ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ನೆಲದಲ್ಲಿ ಚಿತ್ರೀಕರಣಗೊಂಡ ಸಿನಿಮಾ ‘ಕಾಂತಾರ’ ಎಲ್ಲೆಡೆಯೂ ಹೌಸ್ ಪುಲ್ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕರಿಂದ ಭಾರಿ ಮೆಚ್ಚುಗೆಯೇ ವ್ಯಕ್ತವಾಗುತ್ತಿದೆ. ಭಾರತೀಯ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರು ಕುಂದಾಪುರದ ಭಾರತ್ ಸಿನಿಮಾಸ್’ನಲ್ಲಿ ಒಂದು ಶೋ ಸಂಪೂರ್ಣ ಬುಕ್ ಮಾಡಿ ತನ್ನ ಹುಟ್ಟೂರಿನ ಹಿರಿಯ ನಾಗರಿಕರಿಗೆ ಉಚಿತವಾಗಿ ಸಿನಿಮಾ ತೋರಿಸಿದ್ದಾರೆ. ಕುಂದಾಪುರದ ರಿಷಬ್ ಶೆಟ್ಟಿ ಅವರ ನಿರ್ದೇಶನ ಹಾಗೂ ನಟನೆಯ ಕಾಂತಾರ ಸಿನಿಮಾವನ್ನು ತನ್ನೂರಿನ ಹಿರಿಯ ನಾಗರಿಕರೂ ನೋಡಲಿ ಎಂಬ ಮಹದಾಸೆಯಿಂದ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರು ಕೋಟೇಶ್ವರದ ಭಾರತ್ ಸಿನಿಮಾಸ್’ನಲ್ಲಿ ಒಂದು ಸ್ಕ್ರೀನ್ ವೆಚ್ಚವನ್ನು ಸಂಪೂರ್ಣವಾಗಿ ತಾವೇ ಭರಿಸಿ ಮಂಗಳವಾರ ಬೆಳಿಗ್ಗೆ 11:30ಕ್ಕೆ ಉಚಿತ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ದುಬೈನಲ್ಲಿ ಸಿನಿಮಾ ನೋಡಿದ್ದ ಅವರು ಕುಂದಾಪುರದಲ್ಲಿಯೂ ತನ್ನೂರಿನ ಜನತೆಗೆ ಸಿನಿಮಾ ತೋರಿಸುವ ಉದ್ದೇಶಕ್ಕಾಗಿ ಊರಿಗೆ ಬಂದು ಹಿರಿಯರೊಂದಿಗೆ ಬೆರೆತು ಸಂತೋಷಪಟ್ಟರು. ಸಿನಿಮಾಸ್’ನ 2ನೇ ಸ್ಕೀನ್ ಹೌಸ್ಪುಲ್ ಆಗಿತ್ತು. ಈ ಸಂದರ್ಭ ಮಾಧ್ಯಮ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಕ್ಲಾಡಿ ಗ್ರಾಮದ ಕುಂದಬಾರಂದಾಡಿ ಕೋಳೂರು ಬಳಿ ಮಾಸ್ತಿ ಎಂಬುವವರ ಮನೆಯ ಆವರಣವಿಲ್ಲದ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೋಮವಾರ ರಕ್ಷಿಸಿದ್ದಾರೆ. ಹಿಂದಿನ ದಿನ ರಾತ್ರಿಯೇ ಚಿರತೆ ಬಾವಿಗೆ ಬಿದ್ದಿದ್ದು, ಸೋಮವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ. ಕೂಡಲೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಬಾವಿಗೆ ಬೋನು ಇಳಿಬಿಟ್ಟು ಕಾರ್ಯಾಚರಣೆ ನಡೆಸಿ ಮೇಲೆತ್ತಿದ್ದಾರೆ. 4ರಿಂದ 5 ವರ್ಷದ ಹೆಣ್ಣು ಚಿರತೆ ಇದಾಗಿದೆ. ಕಾರ್ಯಾಚರಣೆಯಲ್ಲಿ ಕುಂದಾಪುರ ವಲಯ ಅರಣ್ಯಾಧಿಕಾರಿ ಟಿ. ಕಿರಣ್ಬಾಬು, ಆಲೂರು ಉಪ ವಲಯ ಅರಣ್ಯಾಧಿಕಾರಿ ದಿಲೀಪ್ ಕುಮಾರ್, ಜಡ್ಕಲ್ ಶಾಖೆ ಉಪ ವಲಯ ಅರಣ್ಯಾಧಿಕಾರಿ ಸುನೀಲ್ ಕುಮಾರ್, ಅರಣ್ಯ ರಕ್ಷಕ ಆನಂದ ಬಳೆಗಾರ, ರಮೇಶ, ಮಂಜುನಾಥ ಗಾಣಿಗ ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು. ಕುಂದಬಾರಂದಾಡಿಯಲ್ಲಿ ಚಿರತೆ ಕಾಟದ ಬಗ್ಗೆ ಮಾಧ್ಯಮಗಳಲ್ಲಿ ಸರಣಿ ವರದಿಯಾಗಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ದಸರಾ ಕಲಾ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶನಿವಾರ ನಡೆಯಿತು. ಗುಜ್ಜಾಡಿಯ ಉದ್ಯಮಿ ಗಣಪತಿ ಮೇಸ್ತ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಮುನಾ ಪೂಜಾರಿ, ಎಸ್ಡಿಎಂಸಿ ಅಧ್ಯಕ್ಷ ನಾರಾಯಣ ಕೆ.ಗುಜ್ಜಾಡಿ, ಶಾಲಾ ಮುಖ್ಯೋಪಾಧ್ಯಾಯ ಆನಂದ ಜಿ. ಶುಭಾಶಂಸನೆಗೈದರು. ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ ಮೇಸ್ತ, ತುಂಗಾ ಪೂಜಾರ್ತಿ, ಸಂಪನ್ಮೂಲ ವ್ಯಕ್ತಿ ಸಿ.ಎನ್.ಬಿಲ್ಲವ, ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷ ಎ.ಆರ್.ವಲಿವುಲ್ಲಾ ಮತ್ತಿತರರು ಉಪಸ್ಥಿತರಿದ್ದರು. ಪೂರ್ವ ಪ್ರಾಥಮಿಕ ಶಾಲೆ ಶಿಕ್ಷಕಿ ಶಯನಾ ಪ್ರಾರ್ಥನೆ ಹಾಡಿದರು. ಜೊತೆ ಕಾರ್ಯದರ್ಶಿ ರಾಘವೇಂದ್ರ ಡಿ. ಸ್ವಾಗತಿಸಿದರು. ಶ್ರೀಧರ ಮೇಸ್ತ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕರ ಹೋರಾಟದ ಬಳಿಕ ಅಂತಿಮವಾಗಿ ರಾಷ್ಟ್ರೀಯ ಹೆದ್ದಾರಿಯಿಂದ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ನಗರಕ್ಕೆ ಪ್ರವೇಶ ದೊರೆತಿದೆ. ಬೊಬ್ಬರ್ಯನಕಟ್ಟೆ ಜಂಕ್ಷನ್ ಬಳಿ ಚತುಷ್ಪಥ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಕುಂದಾಪುರ ನಗರ ಪ್ರವೇಶಿಸಲು ಶನಿವಾರ ತಾಲೂಕು ಆಡಳಿತ ಅವಕಾಶ ನೀಡಿದೆ. ಚತುಷ್ಪಥ ಕಾಮಗಾರಿಯ ಪ್ಲೈಓವರ್ ನಿರ್ಮಾಣ ಆರಂಭ ಆದಾಗಲಿಂದಲೂ ಕುಂದಾಪುರ ನಗರಕ್ಕೆ ಪ್ರವೇಶ ಪಡೆಯಲು ಹಂಗಳೂರಿನಿಂದಲೇ ಸರ್ವಿಸ್ ರೋಡಿಗೆ ತೆರಳಬೇಕಾಗಿತ್ತು. ನಾಗರಿಕರಿಗೂ ಇದರಿಂದ ಸಾಕಷ್ಟು ಅನಾನುಕೂಲ ಎದುರಾಗಿತ್ತು. ಅದಕ್ಕಾಗಿ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿಯೇ ಪ್ಲೈಓವರ್ ಚತುಷ್ಪಥ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಪ್ರವೇಶ ಕಲ್ಪಿಸಬೇಕೆಂದು ಕುಂದಾಪುರದ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು, ಹಾಗೂ ಪುರಸಭೆ ಹೋರಾಟ ನಡೆಸಿಕೊಂಡು ಬಂದಿದ್ದವು. ಪುರಸಭೆಯ ನಿಯೋಗ ಹಾಗೂ ಸಾರ್ವಜನಿಕರು ಕೇಂದ್ರ ಕೃಷಿಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಗೆ ಪ್ರತ್ಯೇಕ ಮನವಿ ಸಲ್ಲಿಸಿದ್ದರು. ಬಳಿಕ ಸಚಿವರು ಉಡುಪಿ ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿದ್ದರು. ಆದೇಶಕ್ಕೆ ಸ್ಪಂದಿಸಿದ ಜಿಲ್ಲಾಡಳಿತವು ಸ್ಥಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವಿ.