Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ಚಿನ್ನದ ಸರ ಕಳವು ಪ್ರಕರಣವನ್ನು ಇಲ್ಲಿನ ಪೊಲೀಸರು 24 ಗಂಟೆಗಳ ಒಳಗಾಗಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಗಣೇಶ ನಗರದ ಯಾಧವ ದುರ್ಗಮ್ಮ ಎಂದು ಗುರುತಿಸಲಾಗಿದೆ. ಆಕೆಯಿಂದ ಕಳವುಗೈದ 2.5 ಲಕ್ಷ ರೂ. ಮೌಲ್ಯದ ಹವಳದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಸೆಪ್ಟೆಂಬರ್ 26ರಂದು ರಾತ್ರಿ 8:50ರಿಂದ 9:15ರ ನಡುವೆ ದೇವಿಪ್ರಿಯಾ ಎಂಬ ಭಕ್ತೆಯ ಬ್ಯಾಗ್‌ನ ಜಿಪ್ ತೆರೆಯಲಾಗಿದ್ದು, ಅದರಲ್ಲಿ ಇಟ್ಟುಕೊಂಡಿದ್ದ ಸುಮಾರು 3 ಪವನ್ ಹವಳದ ಚಿನ್ನದ ಸರವನ್ನು ಅಪರಿಚಿತರು ಕಳವು ಮಾಡಿದ್ದರು. ಇದರ ಮೌಲ್ಯ ಅಂದಾಜು ರೂ.2.5 ಲಕ್ಷ ಎಂದು ದೂರಿನಲ್ಲಿ ಹೇಳಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತ ನಿರೀಕ್ಷಕ ನೀಲೇಶ್ ಚೌಹಾಣ್ ಅವರ ಮಾರ್ಗದರ್ಶನದಲ್ಲಿ, ಕೊಲ್ಲೂರು ಠಾಣಾ ಉಪನಿರೀಕ್ಷಕ ವಿನಯ್ ಎಂ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪರಿಸರ ಉಳಿಸಿ ಎಂಬ ಸಂದೇಶದೊಂದಿಗೆ ಉಡುಪಿಯಿಂದ ಲಡಾಖ್‌ವರೆಗೆ 3,300 ಕಿಮೀ ಯಾತ್ರೆಯನ್ನು ಸತತ 11 ತಿಂಗಳು ಸೈಕಲ್‌ನಲ್ಲಿ ಪ್ರಯಾಣಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ ತಾಲೂಕಿನ ಕಮಲಶಿಲೆ ಹಳ್ಳೀಹೊಳೆ ಸಮೀಪದ ಪಾರ್ವತಿ ಮತ್ತು ಶೇಷು ಬೋವಿ ದಂಪತಿಯ ಪುತ್ರ ದಿನೇಶ್ ಬೋವಿ ಇದೀಗ ಹುಟ್ಟೂರಿಗೆ ಮರಳಿದ್ದಾರೆ. ಅಪ್ರತಿಮ ಸಾಧನೆ ತೋರಿ ಊರಿಗೆ ಮರಳಿದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ದಿನೇಶ್ ಅವರಿಗೆ ಶನಿವಾರ ಕಾಲೇಜಿನ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು. ಈ ವೇಳೆ ಮಲ್ಪೆ ಪೊಲೀಸ್ ಠಾಣೆಯ ಎಸ್ಸೈ ಅನಿಲ್ ಕುಮಾರ್, ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಜಯರಾಮ ಶೆಟ್ಟಿಗಾರ್, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಆಲನ್ ಲೂವಿಸ್, ಶೇಖರ ಗುಜ್ಜರಬೆಟ್ಟು, ಶಾಲೆಟ್ ಮಥಾಯಸ್, ಶಿಕ್ಷಕ ರಕ್ಷಕ ಸಂಘದ ಗಣೇಶ್ ಮೇಸ್ತ ಹಾಗೂ ಇತರರು ಉಪಸ್ಥಿತರಿದ್ದರು. ಅವರು 2024ರ ಅ.15ರಂದು ಉಡುಪಿಯಿಂದ ಸೈಕಲ್ ಮೂಲಕ ಲಡಾಖ್ ಗೆ ಪ್ರಯಾಣ ಬೆಳೆಸಿದ್ದು 2025ರ ಸೆ.15ರಂದು ಲಡಾಖ್ ತಲುಪುವುದರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಸ್ಕತ್ತೂರು ಸರಕಾರಿ ಪ್ರೌಢಶಾಲೆಯ ಆತಿಥ್ಯದಲ್ಲಿ ನಡೆದ 3 ದಿನಗಳ ಮೈಸೂರು ವಿಭಾಗ ಮಟ್ಟದ ಅಂಡರ್ 14/17 ಬಾಲಕ ಬಾಲಕಿಯರ ಕ್ರಿಕೆಟ್ ಪಂದ್ಯಾಟದಲ್ಲಿ ಅಂಡರ್ 17 ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಉಡುಪಿ ಜಿಲ್ಲೆಯ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಕೊಡಗು ಮತ್ತು ಉಡುಪಿ ಇವುಗಳ ನಡುವಿನ ನಡೆದ ಹಣಾಹಣಿ ಪಂದ್ಯಾಟದಲ್ಲಿ ಉಡುಪಿ ಬಾಲಕಿಯರ ತಂಡ ವಿಜಯ ಸಾಧಿಸಿತು. ಅಂಡರ್ 17 ಬಾಲಕರ ವಿಭಾಗದಲ್ಲಿ ದಕ್ಷಿಣ ಕನ್ನಡ ವರ್ಸಸ್ ಉಡುಪಿ ಇವುಗಳ ನಡುವಿನ ನಡೆದ ರೋಚಕ ಪಂದ್ಯಾಟದಲ್ಲಿ ಉಡುಪಿ ತಂಡವು ವಿಜಯ ಸಾಧಿಸಿತು. ಅಂಡರ್ 14 ಬಾಲಕರ ವಿಭಾಗದಲ್ಲಿ ಹಾಸನ ವರ್ಸಸ್ ಮೈಸೂರು ಇವುಗಳ ನಡುವೆ ನಡೆದ ರೋಚಕವಾದ ಪಂದ್ಯಾಟದಲ್ಲಿ ಮೈಸೂರು ತಂಡವು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಂತಾರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನದ ಅಂಗವಾಗಿ ಬೈಂದೂರು ವಲಯ ಅರಣ್ಯ ಇಲಾಖೆ ನೇತೃತ್ವದಲ್ಲಿ ರೋಟರಿ ಕ್ಲಬ್‌ ಬೈಂದೂರು, ಕ್ಲೀನ್‌ ಕಿನಾರ ತಂಡ ಹಾಗೂ ಸರಕಾರಿ ಪದವಿ ಕಾಲೇಜಿನ ಎನ್ಎಸ್ಎಸ್‌ ಘಟಕದ ಸಹಯೋಗದೊಂದಿಗೆ ಇಲ್ಲಿನ ಸೋಮೇಶ್ವರ ಕಡಲ ತೀರದಲ್ಲಿ ಭಾನುವಾರ ಕಡಲತೀರ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಬೀಚ್‌ ಸ್ವಚ್ಚತಾ ಕಾರ್ಯದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಜೊತೆ ನಿರಂತರ ಸಂಪರ್ಕದಲ್ಲಿದ್ದು ಕಡಲಾಮೆ, ಕಡಲಾಮೆ ಮೊಟ್ಟೆ ಸಂರಕ್ಷಣೆ ಹಾಗೂ ಇನ್ನಿತರ ಸಂರಕ್ಷಣ ಕಾರ್ಯದಲ್ಲಿ ತೊಡಗಿಕೊಂಡಿರುವ ಸ್ಥಳೀಯರನ್ನು ಗುರುತಿಸಿ ಸನ್ಮಾನಿಸಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಈ ವೇಳೆ ಬೈಂದೂರು ವಲಯ ಅರಣ್ಯಾಧಿಕಾರಿ ಸಂದೇಶ್‌ ಕುಮಾರ್‌, ರೋಟರಿ ವಲಯ 1ರ ಸಹಾಯಕ ಗವರ್ನರ್‌ ಐ. ನಾರಾಯಣ್‌, ಬೈಂದೂರು ರೋಟರಿ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಉಪ್ಪುಂದ, ನಿವೃತ್ತ ಸೈನಿಕ ಚಂದ್ರಶೇಖರ ನಾವಡ, ಎನ್ಎಸ್ಎಸ್‌ ಘಟಕಾಧಿಕಾರಿ ನವೀನ್‌ ಹೆಚ್.‌ ಜಿ., ಕ್ಲೀನ್‌ ಕಿನಾರ ತಂಡದ ರಾಘವೇಂದ್ರ ಪಡುವರಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.27: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದಲ್ಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದ್ದು, ಣತಿ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಇಲಾಖಾ ವಿಚಾರಣೆ ನಡೆಸಲು ಹಾಗೂ ಸರ್ಕಾರದ ಕೆಲಸದಲ್ಲಿ ನಿಷ್ಕಾಳಜಿ ತೋರಿದ್ದಕ್ಕೆ ಶಿಸ್ತುಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದ್ದಾರೆ. ಸದರಿ ಸಮೀಕ್ಷೆಗೆ ನಿಯೋಜನೆಗೊಂಡ ಗಣತಿದಾರರು ತಮಗೆ ನಿಯೋಜಿಸಲಾಗಿರುವ ಸಮೀಕ್ಷಾ ಬ್ಲಾಕ್‌ಗಳಲ್ಲಿ ಸಮೀಕ್ಷೆಯನ್ನು ನಿರ್ವಹಿಲು ಆದೇಶಿಸಲಾಗಿರುತ್ತದೆ. ಯಾವುದೇ ಗಣತಿದಾರರು ಸಮೀಕ್ಷೆಯಲ್ಲಿ ನಿಷ್ಕಾಳಜಿ ತೋರುವಂತಿಲ್ಲ. ಗಣತಿದಾರರು ಸಮೀಕ್ಷೆಯಲ್ಲಿ ನಿರಾಸಕ್ತಿ ಅಥವಾ ಅಸಡ್ಡೆ, ತೋರಿದ್ದಲ್ಲಿ, ಅನಗತ್ಯ ನೆಪಗಳನ್ನು ಹೇಳಿ ಗಣತಿ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಇಲಾಖಾ ವಿಚಾರಣೆ ನಡೆಸಲು ಹಾಗೂ ಸರ್ಕಾರದ ಕೆಲಸದಲ್ಲಿ ನಿಷ್ಕಾಳಜಿ ತೋರಿದ್ದಕ್ಕೆ ಶಿಸ್ತುಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನ – ಶ್ರೀ ರಾಮಕ್ಷತ್ರಿಯ ಯುವಕ ಸಮಾಜದಿಂದ 39ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭವು ಸೆಪ್ಟೆಂಬರ್‌ 29 ರಿಂದ ಅಕ್ಟೋಬರ್‌ 02ರ ತನಕ ಅದ್ದೂರಿಯಾಗಿ ಜರುಗಲಿದೆ. ಸೆ.29ರಂದು ಬೆಳಿಗ್ಗೆ ಶ್ರೀ ಶಾರದಾಂಬೆ ವಿಗ್ರಹವನ್ನು ವಾದ್ಯಘೋಷದೊಂದಿಗೆ ತಂದು ಪ್ರತಿಷ್ಠಾಪಿಸಿದ ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಭಜನಾ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಅ.01ರ ಬುಧವಾರ ನವಚಂಡಿಕಾ ಯಾಗ ಹಾಗೂ ಅದೇ ದಿನ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಶಾರದೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳ ಜರುಗಲಿದ್ದು, ಸೆ.29ರ ಸೋಮವಾರ ಮಧ್ಯಾಹ್ನ 2.30ರಿಂದ ಭಕ್ತಿಗೀತೆ, ರಂಗೋಲಿ ಸ್ಪರ್ಧೆ, ಹೂಮಾಲೆ ಕಟ್ಟುವ ಸ್ಪರ್ಧೆ, ಭಗವದ್ಗೀತಾ ಪಠಣ ಸ್ಪರ್ಧೆ ನಡೆಯಲಿದೆ. ಅಂದು ಸಂಜೆ 6.00ಕ್ಕೆ ಕುಣಿತ ಭಜನಾ ಸ್ಪರ್ಧೆ ನಡೆಯಲಿದೆ. ಅ.1ರಂದು ರಾಮಕ್ಷತ್ರಿಯ ಸಾಂಸ್ಕೃತಿಕ ವೈಭವ ಸ್ಪರ್ಧೆ ಜರುಗಲಿದೆ. ಸೆ.30ರಂದು ಕೋಟೆಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಬೈಂದೂರು ಸರಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ಶ್ರೀ ರಾಜಶೇಖರ ದೇವಸ್ಥಾನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಕರ್ನಾಟಕ, ಉಡುಪಿ ಜಿಲ್ಲಾ ಸಮಿತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ಸೂರ್ಯ ನಮಸ್ಕಾರ, ದುರ್ಗಾ ನಮಸ್ಕಾರ ಕಾರ್ಯಕ್ರಮ ನಡೆಯಿತು. ವ್ಯವಸ್ಥಾಪನ ಸಮಿತಿ ಸದಸ್ಯ ಚಂದ್ರ ಆಚಾರ್ ದೀಪ ಪ್ರಜ್ವಲಿಸಿ, ಉದ್ಘಾಟಿಸಿ, ಕ್ಷೇತ್ರದ ಕುರಿತು ವಿವರಿಸಿದರು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೋಟ ಶಾಖೆಯ ಪ್ರಮುಖರಾದ ರಮೇಶ್ ಪ್ರಭು, ಗೋಪಾಲ್ ಭಟ್, ವಿನಯ್ ಗಾಣಿಗ, ಉಡುಪಿ ಜಿಲ್ಲಾ ಶಿಕ್ಷಕ ಪ್ರಮುಖ ಬಿರಾದರ್ ಹಲವರು ಭಾಗಿಯಾದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಾರಿಯಾದ ಬಳಿಕ ದೇಶದಲ್ಲಿ, ರಾಜ್ಯದಲ್ಲಿ ಒಂದು ದೊಡ್ಡ ಕ್ರಾಂತಿಯಾಗಿದೆ. ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವುದರ ಜೊತೆಗೆ ಸಮಾಜದ ಮುಖ್ಯ ವಾಹಿನಿಗೆ ಬರಲು ಸಹಕಾರಿಯಾಗಿದೆ ಎಂದು ಯೋಜನೆಯ ಉತ್ತರ ಕನ್ನಡ ಜಿಲ್ಲೆಯ ನಿರ್ದೇಶಕ ಮಹೇಶ ಎಂ.ಡಿ. ಹೇಳಿದರು. ಅವರು ನಾವುಂದದ ಸ್ಕಂದ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇದರ ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಸದಸ್ಯರ ಸಭೆಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಜನಜಾಗೃತಿ ವೇದಿಕೆ ಮೂಲಕ ಸಹಸ್ರಾರು ಜನರನ್ನು ಮದ್ಯಪಾನದಂತಹ ದುಶ್ಚಟಗಳಿಂದ ದೂರ ಮಾಡಿ ನೆಮ್ಮದಿಯ ಜೀವನ ಬದುಕಲು ಅವಕಾಶ ಮಾಡಿಕೊಟ್ಟಿದೆ. ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳು ಜನರಿಗೆ ಇನ್ನಷ್ಟು ಹತ್ತಿರವಾಗಲು, ಜನರು ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳುವಲ್ಲಿ ಜನಜಾಗೃತಿ ವೇದಿಕೆ ಸದಸ್ಯರ ಪಾತ್ರ ಮಹತ್ತರವಾಗಿದೆ ಎಂದರು. ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೇವಾ ಪಾಕ್ಷಿಕದ ಅಂಗವಾಗಿ ದೇಶಾದ್ಯಂತ ಬಿಜೆಪಿ ವಿವಿಧ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿಸಿದ್ದು, ಅದರ ಭಾಗವಾಗಿ ಬೈಂದೂರು ಕ್ಷೇತ್ರದಲ್ಲಿಯೂ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಾಗಿದೆ. ರಕ್ತದಾನದಂತಹ ಮಹತ್ತರ ಕಾರ್ಯಕ್ಕೆ ನೇತೃತ್ವ ವಹಿಸುವ ಮೂಲಕ ಬೈಂದೂರು ಬಿಜೆಪಿ ಯುವಮೋರ್ಚಾ ಸ್ಮರಣೀಯ ಕಾರ್ಯಕ್ರಮವನ್ನು ಮಾಡಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಯುವಮೋರ್ಚಾ ಬೈಂದೂರು ನೇತೃತ್ವದಲ್ಲಿ ಸೇವಾ ಪಾಕ್ಷಿಕ – ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ಅಂಗವಾಗಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಕ್ತನಿಧಿ ಕುಂದಾಪುರದ ಸಹಯೋಗದೊಂದಿಗೆ ಹಮ್ಮಿಕೊಂಡ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ., ಪ್ರಧಾನ ಕಾರ್ಯದರ್ಶಿಗಳಾದ ಕರಣ್ ಪೂಜಾರಿ, ಗೋಪಾಲ ವಸ್ರೆ, ಮುಖಂಡ ಜಯಾನಂದ ಹೋಬಳಿದಾರ್, ಕಾರ್ಯದರ್ಶಿ ವೇಣುಗೋಪಾಲ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದಿನ ಯುವ ಪೀಳಿಗೆಯು ಸಮಾಜದಲ್ಲಿ ಆರೋಗ್ಯ ಪೂರ್ಣವಾಗಿ ಬೆಳೆಯಲು ಅಗತ್ಯವಾದ ಆರೋಗ್ಯದ ಅರಿವು ಹೊಂದಿರಬೇಕು ಎಂದು ಭಾರತೀಯ ರೆಡ್‌ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಜಯಕರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಎಚ್‌ಐವಿ / ಏಡ್ಸ್ ಕುರಿತ ಅರಿವು ಕಾರ್ಯಕ್ರಮದಲ್ಲಿ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕುಂದಾಪುರ ಸರಕಾರಿ ತಾಲೂಕು ಆಸ್ಪತ್ರೆಯ ಆರೋಗ್ಯ ಸಲಹೆಗಾರರಾದ ನಳಿನಾಕ್ಷಿ, ಎಚ್.ಐ.ವಿ./ಏಡ್ಸ್ ಕುರಿತು ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಇಂಡಿಯನ್ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಯುವ ರೆಡ್‌ಕ್ರಾಸ್ ಘಟಕ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿ, ಸ್ವಯಂ ಸೇವಕಿ ಸನ್ಮಿತ ಕಾರ್ಯಕ್ರಮ ನಿರೂಪಿಸಿ, ಮಾಲತಿ…

Read More