ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.9: ಕಾಲುಸಂಕದಿಂದ ಆಯತಪ್ಪಿ ಹಳ್ಳಕ್ಕೆ ಬಿದ್ದ ಬಾಲಕಿ ಸನ್ನಿಧಿ ಮನೆಗೆ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮಲೆಗಾಡಿಗೆ ಹೊಂದಿಕೊಂಡಿರು ಪ್ರದೇಶಗಳಲ್ಲಿ ಹೆಚ್ಚು ಹಳ್ಳಗಳಿವೆ. ನಗೇಗಾ ಯೋಜನೆಯಡಿ ಕಾಲುಸೇತುವೆಗಳು ಅಗತ್ಯವಿರುವಲ್ಲಿ ನಿರ್ಮಿಸುವ ಕಾರ್ಯವನ್ನು ಮಾಡಲಾಗುವುದು ಎಂದರು. ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ ಕಾಲ್ತೋಡು ಭಾಗದಲ್ಲಿ ಅತ್ಯಧಿಕ ಕಾಲುಸಂಕವಿದ್ದು, ಹಂತ ಹಂತವಾಗಿ ಕಾಲು ಸೇತುವೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಅವಘಡ ನಡೆದ ಕಾಲುಸಂಕಕ್ಕೂ ಅನುದಾನ ಮೀಸಲಿರಿಸಿದ್ದರೂ ಲೋಕೋಪಯೋಗಿ ಇಲಾಖೆಯ ವಿಳಂಬದಿಂದ ಕಾಮಗಾರಿ ನಡೆದಿರಲಿಲ್ಲ. ಅವರು ಸನ್ನಿಧಿ ಸಹೋದರಿಯನ್ನುಯನ್ನು ದತ್ತು ತೆಗೆದುಕೊಂಡು ಮುಂದಿನ ಶಿಕ್ಷಣದ ಹೊಣೆ ತಾನು ವಹಿಸಿಕೊಳ್ಳುವುದಾಗಿ ತಿಳಿಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್, ಬೈಂದೂರು ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ ಸೇರಿದಂತೆ ಇನ್ನಿತರರು ಇದ್ದರು. ಮುಂದುವರಿದ ಶೋಧ ಕಾರ್ಯ:ಬಾಲಕಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳೆದ 75 ವರ್ಷಗಳಲ್ಲಿ ಬಡವರು, ದಲಿತರ ಉದ್ದಾರಕ್ಕಾಗಿ ಶ್ರಮಿಸಿದ ಕಾಂಗ್ರೆಸ್ ಎಂದರೆ ಈ ದೇಶದ ಇತಿಹಾಸವೇ ಆಗಿದೆ. ಸ್ವಾತಂತ್ರ್ಯ ಪಡೆದ ಸಂದರ್ಭದಲ್ಲಿ ಮೂಲಭೂತ ಸೌಕರ್ಯಗಳೇ ಕೊರತೆ ಇದ್ದ, ಬಡವರೇ ಇದ್ದ ದೇಶದಲ್ಲಿ ಎಲ್ಲರ ಬದುಕು ಕಟ್ಟುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಿದೆ ಎಂಬುದನ್ನು 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಟೀಕಿಸುವವರು ಅರಿತುಕೊಳ್ಳಬೇಕಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಬುಧವಾರ ಬೈಂದೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾದ ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿ, ಬಳಿಕ ಬೈಂದೂರು ಅಂಬೇಡ್ಕರ್ ಭವನದಲ್ಲಿ ಜರುಗಿದ ಸಭೆಯನ್ನು ಉದ್ದೇಶಿಸಿ ಮಾತನಾಡಿ ಅನೇಕ ಮಹಾನ್ ಪುರುಷರುಗಳು ಕುಟುಂಬವನ್ನು ತ್ಯಾಗ ಮಾಡಿ, ಬ್ರಿಟೀಷರ ಬಂದೂಕಿಗೆ ಎದೆಯನ್ನು ಕೊಟ್ಟು, ಜೈಲುವಾಸ ಮಾಡಿ ಹೋರಾಟ ಮಾಡಿ ದಕ್ಕಿಸಿಕೊಂಡದ್ದು ಭಾರತ ಸ್ವಾತಂತ್ರ್ಯ. ವಿವಿಧ ಧರ್ಮ, ಜಾತಿ, ಭಾಷೆಯನ್ನು ಒಳಗೊಂಡು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಟ್ಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಹಾನಿಗೊಳಗಾದ ನಾಡದೋಣಿಗಳಿರುವ ಕಳುಹಿತ್ಲು ಪ್ರದೇಶಕ್ಕೆ ಬುಧವಾರ ರಾಜ್ಯ ಮೀನುಗಾರಿಕೆ ಸಚಿವ ಎಸ್. ಅಂಗಾರ ಭೇಟಿ ನೀಡಿದರು. ಈ ವೇಳ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಶಿರೂರು ಭಾಗದಲ್ಲಿ ಅಧಿಕ ಮಳೆಯಾಗಿರುವುದರಿಂದ ಸಾಕಷ್ಟು ಅವಘಡ ಸಂಭವಿಸಿದೆ. ಕಳುಹಿತ್ಲು ಪ್ರದೇಶದಲ್ಲಿ ದೋಣಿ ಹಾಗೂ ಮೀನುಗಾರಿಕಾ ಸ್ವತ್ತುಗಳು ಸಮುದ್ರಪಾಲಾಗಿದೆ. ಈ ಬಗ್ಗೆ ಅಧಿಕಾರಿಗಳಿಂದ ಸಮಗ್ರ ವರದಿ ಪಡೆದಿದ್ದೇನೆ. ಪ್ರಾಕೃತಿಕ ವಿಕೋಪ ಪರಿಹಾರದಿಂದ ಹೆಚ್ಚಿನ ಅನುದಾನ ನೀಡಲು ಸಾಧ್ಯವಿಲ್ಲದ ಕಾರಣ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಹೆಚ್ಚಿನ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು. ಬೈಂದೂರು ತಾಲೂಕಿನ ಕೊಡೇರಿ ಬಂದರು ವಿಸ್ತರಣಾ ಕಾಮಗಾರಿ ಶೀಘ್ರ ಆರಂಭ, ಸೀಮೆಎಣ್ಣೆ ಸಮಸ್ಯೆಗಳ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಈ ವೇಳೆ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಜಿ.ಪಂ ಸಿಇಓ ಪ್ರಸನ್ನ, ಕುಂದಾಪುರ ಸಹಾಯಕ ಕಮಿಷನರ್ ರಾಜು, ಮೀನುಗಾರಿಕ ಸಹಾಯಕ ನಿರ್ದೇಶಕ ಶಿವಕುಮಾರ್, ಮೀನುಗಾರಿಕ ಸಹಾಯಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಆ.9: ಮನುಷ್ಯನಿಂದ ಹಿಡಿದು ಕ್ರಿಮಿ ಕೀಟ, ಪ್ರಾಣಿ ಪಕ್ಷಿ ಗಿಡ ಮರ ಎಲ್ಲದಕ್ಕೂ ಕೂಡ ಒಂದಕ್ಕೊಂದು ಸಂಬಂಧವಿದೆ. ಒಂದು ಕೊಂಡಿ ತಪ್ಪಿದರೂ ಭೂಮಿಯಲ್ಲಿ ಅತಿವೃಷ್ಟಿ ಅನಾವೃಷ್ಟಿ, ಭೂಕಂಪನದಂತಹ ಅನಾಹುತಗಳು ಸಂಭವಿಸುತ್ತದೆ. ಜೈವಿಕ ಪರಿಸರ ಕೊಂಡಿಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒಂದು ಮರ ಕಡಿದರೆ ಹತ್ತು ಮರಗಳನ್ನು ನೆಡುವ ಇಚ್ಚಾಶಕ್ತಿ ನಮ್ಮಲ್ಲಿರಬೇಕು ಎಂದು ಉಡುಪಿ ಅರಣ್ಯ ಸಂಚಾರಿ ದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ. ಹೇಳಿದರು. ಅವರು ನಾವುಂದದ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಹೇರೂರು ಶಾಖೆಯಲ್ಲಿ ಹಮ್ಮಿಕೊಂಡ ಅರಣ್ಯ ಇಲಾಖಾ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ ಸ್ವಾತಂತ್ರ್ಯ ಪೂರ್ವದಲ್ಲಿ ಶೇಕಡಾ 42 ರಷ್ಟು ಇರುವ ಅರಣ್ಯ ಪ್ರದೇಶ ಪ್ರಸ್ತುತ 22 ಶೇಕಡಾ ಇಳಿದಿದೆ. ಸರಕಾರ ಅರಣ್ಯ ವೃದ್ದಿಗಾಗಿ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಅದರ ಸದುಪಯೋಗಪಡಿಸಿಕೊಳ್ಳಬೇಕಾಗಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ಕುಂದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಪರ್ಡ್ ಲೋಬೋ ಮಾತನಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವದಲ್ಲಿಯೇ ಅತೀ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರು ದೇಶದಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮ ನಡೆಸುವುದು ನಮ್ಮ ಆತ್ಮ ಗೌರವದ ಸಂಕೇತ. ಪ್ರತಿ ಮನೆಯಲ್ಲಿಯೂ ರಾಷ್ಟ್ರಧ್ವಜ ಹಾರಿಸುವುದರ ಹಿಂದೆ ರಾಷ್ಟ್ರದ ತ್ರಿವರ್ಣ ಧ್ವಜದೊಂದಿಗೆ ನಾಗರಿಕರ ವೈಯಕ್ತಿಕ ಸಂಬಂಧವನ್ನು ಸ್ಥಾಪಿಸುವುದು, ರಾಷ್ಡ್ರ ನಿರ್ಮಾಣಕ್ಕಾಗಿನ ಬಧ್ದತೆಯನ್ನು ಸಾಕಾರಗೊಳಿಸುವುದಾಗಿದೆ ಎಂದು ಉಡುಪಿ ಜಿಲ್ಲಾ ಭಾರತ್ ಸೇವಾದಳ ಘಟಕದ ಜಿಲ್ಲಾ ಸಂಘಟಕ ಫಕೀರ್ ಗೌಡ ಹೇಳಿದರು. ಅವರು ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ರಾಷ್ಡ್ರೀಯ ಸೇವಾ ಯೋಜನೆಯ ಘಟPದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಹಾಗೂ ಹರ್ ಘರ್ ತಿರಂಗಾ ಮಾಹಿತಿ ಕಾರ್ಯಾಗಾರದಲ್ಲಿ ಅಬಿಪ್ರಾಯಪಟ್ಟರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಸಂಪನ್ಮೂಲ ಕಛೇರಿಯ ಸಮನ್ವಯಾಧಿಕಾರಿಗಳಾದ ಅಶೋಕ್ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶಿಕ್ಷಣದೊಂದಿಗೆ ವ್ಯಕ್ತಿ ವಿಕಸನ ಮತ್ತು ಶಿಕ್ಷಣದೊಂದಿಗೆ ಸೇವೆ ಎನ್ನುವ ಮೂಲ ಮುಖ್ಯ ಧ್ಯೇಯದೊಂದಿಗೆ ಸಮಾಜ ಮತ್ತು ವಿದ್ಯಾರ್ಥಿಗಳ ನಡುವಿನ ಸಂಬಂಧ ಬೆಸೆಯುವಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.9: ಕಾಲುಸಂಕದಿಂದ ಆಯತಪ್ಪಿ ಹಳ್ಳಕ್ಕೆ ಬಿದ್ದ ಬಾಲಕಿ ಸನ್ನಿಧಿ ಮೃತದೇಹ ಪತ್ತೆಗಾಗಿ, ಮಂಗಳವಾರ ಸಂಜೆಯ ತನಕವೂ ಬಾಲಕಿ ಹಳ್ಳಕ್ಕೆ ಬಿದ್ದಿದ್ದ ಸ್ಥಳ ಹಾಗೂ ಎಡಮಾವಿನ ಹೊಳೆಯಲ್ಲಿ ಶೋಧಕಾರ್ಯ ನಡೆಸಿದ್ದು, ಯಾವುದೇ ಸುಳಿವು ಲಭ್ಯವಾಗಿಲ್ಲ ಶೋಧಕಾರ್ಯದಲ್ಲಿ ಮುಳುಗು ತಜ್ಞರು:ಬಾಲಕಿ ಸನ್ನಿಧಿಗಾಗಿ ಹೊಳೆಯಲ್ಲಿ ಸೋಮವಾರ ಸಂಜೆ ಹಾಗೂ ಮಂಗಳವಾರ ಇಡೀ ದಿನ ಶೋಧ ಕಾರ್ಯ ನಡೆಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಗಂಗೊಳ್ಳಿಯ 8 ಮಂದಿ ಮೀನುಗಾರರು ನದಿಯಲ್ಲಿ ಮುಳುಗಿ ಮೃತದೇಹ ಹುಡುಕಾಟ ನಡೆಸಿದ್ದಾರೆ. ಮುಳುಗುತಜ್ಞ ಮಂಜುನಾಥ ಕನ್ನೇರಿ ಕೂಡ ಸಂಶಯವಿರುವ ಭಾಗದಲ್ಲಿ ಶೋಧಕಾರ್ಯ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಬೈಂದೂರು ತಹಶೀಲ್ದಾರ್, ಬೈಂದೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಬೈಂದೂರು ಪೊಲೀಸ್ ಸಿಬ್ಬಂದಿಗಳು ಸ್ಥಳದಲ್ಲಿಯೇ ಇದ್ದು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಜಿಲ್ಲಾಧಿಕಾರಿ ಭೇಟಿ:ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಬಾಲಕಿ ಕುಟುಂಬಿಕರನ್ನು ಭೇಟಿಯಾಗಿ ಸಾಂತ್ವಾನ ಹೇಳಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ತಿಳಿಸಿದ್ದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಸಹಾಯಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟ ಹಾಗೂ ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ 75ನೇ ಸ್ವಾತಂತ್ರ್ರೋತ್ಸವದ ಅಮೃತಮಹೋತ್ಸವ ಅಂಗವಾಗಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವೀರ ಯೋಧರ ತ್ಯಾಗ ಬಲಿದಾನವನ್ನು ನೆನಪಿಸುವ ಹಾಗೂ ಶಾಂತಿ ಸಾಮರಸ್ಯದ ದೇಶಪ್ರೇಮದ ಸಂದೇಶವನ್ನು ಸಾರುವ ಸಲುವಾಗಿ ಸಾಲಿಗ್ರಾಮದಿಂದ ತೆಕ್ಕಟ್ಟೆವರೆಗೆ ಕಾಲ್ನಡಿಗೆ ಜಾಥಾ ಜರುಗಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಜಾಥಾ ಬಳಿಕ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸವನ್ನು ಮತ್ತೊಮ್ಮೆ ನೆನಪಿಸುವ ಹಾಗೂ ಪ್ರಜಾಪ್ರಭುತ್ವವನ್ನು ಸಾರುವ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಕಾಂಗ್ರೆಸ್ ಭಾರತ ಸ್ವಾತಂತ್ರ್ಯಕ್ಕಾಗಿ ಬಹುದೊಡ್ಡ ಕೊಡುಗೆ ನೀಡಿದೆ. ಅದರ ಜೊತೆಗೆ ಕಳೆದ 60 ವರ್ಷಗಳಿಂದ ಸಂವಿಧಾನ ಬದ್ಧವಾದ ಆಡಳಿತ ನಡೆಸಿಕೊಂಡು ಬಂದಿದೆ. ಬಡವರ ಬಗ್ಗೆ ಕಾಳಜಿ ಕಾರ್ಯಕ್ರಮಗಳನ್ನು ಸದಾ ನೀಡಿದೆ. ಬಿಜೆಪಿ ಗಾಂಧಿ ಹತ್ಯೆಗೈದ ಗೋಡ್ಸೆ ದೇವಾಲಯ ಕಟ್ಟಲು ಶ್ರಮಿಸುತ್ತದೆ, ನೆಹರು, ಇಂದಿರಾ, ರಾಜೀವ್ ಗಾಂಧಿ ಹೀಗೆ ಹಲವು ನಾಯಕರುಗಳು ಈ ದೇಶಕ್ಕಾಗಿ ಸದಾ ಶ್ರಮಿಸಿದ ನಾಯಕರುಗಳು ಆದರೆ ಇಂಥಹ ಮಹಾನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಆ.8: ಶಾಲೆಯಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳು ಕಾಲುಸಂಕ ದಾಟುವ ವೇಳೆ ಆಯಾತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಸೋಮವಾರ ಸಂಜೆ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ನಡೆದಿದೆ. ನಾಪತ್ತೆಯಾದ ಬಾಲಕಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಚಪ್ಪರಿಕೆ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ, ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ (7 ) ನೀರುಪಾಲಾದ ಬಾಲಕಿ. ಮನೆಗೆ ತೆರಳುತ್ತಿದ್ದಾಗ ಬಿಜಮಕ್ಕಿ ಎಂಬಲ್ಲಿ ಕಾಲು ಸಂಕ ದಾಟುವಾಗ ಬಾಲಕಿ ಆಯಾತಪ್ಪಿ ಹಳ್ಳಕ್ಕೆ ಬಿದ್ದಿದ್ದಾಳೆ. ಕೂಡಲೇ ವಿಷಯ ತಿಳಿದು ಸಾರ್ವಜನಿಕರು ಹುಡುಕಾಟ ಆರಂಭಿಸಿದ್ದಾರೆ. ಈ ಹಳ್ಳ ಬೋಳಂಬಳ್ಳಿ ನದಿಗೆ ಸೇರುತ್ತಿದ್ದು, ನೀರಿನ ಸೆಳೆತಕ್ಕೆ ಮಗು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ. ಶೋಧ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಜಿ.ಪಂ.ಮಾಜಿ ಅಧ್ಯಕ್ಷ ರಾಜು ಪೂಜಾರಿ, ತಹಶೀಲ್ದಾರ್ ಕಿರಣ್ ಗೋರಯ್ಯ, ಎಸ್.ಐ ಪವನ್ ನಾಯ್, ಗ್ರಾ.ಪಂ.ಮಾಜಿ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ ಮೊದಲಾದವರು ಭೇಟಿ ನೀಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಆ.7: ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ವೇಯ್ಟ್ ಲಿಪ್ಟಿಂಗ್ ಸ್ಪರ್ದೆಯಲ್ಲಿ ಕಂಚಿನ ಪದಕ ಪಡೆದು, ಹುಟ್ಟೂರಿಗೆ ಮರಳಿದ ಗುರುರಾಜ ಪೂಜಾರಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದ ಬಳಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ನಂತರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಪೌರಾಯುಕ್ತ ಡಾ. ಉದಯ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಗುರುರಾಜ ಪೂಜಾರಿ ಅವರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅವಧಿಯಲ್ಲಿ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪದಕ ಪಡೆಯುವ ಮೂಲಕ ಗುರುರಾಜ ಪೂಜಾರಿ ಅವರು ಉಡುಪಿ ಜಿಲ್ಲೆಯ ಸಂಭ್ರಮವನ್ನು ಹೆಚ್ಚಿಸಿದ್ದು, ದೇಶದಲ್ಲಿ ಜಿಲ್ಲೆಯ ಹೆಸರನ್ನು ಪ್ರಖ್ಯಾತಗೊಳಿಸಿದ್ದಾರೆ. ಗ್ರಾಮೀಣ ಪ್ರದೇಶದ ಪ್ರತಿಭೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಹ ಉನ್ನತ ಸಾಧನೆಗಳನ್ನು ಮಾಡಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹುಣ್ಸೆಮಕ್ಕಿ ಹೊಂಬಾಡಿ-ಮಂಡಾಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ 23ನೇ ವರ್ಷದ ಅಧ್ಯಕ್ಷರಾಗಿ ವಿಶ್ವನಾಥ್ ಎನ್. ಪೂಜಾರಿ ಹಾಗೂ ಪ್ರಧಾನ ಕಾರ್ಯದಶಿ೯ಯಾಗಿ ರಮೇಶ್ ಪೂಜಾರಿ ಹೊಂಬಾಡಿ ಆಯ್ಕೆಯಾಗಿದ್ದಾರೆ. ಗೌರವಧ್ಯಕ್ಷರು: ನಾಗೇಶ ಡಿ ಶೇಟ್, ಉದಯ ಪೂಜಾರಿ, ಉಪಾಧ್ಯಕ್ಷರು: ಜಯರಾಮ ಆಚಾರ್, ಹರೀಶ್ ಬ್ರಹ್ಮನಗರ, ಜೊತೆ ಕಾರ್ಯದಶಿ೯: ಹರೀಶ್ ಎಮ್.ಎಸ್. ತಲ್ಮಕ್ಕಿ, ಗುರುರಾಜ್ ಕುಲಾಲ್, ಸಚಿನ್ ನಾಯಕ್, ಕೋಶಾಧಿಕಾರಿ: ಗಣಪತಿ ಪ್ರಭು, ಜೊತೆ ಕೋಶಾಧಿಕಾರಿ: ಗಣೇಶ್ ಎನ್ ಪೂಜಾರಿ, ಸಂಘಟನಾ ಕಾರ್ಯದಶಿ೯: ಕೃಷ್ಣ ಕುಲಾಲ್, ಸಹ ಸಂಘಟನಾ ಕಾರ್ಯದಶಿ೯: ಕಾತೀ೯ಕ್ ಪೂಜಾರಿ, ಆದಿತ್ಯ, ಸಾಂಸ್ಕೃತಿಕ ಕಾರ್ಯದಶಿ೯: ಪ್ರಕಾಶ್ ಡಿ ಶೇಟ್, ಸಾಂಸ್ಕೃತಿಕ ಜೊತೆ ಕಾರ್ಯದಶಿ೯: ಸುಭಾಸ್ ಪೂಜಾರಿ, ಭರತ್, ಕ್ರೀಡಾ ಕಾರ್ಯದಶಿ೯: ವಿಘ್ನೇಶ್ ಆಚಾರ್, ಚಂದ್ರ, ಅನಿಲ್ ಪೂಜಾರಿ ಆಯ್ಕೆಯಾಗಿದ್ದಾರೆ.
