ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜೂ.09: ಕುಂದಾಪುರ ಕಡೆಯಿಂದ ಭಟ್ಕಳಕ್ಕೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂಪರ ಸಂಘಟನೆಗಳು ನೀಡಿದ ಮಾಹಿತಿ ಆದರಿಸಿ ಬೆನ್ನತ್ತಿದ ಬೈಂದೂರು ಪೊಲೀಸರು ಒತ್ತಿನಣೆ ಬಳಿ ತಡೆಹಿಡಿದು, ಎರಡು ಕ್ವಿಂಟಲಿಗೂ ಅಧಿಕ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕ ಕರ್ಕುಂಜೆಯ ಮಹಮ್ಮದ್ ಅಲ್ತಾಫ್ (37) ಹಾಗೂ ಕಾರಿನಲ್ಲಿದ್ದ ಮೂವರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ನೊಂದಣಿ ಹೊಂದಿರುವ ಚೆವರ್ಲೆಟ್ ಬಾಡಿಗೆ ಕಾರಿನಲ್ಲಿ ಗೋಮಾಂಸ ಸಾಗಾಟ ಮಾಡಲಾಗಿದ್ದು, ಇದೇ ಕಾರಿನಲ್ಲಿ ಮುಸ್ಲಿಂ ಮಹಿಳೆಯರು ಕೂಡ ಪ್ರಯಾಣಿಸುತ್ತಿದ್ದರು. ಕಾರಿನ ಡಿಕ್ಕಿಯಲ್ಲಿ ಎರಡು ಕ್ವಿಂಟಲಿಗೂ ಅಧಿಕ ಪ್ರಮಾಣದ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಯಾರಿಗೂ ಸಂಶಯ ಬರಬಾರದು ಎಂಬ ಕಾರಣಕ್ಕೆ ಮೂವರು ಮುಸ್ಲಿಂ ಮಹಿಳೆಯರನ್ನು ಇದೇ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು ಎನ್ನಲಾಗುತ್ತಿದ್ದು, ಅವರನ್ನೂ ವಶಕ್ಕೆ ಪಡೆಯಲಾಗಿದೆ. ಸದ್ಯ ಅವರನ್ನು ಮಹಿಳಾ ನಿಲಯಕ್ಕೆ ಕಳುಹಿಸಲಾಗಿದ್ದು, ಬೆಳಿಗ್ಗೆ ವಿಚಾರಣೆಯ ನಡೆಸಿ, ನ್ಯಾಯಾಲಕ್ಕೆ ಹಾಜರುಪಡಿಸಲಾಗುತ್ತದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ದಿನದಿಂದ ಪ್ರಕೃತಿ ಕಲುಷಿತವಾಗುತ್ತಿದೆ. ಪ್ಲಾಸ್ಟಿಕ್ ಅತಿಯಾದ ಪ್ಲಾಸ್ಟಿಕ್ ಬಳಕೆಯು ಇದಕ್ಕೆ ಪ್ರಮುಖ ಕಾರಣವಾಗಿದೆ. ಪರಿಸರ ದಿನಾಚರಣೆ ಹೆಸರಿನಲ್ಲಿ ಗಿಡಗಳನ್ನು ನೆಡುವುದಷ್ಟೇ ಅಲ್ಲದೇ ಅವುಗಳನ್ನು ಪೋಷಿಸುವ ಕಾರ್ಯವನ್ನು, ಪ್ಲಾಸ್ಟಿಕ್ ಹಾಗೂ ಪರಿಸರಕ್ಕೆ ಹಾನಿಯಾಗುವ ವಸ್ತುಗಳನ್ನು ಮಿತವಾಗಿ ಬಳಸುವ ಕಾರ್ಯವನ್ನು ಮಾಡಬೇಕಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಹೇಳಿದರು. ಅವರು ಅರಣ್ಯ ಇಲಾಖೆ ಕೊಲ್ಲೂರು ಹಾಗೂ ಸಿದ್ಧಾಪುರ ವನ್ಯಜೀವಿ ವಲಯ ಹಾಗೂ ಪರಿಸರ ಅಭಿವೃದ್ಧಿ ಸಮಿತಿ ಜಂಟಿ ಆಶ್ರಯದೊಂದಿಗೆ ಮಂಗಳವಾರ ಕೊಲ್ಲೂರು ಸೌಪರ್ಣಿಕ ಸಸ್ಯಕ್ಷೇತ್ರದಲ್ಲಿ ಹಮ್ಮಿಕೊಂಡ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಕೊಲ್ಲೂರು ಗ್ರಾಪಂ ಅಧ್ಯಕ್ಷರಾದ ಶಿವರಾಮ ಕೃಷ್ಣ ಭಟ್ಟ ಗಿಡ ನೆಡುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪ್ರಕಾಶ್ ಪೂಜಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವನ್ಯಜೀವಿ ಉಪ ವಿಭಾಗ ಸಿದ್ದಾಪುರ, ರಮೇಶ್ ಗಾಣಿಗ, ಉದ್ಯಮಿಗಳು, ಕೊಲ್ಲೂರು, ರಾಜು ನಾಯ್ಕ, ವಲಯ ಅರಣ್ಯಾಧಿಕಾರಿ, ಕೊಲ್ಲೂರು ವನ್ಯಜೀವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.09: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಯಲದ ಎ.