ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿವಿಧ ಸುಮುದಾಯದ ಮೋರ್ಚಾಗಳ ಮೂಲಕ ಸಂಘಟನಾ ಶಕ್ತಿ ಹೆಚ್ಚಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ವಿವಿಧ ಮೋರ್ಚಾಗಳ ಸಂಘಟನೆ ಮಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಯನ್ನು ಕೊನೆಹಂತದ ಜನರಿಗೂ ತಲುಪಿಸುವ ಮೂಲಕ ಪಕ್ಷದ ಬಲವರ್ಧನಗೆ ವಿಶಿಷ್ಠ ಕೊಡಗೆ ನೀಡಲಾಗುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ರಾಜ್ಯ ಬಿಜೆಪಿ ಹಿಂದುಳಿದ ಮೋಚಾ ಆಶ್ರಯದಲ್ಲಿ ಕೋಟೇಶ್ವರ ಸಹನಾ ಕನ್ವೆಶನ್ ಶ್ರೀ ಕೃಷ್ಣ ಹಾಲ್ನಲ್ಲಿ ಗುರುವಾರ ನಡೆದ ಹಿಂದುಳಿದ ವರ್ಗ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿ ವಿವಿಧ ಕಾರಣಗಳ ನವ ಇಟ್ಟುಕೊಂಡು ರಾಷ್ಟ್ರದ್ರೋಹ ಎಸಗುವ, ಭಯೋತ್ಪಾದನೆ, ಉಗ್ರವಾದ ಎಂದಿಗೂ ಸಹಿಸೋದಿಲ್ಲ ಎಂದ ಅವರು, ವಿದ್ರೋಹಿಗಳ ಹೆಡೆಮುರಿಕಟ್ಟಿ, ಈ ನೆಲದ ಕಾನೂನು ಮುರಿಯುವುದನ್ನು ಎಂದಿಗೂ ಸಹಿಸೋದಿಲ್ಲ ಎಂದು ಹೇಳಿದರು. ರಾಜಾಜಿನಗರ ಮಾಜಿ ಶಾಸಕ ದೇ.ಲ.ನರೇಂದ್ರ ಬಾಬು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕೊಯಿಲಡಿ ಸುರೇಶ್ ನಾಯಕ್, ದಕ ಬಿಜೆಪಿ ಸಹ ಉಸ್ತುವಾರಿ ರಾಜೇಶ್ ಕಾವೇರಿ, ಮಾಜಿ ಶಾಸಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲೆಯ ವಿಕಲಚೇತನರು, ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ ಕಾರ್ಡ್) ಪಡೆಯಲು ಸ್ವಾವಲಂಬನ್ ಕಾರ್ಡ್ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810 /811, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಉಡುಪಿ, ಕುಂದಾಪುರ ಮೊ.ನಂ: 9901824878, ಕಾರ್ಕಳ ಮೊ.ನಂ: 9481145518 ಅಥವಾ ಗ್ರಾಮ ಪಂಚಾಯತ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ ಎನ್.ಟಿ.ಎಸ್.ಇ ಮತ್ತು ಎನ್.ಎಮ್.ಎಮ್.ಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳು ಶಾಲೆಗಳ ಮೂಲಕ ವೆಬ್ಸೈಟ್ https://sslc.karnataka.gov.in ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 15 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಸರಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲೆಯ 10 ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎನ್.ಟಿ.ಎಸ್.ಇ ಹಾಗೂ ಸರಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ 8 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎನ್.ಎಮ್.ಎಮ್.ಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಹರಿರುತ್ತಾರೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ತಾಲೂಕು ಹಂತದಲ್ಲಿ ವಿಶೇಷ ತರಬೇತಿಯನ್ನು ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ನ್ಯಾಯಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ನವ ಕಾನೂನು ಪದವೀಧರರಿಗೆ ಮಾಸಿಕ 2,000 ರೂ. ನಂತೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಧೀಶರ ಕಚೇರಿಯನ್ನು ಸಂಪರ್ಕಿಸುವAತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.03: ಇಲ್ಲಿನ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಶುಕ್ರವಾರ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಹಾಗೂ ರಥೋತ್ಸವವು ವೈಭವದೊಂದಿಗೆ ನೆರವೇರಿತು. ವಾರ್ಷಿಕ ಜಾತ್ರೋತ್ಸವವದಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಪೂರ್ವಾಹ್ನ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಶತರುದ್ರಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸೂರ್ಯೋದಯದಿಂದ ಸೂರ್ಯಸ್ತಮಾನದವರೆಗೆ ಕುಂದಾಪುರ ತಾಲೂಕಿನ ಭಜನಾ ಮಂಡಳಿಗಳ ಒಕ್ಕೂಟದಿಂದ ಶ್ರೀ ದೇವರ ನಾಮ ಸಂಕೀರ್ತನೆ ನಡೆಯಿತು. ಸಂಜೆ ಲಕ್ಷದೀಪೋತ್ಸವ ಪ್ರಯುಕ್ತ ನೆರೆದಿದ್ದ ಅಸಂಖ್ಯ ಭಕ್ತರು ಕುಂದೇಶ್ವರ ದೇವರಿಗೆ ಹಣತೆ ದೀಪ ಬೆಳಗಿ ದೇವರ ದರ್ಶನ ಪಡೆದರು. ದೇವಳದ ಪುಷ್ಪ ರಥೋತ್ಸವ ಹಾಗೂ ಶ್ರೀ ದೇವರ ಕಟ್ಟೆಪೂಜೆ ನಡೆಯಿತು. ಬೆಳಗ್ಗೆ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ಶತರುದ್ರಾಭಿಷೇಕ; ಮಹಾಪೂಜೆ; ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆದರೆ, ರಾತ್ರಿ ರಂಗಪೂಜೆ ಮತ್ತು ಮಹಾಮಂಗಳಾರತಿ ನಡೆದ ಬಳಿಕ ಶ್ರೀ ದೇವರ ಉತ್ಸವಮೂರ್ತಿ ಗರ್ಭಗುಡಿಯಿಂದ ಹೊರತಂದು ಹಳಗ – ಜಾಗಟೆ ಮೊದಲಾದ ವಾದ್ಯೋಪಕರಣಗಳ ನಿನಾದ; ದೇವಾಲಯದ ತಂತ್ರಿಗಳ ನೇತೃತ್ವದಲ್ಲಿ ಒಳಗೆ ಮೂರು ಸುತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆ ವಿರುದ್ಧ, ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಸಿಗದಿರುವುದು ಹಾಗೂ ಆಡಳಿತ ವೈದ್ಯಾಧಿಕಾರಿ ಕರ್ತವ್ಯ ಲೋಪ ಎಸಗುತ್ತಿದ್ದಾರೆ ಎಂದು ಆರೋಪಿಸಿ ಶುಕ್ರವಾರ ಸಮುದಾಯ ಆರೋಗ್ಯ ಕೇಂದ್ರದ ಎದುರುಗಡೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಭಾರೀ ಪ್ರತಿಭಟನೆ ನಡೆಯಿತು. ಪ್ರತಿಭಟನೆ ನೇತ್ರತ್ವ ವಹಿಸಿ ಮಾತನಾಡಿದ ಶ್ರೀಧರ ಬಿಜೂರು, ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಎರಡು ಖಾಸಗಿ ಆಸ್ಪತ್ರೆ ನಡೆಸುತ್ತಿದ್ದಾರೆ. ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದರೆ ಅವರನ್ನು ಇವರ ಖಾಸಗಿ ಆಸ್ಪತ್ರೆಗೆ ಚೀಟಿ ಕೊಡುತ್ತಾರೆ. ರಾಜಕೀಯ ಪ್ರಭಾವ ಹೊಂದಿರುವ ಇವರು ಇತರ ವೈದ್ಯರಿಗೆ ಇಲ್ಲಿಗೆ ಬರಲು ಬಿಡುತ್ತಿಲ್ಲ. ತಮ್ಮ ಕರ್ತವ್ಯವನ್ನು ಸರಿಯಾಗಿ ಮಾಡುವುದಿಲ್ಲ ಎಂದಾದರೆ ಕೆಲಸಕ್ಕೆ ರಾಜನಾಮೆ ಕೊಟ್ಟು ಅಥವಾ ವರ್ಗಾವಣೆಯಾಗಿ ಹೋಗಲಿ. ಜನಸಾಮಾನ್ಯರಿಗೆ ಸೇವೆ ನೀಡಲು ಹಿಂದೇಟು ಹಾಕುವ ಇಂತಹ ವೈದ್ಯರು ನಮಗೆ ಬೇಕಿಲ್ಲ ಎಂದ ಅವರು, ಈ ಬಗ್ಗೆ 10 ದಿನಗಳೊಳಗೆ ಹಿರಿಯ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಡಿ.3: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ, ಸ್ವಾಗತಿಸಲಾಯಿತು. ರಾಜ್ಯಪಾಲರು ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಅರ್ಚನೆ ಮಾಡಿಸಿದರು. ಶ್ರೀ ಮೂಕಾಂಬಿಕಾ ದೇವಿಗೆ ತುಪ್ಪದ ದೀಪ ಆರತಿ ಬೆಳಗಿದ ರಾಜ್ಯಪಾಲರು ಬ್ರಹ್ಮಾರ್ಪಣ ನೆರವೇರಿಸಿದರು. ದೇವಾಲಯದ ಆವರಣದಲ್ಲಿನ ಶ್ರೀ ವೀರಭದ್ರಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಶ್ರೀ.