ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ‘ದಾಂಡಿಯ 2025’ ನೃತ್ಯ ಕಾರ್ಯಕ್ರಮ ಜರುಗಿತು. ಕಾಲೇಜಿನ ಸಾಂಸ್ಕೃತಿಕ ತಂಡದಿಂದ ವಿನೂತನ ಶೈಲಿಯಲ್ಲಿ ದಾಂಡಿಯ ನೃತ್ಯ ಪ್ರಕಾರವನ್ನು ಕಾಲೇಜಿನ ಪ್ರಾಂಗಣದಲ್ಲಿ ನೆರವೇರಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಲಲಿತ ಕಲಾ ಸಂಘದ ಸಂಯೋಜಕರಾದ ದೀಪಿಕಾ ಜಿ., ನಿರ್ಮಲ ಬಿಲ್ಲವ, ರೇವತಿ ಡಿ., ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಶ್ರೀರಕ್ಷಾ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಕಾಲೇಜಿನ ಉದ್ಯೋಗ ಮಾಹಿತಿ ಕೋಶ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಆಶ್ರಯದಲ್ಲಿ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದೊಂದಿಗೆ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಐದು ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವು ಸೋಮವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಸ್ಟೀವನ್ ಡಿಕೋಸ್ಟ್ ಅವರು ಉದ್ಘಾಟಿಸಿದರು. ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮ್ಯಾಜಿಕ್ ಬಸ್ ಸಂಸ್ಥೆಯ ಜಾಬೀಸ್, ಪೂಜಿತಾ, ಹಫೀಜ್ ಹಾಗೂ ಸಂತೋಷ್ ತರಬೇತಿ ನೀಡಿದರು. ಐ.ಕ್ಯೂ.ಎ.ಸಿ. ಸಂಚಾಲಕ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಸ್ನಾತಕ ಪದವಿ ಉದ್ಯೋಗ ಮಾಹಿತಿ ಕೋಶದ ಸಂಚಾಲಕ ಮನೋಹರ್ ಬಿ. ಹಾಗೂ ಮ್ಯಾಜಿಕ್ ಬಸ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಭಾರ್ಗವ ಉಪಸ್ಥಿತರಿದ್ದರು. ಎಂ.ಕಾಂ. ವಿದ್ಯಾರ್ಥಿನಿ ರಶ್ಮಿ ಕಾರ್ಯಕ್ರಮ ನಿರೂಪಿಸಿ, ಸ್ನಾತಕೋತ್ತರ ಪದವಿ ಉದ್ಯೋಗ ಕೋಶದ ಸಂಚಾಲಕ ಡಾ. ಉದಯ ಶೆಟ್ಟಿ ಕೆ. ಸ್ವಾಗತಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ವತಿಯಿಂದ 5ನೇ ವರ್ಷದ ಶ್ರೀ ಶಾರದಾ ಪೂಜೆಯು ಕಾಲೇಜಿನ ಜಸ್ಟಿಸ್ ಕೆ. ಎಸ್. ಹೆಗ್ಡೆ ಕೇಂದ್ರ ಗ್ರಂಥಾಲಯದಲ್ಲಿ ನೆರವೇರಿತು. ಕಾರ್ಯಕ್ರಮದ ಅಂಗವಾಗಿ ಗ್ರಂಥಾಲಯವನ್ನು ಮೈಸೂರು ದಸರಾ ಶೈಲಿಯ ಗೊಂಬೆಗಳಿಂದ ಅಲಂಕರಿಸಲಾಗಿತ್ತು. ಬಗೆ ಬಗೆಯ ದೀಪಗಳು, ಆಯುರ್ವೇದ ಗ್ರಂಥಗಳು, ಫಲಪುಷ್ಪ ಹಾಗೂ ರಂಗೋಲಿಗಳಿಂದ ಇಡೀ ವಾತವರಣವನ್ನು ಹಬ್ಬದ ಆಚರಣೆಗಾಗಿ ಸಜ್ಜುಗೊಳಿಸಲಾಗಿತ್ತು. ಮುದ್ದು ಮಕ್ಕಳ ಕಲರವ ಮತ್ತು ವಿದ್ಯಾರ್ಥಿಗಳ ಸಾಂಪ್ರದಾಯಿಕ ವೇಷಭೂಷಣವು ಕಾರ್ಯಕ್ರಮಕ್ಕೆ ಹೊಸ ಮೆರುಗು ನೀಡಿತು. ಪೂಜಾ ವಿಧಿಯಲ್ಲಿ ದೇವಿ ಸ್ತೋತ್ರ ಪಾರಾಯಣ, ಭಜನೆ, ಕುಂಕುಮಾರ್ಚನೆ, ಶಾರದಾ ಪೂಜೆ, ವಾಚನ-ಪ್ರವಚನ, ರಸಪ್ರಶ್ನೆ, ಸಂಖ್ಯಾ ಬಂಧ(ಸುಡೋಕು), ಅಷ್ಟಾವಧಾನ ಸೇವೆ ಹಾಗೂ ಪ್ರಸಾದ ವಿತರಣೆ, ವಂದೇ ಮಾತರಂ ನಡೆಯಿತು. ಅಂತೆಯೇ ಆಳ್ವಾಸ್ ಪದವಿ ಕಾಲೇಜಿನ ಗ್ರಂಥಾಲಯದಲ್ಲಿ ನೂತನ ಶಾರದಾ ಬಿಂಬದ ಪ್ರತಿಷ್ಠಾಪನೆಯೊಂದಿಗೆ ಶಾರದಾ ಪೂಜೆ ನಡೆಯಿತು. ಅನಂತ ಪದ್ಮನಾಭ ಅಸ್ರಣ್ಣರು ಪೂಜಾ ವಿಧಿ ವಿಧಾನ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಜನತಾ ಪಾರ್ಟಿ, ಹಿಂದುಳಿದ ವರ್ಗಗಳ ಮೋರ್ಚಾ ಬೈಂದೂರು ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ನಾರಾಯಣ ಗುರುಗಳ ಭಾವಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾನೆ. ಈತ ಗಂಗೊಳ್ಳಿಯ ಚಿತ್ರಕಲಾ ಶಿಕ್ಷಕ ಮಾಧವ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಎಸ್ಡಿಎಂಸಿ ಬಳಗ, ಮುಖ್ಯೋಪಾಧ್ಯಾಯರು, ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ವಾರ್ಷಿಕ ಶರನ್ನವರಾತ್ರಿ ಉತ್ಸವದ ಎಂಟನೇ ದಿನದ ಅಂಗವಾಗಿ ಚಂಡಿಕಾ ಸಪ್ತಸತಿ ಪಾರಾಯಣ, ದುರ್ಗಾಹೋಮ ಕಾರ್ಯಕ್ರಮಗಳು ಸೇವಾಕರ್ತರಾಗಿ ಉದ್ಯಮಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ದಂಪತಿಗಳು, ಲೋಹಿತ್ ಕುಂದರ್, ಅಶೋಕ್ ಶೆಟ್ಟಿ ಬನ್ನಾಡಿ ಭಾಗಿಯಾಗುವ ಮೂಲಕ ನೆರವೆರಿತು. ಧಾರ್ಮಿಕ ಕೈಂಕರ್ಯವನ್ನು ವೇ. ಮೂ ಮಧುಸೂದನ ಬಾಯರಿ ನೇತೃತ್ವದಲ್ಲಿ ಜರಗಿತು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ ಆನಂದ್ ಸಿ. ಕುಂದರ್ ಸೇವಾಕರ್ತ ಕುಟುಂಬಕ್ಕೆ ಪ್ರಸಾದ ವಿತರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ದೇಗುದ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ, ಸುಧಾ ಎ. ಪೂಜಾರಿ, ಜ್ಯೋತಿ ಡಿ.ಕಾಂಚನ್, ಶಿವ ಪೂಜಾರಿ, ರತನ್ ಐತಾಳ್, ಚಂದ್ರ ಆಚಾರ್, ಸುಬ್ರಾಯ ಜೋಗಿ, ಮಾಜಿ ಟ್ರಸ್ಟಿಗಳಾದ ಚಂದ್ರ ಪೂಜಾರಿ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಅರ್ಚಕ ಪ್ರತಿನಿಧಿಗಳು ಉಪಸ್ಥಿತರಿದ್ದರು. ಅಪರಾಹ್ನ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರಗಿತು. ಅಮೃತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದಲ್ಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದ್ದು, ಸದರಿ ಸಮೀಕ್ಷೆಗೆ ನಿಯೋಜನೆಗೊಂಡ ಗಣತಿದಾರರು ತಮಗೆ ನಿಯೋಜಿಸಲಾಗಿರುವ ಸಮೀಕ್ಷಾ ಬ್ಲಾಕ್ಗಳಲ್ಲಿ ಸಮೀಕ್ಷೆಯನ್ನು ನಿರ್ವಹಿಲು ಆದೇಶಿಸಲಾಗಿರುತ್ತದೆ. ಯಾವುದೇ ಗಣತಿದಾರರು ಸಮೀಕ್ಷೆಯಲ್ಲಿ ನಿಷ್ಕಾಳಜಿ ತೋರುವಂತಿಲ್ಲ. ಗಣತಿದಾರರು ಸಮೀಕ್ಷೆಯಲ್ಲಿ ನಿರಾಸಕ್ತಿ ಅಥವಾ ಅಸಡ್ಡೆ, ತೋರಿದ್ದಲ್ಲಿ, ಅನಗತ್ಯ ನೆಪಗಳನ್ನು ಹೇಳಿ ಗಣತಿ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಇಲಾಖಾ ವಿಚಾರಣೆ ನಡೆಸಲು ಹಾಗೂ ಸರ್ಕಾರದ ಕೆಲಸದಲ್ಲಿ ನಿಷ್ಕಾಳಜಿ ತೋರಿದ್ದಕ್ಕೆ ಶಿಸ್ತುಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣದಲ್ಲಿ ಪದವಿಯ ಜೊತೆಗೆ ಜೀವನ ಮೌಲ್ಯಗಳು ಅತ್ಯವಶ್ಯಕವಾಗಿ ಬೇಕಾಗುತ್ತದೆ. ಉದ್ಯೋಗ, ಪದವಿ, ಶಿಕ್ಷಣ ಇವೆಲ್ಲವೂಗಳಿಗಿಂತ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳುವುದು ಮುಖ್ಯವಾಗಿರುತ್ತದೆ. ಜೀವನವನ್ನು ಮೌಲ್ಯಯುತ ಮತ್ತು ನೈತಿಕವಾಗಿ ರೂಪಿಸಿಕೊಳ್ಳುವ ಕುರಿತು ತಿಳುವಳಿಕೆ ಬೇಕಾಗುತ್ತದೆ. ಮೊದಲು ನೖತಿಕತೆ ಮತ್ತು ಒಳ್ಳೆಯತನವನ್ನು ಕಲಿಯಬೇಕು ಎಂದು ಕುಂದೇಶ್ವರ ದೇವಸ್ಥಾನದ ಆಡಳಿತ ಮೋಕ್ತೇಸರರು ವಾಸುದೇವ ಯಡಿಯಾಳಿ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜು ಮತ್ತು ಕುಂದೇಶ್ವರ ದೇವಸ್ಥಾನದ ಸಹಯೋಗದಲ್ಲಿ ನಡೆದ ಒಂದು ದಿನದ ಜೀವನ ಮೌಲ್ಯ- ನೈತಿಕ ಶಿಕ್ಷಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು. ಎಸ್. ಶೆಣೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಕುಂದಾಪ್ರ 89.6 ಎಫ್. ಎಮ್. ಇದರ ಕಾರ್ಯಕ್ರಮ ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿ, ರಾಜ್ಯಶಾಸ್ತ್ರ ಉಪನ್ಯಾಸಕಿ ಅಕ್ಷತಾ ಸ್ವಾಗತಿಸಿ, ಕಂಪ್ಯೂಟರ್ ಉಪನ್ಯಾಸಕ ರಾಮಚಂದ್ರ ಆಚಾರ್ಯ ವಂದಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಅಕ್ಟೋಬರ್ 2ರ ವರೆಗೆ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ. ಈ ಹಿನ್ನೆಲೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ. ತುರ್ತು ಸೇವೆಗೆ ಶುಲ್ಕ ರಹಿತ 1077, ದೂ.