ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ. ಕುಂದಾಪುರ ಉಡುಪಿ ಜಿಲ್ಲೆ, ಯುವ ಮನಸ್ಸುಗಳಿಗೆ ಸ್ಫೂರ್ತಿ, ನೊಂದವರಿಗೆ ನೆರವಿನ ದಾರಿ ದೀಪ ಧ್ಯೇಯೋದ್ದೇಶದಿಂದ ಕಳೆದ ಹತ್ತು ವರ್ಷಗಳಿಂದ 200ಕ್ಕೂ ಹೆಚ್ಚು ಸೇವಾ ಯೋಜನೆ, ಅನಾರೋಗ್ಯ ಪೀಡಿತರಿಗೆ ಸಹಾಯ ಧನ, ಲಾಕ್ ಡೌನ್ ಸಮಯದಲ್ಲಿ ಒಂದು ಹೊತ್ತಿನ ಅನ್ನದಾನ ಸೇವೆ, ಅಂಗನವಾಡಿ, ಶಾಲೆಗಳಿಗೆ ನೆರವು, ದೇವರ ಮಕ್ಕಳ ಆಶ್ರಮಗಳಿಗೆ ಮತ್ತು ನೆರೆಪೀಡಿತ ಪ್ರದೇಶಗಳಿಗೆ ಸಾಮಾಗ್ರಿ ವಿತರಣೆ, ರಕ್ತ ದಾನ ಮತ್ತು ರಕ್ತದಾನ ಶಿಬಿರ ಆಯೋಜನೆ ಹೀಗೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸಹಾಯ ಹಸ್ತ ಚಾಚುತ್ತಿರುವ ಸಾಮಾಜ ಸೇವಾ ಸಂಸ್ಥೆ ಹತ್ತು ವರ್ಷಗಳ ಸಾಮಾಜಿಕ ಪಯಣದಲ್ಲಿ ಜೈ ಕುಂದಾಪ್ರ ಸಮ್ಮಿಲನ 2026 ಹಾಗೂ ಅಭಿನಂದನಾ ಕಾರ್ಯಕ್ರಮ ಭಾನುವಾರ ಶ್ರೀ ಶಾಂತಮೂರ್ತಿ ಶನೀಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಿರಂತರವಾಗಿ ಸಮಾಜಮುಖಿ ಸೇವೆ ತೊಡಗಿಕೊಂಡಿರುವ ಸಂಸ್ಥೆ ಸಂಚಲನ ರಿ. ಬ್ರಹ್ಮಾವರ ಇದರ ಅಧ್ಯಕ್ಷರಾದ ನಂದಕಿಶೋರ್ ಹಾಗೂ ಜಾತ್ರೆಗಳಲ್ಲಿ ವಿಶೇಷ ವೇಷ ಧರಿಸಿ ದೇಣಿಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ “ಬೆಳಕು – ಸರಣಿ 1” ಕಾರ್ಯಕ್ರಮದ ಅಂಗವಾಗಿ ಎಸ್ಎಸ್ಸಿ (SSC) ಅಭಿವಿನ್ಯಾಸ ಕಾರ್ಯಕ್ರಮವನ್ನು ಜುಲೈ 31ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಬ್ರಹ್ಮಾವರ ಪೊಲೀಸ್ ಠಾಣೆಯ ಪ್ರೊಬೇಷನರಿ ಪಿಎಸ್ಐ ಆಶ್ರಿತಾ ಎ. ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಎಸ್ಎಸ್ಸಿ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಹಾಗೂ ವಿವಿಧ ವೃತ್ತಿ ಅವಕಾಶಗಳ ಕುರಿತು ಮಾರ್ಗದರ್ಶನ ನೀಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಶಿಸ್ತು, ಸಮಯ ನಿರ್ವಹಣೆ, ನಿರಂತರ ಅಧ್ಯಯನ ಹಾಗೂ ಆತ್ಮವಿಶ್ವಾಸ ಅತ್ಯಂತ ಮುಖ್ಯವೆಂದು ಅವರು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕ ಶರತ್ ಕುಮಾರ್ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ವಿ. ಭಟ್ ವಂದಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ತನುಜಾ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ನಲ್ಲಿ ಪ್ಲೇ ಸ್ಕೂಲ್, ಎಲ್.ಕೆ.ಜಿ ಹಾಗೂ ಯು.