ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಮತ್ತು ಸರಸ್ವತಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪವನ್ ರಿಷಾ, ಅಪೂರ್ವ ತಮ್ಮ ಅಪೂರ್ವ ಸಾಧನೆ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲೇಜಿನಿಂದ ಮನೆಗೆ ತೆರಳಬೇಕಿದ್ದ ವಿದ್ಯಾರ್ಥಿಯೋರ್ವ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯ ಮೃತದೇಹ ಗಂಗೊಳ್ಳಿ ದಾಕುಹಿತ್ಲು ನದಿ ತೀರದಲ್ಲಿ ಪತ್ತೆಯಾಗಿದೆ. ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್ ಪೂಜಾರಿ ಇವರ ಪುತ್ರ, ಪ್ರಥಮ ಪಿಯುಸಿಯ ನಮೇಶ್ (17) ಮೃತ ವಿದ್ಯಾರ್ಥಿ. ಗುರುವಾರ ಬೆಳಿಗ್ಗೆ ಕಾಲೇಜಿಗೆ ತೆರಳಿದ್ದು ನಮೇಶ್ ಸಂಜೆ ನಾಲ್ಕು ಗಂಟೆಯವರೆಗೂ ಕಾಲೇಜಿನಲ್ಲಿದ್ದು ಆನಂತರ ಮನೆಗೆಂದು ತೆರಳಿದ್ದಾನೆ. ಆದರೆ ಸಂಜೆಯಾದರೂ ಮನೆಗೆ ಬರದಿದ್ದಾಗ ಹುಡುಕಾಟ ನಡೆಸಿದ್ದಾರೆ. ಬೈಕ್ನಲ್ಲಿ ತೆರಳಿದ್ದ ನಮೇಶ್ ಕನ್ನಡಕುದ್ರು ನದಿ ತೀರದಲ್ಲಿ ಬೈಕ್ ಹಾಗೂ ತನ್ನ ಕಾಲೇಜು ಬ್ಯಾಗ್ ಬಿಟ್ಟು ನಾಪತ್ತೆಯಾಗಿದ್ದನು. ಗುರುವಾರ ಸಂಜೆ ಹಾಗೂ ಶುಕ್ರವಾರ ಕೂಡ ಹುಟುಕಾಟ ಮುಂದುವರೆಸಿದ್ದು, ಅಗ್ನಿಶಾಮಕದಳ, ಗಂಗೊಳ್ಳಿಯ ಈಜುಪಟು ದಿನೇಶ್ ಖಾರ್ವಿ ಹಾಗೂ ಸ್ಥಳೀಯರು ನದಿಯಲ್ಲಿ ಸಂಜೆಯ ತನಕವೂ ಹುಟುಕಾಟ ನಡೆಸಿದ್ದರು. ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಹುಡುಕಾಟ ನಡೆಸಿದಾಗ ವಿದ್ಯಾರ್ಥಿಯ ಶವ ಪತ್ತೆಯಾಗಿದೆ.ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವೈಜ್ಞಾನಿಕ ಅಧ್ಯಯನಗಳ ಮೂಲಕ ಹೋಮಿಯೋಪಥಿಗೆ ಇನ್ನೂ ಹೆಚ್ಚಿನ ಮಾನ್ಯತೆ ಸಿಗಬೇಕು ಎಂದು ದೆಹಲಿಯ ಕೇಂದ್ರೀಯ ಹೋಮಿಯೋಪತಿ ಸಂಶೋಧನಾ ಪರಿಷತ್ನ ವೈಜ್ಞಾನಿಕ ಸಲಹಾ ಮಂಡಳಿ ಅಧ್ಯಕ್ಷ ಡಾ. ಎ. ಎಸ್. ಕುಮಾರ್ ಮಿತ್ರಚಂದ್ರ ಧಾವಲೆ ಹೇಳಿದರು. ಅವರು ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವತಿಯಿಂದ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ನಡೆಯುತ್ತಿರುವ 2 ದಿನಗಳ ಪ್ರೊವಿನಿಯೋ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಹೊಮಿಯೋಪತಿ ಪಠ್ಯಕ್ರಮದಲ್ಲಿ ಸಂಶೋಧನಾ ವಿಧಾನಶಾಸ್ತ್ರ ವಿಷಯವನ್ನು ಪರಿಚಯಿಸಿರುವುದು ಉತ್ತಮ ನಿರ್ಧಾರ. ಇದರಿಂದ ಹೋಮಿಯೋಪಥಿ ವಿದ್ಯಾರ್ಥಿಗಳಿಗೆ ಹೋಮಿಯೋಪಥಿಯನ್ನು ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ಮಾಡಲು, ಸಂಶೋಧನೆ ನಡೆಸಲು ಮತ್ತು ಲೇಖನಗಳನ್ನು ಪ್ರಕಟಿಸಲು ಸಹಾಯವಾಗುತ್ತದೆ. ಹೋಮಿಯೋಪಥಿಯಲ್ಲಿ ವೈಜ್ಞಾನಿಕವಾಗಿ ಸಾಬೀತಾದ ಅಧ್ಯಯನಗಳು ಮತ್ತು ಅವುಗಳ ಪ್ರಕಟಣೆಗಳಿಲ್ಲದೆ, ಅದಕ್ಕೆ ತಕ್ಕ ಮಾನ್ಯತೆ ಸಿಗುವುದಿಲ್ಲ. ಹೋಮಿಯೋಪಥಿಗೆ 250 ವರ್ಷಗಳ ಇತಿಹಾಸವಿದ್ದರೂ, ಅದನ್ನು ವಿಜ್ಞಾನವೆಂದು ಸ್ವೀಕರಿಸುವಲ್ಲಿ ಇನ್ನೂ ಅಡೆತಡೆಗಳಿವೆ. ವೈಜ್ಞಾನಿಕ ಅಧ್ಯಯನಗಳ ಚರ್ಚೆ ಇನ್ನಷ್ಟು ವಿಚಾರ ಸಂಕಿರಣಗಳಲ್ಲಿ ನಡೆಯಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ ಅವರ ಶಾಸಕರ ಅನುದಾನದಿಂದ ಕೋಟತಟ್ಟು ಪಡುಕರೆ ಪ್ರಾಥಮಿಕ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಶುಕ್ರವಾರ ಹಸ್ತಾಂತರಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಜಾನಕಿ ಅವರು ಮಾತನಾಡಿ, ಪಂಚಾಯತ್ ವಾರ್ಡ್ ಸದಸ್ಯರಾದ ರವೀಂದ್ರ ತಿಂಗಳಾಯ ಅವರು ಬಹುಕಾಲದ ಬೇಡಿಕೆಯ ಕುಡಿಯುವ ನೀರಿನ ಘಟಕ ಮಂಜೂರು ಮಾಡಿಸಲು ಶ್ರಮಿಸಿದ್ದು ಅವರಿಗೆ ಹಾಗೂ ಅನುದಾನ ನೀಡಿದ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ ಅವರಿಗೆ ಶಾಲೆಯ ಮತ್ತು ವಿದ್ಯಾರ್ಥಿಗಳ ಪರವಾಗಿ ಧನ್ಯವಾದ ತಿಳಿಸಿದರು. ಕೋಟತಟ್ಟು ಪಂಚಾಯತ್ ಸದಸ್ಯರಾದ ಅಶ್ವಿನಿ ದಿನೇಶ್, ರವೀಂದ್ರ ತಿಂಗಳಾಯ, ಸೀತಾ, ಮುಖ್ಯೋಪಾಧ್ಯಾಯರಾದ ಜಾನಕಿ, ಮಾಜಿ ಪಂಚಾಯತ್ ಅಧ್ಯಕ್ಷ ರಘು ತಿಂಗಳಾಯ, ಮಾಜಿ ಉಪಾಧ್ಯಕ್ಷ ಲೋಕೇಶ್ ಶೆಟ್ಟಿ, ಮಾಜಿ ಪಂಚಾಯತ್ ಸದಸ್ಯ ರಾಮ ಎಂ. ಬಂಗೇರ, ಶಿಕ್ಷಕಿ ಸಂಗೀತ ಎಸ್.ಕೆ, ಗಣೇಶ್ ಆಚಾರಿ, ಲಕ್ಷಣ ಸುವರ್ಣ, ಶೈಲಜಾ ಎಲ್.ಆರ್, ವೀಣಾ ಪ್ರಕಾಶ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳು ಉದ್ದಿಮೆ ಪರವಾನಿಗೆ ಜೊತೆಗೆ ತಂಬಾಕು ಉತ್ಪನ್ನ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ಹೊಂದಬೇಕು ಎಂಬ ನಿಯಮ ಜಾರಿಯಲ್ಲಿದ್ದು, ಪ್ರಸ್ತುತ ಪ್ರಗತಿಯು ನಿರೀಕ್ಷಿತ ಮಟ್ಟದಲ್ಲಿ ಇರುವುದಿಲ್ಲ. ಪ್ರತ್ಯೇಕ ಪರವಾನಿಗೆ ಹೊಂದುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ದ್ವಿತೀಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ನಿಗಾ ವಹಿಸಬೇಕು. ಕೋಟ್ಪಾ ಕಾಯಿದೆಯ ಉಲ್ಲಂಘನೆ ಕಂಡುಬಂದಲ್ಲಿ ಕೂಡಲೇ ಸಮಿತಿಗೆ ಮಾಹಿತಿ ನೀಡಬೇಕು ಎಂದ ಅವರು ಸ್ಥಳೀಯ ಸಂಸ್ಥೆಗಳು ನಿಯಮ ಮೀರಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆಯನ್ನು ರದ್ದು ಮಾಡಲು ಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತೀ ಜೋಡಿಗೆ 50,000 ರೂ. ನೀಡುವ ಕಾರ್ಯಕ್ರಮವನ್ನು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲಾಗಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉಡುಪಿ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ:0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ದೇವಿ ಮಾರಿಕಾಂಬ ಸೌಹಾರ್ದ ಸಹಕಾರಿ ಸಂಘ ಕೋಡಿ ಕನ್ಯಾಣ ಇದರ 2024-258ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಶ್ರೀ ದೇವಿ ಮಾರಿಕಾಂಬ ನಾಲ್ಕು ಪಾದದ ಹೈಗುಳಿ ದೇವಸ್ಥಾನದ ವಠಾರದಲ್ಲಿ ಇತ್ತೀಚಿಗೆ ಜರುಗಿತು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ನಿರ್ದೇಶಕ ಮಂಜುನಾಥ ಎಸ್.ಕೆ. ಮಾತನಾಡಿ, ಕರಾವಳಿ ಭಾಗದಲ್ಲಿ ಸಹಕಾರಿ ಸಂಘಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಸುತ್ತಿದೆ ಅದರಲ್ಲಿ ಶ್ರೀದೇವಿ ಮಾರಿಕಾಂಬ ಸಹಕಾರಿ ಸಂಘ ಜನಸ್ನೇಹಿಯಾಗಿ ಆರ್ಥಿಕ ಅಭಿವೃದ್ಧಿಗೆ ಮುನ್ನುಡಿ ಬರೆದಿದೆ ಎಂದು ಸಂಘದ ಅಭಿವೃದ್ಧಿಗೆ ಸಲಹೆ ಸೂಚನೆ ನೀಡಿದರು. ಸಂಘವು ವರದಿ ವರ್ಷದಲ್ಲಿ 25,34,946 ರಷ್ಟು ಲಾಭವನ್ನು ಗಳಿಸಿ ಸದಸ್ಯರಿಗೆ ಶೇಕಡಾ 9.5 ಡಿವಿಡೆಂಡ್ ಸಂಸ್ಥೆಯ ಅಧ್ಯಕ್ಷ ಕೃಷ್ಣ ಕೆ. ಸಭೆಯ ಅಧ್ಯಕ್ಷತೆ ವಹಿಸಿ ಘೋಷಿಸಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮುಖ್ಯ ಶಿಕ್ಷಕಿ ಸಂಪ ಟೀಚರ್ ಹಾಗೂ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡ ಗಣಪ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ವತಿಯಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ 2024-5ನೇ ಸಾಲಿನ ವರ್ಷಾಂತ್ಯಕ್ಕೆ ಒಟ್ಟು 13325 ಸದಸ್ಯರನ್ನು ಮತ್ತು 1.79 ಕೋಟಿ ಪಾಲು ಬಂಡವಾಳವನ್ನು ಹೊಂದಿದೆ. 39.35 ಕೋಟಿ ಠೇವಣಿಯನ್ನು ಹೊಂದಿದ್ದು, 19.63 ಕೋಟಿ ರೂ.ಗಳನ್ನು ವಿವಿಧ ಬ್ಯಾಂಕ್ ಸಹಕಾರಿ ಸಂಸ್ಥೆಗಳಲ್ಲಿ ಹೂಡಿಕೆ ಮಾಡಲಾಗಿದೆ. ವರ್ಷಾಂತ್ಯಕ್ಕೆ ಬ್ಯಾಂಕ್ 30.36 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.9 ಪಾಲು ಮುನಾಫೆ ನೀಡಲಾಗುವುದು ಎಂದು ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ರಾಮ ಮಂದಿರದ ಸಭಾಭವನದಲ್ಲಿ ಶುಕ್ರವಾರ ಜರಗಿದ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2024-25ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಹಕರಿಗೆ ತ್ವರಿತ ಮತ್ತು ಉತ್ತಮ ಸೇವೆ ನೀಡಲು ಶ್ರಮಿಸಲಾಗುವುದು. ಹೊರಬಾಕಿ ಸಾಲ ವಸೂಲಾತಿಗೆ ಕ್ರಮಕೈಗೊಂಡು ಬ್ಯಾಂಕ್ ಹೆಚ್ಚಿನ ಲಾಭ ಗಳಿಸಲು ಪ್ರಯತ್ನಿಸಲಾಗುವುದು. ಬ್ಯಾಂಕಿನ ಮೂರು ಶಾಖೆಗಳಲ್ಲಿ ಗ್ರಾಹಕರಿಗೆ ಅಗತ್ಯವಿರುವ ಬ್ಯಾಂಕಿಂಗ್ ಸೌಲಭ್ಯ ನೀಡಲು ಹೆಚ್ಚಿನ ಆದ್ಯತೆ ನೀಡಲಾಗುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.19: ಇಲ್ಲಿನ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಜಗದೀಶ ಪೂಜಾರಿ ಅವರು ಮಾತನಾಡಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಹಿಂದಿನ ಸಾಲಿನಲ್ಲಿ ರೂ. 1.10 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 13 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಸಂಘವು ಹಿಂದಿನ ಸಾಲಿನಲ್ಲಿ ರೂ 73.95 ಕೋಟಿ ಠೇವಣಿ ಹೊಂದಿ, ಸದಸ್ಯರಿಗೆ ರೂ. 48.52 ಕೋಟಿ ಸಾಲ ನೀಡಿದೆ ಎಂದರು. ಸಂಸ್ಥೆಯ ನಿರಂತರವಾಗಿ ಪ್ರಗತಿಯ ಪಥದಲ್ಲಿದ್ದು ಸದಸ್ಯರಿಗೂ ಬಡ್ಡಿಯಲ್ಲಿ ಕಡಿತ, ಕೃಷಿ ಹಾಗೂ ಹೈನುಗಾರಿಕೆಗೆ ಸಾಲ ನೀಡಿ ಪ್ರೋತ್ಸಾಹ ನೀಡುತ್ತಾ ಬರಲಾಗುತ್ತಿದೆ ಎಂದರು. ಉಪಾಧ್ಯಕ್ಷ ಸತೀಶ್ ಕುಮಾರ್ ಶೆಟ್ಟಿ, ನಿರ್ದೆಶಕರುಗಳಾದ ನರಸಿಂಹ ದೇವಾಡಿಗ, ಗಣೇಶ ಪೂಜಾರಿ, ಶ್ರೀನಿವಾಸ ಪೂಜಾರಿ, , ಹರಿಶ್ಚಂದ್ರ ಆಚಾರ್ಯ, ಪ್ರಭಾಕರ ಎಂ. ಖಾರ್ವಿ, ಗಣೇಶ ಕೆ. ಪೂಜಾರಿ, ವೀರೇಂದ್ರ ಹೆಗ್ಡೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಐಎಸ್ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಇಂಡಿಯನ್ ಪಬ್ಲಿಕ್ ಸ್ಕೂಲ್ ಜ್ಞಾನದೇಗುಲ ಎಸ್.ವಿ ಎಸ್ ಕ್ಯಾಂಪಸ್ ತುರುವೆಕೆರೆ ತುಮಕೂರು ಇವರ ಪ್ರಾಯೋಜಕತ್ವದಲ್ಲಿ ಪಡುಕೋಣೆ ದ್ರಾವಿಡ ಸೆಂಟರ್ ಫಾರ್ ಸ್ಪೋರ್ಟ್ಸ್ ಎಕ್ಸಲೆನ್ಸ್ ಯಲಹಂಕ ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿಯ 10ನೇ ತರಗತಿಯ ವಿದ್ಯಾರ್ಥಿ ಶುಭನ್ ಪುತ್ರನ್ ಭಾಗವಹಿಸಿ 62 ಕೆಜಿ ವಿಭಾಗದಲ್ಲಿ ಪ್ರಥಮಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ತಂಡಕ್ಕೆ ಆಯ್ಕೆಯಾಗಿದ್ದು, ಶಾಲೆಗೆ ಕೀರ್ತಿಯನ್ನು ತಂದಿದ್ದಾನೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ವಿದ್ಯಾರ್ಥಿಯನ್ನು ಹಾಗೂ ತರಬೇತಿ ನೀಡಿ ಪ್ರೋತ್ಸಾಹಿಸಿದ ದೈಹಿಕ ಶಿಕ್ಷಣ ಶಿಕ್ಷಕರನ್ನೂ, ಅಭಿನಂದನೆ ಸಲ್ಲಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪ್ರತಿಭೆಯು ಸುಪ್ತವಾಗಿರುತ್ತದೆ. ಯಾವ ವಿದ್ಯಾರ್ಥಿಯಲ್ಲಿ ಯಾವ ರೀತಿಯ ಪ್ರತಿಭೆ ಇರುವುದೆಂದು ತಿಳಿಯಲು ಅಸಾಧ್ಯ. ಅವರಿಗೆ ಯೋಗ್ಯ ವೇದಿಕೆಯನ್ನು ಒದಗಿಸಿಕೊಡುವುದಷ್ಟೇ ಪೋಷಕರ ಹಾಗೂ ಶಾಲೆಯ…
