Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನ – ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ 39ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ಮೆರವಣಿಗೆಯ ಮೂಲಕ ಶ್ರೀ ಶಾರದಾ ದೇವಿಯ ವಿಗ್ರಹವನ್ನು ವಾದ್ಯಘೋಷದೊಂದಿಗೆ ತಂದು ಪ್ರತಿಷ್ಠಾಪಿಸಲಾಯಿತು. ದೇವರಿಗೆ ಪೂಜೆ ನೇರೆವೇರಿಸಿದ ಬಳಿಕ ದುರ್ಗಾ ಹೋಮವನ್ನು ನಡೆಸಲಾಯಿತು.  ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಭಜನಾ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಿತು. ಈ ವೇಳೆ ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ ಗೌರವ ಅಧ್ಯಕ್ಷ ರವೀಂದ್ರ ಸೋಡಿತಾರ್‌, ಅಧ್ಯಕ್ಷ ರಾಜಶೇಖರ ರೊಕ್ಕನ್, ಪ್ರಧಾನ ಕಾರ್ಯದರ್ಶಿ ಅಶೋಕ ಜಿ. ಹಾಗೂ  ಕಾರ್ಯದರ್ಶಿ ಕೌಶಿಕ್‌ ಜಿ.ಕೆ. ಸೇರಿದಂತೆ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು. ಶಾರದೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳ ಜರುಗಲಿದ್ದು, ಸೆ.29ರ ಸೋಮವಾರ ಮಧ್ಯಾಹ್ನ 2.30ರಿಂದ ಭಕ್ತಿ ಗೀತೆ, ರಂಗೋಲಿ ಸ್ಪರ್ಧೆ, ಹೂಮಾಲೆ ಕಟ್ಟುವ ಸ್ಪರ್ಧೆ, ಭಗವದ್ಗೀತಾ ಪಠಣ ಸ್ಪರ್ಧೆ ನಡೆಯಲಿದೆ. ಅಂದು ಸಂಜೆ 6.00ಕ್ಕೆ ಕುಣಿತ ಭಜನಾ ಸ್ಪರ್ಧೆ ನಡೆಯಲಿದೆ. ಅ.1ರಂದು ರಾಮಕ್ಷತ್ರಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಗಂಗೊಳ್ಳಿ ಶ್ರೀ ನಾರಾಯಣ ಗುರು ಜನಸೇವಾ ಬಳಗದ ಉದ್ಘಾಟನಾ ಸಮಾರಂಭವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಭಾನುವಾರ ನೆರವೇರಿತು. ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಸುಮನ ಪಡಿಯಾರ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಸಮಾಜದ ಸೇವೆಗಾಗಿ ಸಂಘಟಿತ ಪ್ರಯತ್ನವನ್ನು ಮಾಡುವುದು ಯಶಸ್ಸನ್ನು ಕೊಡುತ್ತದೆ. ಉತ್ತಮ ಕಾರ್ಯಗಳಿಗೆ ಬೆಂಬಲವನ್ನು ನೀಡುವುದು ಮತ್ತು ಆ ಮೂಲಕ ಉತ್ತಮ ಸಮಾಜದ ನಿರ್ಮಾಣದಲ್ಲಿ ಭಾಗಿಯಾಗುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಬೆಂಗಳೂರಿನ ಹರಪನಹಳ್ಳಿ ಆನೇಕಲ್ ನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಂಗ್ಲ ಭಾಷಾ ಶಿಕ್ಷಕ ಮತ್ತು ಲೇಖಕ ಸಂದೇಶ್ ಹೆಚ್ ನಾಯ್ಕ್ ಹಕ್ಲಾಡಿ ಮತ್ತು ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿ ಪ್ರಮೋದ್ ಗಾಣಿಗ ಗಂಗೊಳ್ಳಿ ಶುಭ ಹಾರೈಸಿದರು. ಶ್ರೀ ನಾರಾಯಣ ಗುರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ಉಪ್ಪುಂದ ಶಾಖೆಯಿಂದ ನಬಾರ್ಡ್ ಸಹಯೋಗದೊಂದಿಗೆ ಉಪ್ಪುಂದದ ನಾಡದೋಣಿ ಸಭಾಭವನಲ್ಲಿ ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ – ಸಹಕಾರಿ ಸಾಕ್ಷರತಾ ಶಿಬಿರ ಸೋಮವಾರ ಆಯೋಜಿಸಲಾಗಿತ್ತು. ನಬಾರ್ಡ್ ಮಂಗಳೂರಿನ ಡಿಸ್ಟಿಕ್ಟ್ ಡೆಪ್ಯೂಟಿ ಮ್ಯಾನೇಜರ್ ಸಂಗೀತಾ ಕರ್ತಾ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಿನಿಯರ್ ಬ್ರಾಂಚ್ ಇನ್ಸಪೆಕ್ಟರ್ ರವೀಂದ್ರ ಭಟ್, ಕೇಂದ್ರ ಕಛೇರಿ ಪಿಸಿಬಿ ವಿಭಾಗದ ಸಿ. ಶಂಭುಲಿಂಗ್, ಸಿ. ಸಂದೀಪ್, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ನಾಗೇಶ್ ಖಾರ್ವಿ, ‌ಮಣಿಪಾಲ ಆಸ್ಪತ್ರೆಯ ಡಿಪಾರ್ಟ್ಮೆಂಟ್ ಆಫ್‌ ನ್ಯೂಟ್ರಿಷನ್ ಅಂಡ್ ಡಯಟಿಕ್ಸ್ ವಿಭಾಗದ ಡಾ. ಅನುಷಾ, ಕೆನರಾ ಬ್ಯಾಂಕ್ ಫೈನಾನ್ಸಿಯಲ್ ಲಿಟರೆಸಿ ಕೌನ್ಸಿಲರ್ ಆಶಾಲತಾ, ಎನರ್ಜಿ ಸೋಲಾರ್‌ನ ಲಿಂಗಯ್ಯ ಮೊದಲಾದವರು ಉಪಸ್ಥಿತರಿದ್ದರು. ಆರ್ಥಿಕ ಸಾಕ್ಷರತೆ ಬಗ್ಗೆ ಆಶಾಲತಾ ಮಾಹಿತಿ ನೀಡಿದರು. ಆರೋಗ್ಯಪೂರ್ಣ ಆಹಾರ ಕ್ರಮದ ಬಗ್ಗೆ ಡಾ. ಅನುಷಾ ಮತ್ತು ವಿದ್ಯಾರ್ಥಿಗಳು ಮಾಹಿತಿ ನೀಡಿದರು. ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿ ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಯೋಗದಲ್ಲಿ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ -10 ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಗಣನಾಥ ಶೆಟ್ಟಿ ಎಕ್ಕಾರು, ಡಾ. ಶಿವರಾಮ ಕಾರಂತರು ಸುಮಾರು 6 ದಶಕಗಳ ಹಿಂದಿನಿಂದಲೂ ಸಂವಿಧಾನದ ಅಂಶಗಳನ್ನು ತಮ್ಮ ಜೀವನದಲ್ಲಿ ಪ್ರತಿಪಾದಿಸಿದವರು. ಅವರ ಕೃತಿಗಳು ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆಯನ್ನು ತಿಳಿಸಿಕೊಡುತ್ತದೆ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೇ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದರು. ಸಾಹಿತಿ ಮತ್ತು ಮಹಿಳಾ ಚಿಂತಕಿ ವಸಂತಿ ಶೆಟ್ಟಿ ಬ್ರಹ್ಮಾವರ ಕಾರಂತರ ಬದುಕು ಬರಹಗಳು ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಕಾರಂತರ ನೇರ ನಡೆ- ನುಡಿ ಹಾಗೂ ಅವರು ಬದುಕಿದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಿ. ಎ. ಮತ್ತು ಸಿ. ಎಸ್. ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರದ ಶಿಕ್ಷಾಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಇದರ ಸಹ ಸಂಸ್ಥಾಪಕರಾದ ಪ್ರತಾಪ ಚಂದ್ರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಸಿ. ಎ. ಸ್ವಸ್ಥಿಕ್, ಸಿ. ಎ. ವೖಷ್ಣವಿ ಮತ್ತು ಸಿ. ಎ. ಭರತೇಶ್ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಸಿ. ಎ. ಸ್ವಸ್ತಿಕ್  ಮತ್ತು ಸಿ. ಎ. ವೖಷ್ಣವಿ ಅನಿಸಿಕೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ವಾಣಿಜ್ಯ ವಿಭಾಗ ಮುಖ್ಯಸ್ಥರಾದ ಅರುಣ್ ಎ. ಎಸ್., ವಾಣಿಜ್ಯ ಸಂಘದ ಸಂಯೋಜಕರಾದ ಮಮತಾ, ಕಾರ್ಯಕ್ರಮದ ಉಪನ್ಯಾಸಕ ಸಂಯೋಜಕರಾದ ಸುಮಾ ಮತ್ತು ರಿತಿನ್. ಎಸ್. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಭೂಮಿಕಾ ಕಾರ್ಯಕ್ರಮ ನಿರೂಪಿಸಿ, ದ್ರುವ ಸ್ವಾಗತಿಸಿ, ಸುಜನ್ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಮತ್ತು ರೋಟರಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಹಾಗೂ ಡಾ. ಟಿ. ಎಂ. ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ವಾಕಥಾನ್ ಹೃದಯ ದಿನಾಚರಣೆಯ ಅವಾರ್ಡ್ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಗರಿಷ್ಠ ವಿದ್ಯಾರ್ಥಿಗಳ ಭಾಗವಹಿಸುವಿಕೆಯಲ್ಲಿ ಪ್ರಥಮ ಸ್ಥಾನ, ಅತ್ಯಂತ ಶಿಸ್ತಿನ ತಂಡಕ್ಕೆ ಪ್ರಥಮ ಸ್ಥಾನ, ಘೋಷಣೆ ಕೂಗುವಿಕೆಯಲ್ಲಿ ಪ್ರಥಮ, ಸ್ಕಿಟ್ ಸ್ಪರ್ಧೆಯಲ್ಲಿ ದ್ವಿತೀಯ, ಫ್ಲಕಾರ್ಡ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗದವರು ಪ್ರಶಂಸಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ವೈದ್ಯಕೀಯ ವಿಭಾಗ, ಮಾಹೆ ಮಣಿಪಾಲ, ಗ್ರಾಮ ಪಂಚಾಯತ್ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಶ್ರೀ ಅನ್ನಪೂರ್ಣ ಸೇವಾ ಬಂಧು ಟ್ರಸ್ಟ್ ಕುಂದಾಪುರ, ದೈವಜ್ಞ ಬ್ರಾಹ್ಮಣರ ಸಂಘ, ಶ್ರೀ ವೀರ ವಿಠಲ ದೇವಸ್ಥಾನ ಗಂಗೊಳ್ಳಿ ಮತ್ತು ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಇವರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇತ್ತೀಚಿಗೆ ನಡೆಯಿತು. ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಶಿಬಿರವನ್ನು ಉದ್ಘಾಟಿಸಿದರು. ಕೆಎಂಸಿ ಮಣಿಪಾಲದ ವೈದ್ಯಾಧಿಕಾರಿ ಡಾ. ಸಾಚಿ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಶಂಕರ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮೈಸೂರಿನ ದಸರಾ ಕಾರ್ಯಕ್ರಮದ ಪ್ರಯುಕ್ತ ನಡೆದ ರಾಜ್ಯ ಮಟ್ಟದ ಪಂಜಾ ಕುಸ್ತಿ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದ ಸುರೇಶ್‌ ಬಿ. ಪೂಜಾರಿ ಭಾಗವಹಿಸಿ 90.