Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೂರು ಶ್ರೀ ನಾಗ, ಯಕ್ಷೇ ಮತ್ತು ಹ್ಯಾಗುಳಿ ದೈವಸ್ಥಾನ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಮಯ್ಯಾಡಿಯ ಶ್ರೀ ರಾಮ ಭಜನಾ ಮಂಡಳಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ ವತಿಯಿಂದ ಶ್ರೀ ಸೀತಾರಾಚಂದ್ರ ದೇವಸ್ಥಾನದಲ್ಲಿ ಆಯೋಜಿಸಲಾದ 36ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭ ನಾಲ್ಕು ದಿನಗಳ ಕಾಲ ವಿಜೃಂಭಣೆಯಿಂದ ಜರುಗಿತು. ಮೂರನೇ ದಿನದ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್‌ನ ಆಡಳಿತ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಹಿಂದು ಧರ್ಮದ ಸಂಸ್ಕೃತಿ ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ನಮ್ಮೆಲ್ಲರದ್ದೂ ಆಗಿದ್ದು, ಸಮಾಜದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಬಹುಮುಖ್ಯ. ಸಮಾಜದ ಎಲ್ಲಾ ಸ್ತರದ ವ್ಯಕ್ತಿಗಳೂ ಒಂದುಗೂಡಿ ನಡೆಸುವ ಕಾರ್ಯಕ್ರಮ ಯಶಸ್ವಿಯಾಗುವುದಲ್ಲದೇ, ಸಂಘಟನೆಯೂ ಬಲಗೊಳ್ಳುತ್ತದೆ ಎಂದರು. ಕಾರ್ಯಕ್ರಮದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್, ಕೋಟೇಶ್ವರದ ವಿಘ್ನೇಶ್ವರ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಮಾಲಕ ಮಹೇಶ್ ಬೆಟ್ಟಿನ್, ಹೊನ್ನಾವರದ ಗೋಲ್ ಕಾರ್ಪೋರೇಷನ್ ಎಂ.ಡಿ ಎ.ಆರ್. ನಾಯಕ್, ಉಡುಪಿ ಅರಣ್ಯ ವಿಚಕ್ಷಣಾದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ನವರಾತ್ರಿ ಅಂಗವಾಗಿ ಒಂಬತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ವಿಜಯ ದಶಮಿಯಂದು ಧಾರ್ಮಿಕ ಪಠಣ ಹಾಗೂ ಸಂಗೀತ ತರಬೇತಿ ಶಿಬಿರ – ‘ವಿದ್ಯಾದಾನ’ಕ್ಕೆ ಜಿಲ್ಲಾ ಭಗವದ್ಗೀತಾ ಅಭಿಯಾನದ ಪ್ರಶಿಕ್ಷಕಿ ಯಶೋದಾ ಅಡಿಗ ಅವರು ಚಾಲನೆ ನೀಡಿದರು. ಈ ವೇಳೆ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ, ನಾಗಶ್ರೀ ಮಧ್ಯಸ್ಥ ಹಾಗೂ ಕುಟೀರದ ವಿದ್ಯಾರ್ಥಿಗಳು ಹಾಜರಿದ್ದರು. ಆಶ್ರಮದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಶರನ್ನವರಾತ್ರಿಯ ಪ್ರತಿದಿನ ಬೆಳಿಗ್ಗೆ ಬ್ರಾಹ್ಮಿ ಮಹೂರ್ತದಲ್ಲಿ ಪ್ರಾತಃ ಪೂಜೆ, ಚಂಡಿಕಾ ಪಾರಾಯಣ, ಆಶ್ರಮದ ವಿದ್ಯಾರ್ಥಿಗಳಿಂದ ಸಪ್ತ ಶತಿಯಲ್ಲಿ ಬರುವ ದೇವಿ ಸ್ತುತಿಗಳು, ಲಕ್ಷ್ಮೀ ಅಷ್ಟೋತ್ತರ, ಮಹಾಕಾಳಿ ಮಹಾಲಕ್ಷ್ಮಿ, ಮಹಾಸರಸ್ವತಿಯ ಅಷ್ಟಕ ಹಾಗೂ ವಿವಿಧ ಸ್ತೋತ್ರಗಳ ಪಠಣ, ಉಪನಿಷತ್ ಪಠಣ ಪೂಜೆ, ಪ್ರಸಾದ ವಿತರಣೆ, ವಿವಿಧ ದೇವಿ ಸ್ತುತಿಗಳೊಂದಿಗೆ ಭಜನೆ, ಚಂಡಿಕಾ ಪಾರಾಯಣ, ಪೂಜೆ, ಪ್ರಸಾದ ವಿತರಣೆ ನಡೆಯಿತು. ನವರಾತ್ರಿಯ ವಿವಿಧ ದಿನಗಳಲ್ಲಿ ಗಣಹೋಮ, ಲಲಿತಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾ ನವರಾತ್ರಿ ಉತ್ಸವದ ಅಂಗವಾಗಿ ಮಂಗಳವಾರ ಮಧ್ಯಾಹ್ನ 1-05ಕ್ಕೆ ನಡೆದ ಶ್ರೀ ದೇವಿಯ ವೈಭವದ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ನವರಾತ್ರಿ ಒಂಬತ್ತು ದಿನಗಳ ಕಾಲ ವಿವಿಧ ಪೂಜೆ ಹಾಗೂ ಧಾರ್ಮಿಕ ಆಚರಣೆಗಳು ಸಾಂಗವಾಗಿ ನೆರವೇರಿದ್ದು, ಮಹಾನವಮಿಯ ಮಧ್ಯಾಹ್ನ ಬಲಿ ಸೇವೆ ಹಾಗೂ ಪ್ರದಕ್ಷಿಣಿ ನಡೆಸಿದ ಬಳಿಕ ಶ್ರೀ ದೇವಿಯ ಉತ್ಸವ ಮೂರ್ತಿಯನ್ನು ಅಲಂಕರಿಸಿದ ಮರದ ಪುಷ್ಪ ರಥದಲ್ಲಿ ಕುಳ್ಳಿರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ, ತಂತ್ರಿ ಕೆ. ರಾಮಚಂದ್ರ ಅಡಿಗ ಅವರು ರಥಾರೋಹಣಳಾದ ಶ್ರೀ ದೇವಿಗೆ ಪೂಜೆ ನೆರವೇರಿಸಿ, ಮಂಗಳಾರತಿ ಎತ್ತಿದ ಬಳಿಕ, ರಥ ಪೂಜೆಯ ನಡೆಸಲಾಯಿತು. ನಂತರ ಸೇರಿದ್ದ ಸಾವಿರಾರು ಜನರು ಶ್ರೀ ದೇವಿಯ ಜಯ ಘೋಷದೊಂದಿಗೆ ರಥವನ್ನು ಎಳೆದರು. ದೇವಳದ ಒಳ ಪ್ರಾಂಗಣದಲ್ಲಿ ಒಂದು ಸುತ್ತು ಬಂದ ಬಳಿಕ ರಥದ ಮೇಲಿನಿಂದ ಅರ್ಚಕರು ಎಸೆದ ನಾಣ್ಯವನ್ನು ಪಡೆಯಲು ಭಕ್ತರು ಮುಗಿಬಿದ್ದರು. ಉತ್ಸವ ಮೂರ್ತಿಯನ್ನು ರಥದಿಂದ ಕೆಳಕ್ಕೆ ತರುವ…

Read More