ಕೆ.ಜಿ ಮಕ್ಕಳು ಬ್ಲೂ ಕಲರ್ ಡೇಯನ್ನು ಆಚರಿಸಿದರು. ಮಕ್ಕಳಲ್ಲಿ ಬಣ್ಣಗಳನ್ನು ಗುರುತಿಸಿ ನೆನಪಿನಲ್ಲಿಟ್ಟುಕೊಳ್ಳುವ ಕೌಶಲ್ಯವನ್ನು ವೃದ್ದಿಸುವ ಸಲುವಾಗಿ ಪ್ರತಿ ತಿಂಗಳು ವಿವಿಧ ಬಣ್ಣಗಳ ದಿನಾಚರಣೆಯನ್ನು ಮಾಡಿ ಮಕ್ಕಳಿಗೆ ಬಣ್ಣಗಳ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಆ ಪ್ರಯುಕ್ತ ವಿದ್ಯಾರ್ಥಿಗಳು ಬ್ಲೂ ಬಣ್ಣದ ವಸ್ತುಗಳ ಅಲಂಕಾರವನ್ನು ಮಾಡಿ, ಜೊತೆಗೆ ಬಣ್ಣದ ವಿಶೇಷತೆಗಳನ್ನು ತಿಳಿದು ವಿದ್ಯಾರ್ಥಿಗಳು ನಲಿದಾಡಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬ್ಲೂ ಬಣ್ಣದ ಉಡುಗೆಗಳನ್ನು ತೊಟ್ಟು ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ : ಸಮಾಜದ ಮುಖ್ಯವಾಹಿನಿಯಿಂದ ದೂರ ಉಳಿದು, ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಮೂಲನಿವಾಸಿಗಳ ದೈನಂದಿನ ಜೀವನಕ್ಕೆ ಆಸರೆಯಾಗುವ ಉದ್ದೇಶದಿಂದ ಮತ್ತು ಸಮಾಜದ ಅತ್ಯಂತ ಹಿಂದುಳಿದ ವರ್ಗಗಳ ಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ರೋಟರಿ ಸಂಸ್ಥೆಯು ಈ ಮಾನವೀಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ರೋಟರಿ ಕ್ಲಬ್ ಗಂಗೊಳ್ಳಿ ಇದರ ಅಧ್ಯಕ್ಷೆ ಮಾಲಾಶ್ರೀ ಖಾರ್ವಿ ಹೇಳಿದರು. ಅವರು ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಅಂತರಾಷ್ಟ್ರೀಯ ಮೂಲನಿವಾಸಿಗಳ ದಿನದ ಅಂಗವಾಗಿ ಸ್ಥಳೀಯ ಬಡ ಮೂಲನಿವಾಸಿ ಕುಟುಂಬಕ್ಕೆ ಅಗತ್ಯ ದಿನಬಳಕೆಯ ಆಹಾರ ಧಾನ್ಯಗಳ ಕಿಟ್ ಹಾಗೂ ಆರ್ಥಿಕ ಧನಸಹಾಯವನ್ನು ವಿತರಿಸಿ ಮಾತನಾಡಿದರು. ಗಂಗೊಳ್ಳಿ ರೋಟರಿಯ ಸದಸ್ಯ ಉಮೇಶ್ ಮೇಸ್ತ, ಪ್ರದೀಪ ಡಿ. ಕೆ., ಚಂದ್ರಕಲಾ ತಾಂಡೇಲ, ನಿವೃತ್ತ ಶಿಕ್ಷಕ ದೇವು ಎಚ್., ರೋಟರಿ ಸದಸ್ಯರು, ಇನ್ನಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಕ್ರೀಡೆಯ ಮೂಲಕ ಯುವಜನರನ್ನು ಆರೋಗ್ಯಕರ ಚಟುವಟಿಕೆಗೆ ಕೊಂಡೊಯ್ಯುವುದೇ ನಮ್ಮ ಮುಖ್ಯ ಉದ್ದೇಶ. ಗಾಂಧಿ ಮೈದಾನದಲ್ಲಿ ನಿರ್ಮಾಣವಾಗಿರುವ ಈ ವಾಲಿಬಾಲ್ ಕೋರ್ಟ್ನಿಂದ ಕುಂದಾಪುರದ ಯುವ ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಪಡೆಯಲು ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆಯಲಿದೆ. ಸ್ಥಳೀಯ ಕ್ರೀಡಾ ಸಂಘಗಳು ಮತ್ತು ಯುವಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು” ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಕರೆ ನೀಡಿದರು. ಅವರು ನಗರದ ಗಾಂಧಿ ಮೈದಾನದಲ್ಲಿ ನೂತನವಾಗಿ ನಿರ್ಮಿಸಲಾದ ವಾಲಿಬಾಲ್ ಕೋರ್ಟ್ನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕುಂದಾಪುರ ಫ್ರೆಂಡ್ಸ್ನ ಗೌರವಾಧ್ಯಕ್ಷ ರಾಜೇಶ್ ಕಾವೇರಿ ಅವರು ಸ್ವಾಗತಿಸಿ, ಮಾತನಾಡಿ, “ಇಂತಹ ಕ್ರೀಡಾ ಮೂಲಸೌಕರ್ಯಗಳು ನಮ್ಮ ಊರಿನ ಯುವಕರ ಪ್ರತಿಭೆಯನ್ನು ಹೊರತರಲು ಸಹಕಾರಿಯಾಗಲಿವೆ. ಮುಂದೆಯೂ ಇದೇ ರೀತಿ ಯುವಕರ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು” ಎಂದು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಕುಂದಾಪುರ ಗ್ಯಾರಂಟಿ ಸಮಿತಿ ಅಧ್ಯಕ್ಷ ಹರಿಕೃಷ್ಣ ಶೆಟ್ಟಿ ಕಾನ್ಮಕ್ಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಟಕ ಸರ್ಕಾರದ ‘ವಿಷನ್ ಕಮಿಟಿ’ಯ (ದೃಷ್ಟಿ ಆರೋಗ್ಯ ಸಮಿತಿ) ಅಧ್ಯಕ್ಷರನ್ನಾಗಿ ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಐ ಹಾಸ್ಪಿಟಲ್ಸ್ ಸಮೂಹ ಅಧ್ಯಕ್ಷರು ಮತ್ತು ವೈದ್ಯಕೀಯ ನಿರ್ದೇಶಕರಾದ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರನ್ನು ನೇಮಿಸಲಾಗಿದೆ. ಇದು ನೇತ್ರವಿಜ್ಞಾನ ಕ್ಷೇತ್ರದಲ್ಲಿ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರ ಅಪಾರ ಕೊಡುಗೆ ಹಾಗೂ ರಾಜ್ಯಾದ್ಯಂತ ಕಣ್ಣಿನ ಆರೈಕೆ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಅವರ ನಿರಂತರ ಬದ್ಧತೆಗೆ ಸಂದ ಮಹತ್ವದ ಮನ್ನಣೆಯಾಗಿದೆ. ವಿಷನ್ ಕಮಿಟಿಯ ಅಧ್ಯಕ್ಷರಾಗಿ, ದೃಷ್ಟಿ ಆರೋಗ್ಯ, ತಡೆಗಟ್ಟಬಹುದಾದ ಅಂಧತ್ವದ ನಿವಾರಣೆ, ಕಣ್ಣಿನ ಆರೈಕೆ ಸೇವೆಗಳ ಲಭ್ಯತೆ, ಮಾನವ ಸಂಪನ್ಮೂಲ, ಮೂಲಸೌಕರ್ಯ ಮತ್ತು ಸುಧಾರಿತ ನೇತ್ರ ಚಿಕಿತ್ಸಾ ಸೌಲಭ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಕರ್ನಾಟಕ ಸರ್ಕಾರಕ್ಕೆ ತಜ್ಞರ ಮಾರ್ಗದರ್ಶನ ಮತ್ತು ಶಿಫಾರಸುಗಳನ್ನು ನೀಡುವಲ್ಲಿ ಡಾ. ಕೃಷ್ಣಪ್ರಸಾದ್ ಕೂಡ್ಲು ಪ್ರಮುಖ ಪಾತ್ರ ವಹಿಸುವುದನ್ನು ಮುಂದುವರಿಸಲಿದ್ದಾರೆ. ಡಾ. ಕೃಷ್ಣಪ್ರಸಾದ್ ಕೂಡ್ಲು ಅವರು ಹಲವು ವರ್ಷಗಳಿಂದ ಸಮುದಾಯ ಆಧಾರಿತ ಕಣ್ಣಿನ ಆರೈಕೆ ಕಾರ್ಯಕ್ರಮಗಳಲ್ಲಿ, ವಿಶೇಷವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕರಕುಶಲ ಕಲೆಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ಆರ್ಥಿಕವಾಗಿಯು ನಮ್ಮನ್ನು ಸಬಲರನ್ನಾಗಿಸಲು ಸಹಾಯ ಮಾಡುತ್ತದೆ ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಭಿಪ್ರಾಯಪಟ್ಟರು. ಅವರು ಇಲ್ಲಿನ ಎಸ್.