ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಇತ್ತೀಚಿಗೆ ಡಿ.ಪಿ.ಎಸ್ ಸಭಾಂಗಣ ಏರ್ಪಡಿಸಲಾಗಿದ್ದ “ಬಿಲ್ಲವೋತ್ಸವ-2023” ಕಾರ್ಯಕ್ರಮದಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾದ ಸುಬ್ರಮಣ್ಯ ಹೆಬ್ಬಾಗಿಲು ಅವರನ್ನು ಸನ್ಮಾನಿಸಲಾಯಿತು. ಕತಾರ್ ದೇಶದಲ್ಲಿ ಕನ್ನಡ ಭಾಷೆ ಸಂಸ್ಕೃತಿಯನ್ನು ಬೆಳೆಸುತ್ತ, ಕರ್ನಾಟಕ ಸಂಘ ಕತಾರ್ ಸದಸ್ಯತ್ವವನ್ನು ದಾಖಲೆಯ ಸಂಖೆಗೆ ಹೆಚ್ಚಿಸಿದ ಹೆಮ್ಮೆಗೆ, ಕನ್ನಡ ಚಲನಚಿತ್ರಗಳನ್ನು ಕತಾರ್ ನಲ್ಲಿ ಬಿಡುಗಡೆ ಮಾಡಲು ವ್ಯವಸ್ಥೆ ಮಾಡಿಕೊಡುವುದಕ್ಕೆ, ಪರಿಸರ ಪರ ಜಾಗೃತಿಗೆ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮ ಸುಪ್ರಸಿದ್ದಗೊಳಿಸಿರುವರು, ಕರೋನ ಮಹಾಮರಿಯ ತಾಂದವದ ಕಾಲದಲ್ಲಿ ‘ಒಂದೇ ಭಾರತ್’ ವಿಶೇಷ ವಿಮಾನ ಸೇವೆಯಲ್ಲಿ ಅವಶ್ಯಕತೆಯಿರುವ ಭಾರತೀಯರನ್ನು ಕತಾರಿನಿಂದ ಮಾತೃ ಭೂಮಿಗೆ ಹಿಂದಿರುಗಲು ಸಹಾಯ ಮಾಡಿರುವುದಕ್ಕೆ ಒಂದು ಕಿರುಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಕತಾರ್ ಬಿಲ್ಲವಾಸ್ ಸಂಘದ ಅಧ್ಯಕ್ಷರಾದ ರಘುನಾಥ ಅಂಚನ್, ಉಪಾಧ್ಯಕ್ಷರಾದ ಅಮಿತ್ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿಯಾದ ಸೀಮಾ ಪೂಜಾರಿ, ಬಹರೈನ್ ಬಿಲ್ಲವಾಸ್ ಸಂಘದ ಪ್ರಧಾನ ಕಾರ್ಯದರ್ಶಿ ರೂಪೇಶ್ ಶಾಲಿಯನ್, ಬಹರೈನ್ ಬಿಲ್ಲವಾಸ್ ಸಂಘದ ಪೂರ್ವಾಧ್ಯಕ್ಷರಾದ ಅಜಿತ್ ಬಂಗೇರಾ , ಚಲನಚಿತ್ರ ನಟ ಪೃಥ್ವಿ ಅಂಬಾರ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ 8ನೇ ತರಗತಿಯಿಂದ ಪದವಿ ತನಕ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದಾರ್ಥಿಗಳಿಗೆ ವಿದ್ಯಾನಿಧಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಇತ್ತೀಚಿಗೆ ಜರುಗಿತು. ಉಡುಪಿ ಜಿಲ್ಲಾ ಶ್ರೀಮದ್ಭಗವದ್ದೀತಾ ಜಯಂತಿ ಆಚರಣಾ ಸಮಿತಿ ಪ್ರಧಾನ ಸಂಚಾಲಕ ಬಿ. ರಾಮಕೃಷ್ಣ ಶೇರುಗಾರ್ ವಿದ್ಯಾನಿಧಿ ವಿತರಿಸಿ ಮಾತನಾಡಿ ಕೆಲವು ವರ್ಷಗಳ ಹಿಂದೆ ಶಿಕ್ಷಣ ಪಡೆಯಲು ಹಿಂದೇಟು ಹಾಕುತ್ತಿದ್ದ ಗ್ರಾಮದಲ್ಲಿ ಶ್ರೀ ರಾಮಕೃಷ್ಣ ಕುಟೀರದ ಮೂಲಕ ಹಲವಾರು ವಿದ್ಯಾರ್ಥಿಗಳು ಇಂದು ಉನ್ನತ ವ್ಯಾಸಂಗವನ್ನೂ ಪೂರೈಸಿರುವುದು ಗಮನಾರ್ಹ ಸಾಧನೆ. ಸ್ವಾಮಿ ಸತ್ಯಸ್ವರೂಪಾನಂದರ ಇಚ್ಛಾಶಕ್ತಿಯಿಂದ ಇದು ಸಾಧ್ಯವಾಗಿದೆ. ವಿದ್ಯಾರ್ಥಿ ವೇತನ ಪಡೆದು ಉತ್ತಮ ಶಿಕ್ಷಣ ಉದ್ಯೋಗ ಪಡೆದುಕೊಳ್ಳುವುದರ ಜತೆಗೆ ಇತರರಿಗೂ ಸಹಕಾರ ಮಾಡುವ ಗುಣ ಬೆಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ ಕಳೆದ 22 ವರ್ಷಗಳಿಂದಲೂ ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಜಿಲ್ಲೆಯ ಮೂವರು ಶಾಸಕರು ಉಡುಪಿಯ ಸರಕಾರಿ ಅತಿಥಿ ಗೃಹದಲ್ಲಿ ಭೇಟಿ ಮಾಡಿ, ಜಿಲ್ಲೆಯ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆಯವರು ಒಟ್ಟಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಬೆಂಗಳೂರಿನಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಬೆಂಗಳೂರಿನಲ್ಲಿ ಭೇಟಿ ಮಾಡಿ ಶುಭಕೋರಿದರು. ಈ ವೇಳೆ ಅವರು ಬೈಂದೂರು ತಾಲೂಕಿನಲ್ಲಿ ಕಡಲ ಕೊರೆತದಿಂದ ಉಂಟಾದ ಪ್ರದೇಶಗಳಲ್ಲಿ ಹಾನಿಯ ಬಗ್ಗೆ ಚರ್ಚಿಸಿ ಅಧಿಕಾರಿಗಳಿಗೆ ಸೂಚನೆ ನೀಡಿ ಕೂಡಲೇ ಸೂಕ್ತ ಕ್ರಮಕೈಕೊಳ್ಳುವಂತೆ ಹಾಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆ ಸಿ ಐ ಉಪ್ಪುಂದದ ವತಿಯಿಂದ ಶೂನ್ಯ ಶಿಕ್ಷಕರನ್ನು ಹೊಂದಿರುವಂತಹ ಅತಿ ಹಿಂದುಳಿದ ಪ್ರದೇಶದಲ್ಲಿರುವ ಹಳ್ಳಿಬೇರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ರಿಷಾ ಡಯಾಗ್ನೋಸ್ಟಿಕ್ ಸೆಂಟರ್ ಮಾಲಕರಾದ ರಮೇಶ್ ಜೋಗಿ ಅವರು ಪುಸ್ತಕ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಿ ತೀರಾ ಹಿಂದುಳಿದ ಮತ್ತು ಗ್ರಾಮೀಣ ಪ್ರದೇಶದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅಭ್ಯಾಸ ಮಾಡುವಂತ ಇಂತಹ ಶಾಲೆಗೆ 