ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ಹಾಗೂ ಕುಂದಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮನು ಪೂಜಾರಿ 110 ಮೀಟರ್ ಹರ್ಡಲ್ಸ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದಾವಣಗೆರೆಯ ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ ಆಶ್ರಯದಲ್ಲಿ ನಡೆದ ಸಿಬಿಎಸ್‌ಇ ಬೆಂಗಳೂರು ವಲಯದ ಕ್ಲಸ್ಟರ್ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ ತಂಡ ಮೂರನೇ ಸ್ಥಾನವನ್ನು ಪಡೆದುಕೊಂಡಿರು. ಈ ಪಂದ್ಯಾಟದಲ್ಲಿ 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ 84 ತಂಡಗಳು ಭಾಗವಹಿಸಿದ್ದವು. ವಿಜೇತರಾದ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 110ನೇ ತಿಂಗಳ ಕಾರ್ಯಕ್ರಮ ಹಾಗೂ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ನೇತಾಜಿ ಕಮಿಟಿ ಫ್ರೆಂಡ್ಸ್ ಇವರ ನೇತೃತ್ವದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ವೇದಿಕೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪಿನಕುದ್ರಿನ ಮುಖ್ಯೋಪಾಧ್ಯಾಯ ರಾಘವೇಂದ್ರ, ಅಂಗನವಾಡಿ ಉಪಾಧ್ಯಾಯಿನಿಯರಾದ ಪ್ರೇಮಲತಾ ಗಣೇಶ್ ಸೇರುಗಾರ, ಸಂಗೀತಾ, ಲಲಿತಾ, ಆಶಾ ಕಾರ್ಯಕರ್ತೆಯರಾದ ಜ್ಯೋತಿ ಪೂಜಾರಿ, ಸಂಗೀತಾ, ನೇತಾಜಿ ಕಮಿಟಿ ಫ್ರೆಂಡ್ಸ್‌ನ ಅಧ್ಯಕ್ಷ ರಾಘವೇಂದ್ರ ಪೈ, ನಾಗಶ್ರೀ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ರಾಘವೇಂದ್ರ ಪೈ ಅವರನ್ನು ಗೊಂಬೆಯಾಟ ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ನೇತಾಜಿ ಕಮಿಟಿ ಫ್ರೆಂಡ್ಸ್‌ನ ವತಿಯಿಂದ ಕ್ರೀಡಾಪಟು ನಾಗಶ್ರೀ ಗಣೇಶ ಸೇರುಗಾರ್ ಅವರನ್ನು ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ ಸ್ಥಳೀಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆ ಗಳಿಸಿದರು. ರಾಜೇಂದ್ರ ಪೈ ಅವರು ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಾಡದೋಣಿಯ ಮೂಲಕ ಮೀನುಗಾರಿಕೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಹಿನ್ನಲ್ಲೆಯಲ್ಲಿ ಅದರಲ್ಲಿದ್ದ ಓರ್ವ ಮೀನುಗಾರ ಮೃತಪಟ್ಟು, ಇಬ್ಬರು ಪ್ರಾಣಪಾಯದಿಂದ ಪಾರಾದ ಘಟನೆ ಸಾಸ್ತಾನದ ಕೋಡಿತಲೆ ಅಳಿವೆ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಮೃತಪಟ್ಟ ಮೀನುಗಾರ ಶರತ್ ಖಾರ್ವಿ (27) ಎಂದು ಗುರುತಿಸಲಾಗಿದೆ. ಶುಕ್ರವಾರ ಮುಂಜಾನೆ ಶಂಕರ್ ಖಾರ್ವಿ ಮಾಲಕತ್ವದ ದೋಣಿಯಲ್ಲಿ ಅಕ್ಷಯ ಖಾರ್ವಿ, ಮಂಜುನಾಥ್ ಖಾರ್ವಿ ಹಾಗೂ ಶರತ್ ಖಾರ್ವಿ ಈ ಮೂವರು ಮೀನುಗಾರರು ಮೀನುಗಾರಿಕೆ ತೆರಳಿದ್ದರು. ಈ ಸಂದರ್ಭದಲ್ಲಿ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೂವರು ನೀರುಪಾಲಗಿದ್ದರು. ಅಕ್ಷಯ ಖಾರ್ವಿ ಹಾಗೂ ಮಂಜುನಾಥ್ ಖಾರ್ವಿ ಅವರು ಈಜಿ ದಡ ಸೇರಿದ್ದರು. ಆದರೆ ಶರತ್ ಖಾರ್ವಿ ಈಜಲು ಆಗದೆ ನೀರಲ್ಲಿ ಮುಳುಗಿ ಮೃತಪಟ್ಟಿರು. ಅದೃಷ್ಠವಷಾತ್ ಪ್ರಾಣಾಪಾಯದಿಂದ ಪಾರಾಗಿದ್ದ ಮಂಜುನಾಥ್ ಖಾರ್ವಿ, ಅಕ್ಷಯ್ ಖಾರ್ವಿ ಇಬ್ಬರು ಮೀನುಗಾರರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೋಣಿ ಸಮುದ್ರ ಪಾಲಾಗಿದ್ದು ಲಕ್ಷಾಂತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಪ್ರತಿ ಮಗುವಿಗೆ ತಲಾ ರೂ.10,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು ಸಾಧನೆ ಅಸಾಧಾರಣವೆಂದು ಸಮರ್ಥಿಸಲು ಪೂರಕ ದಾಖಲೆಗಳನ್ನು ಒದಗಿಸಬೇಕು. ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸಲು ಸೆಪ್ಟಂಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ 0820-2574978 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ) ಬೈಂದೂರು ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರ ಜನ್ಮದಿನಾಚರಣೆಯನ್ನು ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಆಚರಯಿಸಲಾಯಿತು. ಈ ವೇಳೆ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಕಾಂಗ್ರೆಸ್ ಮುಖಂಡರುಗಳು ಹಾಗೂ ಬೈಂದೂರು ಎನ್.ಎಸ್.ಯು.ಐ ಪದಾಧಿಕಾರಿಗಳು ಜೊತೆಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ವಿದ್ಯಾ ದೀವಿಗೆ ಯೋಜನೆಯಡಿ ಸರಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಂಟ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ 95 ಶೇಕಡಕ್ಕಿಂತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಯುವ ಸಾಧಕರಿಗೆ ಸನ್ಮಾನ, ದಿ| ಡಾ. ಮಧುಕರ ಶೆಟ್ಟಿ ಐ.ಪಿ.ಎಸ್ ಸಂಸ್ಕರಣಾ ಪ್ರಶಸ್ತಿ -2025, ದಿ. ಡಾ. ಗೋಪಾಲ ಕೃಷ್ಣ ಶೆಟ್ಟಿ ಸಂಸ್ಕರಣಾ ಪ್ರಗತಿಪರ ಕೃಷಿಕ ಪ್ರಶಸ್ತಿ, ಹಿರಿಯ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಅಗಸ್ಟ್ 24ರ ಭಾನುವಾರ ಬೆಳಿಗ್ಗೆ ಇಲ್ಲಿನ ಆರ್. ಎನ್.ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ವಹಿಸಲಿದ್ದಾರೆ. ದುಬೈ ಫಾರ್ಚ್ಯುನ್ ಗ್ರೂಫ್ ಆಫ್ ಹೋಟೇಲ್ಸ್ ಸಿಎಂಡಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಘಟಪ್ರಭಾ ಮನೀಷ್ ಗ್ರೂಫ್ ಆಫ್ ಹೋಟೇಲ್ಸ್ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮೀನುಗಾರರಿಗೆ ಮೋಟಾರ್, ಬಲೆ, ಮತ್ತಿತರ ಸಲಕರಣೆಗಳನ್ನು ಖರೀದಿಸಲು ಸರಕಾರ ವಿವಿಧ ಯೋಜನೆಯಡಿ ಕೆನರಾ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ವಿತರಿಸಲಾಗುತ್ತಿದೆ. ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಶೂನ್ಯ ಬಡ್ಡಿ ದರದಲ್ಲಿ 50 ಸಾವಿರದಿಂದ ಸಾಲ ಸೌಲಭ್ಯ ನೀಡಲಾಗುತ್ತದೆ. ಸ್ವಸಹಾಯ ಸಂಘಗಳ ಮೂಲಕ ಸ್ತ್ರೀಶಕ್ತಿ ಯೋಜನೆಯಡಿ ಸ್ವ ಉದ್ಯೋಗ ನಡೆಸಲು ಆರ್ಥಿಕ ಸಹಾಯವನ್ನು ಬ್ಯಾಂಕ್ ಮೂಲಕ ಒದಗಿಸಲಾಗುತ್ತದೆ ಎಂದು ಕೆನರಾ ಬ್ಯಾಂಕಿನ ಉಡುಪಿ ವೃತ್ತ ಕಚೇರಿಯ ಎಜಿಎಂ ಟಿ.