ಅಶ್ವಯುಜ ಮಾಸದ ಪ್ರಾರಂಭದಲ್ಲಿ ಹತ್ತು ದಿನಗಳ ಕಾಲ ಆಚರಿಸುವ ಹಬ್ಬವೇ ನವರಾತ್ರಿ. ಚಾಂದ್ರಮಾನ ಪಂಚಾಂಗರೀತ್ಯ ಶರದ್ಋತುವಿನ ಮೊದಲ 9 ದಿನಗಳಲ್ಲಿ ಈ ಹಬ್ಬವನ್ನು ಆಚರಿಸುವುದರಿಂದ ಇದನ್ನು ಶರನ್ನವರಾತ್ರಿ ಎಂದೂ ಕರೆಯುತ್ತಾರೆ. ನವರಾತ್ರಿಯ ಈ ಒಂಭತ್ತು ದಿನಗಳು ದೇವಿಯ ಒಂಭತ್ತು ಸ್ವರೂಪಗಳ ಆರಾಧನೆಯಾಗಿರುತ್ತದೆ. ದೇವಿಯ ಪ್ರತಿಯೊಂದು ಸ್ವರೂಪದ ಆರಾಧನೆಯಿಂದ ವಿಶಿಷ್ಟ ಫಲಗಳನ್ನು ಪಡೆಯಬಹುದಾಗಿದೆ. ದೇವಿಯ ಸ್ವರೂಪಗಳನ್ನು ಅತ್ಯಂತ ಶ್ರದ್ಧೆಯಿಂದ ಆರಾಧಿಸಿದರೆ ಸಕಲ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಶೈಲಪುತ್ರಿನವರಾತ್ರಿಯ ಮೊದಲನೇ ದಿನ ಘಟಸ್ಥಾಪನೆಯ ಜೊತೆಗೆ ಶೈಲಪುತ್ರಿ ಸ್ವರೂಪವನ್ನು ಪೂಜಿಸಲಾಗುತ್ತದೆ. ಹಿಮಾಲಯ ರಾಜನ ಪುತ್ರಿಯಾದ ಕಾರಣ ಈ ದೇವಿಯನ್ನು ಶೈಲಪುತ್ರಿ ಎಂದು ಕರೆಯಲಾಗುತ್ತದೆ. ಶೈಲಪುತ್ರಿಯು ವೃಷಭವನ್ನೇರಿ ಬರುತ್ತಾಳೆ ಮತ್ತು ಎಡಗೈಯಲ್ಲಿ ಕಮಲ, ಬಲಗೈಯಲ್ಲಿ ತ್ರಿಶೂಲವನ್ನು ಹಿಡಿದಿರುತ್ತಾಳೆ. ನವರಾತ್ರಿಯ ಮೊದಲ ದಿನ ದೇವಿಯ ಆರಾಧಕರ ಮನಸ್ಸು ಮೂಲಾಧಾರ ಚಕ್ರದಲ್ಲಿ ಸ್ಥಿತವಾಗಿರುತ್ತದೆ. ಬ್ರಹ್ಮಚಾರಿಣಿನವರಾತ್ರಿಯ ಎರಡನೇ ದಿನ ದೇವಿ ಬ್ರಹ್ಮಚಾರಿಣಿಯನ್ನು ಪೂಜಿಸಲಾಗುತ್ತದೆ. ತಪಸ್ಸನ್ನು ಕಟ್ಟುನಿಟ್ಟಾಗಿ ಆಚರಿಸಿರುವ ಕಾರಣದಿಂದ ಬ್ರಹ್ಮಚಾರಿಣಿ ಎಂದು ಕರೆಯಲಾಗುತ್ತದೆ. ತೇಜೋಮಯ ಸ್ವರೂಪವುಳ್ಳ ದೇವಿಯು ಬಲಗೈಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಂತಾರ ಚಿತ್ರದ ಸಂಪೂರ್ಣ ಚಿತ್ರೀಕರಣವಾಗಿದ್ದು ಕುಂದಾಪುರದಲ್ಲಿ, ಸಿನಿಮಾ ಬಿಡುಗಡೆಯಾದ ಮೇಲೆ ಇದೀಗ ಅದರ ಯಶಸ್ಸಿನ ಪ್ರಯಾಣ ಆರಂಭವಾಗುತ್ತಿರುವುದೂ ಕೂಡ ಕುಂದಾಪುರದಲ್ಲಿಯೇ ಎಂಬ ಕಾರಣಕ್ಕೆ ಖುಷಿಯಾಗುತ್ತಿದೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದರು. ಅವರು ಸೋಮವಾರ ಕೋಟೇಶ್ವರದ ಭಾರತ್ ಸಿನಿಮಾಸ್ ಎದುರು ಆಯೋಜಿಸಲಾದ ಸಕ್ಸಸ್ ಜರ್ನಿಯಲ್ಲಿ ಕಾಂತಾರ ಚಿತ್ರತಂಡದೊಂದಿಗೆ ಭಾಗವಹಿಸಿ ಮಾತನಾಡಿ ನಮ್ಮ ಮಣ್ಣು, ಕೃಷಿ ಭೂಮಿಗೆ ಸಂಬಂಧಿಸಿದ ದೈವ ದೇವರ ಆಚರಣೆ, ಸಂಸ್ಕೃತಿ, ಸಂಪ್ರದಾಯವನ್ನು ದಂತಕಥೆಯಾಗಿರುವ ಪ್ರಯತ್ನ ಮಾಡಲಾಗಿದೆ. ನಮ್ಮ ಮಣ್ಣಿನ ಕಥೆ ಕನ್ನಡದಲ್ಲಿಯೇ ಎಲ್ಲರಿಗೂ ತಲುಪಬೇಕು ಎಂಬುದು ನನ್ನ ಆಸೆಯಾಗಿತ್ತು. ಅದರಂತೆ ಮೊದಲ ಹಂತದಲ್ಲಿ ಕನ್ನಡದಲ್ಲಿಯೇ ಬಿಡುಗಡೆಯಾಗಿ ಯಶಸ್ಸು ಕಂಡಿದೆ. ಮುಂದಿನ ವಾರ ಬೇರೆ ಬೇರೆ ಭಾಷೆಗಳಲ್ಲಿಯೂ ಸಿನಿಮಾ ಬಿಡುಗಡೆಯಾಗುತ್ತಿದೆ. ಪ್ರಪಂಚದಾದ್ಯಂತ ಉತ್ತಮ ಸ್ಪಂದನೆ ದೊರೆಯುತ್ತಿದೆ. ಮಕ್ಕಳಿಗೆ ಹೆಚ್ಚೆಚ್ಚು ಈ ಸಿನಿಮಾ ತೋರಿಸಿ ಅವರಿಗೂ ನಮ್ಮ ಸಂಸ್ಕೃತಿಯ ಪರಿಚಯವಾಗಲಿ ಎಂದು ಮನವಿ ಮಾಡಿಕೊಂಡರು. ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಕಾಂತಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿಎಸ್‌ಬಿ ಸಮಾಜದ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು ಹಾಗೂ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಶ್ರೀ ಸರಸ್ವತಿ ವಿದ್ಯಾನಿಧಿ ವತಿಯಿಂದ ವಿದ್ಯಾರ್ಥಿವೇತನ ನೀಡುತ್ತಿರುವುದು ಸ್ತುತ್ಯಾರ್ಹವಾದುದು. ವಿದ್ಯಾರ್ಥಿವೇತನವನ್ನು ವಿದ್ಯಾಭ್ಯಾಸದ ಉದ್ದೇಶಕ್ಕಾಗಿ ಬಳಸಿಕೊಂಡು, ವಿದ್ಯಾಭ್ಯಾಸ ಮುಗಿಸಿ ಉನ್ನತ ಸ್ಥಾನಮಾನ ಪಡೆದುಕೊಂಡ ಬಳಿಕ ವಿದ್ಯಾರ್ಥಿವೇತನ ಪಡೆದುಕೊಂಡ ಸಂಸ್ಥೆಗೆ ಸಹಾಯ ಮಾಡುವ ಪ್ರವೃತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ನಗರ ಕೃಷ್ಣಾನಂದ ಸುಬ್ರಾಯ ನಾಯಕ್ ಹೇಳಿದರು. ಗಂಗೊಳ್ಳಿಯ ಶ್ರೀ ಸರಸ್ವತಿ ವಿದ್ಯಾನಿಧಿ ಆಶ್ರಯದಲ್ಲಿ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಜರಗಿದ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಸರಸ್ವತಿ ವಿದ್ಯಾನಿಧಿ ಅಧ್ಯಕ್ಷ ರವೀಂದ್ರ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಯೋಧ ಟಿ.