ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆರ್ಕಟ್ಟೆ ದಾರುಲ್ ಉಲಮ್ ಮದ್ರಾಸದ ವಿದ್ಯಾರ್ಥಿ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮದಲ್ಲಿ ಸೀನಿಯರ್ ವಿಭಾಗದ ಉರ್ದು ನಾತ್ತ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿ ಸಿರಾಜುಲ್ ಉಲೂಂ ಮದ್ರಾಸದ 8ನೇ ತರಗತಿ ವಿದ್ಯಾರ್ಥಿ ನವಾಝ್ ಎಸ್.ಜೆ.ಎಂ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮದಲ್ಲಿ ಸೀನಿಯರ್ ವಿಭಾಗದ ಕ್ಯಾಲಿಗ್ರಫಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಸಿರಾಜುಲ್ ಉಲೂಂ ಮದ್ರಾಸದ ಗುರುಗಳು ಅಭಿನಂದಿಸಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ ಇವರುಗಳ ಸಂಯುಕ್ತ ಆಶ್ರಯದಲ್ಲಿ “69ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರೋಪ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವ ಧನ ವಿತರಣಾ ಸಮಾರಂಭ”
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವದಾದ್ಯಂತ ಸದ್ದು ಮಾಡುತ್ತಾ, ಭಾರತೀಯ ಚಿತ್ರರಂಗದಲ್ಲಿ ಹತ್ತಾರು ದಾಖಲೆಗಳನ್ನು ಬರೆದ ಕರಾಳಿಯ ಮಣ್ಣಿನ ಕಥೆಯ ಎಳೆಯನ್ನು ಒಳಗೊಂಡ ‘ಕಾಂತಾರ’ ಸಿನಿಮಾ 50 ದಿನಗಳನ್ನು ಪೂರೈಸಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ದುಬೈ ಪ್ರವಾಸದಲ್ಲಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ಅವರು ದಂಪತಿಗಳು ಶುಕ್ರವಾರ ದುಬೈನ ಹಯತ್ ರೆಜೆನ್ಸಿ ಥಿಯೇಟರ್’ನಲ್ಲಿ ಅಭಿಮಾನಿಗಳೊಂದಿಗೆ ಸಿನಿಮಾ ವೀಕ್ಷಿಸಿ 50 ದಿನಗಳ ಗೆಲುವನ್ನು ಸಂಭ್ರಮಿಸಿದರು. ಈ ವೇಳೆ ಫಾರ್ಚೂನ್ ಗ್ರೂಪ್ಸ್ ಪ್ರವರ್ತಕ, ನಮ್ಮ ಕುಂದಾಪ್ರ ಕನ್ನಡ ಬಳಗದ ಗೌರವಾಧ್ಯಕ್ಷರಾದ ವಕ್ವಾಡಿ ಪ್ರವೀಣ ಕುಮಾರ್ ಶೆಟ್ಟಿ, ಅಬುದಾಬಿ ಕನ್ನಡ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಉದ್ಯಮಿ ಹರೀಶ್ ಶೇರಿಗಾರ್, ಕನ್ನಡ ಪಾಠಶಾಲಾ ಮುಖ್ಯಸ್ಥರಾದ ಶಶಿಧರ್ ನಾಗರಾಜಪ್ಪ, ಯುಎಇನ ಓಎಂಜಿ ಸಿನಿಮಾ ವಿತರಕರಾದ ಸೆಂಥಿಲ್ ಹಾಗೂ ಈಶ್ವರಿದಾಸ್ ಶೆಟ್ಟಿ ದುಬೈ ಕನ್ನಡಿಗ ಮಲ್ಲಿಕಾರ್ಜುನ ಗೌಡ ಮೊದಲಾದವರು ಉಪಸ್ಥಿತರಿದ್ದರು. ಥಿಯೇಟರಿನಲ್ಲಿ 300ಕ್ಕೂ ಹೆಚ್ಚು