Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಸ್ನೇಹಕೂಟ ಮಣೂರು ಇದರ ದಶಮಾನೋತ್ಸವದ ಹಿನ್ನಲೆಯಲ್ಲಿ ವಿವಿಧ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಭಾಗವಾಗಿ ಇತ್ತೀಚಿಗೆ ಸಾಲಿಗ್ರಾಮದ ತೊಡ್ಕಟ್ಟು ಹೊಸಬದುಕು ಆಶ್ರಮದಲ್ಲಿ ನಮ್ಮ ಸ್ನೇಹ ನೆರವು, ಸಾಂಸ್ಕೃತಿಕ ಕಾರ್ಯಕ್ರಮ ಸಂಪನ್ನಗೊಂಡಿತು. ಕಾರ್ಯಕ್ರಮವನ್ನು ಸ್ನೇಹಕೂಟ ಸಂಚಾಲಕಿ ಭಾರತಿ ವಿ. ಮಯ್ಯ ದೀಪ ಬೆಳಗಿಸಿ, ಉದ್ಘಾಟಿಸಿದರು. ಹೊಸಬದುಕು ಆಶ್ರಮದ ನಿವಾಸಿಗಳಿಗೆ ವಿವಿಧ ಪರಿಕರಗಳನ್ನು ಸ್ನೇಹಕೂಟದ ನಿರ್ದೇಶಕ ವಿಷ್ಣಮೂರ್ತಿ ಮಯ್ಯರು, ಆಶ್ರಮದ ಮುಖ್ಯಸ್ಥ ವಿನಯಚಂದ್ರ ಸಾಸ್ತಾನ ಅವರಿಗೆ ಹಸ್ತಾಂತರಿಸಿದರು. ಆಶ್ರಮದ ನಿವಾಸಿಗಳಿಗೆ ಹಾಗೂ ಉಪಹಾರದ ವ್ಯವಸ್ಥೆ ಕಲ್ಪಿಸಿದರು. ಮುಖ್ಯ ಅತಿಥಿಯಾಗಿ ಆಟ್೯ ಆಫ್ ಲಿವಿಂಗ್‌ನ ದಕ್ಷಿಣ ದಿವ್ಯ ಸಾಲಿಗ್ರಾಮ, ಪತ್ರಕರ್ತ ರವೀಂದ್ರ ಕೋಟ, ಆಶ್ರಮದ ನಿರ್ದೇಶಕಿ ರಾಜಶ್ರೀ ವಿನಯಚಂದ್ರ ಉಪಸ್ಥಿತರಿದ್ದರು. ಸ್ನೇಹಕೂಟದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜತೆಗೆ ಕ್ರೀಡೆ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸುಜಾತ ಬಾಯರಿ ಸ್ವಾಗತಿಸಿ, ಕಾರ್ಯಕ್ರನವನ್ನು ಸ್ನೇಹಕೂದ ಶ್ರೀದೇವಿ ಹಂದೆ ನಿರೂಪಿಸಿ, ಭಾರತಿ ಮಯ್ಯ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಗಂಗೊಳ್ಳಿ: ರೇಬಿಸ್ ರೋಗವು ಪ್ರಾಣಕ್ಕೆ ಮಾರಕವಾಗಿರುವ ಕಾಯಿಲೆಯಾಗಿರುವುದರಿಂದ ಆ ಬಗೆಗೆ ಪ್ರತಿಯೊಬ್ಬರಲ್ಲೂ ಕೂಡ ಸಂಪೂರ್ಣ ಅರಿವು ಇರಬೇಕಾದದ್ದು ಅತಿ ಅವಶ್ಯಕ ಎಂದು ಗುಜ್ಜಾಡಿ ಪಶು ಚಿಕಿತ್ಸಾಲಯದ ಆರೋಗ್ಯ ಅಧಿಕಾರಿ ಡಾ. ಅರುಣ್ ಕೆಪಿ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪಂಚಾಯತ್ ಉಡುಪಿ, ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಡುಪಿ, ಎಸ್‌ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೇಬಿಸ್ ದಿನಾಚರಣೆಯ ಅಂಗವಾಗಿ ನಡೆದ ಹುಚ್ಚು ನಾಯಿ ರೇಬಿಸ್ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಮನೆಯಲ್ಲಿನ ಸಾಕುಪ್ರಾಣಿಗಳಿಗೂ ಕೂಡ ಸಮಯಕ್ಕೆ ಸರಿಯಾಗಿ ವ್ಯಾಕ್ಸಿನೇಷನ್ ಮಾಡಿಸಬೇಕು. ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ಅಜಾಗರುಕತೆಯಿಂದ ವರ್ತಿಸಬಾರದು ಎಂದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಪ್ರತಿನಿಧಿ ಮಾನ್ಯ ಖಾರ್ವಿ , ಎಸ್‌ವಿ ಕಾಮರ್ಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ತ್ರಾಸಿ ಗ್ರಾಮ ಪಂಚಾಯತ್, ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆ ಗಂಗೊಳ್ಳಿ ಹಾಗೂ ಸಿಬ್ಬಂದಿ ವರ್ಗ, ಸ್ವಚ್ಛ ಕರಾವಳಿ ಮಿಷನ್ ಸದಸ್ಯರು, ಎಸ್.ವಿ. ಪದವಿ ಪೂರ್ವ ಕಾಲೇಜು, ಗಂಗೊಳ್ಳಿ ಎನ್.ಎಸ್.ಎಸ್. ಸ್ವಯಂಸೇವಕರು ಮತ್ತು ಖಾರ್ವಿ ಆನ್‌ಲೈನ್ ಕುಂದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸ್ವಚ್ಛತಾ ದಿನಾಚರಣೆಯ ಹಾಗೂ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಭಾಗವಾಗಿ ತ್ರಾಸಿ ಬೀಚ್‌ನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ ನಡೆಯಿತು. ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ಎಂ.ಡಿ. ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ತ್ರಾಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾ ಎಸ್. ಹಾಗೂ ಸಿಬ್ಬಂದಿ ವರ್ಗ, ಎನ್.ಎಸ್. ಎಸ್. ಯೋಜನಾಧಿಕಾರಿ ರಾಜೇಶ್ ವಕ್ವಾಡಿ ಮತ್ತು ಪೂಜಾ ಕುಂದರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಬೈಂದೂರಿನ ಸುರಭಿಯ ಹಿರಿಯ ಹಾಗೂ ಕಿರಿಯ ಕಲಾವಿದ ಕೂಡುವಿಕೆಯಲ್ಲಿ ಪ್ರಥಮ ಬಾರಿಗೆ ಯಕ್ಷಗಾನ ವೈಭವ ನಡೆಯಲಿದೆ. ಸೆ.24 ಬುಧವಾರ ಸಂಜೆ 7.30ಕ್ಕೆ ಮೈಸೂರು ರಮಾ ಗೋವಿಂದ ರಂಗಮಂದಿರದಲ್ಲಿ ಸುರಭಿ ಕಲಾವಿದರಿಂದ ಸುಧನ್ವಾರ್ಜುನ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಯಕ್ಷಗಾನವನ್ನು ಸಂಸ್ಥೆಯ ಯಕ್ಷಗುರು ಪ್ರಶಾಂತ ಮಯ್ಯ ದಾರಿಮಕ್ಕಿ ಅವರು ನಿರ್ದೇಶನ ಮಾಡಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶ್ರೀ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘದ 12ನೇ ವಾರ್ಷಿಕ ಮಹಾಸಭೆಯು ಕೋಡಿ ಕನ್ಯಾಣದ ಸರಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಇತ್ತೀಚಿಗೆ ಜರುಗಿತು. ಸಂಸ್ಥೆಯ ಅಧ್ಯಕ್ಷ ಶಂಭು ಪೂಜಾರಿ ಮಹಾಸಭೆಗೆ ಸ್ವಾಗತಿಸಿ ಮಾತನಾಡಿ, ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿ ಒಟ್ಟು 100 ಕೋಟಿಗೂ ಅಧಿಕ ವ್ಯವಹಾರ ನಡೆಸಿ, ಸುಮಾರು 16 ಲಕ್ಷಕ್ಕೂ ಅಧಿಕ ಲಾಭಗಳಿಸಿ, ಸದಸ್ಯರಿಗೆ ಶೇಕಡಾ 15 ರಷ್ಟು ಡಿವಿಡೆಂಡ್ ವಿತರಿಸಿರುವುದಕ್ಕೆ ಬಹಳಷ್ಟು ಹರ್ಷ ವ್ಯಕ್ತಪಡಿಸಿದರು. ನಂತರ ವಾರ್ಷಿಕ ಮಹಾಸಭೆಯ ಆಡಳಿತ ವರದಿಯನ್ನು ಸಂಸ್ಥೆಯ ವ್ಯವಸ್ಥಾಪಕಿ ಪ್ರತಿಮಾ ವಾಚಿಸಿದರು. ಲೆಕ್ಕಪಾರಿಶೋಧನ ವರದಿಯನ್ನು ವ್ಯವಸ್ಥಾಪಕರಾದ ಸಂದೀಪ್ ಕರ್ಕೇರ ವಾಚಿಸಿದರು. ಸಂಸ್ಥೆಯ ಮುಂದಿನ ಕಾರ್ಯ ಯೋಜನೆಯ ಬಗ್ಗೆ ವಿವರವಾಗಿ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ರಾಘವೇಂದ್ರ ಕರ್ಕೇರ ಮಂಡಿಸಿದರು. ವಾರ್ಷಿಕ ಮಹಾಸಭೆಯಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ಉಡುಪಿ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಜಯ ಬಿ. ಎಸ್ ಸಂಸ್ಥೆಯ ಗೌರವ ಸನ್ಮಾನವನ್ನು ಸ್ವೀಕರಿಸಿ, ಸಂಸ್ಥೆಯ ಬೆಳವಣಿಗೆ ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ-ಸಹಾಯಧನ ಯೋಜನೆಯಡಿ ವೆಬ್‌ಸೈಟ್ www.ksbdb.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಸು ಸಾಕಾಣಿಕೆ, ಗುಡಿ ಹಾಗೂ ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ನಡೆಸಲು ಶೇ.4 ರ ವಾರ್ಷಿಕ ಬಡ್ಡಿ ದರದಲ್ಲಿ 1 ಲಕ್ಷದವರೆಗಿನ ಘಟಕ ವೆಚ್ಚ ಹೊಂದಿರುವ ವ್ಯಾಪಾರಕ್ಕೆ 20,000 ರೂ ಸಹಾಯಧನ ಮತ್ತು 80,000 ರೂ ಉಳಿಕೆ ಸಾಲದ ಮೊತ್ತ ಹಾಗೂ 2 ಲಕ್ಷದವರೆಗಿನ ಘಟಕ ವೆಚ್ಚ ಹೊಂದಿರುವ ವ್ಯಾಪಾರಕ್ಕೆ 40,000 ರೂ ಸಹಾಯಧನ ಮತ್ತು 1,60,000 ರೂ ಉಳಿಕೆ ಸಾಲದ ಮೊತ್ತದೊಂದಿಗೆ ಆರ್ಥಿಕ ನೆರವು ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8762249230 