ವಿ.ವಿ ಮಂಡಳಿ (ರಿ) ಹೆಮ್ಮಾಡಿ ಇದರ ಸಾಮಾನ್ಯ ಸಭೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರನ್ನು ಪದನಿಮಿತ್ತ ನಾಮ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ. ಗಣೇಶ ಮೊಗವೀರ ಅವರು ಸಮರ್ಪಣಾ ಎಜುಕೇಶನ್ ಟ್ರಸ್ಟ್ (ರಿ) ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಚಾಂಪಿಯನ್ಸ್ ಆಗಿ ಹೊರಹೊಮ್ಮುವುರೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 61 ಕೆ.ಜಿ ವಿಭಾಗದಲ್ಲಿ ನಿಶ್ಚಲ್ ಫಿಲಿಪ್ ಬೆಳ್ಳಿ ಪದಕ, 65 ಕೆ.ಜಿ ವಿಭಾಗದಲ್ಲಿ ಕ್ರಮವಾಗಿ ಅನುಲ್ ಚಿನ್ನದ ಪದಕ ಹಾಗೂ ಡೆನ್ಜಿಲ್ ಡಯಸ್ ಬೆಳ್ಳಿಯ ಪದಕ, 70ಕೆ.ಜಿ ಮೇಲ್ಪಟ್ಟ ವಿಭಾಗದಲ್ಲಿ ಸೂರಜ್ ಡಯಾಸ್ ಕಂಚಿನ ಪದಕ, 74 ಕೆ.ಜಿ.ವಿಭಾಗದಲ್ಲಿ ಹರ್ಷ ಬೆಳ್ಳಿಯ ಪದಕ, 79 ಕೆ.ಜಿ.ವಿಭಾಗದಲ್ಲಿ ಶ್ರೀನಿಧಿ ಶೆಟ್ಟಿ ಚಿನ್ನದ ಪದಕ, 86 ಕೆ.ಜಿ.ವಿಭಾಗದಲ್ಲಿ ಪುನಿತ್ ಕಂಚಿನ ಪದಕ, 92 ಕೆ.ಜಿ.ವಿಭಾಗದಲ್ಲಿ ಆರ್ಯ ಬೆಳ್ಳಿಯ ಪದಕ, 92 ಕೆ.ಜಿ.ವಿಭಾಗದಲ್ಲಿ ಗಣೇಶ ಕಂಚಿನ ಪದಕ ,97 ಕೆ.ಜಿ.ವಿಭಾಗದಲ್ಲಿ ಕ್ರಮವಾಗಿ ಚೇತನ್ ಖಾರ್ವಿ ಚಿನ್ನದ…
ಕುಂದಾಪ್ರ ಡಾಟ್ ಕಾಂ ಸುದ್ದಿ,ಕುಂದಾಪುರ: ಮರವಂತೆ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ವಿಶೇಷ ಗ್ರಾಮಸಭಾ ಅಧಿವೇಶನ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ ನಡೆಯಿತು. ಘನ ಮತ್ತು ದ್ರವ ಸಂಪನ್ಮೂಲ ಘಟಕದ ಕಾರ್ಯಕರ್ತರು ಪರಿಸರ ಸ್ವಚ್ಚತೆ ಮಾಡಿದರು. ಪ್ರೌಢಶಾಲೆಯಲ್ಲಿ ನಡೆದ ಗ್ರಾಮಸಭಾ ಅಧಿವೇಶನದಲ್ಲಿ ಕಾರ್ಯದರ್ಶಿ ದಿನೇಶ ಶೇರುಗಾರ್ ಸ್ವಚ್ಛತೆ ಮತ್ತು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಗ್ರಾಮ ಸಂಕಲ್ಪ ಪ್ರತಿಜ್ಞೆ ಬೋಧಿಸಿದರು. ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷ ಲೋಕೇಶ ಖಾರ್ವಿ, ಸದಸ್ಯರಾದ ಎಂ. ವಿನಾಯಕ ರಾವ್, ಸುಜಾತಾ, ನಾಗರಾಜ ಪಟಗಾರ್, ಕರುಣಾಕರ ಆಚಾರ್, ಸುಧಾಕರ ಆಚಾರ್, ಕಿಶನ್ ಪೂಜಾರಿ, ಮಾಜಿ ಅಧ್ಯಕ್ಷರಾದ ಅನಿತಾ ಆರ್. ಕೆ, ಎಸ್. ಜನಾರ್ದನ, ಸಾಧನಾ ಕಾರ್ಯದರ್ಶಿ ದೇವಿದಾಸ ಶ್ಯಾನುಭಾಗ್, ಸದಸ್ಯರಾದ ಎಂ. ಅಣ್ಣಪ್ಪ ಬಿಲ್ಲವ, ಎಂ. ಶಂಕರ ಖಾರ್ವಿ, ನಾಗೇಶ ರಾವ್, ಸೋಮಯ್ಯ ಬಿಲ್ಲವ, ಮಂಜು ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ಸರ್ವೋತ್ತಮ ಭಟ್, ಸೀತಾರಾಮ, ತ್ಯಾಜ್ಯ ಸಂಪನ್ಮೂಲ ಘಟಕದ ಮೇಲ್ವಿಚಾರಕಿ ಸುನೀತಾ, ಶಿಕ್ಷಕರು, ವಿದ್ಯಾರ್ಥಿಗಳು ಪ್ರತಿಜ್ಞೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪುರಾಣ ಪ್ರಸಿದ್ಧ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಅಂಗವಾಗಿ ಚಂಡಿಕಾ ಹವನ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಶುಕ್ರವಾರ ನಡೆಯಿತು. ಬೆಳಿಗ್ಗೆ 8 ಗಂಟೆಗೆ ದೇವತಾ ಪ್ರಾರ್ಥನೆಯೊಂದಿಗೆ ಚಂಡಿಕಾ ಹವನದ ಧಾರ್ಮಿಕ ಅನುಷ್ಠಾನಗಳು ಪ್ರಾರಂಭಗೊಂಡು ಮಧ್ಯಾಹ್ನ ಯಜ್ಞದ ಪೂರ್ಣಾಹುತಿಯೊಂದಿಗೆ ಚಂಡಿಕಾ ಹವನ ಸಂಪನ್ನಗೊಂಡಿತು. ಹರಕೆ ಸೀರೆಗಳ ಏಲಂ, ಭಜನಾ ಕಾರ್ಯಕ್ರಮ, ಬಳಿಕ ಶ್ರೀದೇವಿಗೆ ಮಹಾಪೂಜೆ, ಮಹಾಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನದ ಅರ್ಚಕರು, ಪುರೋಹಿತರು, ದೇವಳದ ಆಡಳಿತ ಮಂಡಳಿ ಸದಸ್ಯರು, ಕುಳಾವಿ ಭಜಕರು, ಸಮಾಜಬಾಂಧವರು, ಭಕ್ತರು ಉಪಸ್ಥಿತರಿದ್ದರು.
ಕಾಂತಾರ, ಗುರುಶಿಷ್ಯರು ಎರಡು ಅತ್ಯುತ್ತಮ ಸಿನೆಮಾಗಳಲ್ಲಿ ಅಭಿನಯಿಸಿದ ಬಗ್ಗೆ ಖುಷಿಯಿದೆ – ಯೋಗೀಶ್ ಬಂಕೇಶ್ವರ Watch interview on 10th Oct 5:45pm
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಕೋಟ ಶಿವರಾಮ ಕಾರಂತ ಜನ್ಮೋತ್ಸವ ಕಾರ್ಯಕ್ರಮ ಈ ಭಾರಿ ಕೋಟದ ರಾಷ್ಟ್ರೀಯ ಹೆದ್ದಾರಿ ಶ್ರೀ ಶಾಂಭವಿ ಶಾಲೆಯ ಮೈದಾನದಲ್ಲಿ ನಡೆಯಲಿದ್ದು, ಸಭಾ ವೇದಿಕೆ ನಿರ್ಮಾಣ ಸೇರಿದಂತೆ ಪೂರ್ವ ಸಿದ್ಧತೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ವೀಕ್ಷಿಸಿದರು. ಅಕ್ಟೋಬರ್ 10ರಂದು ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕಾರಂತರ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಈ ಬಾರಿ ಪ್ರಶಸ್ತಿಗೆ ಕಲಾವಿದ ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ. ಸುಮಾರು 2000 ಮಂದಿ ಕುಳಿತು ವೀಕ್ಷಿಸಬಹುದಾದ ವಿಶಾಲ ಸುಸಜ್ಜಿತ ಸಭಾ ವೇದಿಕೆ ಸಿದ್ಧತೆ ಮಾಡಲಾಗುತ್ತಿದ್ದು, ಕಾರ್ಯಕ್ರಮದ ನಂತರ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವಿದ್ದು, ಅಪಾರ ಜನ ಸೇರುವ ನಿರೀಕ್ಷೆ ಇದೆ. ಅಕ್ಟೋಬರ್ 10ರ ಮಧ್ಯಾಹ್ನ 3:30ಕ್ಕೆ ಕೋಟತಟ್ಟು ಗ್ರಾಮ ಪಂಚಾಯತ್ ನಿಂದ ಪ್ರಶಸ್ತಿ ಪುರಸ್ಕತರೊಂದಿಗೆ ಸಾಂಸ್ಕೃತಿಕ ಮೆರವಣಿಗೆ…
