Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಕರ್ನಟಕ ಸರ್ಕಾರದ ‘ವಿಷನ್ ಕಮಿಟಿ’ಯ (ದೃಷ್ಟಿ ಆರೋಗ್ಯ ಸಮಿತಿ) ಅಧ್ಯಕ್ಷರನ್ನಾಗಿ ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಐ ಹಾಸ್ಪಿಟಲ್ಸ್ ಸಮೂಹ ಅಧ್ಯಕ್ಷರು ಮತ್ತು ವೈದ್ಯಕೀಯ ನಿರ್ದೇಶಕರಾದ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರನ್ನು ನೇಮಿಸಲಾಗಿದೆ. ಇದು ನೇತ್ರವಿಜ್ಞಾನ ಕ್ಷೇತ್ರದಲ್ಲಿ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರ ಅಪಾರ ಕೊಡುಗೆ ಹಾಗೂ ರಾಜ್ಯಾದ್ಯಂತ ಕಣ್ಣಿನ ಆರೈಕೆ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಅವರ ನಿರಂತರ ಬದ್ಧತೆಗೆ ಸಂದ ಮಹತ್ವದ ಮನ್ನಣೆಯಾಗಿದೆ. ವಿಷನ್‌ ಕಮಿಟಿಯ ಅಧ್ಯಕ್ಷರಾಗಿ, ದೃಷ್ಟಿ ಆರೋಗ್ಯ, ತಡೆಗಟ್ಟಬಹುದಾದ ಅಂಧತ್ವದ ನಿವಾರಣೆ, ಕಣ್ಣಿನ ಆರೈಕೆ ಸೇವೆಗಳ ಲಭ್ಯತೆ, ಮಾನವ ಸಂಪನ್ಮೂಲ, ಮೂಲಸೌಕರ್ಯ ಮತ್ತು ಸುಧಾರಿತ ನೇತ್ರ ಚಿಕಿತ್ಸಾ ಸೌಲಭ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಕರ್ನಾಟಕ ಸರ್ಕಾರಕ್ಕೆ ತಜ್ಞರ ಮಾರ್ಗದರ್ಶನ ಮತ್ತು ಶಿಫಾರಸುಗಳನ್ನು ನೀಡುವಲ್ಲಿ ಡಾ. ಕೃಷ್ಣಪ್ರಸಾದ್ ಕೂಡ್ಲು ಪ್ರಮುಖ ಪಾತ್ರ ವಹಿಸುವುದನ್ನು ಮುಂದುವರಿಸಲಿದ್ದಾರೆ. ಡಾ. ಕೃಷ್ಣಪ್ರಸಾದ್ ಕೂಡ್ಲು ಅವರು ಹಲವು ವರ್ಷಗಳಿಂದ ಸಮುದಾಯ ಆಧಾರಿತ ಕಣ್ಣಿನ ಆರೈಕೆ ಕಾರ್ಯಕ್ರಮಗಳಲ್ಲಿ, ವಿಶೇಷವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕರಕುಶಲ ಕಲೆಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ಆರ್ಥಿಕವಾಗಿಯು ನಮ್ಮನ್ನು ಸಬಲರನ್ನಾಗಿಸಲು ಸಹಾಯ ಮಾಡುತ್ತದೆ ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಭಿಪ್ರಾಯಪಟ್ಟರು. ಅವರು ಇಲ್ಲಿನ ಎಸ್‌.ವಿ ಕಾಮರ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಕ್ರೋಷೆ ತರಬೇತಿ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ಶಿಕ್ಷಕಿ ಜುನಿತಾ ಮಚಾದೋ ಮಾತನಾಡಿ, ಈ ಆಧುನಿಕ ಯುಗದಲ್ಲಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಕಲೆಗಳನ್ನು ಕಲಿಯುವುದು ಸುಲಭವಾಗುತ್ತದೆ. ಆಸಕ್ತಿ ಮತ್ತು ಶ್ರದ್ಧೆ ಇದಕ್ಕೆ ಅಗತ್ಯ ಎಂದು ಹೇಳಿದರು. ಉಪನ್ಯಾಸಕಿ ಸುಗುಣ ಆರ್ ಕೆ ಶುಭ ಹಾರೈಸಿದರು. ಎಸ್‌ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್. ಗಂಗೊಳ್ಳಿ ಪ್ರಾಸ್ತಾವಿಕ ಮಾತನ್ನಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಅಂಕಿತಾ ಖಾರ್ವಿ ಮತ್ತು ಸೃಷ್ಟಿ ಖಾರ್ವಿ ಉಪಸ್ಥಿತರಿದ್ದರು. ಸಾನಿಕ ಎಸ್. ಪೂಜಾರಿ ಸ್ವಾಗತಿಸಿದರು. ವಿದ್ಯಾರ್ಥಿನಿ ಅಂಕಿತ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. 1994- 96ನೇ ಸಾಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಂದ ಕೊಡಲ್ಪಡುವ 11ನೇ ವರ್ಷದ ಹದಿನೈದು ಸಾವಿರ ರೂಪಾಯಿ ನಗದು ಪ್ರೋತ್ಸಾಹ ಧನದ ಪ್ರತಿಭಾ ಪುರಸ್ಕಾರವನ್ನು ಕಳೆದ ಸಾಲಿನಲ್ಲಿ ವಿಜ್ಞಾನ ವಿಭಾಗದಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿನಿ ಮನ್ವಿತ ಅವಳಿಗೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ. ಅಧ್ಯಕ್ಷತೆ ವಹಿಸಿದ್ದರು. 1994-96 ಸಾಲಿನ ವಿದ್ಯಾರ್ಥಿಗಳ ಪ್ರತಿನಿಧಿಯಾಗಿ ಡಾ.ರಾ ಘವೇಂದ್ರ ಶೆಟ್ಟಿ ಉಪಾಧ್ಯಕ್ಷರು ರಿಸರ್ಚ್ ಡೆವಲಪ್ಮೆಂಟ್ ನವಿತಾಸ್ ಲೈಫ್ ಸೈನ್ಸ್ ಮಣಿಪಾಲ ಅವರು ಪ್ರೋತ್ಸಾಧನವನ್ನು ವಿತರಿಸಿದರು. ವಿದ್ಯಾರ್ಥಿನಿ ಸಿಂಚನ ಪ್ರಾರ್ಥಿಸಿದರು ವಿದ್ಯಾರ್ಥಿನಿ ತ್ರಿಶಾ ಸ್ವಾಗತಿಸಿದರು . ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್. ಅವರು ಕಾರ್ಯಕ್ರಮವನ್ನು ನಿರೂಪಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಸಂದೀಪ್ ಧನ್ಯವಾದ ಸಮರ್ಪಿಸಿದರು. ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯಾವುದೇ ಅಬ್ಬರದ ಪ್ರಚಾರವಿಲ್ಲದೇ ಜನಮೆಚ್ಚುವ ಕೆಲಸ ಮಾಡುತ್ತಿರುವ ಆಸರೆ ಸಂಸ್ಥೆಯ ಕಾರ್ಯ ಇತರರಿಗೆ ಮಾದರಿ. ಗ್ರಾಮೀಣ ಪ್ರದೇಶದಲ್ಲಿರುವ ಸಂಘ-ಸಂಸ್ಥೆಗಳು ಆರ್ಥಿಕ ದುರ್ಬಲರ ಪಾಲಿಗೆ ಸಂಜೀವಿನಿಯಾಗಿದೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಲಿ ಹೇಳಿದರು. ಅವರು ಆಸರೆ ಟ್ರಸ್ಟ್ ವಕ್ವಾಡಿ ವತಿಯಿಂದ ಭಾನುವಾರ ವಕ್ಕಾಡಿಯ ಶ್ರೀ ಹಳೆಯಮ್ಮ ದೇವಿ ಸಭಾಭವನದಲ್ಲಿ ಆಯೋಜಿಸಲಾದ ವಿದ್ಯಾರ್ಥಿವೇತನ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದುಬ್ಬಾ ಪಾರ್ಚೂನ್ ಗ್ರೂಫ್ ಆಫ್ ಹೊಟೇಲ್‌ನ ಆಡಳಿತ ನಿರ್ದೇಶಕ ಪ್ರವೀಣ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿವೇತನವನ್ನು ವಿತರಿಸಿ, ಟ್ರಸ್ಟ್‌ನ ಕಾರ್ಯವೈಖರಿಯನ್ನು ಪ್ರಶಂಸಿದರಲ್ಲದೇ ಊರಿನ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ನೆರವನ್ನು ನೀಡಲು ಸದಾ ಬದ್ಧನಾಗಿದ್ದೇನೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಸರೆ ಟ್ರಸ್ಟ್ ವಕ್ವಾಡಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಸಣಗಲ್ಲು ಮನೆ ವಹಿಸಿದ್ದರು. ಕಟೀಲು ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ದಿಕ್ಕೂಚಿ ಭಾಷಣ ಮಾಡಿದರು. ಹೊನ್ನಾವರದ ಶ್ರೀ ದೇವಿ ಆಸ್ಪತ್ರೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಜೀವಿನಿ ಸಂಘಗಳಲ್ಲಿನ ಆರ್ಥಿಕ ಅವ್ಯವಹಾರದ ತನಿಖೆಯನ್ನು ನಡೆಸಲು ಸರ್ಕಾರ ಕೂಡಲೇ ಒಂದು ವಿಶೇಷ ತನಿಖಾ ತಂಡವನ್ನು ರಚನೆ ಮಾಡಿ ಅವರ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ. ಉಡುಪಿ ಜಿಲ್ಲೆಯ ಸಂಜೀವಿನಿ ಸಂಘಗಳಲ್ಲಿನ ಲಕ್ಷಾಂತರ ರೂಪಾಯಿ ಹಣ ದುರುಪಯೋಗ ಒಂದು ಗಂಭೀರ ಪ್ರಕರಣ. ಈಗ ಮೂರು ಗ್ರಾಮ ಪಂಚಾಯತುಗಳಲ್ಲಿ ಲಕ್ಷಾಂತರ ರೂಪಾಯಿ ಹಣ ದುರುಪಯೋಗವಾಗಿರುವುದು ದೃಢಪಟ್ಟು ಸಂಬಂಧಿತರ ಮೇಲೆ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ. ಆದರೆ ಸಾರ್ವಜನಿಕ ವಲಯದ ಅನುಮಾನವೆಂದರೆ ಉಡುಪಿ ಜೆಲ್ಲೆಯ ಹೆಚ್ಚಿನ ಗ್ರಾಮ ಪಂಚಾಯತುಗಳ ಸಂಜೀವಿನಿ ಸಂಘಗಳಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ಆಗಿರುವ ಸಾಧ್ಯತೆಯಿದೆ. ಆದುದರಿಂದ ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಜಿಲ್ಲೆಯ ಎಲ್ಲಾ ಸಂಜೀವಿನಿ ಸಂಘಗಳ ದಾಖಲೆ, ಆರ್ಥಿಕ ವಹಿವಾಟು