ಅಥವಾ 8029605888 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಪ್ರಕಟಣೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಯಡ್ತರೆ ಗ್ರಾಮದ ನಿವಾಸಿ ಶೇಖರ ಪೂಜಾರಿ (70) ಅವರು ಇಲಿ ಪಾಷಾಣ ಸೇವಿಸಿ ಇತ್ತೀಚಿಗೆ ಮೃತಪಟ್ಟಿ ದ್ದಾರೆ. ಅವರು ಸೆ.20ರಂದು ಮನೆಗೆ ಕುಡಿದು ಬಂದಿದ್ದು ಮನೆಯವರೊಂದಿಗೆ ಗಲಾಟೆ ಮಾಡಿಕೊಂಡು ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದರು. ಚಿಕಿತ್ಸೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ. ಪುತ್ರ ಲೋಹಿತ್ ಪೂಜಾರಿ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಇಂದಿನ ಜಾಗತಿಕ ಯುಗದಲ್ಲಿ ವಿದ್ಯಾಭ್ಯಾಸದ ಉದ್ದೇಶ ಕೇವಲ ಉದ್ಯೋಗ ಪಡೆಯುವುದಲ್ಲ. ಸಮಾಜದಲ್ಲಿ ಬದಲಾವಣೆ ತರಲು, ಹೊಸ ಅವಕಾಶಗಳನ್ನು ಸೃಷ್ಟಿಸಲು, ಮತ್ತೊಬ್ಬರಿಗೆ ಜೀವನೋಪಾಯ ಕಲ್ಪಿಸಲು ನಾವು ಉದ್ಯೋಗದಾತರಾಗಬೇಕು ಎಂದು ಪುದುಚೇರಿಯ ಕರಾವಳಿ ರಕ್ಷಣಾ ಪಡೆಯ ಇನ್ಸ್‌ಪೆಕ್ಟರ್ ಜನರಲ್ ಸುರೇಂದ್ರ ಸಿಂಗ್ ದಾಸೀಲರು ನುಡಿದರು. ಅವರು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಉದ್ಯೋಗವನ್ನು ಮಾತ್ರ ಕನಸು ಕಾಣದೆ, ಸಮಾಜಕ್ಕೆ ಹೊಸ ಉದ್ಯೋಗಾವಕಾಶಗಳನ್ನು ನೀಡಬಲ್ಲ ನಾಯಕರಾಗಿ ರೂಪುಗೊಳ್ಳಬೇಕು. ನಾಯಕತ್ವದ ನಿಜವಾದ ಅರ್ಥವು ಸಂಕಷ್ಟದ ಸಂದರ್ಭಗಳಲ್ಲಿ ಸಹಾನುಭೂತಿಯೊಂದಿಗೆ ನಡೆದುಕೊಳ್ಳುವುದರಲ್ಲಿ ಅಡಗಿದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳು ಸದಾ ಆತ್ಮ ವಿಶ್ವಾಸದಿಂದಿರಬೇಕು. ತಮಗೆ ತಾವೇ ಪ್ರೋತ್ಸಾಹ ನೀಡುವ ಗುಣವನ್ನು ಬೆಳೆಸಿಕೊಳ್ಳಬೇಕು. ಕೀಳರಿಮೆ ಬೆಳೆಸದೆ, ತಮ್ಮ ಬೆನ್ನನ್ನು ತಾವೇ ತಟ್ಟುತ್ತಾ ಮುಂದೆ ಸಾಗುವುದು ಸಾಧನೆಯ ರಹಸ್ಯವಾಗಿದೆ. ಮಾನಸಿಕ, ದೈಹಿಕ, ಭಾವನಾತ್ಮಕ, ಸಾಮಾಜಿಕ ಹಾಗೂ ಆರ್ಥಿಕ ಆರೋಗ್ಯಗಳ ಕಡೆಗೆ ಪ್ರಾಮುಖ್ಯತೆಯನ್ನು ನೀಡಿ. ವಿದ್ಯಾರ್ಥಿ ಜೀವನವೇ ವ್ಯಕ್ತಿತ್ವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಯುವ ಮೋರ್ಚಾ ನೇತೃತ್ವದಲ್ಲಿ ಸೇವಾ ಪಾಕ್ಷಿಕದ ಅಂಗವಾಗಿ ಪ್ರಧಾನಿ ನರೇಂದ್ರ  ಮೋದಿ ಅವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಬೃಹತ್‌ ರಕ್ತದಾನ ಶಿಬಿರವು ಸೆ.27 ಶನಿವಾರರಂದು ಬೆಳಿಗ್ಗೆ 9.00 ಗಂಟೆಗೆ ಇಲ್ಲಿನ ರೋಟರಿ ಭವನದಲ್ಲಿ ನಡೆಯಲಿದೆ. ಬೈಂದೂರು ಶಾಸಕರಾದ ಗುರುರಾಜ್‌ ಗಂಟಿಹೊಳೆ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಮಂಡಲದ ಅಧ್ಯಕ್ಷರಾದ ಅನಿತಾ ಆರ್. ಕೆ. ಅವರು ಉಪಸ್ಥಿತರಿರಲಿದ್ದಾರೆ. ಬೆಳಿಗ್ಗೆ 9 ಗಂಟೆಯಿಂದ ಬೈಂದೂರು ರೋಟರಿ ಭವನದಲ್ಲಿ ರಕ್ತದಾನ ಶಿಬಿರ ಆರಂಭವಾಗಲಿದ್ದು, ಆಸಕ್ತರು ಜೀವ ಉಳಿಸುವಂತಹ ರಕ್ತದಾನದ ಮಹತ್ಕಾಯರ್ಯದಲ್ಲಿ ಭಾಗವಹಿಸಬಹುದು ಎಂದು ಯುವಮೋರ್ಚಾ ಅಧ್ಯಕ್ಷರಾದ ಗಜೇಂದ್ರ ಎಸ್. ಬೇಲೆಮನೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪ್ರ ಕನ್ನಡ ಭಾಷೆ ಅದ್ಬುತವಾದ ಭಾಷೆ. ನಮ್ಮ ಈ ಪ್ರೀತಿಯ ಭಾಷೆಗೆ ಕರುಳಿನ ಸಂಬಂಧ ಇದೆ. ಈ ಭಾಷೆಯೊಂದಿಗೆ ನಮ್ಮ ಸಂಸ್ಕೃತಿ ಉಳಿದುಕೊಂಡಿದೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು. ಅವರು ಕುಂದ ಕನ್ನಡ ಭಾಷಾಭಿವೃದ್ಧಿ ವೇದಿಕೆ ಭಂಡಾರ್‌ಕಾರ್ಸ್‌ ಕಾಲೇಜಿನ ಸಹಯೋಗದಲ್ಲಿ ಏರ್ಪಡಿಸಿದ ಕುಂದ ಕನ್ನಡ ಶಬ್ದಗಳನ್ನು ಬರೆಯುವ, ಗಾದೆಗಳನ್ನು ಹೇಳುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡುವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ವಿದ್ಯಾರ್ಥಿಗಳು ಕುಂದಾಪ್ರ ಕನ್ನಡ ಭಾಷೆಯ ವೈಶಿಷ್ಟ್ಯ ಅರಿತು ಅದನ್ನು ಬಳಸಬೇಕು. ಹೆಚ್ಚು ಬಳಸಿದಷ್ಟು ಅದು ಉಳಿದುಕೊಳ್ಳುತ್ತದೆ, ಬೆಳೆಯುತ್ತದೆ. ಉತ್ತಮವಾಗಿ ಗಾದೆಯನ್ನು ಹೇಳಿದ್ದೀರಿ. ಕುಂದ ಕನ್ನಡ ಶಬ್ದಗಳನ್ನು ಬರೆದಿದ್ದೀರಿ. ನಿಮ್ಮ ಆಸಕ್ತಿ ಇನ್ನಷ್ಟು ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿಯಾಗಲಿ ಎಂದರು. ಫ್ರೆಂಡ್ಸ್ ಸ್ವಾವಲಂಬನ ಸಂಘಟನೆಯ ಸಂಚಾಲಕ ವೆಂಕಟೇಶ ಪೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾಷೆಯೊಂದಿಗೆ ಪರಿಸರ ಉಳಿಸುವ ಕಾರ್ಯ ನಾವು ಮಾಡಬೇಕು. ಪ್ಲಾಸ್ಟಿಕ್ ಬದಲು…

Read More