ಮೂಕಾಂಬಿಕಾ ದೇವಾಲಯದ ಪ್ರದಕ್ಷಿಣೆ ಮಾಡಿ, ದೇವಿಯ ಚಿನ್ನದ ರಥ ವೀಕ್ಷಿಸಿದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮಿ, ಎಎಸ್ಪಿ ಕುಮಾರ ಚಂದ್ರ, ದೇವಾಲಯದ ಪ್ರಧಾನ ಅರ್ಚಕರು ಮತ್ತು ಸಿಬ್ಬಂದಿಗಳು, ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿವಿಧ ಅಭಿವೃದ್ಧಿ ನಿಗಮಗಳಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ವಿಶ್ವಕರ್ಮ ಅಭಿವೃದ್ಧಿ ನಿಗಮ:ಜಿಲ್ಲಾ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ, ಪ್ರಸಕ್ತ ಸಾಲಿನಲ್ಲಿ ವಿಶ್ವಕರ್ಮ ಸಮುದಾಯಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://www.kvcdcl.karnataka.gov.in/ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574882 ಅನ್ನು ಸಂಪರ್ಕಿಸುವAತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಸವಿತಾ ಸಮಾಜ ಅಭಿವೃದ್ಧಿ ನಿಗಮ:ಜಿಲ್ಲಾ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ, ಪ್ರಸಕ್ತ ಸಾಲಿನಲ್ಲಿ ಸವಿತಾ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು…
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಸಮಾಜವನ್ನು ಜೋಡಿಸುವ ಕಾರ್ಯ ಇಂದಿನ ಜರೂರಾಗಿದೆ. ಬಣ್ಣ, ಕಲಾಪ್ರಪಂಚ, ಕ್ರೀಡೆಯಲ್ಲಿ ಯಾವುದೇ ಪರಿಬೇಧಗಳಿಲ್ಲದ ಸಮಾಜ ಒಗ್ಗೂಡಿಸುವ ತಾಕತ್ತಿದೆ. ಸಣ್ಣ ಗೆರೆಗಳ ಕಾರ್ಟೂನಿಗೂ ಸಮಾಜ ತಿದ್ದುವ ಅಪಾರವಾದ ಶಕ್ತಿಯಿದೆ ಎಂದು ಚಿತ್ರ ನಟ ಡಾಲಿ ಧನಂಜಯ ಹೇಳಿದರು. ಅವರು ಕುಂದಾಪುರದ ಅಥರ್ವ ಕಾಂಪ್ಲೆಕ್ಸ್ನಲ್ಲಿ ಶುಕ್ರವಾರ ‘ಭಾರತ ಮುಂದಿನ 75 ವರ್ಷಗಳು ಥೀಮ್ನೊಂದಿಗೆ ನಡೆಯುತ್ತಿರುವ ಮೂರು ದಿನಗಳ ಕಾರ್ಟೂನ್ ಹಬ್ಬ ಉದ್ಘಾಟಿಸಿ ಮಾತನಾಡಿ ಕಲಾವಿದ ಸ್ವತಂತ್ರವಾಗಿ ತನ್ನ ಕಲ್ಪನೆಯಲ್ಲಿ ಸಮಾಜದ ಆಗುಹೋಗುಗಳನ್ನು ಚಿತ್ರಿಸಿದರೆ, ಅಭಿನಯದಲ್ಲಿ ಬೇರೆ ಬೇರೆ ಮಜಗಳ ಮೂಲಕ ಅಭಿವ್ಯಕ್ತಿ ಸಾಧ್ಯ. ಯಾವುದೇ ಕಲಾವಿದರಾದರೂ ಅವರಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಶಕ್ತಿಯಿದೆ ಎಂದರು. ಕಲಾವಿದ ಬಾದಲ್ ನಂಜುಂಡ ಸ್ವಾಮಿ ರಚಿಸಿದ ಪುನೀತ್ ರಾಜಕುಮಾರ್ ಚಿತ್ರಕ್ಕೆ ಸಹಿ ಹಾಕುವ ಮೂಲಕ ಡಾಲಿ ಧನಂಜಯ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂಸದ, ಲೇಖಕ ಶಶಿ ತರೂರು, ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರು ವೀಡಿಯೋ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ3: ಕುಂದಾಪುರದ ಪ್ರಧಾನ ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿಯನ್ನು ಕಚೇರಿಯ ಎಲ್ಲಾ ದಿನಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯ ವರೆಗೆ ಮಾಡಲಾಗುವುದು ಹಾಗೂ ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಸಹ ಪುನಃ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಈ ಎಲ್ಲಾ ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
