ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.13: ಹಳೆ ವಿದ್ಯಾರ್ಥಿಗಳ ನೆನಪು ಹಾಗೂ ಚಟುವಟಿಕೆಗಳು ನೆನಪಿನ ಬುತ್ತಿಗಳಾಗಬೇಕಾದರೆ, ಅವುಗಳನ್ನು ಶಾಶ್ವತವಾಗಿ ಸಂಗ್ರಹಿಸಿಡುವ ಕಾರ್ಯಗಳು ನಡೆಯಬೇಕು. ಶಾಲೆಯ ಹಳೆಯ ವಿದ್ಯಾರ್ಥಿಗಳೇ ಆಯಾ ಶಿಕ್ಷಣ ಸಂಸ್ಥೆಗಳ ಶಾಶ್ವತ ಆಧಾರ ಸ್ತಂಭಗಳು ಎಂದು ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಸಿಇಓ ಮಹಾಬಲೇಶ್ವರ ಎಂ.ಎಸ್ ಹೇಳಿದರು ಇಲ್ಲಿನ ಕಲಾ ಮಂದಿರದಲ್ಲಿ ಬೋರ್ಡ್ ಹೈಸ್ಕೂಲ್ ಕುಂದಾಪುರ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಭಾನುವಾರ ನಡೆದ ಶತಮಾನೋತ್ತರ ಬೆಳ್ಳಿ ಹಬ್ಬ ಭವನ ಹಸ್ತಾಂತರ ಹಾಗೂ ಈ ಶಾಲೆಗೆ ತಂದ ನಂದಳಿಕೆ ಮುದ್ದಣ, ಡಾ. ಕೋಟ ಶಿವರಾಮ ಕಾರಂತ ಹಾಗೂ ಮೊಗೇರಿ ಗೋಪಾಲಕೃಷ್ಣ ಅಡಿಗರ ಪುತ್ಥಳಿ ಅನಾವರಣ ಮಾಡಿ ಅವರು ಮಾತನಾಡಿದರು. ವ್ಯಕ್ತಿಗಳು ಸಾಧನೆಯ ಮೂಲಕ ಸಮಾಜದ ಆಸ್ತಿಗಳಾಗಬೇಕು. ಸಾಹಿತ್ಯ ಕ್ಷೇತ್ರದ ಮೇರು ವ್ಯಕ್ತಿತ್ವ ರೂಪಿಸಿಕೊಂಡಿದ್ದ ಡಾ.ಕಾರಂತ, ಅಡಿಗ ಹಾಗೂ ಮುದ್ದಣ್ಣ ಅವರಂತಹ ಸಾಹಿತ್ಯ ರತ್ನಗಳು ಶಾಶ್ವತವಾಗಿ ಜನ ಮಾನಸದಲ್ಲಿ ಉಳಿಯುವಂತಹ ಕಾರ್ಯಗಳು ನಡೆಯಬೇಕು ಎಂದರು. ಶತಮಾನೋತ್ತರ ಬೆಳ್ಳಿ ಹಬ್ಬ ಸಮಿತಿ ಕಾರ್ಯಾಧ್ಯಕ್ಷ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲಾರದ ರಾಗಿಣಿಯವರು 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾಹಿತಿ ನೀಡಿದರು. ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೆಂಕಟರಮಣ ಪ್ರೌಢ ಶಾಲಾ ವಿಭಾಗದ ಮುಖ್ಯಸ್ಥರಾದ ಕೃಷ್ಣ ಅಡಿಗ, ವೆಂಕಟರಮಣ ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕರರಾದ ರಮಾಕಾಂತ ರೇವಣಕರ್ ಸಭೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭಾಗ್ ಸ್ವಾಗತಿಸಿದರು. ಉಪ ಪ್ರಾಂಶುಪಾಲೆ ಮಮತಾ ರೈ ವಂದಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.13: ಕೇರಳದ ಮಲಪ್ಪುರಂನಿಂದ ಪವಿತ್ರ ಹಜ್ ಯಾತ್ರೆಗೆ ಹೊರಟಿರುವ ಯುವಕ ಶಿಹಾಬ್ ಚೊಟೂರು (30) ಅವರನ್ನು ಕುಂದಾಪುರ ಹಾಗೂ ಗಂಗೊಳ್ಳಿ ಭಾಗದಲ್ಲಿ ಮಸ್ಜಿದ್ ಕಮಿಟಿ ಹಾಗೂ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಸ್ವಾಗತಿಸಿಕೊಳ್ಳಲಾಯಿತು. ಜೂನ್ 2 ರಂದು ಶಿಹಾಬ್ ಮಲಪ್ಪುರಂನಿಂದ ಕಾಲ್ನಡಿಗೆಯಲ್ಲಿ ಹೊರಟ ಯುವಕ ಭಾನುವಾರ ಉಡುಪಿ ಮಸೀದಿ ತಲುಪಿದ್ದರು. ಬೆಳಿಗ್ಗೆ ಅಲ್ಲಿಂದ ಕಾಲ್ನಡಿಗೆಯಲ್ಲಿ ಹೊರಟು ಮದ್ಯಾಹ್ನ ಕೋಟ ಜಾಮಿಯಾ ಮಸೀದಿಯಲ್ಲಿ ಉಪಹಾರ ಸೇವಿಸಿ ಹೊರಟು ರಾತ್ರಿ ಕುಂದಾಪುರದ ಹಂಗಳೂರು ಮಸೀದಿಯಲ್ಲಿ ತಂಗಿದ್ದರು. ಸೋಮವಾರ ಬೆಳಿಗ್ಗೆ ಕುಂದಾಪುರದಿಂದ ಕಾಲ್ನಡಿಗೆಯಲ್ಲಿ ಹೊರಟು ಬೆಳಿಗ್ಗೆ ಗಂಗೊಳ್ಳಿ ಪ್ರಾಂತ್ಯದ ತ್ರಾಸಿ ಮಸೀದಿಗೆ ತಲುಪಿದ್ದರು. ತ್ರಾಸಿ ಮಸೀದಿಯಲ್ಲಿ ಜಮಾತುಲ್ ಮುಸ್ಲಿಮೀನ್ ಗಂಗೊಳ್ಳಿಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು ಶಾಲು ಹೊದಿಸಿ ಸನ್ಮಾನಿಸಿದರು. ಮುಂದೆ ನಾವುಂದ ಮಸೀದಿ ವ್ಯಾಪ್ತಿಯಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದ್ದಾರೆ. ಎಲ್ಲಾ ಭಾಗದಲ್ಲಿಯೂ ಅವರನ್ನು ಸ್ವಾಗತಿಸಿಕೊಳ್ಳಲಾಗುತ್ತಿದೆ. ಶಿಹಾಬ್ ಚೊಟೂರು ಅವರು ಕೇರಳ ರಾಜ್ಯದಿಂದ ಪ್ರಾರಂಭಿಸಿ ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ತಾನ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಸಾoವಿಧಾನಿಕ ಸಂಸ್ಥೆಗಳನ್ನು ವಿರೋಧ ಪಕ್ಷಗಳನ್ನು ಮಣಿಸಲು ಬಳಸಿಕೊಂಡ ಸ್ವಾತಂತ್ರ್ಯ ನಂತರದ ಪ್ರಥಮ ಪ್ರಧಾನಿ ನರೇಂದ್ರ ಮೋಧಿ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಆರೋಪಿಸಿದ್ದಾರೆ. ವಿರೋಧ ಪಕ್ಷಗಳ ಮಣಿಸಲು ಸ್ವಾಯತ್ತ ಸಂಸ್ಥೆಗಳಾದ ಐಟಿ ,ಇಡಿ ಮತ್ತು ಸಿಬಿಐ ಯಂತಹ ಸಂಸ್ಥೆಗಳನ್ನು ಕಳೆದ 8 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋಧಿ ಮತ್ತು ಗ್ರಹ ಸಚಿವ ಅಮಿತ್ ಷಾ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ದುರದ್ರಷ್ಟಕರ ಎಂದಿದ್ದಾರೆ. ಪ್ರಸ್ತುತ ದಿನಗಳಲ್ಲಿ ಕಾಂಗ್ರೆಸ್ ನಾಯಕರುಗಳನ್ನು ಮತ್ತು ದೇಶದ ವಿರೋಧ ಪಕ್ಷದ ಮುಖಂಡರನ್ನುಮಣಿಸಲು ಸ್ವಾಯತ್ತ ಸಂಸ್ಥೆ ಗಳ ದುರ್ಬಳಕೆ ಮಾಡಿ ದಾಳಿ ಮಾಡುವುದು ನಿರಂತರವಾಗಿ ನಡೆಯುತ್ತಾ ಬಂದಿದ್ದು, ಪ್ರಜೆಗಳ ಸ್ವಾತಂತ್ರ್ಯ ಕಿತ್ತುಕೊoಡು ಅಧಿಕಾರ ದುರ್ಬಳಕೆ ಮಾಡುತ್ತಿರುವುದು ಖಂಡನೀಯ. ಇಂತಹ ಸರ್ವಾಧಿಕಾರಿ ಆಡಳಿತಕ್ಕೆ ಮುಂದಿನ ದಿನಗಳಲ್ಲಿ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬಂಟರ ಯಾನೆ ನಾಡವರ ಸಂಘ ಹಾಗೂ ಬೈಂದೂರು ತಾಲೂಕು ಯುವ ಬಂಟರ ವೇದಿಕೆಯಿಂದ ಕಡು ಬಡತನದಲ್ಲಿರುವ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ಕಾಲ್ತೋಡು ಗ್ರಾಮದ ಸಾಂತನಾಡಿ ನಿವಾಸಿ ನಾಗಮ್ಮ ಶೆಡ್ತಿ ಕುಟುಂಬದವರಿಗೆ ನಿರ್ಮಿಸಿಕೊಡಲಾದ ಮನೆಯನ್ನು ಹಸ್ತಾಂತರ ಮಾಡಲಾಯಿತು. ಉದ್ಯಮಿ ಗೋಕುಲ ಶೆಟ್ಟಿ ಉಪ್ಪುಂದ ನೂತನ ಮನೆಯನ್ನು ಉದ್ಘಾಟಿಸಿದರು. ಈ ಸಂದರ್ಭ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಕಾರ್ಯದರ್ಶಿ ಜಗದೀಶ ಶೆಟ್ಟಿ ಕುದ್ರುಗೋಡು, ಬಂಟರ ಯುವ ವೇದಿಕೆ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಉಪಾಧ್ಯಕ್ಷ ವಿಜಯ ಶೆಟ್ಟಿ ಮುರೂರು, ಗೌರವಾಧ್ಯಕ್ಷ ಪ್ರಜ್ವಲ್ ಶೆಟ್ಟಿ ಕಬ್ಸೆ, ಪೂರ್ವಾಧ್ಯಕ್ಷ ಸುಧಾಕರ ಶೆಟ್ಟಿ ನೆಲ್ಯಾಡಿ ಹಾಗೂ ಬಂಟರ ಸಂಘ, ಯುವ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರದೀಪ್ ಶೆಟ್ಟಿ ಅಲ್ಸಾಡಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೈಬರ್ ಕ್ರೈಮ್ ದಿನೇ ದಿನೇ ಹೆಚ್ಚುತ್ತಲೇ ಇದೆ. ಸೈಬರ್ ಅಪರಾಧ ಮಾಡಿದವರು ಅವರ ಎಲ್ಲಾ ಕುರುಹುಗಳನ್ನು ಅಳಿಸಿಬಿಡುವುದರಿಂದ ಅವರನ್ನು ಪತ್ತೆಹಚ್ಚುವುದು ಕಷ್ಟವಾಗುತ್ತಿದೆ. ಆಗಾಗಿಯೇ ಸಾರ್ವಜನಿಕರು ಹೆಚ್ಚು ಜಾಗೃತೆಯಿಂದ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕಿದೆ ಎಂದು ವಕೀಲ ರಾಘವೇಂದ್ರ ಚರಣ ನಾವಡ ಹೇಳಿದರು. ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆಯ ಸಹಯೋಗದಲ್ಲಿ ನಡೆದ ಸೈಬರ್ ಕ್ರೈಮ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಇಂದು ಎಲ್ಲಾ ಕೆಲಸಗಳಿಗೂ ನಾವು ಫೋನುಗಳ ಮೇಲೆ ಅವಲಂಬಿತರಾಗಿದ್ದೇವೆ. ಆದರೆ ನಾವು ಹೊಸ ಹೊಸ ಅಪ್ಗಳನ್ನು ಡೌನ್ಲೋಡ್ ಮಾಡುವಾಗ ಅಥವಾ ಎಸ್.ಎಂ.ಎಸ್ ಗಳನ್ನು ಕಳುಹಿಸುವಾಗ ಅತ್ಯಂತ ಎಚ್ಚರದಿಂದ ಇರಬೇಕು ಎಂದರು. ಪ್ರಾಂಶುಪಾಲರಾದ ಡಾ. ಎನ್.ಪಿ ನಾರಾಯಣ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ವೇದಿಕೆಯ ಅಧ್ಯಕ್ಷರು ಮತ್ತು ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಯಶವಂತಿ. ಕೆ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶುಭಂಕರ್ ಆಚಾರಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದುಬೈನ ಹೆಚ್.ಸಿ.ಟಿ ಅಪ್ಲೈಡ್ ಮೀಡಿಯಾ ವಿಭಾಗ ಡಿಜಿಟಲ್ ಸಾಕ್ಷರತೆ ನಾಯಕತ್ವ ಉಪಕ್ರಮದ ಭಾಗವಾಗಿ ಆಯೋಜಿಸಿದ್ದ ‘ಲೈಫ್ ಇಸ್ ಬ್ಯೂಟಿಫುಲ್’ ಅಂತರಾಷ್ಟ್ರೀಯ ಛಾಯಾಚಿತ್ರ ಸ್ವರ್ಧೆಯಲ್ಲಿ ನಿತೀಶ್ ಪಿ. ಬೈಂದೂರು ಪ್ರಥಮ ಸ್ಥಾನ ಗಳಿಸಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕರಾಗಿರುವ ಎಂ.ಎ ಪತ್ರಿಕೋದ್ಯಮ ಪದವೀದರರಾಗಿದ್ದು ಪ್ರಸ್ತುತ ಛಾಯಾಚಿತ್ರ ಪತ್ರಿಕೋದ್ಯಮ ವಿಷಯದ ಮೇಲೆ ಪಿ.ಎಚ್.ಡಿ ಮಾಡುತ್ತಿದ್ದಾರೆ. ಪ್ರತಿಭಾವಂತ ಹಾಗೂ ಛಾಯಾಗ್ರಹಣದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದ ನಿತೀಶ್ ಅವರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆಯುತ್ತಿರುವ ಅವಧಿಯಲ್ಲಿ ವಿವಿಧ ಮಾಧ್ಯಮಗಳಲ್ಲಿ ಇಂಟರ್ಶಿಫ್ ವಿದ್ಯಾರ್ಥಿಯಾಗಿ ದುಡಿದು ಸೈ ಏನಿಸಿಕೊಂಡಿದ್ದಾರೆ. ಪೋಟೋಗ್ರಫಿಯೊಂದಿಗೆ ಪದವಿ ಪಡೆಯುತ್ತಿದ್ದ ದಿನಗಳಲ್ಲಿಯೇ ಮೀನಿನ ಹೆಜ್ಜೆ-ಬೆಸ್ತರ ಲೋಕ, ದುರ್ಗದ ಅವಾಂತರ, ಡಾ. ಎಂ. ಮೊಹನ ಆಳ್ವ ಕಿರುಚಿತ್ರಗಳನ್ನು ತನ್ನದೇ ನಿರ್ದೇಶನದಲ್ಲಿ ನಿರ್ಮಿಸಿ ತನ್ನ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಅಂತಿಮ ಪದವಿಯಲ್ಲಿರುವಾಗ ವಿಶ್ವವಿದ್ಯಾನಿಲಯ ಮಟ್ಟದ ಸ್ಪಾಟ್ ಫೋಟೊಗ್ರಫಿಯಲ್ಲಿ ಪ್ರಥಮ ಬಹುಮಾನ ಪಡೆದಿದ್ದರು. ಅವರ ಪೋಟೋಗಳು ಸಾಗರ್ ಪೋಟೋಗ್ರಾಫಿಕ್ ಸೊಸೈಟಿ ಮತ್ತು ಫಿಶ್ರಿ ಪೋಟೋಗ್ರಫಿ ಕ್ಲಬ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಸಮೀಪದ ಸಳ್ಕೋಡು ಸ.ಹಿ.ಪ್ರಾ. ಶಾಲೆಯಲ್ಲಿ ಕುಂದಾಪುರ ಪ್ರಾದೇಶಿಕ ಅವರಣ್ಯ ವಲಯದ ಬೀಜ ಬಿತ್ತನೆ ಅಭಿಯಾನ 2022-23 ನಡೆಯಿತು. ಬೀಜ ಬಿತ್ತೋಣ ಅರಣ್ಯ ಬೆಳೆಸೋಣ ಧ್ಯೆಯ ವಾಕ್ಯದೊಂದಿಗೆ ಬೀಜ ಬಿತ್ತನೆಗೆ ಚಾಲನೆ ನೀಡಿಲಾಯಿತು. ಜೊತೆಗೆ ಸಸಿ ಹಾಗೂ ಸೀಡ್ ಬಾಲ್ ವಿತರಿಸಲಾಯಿತು. ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾದ ಸುರೇಂದ್ರ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯರಾದ ನಾಗೇಶ್ ನಾಯ್ಕ್, ಗ್ರಾಮ ಅರಣ್ಯ ಸಮಿತಿ ಉಪಾಧ್ಯಕ್ಷರಾದ ಮಹಾಬಲ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ಬಾಬು ಗೌಡ, ಸೇವಾಪ್ರತಿನಿಧಿ ರಾಮ ಶೆಟ್ಟಿ ಅತ್ತಿಕಾರ್, ಪರಿಸರ ಪ್ರೇಮಿ ಸಂದೇಶ್ ಪ್ರಭು ಉಪಸ್ಥಿತರಿದ್ದರು. ಉಪವಲಯ ಅರಣ್ಯಾಧಿಕಾರಿ ಸುನಿಲ್ ಪ್ರಾಸ್ತಾವಿಕ ಮಾತನಾಡಿದರು. ಬಾಬು ಗೌಡ ಅವರು ಸ್ವಾಗತಿಸಿ, ಅರಣ್ಯ ರಕ್ಷಕರಾದ ಬಸವರಾಜ್ ಕಾರ್ಯಕ್ರಮ ನಿರ್ವಹಿಸಿ, ಹರಿಪ್ರಸಾದ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರು, ಕೆರಾಡಿ ಮೊದಲಾದ ಗ್ರಾಮೀಣ ಪ್ರದೇಶಗಳಿಗೆ ಸರಕಾರಿ ಬಸ್ ಸೌಲಭ್ಯ ಕಲ್ಪಿಸದೇ ಇರುವುದರಿಂದ ವಿದ್ಯಾರ್ಥಿಗಳು ಕಾಲೇಜಿಗೆ ತೆರಳುವುದು ದುಸ್ತವಾಗಿದ್ದು, ಗ್ರಾಮೀಣ ಭಾಗಕ್ಕೆ ಸರಕಾರಿ ಬಸ್ ಸೇವೆ ಒದಗಿಸುವಂತೆ ಆಗ್ರಹಿಸಿ ಕುಂದಾಪುರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಶನಿವಾರ ಇಲ್ಲಿನ ಶಾಸ್ತ್ರೀ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಬಳಿಕ ವಿದ್ಯಾರ್ಥಿಗಳು ಕುಂದಾಪುರ ಮುಖ್ಯ ರಸ್ತೆಯಲ್ಲಿ ಕಾಲ್ನಡಿಗೆ ಮೆರವಣಿಗೆಯಲ್ಲಿ ಸಾಗಿ ಕುಂದಾಪುರ ತಹಸೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ಮನವಿ ಸಲ್ಲಿಸಿದರು. ಸುಮಾರು 2000 ವಿದ್ಯಾರ್ಥಿಗಳು ಪ್ರತಿದಿನ ಶಾಲೆಗೆ ತೆರಳಲು ಹೊಲ್ಲೂರಿನಿಂದ ಹೊರಟು ಕುಂದಾಪುರದವರೆಗೂ ಸಹ ಅನೇಕ ವಿದ್ಯಾಸಂಸ್ಥೆಗಳಿಗೆ ತೆರಳುತಿದ್ದು, ವಿದ್ಯಾರ್ಥಿಗಳಿಗೆ ನಿತ್ಯ ತೊಂದರೆಯಾಗುತ್ತಿದೆ ಎಂದರು. ತಾಲೂಕಿನ ಗ್ರಾಮೀಣ ಭಾಗವಾದ ಕೆರಾಡಿ – ಮಾರಣಕಟ್ಟೆ ರಸ್ತೆಯಲ್ಲಿ ಸುಮಾರು 500 ವಿದ್ಯಾರ್ಥಿಗಳು ಮತ್ತು ಕೆರಾಡಿ ಬೆಳ್ಳಾಲ ರಸ್ತೆಯಲ್ಲಿ ನೂರಕ್ಕೂ ಅಧಿಕ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಬರುತ್ತಿದ್ದು, ಬಸ್ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳು, ಶಾಸಕರು, ಮಂತ್ರಿಗಳು ಹಾಗೂ ಮುಖ್ಯ ಮಂತ್ರಿಯವರಿಗೆ ಪತ್ರ ಬರೆದಿದ್ದು ಯಾವುದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಉಡುಪಿ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿ, 9 ಬೈಕುಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿನ ದ್ವಿಚಕ್ರ ವಾಹನ ಕಳ್ಳತನ ತಡೆಗಟ್ಟುವುದು ಹಾಗೂ ಪತ್ತೆ ಮಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ನಿರ್ದೇಶನದಂತೆ ವಿಶೇಷ ತಂಡವು ಕೋಟ ಸರಹದ್ದಿನ ವಿವಿಧ ಭಾಗದಲ್ಲಿ ವಾಹನ ತಪಾಸಣೆ ಮತ್ತು ದಾಖಲೆ ಪರಿಶೀಲಿಸುತ್ತಿದ್ದ ಸಂದರ್ಭ ಜೂ. 9ರಂದು ವಡ್ಡರ್ಸೆ ಗ್ರಾಮದ ರೈಲ್ವೇ ಬ್ರಿಡ್ಜ್ ಬಳಿ ನಂಬರ್ ಪ್ಲೇಟ್ ಇಲ್ಲದ ವಾಹನವನ್ನು ಸಂಶಯಾಸ್ಪದವಾಗಿ ನಿಲ್ಲಿಸಿದ್ದು, ವಾಹನದ ಬಳಿ ಇದ್ದ ಇಬ್ಬರನ್ನು ದಾಖಲಾತಿಗಳ ಬಗ್ಗೆ ವಿಚಾರಿಸಿದಾಗ ಯಾವುದೇ ದಾಖಲಾತಿಗಳನ್ನು ಹಾಜರುಪಡಿಸದಿರುವುದರಿಂದ ತನಿಖೆ ನಡೆಸಿದ್ದು, ಆಗ ಅದು ಕಳ್ಳತನ ಮಾಡಿದ ಬೈಕ್ ಎನ್ನುವುದು ತಿಳಿದುಬಂದಿದೆ. ಪ್ರಕರಣದ ಆರೋಪಿಗಳಾದ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ಅತ್ತಿಗುಡ್ಡೆ ನಿವಾಸಿ ಸೋಮಶೇಖರ (21) ಹಾಗೂ ಬಾಗಲಕೋಟೆ ಜಿಲ್ಲೆ ಹುನಗುಂಡ ತಾಲೂಕು ಹೊಸಮನೆ ನಿವಾಸಿ ಶಂಕರ ಗೌಡ…