ಅಭಿಮಾನಿಗಳು ಹಾಗೂ ಹಿತೈಷಿಗಳೊಂದಿಗೆ ಸಂಪೂರ್ಣ ಸಿನಿಮಾ ವೀಕ್ಷಿಸಿದ ರಿಷಬ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ನೇತೃತ್ವದಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ 2022ರಲ್ಲಿ ತಾಲೂಕಿನ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸಂಸ್ಥೆಗೆ ಉತ್ತಮ ಸೌಹಾರ್ದ ಸಹಕಾರಿ ಸಂಘ ಪ್ರಶಸ್ತಿ ಪ್ರದಾನಿಸಲಾಯಿತು. ರಾಜ್ಯ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಹಾಗೂ ಕಾರ್ಯದರ್ಶಿ ಕಿಟ್ಟಣ್ಣ ರೈ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕರಾದ ವೇದವ್ಯಾಸ ಡಿ. ಕಾಮತ್, ಮಂಗಳೂರು ಕ್ಷೇತ್ರ ಶಾಸಕರಾದ ಯು.ಟಿ. ಖಾದರ್, ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅರಣ್ಯ ಇಲಾಖೆ ಸುಮಾರು ಒಂಬತ್ತು ಲಕ್ಷ ಹೆಕ್ಟೇರಿಗೂ ಹೆಚ್ಚು ಪ್ರದೇಶವನ್ನು ಡೀಮ್ಡ್ ಅರಣ್ಯ ಎಂದು ಗುರುತಿಸಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಾದ ದೋಷವನ್ನು ಸರಿಪಡಿಸುವ ಬದಲಿಗೆ ರಾಜ್ಯದ ಸಚಿವರು ಹಾಗೂ ಶಾಸಕರುಗಳು ಡೀಮ್ಡ್ ಸಮಸ್ಯೆ ಪರಿಹಾರವಾಗಿದೆ ಎನ್ನುವ ಹಾರಿಕೆಯ ಉತ್ತರವನ್ನು ಕೊಟ್ಟು ಮುಗ್ದ ಜನರನ್ನು ದಾರಿತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ರೈತ ಸಂಘದ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಮೇರೆಗೆ ಅರಣ್ಯ ಇಲಾಖೆ ಸುಮಾರು ಒಂಬತ್ತು ಲಕ್ಷ ಹೆಕ್ಟೇರಿಗೂ ಹೆಚ್ಚು ಪ್ರದೇಶವನ್ನು ಡೀಮ್ಡ್ ಅರಣ್ಯ ಎಂದು ಗುರುತಿಸಿ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿತ್ತು. ಆದರೆ ಈ ಪಟ್ಟಿಯಲ್ಲಿ ರೈತರ ಕೃಷಿ ಭೂಮಿ, ಕೊಟ್ಟಿಗೆ, ಮನೆ, ತೋಟ ಮೊದಲಾದವುಗಳು ಕೂಡ ಸೇರಿದೆ. ಇದರಿಂದ ರೈತರು ಇದರಿಂದ ಅತೀವ ತೊಂದರೆಗೆ ಈಡಾಗಿದ್ದಾರೆ. ಇದರಿಂದ ಅರ್ಜಿ ನಮೂನೆ 94ಸಿ, 53, 57 ಯಾವುದರಲ್ಲೂ ಭೂ ಮಂಜೂರಾತಿ ಆಗುತ್ತಿಲ್ಲ. ಹಿಂದೆ ಮಂಜೂರಾದ ಭೂಮಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಗೀತ ಭಾರತಿ ಟ್ರಸ್ಟ್ ಕುಂದಾಪುರ ಮತ್ತು ಆರ್. ಕೆ. ಸಂಜೀವ ರಾವ್ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ಖಂಬದಕೋಣೆ ಆಶ್ರಯದಲ್ಲಿ ಕುಂದಾಪುರದ ಹೋಟೆಲ್ ಪಾರಿಜಾತದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ವಿದುಷಿ ಸುಜಾತ ಗುರವ್ ಅವರಿಂದ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ ನಡೆಯಿತು. ತಬಲಾದಲ್ಲಿ ಟಿ. ರಂಗ ಪೈ ಮಣಿಪಾಲ, ಹಾರ್ಮೋನಿಯಂನಲ್ಲಿ ಶಶಿಕಿರಣ ಮಣಿಪಾಲ ಸಹಕರಿಸಿದ್ದರು. ಪ್ರಮೀಳಾ ಕುಂದಾಪುರ ಮಾತನಾಡಿ ಶ್ರೀಮತಿ ಸುಶೀಲಾ ಸಂಜೀವ ರಾವ್, ಶ್ರೀಮತಿ ನಿರ್ಮಲಾ ಪ್ರಕಾಶ್ ರಾವ್ ಹಾಗೂ ಪ್ರಕಾಶ್ ರಾವ್ ಸ್ಮಾರಕವಾಗಿ ಸಂಗೀತ ಕಾರ್ಯಕ್ರಮ ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ ಎಂದರು. ಸಂಗೀತ ಭಾರತಿ ಕಾರ್ಯದರ್ಶಿ ಕೆ. ನಾರಾಯಣ ಕಲಾವಿದರನ್ನು ಪರಿಚಯಿಸಿದರು. ಸಂಗೀತ ಭಾರತಿ ಟ್ರಸ್ಟಿಗಳಾದ ಸೀತಾರಾಮ ನಕ್ಕತ್ತಾಯ, ಕೆ. ಶಾಂತಾರಾಮ ಪ್ರಭು, ಡಾ. ಎಚ್. ಆರ್. ಹೆಬ್ಬಾರ್ ಕಲಾವಿದರನ್ನು ಗೌರವಿಸಿದರು. ರೇಖಾ ಕಾರಂತ, ಸುಪ್ರಸನ್ನ ನಕ್ಕತ್ತಾಯ ಉಪಸ್ಥಿತರಿದ್ದರು. ಯು. ಎಸ್. ಶೆಣೈ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ವೇಗದ ಓಟಗಾರ್ತಿ ಕ್ರೀಡಾಪಟು, ಅಥ್ಲೇಟಿ ಅಶ್ವಿನಿ ಅಕ್ಕುಂಜಿ ಅವರ ಜೀವಮಾನದ ಸಾಧನೆಗಾಗಿ ಧ್ಯಾನ್ ಚಂದ್ ಜೀವಮಾನದ ಸಾಧನೆ ಪ್ರಶಸ್ತಿ 2022 ಘೋಷಣೆಯಾಗಿದೆ. ಕುಂದಾಪುರದ ತಾಲೂಕಿನ ಸಿದ್ದಾಪುರ ಅಕ್ಕುಂಜೆಯ ಯಶೋದಾ ಶೆಟ್ಟಿ ಮತ್ತು ಚಿದಾನಂದ ಶೆಟ್ಟಿಯವರ ಪುತ್ರಿಯಾದ ಅಶ್ವಿನಿ ಅಕ್ಕುಂಜೆ 2010ರಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ನಲ್ಲಿ 4×400 ರಿಲೆಯಲ್ಲಿ ಚಿನ್ನ, 2011ರಲ್ಲಿ ಏಷ್ಯನ್ ಗೇಮ್ಸ್ನಲ್ಲಿ 4×400 ರಿಲೆ ಮತ್ತು 400 ಹರ್ಡ್ಸಲ್ ವೈಯಕ್ತಿಕ ವಿಭಾಗದಲ್ಲಿ ಸ್ವರ್ಣ ಪದಕ ಗೆದ್ದಿದ್ದರು. ಕರ್ನಾಟಕದ ಸರ್ಕಾರ ಕೊಡಮಾಡುವ ರಾಜ್ಯೋತ್ಸವ ಪ್ರಶಸ್ತಿಯನ್ನು 2010ರಲ್ಲಿ ಪಡೆದಿದ್ದರು. ಪ್ರಸ್ತುತ ಅವರು ಪಟಿಯಾಲ, ಪಂಜಾಬ್ ಯುನಿಯನ್ ಬ್ಯಾಂಕ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. 