಂ ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರಗಳಿಗೆ ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು. ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಸಭೆಯ ಅಧ್ಯಕ್ಷತೆ ವಹಿಸಿದರು.  ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪಕ್ಷ ಸಂಘಟನೆಯ ,ಬಿಜೆಪಿಯ ಸಂಘಟನಾ ವ್ಯವಸ್ಥೆಯಲ್ಲಿ 2-3 ಬೂತ್‌ಗಳನ್ನು ಸೇರಿಸಿ ಒಂದು ಶಕ್ತಿಕೇಂದ್ರ ಮಾಡಲಾಗುತ್ತದೆ. ಬೂತ್ ಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷದ ಕೆಲಸ ಮಾಡುವುದು ಇದರ ಉದ್ದೇಶ ಎಂದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಭಾಗವಹಿಸಿ, ಪಕ್ಷ ಬಲಪಡಿಸುವಿಕೆ ಹಾಗೂ ತಳಮಟ್ಟದ ಸಂಘಟನೆ ಬಗ್ಗೆ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವುದು ಮತ್ತು ಬೂತ್ ಮಟ್ಟದ ಸಂಘಟನೆಯನ್ನು ಚುರುಕುಗೊಳಿಸ ಬೇಕು ಎಂದು ಹೇಳಿದರು. ಈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಪಾಂಡೇಶ್ವರ ಗ್ರಾ.ಪಂ ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರಗಳ ಸಭೆ ಬುಧವಾರ ಸಾಸ್ತಾನದ ಶಿವಕೃಪಾ ಸಭಾಗ್ರಹದಲ್ಲಿ ನಡೆಯಿತು. ಸಭೆಯಲ್ಲಿ ಪಾಂಡೇಶ್ವರ ವ್ಯಾಪ್ತಿಯ ಶಕ್ತಿಕೇಂದ್ರಗಳಿಗೆ ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು. ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಂಡೇಶ್ವರ ಭಾಗದಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲು ಶಕ್ತಿ ಕೇಂದ್ರದ ನೂತನ ತಂಡ ಶ್ರಮಿಸಲಿ. ಮುಂದಿನ ದಿನಗಳಲ್ಲಿ ಶಕ್ತಿ ಕೇಂದ್ರ ವಾರು ಸದಸ್ಯತ್ವ ಅಭಿಯಾನ ಹಾಗೂ ಪೇಜ್ ಪ್ರಮುಖರ ನೇಮಕಕ್ಕೆ ಆದ್ಯತೆ ನೀಡಲಾಗುವುದು ಎಂದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಬಿಜೆಪಿಯ ಬಲ ತಳಮಟ್ಟದ ಸಂಘಟನೆಯಲ್ಲಿದೆ. ಬೂತ್ ಗೆದ್ದರೆ ಎಲ್ಲವನ್ನೂ ಗೆದ್ದಂತೆ. ಹಾಗಾಗಿ ಪ್ರತಿ ಬೂತ್‌ನಲ್ಲಿ ಯುವಕರು, ಮಹಿಳೆಯರು, ಹಿರಿಯರನ್ನು ಸೇರಿಸಿ ಸಮಿತಿ ಬಲಪಡಿಸಿ. ಸ್ಥಳೀಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಜನರ ವಿಶ್ವಾಸಗಳಿಸಿ. ಸಾಮಾಜಿಕ ಜಾಲತಾಣಗಳನ್ನು ಪಕ್ಷದ ಕೆಲಸಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಜಿ.ಎಸ್​.ವಿ.ಎಸ್ ಅಸೋಸಿಯೇಷನ್ ಮತ್ತು ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ವತಿಯಿಂದ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳ ಸಭಾಂಗಣದಲ್ಲಿ ಸಂಸ್ಥೆಯಲ್ಲಿ ಸುದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಉಪನ್ಯಾಸಕ ಮತ್ತು ಸಿಬ್ಬಂದಿ ವರ್ಗದವರಿಗೆ ಬೀಳ್ಕೊಡುಗೆ ಸಮಾರಂಭವು ಇತ್ತೀಚಿಗೆ ನಡೆಯಿತು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಸುದೀರ್ಘ ವರ್ಷಗಳ ಕಾಲ ಹಿಂದಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ನಾರಾಯಣ ಈ ನಾಯ್ಕ್, ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಎಂ. ರಾಘವೇಂದ್ರ ಭಟ್, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಶ್ರೀಲತಾ, ಭೌತಶಾಸ್ತ್ರ ಪ್ರಯೋಗಾಲಯದ ಸಹಾಯಕರಾಗಿ ಸೇವೆ ಸಲ್ಲಿಸಿದ ವಿಜಯ್ ಕುಮಾರ್, ಹೈಸ್ಕೂಲ್ ವಿಭಾಗದ ಕಚೇರಿ ಸಹಾಯಕರಾಗಿ ಕಾರ್ಯನಿರ್ವಹಿಸಿದ ಯಮುನಾ ಭಾಸ್ಕರ್ ಮತ್ತು ಅಟೆಂಡರ್ ಆಗಿ ಕಾರ್ಯನಿರ್ವಹಿಸಿದ ಜೀವನ್ ನಾಯಕ್ ಇವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು. ಉಪನ್ಯಾಸಕರಾದ ವೆಂಕಟೇಶ ಮೂರ್ತಿ ಎನ್.ಸಿ, ನರೇಂದ್ರ ಎಸ್. ಗಂಗೊಳ್ಳಿ ಮತ್ತು ಕಚೇರಿಯ ಪ್ರಮೋದ ಪೈ ಎಂ.ಜಿ ನಿವ್ರತ್ತರಿಗೆ ಶುಭ ಹಾರೈಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಡುಪಿ ಜಿಲ್ಲೆ ಪದವಿಪೂರ್ವ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ವಿವೇಕ ಪದವಿಪೂರ್ವ ಕಾಲೇಜು ಕೋಟ ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗಾಗಿ ಒಂದು ದಿನದ ಪುನಶ್ಚೇತನ ಕಾರ್ಯಗಾರವು ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಟೆಕ್ನಾಲಜಿ ಸೆಂಟರ್ ನಲ್ಲಿ ನಡೆಯಿತು. ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವದ ಉಪ ನಿರ್ದೇಶಕರಾದ ಮಾರುತಿ ಕಾರ್ಯಗಾರವನ್ನು ಉದ್ಘಾಟಿಸಿದರು. ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವುಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಕೋಟ ವಿದ್ಯಾ ಸಂಘದ ಖಜಾಂಜಿ ವೆಲೇರಿಯನ್ ಮೆನೇಜಸ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸುರತ್ಕಲ್‌ನ ರಿಸರ್ಚ್ ಸ್ಕಾಲರ್ ಕೀರ್ತನ್ ಅವರು ಜೆನ್ ಜಿ. ಕಲಿಕಾರ್ಥಿಗಳ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಬಗೆಗೆ ದಿಕ್ಸೂಚಿ ಉಪನ್ಯಾಸವನ್ನು ನೀಡಿದರು. ಉಪನ್ಯಾಸಕರಾದ ಬಲರಾಮ ವೈದ್ಯ, ಹರೀಶ್ ಕುಮಾರ್, ಸಂತೋಷ್ ಕುಮಾರ್, ಸುರೇಂದ್ರ ಪೂಜಾರಿ ಮತ್ತು ಹೇಮಲತಾ ಲೆಕ್ಕಶಾಸ್ತ್ರ ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮುಂಬೈನಲ್ಲಿ ನಡೆದ 19ನೇ ಮುಂಬೈ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡದ ಕಿರುಚಿತ್ರ ‘ದಿ ಹಗ್ ಆಫ್ ಎಂಪಿನೆಸ್’ (ಖಾಲಿತನದ ಅಪ್ಪುಗೆ) ರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ ಪ್ರಶಸ್ತಿ ಗೆದ್ದಿದೆ. ಚಿತ್ರದ ನಿರ್ದೇಶಕ ಡಾ. ಪ್ರದೀಪ್ ಕೆಂಚನೂರು ಅವರಿಗೆ ಪ್ರೀ ಪ್ರೆಸ್ತಿ ಅಂತರರಾಷ್ಟ್ರೀಯ ಕ್ರಿಟಿಕ್ ಅಸೋಸಿಯೇಷನ್ ನೀಡುವ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿಯನ್ನ ನೀಡಿ ಗೌರವಿಸಲಾಗಿದೆ. ಭಾರತೀಯ ಫಿಲ್ಮ ಸೊಸೈಟಿಗಳ ಒಕ್ಕೂಟದ ಉಪಾಧ್ಯಕ್ಷ ಪ್ರೇಮೇಂದ್ರ ಮಜುಂದಾ‌ರ್ ಅವರು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇತಿಹಾಸ ಪ್ರಾಧ್ಯಾಪಕ ರಾಗಿರುವ ಡಾ. ಪ್ರದೀಪ್ ಕೆಂಚನೂರು ಅವರಿಗೆ ಇದು ಚೊಚ್ಚಲ ಚಿತ್ರವಾಗಿದ್ದು, ಮೊದಲ ಪ್ರಯತ್ನದಲ್ಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ರಾಷ್ಟ್ರೀಯ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಎನ್‌ಎಫ್‌ಡಿಸಿ ಸಂಯುಕ್ತವಾಗಿ ಆಯೋಜಿಸಿದ್ದ ಈ ಚಿತ್ರೋತ್ಸವದಲ್ಲಿ 48 ರಾಷ್ಟ್ರಗಳಿಂದ 903 ಚಿತ್ರಗಳು ಸ್ಪರ್ಧಿಸಿದ್ದವು. ಡಾ. ಪ್ರದೀಪ್ ಅವರು ತಾಲೂಕಿನ ಕೆಂಚನೂರಿ‌ನ ಬಗ್ವಾಡಿಮನೆಯವರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಶ್ರೀ ರಾಮ ಕ್ಷತ್ರಿಯ ಯುವ ಸೇವಾ ಸಂಘ ರಿ. ಬೆಂಗಳೂರು ಇದರ 22ನೇ ವರ್ಷದ ಸಂಭ್ರಮಾಚರಣೆ – ನಮ್ಮ ಸಾಂಸ್ಕೃತಿಕ ಹಬ್ಬ ಸಮಾಜ ಬಂಧುಗಳ ಸಮ್ಮಿಲನ ಜುಲೈ 5ರ ಭಾನುವಾರ ಬೆಳಿಗ್ಗೆ 9:00 ರಿಂದ ಸಂಜೆ 6.30ರ ತನಕ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಸಾಂಸ್ಕೃತಿಕ ಹಬ್ಬದ ಉದ್ಘಾಟನೆಯನ್ನು ಮಂಗಳೂರು ವಾಣಿಜ್ಯ ತೆರಿಗೆ ಇಲಾಖೆ ಜಾರಿ ವಿಭಾಗದ ಸಹಾಯಕ ಆಯುಕ್ತ ಸತೀಶ್ ಬಟ್ವಾಡಿ ಅವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಬೆಂಗಳೂರು ರಾಮಕ್ಷತ್ರಿಯ ಯುವ ಸೇವಾ ಸಂಘದ ಅಧ್ಯಕ್ಷರಾದ ಗಣೇಶ್ ಬಾಳಯ್ಯನಮನೆ ವಹಿಸಲಿದ್ದಾರೆ ಹಾಗೂ ಇನ್ನಿತರ ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ 9:30 ರಿಂದ ಸಮಾಜ ಬಾಂಧವರಿಂದ ಸಾಂಸ್ಕೃತಿಕ ವೈಭವ (ನೃತ್ಯ, ಭರತನಾಟ್ಯ, ಪ್ರಹಸನ), ಸ್ಪರ್ಶ ಟ್ರಸ್ಟ್ ಮಕ್ಕಳ ಧಾಮ ಇವರಿಂದ ಡೊಳ್ಳು ಕುಣಿತ ಮತ್ತು ಮಧ್ಯಾಹ್ನ 1.00 ರಿಂದ 2.00 ಗಂಟೆಗೆ ಸಹ ಭೋಜನ ನಡೆಯಲಿದೆ. ಮಧ್ಯಾಹ್ನ 2ರಿಂದ 3.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಾಯಕತ್ವದ ಜವಾಬ್ದಾರಿ ಅರಿಯಲು ಶಾಲಾ ವಿದ್ಯಾರ್ಥಿ ಸಂಘ ಅಡಿಗಲ್ಲು ಎಂದು ಬಾರಕೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ. ಹೇಳಿದರು. ಅವರು ಶ್ರೀ ವಿದ್ಯೇಶ ವಿದ್ಯಾಮಾನ್ಯ ನೇಷನಲ್ ಆಂಗ್ಲ ಮಾಧ್ಯಮ ಶಾಲೆ ಹೇರಾಡಿ ಬಾರಕೂರಿನಲ್ಲಿ ಶಾಲಾ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಲೆಯ ಸಂಚಾಲಕರಾದ ರಾಜಾರಾಮ್ ಶೆಟ್ಟಿ ವಹಿಸಿದ್ದರು, ವೇದಿಕೆಯಲ್ಲಿ ಶಾಲೆಯ ಮುಖ್ಯಸ್ಥರಾದ ಲಿಖಿತಾ ಕೊಠಾರಿ ಉಪಸ್ಥಿತರಿದ್ದರು. ಶಾಲೆಯಲ್ಲಿ ವಿದ್ಯುನ್ಮಾನ ಯಂತ್ರಗಳ ಮೂಲಕ ಮತದಾನ  ನಡೆಸಲಾಗಿತ್ತು. ಶಾಲಾ ವಿದ್ಯಾರ್ಥಿ ನಾಯಕ ನಾಗಿ  ಶೋಭಿತ್ ಎಸ್. ಶೆಟ್ಟಿ, ಉಪ ವಿದ್ಯಾರ್ಥಿ ನಾಯಕನಾಗಿ ಲಿಖಿತ್ ಕೆ., ಕ್ರೀಡಾ ಕಾರ್ಯದರ್ಶಿಯಾಗಿ  ಆಯುಷ್, ಸಾಂಸ್ಕೃತಿಕ ಮಂತ್ರಿಯಾಗಿ ವೈಷ್ಣವಿ.