Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ನಿರಂತರ 111ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಸತೀಶ್ ನಾಯಕ್ ಗುಡ್ಡೆಯಂಗಡಿ, ರಾಧಾಕೃಷ್ಣ ಪ್ರಭು, ಡಾ. ಕಾಶೀನಾಥ್ ಪೈ ಗಂಗೊಳ್ಳಿ, ಗಿರೀಶ್ ನಾಗೇಶ್ ಪ್ರಭು, ಗಣೇಶ್ ಭಟ್, ಕೀರ್ತನಾ ಭಟ್, ಜಯಂತಿ ಗಣಪತಿ ಸೇರುಗಾರ್ ಮತ್ತು ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ಪಂಚಮಿ ಭಟ್ ಮಂಗಳೂರು ಅವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ನಂತರ ಗಿರೀಶ್ ನಾಗೇಶ್ ಪ್ರಭು ನೇತೃತ್ವದಲ್ಲಿ ಪಂಚಮಿ ಭಟ್ ಮಂಗಳೂರು ಅವರು ಭಜನ್ ಸಂಧ್ಯಾ ಕಾರ್ಯಕ್ರಮವನ್ನು ಅದ್ಭುತವಾಗಿ ನಡೆಸಿಕೊಟ್ಟರು. ವಸಂತಿ ಆರ್. ಪಂಡಿತ್ ಪ್ರಾರ್ಥಿಸಿದರು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ಅವರು ಕಾರ್ಯಕ್ರಮ ನಿರ್ವಹಿಸಿದರು. ಉದಯ ಭಂಡಾರ್‌ಕಾರ್ ಹಟ್ಟಿಯಂಗಡಿ ಅವರು ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ವಾಲಿಬಾಲ್ ಸಂಸ್ಥೆ ಆಯೊಜಿಸಿದ್ದ  ಲೋಕೆಶ್ ಗೌಡ ಟ್ರೋಫಿ ಕರ್ನಾಟಕ ಸೀನಿಯರ್ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಸ್ಪೋಟ್ಸ್ ಕ್ಲಬ್ ತಂಡ ಪುರುಷರ ವಿಭಾಗದಲ್ಲಿ  ಪ್ರಶಸ್ತಿ  ಗೆದ್ದುಕೊಂಡಿತು. ಬೆಂಗಳೂರಿನ ಶ್ರೀಕಂಠಿರವ ಕ್ರೀಡಾಂಗಣದಲ್ಲಿ ನಡೆದ ಪುರುಷರ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್ ತಂಡ 3-1 ಅಂತರದಿಂದ ಕರ್ನಾಟಕ ರಾಜ್ಯ ಪೋಲಿಸ್ ತಂಡವನ್ನು ಮಣಿಸಿತು. ತೀವ್ರ ಪೈಪೋಟಿಯಿಂದ ಕೂಡಿದ್ದ ಪಂದ್ಯದಲ್ಲಿ ಮೇಲುಗೈ ಸಾಧಿಸಿದ ಆಳ್ವಾಸ್ ಆಟಗಾರರು ಪ್ರಶಸ್ತಿಗೆ ಮುತ್ತಿಕ್ಕಿದರು. ಇದಕ್ಕೂ ಮೊದಲು ನಡೆದ ಸೆಮಿಫೈನಲ್‌ನಲ್ಲಿ ಆಳ್ವಾಸ್ ತಂಡ, ಕ್ರೀಡಾ ಹಾಸ್ಟೆಲ್ ಬಿಜಿ ತಂಡವನ್ನು  3-1 ಅಂತರದಿಂದ ಪರಭವಗೊಳಿಸಿತ್ತು. ವಿಜೇತರಿಗೆ ಕರ್ನಾಟಕದ ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಪ್ರಶಸ್ತಿ ವಿತರಿಸಿದರು. ವಿಜೇತ ತಂಡದ ಸದಸ್ಯರನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ  “ಶಿಕ್ಷಣವೇ ಎಲ್ಲಾ” ಶೀರ್ಷಿಕೆಯಡಿಯಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪಶ್ಚಿಮ ಬಂಗಾಳದ ಶಿಕ್ಷಣ ತಜ್ಞ, ಆನಂದ್ ಶಿಕ್ಷಾನಿಕೇತನ ಸಂಸ್ಥೆಯ ಸ್ಥಾಪಕರಾದ ಬಾಬರ್ ಅಲಿ ಅವರು ಶೈಕ್ಷಣಿಕ ವಿಚಾರಗಳ ಕುರಿತು ಮಾತನಾಡಿ, ತಾನು ಬೆಳೆದು ಬಂದ ಹಾದಿಯ ರೋಚಕತೆಯನ್ನು ವಿವರಿಸಿ ಇತರರಿಗೂ ಸ್ಫೂರ್ತಿಯಾದರು. ಕಠಿಣ ಪರಿಶ್ರಮದ ಮೂಲಕ ಯಶಸ್ಸನ್ನು ಗಳಿಸಲು ಸಾಧ್ಯ. ಇಂದು ಶ್ರದ್ದೆಯಿಂದ ಓದಿ ಗುರಿ ಸಾಧಿಸಬೇಕು. ಮುಂದೊಂದು ದಿನ ಹಿಂದೆ ಕಳೆದ ದಿನಗಳನ್ನು ಅವಲೋಕಿಸಿದಾಗ, ಹೋರಾಟದ ದಿನಗಳು ಕೂಡ ನಿಮಗೆ ಅತ್ಯಂತ ಸುಂದರವಾಗಿ ಕಾಣುತ್ತವೆ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತನಾಡಿದರು. ಸಹಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅವರು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಬೋಧಕ – ಬೋಧಕೇತರ ವರ್ಗದವರು, ವಿದ್ಯಾರ್ಥಿ – ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆಂಗ್ಲ ಭಾಷಾ ಉಪನ್ಯಾಸಕ ಯೋಗೀಶ್ ಅವರು ಕಾರ್ಯಕ್ರಮ ನಿರೂಪಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪ್ರಸಕ್ತ ಸಾಲಿನ ಐ.ಇ.ಸಿ ಹಾಗೂ ಎಸ್.ಬಿ.ಸಿ.ಸಿ ಕಾರ್ಯಚಟುವಟಿಕೆಯಡಿ ಜಾನಪದ ಕಲಾ ಪ್ರಕಾರಗಳ ಮೂಲಕ ಜಿಲ್ಲೆಯಾದ್ಯಂತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಾನಪದ ಕಲಾತಂಡಗಳ ಅಗತ್ಯವಿರುವ ಹಿನ್ನೆಲೆ, ಜಿಲ್ಲೆಯಿಂದ ಸಾಂಗ್ ಆಂಡ್ ಡ್ರಾಮಾ ಡಿವಿಜನ್, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಇಲಾಖೆಯಲ್ಲಿ ನೋಂದಣಿಯಾಗಿರುವ ಹಾಗೂ ಆರೋಗ್ಯ ಇಲಾಖೆಯ ವಿಭಾಗೀಯ ಮಟ್ಟದಲ್ಲಿ ತರಬೇತಿ ಪಡೆದಿರುವ ಆಸಕ್ತ ಜಾನಪದ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕು.ಕ.ಕಚೇರಿ, ಐ.ಇ.ಸಿ ವಿಭಾಗವನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ವಾರ್ಷಿಕ ಶರನ್ನವರಾತ್ರಿ ಉತ್ಸವದ ಮೂರನೆ ದಿನದ ಅಂಗವಾಗಿ ಚಂಡಿಕಾ ಸಪ್ತಸತಿ ಪಾರಾಯಣ, ದುರ್ಗಾಹೋಮ ಕಾರ್ಯಕ್ರಮಗಳು ಸೇವಾಕರ್ತರಾದ ಉದ್ಯಮಿ ಮಹೇಶ್ ಶೆಟ್ಟಿ ಗುಳ್ಳಾಡಿ ದಂಪತಿಗಳು ಭಾಗಿಯಾಗುವ ಮೂಲಕ ನೆರವೇರಿತು. ಧಾರ್ಮಿಕ ಕೈಂಕರ್ಯವನ್ನು ವೇ. ಮೂ ಮಧುಸೂದನ ಬಾಯರಿ ನೇತೃತ್ವದಲ್ಲಿ ಜರಗಿತು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ ಆನಂದ್ ಸಿ. ಕುಂದರ್ ಸೇವಾಕರ್ತ ಕುಟುಂಬಕ್ಕೆ ಪ್ರಸಾದ ವಿತರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ದೇಗುದ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ, ಸುಧಾ ಎ. ಪೂಜಾರಿ, ಜ್ಯೋತಿ ಡಿ.