Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಇಂದಿನ ಶಿಕ್ಷಣದಲ್ಲಿ ವೈದ್ಯಕೀಯ ಅಥವಾ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಮಾತ್ರ ಅವಕಾಶಗಳಿವೆ ಎಂಬ ತಪ್ಪು ಕಲ್ಪನೆ ಬೆಳೆಯುತ್ತಿದೆ.  ಆದರೆ ವಿದ್ಯಾರ್ಥಿಯೂ ತನ್ನ ಆಸಕ್ತಿ, ಸಾಮರ್ಥ್ಯ ಮತ್ತು ಕನಸುಗಳಿಗೆ ತಕ್ಕಂತೆ ವಿಭಿನ್ನ ವೃತ್ತಿ ಕ್ಷೇತ್ರಗಳನ್ನು ಆರಿಸಿಕೊಳ್ಳಬಹುದು ಎಂದು ಬೆಂಗಳೂರಿನ ಭಾರತೀಯ  ವಿಜ್ಞಾನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಸಕ್ಷಮ್ ಜೈನ್ ನುಡಿದರು. ಅವರು ಆಳ್ವಾಸ್ ಪದವಿಪೂರ್ವ ಕಾಲೇಜು ಆಯೋಜಿಸಿದ್ದ “ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಗಾರ” ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಲೆ, ಸಾಹಿತ್ಯ, ಸಂಗೀತ, ನೃತ್ಯ, ನಾಟಕ, ಚಿತ್ರಕಲೆ ಮುಂತಾದ ಅನೇಕ ಸೃಜನಾತ್ಮಕ ಕ್ಷೇತ್ರಗಳು ವಿದ್ಯಾರ್ಥಿಗಳಿಗೆ ದೊಡ್ಡ ಯಶಸ್ಸನ್ನು ನೀಡಬಲ್ಲವು. ವಿಜ್ಞಾನ ಮತ್ತು ಸಂಶೋಧನೆ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳನ್ನು ಮಾಡುವುದು, ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವುದು ವಿದ್ಯಾರ್ಥಿಗಳಿಗೆ ಲಭ್ಯವಿರುವ ಇನ್ನೊಂದು ದೊಡ್ಡ ಅವಕಾಶ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಆಸಕ್ತಿ ಮತ್ತು ಕನಸುಗಳಿಗೆ ತಕ್ಕಂತೆ ಶಿಕ್ಷಣದ ಅನೇಕ ದಾರಿಗಳಲ್ಲಿ ಒಂದನ್ನು ಆರಿಸಿಕೊಳ್ಳಬೇಕು ಎಂದರು. ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮ ಇವರ ಆಶ್ರಯದಲ್ಲಿ ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷ ನೀಡುವ ಗೆಳೆಯರ ಬಳಗ ಕಾರಂತ ಪುರಸ್ಕಾರ – 2025 ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಎಚ್. ಶಕುಂತಲಾ ಭಟ್ ಆಯ್ಕೆಯಾಗಿದ್ದಾರೆ. ಅವರು ಕಾರಂತರ ಒಡನಾಡಿಯಾಗಿ, ಸಮಾಜ ಸೇವೆ, ಖ್ಯಾತ ಲೇಖಕಿಯಾಗಿ, ಸಂಘಟಕಿ, ಕವಿ, ಸಾಂಸ್ಕೃತಿಕ ಕಥೆಗಾರರಾಗಿ ಗುರುತಿಸಿಕೊಂಡಿದ್ದಾರೆ. ಸುಮಾರು 90 ಗ್ರಂಥಗಳನ್ನು ಬರೆದಿದ್ದಾರೆ. ಕನ್ನಡ ಹಾಗೂ ತುಳು ಭಾಷೆ ಸಾಹಿತ್ಯ ಕ್ಷೇತ್ರದಲ್ಲಿಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಮಾಲಿನಿ ಮಲ್ಯ, ಎಸ್. ನಾರಾಯಣ ರಾವ್, ಪೇತ್ರಿ ಮಾಧವ ನಾಯಕ್, ಶ್ರೀನಿವಾಸ ಸಾಸ್ತಾನ, ಹಿರಿಯಡ್ಕ ಗೋಪಾಲರಾವ್, ಎಚ್. ಇಬ್ರಾಹಿಂ ಸಾಹೇಬ್, ಪಾಂಡೇಶ್ವರ ಚಂದ್ರಶೇಖರ ಚಡಗ, ಬನ್ನಂಜೆ ಸಂಜೀವ ಸುವರ್ಣ, ವೈದೇಹಿ, ಹಾಗೂ ಡಾ.ನಾ ಮೊಗಸಾಲೆ, ಗೆಳೆಯರ ಬಳಗ ಕಾರಂತ ಪುರಸ್ಕಾರ ಪಡೆದವರಾಗಿದ್ದಾರೆ. ಈ ಪುರಸ್ಕಾರವು ಗೌರವಧನ ಹಾಗೂ ಸನ್ಮಾನ ಪತ್ರ ಒಳಗೊಂಡಿದೆ. ಇದೇ ಬರುವ ಅಕ್ಟೋಬರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಅತೀ ದೊಡ್ಡ ಜಾಗತಿಕ ವೇದಿಕೆಯಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಲು ಸುವರ್ಣಾವಕಾಶ ಒದಗಿಸಿದೆ. ಹಾಗೆಯೇ ವಿಶ್ವಕೌಶಲ್ಯ ಸ್ಪರ್ಧೆಯಲ್ಲಿ ಪದಕಗಳನ್ನು ಗೆಲ್ಲುವುದರ ಮೂಲಕ ಭಾರತವನ್ನು ಪ್ರತಿನಿಧಿಸಲು ಅವಕಾಶ ನೀಡುತ್ತಿದೆ. 2 ವರ್ಷಗಳಿಗೊಮ್ಮೆ ನಡೆಯುವ ಇಂಡಿಯಾ ಸ್ಕಿಲ್ಸ್ ಕರ್ನಾಟಕ – 2025 (ವರ್ಲ್ಡ್ ಸ್ಕಿಲ್ಸ್) ಸ್ಪರ್ಧೆಯಲ್ಲಿ ಜಗತ್ತಿನಾದ್ಯಂತ 75 ಕ್ಕಿಂತಲೂ ಹೆಚ್ಚು ದೇಶಗಳು ಸ್ಪರ್ಧೆಯಲ್ಲಿ ಭಾಗವಹಿಸುತ್ತಿವೆ. 16 ರಿಂದ 25 ವರ್ಷದೊಳಗಿನ ಯುವಜನತೆ 63 ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತೀ ದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಠತೆಯ ಕಾರ್ಯಕ್ರಮವಾಗಿದೆ. 2026ನೇ ಸಾಲಿಗೆ ವಿಶ್ವ ಕೌಶಲ್ಯ ಸ್ಪರ್ಧೆಯು ಚೀನಾದ ಶಾಂಘೈನಲ್ಲಿ ನಡೆಯಲಿದ್ದು, ಕರ್ನಾಟಕ ರಾಜ್ಯದ ಯುವಜನತೆಯ ಜ್ಞಾನಾರ್ಜನೆಗೆ ಸೂಕ್ತ ವೇದಿಕೆ ಕಲ್ಪಿಸಲು ಹಾಗೂ ಮಾದರಿ ಕೌಶಲ್ಯಾಭರಿತ ರಾಜ್ಯವನ್ನಾಸಗಿಲು ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಕೌಶಲ್ಯ ಒಲಂಪಿಕ್ಸ್ (ಇಂಡಿಯಾ ಸ್ಕಿಲ್ಸ್ ಕರ್ನಾಟಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಭಾರತ ಮಾಜಿ ರಾಷ್ಟ್ರಪತಿ ಡಾ. ಎಸ್. ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ವೈವಿಧ್ಯಮಯವಾಗಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಆಡಳಿತ ಮಂಡಳಿಯವರು ಹಾಗೂ ಶಿಕ್ಷಕರು ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸುವ ಮೂಲಕ ಕಾರ್ಯಕ್ರಮಕ್ಕೆ ಮುನ್ನುಡಿ ನೀಡಿದರು. ಕಾರ್ಯಕ್ರಮದ ಹಿನ್ನಲೆಯಲ್ಲಿ ಕಿರಿಯ ಪ್ರಾಥಮಿಕದಿಂದ ಹಿಡಿದು ಪದವಿ ಪೂರ್ವ ವಿಭಾಗದವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದ್ದು, ಇದನ್ನು ವಿಭಾಗವಾರು ತಂಡಗಳು ಅತ್ಯಂತ ಮನೋರಂಜಕವಾಗಿ ಹಾಗೂ ವಿನೋದಾತ್ಮಕವಾಗಿ ನಿರ್ವಹಿಸಿದವು. ವಿಶೇಷವಾಗಿ ಶಿಕ್ಷಕರು ತಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಪ್ರದರ್ಶಿಸಿ, ಎಲ್ಲರ ಮನಸು ಗೆದ್ದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಹಾಗೂ ಪದವಿ ಪೂರ್ವ ವಿಭಾಗದ ತಂಡಗಳು ಸಮಾನ ಪೈಪೋಟಿಯಲ್ಲಿ ಪ್ರಥಮ ಬಹುಮಾನವನ್ನು ಪಡೆದು, ವಿಜೇತ ಟ್ರೋಫಿಯನ್ನು ಹಂಚಿಕೊಂಡುದು ಈ ದಿನದ ಪ್ರಮುಖ ಆಕರ್ಷಣೆ ಆಗಿತ್ತು. ಇದೇ ಸಂದರ್ಭದಲ್ಲಿ ಶಿಕ್ಷಕರಿಗಾಗಿ ವಿಭಿನ್ನ ಸ್ಪರ್ಧೆಗಳು – ಬುದ್ಧಿಮತ್ತೆ ಪರೀಕ್ಷೆ, ಕ್ರಿಯಾತ್ಮಕ ಆಟಗಳನ್ನು ಹಮ್ಮಿಕೊಳ್ಳಲಾಗಿತ್ತು. ಎಲ್ಲ ಶಿಕ್ಷಕರು ಉತ್ಸಾಹದಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಮಧ್ವರಾಜ್ ಪ್ರಾಣಿ ಆರೈಕೆ ಟ್ರಸ್ಟ್ ಮಲ್ಪೆ, ವಲ್ಡ್ ವೈಡ್ ವೆಟರ್ನರಿ ಸರ್ವಿಸ್ ಇಂಡಿಯಾ, ಪ್ರೊಡೊ ಫೌಂಡೇಷನ್, ರೋಟರಿ ಕ್ಲಬ್ ಹಾಗೂ ಇನ್ನರ್‌ವೀಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಸೆ.10ರಿಂದ 14ರ ತನಕ ದಿನಗಳ ಕಾಲ ನಡೆಯುವ ದೇಶಿ ತಳಿಯ ಸಾಕು ನಾಯಿಗಳ ಸಂತಾನಶಕ್ತಿ ಹರಣ ಚಿಕಿತ್ಸಾ ಉಚಿತ ಶಿಬಿರಕ್ಕೆ ಬುಧವಾರ ಚಾಲನೆ ನೀಡಲಾಯಿತು. ಶಿಬಿರಕ್ಕೆ ಚಾಲನೆ ನೀಡಿದ ನಿವೃತ್ತ ಪಶು ವೈದ್ಯಾಧಿಕಾರಿ ಡಾ.ಶಂಕರ ಶೆಟ್ಟಿ, ದೇಶಿ ತಳಿಯ ಸಾಕು ನಾಯಿಗಳು ಆರೋಗ್ಯ ಕಳೆದುಕೊಳ್ಳುತ್ತಿರುವ ಈ ದಿನಗಳಲ್ಲಿ ಇಂತಹ ಶಿಬಿರ ಆಯೋಜಿಸುತ್ತಿರುವುದು ಮಾದರಿಯಾಗಿದೆ’ ಎಂದರು. ರೋಟರಿ ಕ್ಲಬ್‌ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಉಪ್ಪುಂದ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಗವರ್ನರ್ ಐ. ನಾರಾಯಣ್, ಇನ್ನರ್‌ವೀಲ್‌ ಕ್ಲಬ್‌ ಅಧ್ಯಕ್ಷೆ ಶಾರದಾ ಕೆ, ಚೈತ್ರಾ ಯಡ್ತರೆ, ಪಟ್ಟಣ ಪಂಚಾಯಿತಿಯ ಸಂತೋಷ್, ರವಿರಾಜ್, ವಲ್ಡ್ ವೈಡ್ ವೆಟರ್ನರಿ ಸರ್ವಿಸ್ ಇಂಡಿಯಾದ ಡಾ.