ದಿನಕರ ಶೆಣೈ ಶುಭಾಶಂಸನೆಗೈದರು. ಇದೇ ಸಂದರ್ಭ ಕಳೆದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಜಿಎಸ್‌ಬಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಕೆ.ಎಂ.ಸಿ. ಮಣಿಪಾಲ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು, ಇನ್ನರ್ ವೀಲ್ ಕ್ಲಬ್ ಬೈಂದೂರು, ಸ್ಪರ್ಶ ಸಂಪದ ಉಡುಪಿ, ಕ್ಯಾಥೋಲಿಕ್ ಸ್ತ್ರೀ ಸಂಘಟನೆ, ಆರಾಧನಾ ಮಹಾಸಂಘ ಬೈಂದೂರು, ಹೋಲಿ ಕ್ರಾಸ್ ಚರ್ಚ್ ಬೈಂದೂರು, ಇವರ ಸಹಯೋಗದೊಂದಿಗೆ ಕ್ಯಾನ್ಸರ್ ಕುರಿತು ಮಾಹಿತಿ ಹಾಗೂ 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಗರ್ಭಕಂಠದ ( ಪ್ಯಾಪ್ ಸ್ಮೆಯರ್ ) ಸ್ಥನ ಕ್ಯಾನ್ಸರ್ ಹಾಗೂ ಬಾಯಿ ಕ್ಯಾನ್ಸರ್ ಮಧುಮೇಹ ರಕ್ತ ಪರೀಕ್ಷೆ & ರಕ್ತದೊತ್ತಡ ತಪಾಸಣಾ ಶಿಬಿರ ವೇಲ್ನೇಸ್ ಸೆಂಟರ್ ಬಿ ಇ ಒ ಕಚೇರಿ ಹತ್ತಿರ ಸಿ ಎಚ್ ಸಿ ಸಬ್ ಸೆಂಟರ್ ಯೋಜನ ನಗರದಲ್ಲಿ ನಡೆಯಿತು. ಬೈಂದೂರು ಹೋಲಿ ಕ್ರಾಸ್ ಚರ್ಚ್ ಧರ್ಮಗುರು ವಂ| ವಿನ್ಸೆಂಟ್ ಕುವೆಲ್ಲೊ ಶಿಬಿರ ಉದ್ಘಾಟಿಸಿದರು. ಬೈಂದೂರು ಆರೋಗ್ಯ ಕೇಂದ್ರದ ವೈದ್ಯರಾದ ಡಾ. ನಂದಿನಿ, ಡಾ. ನಿವೇದಿತಾ, ಇನ್ನರ್ ವೀಲ್ ಅಧ್ಯಕ್ಷೆ ಭಾನುಮತಿ ಬಿ ಕೆ., ಸ್ಪರ್ಶ- ಸಂಪದ ಉಡುಪಿ (ಕೋ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಂಚಿಕಾನು ಸ.ಹಿ.ಪ್ರಾ.ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಅತಿಥಿಗಳು ಪುಪ್ಪನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರದ ನ್ಯಾಯಾಂಗ ಸದಸ್ಯರಾಗಿ ಆಯ್ಕೆಯಾದ ಕರ್ನಾಟಕದ ಪ್ರಥಮ ನ್ಯಾಯವಾದಿ ಉಪ್ಪುಂದದ ಯೋಗೇಶ್ ಕುಮಾರ್ ಇವರನ್ನು ಸನ್ಮಾನಿಸಲಾಯಿತು. ಈ ವರ್ಷ ಖೋಖೋ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾದ, ಪ್ರತಿಭಾ ಕಾರಂಜಿ ಹಾಗೂ ಆಟೋಟಗಳಲ್ಲಿ ವಿಜಯಿಯಾಗಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಶಾಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಬೈಂದೂರು ಸಬ್ ಇನ್ಸ್ಪೆಕ್ಟರ್ ನಿರಂಜನ್, ಹಿರಿಯ ವೈದ್ಯಾಧಿಕಾರಿ ಡಾ. ಪ್ರೇಮಾನಂದ, ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಪ್ರಭಾಕರ ದೇವಾಡಿಗ, ಉದ್ಯಮಿ ಪ್ರಕಾಶ್ ಪೂಜಾರಿ, ಉಪ್ಪುಂದ ಜೇಸಿಐ ಅಧ್ಯಕ್ಷ ನಾಗರಾಜ್, ಗ್ರಾಮ ಪಂಚಾಯತ್ ಸದಸ್ಯೆ ಮೂಕಾಂಬು, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಚಿತ್ತರಂಜನ್ ಮತ್ತು ಎಸ್.ಡಿ.ಎಮ್.ಸಿ ಸದಸ್ಯರು…

Read More

ವಿದ್ಯೆಯೇ ಮನುಷ್ಯನ ದೊಡ್ಡ ಸಂಪತ್ತು: ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಪತ್ತು ಎಷ್ಟಿದೆ ಎನ್ನೋದು ಮುಖ್ಯವಲ್ಲ ಅದನ್ನು ಬಳಸುವುದು ಗೇಗೆ ಎನ್ನುವುದು ಗೊತ್ತಿತಬೇಕು. ವಿದ್ಯೆ ಇದ್ದವರಿಗೆ ಸಂಪತ್ತು ಅಲ್ಲದೆ ಇನ್ನಿತರ ಎಲ್ಲಾ ವ್ಯವಸ್ಥೆಗಳ ಹೇಗೆ ಬಳಸಿಕೊಳ್ಳಬೇಕು ಎನ್ನೋದು ಗೊತ್ತಿರುತ್ತದೆ. ವಿದ್ಯೆಗಿಂತ ದೊಡ್ಡ ಸಂಪತ್ತು ಮತ್ತೊಂದಿಲ್ಲ ಎಂದು ಅದಮಾರು ಮಠ ಕಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ ಹೇಳಿದರು. ಕೋಟೇಶ್ವರ ವಕ್ವಾಡಿ ಬಾಂಡ್ಯಾ ಎಜುಕೇಶನ್ ಟ್ರಸ್ಟ್ ಗುರುಕುಲ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಶುಕ್ರವಾರ ಟ್ರಸ್ಟ್ ವತಿಯಿಂದ ನಿರ್ಮಿಸಿದ ಶ್ರೀ ಶಾರದಾ ದೇವಿ ಹಾಗೂ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಮಾಡಿ ಮಾತನಾಡಿದರು. ವಿದ್ಯೆಯಿದ್ದವನಿಗೆ ಅದನ್ನು ಹೇಗೆ ಬಳಸಬೇಕು ಎಂಬುದರ ಅರಿವು ಇರಬೇಕು. ವಿದ್ಯೆ ಸಾತ್ವಿಕ ಮಾರ್ಗದಿಂದ ಪಡೆಯಬೇಕು. ಸಹನೆ, ಏಕಾಗ್ರತೆ ನಿರಂತರ ಪ್ರಯತ್ನ ಇದ್ದರೆ ವಿದ್ಯೆ ಒಲಿಯುತ್ತದೆ. ವಿದ್ಯೆ,ಬುದ್ದಿ ಸಂಪತ್ತು ಎಲ್ಲವೂ ಇದ್ದ ಅದನ್ನು ಸದ್ವಿನಿಯೋಗ ಮಾಡದಿದ್ದರೆ ನಿಷ್ಪ್ರಯೋಜಕ ಎಂದರು. ಬಾಂಡ್ಯ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಬಿ. ಅಪ್ಪಣ್ಣ…

Read More