ಕಾಂಚನ್, ಶಿವ ಪೂಜಾರಿ, ರತನ್ ಐತಾಳ್, ಚಂದ್ರ ಆಚಾರ್, ಸುಬ್ರಾಯ ಜೋಗಿ, ಮಾಜಿ ಟ್ರಸ್ಟಿಗಳಾದ ಸುಂದರ್, ಚಂದ್ರ ಪೂಜಾರಿ, ಕೋಟ ಪಂಚಾಯತ್ ಸದಸ್ಯ ಭುಜಂಗ ಗುರಿಕಾರ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಅರ್ಚಕ ಪ್ರತಿನಿಧಿಗಳು ಉಪಸ್ಥಿತರಿದ್ದರು. ಅಮೃತ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿವಿಧ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಶ್ರೀ ಮಹಾಗಣಪತಿ ಸಭಾಭವನ ಮಟ್ನಕಟ್ಟೆಯಲ್ಲಿ ಜರಗಿತು. ಸಂಘದ ಅಧ್ಯಕ್ಷರಾದ ಸುಂದರ ಆರ್. ಕೊಠಾರಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಹಾಲುಗಳ ಗುಣಮಟ್ಟ ಹಾಗೂ ಸುಚಿತ್ವದ ಬಗ್ಗೆ ವಿವರವಾಗಿ ಹೇಳುವುದರೊಂದಿಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹಾಲು ಪೂರೈಸುವಲ್ಲಿ ಸದಸ್ಯರು ಸಹಕರಿಸುವಂತೆ ತಿಳಿಸಿದ ಅವರು ವರದಿ ವರ್ಷದಲ್ಲಿ ಸಂಘವು ರೂ. 3.37ಲಕ್ಷ ನಿವ್ವಳ ಲಾಭಗಳಿಸಿದ್ದು, ಶೇ 15 ಡಿವಿಡೆಂಡು ಹಾಗೂ ಪ್ರತಿ ಲೀಟರ್ ಹಾಲಿಗೆ ರೂ.1.15ರಂತೆ ಬೋನಸ್ ಘೋಷಿಸಿದರು. ವಿಸ್ತರಣಾಧಿಕಾರಿಗಳಾದ ರಾಜಾರಾಮ ಅವರು ಮಾತನಾಡಿ, ಒಕ್ಕೂಟದಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ತಿಳಿಸಿ, ಪ್ರಯೋಜನವನ್ನು ಹೆಚ್ಚು ಹೈನುಗಾರರು ಪಡೆಯಬೇಕು ಎಂದರು. ಸಂಘದ ನಿರ್ದೇಶಕರುಗಳಾದ ಗೋಪಾಲ ಗಾಣಿಗ, ರಾಮ ಪೂಜಾರಿ, ವಿಜಯಾ ಪ್ರಭು, ಸವಿತಾ ದೇವಡಿಗ, ಮುತ್ತು ದೇವಾಡಿಗ, ಕೃಷ್ಣಿ ದೇವಾಡಿಗ, ಸುಶೀಲ ದೇವಾಡಿಗ, ಭಾಗೀರಥಿ ಪೂಜಾರಿ, ಗೋವಿಂದು ಕೆ. ಸಭೆಯಲ್ಲಿ ಉಪಸ್ಥಿತರಿದ್ದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ ವಸತಿ ಸೇವೆ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರ ವಹಿಸುತ್ತದೆ. ಈ ಸಂಖ್ಯೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕತೆ ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಭತ್ತದ ಬೆಂಬಲ ಬೆಲೆಯ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಯ ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದ್ದು, ರೈತರು ಅಕ್ಟೋಬರ್ 31ರ ವರೆಗೆ ನೋಂದಣಿ ಮಾಡಿಕೊಳ್ಳಬಹುದು. ಸಾಮಾನ್ಯ ಭತ್ತಕ್ಕೆ 2369 ಹಾಗೂ ಗ್ರೇಡ್ ಎ ಭತ್ತಕ್ಕೆ 2389 ರೂ. ನಿಗಧಿಪಡಿಸಲಾಗಿದ್ದು, ಉಡುಪಿ ಹಾಗೂ ಕಾರ್ಕಳದ ಎ.ಪಿ.ಎಂ.ಸಿ ಯಾರ್ಡ್ ಮತ್ತು ಕೋಟೇಶ್ವರದ ಕೆ.ಎಫ್.ಸಿ.ಎಸ್.ಸಿ ಗೋದಾಮಿನಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದರು. ರೈತರು ಬೆಳೆದಿರುವ ಧಾನ್ಯಗಳಿಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರೂಟ್ಸ್ ದತ್ತಾಂಶದಿಂದ ಬೆಳೆ ಮಾಹಿತಿಯನ್ನು ನೇರವಾಗಿ ಪಡೆದು ಕೃಷಿ ಇಲಾಖೆ ಒದಗಿಸಿರುವ ಸರಾಸರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಸೆ.23: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಕ್ಷೇತ್ರ ಚುನಾವಣೆಯಿಂದ ಆರಂಭಗೊಂಡ ಶಾಸಕರಾದ ಗುರುರಾಜ ಗಂಟಿಹೊಳೆ ಹಾಗೂ ಅಂದಿನ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷರಾಗಿದ್ದ ದೀಪಕ್‌ ಕುಮಾರ್‌ ಶೆಟ್ಟಿ ಅವರ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದ್ದು, ಇಂದು ಉಡುಪಿಯಲ್ಲಿ ದಿಶಾ ಸಭೆಯಲ್ಲಿ ಭಾಗವಹಿಸಲು ಬಂದಿದ್ದ ಸಂಸದ ಬಿ.ವೈ. ರಾಘವೇಂದ್ರ ಅವರ ಎದುರೆ ಪರಸ್ಪರ ಮಾತಿನ ಚಕಮಕಿ – ತಳ್ಳಾಡಿಕೊಂಡ ಘಟನೆ ನಡೆದಿದೆ. ಬಿಜೆಪಿ ಪಕ್ಷದಲ್ಲಿ ಬಣ ರಾಜಕೀಯ ಇಲ್ಲ ಎನ್ನುತ್ತಲೇ ಪರಸ್ಪರ ಬಣಗಳಾಗಿ ಮುಂದುವರಿಯುತ್ತಿದ್ದ ಶಾಸಕರಾದ ಗುರುರಾಜ ಗಂಟಿಹೊಳೆ ಹಾಗೂ ಬೈಂದೂರು ಬಿಜೆಪಿ ಮಾಜಿ ಮಂಡಲ ಅಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ ಅವರು ನಡುವಿನ ಮಾತಿನ ಚಕಮಕಿ ಜೋರಾಗಿಯೇ ನಡೆದಿದೆ. ತೆರೆಮರೆಯಲ್ಲಿ ನಡೆಯುತ್ತಿದ್ದ ಪರಸ್ಪರರ ಕಸರತ್ತು ಇಂದು ಸಂಸದರು, ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಕುಂದಾಪುರ ಕ್ಷೇತ್ರದ ಶಾಸಕರ ಎದುರೇ ಬಟಾಬಯಲಾಗಿದೆ. ದಿಶಾ ಸಭೆಯಲ್ಲಿ ಭಾಗವಹಿಸುವ ಮುನ್ನ ಉಡುಪಿಯ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ನಾಯಕರು ಮಾತನಾಡುತ್ತಾ ಕುಳಿತಿದ್ದ ವೇಳೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಸೆ.23: ಜನಸಾಮಾನ್ಯರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜಲ್ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ 19ಕ್ಕೂ ಹೆಚ್ಚು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿಗಳು ಸಮಾಧಾನಕರವಾಗಿಲ್ಲ ಎಂಬ ನಿರ್ಣಯವನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದೆ ಈ ಬಗ್ಗೆ ವರದಿ ನೀಡಬೇಕೆಂದು ಅಭಿಯಂತರರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೇಂದ್ರ ಸರ್ಕಾರ ಜನರಿಗೆ ಶುದ್ಧ ನೀರು ಕುಡಿಯಬೇಕೆಂಬ ಆಶಯದೊಂದಿಗೆ ಜಲ್ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ 687 ಕೋಟಿ ರೂ. ಮೊತ್ತದಲ್ಲಿ 525 ಕಾಮಗಾರಿಗಳನ್ನು ಕೈಗೊಂಡಿದ್ದು, ಅವುಗಳಲ್ಲಿ 487 ಪೂರ್ಣಗೊಂಡಿದ್ದು, 38 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಶೇ.93 ರಷ್ಟು ಸಾಧನೆಯಾಗಿದೆ. ಆದರೆ ಉಡುಪಿ ತಾಲೂಕಿನ 19 ಗ್ರಾಮ ಪಂಚಾಯತ್‌ಗಳಲ್ಲಿ ಕಾಮಗಾರಿಗಳು ಸರಿಯಾಗಿ ಆಗಿಲ್ಲವೆಂದು ಗ್ರಾಮ…

Read More