ಇತ್ಯಾದಿಗಳ ಸಮಗ್ರ ತನಿಖೆಗೆ ಒಂದು ವಿಶೇಷ ತಂಡವನ್ನು ರಚಿಸಬೇಕು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪ್ರತಿಯೊಬ್ಬರೂ ತಮ್ಮ ನೆಲಮೂಲದ ಭಾಷೆಯನ್ನು ಹೃದಯದ ಭಾಷೆಯನ್ನಾಗಿ ಮಾಡಿಕೊಂಡಾಗ ಮನಸ್ಸಿನ ಮಾತುಗಳಿಗೆ ನ್ಯಾಯಯುತ ಮೌಲ್ಯಗಳು ದೊರೆಯುತ್ತವೆ. ಅದೇ ರೀತಿ ಕುಂದಾಪ್ರ ಕನ್ನಡ ಭಾಷೆ ಗ್ರಾಮೀಣ ಭಾಗದ ಒಂದು ಸುಂದರ ಭಾಷೆಯಾಗಿ ಜಗತ್ತಿನಾದ್ಯಂತ ಮಿಂಚುತ್ತಿದೆ. ಕುಂದಾಪ್ರ ಕನ್ನಡ ಅದೊಂದು ವಿಶಿಷ್ಟ ಗ್ರಾಮೀಣ ಸೊಗಡನ್ನು ಹೊಂದಿರುವ ಭಾಷೆ ಎಂದು ಕುಂದಗನ್ನಡದ ರಾಯಬಾರಿ ಮನು ಹಂದಾಡಿ ಹೇಳಿದರು. ಅವರು ಮಣೂರು ರಾಜಲಕ್ಷ್ಮೀ ಸಭಾಂಗಣದಲ್ಲಿ ಭಾನುವಾರ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು ಇವರ ಸಹಕಾರದೊಂದಿಗೆ 5ನೇ ವರ್ಷದ ಕುಂದಾಪ್ರ ಭಾಷೆ ಬದ್ಕಿನ ಆಸಾಡಿ ಒಡ್ರ್ ಕಾರ್ಯಕ್ರಮದಲ್ಲಿ ಕುಂದಾಪ್ರ ಭಾಷಾ ಸೊಗಡಿನ ಬಗ್ಗೆ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಅಸಾಡಿ ಒಡ್ರ್ ಎನ್ನುವ ಹೆಸರಿನಲ್ಲಿ ಕುಂದಾಪುರ ಭಾಷೆಯನ್ನ ಮತ್ತಷ್ಟು ಗಟ್ಟಿಗೊಳಿಸುವ ಪ್ರಕ್ರಿಯೆಯಲ್ಲಿ ಪಂಚವರ್ಣ ಸಂಘಟನೆಯ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಿದಾಗ ಯಶಸ್ಸು ಸಾಧ್ಯ ಎಂದರಲ್ಲದೆ ನೆಲಮೂಲ ಭಾಷೆ ಬದ್ಕಿನ ಕುರಿತು ಯುವ ಉಳಿಸಿ ಬೆಳೆಸುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ವೇತ ಛತ್ರ ಯಕ್ಷಮಿತ್ರ ಕೋಣಿ ವತಿಯಿಂದ ಕೋಟೇಶ್ವರ ಯುವ ಮೆರಿಡಿಯನ್ ಗ್ರಾಮಿ ಮಿನಿ ಹಾಲ್‌ನಲ್ಲಿ ಭಾಗವತ ಸುರೇಶ ಶೆಟ್ಟಿ ಅವರ ಸಂಯೋಜನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಡಗಿನ ಪ್ರಬುದ್ಧ ಹಾಸ್ಯ ಕಲಾವಿದ ಹಳ್ಳಾಡಿ ಜಯರಾಮ ಶೆಟ್ಟಿ ದಂಪತಿಗಳಿಗೆ ಗೌರವ ಸನ್ಮಾನ ನಡೆಯಿತು. ವೇದಿಕೆಯಲ್ಲಿ ಕುಂದಾಪುರ ಆದರ್ಶ ಆಸ್ಪತ್ರೆಯ ಡಾ. ಆದರ್ಶ ಹೆಬ್ಬಾರ್, ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಧಿಕಾರಿ ಡಾ‌ .