ಚೇತನ್‌, ಡಾ.ಪ್ರದೀಪ್, ಪ್ರೋಡೊ ಫೌಂಡೇಷನ್‌ನ ಶ್ವೇತಾ ಆರ್, ತೇಜಸ್ವಿನಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಸ್ವಚ್ಛಂದವಾಗಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆಗಳು ಅತ್ಯಂತ ಆತಂಕಕಾರಿಯಾಗಿದೆ. ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು, ಪಾಕಿಸ್ತಾನ – ಪರ ಘೋಷಣೆ ಕೂಗಿರುವುದನ್ನು ನಾನು ಅತ್ಯಂತ ಕಟು ಶಬ್ದಗಳಲ್ಲಿ ಖಂಡಿಸುತ್ತೇನೆ ಮತ್ತು ಕಿಡಿಗೇಡಿಗಳ ವಿರುದ್ಧ ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ. ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ತುಷ್ಟಿಕರಣ ರಾಜಕೀಯಕ್ಕೆ ಮತ್ತೊಂದು ಕನ್ನಡಿ ಹಿಡಿದಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಆಗೃಹಿಸಿದ್ದಾರೆ. ಇದಕ್ಕೆ ಕುಮ್ಮಕ್ಕು ನೀಡುವಂತೆ, ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ವರ ಅವರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುವ ಆಸೆ ಇದೆ” ಎಂದು ಹೇಳಿಕೆ ನೀಡಿರುವುದು, ಈ ಕಾಂಗ್ರೆಸ್ ಸರ್ಕಾರದ ಅತಿಯಾದ ಓಲೈಕೆಯ ಅಸಲಿ ಮುಖವನ್ನು ಬಯಲು ಮಾಡಿದೆ. ಒಂದು ಕಡೆ, ನಮ್ಮ ಸೈನಿಕರು “ಆಪರೇಷನ್ ಸಿಂಧೂರ್” ಕಾರ್ಯಾಚರಣೆ ಮೂಲಕ ಶತ್ರು ರಾಷ್ಟ್ರದ ವಿರುದ್ಧ ಸಮರ ನಡೆಸುತ್ತಿದ್ದರೆ, ಮತ್ತೊಂದು ಕಡೆ, ನಮ್ಮ…

Read More

ಕೆ.ಎಸ್.‌ಆರ್.ಟಿ.ಸಿಯದ್ದು ಬಗೆಹರಿಯದ ಸಮಸ್ಯೆಯಾದಂತಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರ ಆಕ್ರೋಶ ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳಿಗೆ ಪರ್ಮಿಟ್‌ ಹೊಂದಿದ್ದರೂ ಕೆಎಸ್‌ಆರ್‌ಟಿಸಿ ಬಸ್‌ ಸೇವೆಯನ್ನು ಸ್ಥಗೀತಗೊಳಿಸಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಕೋರ್ಟ್ ತಡೆ ಇರುವ ಮಾರ್ಗದ ನಿಲ್ದಾಣವನ್ನು ಹೊರತುಪಡಿಸಿ ಬಾಕಿ ಮಾರ್ಗಗಳಿಗೆ ಬಸ್‌ ಓಡಿಸುವ ವ್ಯವಸ್ಥೆ ಮಾಡಿ. ತಡೆ ನೆಪವೊಡ್ಡಿ ಸಾರ್ವಜನಿಕ ಸೇವೆ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ಸಭೆಯಲ್ಲಿಯೂ ಕೆ.ಎಸ್‌.ಆರ್‌.ಟಿ.ಸಿ ಸಮಸ್ಯೆ ಬಗ್ಗೆ ಚರ್ಚಿಸಲಾಗುತ್ತಿದ್ದು, ಕಾರಣಗಳನ್ನಷ್ಟೇ ನೀಡುತ್ತಾ ಬರಲಾಗುತ್ತಿದೆ. ಆದರೆ ಯಾವೊಂದು ಕೆಲಸವೂ ಕಾರ್ಯರೂಪಕ್ಕೆ ಬಂದಿಲ್ಲ. ಇದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಈ ವಿಳಂಬ ಧೋರಣೆ ಕೈಬಿಟ್ಟು ಬಸ್‌ ಸಂಚರಿಸಲು ಸೂಕ್ತ ವ್ಯವಸ್ಥೆ ಮಾಡಿ ಎಂದವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ಚಿತ್ರಪಾಡಿ ಬೆಲ್ಲದ ಗಣಪತಿ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಬ್ಯಾಂಕ್ ಅಧಿಕಾರಿ ಚಿತ್ರಪಾಡಿಯ ಕೆ.ರಮೇಶ ರಾವ್ (73) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೇ 13ರಂದು ರಸ್ತೆ ಬದಿಯಲ್ಲಿ ನಿಂತಿದ್ದ ಇವರಿಗೆ ಅಂಬ್ಯುಲೆನ್ಸ್ ವಾಹನವೊಂದು ಡಿಕ್ಕಿ ಹೊಡೆದಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡು ಕೋಮಾಸ್ಥಿತಿಯಲ್ಲಿದ್ದ ಇವರು, ಸೆ.08ರ ಸಂಜೆ ವೇಳೆ ಮನೆಯಲ್ಲಿ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಂಡಿಕೇಟ್ ಬ್ಯಾಂಕಿನಲ್ಲಿ ಅಧಿಕಾರಿಯಾಗಿ ನಿವೃತ್ತರಾಗಿದ್ದ ಇವರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ. ಉಡುಪಿಯ ರಥಬೀದಿ ಗೆಳೆಯರು ಸಂಘಟನೆಯಲ್ಲಿ ಸ್ಥಾಪಕ ಕೋಶಾಧಿಕಾರಿಯಾಗಿ ಸೇವೆಸಲ್ಲಿಸಿದ್ದ ಇವರು, ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದರು. ಇವರು ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಇವರ ಸೇವೆಯನ್ನು ಗೌರವಿಸಿ ಯಕ್ಷಗಾನ ಕಲಾರಂಗ ಅವರಿಗೆ 2019ರಲ್ಲಿ ಯಕ್ಷಚೇತನ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇವರ ನಿಧನಕ್ಕೆ ಅಧ್ಯಕ್ಷ ಎಂ. ಗಂಗಾಧರ ರಾವ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ನಾರಾಯಣ ಗುರುಗಳ ಆದರ್ಶಗಳನ್ನು ಮತ್ತು ಉನ್ನತ ಮೌಲ್ಯಗಳನ್ನು ಅರಿತುಕೊಂಡು ಅದನ್ನು ನಮ್ಮ ಜೀವನದಲ್ಲಿ ಪರಿಪಾಲನೆ ಮಾಡಿದಾಗಲೇ ಜನ್ಮದಿನಾಚರಣೆ  ನಿಜವಾದ ಸಾರ್ಥಕತೆಯನ್ನು ಪಡೆದುಕೊಳ್ಳುತ್ತದೆ ಎಂದು ಉಪನ್ಯಾಸಕ ಮತ್ತು ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾರಾಯಣ ಗುರುಗಳ ವಿಶ್ವಮಾನವ ತತ್ವವನ್ನು ಈ ಜಗತ್ತಿನ ಪ್ರತಿಯೊಬ್ಬರು ಮನಗಾಣಬೇಕು. ಆ ಮೂಲಕ ಸೌಹಾರ್ದಯುತವಾದ ಸಾಮರಸ್ಯದ ಬದುಕು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಜಿ. ಗೋಪಾಲ ಪೂಜಾರಿ ಸ್ವಾಗತಿಸಿದರು ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಶಂಕರ ಪೂಜಾರಿ, ಗೋಪಾಲ ಚಂದನ್, ರಾಮಚಂದ್ರ ಪೂಜಾರಿ, ಚಂದ್ರಕಾಂತ ಪೂಜಾರಿ ಹಾಗೂ ವಸಂತ ಸುವರ್ಣ ಉಪಸ್ಥಿತರಿದ್ದರು. ಕಾರ್ಯದರ್ಶಿ ಜಿ. ಎ ಆರ್. ಲಕ್ಷ್ಮಣ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹೊಟೇಲ್‌ಗೆ ರೇಟಿಂಗ್ ಕೊಟ್ಟು ಹಣ ಗಳಿಸಿ ಎಂಬ ಸಂದೇಶವನ್ನು ನಂಬಿ ಲಿಂಕ್ ತೆರೆದ ವ್ಯಕ್ತಿಯೊಬ್ಬರು 6.16 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ. ಬೈಂದೂರು ತಾಲೂಕಿನ ಬಿಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕ ಗುರುಮೂರ್ತಿ ಜಿ. ಹೆಗಡೆ ಅವರು ಆನ್‌ಲೈನ್ ವಂಚನೆಗೆ ಒಳಗಾದವರು. ಗುರುಮೂರ್ತಿ ಅವರ ಮೊಬೈಲ್‌ಗೆ ನ್ಯಾಶನಲ್ ಸ್ಟಾಕ್ ಎಕ್ಸ್‌ಚೇಂಜ್ ಎಂಬ ಲಿಂಕ್ ಬಂದಿದ್ದು ಅದನ್ನು ತೆರೆದಾಗ ಅದರಲ್ಲಿ ಹೊಟೇಲ್‌ಗೆ ರೇಟಿಂಗ್ ಕೊಟ್ಟು ಹಣ ಗಳಿಸಬಹುದು ಎಂದು ತಿಳಿಸಿದರು. ಅದರಂತೆ ಅರ್ಚಕರು ಪತ್ನಿಯ ಬ್ಯಾಂಕ್ ಖಾತೆಯಿಂದ 1,44,000 ರೂ.ಗಳನ್ನು ಕಳಿಸಿದ್ದರು. ಟಾಸ್ಕ್ ಪಾಯಿಂಟ್ ಶೇ.90ರಷ್ಟು ಆಗಿದ್ದು ಶೇ.100ರಷ್ಟು ಪಾಯಿಂಟ್ ಮಾಡಿದರೆ ಮಾತ್ರ ಹಾಕಿದ ಹಣ ಮರುಪಾವತಿ ಆಗುತ್ತದೆ ಎಂದು ವಂಚಕರು ತಿಳಿಸಿದರು. ಅದರಂತೆ ಅರ್ಚಕರು ರಮೇಶ ಎಂಬವರ ಖಾತೆಯಿಂದ ಸೆ. 2ರಂದು 2,72,700 ರೂ. ಕಳುಹಿಸಿದರು. ಅನಂತರ ನಿಮ್ಮ ಅಕೌಂಟ್ ಫ್ರೀಜ್ ಆಗಿದ್ದು ಇನ್ನಷ್ಟು ಹಣ ಹಾಕಿದರೆ ಮಾತ್ರ ಅನ್‌ಫ್ರೀಜ್‌ ಆಗುತ್ತದೆ ಎಂದು ಹೆದರಿಸಿದರು.…

Read More