ಜಿ. ಭಟ್, ಆರೋಗ್ಯ ಮಂತ್ರಿಯಾಗಿ ಅನುಷಾ, ವಿರೋಧ ಪಕ್ಷದ ನಾಯಕಿಯಾಗಿ ಸಿಯಾನಾ ಶೆಟ್ಟಿ, ಸಭಾಪತಿಯಾಗಿ ಪ್ರಸ್ತುತಿ ಅಧಿಕಾರ ವಹಿಸಿಕೊಂಡರು. ವಿಜ್ಞಾನ ಸಂಘದ ಅಧ್ಯಕ್ಷರಾಗಿ ಸಂಕೇತ ಮತ್ತು ಸನ್ನಿಧಿ ಪಿ., ಪರಿಸರ ಸಂಘದ ಅಧ್ಯಕ್ಷರಾಗಿ ಮಯೂರ್ ಮತ್ತು ಯಶಿಕಾ, ಸಾಹಿತ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಯುವಜನರು ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ ಮತ್ತು ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ. ರವಿಪ್ರಸಾದ ಹೆಗ್ಡೆ ಹೇಳಿದರು. ಅವರು ಕೇಂದ್ರ ಸರ್ಕಾರದ ‘ನಶಾಮುಕ್ತ ಭಾರತ್ ಅಭಿಯಾನ’ ಅಂಗವಾಗಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಾದಕ ವಸ್ತು ನಿಯಂತ್ರಣ ಸಮಿತಿ ವತಿಯಿಂದ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ವ್ಯಸನಮುಕ್ತ ಜೀವನ’ ಕುರಿತ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಾದಕ ವ್ಯಸನವು ಹೊಸ ಸಮಸ್ಯೆಯಲ್ಲ. ಪ್ರಾಚೀನ ಕಾಲದಿಂದಲೂ ವಿವಿಧ ರೂಪಗಳಲ್ಲಿ ಸಮಾಜವನ್ನು ಕಾಡುತ್ತಲೇ ಬಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಅದರ ಸ್ವರೂಪ ಮತ್ತಷ್ಟು ಅಪಾಯಕಾರಿಯಾಗಿದ್ದು, ಯುವಜನರನ್ನು ಹೆಚ್ಚು ಸೆಳೆಯುತ್ತಿದೆ ಎಂದರು. ಸ್ನೇಹಿತರ ಒತ್ತಡ ಅಥವಾ ಕ್ಷಣಿಕ  ಸುಖಕ್ಕಾಗಿ  ಆರಂಭವಾಗುವ ಅಭ್ಯಾಸ ಕ್ರಮೇಣ ವ್ಯಕ್ತಿಯ ಆರೋಗ್ಯ, ಶಿಕ್ಷಣ, ವೃತ್ತಿ ಹಾಗೂ ಕುಟುಂಬ ಜೀವನವನ್ನೇ ಹಾಳು ಮಾಡುತ್ತದೆ. ವಿಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಾದ್ಯಂತ ಜೂನ್ 28 ರ ಭಾನುವಾರದಂದು ನಡೆಯಲಿರುವ  ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಅಭಿಯಾನದಡಿ 0-5 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಕರೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೂನ್ 28 ರ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು ಜಿಲ್ಲೆ ಎಲ್ಲಾ 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಅಂದು ಪೋಲಿಯೋ ಲಸಿಕೆ ಹಾಕಿಸಬೇಕು ಎಂದರು. ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಒಟ್ಟು 65,401 ಮಕ್ಕಳನ್ನು ಗುರುತಿಸಲಾಗಿದೆ. 19 ಟ್ರಾನ್ಸಿಟ್, 3 ಮೊಬೈಲ್ ತಂಡಗಳು ಸೇರಿದಂತೆ…

Read More