ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.8: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದವರಿಗೆ ಬೆಂಗಳೂರು ದಾಸನಪುರ ಹೋಬಳಿಯ ವಡ್ಡರಹಳ್ಳಿ ಬೆಂ.ಮ.ಸಾ.ಸಂ. ತರಬೇತಿ ಕೇಂದ್ರದಲ್ಲಿ 30 ದಿನಗಳ ವಸತಿ ಸೌಲಭ್ಯದೊಂದಿಗೆ ಉಚಿತ ಲಘು ಹಾಗೂ ಭಾರಿ ವಾಹನ ಚಾಲನಾ ತರಬೇತಿ ಜೊತೆಗೆ ಚಾಲನಾ ಪರವಾನಗಿ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಲಘು ವಾಹನ ತರಬೇತಿಗೆ ಕನಿಷ್ಠ 18 ವರ್ಷ, ಭಾರಿ ವಾಹನ ತರಬೇತಿಗೆ ಕನಿಷ್ಠ 20 ವರ್ಷ ಮೇಲ್ಪಟ್ಟ ಹಾಗೂ ಲಘು ವಾಹನ ಚಾಲನಾ ಅನುಜ್ಞಾಪತ್ರ ಹೊಂದಿರುವ ಅರ್ಹ ಫಲಾನುಭವಿಗಳು ಏಪ್ರಿಲ್ 20 ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kmvstdcl.karnataka.gov.in/ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬಿ ಬ್ಲಾಕ್, ರಜತಾದ್ರಿ ಮಣಿಪಾಲ ಕಚೇರಿಯನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.8: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ – 4 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ತಂತ್ರಜ್ಞಾನ, ಆಹಾರ ಇಂಜಿನಿಯರಿಂಗ್ನಲ್ಲಿ ಡಿಪ್ಲೋಮಾ ಹಾಗೂ ಪದವಿ ಹೊಂದಿರುವ, ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ ಕುರಿತು 3 ರಿಂದ 5 ವರ್ಷಗಳ ಅನುಭವ ಹೊಂದಿರುವ ಹಾಗೂ ಆಹಾರ ಸಂಸ್ಕರಣಾ ಕೈಗಾರಿಕೆ, ಬ್ಯಾಂಕಿಂಗ್, ಡಿಪಿಆರ್ ಸಿದ್ಧಪಡಿಸುವಿಕೆ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಏಪ್ರಿಲ್ 25 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಜಿಲ್ಲಾ ಆಡಳಿತ ಕಛೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಕಛೇರಿಯನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.8: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಪಿ.ಎಲ್.ವಿ ಯೋಜನೆ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅರೆಕಾಲಿಕ ಕಾನೂನು ಸ್ವಯಂ ಸೇವಕರ (ಪ್ಯಾರಾ ಲೀಗಲ್ ವಾಲಂಟಿಯರ್) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯದ ಆವರಣ, ಉಡುಪಿ ದೂರವಾಣಿ ಸಂಖ್ಯೆ: 0820-2523355 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ, ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಎನ್‌ಟಿಎಸ್‌ಇ ಪರೀಕ್ಷೆಯಲ್ಲಿ ಉತ್ತೀರ್ಣಳಾದ ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಣಮ್ಯಳಿಗೆ ಸನ್ಮಾನ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಉಪನ್ಯಾಸಕಿ ಡಾ. ಪಾರ್ವತಿ ಜಿ. ಐತಾಳ್ ಅವರು ಸನ್ಮಾನ ಹಾಗೂ ಬಹುಮಾನ ವಿತರಣಾ ಮಾಡಿದ ಬಳಿಕ ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿ ತಮ್ಮನ್ನು ತಾವು ಪರಿಪಕ್ವಗೊಳಿಸಲು ಸಾಹಿತ್ಯ, ಕಲೆ ಹಾಗೂ ಓದಿನ ಕಡೆಗೆ ಗಮನ ಹರಿಸಿ ಸಾಧನೆಯನ್ನು ಮಾಡಬೇಕು ಎಂದು ಹೇಳಿದರು. ಶಾಲೆಯ ಮೇನೇಜಿಂಗ್ ಡೈರೆಕ್ಟರ್ ಎಮ್ ಪ್ರಭಾಕರ ಶೆಟ್ಟಿಯವರು ಮಾತನಾಡಿ ಎಲ್ಲ ವಿದ್ಯಾರ್ಥಿಗಳು ಈ ಸನ್ಮಾನ ಕಾರ‍್ಯಕ್ರಮದಿಂದ ಪ್ರೇರಿತರಾಗಿ ಇನ್ನಷ್ಟು ಪ್ರತಿಭೆಗಳು ಹೊರಬರಲು ಸ್ಫೂರ್ತಿಯಾಗಲಿ ಎಂದರು. ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ’ಆಲ್ಮೇಡಾ ಉಪಸ್ಥಿತರಿದ್ದರು. ಪ್ರೀಯಾ ಜೇಮ್ಸ್ ಸ್ವಾಗತಿಸಿದರು, ರವೀಂದ್ರ ಕಾರ್ಕಡ ಸನ್ಮಾನ ಪತ್ರ ವಾಚಿಸಿದರು, ಹಾಗೂ ದೀಕ್ಷಾ ಕೊಟ್ಯಾನ್ ಕಾರ‍್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು,ಏ.07: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದೆ. ಅದರಂತೆ 22-04-2022 ರಿಂದ 18-05-2022ರವರೆಗೆ ಪರೀಕ್ಷೆ ನಡೆಯಲಿದೆ. ಪಿಯುಸಿ ಪರೀಕ್ಷೆಗೆ ಇಲಾಖೆ ಸಂಪೂರ್ಣ ತಯಾರಿ ನಡೆಸುತ್ತಿದೆ. ಜೆಇಇ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿರುವ ಹಿನ್ನೆಲೆ ಈ ಮೊದಲು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿತ್ತು. ಇದರ ಬೆನ್ನಲ್ಲೇ ಕೆಲವು ತಾಂತ್ರಿಕ ಸಮಸ್ಯೆಗಳ ಹಿನ್ನೆಲೆ ಎರಡನೇ ಬಾರಿಗೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿ ಈ ಕೆಳಗಿನಂತಿದೆ:22/04/2022 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ23/04/2022 ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ25/04/2022 ಅರ್ಥಶಾಸ್ತ್ರ26/04/2022 ಹಿಂದೂಸ್ತಾನಿ ಸಂಗೀತ, ಮನ:ಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ27/04/2022 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್28/04/2022 ಕನ್ನಡ, ಅರೇಬಿಕ್04/05/2022 ಭೂಗೋಳ ಶಾಸ್ತ್ರ, ಜೀವಶಾಸ್ತ್ರ05/05/2022 ಮಾಹಿತಿ ತಂತ್ರಜ್ಞಾನ, ರೀಟೈಲ್, ಅಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್06/05/2022 ಇಂಗ್ಲಿಷ್10/05/2022 ಇತಿಹಾಸ, ಭೌತಶಾಸ್ತ್ರ12/05/2022 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ14/05/2022 ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ17/05/2022 ಐಚ್ಛಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ, ಏ 07: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡಿಗೆ ಪ್ರವಾಸಕ್ಕಾಗಿ ಬಂದಿದ್ದ ವಿದ್ಯಾರ್ಥಿಗಳ ಪೈಕಿ ಮೂವರು ನೀರುಪಾಲಾದ ಘಟನೆ ಗುರುವಾರ ನಡೆದಿದೆ. ನೀರುಪಾಲಾದ ವಿದ್ಯಾರ್ಥಿಗಳ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮುಳುಗಡೆಯಾದ ಮತ್ತೋರ್ವ ವಿದ್ಯಾರ್ಥಿಗಾಗಿ ಶೋಧ ಮುಂದುವರಿದಿದೆ. ಮೃತರನ್ನು ಅಲೆನ್ ರೇಜಿ (22), ಅಮಲ್ ಸಿ ಅನಿಲ್ (22) ಎಂದು ಗುರುತಿಸಲಾಗಿದ್ದು, ಅಂಟೋನಿ ಶೆಣೈ (21) ಗಾಗಿ ಶೋಧ ಮುಂದುವರಿದಿದೆ. ಸೈಂಟ್ ಮೇರಿಸ್ ದ್ವೀಪ ಪ್ರದೇಶದ ಅಪಾಯಕಾರಿ ಸಮುದ್ರ ಭಾಗದಲ್ಲಿ ವಿದ್ಯಾರ್ಥಿಗಳು ನೀರಿಗಿಳಿದಿದ್ದು, ಈ ವೇಳೆ ಆಕಸ್ಮಿಕವಾಗಿ ಮುಳುಗಡೆಯಾಗಿದ್ದಾರೆಂದು ತಿಳಿದುಬಂದಿದೆ. ಕೇರಳದ ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮಲ್ಪೆ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಕ್ಕೆ ಬಂದಿದ್ದರು. ಈ ತಂಡದಲ್ಲಿ 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು, ಎ.11: ಪುರಾತನ ಪ್ರಸಿದ್ಧ ಬಿಜೂರು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ಎ.14 ರಿಂದ 16ರ ವರೆಗೆ ಶ್ರೀ ನಂದಿಕೇಶ್ವರ ಮತ್ತು ಪರಿವಾರ ದೈವಗಳ ವಾರ್ಷಿಕೋತ್ಸವ ಮತ್ತು ಭಜನಾ ಕಾರ್ಯಕ್ರಮದ ನಡೆಯಲಿದೆ. ಎ.14ರಂದು ಶ್ರೀ ನಂದಿಕೇಶ್ವರ ಪರಿವಾರ ದೈವಗಳ ಹಾಗೂ ನಾಗದೇವರ ವಾರ್ಷಿಕ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಎ.15ರಂದು ಬೆಳಗ್ಗೆ 9.05ಕ್ಕೆ ಏಕಾಹ ಅಖಂಡ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡು ಏ.16ರಂದು ಪ್ರದೀಪ ವಿಸರ್ಜನೆಯೊಂದಿಗೆ ಭಜನಾ ಮಂಗಲೋತ್ಸವ ನಡೆಯಲಿದೆ. ಎ.15ರಿಂದ ಎ.16ರ ವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ 5ಗಂಟೆಗೆ ಗೆಂಡ ಸೇವೆ ಹಾಗೂ ರಾತ್ರಿ ಗಂಟೆ 9.30ಕ್ಕೆ ಶ್ರೀ ವೀರಭದ್ರಸ್ವಾಮಿ ದಶಾವತಾರ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹಿರಿಯಡ್ಕ ಇವರಿಂದ ಹಿರಿಯಡ್ಕ ಕ್ಷೇತ್ರ ಮಹಾತ್ಮೆ ಯಕ್ಷಗಾನ ನಡೆಯಲಿರುವುದು. ಮೂರು ದಿನಗಳ ಕಾಲ ಅನ್ನಸಂತರ್ಪಣೆ ಸೇವೆ ನಡೆಯಲಿದೆ ಶ್ರೀ ನಂದಿಕೇಶ್ವರ ದೈವಸ್ಥಾನ ಸಮಿತಿ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ:► ಮೂರ್ಗೋಳಿಹಕ್ಲು ಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮದುವೆಯ ನೆನಪನ್ನು ಶಾಶ್ವಾತವಾಗಿಸಿಸಲು ನೂರಾರು ಕಸರತ್ತು ನಡೆಸುವುದನ್ನು ನೋಡಿದ್ದೇವೆ. ಸಮುದ್ರ ಆಳದಲ್ಲಿ, ವಿಮಾನದಲ್ಲಿ ವಿವಾಹ ಆಗಿದ್ದು ಇದೆ. ಹಾಗೇ ಮಂಡ್ಯದ ಈ ಜೋಡಿ ಕುಂದಾಪುರ ಎಂ. ಕೋಡಿ ಸಮುದ್ರ ತೀರದಲ್ಲಿ ಸಪ್ತಪತಿ ತುಳಿದು ಗಮನ ಸೆಳೆದಿದ್ದಾರೆ. ಕುಂದಾಪುರದ ಎಂ.