Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸ್ಥಾಯಿ ಸಮಿತಿಯಿಂದ ಬೆಂಗಳೂರಿನಲ್ಲಿ ಸಭೆ ನಡೆಯಿತು. ಸಮಿತಿಯ ಸದಸ್ಯರಾದ ಶಿವಮೊಗ್ಗ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಭಾಗವಹಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದೂರವಾಣಿ ಸಂಪರ್ಕ, ಅಂಗನವಾಡಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸುವ ಬಗ್ಗೆ ಹಾಗೂ ಕಾಲುಸಂಕಗಳ ನಿರ್ಮಾಣ ಮಾಡುವ ಬಗ್ಗೆ ಚರ್ಚಿಸಿ ಕೂಡಲೇ ಈ ವಿಷಯಗಳ ಬಗ್ಗೆ ಗಮನಹರಿಸಿ ಸೂಕ್ತ ಪರಿಹಾರವನ್ನು ನೀಡುವ ಬಗ್ಗೆ ವಿನಂತಿಸಿದರು. ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ಇಲಾಖೆಗಳ ಮುಖ್ಯಸ್ಥರು, ರಾಜ್ಯ ಲೀಡ್ ಬ್ಯಾಂಕಿನ ಮುಖ್ಯಸ್ಥರಾದ ಕೆನರಾ ಬ್ಯಾಂಕು, ಯೂನಿಯನ್ ಬ್ಯಾಂಕ್ ಮುಖ್ಯಸ್ಥರು ಹಾಗೂ ಇತರ ಅಧಿಕಾರಿಗಳೊಂದಿಗೆ ವಿವಿಧ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಟಾನದ ಬಗ್ಗೆ ಸಹ ಚರ್ಚಿಸಲಾಯಿತು. ಹಾಗೂ ರಾಜ್ಯದ ವಿವಿಧ ಕೈಗಾರಿಕೋಧ್ಯಮದವರೊಂದಿಗೆ ಸಿ.ಎಸ್.ಆರ್. ಫಂಡ್ ಅನ್ನು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬಳಸುವ ಬಗ್ಗೆ ಸಹ ಚರ್ಚಿಸಲಾಯಿತು. ಸಭೆಯಲ್ಲಿ ಸಮಿತಿಯ ಅಧ್ಯಕ್ಷರಾದ ಪ್ರತಾಪ್ ರಾವ್ ಜಾಧವ್, ಸಮಿತಿಯ ಇತರ ಸಂಸತ್ ಸದಸ್ಯರು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯು ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಪದವಿಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ. ಪೂಜಾರಿ ಜಿಲ್ಲೆಗೆ ಚತುರ್ಥ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಯಾಗಿರುತ್ತಾಳೆ ಹಾಗೂ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಸಮಗ್ರ ಪ್ರಶಸ್ತಿಯನ್ನು ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಚದುರಂಗ ಒಂದು ರೀತಿಯಲ್ಲಿ ಸಾಧಕರ ಸೊತ್ತು. ಈ ಅಟದಲ್ಲಿ ಜಯಿಸಲು ನಮ್ಮ ಬುದ್ದಿಮತ್ತೆ, ಏಕಾಗೃತೆ ಮತ್ತು ಯೋಚನೆಗಳು ಸಾಕಾಗುತ್ತದೆ ವಿನಹಃ ದೈಹಿಕ ಸದೃಢತೆ, ಹೆಚ್ಚು ಶಿಕ್ಷಣದ ಅವಶ್ಯಕತೆ ಇರುವುದಿಲ್ಲ. ಪ್ರತೀ ಹಂತದಲ್ಲಿ ಚಾಣಾಕ್ಯತೆ ನಡೆಯನ್ನು ಅನುಸರಿಸಿದರೆ ಮಾತ್ರ ಜಯಗಳಿಸಬಹುದು ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಹೇಳಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಚದುರಂಗ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಕುತೂಹಲ ಮತ್ತು ಆವಿಷ್ಕಾರ ಮಾಡುವ ಗುಣವಿದ್ದರೆ ಪಠ್ಯ ಚಟುವಟಿಕೆಯೊಂದಿಗೆ ಹೊಸ ಹೊಸ ಯೋಜನೆಗಳನ್ನು ಅಳವಡಿಸಿಕೊಂಡು ಪ್ರಾಯೋಗಿಕ ಅನುಭವವನ್ನು ಪಡೆದುಕೊಳ್ಳಲು ಸಾಧ್ಯವಿದೆ. ಅದಕ್ಕೆ ಅವರಿಗೆ ಬುದ್ಧಿಬಲ, ಮನೋಬಲ ಬೇಕು. ಇಂತಹ ಸ್ಪರ್ಧಾ ಕಾರ್ಯಕ್ರಮಗಳಿಂದ ನಮ್ಮ ಸಂಸ್ಕೃತಿ, ಭಾಷೆ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಯು. ಬಿ. ಶೆಟ್ಟಿ ಅಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಶನಿವಾರ ವಲಯ ಮಟ್ಟದ ಪ್ರೌಢಶಾಲಾ ಬಾಲಕರ ಪುಟ್‌ಬಾಲ್ ಪಂದ್ಯಾಟ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಮಾತನಾಡಿ ನಮ್ಮ ಮೆದುಳಿನ ಜ್ಞಾನ ಪುಸ್ತಕದಿಂದ ತೆರೆದಾಗ ಶರೀರದ ಸಾಮರ್ಥ್ಯ ಪೂರ್ಣ ಪ್ರಮಾಣದಲ್ಲಿ ಕ್ರೀಡೆಯಿಂದ ಅನಾವರಣವಾಗುತ್ತದೆ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ವ್ಯಕ್ತಿಯ ಮೆದುಳಿನ ಅಂಗದ ಅರಿವಾಗುತ್ತದೆ ಜೊತೆಗೆ ವಿಶೇಷ ಜ್ಞಾನ ಪ್ರಾಪ್ತಿಯಾಗುತ್ತದೆ ಇದು ವೈಜ್ಞಾನಿಕವಾಗಿಯೂ ಧೃಡಪಟ್ಟಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಮೊಬೈಲ್ ಹಾಗೂ ಟಿವಿ ಮಾಧ್ಯಮದಿಂದ ವಿದ್ಯಾರ್ಥಿಗಳಲ್ಲಿ ಕ್ರೀಡೆ ಬಗ್ಗೆ ಆಸಕ್ತಿ ಕ್ಷೀಣಿಸುತ್ತಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ಅನೇಕ ಕ್ರೀಡೆಗಳು ನಶಿಸಿ ಹೋಗುವ ಸಾಧ್ಯತೆ ಇದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಸಂಯೋಜಕ ಸುಬ್ರಹ್ಮಣ್ಯ ಜೋಶಿ ಮಾತನಾಡಿ, ಮನಸ್ಸು ಮತ್ತು ದೇಹ ಸಮತೋಲನದಲ್ಲಿಡುವ ಶಕ್ತಿ ಇರುವುದು ಕ್ರೀಡಾ ಚಟುವಟಿಕೆಗಳಿಗೆ ಮಾತ್ರ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾಜಿ ಪ್ರಧಾನಮಂತ್ರಿಗಳಾದ ದಿ. ರಾಜೀವ್ ಗಾಂಧಿಯವರ ಜನ್ಮದಿನದ ಪ್ರಯುಕ್ತ ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಶನಿವಾರ ಬೈಂದೂರು ಸರಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಿಸಲಾಯಿತು. ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ, ಯುವ ಮುಖಂಡರುಗಳಾದ ಉದಯ ಪೂಜಾರಿ, ಗುರುಪ್ರಸಾದ್ ದೇವಾಡಿಗ, ಗಣೇಶ ನಾವುಂದ, ರಾಮ ಕೆರ್ಗಾಲು,ವಸಂತ, ಸಂತೋಷ ಹೊಸ್ಕೋಟೆ,ಕೀರ್ತನ್ ಉಪ್ಪುಂದ, ದಯಾನಂದ, ಮಂಜುನಾಥ, ಪ್ರಮೋದ ಪೂಜಾರಿ ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಳಜಿತ್ ಶ್ರೀ ರಾಮಕೃಷ್ಣ ಕುಟೀರದಲ್ಲಿ ಶ್ರೀ ಕೃಷ್ಣಾಷ್ಟಮಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೆಳಿಗ್ಗೆ ಕುಟೀರದ ವಿದ್ಯಾರ್ಥಿಗಳಿಂದ ಸಂಪೂರ್ಣ ಭಗವದ್ಗೀತಾ ಪಠಣ. ಸಂಜೆ ಭಜನೆ ಹಾಗೂ ವಿಷ್ಣು ಸಹಸ್ರನಾಮ ಪಠನ ಜರುಗಿತು. ಶ್ರೀ ಕೃಷ್ಣನಿಗೆ ಪ್ರಿಯವಾದ ತುಳಸಿ ದಳ ಅರ್ಪಣೆ ಮಾಡಿದರು ಬಳಿಕ ಪ್ರಸಾದ ವಿತರಿಸಲಾಯಿತು. ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳ ನಡೆದವು. ಜಿಲ್ಲಾ ಭಗವದ್ಗೀತಾ ಅಭಿಯಾನದ ಸಂಚಾಲಕ ಬಿ. ರಾಮಕೃಷ್ಣ ಶೇರುಗಾರ್ ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ನಿ. ಬೈಂದೂರು ಇದರ 2021-22ನೇ ಸಾಲಿನ ವಾರ್ಷಿಕ ಮಹಾಸಭೆ ಶುಕ್ರವಾರ ಸಹಕಾರಿಯ ಕಛೇರಿ ಆವರಣದಲ್ಲಿ ನಡೆಯಿತು. ಸಹಕಾರಿ ಅಧ್ಯಕ್ಷ ಕೆ. ವೆಂಕಟೇಶ ಕಿಣಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಸ್ಥೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಉತ್ತಮ ಸಾಧನೆ ಮಾಡಿದೆ. ಆರ್ಥಿಕ ವರ್ಷದಲ್ಲಿ ರೂ. 5.34 ಕೋಟಿ ಠೇವಣಿ ಸಂಗ್ರಹಿಸಿ, ರೂ. 3.23 ಕೋಟಿ ಸಾಲ ನೀಡಿದೆ. ರೂ. 5.54 ಕೋಟಿಗೂ ಅಧಿಕ ದುಡಿಯುವ ಬಂಡವಾಳ ಹೊಂದಿದ್ದು, ರೂ. 47 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿದೆ. ಈ ವರ್ಷದಲ್ಲಿ ರೂ. 9.20 ಲಕ್ಷ ಲಾಭಾಂಶ ಗಳಿಸಿದ್ದು, ಸದಸ್ಯರಿಗೆ ಶೇ. 10% ಡಿವಿಡೆಂಡ್ ಘೋಷಿಸಲಾಗಿದೆ. ಉತ್ತಮ ಸೇವೆ ನೀಡುವ ಮೂಲಕ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆಯುತ್ತಿರುವುದು ಸದಸ್ಯರ ಪ್ರೋತ್ಸಾಹದಿಂದ ಸಾಧ್ಯವಾಗಿದೆ.  ಎಂದರು. ಉಪಾಧ್ಯಕ್ಷ ಗೋಪಾಲಕೃಷ್ಣ ಕೆ, ನಿರ್ದೇಶಕರಾದ ಭೀಮೇಶ ಕುಮಾರ್ ಎಸ್. ಜಿ, ಪ್ರಸಾದ ಪ್ರಭು, ಯು. ಪ್ರಕಾಶ ಭಟ್ ಉಪ್ಪುಂದ, ರಾಜೇಶ ಪೈ, ಬಾಲಕೃಷ್ಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಲತಾ ಪೂಜಾರಿ ಅವರಿಗೆ ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಪಿ.ಎಚ್.ಡಿ ಪದವಿ ದೊರೆತಿದೆ. ಲತಾ ಪೂಜಾರಿ ಅವರು ಮಂಡಿಸಿದ “ಅನಾಲಿಸಿಸ್ ಆಫ್ ಕ್ರೆಡಿಟ್ ಆಪರೇಷನ್ ಇನ್ ಕಮರ್ಷಿಯಲ್ ಬ್ಯಾಂಕ್” ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರೆತಿದ್ದು, ಡಾ. ಎ. ಎಸ್. ಶಿರಾಳ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದರು. ಯಲ್ಲಾಪುರ ಹಾಗೂ ಧಾರವಾಡದಲ್ಲಿ ಶಿಕ್ಷಣವನ್ನು ಪೂರೈಸಿ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಐದು ವರ್ಷಗಳಿಂದ ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ಲತಾ ಪೂಜಾರಿ ಅವರು, ಶಿರೂರು ಮೂಲದ ನಾರಾಯಣ ಮಾಚ ಪೂಜಾರಿ ಹಾಗೂ ಕಮಲ ಪೂಜಾರಿ ಅವರ ಪುತ್ರಿಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಉಡುಪಿಯ ಅದ್ಭುತಗಳನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ.ಉಡುಪಿ ಜಿಲ್ಲೆಯ ನಾಲ್ಕು ಸ್ಥಳಗಳು ಈಗಾಗಲೇ ಕರ್ನಾಟಕದ ನೂರು ಅದ್ಭುತಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಈ ನಾಲ್ಕು ಸ್ಥಳಗಳಿಗೆ ವೋಟ್ ಮಾಡುವ ಮೂಲಕ ನೀವು ಇವುಗಳನ್ನು ರಾಜ್ಯದ ಅದ್ಭುತವನ್ನಾಗಿ ಮಾಡಬಹುದಾಗಿದೆ. ಉಡುಪಿಯ ನಾಮ ನಿರ್ದೇಶನಗಳು : ಒಂದು ಬದಿ ಸೌಪರ್ಣಿಕಾ ನದಿ, ಇನ್ನೊಂದೆಡೆ ಭೋರ್ಗರೆಯುವ ಸಮುದ್ರ, ಇದರ ನಡುವೆ ಹೆದ್ದಾರಿ. ರಸ್ತೆಯಲ್ಲಿ ಪ್ರಯಾಣಿಸುವಾಗ ಎರಡೂ ಬದಿ ಕಣ್ಣಿಗೆ ಹಬ್ಬವನ್ನುಂಟುಮಾಡುವ ಜಾಗ ಮರವಂತೆ ಕಡಲ ತೀರ.ಕರ್ನಾಟಕದ ಏಕೈಕ ಶಿಲಾಸ್ತಂಭಗಳ ದ್ವೀಪ, ಮಡಗಾಂಸ್ಕರ್ ಬಿಟ್ಟರೆ ವಿಶ್ವದಲ್ಲಿ ಎರಡನೇ ಪ್ರಕೃತಿ ನಿರ್ಮಿತ ಅದ್ಭುತ ದ್ವೀಪ ಸೈಂಟ್ ಮೆರೀಸ್.40ಅಡಿ ಪೀಠದ ಮೇಲೆ ನಿಂತಿರುವ 32 ಅಡಿ ಎತ್ತರದ ಮಧ್ವಾಚಾರ್ಯರ ಏಕಶಿಲೆಯ ಪ್ರತಿಮೆ ಉಡುಪಿಯ ಮತ್ತೊಂದು ಆಕರ್ಷಣೆ.ಕ್ರೈಸ್ತರು ಮಾತ್ರವಲ್ಲ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.17: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಮಾತನಾಡಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಹಿಂದಿನ ಸಾಲಿನಲ್ಲಿ ರೂ 256 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸಿ, ರೂ. 1.05 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 13 ಡಿವಿಡೆಂಡ್ ನೀಡಲು ಉದ್ದೇಶಿಸಲಾಗಿದೆ. ಸಂಘವು ಹಿಂದಿನ ಸಾಲಿನಲ್ಲಿ ರೂ 47.32 ಕೋಟಿ ಠೇವಣಿ ಹೊಂದಿ, ಸದಸ್ಯರಿಗೆ ರೂ. 40.09 ಕೋಟಿ ಸಾಲ ನೀಡಿದೆ. ಅದರಲ್ಲಿ ರೂ. 10.08 ಕೋಟಿ ಮೊತ್ತದ ಕೃಷಿ ಸಾಲವನ್ನು ಸಂಘವು ನೀಡಿದೆ ಎಂದರು. ಕೃಷಿ ಹಾಗೂ ಹೈನುಗಾರಿಕೆಗೆ ಸಾಲ ನೀಡಿ ಪ್ರೋತ್ಸಾಹ ನೀಡುತ್ತಾ ಬರಲಾಗುತ್ತಿದೆ. ಸಂಸ್ಥೆಯ ನಿರಂತರವಾಗಿ ಪ್ರಗತಿಯ ಪಥದಲ್ಲಿದ್ದು ಸದಸ್ಯರಿಗೂ ಬಡ್ಡಿಯಲ್ಲಿ ಕಡಿತ, ವಿವಿಧ ಮಾಹಿತಿ ಕಾರ್ಯಕ್ರಮಗಳು, ವಿದ್ಯಾಭ್ಯಾಸದಲ್ಲಿ ಸಾಧನೆಗೈದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಸೇರಿದಂತೆ…

Read More