ಡಿ.ಐ.ಪಿ ಯೋಜನೆಯಡಿ ಬೆಂಗಳೂರು ಅಲಿಮ್ಕೋ ಎ.ಸಿ.ಸಿ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ವ್ಯಾಪ್ತಿಯ ವಿಕಲಚೇತನರಿಗೆ ದೈನಂದಿನ ಚಟುವಟಿಕೆಗಳಿಗೆ ಪೂರಕವಾದ ಸಾಧನ ಸಲಕರಣೆಯನ್ನು ವಿತರಿಸಲು ಜೂನ್ 13 ರಿಂದ 23 ರ ವರೆಗೆ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಜೂ. 13 ರಂದು ಕಾಪುವಿನ ಜೆ.ಸಿ ಭವನ, ಜೂ. 14 ರಂದು ಅಜ್ಜರಕಾಡು ಜಿಲ್ಲಾ ಆಸ್ಪತ್ರೆ, ಜೂ. 15 ರಂದು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ, ಜೂ. 16 ರಂದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರ, ಜೂ. 17 ರಂದು ಕುಂದಾಪುರದ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ, ಜೂ. 18 ರಂದು ವಂಡ್ಸೆ ಸಮುದಾಯ ಆರೋಗ್ಯ ಕೇಂದ್ರ, ಜೂ. 20 ರಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.08: ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಮೇ 30 ರಿಂದ ಜೂನ್ 1 ರ ವರೆಗೆ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯಲ್ಲಿ ಉಡುಪಿ ಜಿಲ್ಲೆಯಿಂದ ಒಟ್ಟು 76 ನೌಕರರು ಭಾಗವಹಿಸಿ, 14 ಚಿನ್ನ, 8 ಬೆಳ್ಳಿ ಹಾಗೂ 8 ಕಂಚಿನೊಂದಿಗೆ ಸಮಗ್ರ ತಂಡ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿಜೇತ ಕ್ರೀಡಾಪಟುಗಳ ವಿವರ:ನ್ಯಾಯಾಂಗ ಇಲಾಖೆಯ ವಾಣಿ-ಈಜು ಸ್ಪರ್ದೆಯಲ್ಲಿ 3 ಚಿನ್ನ, ಮಂಜುಳಾ-2 ಕಂಚು, ಲಿನಿ ಅವರಿಗೆ ಉದ್ದ ಜಿಗಿತದಲ್ಲಿ 1 ಕಂಚು. ವಾಣಿಜ್ಯ ತೆರಿಗೆ ಇಲಾಖೆಯ ಸಾರಿಕಾ- ಈಜು ಸ್ಪರ್ದೆಯಲ್ಲಿ 3 ಚಿನ್ನ, ಶ್ರೀಕಾಂತ್ – ಭಾರ ಎತ್ತುವ ಸ್ಪರ್ದೆಯಲ್ಲಿ 1 ಬೆಳ್ಳಿ. ಶಿಕ್ಷಣ ಇಲಾಖೆಯ ವಿಜಯ ಲಕ್ಷ್ಮೀ ಕಾರ್ಕಳ- ಈಜು ಸ್ಪರ್ದೆಯಲ್ಲಿ 1 ಚಿನ್ನ, 2 ಬೆಳ್ಳಿ, ಮಂಜುನಾಥ್ ಐತಾಳ್ – ಈಜು ಸ್ಪರ್ದೆಯಲ್ಲಿ 2 ಕಂಚು, ಗಣೇಶ್ ಶೆಟ್ಟಿ- ಉದ್ದ ಜಿಗಿತದಲ್ಲಿ 1 ಕಂಚು, ಗೀತಾ-…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ರೂಪಿಸಿದ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ಪೂರೈಸಲು ಸರಕಾರ ಉದ್ದೇಶಿಸಿದೆ. ಮುಂದಿನ ವರ್ಷಗಳಲ್ಲಿ ಸರಕಾರ ಕುಡಿಯುವ ನೀರಿನ ಯೋಜನೆಗಳಿಗೆ ಅನುದಾನ ಕಡಿತಗೊಳಿಸುವ ಸಾಧ್ಯತೆ ಇರುವುದರಿಂದ ಮತ್ತು ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಗ್ರಾಮ ಪಂಚಾಯತ್ಗಳಿಗೆ ಕುಡಿಯುವ ನೀರು ಪೂರೈಕೆ ಸವಾಲಾಗಲಿದೆ. ಹೀಗಾಗಿ ಈ ಸಮಸ್ಯೆಯಿಂದ ಪಾರಾಗಲು ಪ್ರತಿಯೊಬ್ಬರು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕವನ್ನು ಪಡೆದುಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಬೈಂದೂರು ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜ್ಕುಮಾರ್ ಹೇಳಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಬುಧವಾರ ನಡೆದ ನೀರು ಮತ್ತು ನೈರ್ಮಲ್ಯ ಸಮಿತಿ ವಿಶೇಷ ಗ್ರಾಮ ಸಭೆಯಲ್ಲಿ ಅವರು ಮಾಹಿತಿ ನೀಡಿ ಮಾತನಾಡಿದರು. ಜಲಜೀವನ ಮಿಷನ್ ಯೋಜನೆಯಲ್ಲಿ ಕೇಂದ್ರ ಸರಕಾರ ಶೇ. 42.5, ರಾಜ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ರಿ. ಬೈಂದೂರು ವಲಯದ ಶಿರೂರು ಬಿ ಕಾರ್ಯಕ್ಷೇತ್ರದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ ಗುರುವಾರ ಜರುಗಿತು. ಯೋಜನೆಯ ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕರು ಶಿವರಾಯ ಪ್ರಭು ಅವರು ಪರಿಸರ ಜಾಗೃತಿ ಕುರಿತು ಮಾಹಿತಿ ನೀಡಿ ಗಿಡ ವಿತರಣೆ ಮಾಡಿದರು. ಸಾಂಕೇತಿಕವಾಗಿ ಗಿಡ ನೆಡಲಾಯಿತು. ಕಾರ್ಯಕ್ರಮದಲ್ಲಿ ಬೈಂದೂರು ತಾಲೂಕಿನ ಯೋಜನಾಧಿಕಾರಿಗಳಾದ ವಿನಾಯಕ ಪೈ ಬೈಂದೂರು ತಾಲೂಕಿನ ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷರಾದ ರಘುರಾಮ ಕೆ. ಪೂಜಾರಿ, ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ಕೃಷ್ಣ ಪೂಜಾರಿ, ಜನಜಾಗೃತಿ ಸದಸ್ಯರಾದ ವಾಸು ಮೇಸ್ತ, ಶಿರೂರು ಬಿ ಒಕ್ಕೂಟದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಹಾಗೂ ವಲಯದ ಮೇಲ್ವಿಚಾರಕರಾದ ರಾಮಚಂದ್ರ ಎಸ್., ಕೃಷಿ ಅಧಿಕಾರಿಗಳಾದ ಮಂಜುನಾಥ ಗೌಡ ಮತ್ತು ರಾಜು ಹಾಗೂ ಸೇವಾಪ್ರತಿನಿಧಿಗಳು, ಪದಾಧಿಕಾರಿಗಳು, ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.07: ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮೇಳವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡಿ, 60 ವರ್ಷ ಮೇಲ್ಪಟ್ಟವರಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವವರನ್ನು ಗುರುತಿಸಿ, ಪ್ರತಿ ಬುಧವಾರ ನಡೆಯುವ ಲಸಿಕಾ ಮೇಳಕ್ಕೆ ಕಳುಹಿಸಬೇಕು. ಆಸ್ಪತ್ರೆಗೆ ಬರಲು ಸಾಧ್ಯವಾಗದ ಹಾಗೂ ಹಾಸಿಗೆ ಹಿಡಿದಿರುವ 60 ವರ್ಷ ಮೇಲ್ಪಟ್ಟವರಿದ್ದಲ್ಲಿ ಅವರಿಗೆ ಮೊಬೈಲ್ ಲಸಿಕಾ ಶಿಬಿರ ವ್ಯವಸ್ಥೆ ಮಾಡಿ, ಲಸಿಕೆ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳ ಕಛೇರಿ ಪ್ರಟಣೆ ತಿಳಿಸಿದೆ. ಪಂಚಾಯತ್ ವ್ಯಾಪ್ತಿಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮ ಕಾರ್ಯಪಡೆ ಸದಸ್ಯರ ಸಮಿತಿ ಸಭೆ ನಡೆಸಿ, 60 ವರ್ಷ ಮೇಲ್ಪಟ್ಟವರಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವವರನ್ನು ಗುರುತಿಸಿ, ಲಸಿಕೆ ನೀಡಬೇಕು. ಅಗತ್ಯವಿದ್ದಲ್ಲಿ ಪಂಚಾಯತ್ನಲ್ಲಿಯೇ ಬುಧವಾರ ಲಸಿಕಾ ಮೇಳ ಶಿಬಿರವನ್ನು ಆಯೋಜಿಸಬೇಕು ಅಥವಾ ಪಂಚಾಯತ್ ಕಾರ್ಯಪಡೆ ಸದಸ್ಯರು, ಆಶಾ ಕಾರ್ಯಕರ್ತೆಯರು ಮತ್ತು ಸಮುದಾಯದ ಮುಖಂಡರುಗಳ ಮೂಲಕ ಮನವೊಲಿಸಿ, ಲಸಿಕೆ ನೀಡಬೇಕು. ನಗರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿದ್ಯಾದಾನವೆಂಬುದು ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವ ಪ್ರಕ್ರಿಯೆ. ಹಾಗಾಗಿ ಅದೊಂದು ಜವಾಬ್ದಾರಿಯುತ ಕೆಲಸವಾಗಿದೆ. ರಾಮಕೃಷ್ಣ ಕುಟೀರದ ಮೂಲಕ ಅದನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ ಎಂದು ಉದ್ಯಮಿ ಸದಾನಂದ ಪ್ರಭು ಹೇಳಿದರು. ಅವರು ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ವಿವಿಧ ಪದವಿ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಿಸಿ ಮಾತನಾಡಿ ವಿದ್ಯಾರ್ಥಿಗಳು ಇಂದು ಪಡೆದ ಸಹಾಯದಿಂದ ಉತ್ತಮ ಪದವಿ ಗಳಿಸಿ ಮತ್ತಷ್ಟು ಜನರಿಗೆ ಸಹಕಾರ ಮಾಡುವಂತಾದರೆ ವಿದ್ಯಾನಿಧಿ ಯೋಜನೆ ಸಾರ್ಥಕ್ಯ ಪಡೆದುಕೊಳ್ಳುತ್ತದೆ ಎಂದರು. ಈ ವೇಳೆ ಪ್ರಶಾಂತ್ ಶೆಣೈ ಉಪಸ್ಥಿತರಿದ್ದರು. ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಸ್ವಾಗತಿಸಿ, ಜ್ಯೋತಿ ಎಚ್. ಎಸ್. ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಲ್ಲಿನ ಸೆಂಟ್ ಥೋಮಸ್ ಶಾಲೆಯಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಫಾದರ್ ಜೈಶನ್ ನೆಲಿವಿಲ್ಲಾ ಮಾತನಾಡಿ ಪ್ರಕೃತಿಯ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮನುಷ್ಯ ತನ್ನ ಅನುಕೂಲಕ್ಕೆ ತಕ್ಕಂತೆ ಪ್ರಕೃತಿಯನ್ನು ಬಳಸಿಕೊಂಡು ಅದನ್ನು ವಿಕೃತಿಗೊಳಿಸುತ್ತಿದ್ದಾನೆ. ವಿದ್ಯಾರ್ಥಿಗಳು ಪರಿಸರದ ರಕ್ಷಣೆಯಲ್ಲಿ ಪಾಲುದಾರಾಗಬೇಕು ಎಂದು ತಿಳಿಸಿದರು. ವಿದ್ಯಾರ್ಥಿನಿ ಮರಿಯಾ ರೆಬೆರೋ ಪರಿಸರದ ದಿನಾಚರಣೆಯ ಕುರಿತು ಮಾಹಿತಿಯನ್ನು ನೀಡಿದಳು. ಸಂಸ್ಥೆಯ ವಿದ್ಯಾರ್ಥಿಗಳು ಪರಿಸರದ ರಕ್ಷಣೆಯ ಕುರಿತು ಕಿರು ಪ್ರಹಸನವನ್ನು ಪ್ರಸ್ತುತ ಪಡಿಸಿದರು.ಈ ಸಂದರ್ಭದಲ್ಲಿ ಪಿಯು ಪ್ರಾಂಶುಪಾಲರಾದ ರೂಬೆಲ್ ಐರಾವೆಲಿ & ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಹತ್ತನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಅಂಕಿತಾ ಸ್ವಾಗತಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕೆ ಜನ್ಮಾಷ್ಠಮಿ ಹಾಗೂ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಕೊಲ್ಲೂರು ಗ್ರಾಮ ಪಂಚಾಯತ್, ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿ. ಎಸ್ಎಲ್ಆರ್ ಎಂ ಘಟಕದ ಸಿಬ್ಬಂದಿಗಳು ಹಾಗೂ ಪರಿಸರದ ಪ್ರೇಮಿಗಳು ಕೊಲ್ಲೂರಿನ ಪರಿಸರವನ್ನು ಎರಡು ತಂಡಗಳಾಗಿ ಸ್ವಚ್ಛಗೊಳಿಸಿದರು.