ಸಂಖ್ಯೆ: 0820-2574802, ತಹಶೀಲ್ದಾರರ ಕಚೇರಿಯ ಸಹಾಯವಾಣಿ ಸಂಖ್ಯೆಗಳಾದ ಉಡುಪಿ: 0820-2520417, ಕುಂದಾಪುರ: 08254-230357, ಕಾಪು: 0820-2551444, ಬ್ರಹ್ಮಾವರ: 0820-2560494 ಹಾಗೂ ಬೈಂದೂರು: 08254-251657 ಮತ್ತು ಉಡುಪಿ ನಗರಸಭೆಯ ಸಹಾಯವಾಣಿ ಸಂಖ್ಯೆ: 0820-2593366 ಅಥವಾ 0820-2520306 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ನಿವೇಶನ ಮಂಜೂರಾಗಿರುವ ಕೈಗಾರಿಕೋದ್ಯಮಿಗಳು ಘಟಕಗಳನ್ನು ಕೂಡಲೇ ಸ್ಥಾಪಿಸಬೇಕು. ಹೆಚ್ಚುವರಿ ಕಾಲಾವಕಾಶ ಕಲ್ಪಿಸುವುದಿಲ್ಲ. ನಿವೇಶನವನ್ನು ಮರುಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು ನಿವೇಶನವನ್ನು ನೀಡಿದ್ದರೂ ಸಹ ಕೈಗಾರಿಕಾ ಯೋಜನೆಗಳ ಅನುಷ್ಠಾನವನ್ನು ಕಾಲಮಿತಿಯೊಳಗೆ ಪ್ರಾರಂಭಿಸಿರುವುದಿಲ್ಲ. ಘಟಕಗಳ ಸ್ಥಾಪನೆಗೆ ಸಮರ್ಪಕ ಕಾರಣಗಳು ಕಂಡುಬರದೇ ಇದ್ದಲ್ಲಿ ಅಂತಹ ನಿವೇಶನಗಳನ್ನು ಕೈಗಾರಿಕೆ ಪ್ರಾರಂಭಿಸಲು ನಿವೇಶನ ಕೋರಿ ಹೊಸದಾಗಿ ಅರ್ಜಿ ಸಲ್ಲಿಸಿರುವ ಇತರರಿಗೆ ಮರು ಹಂಚಿಕೆ ಮಾಡಲು ಕ್ರಮವಹಿಸಬೇಕೆಂದು ಸೂಚನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ ಕಾಂಪ್ಟಿ ಮಹಾರಾಷ್ಟ್ರ ಇಲ್ಲಿ ಎರಡು ತಿಂಗಳುಗಳ ಕಾಲ ನಡೆದ ಅಸೋಸಿಯೇಟ್ ಎನ್ಸಿಸಿ ಆಫೀಸರ್ ಫ್ರೀ ಕಮಿಷನ್ ತರಬೇತಿಯಲ್ಲಿ ದೇಶದ 28 ರಾಜ್ಯಗಳ 19 ಡೈರೆಕ್ಟರ್ಗಳ ಸುಮಾರು 500ಕ್ಕೂ ಅಧಿಕ ಆಫೀಸರ್ ಟ್ರೈನಿಗಳು ಭಾಗವಹಿಸಿದ ತರಬೇತಿಯಲ್ಲಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ನ 6 ಕರ್ನಾಟಕ ನೇವಲ್ ಯೂನಿಟ್ ಎನ್ಸಿಸಿಯನ್ನು ಪ್ರತಿನಿಧಿಸಿದ ಸುನಿಲ್ ಪೂಜಾರಿ ಪಾಂಡೇಶ್ವರ ಒಟ್ಟು ತರಬೇತಿ ಅವಧಿಯಲ್ಲಿ ದೈಹಿಕ ಸಾಮರ್ಥ್ಯ, ಶೈಕ್ಷಣಿಕ ಅಂಕ, ಸಾಮಾನ್ಯ ಜ್ಞಾನ ವಿಷಯಜ್ಞಾನ, ಡ್ರಿಲ್, ನಾಯಕತ್ವ ಗುಣ ಮತ್ತು ಸಮಗ್ರ ವರ್ತನೆ ಈ ಎಲ್ಲಾ ವಿಭಾಗಗಳಲ್ಲಿ ತೋರಿದ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ಚಿನ್ನದ ಪದಕದೊಂದಿಗೆ ಡೈರೆಕ್ಟರ್ ಜನರಲ್ ಎನ್.ಸಿ.ಸಿ ಬ್ಯಾಟನ್ ಗೌರವವಕ್ಕೆ ಪಾತ್ರರಾಗಿದ್ದಾರೆ. ಅವರು ಪ್ರಸ್ತುತ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
