ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪ್ರತಿಯೊಬ್ಬರೂ ತಮ್ಮ ನೆಲಮೂಲದ ಭಾಷೆಯನ್ನು ಹೃದಯದ ಭಾಷೆಯನ್ನಾಗಿ ಮಾಡಿಕೊಂಡಾಗ ಮನಸ್ಸಿನ ಮಾತುಗಳಿಗೆ ನ್ಯಾಯಯುತ ಮೌಲ್ಯಗಳು ದೊರೆಯುತ್ತವೆ. ಅದೇ ರೀತಿ ಕುಂದಾಪ್ರ ಕನ್ನಡ ಭಾಷೆ ಗ್ರಾಮೀಣ ಭಾಗದ ಒಂದು ಸುಂದರ ಭಾಷೆಯಾಗಿ ಜಗತ್ತಿನಾದ್ಯಂತ ಮಿಂಚುತ್ತಿದೆ. ಕುಂದಾಪ್ರ ಕನ್ನಡ ಅದೊಂದು ವಿಶಿಷ್ಟ ಗ್ರಾಮೀಣ ಸೊಗಡನ್ನು ಹೊಂದಿರುವ ಭಾಷೆ ಎಂದು ಕುಂದಗನ್ನಡದ ರಾಯಬಾರಿ ಮನು ಹಂದಾಡಿ ಹೇಳಿದರು. ಅವರು ಮಣೂರು ರಾಜಲಕ್ಷ್ಮೀ ಸಭಾಂಗಣದಲ್ಲಿ ಭಾನುವಾರ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು ಇವರ ಸಹಕಾರದೊಂದಿಗೆ 5ನೇ ವರ್ಷದ ಕುಂದಾಪ್ರ ಭಾಷೆ ಬದ್ಕಿನ ಆಸಾಡಿ ಒಡ್ರ್ ಕಾರ್ಯಕ್ರಮದಲ್ಲಿ ಕುಂದಾಪ್ರ ಭಾಷಾ ಸೊಗಡಿನ ಬಗ್ಗೆ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಅಸಾಡಿ ಒಡ್ರ್ ಎನ್ನುವ ಹೆಸರಿನಲ್ಲಿ ಕುಂದಾಪುರ ಭಾಷೆಯನ್ನ ಮತ್ತಷ್ಟು ಗಟ್ಟಿಗೊಳಿಸುವ ಪ್ರಕ್ರಿಯೆಯಲ್ಲಿ ಪಂಚವರ್ಣ ಸಂಘಟನೆಯ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಿದಾಗ ಯಶಸ್ಸು ಸಾಧ್ಯ ಎಂದರಲ್ಲದೆ ನೆಲಮೂಲ ಭಾಷೆ ಬದ್ಕಿನ ಕುರಿತು ಯುವ ಉಳಿಸಿ ಬೆಳೆಸುವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ವೇತ ಛತ್ರ ಯಕ್ಷಮಿತ್ರ ಕೋಣಿ ವತಿಯಿಂದ ಕೋಟೇಶ್ವರ ಯುವ ಮೆರಿಡಿಯನ್ ಗ್ರಾಮಿ ಮಿನಿ ಹಾಲ್ನಲ್ಲಿ ಭಾಗವತ ಸುರೇಶ ಶೆಟ್ಟಿ ಅವರ ಸಂಯೋಜನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಡಗಿನ ಪ್ರಬುದ್ಧ ಹಾಸ್ಯ ಕಲಾವಿದ ಹಳ್ಳಾಡಿ ಜಯರಾಮ ಶೆಟ್ಟಿ ದಂಪತಿಗಳಿಗೆ ಗೌರವ ಸನ್ಮಾನ ನಡೆಯಿತು. ವೇದಿಕೆಯಲ್ಲಿ ಕುಂದಾಪುರ ಆದರ್ಶ ಆಸ್ಪತ್ರೆಯ ಡಾ. ಆದರ್ಶ ಹೆಬ್ಬಾರ್, ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಧಿಕಾರಿ ಡಾ .ನಾಗೇಶ್, ಉದ್ಯಮಿ ಬಾಂಡ್ಯ ಸುಬಾಸ್ ಶೆಟ್ಟಿ, ಹೋಟೆಲ್ ಉದ್ಯಮಿ ಅಯೋದ್ಯ ನವೀನ್ ಶೆಟ್ಟಿ, ನಿರ್ವತ್ತ ಯಜಮಾನರಾದ ನಾರಾಯಣ ಶೆಟ್ಟಿ, ಎಸ್. ವಿ. ಉದಯಕುಮಾರ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದರು. ಸತೀಶ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ಬಾರ್ಕೂರಿನ ವಿಮೆನ್ಸ್ ಫೋರಂ ವತಿಯಿಂದ ವಿದ್ಯಾರ್ಥಿನಿಯರಲ್ಲಿ ಆರೋಗ್ಯ, ವೈಯಕ್ತಿಕ ಸ್ವಚ್ಛತೆ, ಋತುಚಕ್ರದ ಆರೋಗ್ಯ, ಭಾವನಾತ್ಮಕ ಕ್ಷೇಮ ಹಾಗೂ ಆತ್ಮವಿಶ್ವಾಸದ ಕುರಿತು ಸಮಗ್ರ ಅರಿವು ಮೂಡಿಸುವ ಉದ್ದೇಶದಿಂದ “ಅರಿವು, ಆರೋಗ್ಯ ಮತ್ತು ಆತ್ಮವಿಶ್ವಾಸದ ಮೂಲಕ ಯುವ ಮನಸ್ಸುಗಳ ಸಬಲೀಕರಣ” ಎಂಬ ಆಶಯದೊಂದಿಗೆ ಜಾಗೃತಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಎನ್ಆರ್ಸಿ ವೈದ್ಯಕೀಯ ಅಧಿಕಾರಿ ಡಾ. ಧನ್ಯಾ ಎನ್. ಹೆಗ್ಡೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿನಿಯರಿಗೆ ಋತುಚಕ್ರದ ವೈಜ್ಞಾನಿಕ ಹಾಗೂ ಆರೋಗ್ಯಪೂರ್ಣ ನಿರ್ವಹಣೆಯ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು. ಋತುಚಕ್ರವೆಂದರೇನು, ಅದರ ವಿವಿಧ ಹಂತಗಳು, ಋತುಚಕ್ರದ ಸಂದರ್ಭದಲ್ಲಿ ದೇಹದಲ್ಲಿ ಉಂಟಾಗುವ ಸಹಜ ಬದಲಾವಣೆಗಳು ಹಾಗೂ ಈ ಅವಧಿಯಲ್ಲಿ ಕೈಗೊಳ್ಳಬೇಕಾದ ವೈಯಕ್ತಿಕ ಸ್ವಚ್ಛತಾ ಕ್ರಮಗಳ ಕುರಿತು ಅವರು ವಿವರಿಸಿದರು. ಋತುಚಕ್ರದೊಂದಿಗೆ ಸಂಬಂಧಿಸಿದ ಮೂಢನಂಬಿಕೆಗಳು, ಸಾಮಾಜಿಕ ಕಟ್ಟುಪಾಡುಗಳು ಹಾಗೂ ತಪ್ಪು ಕಲ್ಪನೆಗಳನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಅರ್ಥಮಾಡಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಋತುಚಕ್ರವು ಅನಾರೋಗ್ಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಭಾರತದ ಬೃಹತ್ ಉದ್ಯೋಗ ಮೇಳವಾಗಿರುವ ಆಳ್ವಾಸ್ ಪ್ರಗತಿ-2026ರ 16ನೇ ಆವೃತ್ತಿಯು ಶನಿವಾರ ವಿದ್ಯಾಗಿರಿ ಆವರಣದಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿತು. ಭಾಗವಹಿಸಿದ 326 ಕಂಪೆನಿಗಳ ಪೈಕಿ 285 ಕಂಪೆನಿಗಳು 2,394 ಅಭ್ಯರ್ಥಿಗಳನ್ನು ಸ್ಥಳದಲ್ಲೇ ಉದ್ಯೋಗಾವಕಾಶ ನೀಡಿದರೆ, 5,935 ಅಭ್ಯರ್ಥಿಗಳನ್ನು ಮುಂದಿನ ಹಂತದ ಆಯ್ಕೆ ಪ್ರಕ್ರಿಯೆಗೆ ಶಾರ್ಟ್ಲಿಸ್ಟ್ ಮಾಡಿವೆ. ಮೊದಲ ದಿನ 326 ಕಂಪೆನಿಗಳು ಹಾಗೂ ಎರಡನೇ ದಿನ 6 ಕಂಪೆನಿಗಳು ಸೇರಿದಂತೆ ಒಟ್ಟು 332 ಕಂಪೆನಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದವು. ದೇಶದ ವಿವಿಧ ಭಾಗಗಳಿಂದ ಒಟ್ಟು 15,539 ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಂಡಿದ್ದರು. ಎರಡನೇ ದಿನವೊಂದರಲ್ಲೇ 2,523 ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಮಹಿಳಾ ಎಂಜಿನಿಯರ್ಗಳಿಗೆ ಹೆಚ್ಚಿನ ಅವಕಾಶ:ವಿದ್ಯುತ್ ವಾಹನಗಳ ಚಾರ್ಜಿಂಗ್ ಪರಿಹಾರಗಳನ್ನು ಒದಗಿಸುವ ಪ್ರಮುಖ ಕಂಪೆನಿಯಾದ ಎಕ್ಸಿಕೋಮ್ ಟೆಲಿ ಸಿಸ್ಟಮ್ ಲಿಮಿಟೆಡ್ ತನ್ನ ಹೈದರಾಬಾದ್ ಘಟಕಕ್ಕೆ ಆಳ್ವಾಸ್ ಪ್ರಗತಿ ಮೂಲಕ 35 ಮಹಿಳಾ ಎಂಜಿನಿಯರ್ಗಳನ್ನು ನೇಮಕ ಮಾಡಿಕೊಂಡಿದೆ. ಕಳೆದ ವರ್ಷ ಇದೇ ಮೇಳದ ಮೂಲಕ 22 ಎಂಜಿನಿಯರ್ಗಳನ್ನು ನೇಮಕ ಮಾಡಲಾಗಿತ್ತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ತಾಲೂಕು ಘಟಕದ ಸಾಹಿತ್ಯ ಪ್ರೇರಣೆ ಸಾಹಿತ್ಯ ಸಂಚಾರ 72ನೇ ಸರಣಿ ಕಾರ್ಯಕ್ರಮ ಶನಿವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗಾರಕಟ್ಟೆ ಐರೋಡಿ ಇಲ್ಲಿ ಜರಗಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮ್ ಕುಮಾರ್ ಕಾರ್ಯಕ್ರಮವನ್ನುಉದ್ಘಾಟಿಸಿ ಮಾತನಾಡಿ, ಜೀವನವೆಂಬ ಸಂಸಾರದಲ್ಲಿ ಸಾಕ್ಷಾತ್ಕಾರ ಪಡೆಯಲು ಓದಿನ ಜೊತೆಗೆ ಯಕ್ಷಗಾನ, ನೃತ್ಯ, ಕಲೆ, ಸಾಹಿತ್ಯವು ಒಂದು ಪ್ರೇರಣಾ ಶಕ್ತಿಯಾಗಿದೆ ಎಂದು ವಿವರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ಕಥೆ ಕವನ ರಚಿಸಿ ಮಕ್ಕಳನ್ನು ಪ್ರೇರಣೆಗೊಳಿಸಿದರು. ಕಸಾಪ ತಾಲೂಕು ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ್ ಅವರು ಕವನ, ಕಥೆಗಳ ಮೂಲಕ ಮಕ್ಕಳಿಗೆ ಸಾಹಿತ್ಯದಲ್ಲಿ ಆಸಕ್ತಿ ಮೂಡಿಸಿದರು. ಸಾಹಿತ್ಯ ಪರಿಷತ್ನ ಸುಪ್ರೀತಾ ಪುರಾಣಿಕ್ ಅವರು ಅಭಿನಯ ಗೀತೆಯನ್ನು ಅಭಿನಯಿಸಿ ತೋರಿಸಿದರು. ನರಸಿಂಹ ತುಂಗ ಯಕ್ಷಗಾನದಲ್ಲಿ ಹಾಸ್ಯದ ಪ್ರಸಂಗವನ್ನು ಹಿಮ್ಮೇಳ ದೊಂದಿಗೆ ಅಭಿನಯಿಸಿ ತೋರಿಸಿದರು. ಅಚ್ಚುತ ಪೂಜಾರಿ ಕಾರ್ಕಡ ಕನ್ನಡ ಗೀತೆಗಳನ್ನು ಹಾಡಿದರು. ಶಾಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಡಿ ಗ್ರಾಮ ಪಂಚಾಯತ್, ಆಗೋಗ್ಯ ಇಲಾಖೆ ಕೋಡಿಬೆಂಗ್ರೆ, ಶಿಶುಅಭಿವೃದ್ದಿ ಯೋಜನೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಕೇಂದ್ರ ಸರ್ಕಾರದ ಪೋಷಣ್ ಅಭಿಯಾನದಡಿ ಸ್ಥನ್ಯ ಪಾನ್ಯ ಸಪ್ತಾಹ ಕಾರ್ಯಕ್ರಮ ಮತ್ತು ಅನ್ನ ಪ್ರಸಾನ ಕಾರ್ಯಕ್ರಮ ಶುಕ್ರವಾರ ಹೊಸಬೆಂಗ್ರೆ ಅಂಗನವಾಡಿಯಲ್ಲಿ ಜರಗಿತು. ಪಿಎಚ್ಸಿಒ ಲಾವಣ್ಯ ಅವರು ಮಾಹಿತಿ ನೀಡಿ ಎದೆ ಹಾಲಿನ ಮಹತ್ವ ಹಾಗೂ ಅನ್ನ ಪ್ರಾಸನದ ಕುರಿತು ಸವಿಸ್ತಾರವಾಗಿ ತಿಳಿಸಿದರಲ್ಲದೆ ಡೆಂಗ್ಯೂಜ್ವರ ಅದರ ತಡೆ ಗಟ್ಟುವಿಕೆ ಬಗ್ಗೆ ತಿಳಿಸಿದರು . ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಜ್ಯೋತಿ, ಬಾಲಾವಿಕಾಸ ಸಮಿತಿ ಅಧ್ಯಕ್ಷೆ ಸುಲೋಚನಾ, ಬಾಲವಿಕಾಸ ಸಮಿತಿ ಸದಸ್ಯೆ ನಿರ್ಮಲ, ಪೋಷಕರಾದ ಶಾರದಾ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಯಮುನಾ ಲಕ್ಷ್ಮಣ್ ಕುಂದರ್ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶೈಕ್ಷಣಿಕ ವಾತಾವರಣದಲ್ಲಿ ವಿದ್ಯಾರ್ಜನೆ ಮಾಡುವ ಸಂದರ್ಭದಲ್ಲಿ ಸಾಮರಸ್ಯ ಬಹಳ ಮುಖ್ಯ. ಪ್ರಥಮ ವರ್ಷದ ಪದವಿಗೆ ಸೇರಿದ ನಿಮಗೆ ಭವಿಷ್ಯದಲ್ಲಿ ಜೀವನಕ್ಕೆ ಅಗತ್ಯವಾದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ. ಬದುಕಿನ ಕೊನೆಯವರೆಗೆ ಬರುವ ಶಿಕ್ಷಣವನ್ನು ಕಲಿತು ಬದುಕಿರಿ ಎಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳ ಪದವಿ-ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ. ಬಿ. ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪ್ರಥಮ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಫ್ರೆಶರ್ಸ್ ಡೇ’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ವಿಕಾಸ್ ಶೆಟ್ಟಿ ಸ್ವಾಗತಿಸಿ, ಎಸ್ಕ್ಯೂಎಸಿ ಪ್ರತಿನಿಧಿ ಖುಷಿ ಶೆಟ್ಟಿ ವಂದಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ಅಭಿಷೇಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಘಟಕ ಆಶ್ರಯದಲ್ಲಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ವೀರಾ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ನಿಟ್ಟೆ ವಿಶ್ವ ವಿದ್ಯಾನಿಲಯದ ಭಾರತೀಯ ಜ್ಞಾನ ವ್ಯವಸ್ಥೆ ಕೇಂದ್ರ, ನಿಟ್ಟೆ ಇಲ್ಲಿನ ಪ್ರಾಧ್ಯಾಪಕರು ಮತ್ತು ನಿರ್ದೇಶಕರು, ಡಾ. ಸುಧೀರ ರಾಜ್ ಕೆ., ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಕೇವಲ ಪುಸ್ತಕದ ಜ್ಞಾನವನ್ನು ಹೊಂದಿರುವುದು ಸಾಕಾಗುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಪ್ರಾಯೋಗಿಕವಾಗಿ ಬಳಸುವ ಸಾಮರ್ಥ್ಯ ಸಂವಹನ ಕೌಶಲ್ಯ ಸೃಜನಶೀಲತೆ ನಾಯಕತ್ವ ಮತ್ತು ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಬೆಳಸಿಕೊಳ್ಳುವುದು ಅತೀ ಅಗತ್ಯ. ಭಾರತೀಯ ಜ್ಙಾನ ವ್ಯವಸ್ಥೆಯು ಅನುಭವ ಮೌಲ್ಯ ಮತ್ತು ಪ್ರಾಯೋಗಿಕ ಕಲಿಕೆಗೆ ಮಹತ್ವ ನೀಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಜ್ಞಾನವನ್ನು ಪ್ರಾಯೋಗಿಕ ಕೌಶಲ್ಯಗಳೊಂದಿಗೆ ಸಂಪರ್ಕಿಸಬೇಕಾದರೆ ಇಂತಹ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಳವಾದ ಪರಿಣಿತಿಯನ್ನು ಬೆಳೆಸಿಕೊಂಡು ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡರೆ ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಉಮೇಶ್ ಮಯ್ಯ ಅಧಿಕಾರ ಸ್ವೀಕರಿಸಿದ್ದಾರೆ. ಮೂಲತ: ಯಡ್ತರೆ ಗ್ರಾಮದವರಾದ ಉಮೇಶ್ ಮಯ್ಯ ಅವರು ಡಾ. ಜಿ. ಶಂಕರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಇಲ್ಲಿಂದ ವರ್ಗಾವಣೆಗೊಂಡಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇಲ್ಲಿ ಪ್ರಭಾರ ಪ್ರಾಂಶುಪಾಲರ ಅಧಿಕಾರ ಸ್ವೀಕರಿಸಿದರು. ಇವರು 32 ವರ್ಷಗಳ ಸೇವಾ ಅನುಭವ ಹೊಂದಿದ್ದು, M.Com., M.B.A., M.Phil., Ph.D. ಪದವಿಯನ್ನು ಪಡೆದಿರುತ್ತಾರೆ. ಈ ಹಿಂದೆ 2009ರಿಂದ 2017ರ ತನಕ ವಾಣಿಜ್ಯಶಾಸ್ತ್ರ ಮತ್ತು ನಿರ್ವಹಣಾಶಾಸ್ತ್ರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿರುತ್ತಾರೆ. ಡಾ. ಉಮೇಶ್ ಮಯ್ಯ ಅವರ ಪ್ರಮುಖ ಸಾಧನೆಗಳು ಮತ್ತು ಕೊಡುಗೆಗಳು:
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಶುಕ್ರವಾರ ಹಾಡಹಗಲೇ ನಡೆದ ಕೊಲೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಶನಿವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದು ಕೆಲವೇ ಗಂಟೆಯೊಳಗೆ ಪೊಲೀಸರು ತಂಡವು ಎಲ್ಲಾ ಮೂವರು ಸುಪಾರಿ ಹಂತಕರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಉತ್ತರ ಪ್ರದೇಶದ ರಾಜು (42), ಉತ್ತರಾಖಂಡ ರಾಜ್ಯದ ಅಜಯ್ ರಸ್ತೋಗಿ ಯಾನೆ ಅನ್ನೋಲ್ (23) ಮತ್ತು ಬಿಹಾರ ರಾಜ್ಯದ ಜಿಯಾಹುಲ್ ವಜೂಲ್ ಶೇಖ್ ಅಲಿಯಾಸ್ ದೀಪಕ್ (38) ಎಂದು ಗುರುತಿಸಲಾಗಿದೆ. ಘಟನೆ ವಿವರ:ಕಾಪು ತಾಲೂಕು ಮುದರಂಗಡಿಯ ಸೆಂಗ್ ಕ್ಷೇವಿಯರ್ ಚರ್ಚ್ನ ಕಾಂಪ್ಲೆಕ್ಸ್ನಲ್ಲಿ ಡೇವಿಡ್ ಡಿಸೋಜಾ (55) ಎಂಬವರು ಪ್ರಿನ್ಸ್ ಎಂಟರ್ಪ್ರೈಸಸ್ ಎಂಬ ಹೆಸರಿನ ಉದ್ಯಮದ ಕಚೇರಿ ಹೊಂದಿದ್ದು, ಶುಕ್ರವಾರ ಕಚೇರಿಗೆ ಬಂದು ಬಳಿಕ ತನ್ನ ಥಾರ್ ವಾಹನದ ಬಳಿ ಹೋದಾಗ ದುಷ್ಕರ್ಮಿಯೊಬ್ಬ ಪಿಸ್ತೂಲ್ ನಿಂದ ತಲೆಗೆ ಗುಂಡು ಹಾರಿಸಿದ್ದ. ಬಳಿಕ ಆರೋಪಿಗಳು ಪರಾರಿಯಾಗಿದ್ದ. ಬಸ್ನಲ್ಲಿ ಪರಾರಿಯಾಗಿದ್ದ ಆರೋಪಿಗಳು:ಮುದರಂಗಡಿಯಿಂದ ಬೈಕ್ನಲ್ಲಿ ಪರಾರಿಯಾಗಿದ್ದ ಆರೋಪಿಗಳು ಬೈಕನ್ನು ಎರ್ಮಾಳ್…
