Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತ್ರಾಸಿಯಲ್ಲಿ ಉಡುಪಿ ಮೂಲದ ವ್ಯಕ್ತಿಗಳು ವೇಶ್ಯಾವಾಟಿಕೆಯಲ್ಲಿ ತೊಡಗಿಕೊಂಡಿದ್ದ ಮಾಹಿತಿ ಆಧರಿಸಿ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು ಸಂತ್ರಸ್ತೆ ಮಹಿಳೆಯನ್ನು ರಕ್ಷಿಸಿ, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಘಟನೆ ಸೋಮವಾರ ನಡೆದಿದೆ. ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಆರೋಪದಲ್ಲಿ ಉಡುಪಿ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ಶರತ್‌ ಯಾನೆ ಮೊಹಮ್ಮದ್‌ ಫಯಾಜ್‌ ಎಂಬಾತ ವಿವಿಧ ರೆಸಾರ್ಟ್‌ಗಳಿಗೆ ಪುರುಷರೊಂದಿಗೆ ಮಹಿಳೆಯರನ್ನು ಕಳಹಿಸಿದ್ದ. ಗಂಗೊಳ್ಳಿ ಠಾಣಾ ವ್ಯಾಪ್ತಿಯ ತ್ರಾಸಿ ಬೀಚ್ ಬಳಿಯಿರುವ ರೆಸಾರ್ಟ್‌ವೊಂದಕ್ಕೂ ಮಹಿಳೆಯನ್ನು ಪುಸಲಾಯಿಸಿ ವ್ಯಕ್ತಿಯೋರ್ವನೊಂದಿಗೆ ಕಳುಹಿಸಿದ್ದ. ಈ ಬಗ್ಗೆ ಸಿಕ್ಕ ಖಚಿತ ವರ್ತಮಾನದಂತೆ ದಾಳಿ ನಡೆಸಿದ ಬೈಂದೂರು ಸಿಪಿಐ ನೇತೃತ್ವದ ಪೊಲೀಸರ ತಂಡ ಸಂತ್ರಸ್ತೆ ಮಹಿಳೆಯನ್ನು ರಕ್ಷಿಸಿ ಸಖಿ ಕೇಂದ್ರಕ್ಕೆ ರವಾನಿದ್ದಾರೆ. ಬೈಂದೂರು ಪೊಲೀಸ್‌ ವೃತ್ತನಿರೀಕ್ಷಕರಾದ ನಿಲೇಶ್‌ ಚೌವ್ಹಾಣ, ಗಂಗೊಳ್ಳಿ ಪಿಎಸ್ಐ ಪವನ್‌ ನಾಯಕ್‌ ಹಾಗೂ ಮಹಿಳಾ ಸಿಬ್ಬಂದಿಗಳ ಜೊತೆ ಆ.25 ರಂದು ದಾಳಿ ನಡೆಸಿದ್ದು ರೆಸಾರ್ಟ್ ರೂಮಿನಲ್ಲಿ ಮಹಿಳೆ ಹಾಗೂ ಇನ್ನೋರ್ವ ಪುರುಷ ಕಂಡುಬಂದಿದ್ದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ರಿ. ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ ಚಿತ್ರದ್ರುರ್ಗ ಇವರ ಸಹಯೋಗದೊಂದಿಗೆ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ, ಅನುಭವ ಮಂಟಪ, ಚಿತ್ರದ್ರುರ್ಗ ಇಲ್ಲಿ ನಡೆದ 18ರ ವಯೋಮಾನದ ಟ್ರೇಡಿಶನಲ್ ಗ್ರೂಪ್ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ Leg Balance Individuals ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ  ಶ್ರೀನಿಧಿ ಪ್ರಕಾಶ್ ಗೌಡ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ  ಆಯ್ಕೆಯಾಗಿದ್ದಾರೆ.  ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸೌಜನ್ಯಳ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು ಹಾಗೇ ಅತ್ಯಾಚಾರ ನಡೆಸಿದವರಿಗೆ ಕಾನೂನಿನ ಮೂಲಕ ಶಿಕ್ಷೆಯಾಗಬೇಕು ಎಂದು ಪ್ರಾರ್ಥಿಸಿ ಕೋಟದ ಅಮೃತೇಶ್ವರೀ ದೇಗುಲದಲ್ಲಿ ಸೌಜನ್ಯ ಹೋರಾಟ ಸಮಿತಿ ವಿಶೇಷ ಪೂಜೆ ಸಲ್ಲಿಸಿತು. ಈ ವೇಳೆ ಹೋರಾಟ ಸಮಿತಿಯ ಪ್ರಮುಖರಾದ ಕೋಟ ದಿನೇಶ್ ಗಾಣಿಗ ಈ ವರೆಗೆ ಸೌಜನ್ಯಾಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಸಾಕಷ್ಟು ಹೋರಾಟಗಳು ನಡೆಸಿದ್ದೇವೆ, ಆದರೆ ಮುಂದಿನ ನಮ್ಮ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು ಸೌಜನ್ಯಳ ಅತ್ಯಾಚಾರಗೈದ ಆರೋಪಿಗಳು ಹಾಗೂ ಅವರ ಪರವಾಗಿ ನಿಂತವರು ಸರ್ವನಾಶವಾಗಬೇಕೆಂದು ರಾಜ್ಯದ 25ಸಾವಿರ ದೇಗುಲದಲ್ಲಿ ಏಕಕಾಲದಲ್ಲಿ ವಿಶೇಷವಾಗಿ ಪೂಜೆ ಸಲ್ಲಿಸಿದ್ದೇವೆ ಎಂದರು. ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಸ್ಥಳೀಯರಾದ ಸಚಿನ್ ಶ್ರೀಯಾನ್ ಪಾಂಡೇಶ್ವರ, ಭರತ್ ಗಾಣಿಗ, ವಿಜಯ ಪೂಜಾರಿ, ಸಂದೀಪ್ ಕದ್ರಿಕಟ್ಟು, ಶ್ರೀನಿವಾಸ ಪುತ್ರನ್, ಯೋಗೇಂದ್ರ ಪುತ್ರನ್, ಕೋಟ ಕೇಶವ ಆಚಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೋಟರಿ ಸಂಸ್ಥೆಗಳಲ್ಲಿ ಸದಸ್ಯರನ್ನು ಹೆಚ್ಚಿಸಿಕೊಂಡು ಸಂಸ್ಥೆಗಳನ್ನು ಬಲಪಡಿಸಬೇಕು. ರೋಟರಿ ಸಂಸ್ಥೆಗಳಲ್ಲಿ ಸದಸ್ಯರ ಸಂಖ್ಯೆ ಹೆಚ್ಚಾದರೆ ಅಂತರಾಷ್ಟ್ರೀಯ ರೋಟರಿಯ ಉದ್ದೇಶ ಸಫಲವಾಗುತ್ತದೆ. ಸಮಾಜಮುಖಿ ಮನುಕುಲದ ಸೇವೆ ಮಾಡಲು, ಮನುಕುಲದ ಕಾರ್ಯಕ್ರಮಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ರೋಟರಿ ಜಿಲ್ಲೆ 3182 ವಲಯ 1ರ ಅಸಿಸ್ಟೆಂಟ್ ಗವರ್ನರ್ ಐ. ನಾರಾಯಣ ಅಭಿಪ್ರಾಯಪಟ್ಟರು. ಅವರು ರೋಟರಿ ಕ್ಲಬ್ ಗಂಗೊಳ್ಳಿ ಇವರ ಆಶ್ರಯದಲ್ಲಿ ತ್ರಾಸಿಯ ಪ್ರೆಸ್ಟೀಜ್ ಪ್ಯಾಲೇಸ್‌ನಲ್ಲಿ ’ಜೋನಲ್ ಸೆಮಿನಾರ್ ಆನ್ ಮೆಂಬರ್‌ಶಿಪ್ ಡೆವಲಪ್‌ಮೆಂಟ್ ಎಂಡ್ ಪಬ್ಲಿಕ್ ಇಮೇಜ್ʼ ವಿಷಯದಲ್ಲಿ ನಡೆದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ರೋಟರಿಯ ಇತಿಹಾಸ, ಅದರ ಕಾರ್ಯಕ್ರಮಗಳು ಹಾಗೂ ಧ್ಯೇಯೋದ್ದೇಶಗಳ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿ ಅವರು ರೋಟರಿಯಲ್ಲಿ ಗಟ್ಟಿಯಾಗಿ ಉಳಿಯುವಂತೆ ಮಾಡಲು, ಉತ್ತಮ ನಾಯಕರಾಗಿ ಹೊರಹೊಮ್ಮುವಂತೆ ಮಾಡಿ ಮುಂದಿನ ದಿನಗಳಲ್ಲಿ ಈ ಸಮಾಜದ ಸೇವೆ ಮಾಡುವಂತಾಗಬೇಕು ಎಂಬ ಉದ್ದೇಶದಿಂದ ಕಾರ್ಯಾಗಾರ ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು. ರೋಟರಿ ಜಿಲ್ಲೆ 3182 ವಲಯ 2 ರ ಮಾಜಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ‘ವ್ಯಕ್ತಿಗಳು ಪುನಃ ಪುನಃ ಪರೀಕ್ಷೆಯಲ್ಲಿ ವಿಫಲರಾದಾಗ, ಜೀವನದಲ್ಲಿ ಸೋತಾಗ ಮಾನಸಿಕ ಸ್ಥೈರ್ಯ ತುಂಬುವಲ್ಲಿ‌ ಭಗವದ್ಗೀತೆಯಲ್ಲಿ ಹೇಳಿದ ವಾಸ್ತವಿಕ ಮೌಲ್ಯಗಳು‌ ಸಹಕಾರಿ. ಹಾಗೆಯೇ ಮಹಾಭಾರತ‌ ಮತ್ತು ರಾಮಾಯಣದಲ್ಲಾದ ಉತ್ತಮ ವಿಚಾರಗಳನ್ನು ನಮ್ಮ ದೈನಂದಿನ  ಜೀವನದಲ್ಲಿ ಅಳವಡಿಸಿಕೊಳ್ಳಬೇಕು  ಎಂದು ಖ್ಯಾತ ವಾಗ್ಮಿ‌‌‌ ಎನ್ಆರ್‌ ದಾಮೋದರ್ ಶರ್ಮಾ ತಿಳಿಸಿದರು. ಅವರು ಕುಂದಾಪುರದ‌ ಆರ್.