ವಿ ಕಾಮರ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಕ್ರೋಷೆ ತರಬೇತಿ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ಶಿಕ್ಷಕಿ ಜುನಿತಾ ಮಚಾದೋ ಮಾತನಾಡಿ, ಈ ಆಧುನಿಕ ಯುಗದಲ್ಲಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಕಲೆಗಳನ್ನು ಕಲಿಯುವುದು ಸುಲಭವಾಗುತ್ತದೆ. ಆಸಕ್ತಿ ಮತ್ತು ಶ್ರದ್ಧೆ ಇದಕ್ಕೆ ಅಗತ್ಯ ಎಂದು ಹೇಳಿದರು. ಉಪನ್ಯಾಸಕಿ ಸುಗುಣ ಆರ್ ಕೆ ಶುಭ ಹಾರೈಸಿದರು. ಎಸ್ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್. ಗಂಗೊಳ್ಳಿ ಪ್ರಾಸ್ತಾವಿಕ ಮಾತನ್ನಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಅಂಕಿತಾ ಖಾರ್ವಿ ಮತ್ತು ಸೃಷ್ಟಿ ಖಾರ್ವಿ ಉಪಸ್ಥಿತರಿದ್ದರು. ಸಾನಿಕ ಎಸ್. ಪೂಜಾರಿ ಸ್ವಾಗತಿಸಿದರು. ವಿದ್ಯಾರ್ಥಿನಿ ಅಂಕಿತ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. 1994- 96ನೇ ಸಾಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಂದ ಕೊಡಲ್ಪಡುವ 11ನೇ ವರ್ಷದ ಹದಿನೈದು ಸಾವಿರ ರೂಪಾಯಿ ನಗದು ಪ್ರೋತ್ಸಾಹ ಧನದ ಪ್ರತಿಭಾ ಪುರಸ್ಕಾರವನ್ನು ಕಳೆದ ಸಾಲಿನಲ್ಲಿ ವಿಜ್ಞಾನ ವಿಭಾಗದಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿನಿ ಮನ್ವಿತ ಅವಳಿಗೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ. ಅಧ್ಯಕ್ಷತೆ ವಹಿಸಿದ್ದರು. 1994-96 ಸಾಲಿನ ವಿದ್ಯಾರ್ಥಿಗಳ ಪ್ರತಿನಿಧಿಯಾಗಿ ಡಾ.ರಾ ಘವೇಂದ್ರ ಶೆಟ್ಟಿ ಉಪಾಧ್ಯಕ್ಷರು ರಿಸರ್ಚ್ ಡೆವಲಪ್ಮೆಂಟ್ ನವಿತಾಸ್ ಲೈಫ್ ಸೈನ್ಸ್ ಮಣಿಪಾಲ ಅವರು ಪ್ರೋತ್ಸಾಧನವನ್ನು ವಿತರಿಸಿದರು. ವಿದ್ಯಾರ್ಥಿನಿ ಸಿಂಚನ ಪ್ರಾರ್ಥಿಸಿದರು ವಿದ್ಯಾರ್ಥಿನಿ ತ್ರಿಶಾ ಸ್ವಾಗತಿಸಿದರು . ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್. ಅವರು ಕಾರ್ಯಕ್ರಮವನ್ನು ನಿರೂಪಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಸಂದೀಪ್ ಧನ್ಯವಾದ ಸಮರ್ಪಿಸಿದರು. ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಾವುದೇ ಅಬ್ಬರದ ಪ್ರಚಾರವಿಲ್ಲದೇ ಜನಮೆಚ್ಚುವ ಕೆಲಸ ಮಾಡುತ್ತಿರುವ ಆಸರೆ ಸಂಸ್ಥೆಯ ಕಾರ್ಯ ಇತರರಿಗೆ ಮಾದರಿ. ಗ್ರಾಮೀಣ ಪ್ರದೇಶದಲ್ಲಿರುವ ಸಂಘ-ಸಂಸ್ಥೆಗಳು ಆರ್ಥಿಕ ದುರ್ಬಲರ ಪಾಲಿಗೆ ಸಂಜೀವಿನಿಯಾಗಿದೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಲಿ ಹೇಳಿದರು. ಅವರು ಆಸರೆ ಟ್ರಸ್ಟ್ ವಕ್ವಾಡಿ ವತಿಯಿಂದ ಭಾನುವಾರ ವಕ್ಕಾಡಿಯ ಶ್ರೀ ಹಳೆಯಮ್ಮ ದೇವಿ ಸಭಾಭವನದಲ್ಲಿ ಆಯೋಜಿಸಲಾದ ವಿದ್ಯಾರ್ಥಿವೇತನ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದುಬ್ಬಾ ಪಾರ್ಚೂನ್ ಗ್ರೂಫ್ ಆಫ್ ಹೊಟೇಲ್ನ ಆಡಳಿತ ನಿರ್ದೇಶಕ ಪ್ರವೀಣ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿವೇತನವನ್ನು ವಿತರಿಸಿ, ಟ್ರಸ್ಟ್ನ ಕಾರ್ಯವೈಖರಿಯನ್ನು ಪ್ರಶಂಸಿದರಲ್ಲದೇ ಊರಿನ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ನೆರವನ್ನು ನೀಡಲು ಸದಾ ಬದ್ಧನಾಗಿದ್ದೇನೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಸರೆ ಟ್ರಸ್ಟ್ ವಕ್ವಾಡಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಸಣಗಲ್ಲು ಮನೆ ವಹಿಸಿದ್ದರು. ಕಟೀಲು ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ದಿಕ್ಕೂಚಿ ಭಾಷಣ ಮಾಡಿದರು. ಹೊನ್ನಾವರದ ಶ್ರೀ ದೇವಿ ಆಸ್ಪತ್ರೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಜೀವಿನಿ ಸಂಘಗಳಲ್ಲಿನ ಆರ್ಥಿಕ ಅವ್ಯವಹಾರದ ತನಿಖೆಯನ್ನು ನಡೆಸಲು ಸರ್ಕಾರ ಕೂಡಲೇ ಒಂದು ವಿಶೇಷ ತನಿಖಾ ತಂಡವನ್ನು ರಚನೆ ಮಾಡಿ ಅವರ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ. ಉಡುಪಿ ಜಿಲ್ಲೆಯ ಸಂಜೀವಿನಿ ಸಂಘಗಳಲ್ಲಿನ ಲಕ್ಷಾಂತರ ರೂಪಾಯಿ ಹಣ ದುರುಪಯೋಗ ಒಂದು ಗಂಭೀರ ಪ್ರಕರಣ. ಈಗ ಮೂರು ಗ್ರಾಮ ಪಂಚಾಯತುಗಳಲ್ಲಿ ಲಕ್ಷಾಂತರ ರೂಪಾಯಿ ಹಣ ದುರುಪಯೋಗವಾಗಿರುವುದು ದೃಢಪಟ್ಟು ಸಂಬಂಧಿತರ ಮೇಲೆ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ. ಆದರೆ ಸಾರ್ವಜನಿಕ ವಲಯದ ಅನುಮಾನವೆಂದರೆ ಉಡುಪಿ ಜೆಲ್ಲೆಯ ಹೆಚ್ಚಿನ ಗ್ರಾಮ ಪಂಚಾಯತುಗಳ ಸಂಜೀವಿನಿ ಸಂಘಗಳಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ಆಗಿರುವ ಸಾಧ್ಯತೆಯಿದೆ. ಆದುದರಿಂದ ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಜಿಲ್ಲೆಯ ಎಲ್ಲಾ ಸಂಜೀವಿನಿ ಸಂಘಗಳ ದಾಖಲೆ, ಆರ್ಥಿಕ ವಹಿವಾಟು ಇತ್ಯಾದಿಗಳ ಸಮಗ್ರ ತನಿಖೆಗೆ ಒಂದು ವಿಶೇಷ ತಂಡವನ್ನು ರಚಿಸಬೇಕು.…