ಕೆಜಿ ಬಲ ಕೈ ವಿಭಾಗದಲ್ಲಿ ಚಿನ್ನದ ಪದಕ ಗಳಿಸುವುದರ ಮೂಲಕ ಸತತ 4 ವರ್ಷ ಚಿನ್ನದ ಪದಕ ಮೂಡಿಗೆರಿಸಿಕೊಂಡಿದ್ದಾರೆ. ಅವರು ಅಂತಾಷ್ಟ್ರೀಯ ಕ್ರೀಡಾ ಸ್ಪರ್ಧಿಯಾಗಿ ಭಾಗವಹಿಸಿ ಹಲವು ಪದಕಗಳನ್ನು ಪಡೆದುಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಿಬ್ಬಂದಿ ಅಭಿವೃದ್ಧಿ ಸಮಿತಿ ವತಿಯಿಂದ “ಕಾರ್ಯಕ್ಷೇತ್ರದಲ್ಲಿ ಒತ್ತಡ ನಿವಾರಣೆ ಮತ್ತು ಕೆಲಸ-ಜೀವನ ಸಮತೋಲನ” ಎಂಬ ವಿಷಯದ ಮೇಲೆ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜು ಆವರಣದಲ್ಲಿ ಇತ್ತೀಚಿಗೆ ಆಯೋಜಿಸಲಾಯಿತು. ಈ ಕಾರ್ಯಕ್ರಮವು ಸಿಬ್ಬಂದಿಗಳು ಉದ್ಯೋಗ ಸಂಬಂಧಿತ ಒತ್ತಡವನ್ನು ಸಮರ್ಥವಾಗಿ ನಿಭಾಯಿಸಿ, ವೈಯಕ್ತಿಕ ಮತ್ತು ವೃತ್ತಿಜೀವನದ ನಡುವೆ ಸಮತೋಲನ ಸಾಧಿಸಲು ಸಹಾಯ ಮಾಡುವ ಉದ್ದೇಶವನ್ನು ಹೊಂದಿತ್ತು.ಕಾರ್ಯಕ್ರಮಕ್ಕೆ ಉಡುಪಿ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ, ಉದ್ಯೋಗ ಸ್ಥಳದಲ್ಲಿ ಒತ್ತಡವನ್ನು ಕಡಿಮೆ ಮಾಡುವ ಪ್ರಾಯೋಗಿಕ ವಿಧಾನಗಳು ಮತ್ತು ಕೆಲಸ-ಜೀವನ ಸಮತೋಲನ ಸಾಧಿಸುವ ತಂತ್ರಗಳನ್ನು ಕುರಿತು ಬೆಳಕು ಚೆಲ್ಲಿದರು. ಸ್ವಯಂ ಆರೈಕೆ, ಸಮಯ ನಿರ್ವಹಣೆ ಮತ್ತು ಸಕಾರಾತ್ಮಕ ಕೆಲಸದ ವಾತಾವರಣದ ಮಹತ್ವವನ್ನು ಅವರು ಒತ್ತಿ ಹೇಳಿದರು. ಇದೇ ಸಂದರ್ಭದಲ್ಲಿ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಜೆನ್ನಿಫರ್ ಫ್ರೀಡಾ ಮೆನೆಜಸ್, ಉಪಪ್ರಾಂಶುಪಾಲರಾದ ರೂಪಶ್ರೀ ಕೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ಚಿನ್ನದ ಸರ ಕಳವು ಪ್ರಕರಣವನ್ನು ಇಲ್ಲಿನ ಪೊಲೀಸರು 24 ಗಂಟೆಗಳ ಒಳಗಾಗಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಗಣೇಶ ನಗರದ ಯಾಧವ ದುರ್ಗಮ್ಮ ಎಂದು ಗುರುತಿಸಲಾಗಿದೆ. ಆಕೆಯಿಂದ ಕಳವುಗೈದ 2.5 ಲಕ್ಷ ರೂ. ಮೌಲ್ಯದ ಹವಳದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಸೆಪ್ಟೆಂಬರ್ 26ರಂದು ರಾತ್ರಿ 8:50ರಿಂದ 9:15ರ ನಡುವೆ ದೇವಿಪ್ರಿಯಾ ಎಂಬ ಭಕ್ತೆಯ ಬ್ಯಾಗ್‌ನ ಜಿಪ್ ತೆರೆಯಲಾಗಿದ್ದು, ಅದರಲ್ಲಿ ಇಟ್ಟುಕೊಂಡಿದ್ದ ಸುಮಾರು 3 ಪವನ್ ಹವಳದ ಚಿನ್ನದ ಸರವನ್ನು ಅಪರಿಚಿತರು ಕಳವು ಮಾಡಿದ್ದರು. ಇದರ ಮೌಲ್ಯ ಅಂದಾಜು ರೂ.2.5 ಲಕ್ಷ ಎಂದು ದೂರಿನಲ್ಲಿ ಹೇಳಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತ ನಿರೀಕ್ಷಕ ನೀಲೇಶ್ ಚೌಹಾಣ್ ಅವರ ಮಾರ್ಗದರ್ಶನದಲ್ಲಿ, ಕೊಲ್ಲೂರು ಠಾಣಾ ಉಪನಿರೀಕ್ಷಕ ವಿನಯ್ ಎಂ.…

Read More