ಕೋಡಿ ಸಮೀಪ ಬೆಳಗ್ಗೆ ಸಮುದ್ರ ತೀರದಲ್ಲಿ ವಿವಾಹ ಮಂಟಪ ನಿರ್ಮಿಸಿ ವಿವಾಹವಾಗಿದ್ದಾರೆ. ಲಿಂಗಾಯಿತ ಸಮಾಜದ ಹುಡುಗಿ ಹುಡುಗ ಬ್ರಾಹ್ಮಣ ಸಂಪ್ರದಾಯ ಪುರೋಹಿತರ ಪೌರೋಹಿತ್ಯದಲ್ಲಿ ಮದುವೆ ಆಗಿದ್ದು, ಕಟ್ಕೇರಿ ಶಿವಾನಂದ ಐತಾಳ್ ಸೂತ್ರ ಧಾರಣೆ ಮಾಡಿಸಿದರು. ವಧು ವರರ ಕುಟುಂಬಿಕರು ಈ ಅಪರೂಪದ ಮದುವೆಗೆ ಸಾಕ್ಷಿಯಾದರು. ಬಳಿಕ ಕುಂಭಾಶಿ ದೇವಸ್ಥಾನದಲ್ಲಿ ಪ್ರಸಾದ ಭೋಜನ ಸೇವಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.7: ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಒಟ್ಟು 17 ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, ಕನ್ನಡ ಭಾಷೆ ಓದಲು, ಬರೆಯಲು ತಿಳಿದಿರುವ ಹಾಗೂ ಲಘು ವಾಹನ ಚಾಲನಾ ಲೈಸನ್ಸ್ ಹೊಂದಿರುವ ಅರ್ಹ ಅಭ್ಯರ್ಥಿಗಳು ಮೇ 5 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಮೇ 7 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ https://districts.ecourts.gov.in/udupi-onlinerecruitment ಅಥವಾ ಜಿಲ್ಲಾ ನ್ಯಾಯಾಧೀಶರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.6: ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ರಸ್ತೆ ಬ್ಲ್ಯಾಕ್‌ಸ್ಪಾಟ್‌ನಲ್ಲಿ ಸಂಬಂಧಪಟ್ಟ ಹೆದ್ದಾರಿ ಇಲಾಖೆಗಳ ಅಧಿಕಾರಿಗಳು 15 ದಿನಗಳಲ್ಲಿ ತೆರವುಗೊಳಿಸಬೇಕು. 15 ದಿನದ ನಂತರ ಆ ಪ್ರದೇಶದಲ್ಲಿ ಅಪಘಾತ ಸಂಭವಿಸಿ ಜೀವಹಾನಿಯಾದಲ್ಲಿ ರಸ್ತೆಯನ್ನು ನಿರ್ಮಿಸಿ, ನಿರ್ವಹಿಸುತ್ತಿರುವ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಚ್ಚರಿಕೆ ನೀಡಿದ್ದಾರೆ. ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಎ ರಲ್ಲಿ ಒಟ್ಟು 33 ಅಪಘಾತ ಸಂಭವಿಸುವ ಬ್ಲ್ಯಾಕ್‌ಸ್ಪಾಟ್‌ಗಳನ್ನು ಗುರುತಿಸಿದ್ದು, ಈ ಪ್ರದೇಶದಲ್ಲಿ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚಿಸಿದ್ದು, ಇದುವರೆಗೆ ಅಗತ್ಯ ಕ್ರಮ ಕೈಗೊಳ್ಳದ ರಾಷ್ಟ್ರೀಯ ಹೆದ್ದಾರಿ ಇಲಾಖೆಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಇನ್ನು 15 ದಿನದಲ್ಲಿ ಈ ಎಲ್ಲಾ ಪ್ರದೇಶಗಳಲ್ಲಿ ಅಗತ್ಯ ದುರಸ್ಥಿ ಕಾರ್ಯ ಕೈಗೊಂಡು…