‌ಎನ್. ಶೆಟ್ಟಿ‌ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಸ್ಕ್ರತ ಆಯೋಜಿಸಿದ ‘ಸಂಸ್ಕ್ರತೋತ್ಸವ – ಶ್ರಾವಣೀ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.ಕಾಲೇಜಿ‌ನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕ್ರತ ವಿಭಾಗದ ಮುಖ್ಯಸ್ಥರಾದ ರವಿ ಉಪಾಧ್ಯರವರು ಅತಿಥಿಗಳನ್ನು‌ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಥಮ ಪಿ.ಯು.ಸಿ ಯ ವರೇಣ್ಯ ಶರ್ಮಾ ವೇದಘೋಷ ಮೊಳಗಿಸಿದರು. ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿ ಗಾರ್ಗಿದೇವಿ ಭರತನಾಟ್ಯ ಪ್ರದರ್ಶನ ನೀಡಿದರು. ಧನ್ವಿ ಶೆಟ್ಟಿ ಮತ್ತು ತಂಡ ಪ್ರಾರ್ಥನೆ ಹಾಡಿದರು. ದ್ವಿತೀಯ ಪಿ.ಯು.ಸಿ ತರಗತಿಯ ಪೂರ್ವಿತಾ ಧನ್ಯವಾದ ಸಲ್ಲಿಸಿದರು. ದ್ವಿತೀಯ ಪಿ.ಯು.ಸಿ‌ ಯ‌‌ ಅಕ್ಷಯಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಮತ್ತು ಯುವ ರೆಡ್ ಕ್ರಾಸ್ ಘಟಕ ಹಾಗೂ ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಕಾರ್ಯಗಾರ ಇತ್ತೀಚಿಗೆ ನಡೆಯಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕಾಧ್ಯಕ್ಷರಾದ ಎಸ್. ಜಯಕರ ಶೆಟ್ಟಿ ಅವರು ರೆಡ್‌ಕ್ರಾಸ್ ಸಂಸ್ಥೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಯುವ ಜನತೆ ಆರೋಗ್ಯದ ಬಗ್ಗೆ ಗಮನ ವಹಿಸುವುದು, ಅಪಘಾತ ಮತ್ತು ಇತರೆ ತುರ್ತು ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳವುದರಿಂದ ಉತ್ತಮ ಸಮಾಜ ನಿರ್ಮಾಣದಲ್ಲಿ ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಡಾ. ಸೋನಿ ಡಿಕೋಸ್ಟ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ವಿದ್ಯಾರ್ಥಿಗಳಿಗೆ ಹಾವು ಕಚ್ಚಿದಾಗ, ಬೆಂಕಿ ಅಪಘಾತವಾದಾಗ ಹಾಗೂ ಹೃದಯಘಾತವಾದಾಗ ಯಾವ ರೀತಿ ಪ್ರಥಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಆ ದಿನಗಳು, ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ, ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ನಟ, ನಿರ್ದೇಶಕ ದಿನೇಶ್ (52) ಮಂಗಳೂರು ಇನ್ನಿಲ್ಲ. ಅವರು ಸೋಮವಾರದಂದು ಕುಂದಾಪುರ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳ ಹಿಂದೆ ಅವರಿಗೆ ಸ್ಟೋಕ್ ಆಗಿತ್ತು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಊರಿಗೆ ಮರಳಿದ್ದರು. ಮತ್ತೆ ಅಸ್ವಸ್ಥಗೊಂಡು ಕೋಟೇಶ್ವರದ ಸರ್ಜನ್‌ ಆಸ್ಪತ್ರೆಗೆ ದಾಖಲಾಗಿದ್ದರು. ದಿನೇಶ ಮಂಗಳೂರು ಅವರು ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಪ್ರತಿಭಾನ್ವಿತ ಪೋಷಕ ನಟರಾಗಿ ಗುರುತಿಸಿಕೊಂಡಿದ್ದರು. ಬಹುಬೇಡಿಕೆಯನ್ನು ಪಡೆದುಕೊಂಡಿದ್ದರು. ಎಲ್ಲ ರೀತಿಯ ಪೋಷಕ ಪಾತ್ರಗಳಲ್ಲೂ ನೈಜ ಅಭಿನಯ ನೀಡಿ ಗಮನಸಳೆಯುತ್ತಿದ್ದರು. ಪ್ರಸ್ತುತ ಅವರು ಬಹುನಿರೀಕ್ಷಿತ ಕಾಂತಾರ-1 ಸಿನಿಮಾದಲ್ಲಿ ನಟಿಸುತ್ತಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಉಡುಪಿ ಇವರು ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಜೂನಿಯರ್ ಮತ್ತು ಸೀನಿಯರ್ – 23 ಅಥ್ಲೆಟಿಕ್ ಮೀಟ್ – 2025ರಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ಸಮಿತ್ ಜಾವೆಲಿನ್ ಎಸೆತದಲ್ಲಿ ಮೂರನೇ ಸ್ಥಾನ ಗಳಿಸಿದ್ದಾನೆ. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ರಂಜನ್ ಬಿ.ಶೆಟ್ಟಿ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದ್ದರು. ಅರುಣೆ ಮಾನೆ ತರಬೇತಿ ನೀಡಿದ್ದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಇವರ ಸಹಯೋಗದೊಂದಿಗೆ ಚಿತ್ರದುರ್ಗದ ಶ್ರೀ ಅನುಭವ ಮಂಟಪ ಮುರುಘ ರಾಜೇಂದ್ರ ಬೃಹನ್ಮಠದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತ್ರಾಸಿ ಗ್ರಾಮ ಪಂಚಾಯತ್ ಸಿಬ್ಬಂದಿ ಸಂದೀಪ್ ಪೂಜಾರಿ ಅವರು ವಿವಿಧ ಹಂತದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಮೂಡುಬಿದಿರೆ: ಹಳೆಯಂಗಡಿಯ ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ ವಿಭಾಗದ 4ಕಿಮೀ ಓಟದಲ್ಲಿ ಓಂಕಾರ್ ಪ್ರಥಮ ಸ್ಥಾನ ಮತ್ತು ಪುನೀತ್ ಕುಮಾರ್ ತೃತೀಯ ಸ್ಥಾನ ಹಾಗೂ 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದ 4ಕಿಮೀ ಓಟದಲ್ಲಿ ದಿಶಾ ಆರನೇ ಸ್ಥಾನ ಪಡೆದರು. ಆ ಮೂಲಕ 14 ಹಾಗೂ 17 ವರ್ಷ ಬಾಲಕ ಬಾಲಕಿಯರ ಎರಡು ವಿಭಾಗದಲ್ಲಿ  ಒಟ್ಟು 78 ಅಂಕಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ. 

Read More