ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.28: ಜಿಲ್ಲೆಯಲ್ಲಿ ನೊಂದಾಯಿಸಲ್ಪಟ್ಟ ಕ್ಲಿನಿಕ್ ಹಾಗೂ ಆಸ್ಪತ್ರೆಗಳು ನೋಂದಾವಣೆಯಾದ ಪದ್ಧತಿಯಲ್ಲಿ ನಿಯಮಾನುಸಾರವಾಗಿ ಸೇವೆ ನೀಡಬೇಕು. ಆಯುರ್ವೇದ ಪದ್ಧತಿಯೊಂದಿಗೆ ಇಂಟಿಗ್ರೇಟೆಡ್ ಡಿಪ್ಲೋಮಾ ಕೋರ್ಸ್ಗಳನ್ನು ಮಾಡಿ ಪ್ರಮಾಣ ಪತ್ರ ಹೊಂದಿರುವ ವೈದ್ಯರುಗಳು ಆಧುನಿಕ ವೈದ್ಯ ಪದ್ಧತಿಯಲ್ಲಿ ವೈದ್ಯ ವೃತ್ತಿ ನಡೆಸಲು ಅವಕಾಶವಿದ್ದು, ನೋಂದಾವಣೆ ಹೊಂದಿರುವ ಪದ್ಧತಿಯನ್ನು ಬಿಟ್ಟು ಇನ್ನೊಂದು ಪದ್ಧತಿಯಲ್ಲಿ ಚಿಕಿತ್ಸೆ ನೀಡುತ್ತಿರುವುದು ಕಂಡುಬಂದಲ್ಲಿ ತಾಲೂಕು ಪ್ರಾಧಿಕೃತ ಅಧಿಕಾರಿಗಳು ಕ್ರಮ ವಹಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಎ.28: ತಾಲೂಕಿನ ಮೇಕೋಡು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ “ಚಂದ್ರಶ್ರೀ’ ಹಾಗೂ ಸಾಂದ್ರಶೀತಲೀಕರಣ ಘಟಕ ಉದ್ಘಾಟನೆ ಮತ್ತು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇವರ ಸಹಭಾಗಿತ್ವದಲ್ಲಿ ಹೈನುಗಾರರ ಸಮಾವೇಶ ಉದ್ಘಾಟನಾ ಸಮಾರಂಭ ೧೧ನೇ ಉಳ್ಳೂರು ಗ್ರಾಮದ ಮೇಕೋಡುವಿನಲ್ಲಿ ನಡೆಯಿತು. ಸಾಂದ್ರಶಿತಲೀಕರಣ ಘಟಕ ಹಾಗೂ ಸಮಾವೇಶ ಉದ್ಘಾಟಿಸಿದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಹೈನುಗಾರರಿಗೆ ಹಾಗೂ ರೈತರ ಸಹಾಯಕ್ಕಾಗಿ ರಾಜ್ಯದಲ್ಲಿಯೇ ಎರಡನೇ ದೊಡ್ಡ ಸಾಂದ್ರಶೀತಲೀಕರಣ ಘಟಕದ ಆರಂಭಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಇಂತಹ ಯೋಜನೆ ಅನುಷ್ಠಾನಗೊಳಿಸುವಲ್ಲಿ ಶ್ರಮಿಸಿದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಅಭಿನಂದನೆಗಳು. ಗ್ರಾಮದ ಅಭಿವೃದ್ಧಿಯ ಬಗ್ಗೆ ದೂರದೃಷ್ಠಿತ್ವ ಹೊಂದಿದ್ದ ದಿ. ವೈ. ಚಂದ್ರಶೇಖರ ಶೆಟ್ಟಿ ಅವರ ಕೊಡುಗೆ ಅಪಾರ. ಅವರ ಕಾರ್ಯಚಟುವಟಿಕೆ ಶ್ಲಾಘನೀಯವಾದದ್ದು ಎಂದರು. ದ.ಕ ಹಾಲು ಒಕ್ಕೂಟದ ಉಪಾಧ್ಯಕ್ಷ ಎಸ್. ಬಿ. ಜಯರಾಮ ಮಾತನಾಡಿ ರೈತರಾಗಿ, ಹೈನುಗಾರರಾಗಿ ತಳಮಟ್ಟದಿಂದ ಹಾಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಎ.27: ಸುರಭಿ ಜೈಸಿರಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಕೊಡಮಾಡುತ್ತಿರುವ ಬಿಂದಶ್ರೀ ಪ್ರಶಸ್ತಿಗೆ ಈ ಭಾರಿ ಸಾಂಸ್ಕೃತಿಕ ಚಿಂತಕ, ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಎಂ. ಮೋಹನ ಆಳ್ವ ಆಯ್ಕೆಯಾಗಿದ್ದು, ಮೇ.9ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ಇಪ್ಪತ್ತೈದು ಸಾವಿರ ರೂ. ನಗದು, ಚಿನ್ನದ ಪದಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಈ ಬಗ್ಗೆ ಬುಧವಾರ ಬೈಂದೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸುರಭಿ ಸಂಸ್ಥೆಯ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯ ಎಸ್. ಜನಾರ್ದನ ಮರವಂತೆ ಮಾಹಿತಿ ನೀಡಿದರು. ಸುರಭಿ ಅಧ್ಯಕ್ಷ ನಾಗರಾಜ ಪಿ ಯಡ್ತರೆ ಮಾತನಾಡಿ ಇಪ್ಪತ್ತೆರಡನೇ ವರ್ಷದ ಸಂಭ್ರಮದಲ್ಲಿರುವ ಬೈಂದೂರಿನ ಕಲಾ ಸಂಸ್ಥೆ ಸುರಭಿ ಆಶ್ರಯದಲ್ಲಿ ಮೇ.7ರಿಂದ ನಾಲ್ಕು ದಿನಗಳ ಕಾಲ ಸುರಭಿ ಜೈಸಿರಿ ಕಾರ್ಯಕ್ರಮ ಹಾಗೂ ಎಂಟನೇ ವರ್ಷದ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಸಂಜೆ 6ಕ್ಕೆ ಶಾರದಾ ವೇದಿಕೆಯಲ್ಲಿ ಜರುಗಲಿದೆ ಎಂದರು. ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಏ.27: ಕೊಲ್ಲೂರು ದೇವಸ್ಥಾನ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದುರ ಜೊತೆಗೆ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮಿತಿಯ ಆಡಳಿತ ಕಚೇರಿ ಸಭಾಂಗಣದಲ್ಲಿ ದೇವಸ್ಥಾನದ ಅಭಿವೃಧ್ದಿ ಕಾರ್ಯಗಳ ಬಗ್ಗೆ ನಡೆದ ವ್ಯವಸ್ಥಾಪನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಕಾಂಬಿಕಾ ದೇವಸ್ಥಾನ ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ, ಏಪ್ರಿಲ್, ಮೇ, ಜೂನ್ ತಿಂಗಳ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾÀಗದAತೆ ನೋಡಿಕೊಳ್ಳಬೇಕು, ಕುಡಿಯುವ ನೀರಿನ ಸಮಸ್ಯೆಗಳ ಪರಿಹರಕ್ಕೆ ಪ್ರತ್ಯೇಕ ಸಹಾಯವಾಣಿ ತರೆದು,ಸಮಸ್ಯೆಗಳನ್ನು ಕೂಡÀಲೇ ಬಗೆಹರಿಸಬೇಕು , ಈಗಾಗಲೇ ಕುಡಿಯುವ ನೀರು ಮತ್ತು ಒಳಚರÀಂಡಿ ಮಂಡಳಿ ವತಿಯಿಂದÀ ಕೈಗೊಂಡಿರುವ ನೀರು ಸರಬರಾಜು ಘಟಕದ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ದೇವಸ್ಥಾನದ ಹಾಗೂ ಸ್ಥಳಿಯ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಕೈಗೊಳ್ಳುವಂತೆ ತಿಳಿಸಿದರು. ಕೊಲ್ಲೂರು ವ್ಯಾಪ್ತಿಯಲ್ಲಿ ಕೈಗೊಂಡಿರುವ ಯುಜಿಡಿ ಕಾಮಗಾರಿಗಳು ಈಗಾಗಲೇ ಪೂರ್ಣ ಪ್ರಮಾಣದಲ್ಲಿ ಮುಗಿದಿದ್ದು, 334…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನೆಯ ಅಂಗಳದಲ್ಲಿ ಜೋಕಾಲಿ ಕಟ್ಟಿ ಆಟವಾಡುತ್ತಿದ್ದ ಬಾಲಕಿಗೆ, ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು, ಮೃತಪಟ್ಟ ಘಟನೆಯೊಂದು ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ಪ್ರಾಧನ್ಯ (09) ಮೃತ ದುರ್ದೈವಿ. ಶಾಲೆಗೆ ರಜೆ ಇದ್ದುದರಿಂದ ಬಾಲಕಿ ಪ್ರಾದಾನ್ಯ ಮನೆಯ ಅಂಗಳದಲ್ಲಿ ಇತರ ಮಕ್ಕಳೊಂದಿಗೆ ಎದುರುಗಡೆ ಮರಕ್ಕೆ ಸೀರೆಯಿಂದ ಜೋಕಾಲಿ ಕಟ್ಟಿ ಕುಳಿತು ಆಟ ಆಡುತ್ತಿದ್ದ ಸಂದರ್ಭ, ಮನೆಯ ಸನಿಹದಲ್ಲಿ ನಿಲ್ಲಿಸಿದ್ದ ಕಾರನ್ನು ಸಂಬಂಧಿ ಸಂತೋಷ ಎಂಬಾತ ನಿರ್ಲಕ್ಷ್ಯತನದಿಂದ ಚಲಾಯಿಸಿದ್ದರಿಂದ ಜೋಕಾಲಿ ಆಡುತ್ತಿದ್ದ ಪ್ರಾದಾನ್ಯಳಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆಕೆಯು ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದಾಗ ಮೃತಪಟ್ಟಿದ್ದಾಳೆಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ಸರಣಿ ಕಾರ್ಯಕ್ರಮದಲ್ಲಿ ಎಪ್ರಿಲ್ ತಿಂಗಳ ಕಾರ್ಯಕ್ರಮ ಗೊಂಬೆ ಮನೆಯಲ್ಲಿ ನೆರವೇರಿತು. ವೇದಿಕೆಯಲ್ಲಿ ಉಪ್ಪಿನಕುದ್ರು ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ಮಾಜಿ ಮೊಕ್ತೇಸರರಾದ ವೆಂಕಟರಮಣ ಹೊಳ್ಳ, ವೇಣುಗೋಪಾಲ್ ಭಟ್, ಶ್ರೀಮತಿ ಸುಪ್ರಸನ್ನ ನಕ್ಕತ್ತಾಯ, ಯೋಗೀಶ್ ಪೂಜಾರಿ ಹಾಗೂ ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ರವರು ಉಪಸ್ಥಿತರಿದ್ದರು. ಖ್ಯಾತ ಸಂಗೀತಗಾರರಾದ ವೇಣುಗೋಪಾಲ್ ಭಟ್ ಕೋಟೇಶ್ವರ ಮತ್ತು ನೇರಳಕಟ್ಟೆ ಶ್ರೀ ಬ್ರಾಹ್ಮೀ ಕಲಾಶ್ರೀ ಯಕ್ಷ ನಾಟ್ಯ ಬಳಗದ ಯೋಗೀಶ್ ಪೂಜಾರಿ ಅವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ತಂಡದ ಎಲ್ಲಾ ಕಲಾವಿದರನ್ನೂ ಗೌರವಿಸಲಾಯಿತು. ತದನಂತರ ವೇಣುಗೋಪಾಲ್ ಭಟ್ ಮತ್ತು ತಂಡ, ಕೋಟೇಶ್ವರ ಇವರು ನಡೆಸಿಕೊಟ್ಟ ಸುಗಮ ಸಂಗೀತ ಕಾರ್ಯಕ್ರಮ ನೆರೆದ ಪ್ರೇಕ್ಷಕರನ್ನು ರಂಜಿಸಿತು. ಕೊನೆಯಲ್ಲಿ ಶ್ರೀ ಬ್ರಾಹ್ಮೀ ಕಲಾಶ್ರೀ ಯಕ್ಷ ನಾಟ್ಯ ಬಳಗ, ನೇರಳಕಟ್ಟೆ ಇವರಿಂದ ನಾಟ್ಯ ಹಾಸ್ಯ ವೈಭವ ಜರುಗಿತು. ಕಾರ್ಯಕ್ರಮವನ್ನು ಶಿಕ್ಷಕ ನಾಗೇಶ್ ಶ್ಯಾನುಭಾಗ್ ರವರು ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿಕೋಟ: ಡಾ. ಕಾರಂತ ಪ್ರತಿಷ್ಠಾನ(ರಿ)ಕೋಟ, ಡಾ. ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡಮಾಡುವ ಕರಾವಳಿ ಕಣ್ಮಣಿ ದಿ. ಕೆ.ಸಿ ಕುಂದರ್ ಸ್ಮಾರಕ ದತ್ತಿ ಪುರಸ್ಕಾರವನ್ನು ಯುವ ಉದ್ಯಮಿ, ಸಮಾಜ ಸೇವಕ ಡಾ. ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ಪ್ರದಾನ ಮಾಡಲಾಯಿತು. ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಡಾ. ಗೋವಿಂದ ಬಾಬು ಪೂಜಾರಿ ಅವರು ಸಮಾಜಕ್ಕೆ ನಮ್ಮಿಂದಾದ ನೆರವು ನೀಡುವುದರಲ್ಲಿ ಸಂತೋಷವಿದೆ. ನಾವು ಸಾಗಿದ ದಾರಿ ಮರೆಯದಿದ್ದಾಗ ಪ್ರತಿಯೊಬ್ಬರಿಗೂ ಇನ್ನೊಬ್ಬರ ಕಷ್ಟಕ್ಕೆ ಮಿಡಿಯುವ ಮನೋಭಾವ ತನ್ನಿಂದತಾನೆ ಬೆಳೆಯುತ್ತದೆ. ಗೆದ್ದಾಗ ಜೈಕಾರ ಹಾಕುವ ಬದಲು ಅವರ ಕಷ್ಟದ ಸಮಯದಲ್ಲಿ ನೆರವಾಗುವುದು ಉತ್ತಮ. ಇನ್ನಷ್ಟೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಅಭಿಲಾಷೆಯಿದೆ. ಥೀಮ್ ಪಾರ್ಕ್ ಕಾರ್ಯ ಚಟುವಟಿಕೆಗಳು ಶ್ಲಾಘನೀಯ ಎಂದರು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಫಲಾಪೇಕ್ಷೆ ಇಲ್ಲದೇ ಮಾಡುವ ಸಮಾಜಮುಖಿ ಚಟುವಟಿಕೆಗಳು ಶ್ರೇಷ್ಠವೆನಿಸಕೊಳ್ಳುತ್ತವೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ವಿದ್ಯಾ ಸಂಸ್ಥೆಗಳು ಕೋಡಿ , ಕುಂದಾಪುರ, ಇವರು ಆಯೋಜಿಸಿ ಪ್ರತಿ ತಿಂಗಳ ಕೊನೆಯ ರವಿವಾರ ನಡೆಸುತ್ತಿರುವ “ಸ್ವಚ್ಛ ಕಡಲ ತೀರ -ಹಸಿರು ಕೋಡಿ” ಅಭಿಯಾನದ 4ನೇ ಹಂತ ನೆರೆವೇರಿತು. ವಿಶ್ವ ಭೂ ದಿನಾಚರಣೆಯಂದು ನಡೆಯುತ್ತಿರುವ ಈ ಪರಿಸರ ಸಂರಕ್ಷಣೆಯ ಕಾರ್ಯಕ್ಕೆ ಹೊಸ ಮೆರುಗನ್ನು ಕೊಟ್ಟಿದೆ ಮತ್ತ್ತು ಸಾರ್ಥಕ ಭಾವ ತುಂಬಿದೆ ಎಂದು ಸಯ್ಯದ್ ಮಹಮ್ಮದ್ ಬ್ಯಾರಿ ಯವರು ಸಂತೋಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು, ರಕ್ಷಕ- ಶಿಕ್ಷಕ ಸಂಘದ ಸದಸ್ಯರು, ಪೋಷಕರು, ಪ್ರಾಕ್ತನ ವಿದ್ಯಾರ್ಥಿಗಳು, ಊರಿನ ಪ್ರಮುಖರು ಹಾಗೂ ಮಹಾಜನರು ಮತ್ತು ನಿಸರ್ಗ ಪ್ರಿಯರು ಈ ಅಭಿಯಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಕೋಡಿಯ ಕಡಲ ತೀರವನ್ನು ಸ್ವಚ್ಛಗೊಳಿಸಿದರು. ಈ ಕಾರ್ಯದಲ್ಲಿ ನಮಗೆ ಸಹಕಾರವನ್ನು