ಎ.ಎಸ್. ಪೂರ್ಣಾನಂದ ಹೇಳಿದರು. ಅವರು ಗಂಗೊಳ್ಳಿ ಕೆನರಾ ಬ್ಯಾಂಕ್ ಶಾಖೆ ವತಿಯಿಂದ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗುರುವಾರ ನಡೆದ ಮೀನುಗಾರರಿಗೆ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ಅರ್ಹ ಮೀನುಗಾರ ಫಲಾನುಭವಿಗಳಿಗೆ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅರ್ಹ ಮೀನುಗಾರ ಫಲಾನುಭವಿಗಳಿಗೆ ಸಾಲ ವಿತರಿಸಿ ಮಾತನಾಡಿದ ಕೆನರಾ ಬ್ಯಾಂಕಿನ ಉಡುಪಿ ವೃತ್ತ ಕಚೇರಿಯ ಡಿಜಿಎಂ ಪಬಿತ್ರ ಕುಮಾರದಾಸ್ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯದಲ್ಲಿ ಪ್ರಸ್ತುತ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳಿಗೆ ಒದಗಿಸಿರುವ ವಾಹನಗಳ ಸುಸ್ಥಿತಿ ಹಾಗೂ ಹಲವಾರು ಪೊಲೀಸ್ ಠಾಣೆಗಳಲ್ಲಿ ಠಾಣಾಧಿಕಾರಿಗಳು ಬಳಸುವ ವಾಹನಗಳು ಬಳಸಲು ಯೋಗ್ಯವಾಗಿಲ್ಲದೇ ಇರುವುದರಿಂದ ಅಂತಹ ವಾಹನಗಳನ್ನು ಗುರುತಿಸಿ ಸರ್ಕಾರ ಹೊಸ ವಾಹನಗಳನ್ನು ಒದಗಿಸಲು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಸರಕಾರಕ್ಕೆ ಆಗ್ರಹಿಸಿದ್ದಾರೆ. ವಿಧಾನ ಮಂಡಲ ಅಧಿವೇಶದಲ್ಲಿ ಈ ಬಗ್ಗೆ ಶಾಸಕರು ಕೇಳಿದ ಚುಕ್ಕೆ ರಹಿತ ಪ್ರಶ್ನೆ ಗೆ ಉತ್ತರಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು, ರಾಜ್ಯದಲ್ಲಿ ಪ್ರಸ್ತುತ ಒದಗಿಸಿರುವ ವಾಹನಗಳ ಪೈಕಿ 5778 ವಾಹನಗಳು ಸುಸ್ಥಿತಿಯಲ್ಲಿರುತ್ತದೆ. 130 ವಾಹನಗಳು ಬಳಸಲು ಯೋಗ್ಯವಾಗಿಲ್ಲ. ಬಳಸಲು ಯೋಗ್ಯವಿಲ್ಲದ ವಾಹನಗಳು ಹೆಚ್ಚಾಗಿ 15 ವರ್ಷಗಳನ್ನು ಪೂರೈಸಿರುತ್ತವೆ. ಮತ್ತು ಕೆಲವು ಮೈನರ್ ದುರಸ್ಥಿಗೆ ಒಳಪಟ್ಟಿರುತ್ತದೆ. 2025-26 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ತುರ್ತು ಸಂದರ್ಭದಲ್ಲಿ ತ್ವರಿತವಾಗಿ ಸ್ಪಂದಿಸಲು ಒಳಾಡಳಿತ ಇಲಾಖೆಯಲ್ಲಿ ಹೊಸ ಮೊಬಿಲಿಟಿ ಯೋಜನೆಯನ್ನು ರೂ 50…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಶಾ ಮುಕ್ತ ಭಾರತ ಅಭಿಯಾನವು ದೇಶದ ಆರೋಗ್ಯಕರ ಮತ್ತು ಪ್ರಗತಿಪರ ಸಮಾಜ ನಿರ್ಮಾಣದ ಮಹತ್ವದ ಪ್ರಯತ್ನವಾಗಿದೆ. ಇಂದಿನ ಕಾಲದಲ್ಲಿ ಯುವಜನರು ಮಾದಕ ವಸ್ತುಗಳ ಬಲೆಗೆ ಬೀಳುತ್ತಿರುವುದು ವಿಷಾದನೀಯ. ವ್ಯಸನವು ವ್ಯಕ್ತಿಯ ಆರೋಗ್ಯವನ್ನು ಮಾತ್ರವಲ್ಲ, ಕುಟುಂಬದ ಶಾಂತಿ ಮತ್ತು ಸಮಾಜದ ಪ್ರಗತಿಯನ್ನು ಸಹ ಹಾಳುಮಾಡುತ್ತದೆ ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ನಂಜ ನಾಯ್ಕ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಮಾಧಕ ವ್ಯಸನ ವಿರೋಧಿ ಘಟಕದ ಆಶ್ರಯದಲ್ಲಿ ನಡೆದ ‘ನಶಾ ಮುಕ್ತ ಭಾರತ’ ಅಭಿಯಾನದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ವಿಲ್ಮಾ ಶೆರಲ್ ಅತಿಥಿಗಳನ್ನು ಪರಿಚಯಿಸಿದರು. ಎನ್.ಎಸ್.ಎಸ್. ಘಟಕ 1ರ ಕಾರ್ಯಕ್ರಮಾಧಿಕಾರಿ ರಾಜೇಶ್ ಶೆಟ್ಟಿ ವಕ್ವಾಡಿ ಸ್ವಾಗತಿಸಿ, ಎನ್.ಎಸ್.ಎಸ್. ಘಟಕ 2ರ ಕಾರ್ಯಕ್ರಮಾಧಿಕಾರಿ ಪೂಜಾ ಕುಂದರ್ ನಿರೂಪಿಸಿ, ಮಾಧಕ…