ನಾಗೇಶ್, ಉದ್ಯಮಿ ಬಾಂಡ್ಯ ಸುಬಾಸ್ ಶೆಟ್ಟಿ, ಹೋಟೆಲ್ ಉದ್ಯಮಿ ಅಯೋದ್ಯ ನವೀನ್ ಶೆಟ್ಟಿ, ನಿರ್ವತ್ತ ಯಜಮಾನರಾದ ನಾರಾಯಣ ಶೆಟ್ಟಿ, ಎಸ್. ವಿ. ಉದಯಕುಮಾರ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದರು. ಸತೀಶ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ಬಾರ್ಕೂರಿನ ವಿಮೆನ್ಸ್ ಫೋರಂ ವತಿಯಿಂದ ವಿದ್ಯಾರ್ಥಿನಿಯರಲ್ಲಿ ಆರೋಗ್ಯ, ವೈಯಕ್ತಿಕ ಸ್ವಚ್ಛತೆ, ಋತುಚಕ್ರದ ಆರೋಗ್ಯ, ಭಾವನಾತ್ಮಕ ಕ್ಷೇಮ ಹಾಗೂ ಆತ್ಮವಿಶ್ವಾಸದ ಕುರಿತು ಸಮಗ್ರ ಅರಿವು ಮೂಡಿಸುವ ಉದ್ದೇಶದಿಂದ “ಅರಿವು, ಆರೋಗ್ಯ ಮತ್ತು ಆತ್ಮವಿಶ್ವಾಸದ ಮೂಲಕ ಯುವ ಮನಸ್ಸುಗಳ ಸಬಲೀಕರಣ” ಎಂಬ ಆಶಯದೊಂದಿಗೆ ಜಾಗೃತಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಎನ್‌ಆರ್‌ಸಿ ವೈದ್ಯಕೀಯ ಅಧಿಕಾರಿ ಡಾ. ಧನ್ಯಾ ಎನ್. ಹೆಗ್ಡೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿನಿಯರಿಗೆ ಋತುಚಕ್ರದ ವೈಜ್ಞಾನಿಕ ಹಾಗೂ ಆರೋಗ್ಯಪೂರ್ಣ ನಿರ್ವಹಣೆಯ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು. ಋತುಚಕ್ರವೆಂದರೇನು, ಅದರ ವಿವಿಧ ಹಂತಗಳು, ಋತುಚಕ್ರದ ಸಂದರ್ಭದಲ್ಲಿ ದೇಹದಲ್ಲಿ ಉಂಟಾಗುವ ಸಹಜ ಬದಲಾವಣೆಗಳು ಹಾಗೂ ಈ ಅವಧಿಯಲ್ಲಿ ಕೈಗೊಳ್ಳಬೇಕಾದ ವೈಯಕ್ತಿಕ ಸ್ವಚ್ಛತಾ ಕ್ರಮಗಳ ಕುರಿತು ಅವರು ವಿವರಿಸಿದರು. ಋತುಚಕ್ರದೊಂದಿಗೆ ಸಂಬಂಧಿಸಿದ ಮೂಢನಂಬಿಕೆಗಳು, ಸಾಮಾಜಿಕ ಕಟ್ಟುಪಾಡುಗಳು ಹಾಗೂ ತಪ್ಪು ಕಲ್ಪನೆಗಳನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಅರ್ಥಮಾಡಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಋತುಚಕ್ರವು ಅನಾರೋಗ್ಯದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಭಾರತದ ಬೃಹತ್ ಉದ್ಯೋಗ ಮೇಳವಾಗಿರುವ ಆಳ್ವಾಸ್ ಪ್ರಗತಿ-2026ರ 16ನೇ ಆವೃತ್ತಿಯು ಶನಿವಾರ ವಿದ್ಯಾಗಿರಿ ಆವರಣದಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿತು. ಭಾಗವಹಿಸಿದ 326 ಕಂಪೆನಿಗಳ ಪೈಕಿ 285 ಕಂಪೆನಿಗಳು 2,394 ಅಭ್ಯರ್ಥಿಗಳನ್ನು ಸ್ಥಳದಲ್ಲೇ ಉದ್ಯೋಗಾವಕಾಶ ನೀಡಿದರೆ, 5,935 ಅಭ್ಯರ್ಥಿಗಳನ್ನು ಮುಂದಿನ ಹಂತದ ಆಯ್ಕೆ ಪ್ರಕ್ರಿಯೆಗೆ ಶಾರ್ಟ್ಲಿಸ್ಟ್ ಮಾಡಿವೆ. ಮೊದಲ ದಿನ 326 ಕಂಪೆನಿಗಳು ಹಾಗೂ ಎರಡನೇ ದಿನ 6 ಕಂಪೆನಿಗಳು ಸೇರಿದಂತೆ ಒಟ್ಟು 332 ಕಂಪೆನಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದವು. ದೇಶದ ವಿವಿಧ ಭಾಗಗಳಿಂದ ಒಟ್ಟು 15,539 ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಂಡಿದ್ದರು. ಎರಡನೇ ದಿನವೊಂದರಲ್ಲೇ 2,523 ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಮಹಿಳಾ ಎಂಜಿನಿಯರ್‌ಗಳಿಗೆ ಹೆಚ್ಚಿನ ಅವಕಾಶ:ವಿದ್ಯುತ್ ವಾಹನಗಳ ಚಾರ್ಜಿಂಗ್ ಪರಿಹಾರಗಳನ್ನು ಒದಗಿಸುವ ಪ್ರಮುಖ ಕಂಪೆನಿಯಾದ ಎಕ್ಸಿಕೋಮ್ ಟೆಲಿ ಸಿಸ್ಟಮ್ ಲಿಮಿಟೆಡ್ ತನ್ನ ಹೈದರಾಬಾದ್ ಘಟಕಕ್ಕೆ ಆಳ್ವಾಸ್ ಪ್ರಗತಿ ಮೂಲಕ 35 ಮಹಿಳಾ ಎಂಜಿನಿಯರ್‌ಗಳನ್ನು ನೇಮಕ ಮಾಡಿಕೊಂಡಿದೆ. ಕಳೆದ ವರ್ಷ ಇದೇ ಮೇಳದ ಮೂಲಕ 22 ಎಂಜಿನಿಯರ್‌ಗಳನ್ನು ನೇಮಕ ಮಾಡಲಾಗಿತ್ತು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ತಾಲೂಕು ಘಟಕದ ಸಾಹಿತ್ಯ ಪ್ರೇರಣೆ ಸಾಹಿತ್ಯ ಸಂಚಾರ 72ನೇ ಸರಣಿ ಕಾರ್ಯಕ್ರಮ ಶನಿವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗಾರಕಟ್ಟೆ ಐರೋಡಿ ಇಲ್ಲಿ ಜರಗಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮ್ ಕುಮಾರ್ ಕಾರ್ಯಕ್ರಮವನ್ನುಉದ್ಘಾಟಿಸಿ ಮಾತನಾಡಿ, ಜೀವನವೆಂಬ ಸಂಸಾರದಲ್ಲಿ ಸಾಕ್ಷಾತ್ಕಾರ ಪಡೆಯಲು ಓದಿನ ಜೊತೆಗೆ ಯಕ್ಷಗಾನ, ನೃತ್ಯ, ಕಲೆ, ಸಾಹಿತ್ಯವು ಒಂದು ಪ್ರೇರಣಾ ಶಕ್ತಿಯಾಗಿದೆ ಎಂದು ವಿವರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಕಥೆ ಕವನ ರಚಿಸಿ ಮಕ್ಕಳನ್ನು ಪ್ರೇರಣೆಗೊಳಿಸಿದರು. ಕಸಾಪ ತಾಲೂಕು ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ್ ಅವರು ಕವನ, ಕಥೆಗಳ ಮೂಲಕ ಮಕ್ಕಳಿಗೆ ಸಾಹಿತ್ಯದಲ್ಲಿ ಆಸಕ್ತಿ ಮೂಡಿಸಿದರು. ಸಾಹಿತ್ಯ ಪರಿಷತ್‌ನ ಸುಪ್ರೀತಾ ಪುರಾಣಿಕ್ ಅವರು ಅಭಿನಯ ಗೀತೆಯನ್ನು ಅಭಿನಯಿಸಿ ತೋರಿಸಿದರು. ನರಸಿಂಹ ತುಂಗ ಯಕ್ಷಗಾನದಲ್ಲಿ ಹಾಸ್ಯದ ಪ್ರಸಂಗವನ್ನು ಹಿಮ್ಮೇಳ ದೊಂದಿಗೆ ಅಭಿನಯಿಸಿ ತೋರಿಸಿದರು. ಅಚ್ಚುತ ಪೂಜಾರಿ ಕಾರ್ಕಡ ಕನ್ನಡ ಗೀತೆಗಳನ್ನು ಹಾಡಿದರು. ಶಾಲೆಯ…

Read More