50 ಕಿಲೋಮೀಟರ್ ದೂರದಿಂದ ಆಗಮಿಸಿ ಪುಸ್ತಕ ನೀಡುತ್ತಿರುವಂತಹದ್ದು ನಮಗೆ ತೃಪ್ತಿ ತಂದಿದೆ. ಯಾರಿಗೆ ತೀರ ಅಗತ್ಯವಿದೆ ಅಂತಹವರಿಗೆ ಕೊಡಬೇಕು ಅನ್ನುವ ಜೆ ಸಿ ಐ ಉಪ್ಪುಂದದ ತತ್ವವನ್ನು ಇಲ್ಲಿ ಪಾಲಿಸಿದ್ದೀವಿ ಎಂದು ಹೇಳಿದರು ಈ ಸಂದರ್ಭದಲ್ಲಿ ಜೆಸಿಐ ಉಪ್ಪುಂದದ ಅಧ್ಯಕ್ಷರಾದಂತಹ ಜೆಸಿ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು ಜೆ ಸಿ ಐ ಉಪ್ಪುಂದದ ಪೂರ್ವಾಧ್ಯಕ್ಷರಾದಂತಹ ಜೆಸಿ ಪ್ರಕಾಶ್ ಭಟ್, ಜೆ ಸಿ ಶ್ರೀಗಣೇಶ್ ಗಾಣಿಗ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.11: ಶಕ್ತಿ ಯೋಜನೆ ಮಹಿಳೆಯರ ಸ್ವಾವಲಂಬನೆಗೆ ಹೆಚ್ಚು ಅನುಕೂಲವಾಗಲಿದ್ದು, ವಿದ್ಯಾರ್ಥಿನಿಯರು ಸಹಿತವಾಗಿ ಮಹಿಳೆಯರು ಇದರ ಅನುಕೂಲ ಪಡೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಆರಂಭಿಸಿರುವ ರಾಜ್ಯ ಸರಕಾರದ ಶಕ್ತಿ ಯೋಜನೆಗೆ ಉಡುಪಿಯ ಕೆಎಸ್ಆರ್ಟಿಸಿ ಡಾ. ವಿ.ಎಸ್. ಆಚಾರ್ಯ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿದರು. ಇನ್ನು ರಾಜ್ಯದಲ್ಲಿ 20,000 ಕ್ಕೂ ಅಧಿಕ ಸರ್ಕಾರಿ ಬಸ್ ಗಳಿದ್ದು ಅವುಗಳಲ್ಲಿ 18609 ಬಸ್ ಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ದೊರೆಯಲಿದ್ದು, ರಾಜ್ಯದ ಒಟ್ಟು ಸರ್ಕಾರಿ ಬಸ್ಗಳಲ್ಲಿನ ಶೇ.95 ಬಸ್ ಗಳಲ್ಲಿ ಪ್ರತಿ ದಿನ 41.8 ಲಕ್ಷ ಮಹಿಳೆಯರು ತಮ್ಮ ಪ್ರತಿದಿನದ ದೈನಂದಿನ ದುಡಿಮೆ ಮತ್ತಿತರ ಕಾರ್ಯಗಳಿಗೆ ಬಸ್ಗಳಲ್ಲಿ ಸಂಚರಿಸಲಿದ್ದು, ಈ ಉಚಿತ ಪ್ರಯಾಣವು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಜೀವನಕ್ಕೆ ನೆರವಾಗಲಿದೆ. ಈ ಯೋಜನೆಯಿಂದ ಸರ್ಕಾರಕ್ಕೆ ವಾರ್ಷಿಕ 4051 ಕೋಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೈಂದೂರು ತಾಲೂಕು ಅಧ್ಯಕ್ಷರಾಗಿ ವಿಶ್ವನಾಥ ಪೂಜಾರಿ ಹಾಗೂ ಕಾರ್ಯದರ್ಶಿ ಮನೊರಾಜ ಶೆಟ್ಟಿ, ಸಂಘದ ಖಚಾಂಚಿಯಾಗಿ ಲತಾ ಶೆಟ್ಟಿ ಆಯ್ಕೆಯಾಗಿದ್ದಾರೆ. ರಾಜ್ಯ ಪರಿಷತ್ ಸದಸ್ಯರಾದ ಕಾಂತರಾಜು ಅವರು ಚುನಾವಣಾ ಪ್ರಕ್ರಿಯೆ ನಡೆಸಿದ್ದು, ಜಿಲ್ಲಾಧ್ಯಕ್ಷರ ಅದ್ಯಕ್ಷತೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ. ನಮ್ಮ ಬದುಕನ್ನು ರೂಪಿಸಿದ ಶಿಕ್ಷಕರನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತಿರುತ್ತೇವೆ. 32ವರೆ ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ಇಂದು ಸೇವಾ ನಿವೃತ್ತಿ ಹೊಂದುತ್ತಿರುವ ವಿದ್ಯಾರ್ಥಿಸ್ನೇಹಿ ದಿನಕರ್ ಸರ್ ಅವರ ನಡೆ-ನುಡಿ ನಮಗೆಲ್ಲರಿಗೂ ಪ್ರೇರಣೆ. ಶಿಕ್ಷಕ ನಿವೃತ್ತಿಯಾಗುವುದು ವೃತ್ತಿಯಿಂದ ಮಾತ್ರ. ಆದರೆ ವಿದ್ಯಾರ್ಥಿಗಳ ಮನಸ್ಸಿಂದಲ್ಲ ಎಂದು ಪತ್ರಕರ್ತ ಶಶಿಧರ ಹೆಮ್ಮಾಡಿ ಹೇಳಿದರು. ಅವರು ಹೆಮ್ಮಾಡಿ ಜನತಾ ಪ್ರೌಢ ಶಾಲೆಯಲ್ಲಿ ಜರುಗಿದ ಹಿರಿಯ ಶಿಕ್ಷಕ ಎಸ್ ದಿನಕರ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮತನಾಡಿದರು. ಬದುಕಿನಲ್ಲಿ ಸಮಾಜ ಪಾಠ ಬಹುಮುಖ್ಯವಾದುದು. ವೃತ್ತಿ ಜೀವನದೂದ್ದಕ್ಕೂ ಸಹಸ್ರಾರು ವಿದ್ಯಾರ್ಥಿಗಳಿಗೆ ಸಮಾಜ ಪಾಠ ಮಾಡಿದ ದಿನಾಕರ್ ಸರ್ ಎಂದಿಗೂ ವಿದ್ಯಾರ್ಥಿಗಳ ಮನಸ್ಸಲ್ಲಿ ಇರುತ್ತಾರೆ. ಶಿಕ್ಷಣ ಕ್ಷೇತ್ರದಲ್ಲಿ ಜನತಾ ಪ್ರೌಢ ಶಾಲೆ ಇಡೀ ತಾಲೂಕಿನಲ್ಲೇ ಮಹತ್ವದ ಸ್ಥಾನ ಪಡೆದಿದೆ. ಈ ಶಾಲೆ ಸಹಸ್ರಾರು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬದುಕಿಗೆ ಅಡಿಪಾಯ ಹಾಕಿಕೊಟ್ಟಿದೆ. ಎಸ್. ದಿನಾಕರ್ ಸರ್ ಅವರು ಈ ಶಾಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಮ್. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಬ್ಬರು ಉಪನ್ಯಾಸಕರುಗಳು ಪ್ರಾಧ್ಯಾಪಕ ಹುದ್ದೆಗೆ ಬಡ್ತಿ ಪಡೆದಿದ್ದಾರೆ. ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ಶೇಖರ್ ಬಿ ಅವರು ಪ್ರಾಧ್ಯಾಪಕ ಹುದ್ದೆಗೆ ಬಡ್ತಿ ಹೊಂದಿದ್ದಾರೆ. ಪಿಎಚ್ಡಿ ಪದವಿಯೊಂದಿಗೆ ಹೊಂದಿರುವ ಅವರ 20 ಸಂಶೋಧನಾ ಪ್ರಬಂಧಗಳು, ಅನೇಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿದೆ. ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ. ಶ್ರೀಮತಿ ಅಡಿಗ ಅವರು ಪ್ರಾಧ್ಯಾಪಕ ಹುದ್ದೆಗೆ ಭಡ್ತಿ ಪಡೆದಿದ್ದಾರೆ. ಗಣಿತಶಾಸ್ತ್ರದಲ್ಲಿ ಪಿಎಚ್ಡಿ ಪದವಿ ಪಡೆದಿರುವ ಅವರ 24 ಗಣಿತ ಸಂಶೋಧನಾ ಪ್ರಬಂಧಗಳು ಮತ್ತು 7 ಇತರ ಪ್ರಬಂಧಗಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿದೆ. ಶ್ರೀಮತಿ ಅಡಿಗ ಅವರು ಮಂಗಳೂರು ವಿಶ್ವವಿದ್ಯಾನಿಲಯ ಸಂಯೋಜಿತ ಪದವಿ ಕಾಲೇಜುಗಳಲ್ಲಿ ಪ್ರಾಧ್ಯಪಕರಾಗಿ ಬಡ್ತಿ ಪಡೆದ ಗಣಿತಶಾಸ್ತ್ರದ ಮೊದಲ ಪ್ರಾಧ್ಯಾಪಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಾಚೀನ ಕಲೆಗಳಲ್ಲಿ ಒಂದಾದ ಚಿತ್ರಕಲೆ ಮನಸ್ಸನ್ನು ಅರಳಿಸುವ ಕಲಾಪ್ರಕಾರವಾಗಿದೆ. ಬಣ್ಣಗಳ ಹಾಗೂ ರೇಖೆಗಳ ಮೂಲಕ ಸಮಾಜಕ್ಕೆ ಸಂದೇಶ ನೀಡುವ ಕಲೆ ಎಲ್ಲರಿಗೂ ಸಿದ್ಧಿಸಿದೆ ಎಂದು ಮೂಡುಬಿದಿರೆ ಜೈನಮಠದ ಡಾ| ಸಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯಮಹಾಸ್ವಾಮೀಜಿ ಹೇಳಿದರು ಅವರು ಇಲ್ಲಿನ ಸೂರ್ನಳ್ಳಿ ರಸ್ತೆಯ ಸುಪ್ರಭ ಕಾಂಪ್ಲೆಕ್ಸ್ನಲ್ಲಿ ಶುಕ್ರವಾರ ಮಣಿಪಾಲದ ತ್ರಿವರ್ಣ ಆರ್ಟ್ ಗ್ಯಾಲರಿ ಆ್ಯಂಡ್ ಕ್ಲಾಸಸ್ ಆಯೋಜಿಸಿದ ಸ್ಪಿರಿಚುವಾಲಿಟಿ ದ ಪವರ್ ಆಫ್ ಇನ್ನರ್ ವಿವ್ಯೂ ಎಂಬ ಚಿತ್ರಕಲಾ ಪ್ರದರ್ಶನ, ಆರ್ಟ್ ಗ್ಯಾಲರಿ ಉದ್ಘಾಟಿಸಿ ಆಶೀರ್ವಚನ ನೀಡಿ, ಬಂಧಗಳಿದ್ದರೆ ಸೃಜನಶೀಲತೆ ಸಾಧ್ಯವಿಲ್ಲ, ಬಂಧನ ಇರುವಲ್ಲಿ ಕಲೆ ಅರಳುವುದೂ ಇಲ್ಲ. ಅದು ಸುಪ್ತ ಮುಕ್ತವಾಗಿರಬೇಕು ಎಂದ ಅವರು, ಕಲಾವಿದನಿಗೆ ಪರಿಸರದ ಸಂವೇದನೆಯ ಮನ ಇರಬೇಕು. ಅನೇಕತೆಯಲ್ಲಿ ಏಕತೆ ತರುವ ಗುಣ ಇರಬೇಕು ಎಂದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಕೋಟೇಶ್ವರ, ಡಿವೈಎಸ್ಪಿ ಕೆ. ಶ್ರೀಕಾಂತ್, ಉದ್ಯಮಿ ಕೆ. ರತ್ನಾಕರ ನಾಯ್ಡ್ ಉಪಸ್ಥಿತರಿದ್ದರು. ತ್ರಿವರ್ಣ ಆರ್ಟ್ ಗ್ಯಾಲರಿಯ ಸಂಸ್ಥಾಪಕ,…