16 ವರ್ಷಗಳ ಕ್ರೀಡಾ ಬದುಕಿನ ಬಳಿಕ 2019ರ ಬಳಿಕ ಕ್ರೀಡಾ ಕ್ಷೇತ್ರದಿಂದ ನಿವೃತ್ತಿ ಪಡೆದುಕೊಳ್ಳುವುದಾಗಿ ತಿಳಿಸಿದ್ದರು. ಧ್ಯಾನ್ ಚಂದ್ ಪ್ರಶಸ್ತಿಯನ್ನು ಕ್ರೀಡಾಪಟುಗಳ ಜೀವಮಾನದ ಸಾಧನೆ, ಕ್ರೀಡಾಕ್ಷೇತ್ರಕ್ಕೆ ಕೊಡುಗೆ ಮತ್ತು ನಿವೃತ್ತಿಯ ನಂತರವೂ ಕ್ರೀಡಾಕೂಟದ ಪ್ರಚಾರದಲ್ಲಿ ಅವರು ತೊಡಗಿಸಿಕೊಳ್ಳುವ ಬಗೆಯನ್ನು ಆಧರಿಸಿ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳೇ ದೇಶದ ಆಸ್ತಿ. ಯುವ ಸಮುದಾಯವು ಕಲಿಕೆಯ ಜೊತೆಗೆ ಬದುಕಿನ ಕೌಶಲ್ಯಗಳನ್ನು ಬೆಳೆಸಿಕೊಂಡು ಸತ್ಪ್ರಜೆಗಳಾಗಬೇಕು. ವಿದ್ಯಾರ್ಥಿಗಳು ದೇಶದ ಶಕ್ತಿ ಇದ್ದಂತೆ, ಆ ನಿಟ್ಟಿನಲ್ಲಿ ದೇಶ ಕಟ್ಟುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಉಡುಪಿ ಇದರ ಪ್ರಾಂಶುಪಾಲರಾದ ಡಾ| ಎಸ್. ಭಾಸ್ಕರ್ ಶೆಟ್ಟಿಯವರು ಹೇಳಿದರು. ಅವರು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2022-23ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ .ಉಮೇಶ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೊವಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಆಧಿಕಾರಿ ವಿನಿತಾ ಎಸ್. ಗಾಣಿಗ ಉದ್ಘಾಟಕರನ್ನು ಸಭೆಗೆ ಪರಿಚಯಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ವಿಘ್ನೇಶ್ ಶೆಟ್ಟಿ ಸಮಿತಿಯ ಸದಸ್ಯರಿಗೆ ಪ್ರತಿಜ್ಞಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ “ಕನ್ನಡ ನಾಡು-ನುಡಿ-ಸಂಸ್ಕೃತಿ” ವಿಷಯದ ಕುರಿತು ವಿದ್ಯಾರ್ಥಿ ವಿಚಾರಗೋಷ್ಠಿ ನಡೆಯಿತು. ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಎಸ್. ಮಣಿಕಂಠ ದೇವಾಡಿಗ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ನಮ್ಮ ನೆಲ, ಜಲ, ಸಂಸ್ಕೃತಿ, ಸಂಪ್ರದಾಯವನ್ನು ಗೌರವಿಸುವಂತೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಅಧ್ಯಕ್ಷತೆ ವಹಿಸಿದ್ದರು. ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ಉಪಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಕ್ಷಿತಾ, ವರ್ಷಾ ರವಿಶಂಕರ್, ಧನ್ಯ, ಭೂಷಣ್, ಶಿಪಾಲಿ, ದರ್ಶನ್ ಹಾಗೂ ವಿಘ್ನೇಶ್ ವಿಚಾರಗೋಷ್ಠಿಯಲ್ಲಿ ವಿಚಾರವನ್ನು ಮಂಡಿಸಿದರು. ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಅವರು ಅತಿಥಿಗಳನ್ನು ಪರಿಚಯಿಸಿ, ವಿದ್ಯಾರ್ಥಿಗಳಾದ ಕೌಶಲ್ ಕಾರ್ಯಕ್ರಮ ನಿರೂಪಿಸಿ, ಶ್ರೀನಿಧಿ ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು.