ನೀಡುತ್ತಿರುವ ಕುಂದಾಪುರ ಪುರಸಭೆಯ ಚೀಫ್ ಆಫೀಸರ್ ಹಾಗೂ ಪದಾಧಿಕಾರಿಗಳಿಗೆ ಮತ್ತು ಎಲ್ಲಾ ಸಿಬ್ಬಂದಿವರ್ಗದವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಬ್ಯಾರೀಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಅಧ್ಯಕ್ಷರಾದ ಹಾಜಿ ಕೆ ಎಂ ಅಬ್ದುಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಓದು ಎನ್ನುವುದು ಸಹಜಕ್ರಿಯೆ, ಪ್ರತಿಯೋರ್ವರ ಜ್ಞಾನದಾಹಕ್ಕಾಗಿ ಓದಿನ ಹಸಿವನ್ನು ಬೆಳೆಸಿಕೊಳ್ಳಬೇಕು. ಓದು ಸ್ವಅನುಭವಕ್ಕಿಂತ ಭಿನ್ನವಾದುದು, ಅತ್ಯುತ್ತಮ ವೈವಿಧ್ಯಮಯ ಪುಸ್ತಕಗಳ ಓದುವಿಕೆಯಿಂದ ಅನ್ಯರ ಜೀವನಾನುಭವವನ್ನು ಗ್ರಹಿಸಬಹುದು. ಈ ತೆರನಾಗಿ ಜ್ಞಾನ , ಸಂಸ್ಕಾರ , ಪ್ರವೃತ್ತಿಗಳ ಮೂಲಕ ಸಮೃದ್ದ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಿದೆ” ಎಂದು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ದೋಮ ಚಂದ್ರಶೇಖರ್ ಹೇಳಿದರು. ಅವರು ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯರಾದ ಸಿದ್ದಪ್ಪ ಕೆ. ಎಸ್ ಪ್ರಾಸ್ತಾವಿಕವಾಗಿ ಮಾತನಾಡಿ “ವಿದ್ಯಾರ್ಥಿಗಳಲ್ಲಿ ರಚನಾತ್ಮಕ ಮನೋಭಾವ ಬೆಳೆಯಲು ಓದುವಿಕೆಯ ಹವ್ಯಾಸ ಅಡಿಪಾಯವನ್ನು ಒದಗಿಸಬಲ್ಲದು” ಎಂದರು. ಉಪನ್ಯಾಸಕರಾದ ಪ್ರವೀಣ್ ಕುಮಾರ್ ಕೆ. ಪಿ ಸ್ವಾಗತಿಸಿದರು, ಅನಂತ ಭಟ್ ನಿರೂಪಿಸಿದರು, ಉಪನ್ಯಾಸಕಿ ಡಾ. ಉಷಾರಾಣಿ ವಂದಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕರು, ಪ್ರಶಿಕ್ಷಣಾರ್ಥಿಗಳು ಮತ್ತು ಓಡಿಎಲ್ ಪ್ರಶಿಕ್ಷಣಾರ್ಥಿಗಳು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಗ್ರಾಮದ ಹೆಗ್ಡೆಹಕ್ಲು ನಿವಾಸಿ ಸುನೀತಾ (22) ಎಂಬ ಯುವತಿಯು ಏಪ್ರಿಲ್ 20 ರಂದು ಬೆಳಗ್ಗೆ 11.30 ರ ಸುಮಾರಿಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತೆಲುಗು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254- 258233, ಮೊ.ನಂ. 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, ಮೊ.ನಂ: 9480805434, ಕಂಟ್ರೋಲ್ ರೂಂ : 100, 0820-2526444 ಅನ್ನು ಸಂಪರ್ಕಿಸುವಂತೆ ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
