ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ (62ವರ್ಷ) ಅವರು ಅಸೌಖ್ಯದಿಂದ ಮಂಗಳವಾರ (ಎ.07) ನಿಧನರಾದರು. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದ್ದ ಗಣೇಶ್ ಅವರು ದಿಢೀರ್ ಕುಸಿದು ಬಿದ್ದಿದ್ದರು. ನಂತರ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅವರನ್ನು ಪರೀಕ್ಷಿಸಿದ ವೈದ್ಯರು ಮೆದುಳು ರಕ್ತಸ್ರಾವದಿಂದ ಕೊನೆಯುಸಿರೆಳೆದಿರುವುದಾಗಿ ತಿಳಿಸಿದ್ದರು. ಗಣೇಶ್ ಗಂಗೊಳ್ಳಿ ಅವರು ಕಳೆದ 32 ವರ್ಷಗಳಿಂದ ಜಾನಪದ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆಕಾಶವಾಣಿ ಕಲಾವಿದರಾಗಿ, ಸುಗಮ ಸಂಗೀತ ಗಾಯಕರಾಗಿ ಗುರುತಿಸಿಕೊಂಡಿದ್ದ ಇವರಿಗೆ ಡಾಕ್ಟರೇಟ್, ಖಿದ್ಮಾ ಸೇವಾರತ್ನ ರಾಜ್ಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಗಂಗೊಳ್ಳಿ ಸಮೀಪದ ಬಾವಿಕಟ್ಟೆ ನಿವಾಸಿಯಾಗಿರುವ ಗಣೇಶ್ ಅವರು ಕಷ್ಟಪಟ್ಟು ಗಾಯಕನಾಗಿ, ಜನಪ್ರಿಯತೆ ಗಳಿಸಿದ್ದರು. ಆಕಾಶವಾಣಿ ಸೇರಿದಂತೆ ಕಳೆದ ಮೂರು ದಶಕಗಳಲ್ಲಿ ನೂರಾರು ವೇದಿಕೆ, ಸಂಘ-ಸಂಸ್ಥೆಗಳಲ್ಲಿ ತಮ್ಮ ಸುಗಮ ಸಂಗೀತದ ಸುಧೆಯನ್ನು ಹರಿಸಿದ್ದರು. ಗಣೇಶ್ ಗಂಗೊಳ್ಳಿ ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಸನ್ ಹಾಲ್ ಮುಂಭಾಗದಲ್ಲಿ ಸಂಭವಿಸಿದೆ. ಕೋಟೇಶ್ವರ ಗಾಂಧಿ ನಗರದ ನಿವಾಸಿ, ದಿವಂಗತ ಉಂಘಕ ಅವರ ಹತ್ತಿ ಅಲಿಮಾಬಿ (62) ಮೃತಪಟ್ಟ ದುರ್ದೈವಿ. ಘಟನೆಯ ವಿವರ:ಸೋಮವಾರ ರಾತ್ರಿ ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವೆನ್ಸನ್ ಸೆಂಟರ್ನಲ್ಲಿ ಆಯೋಜಿಸಲಾಗಿದ್ದ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಅಲಿಮಾಬಿ ಪಾಲ್ಗೊಂಡಿದ್ದರು. ಸಮಾರಂಭ ಮುಗಿಸಿ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಮನೆಗೆ ಮರಳಲು ಇತರ ಮೂವರು ಮಹಿಳೆಯರೊಂದಿಗೆ ರಸ್ತೆ ದಾಟುತ್ತಿದ್ದರು. ಈ ಸಂದರ್ಭದಲ್ಲಿ ಮಂಗಳೂರಿನಿಂದ ಬಾದಾಮಿ-ಐಹೊಳೆ ಕಡೆಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್, ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದು ಮಹಿಳೆಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ತಲೆ ಹಾಗೂ ದೇಹಕ್ಕೆ ಗಂಭೀರ ಗಾಯಗಳಾಗಿದ್ದು, ಅಲಿಮಾಬಿ ಅವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರದ ಸರ್ಕಾರಿ ಅಸ್ಪತ್ರೆಗೆ ರವಾನಿಸಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಅಧ್ಯಯನ ಮಾಡಲು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಲು, ಕಳೆದ ಸಾಲಿನ 5ನೇ ತರಗತಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 5ನೇ ತರಗತಿಯಲ್ಲಿ ಶೇ. 60 ರಷ್ಟು ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಪೋಷಕರ ವರಮಾನ ವಾರ್ಷಿಕ 2 ಲಕ್ಷ ರೂ. ಮೀರಿರದ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮೇ.4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಘಟಕ ಆಶ್ರಯದಲ್ಲಿ ’ವೃತ್ತಿ ಯೋಜನೆ’ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪೋಲೀಸ್ ಉಪನಿರೀಕ್ಷಕ (ಸಿವಿಲ್) ಅಧಿಕಾರಿಯಾದ ಆಶ್ರೀತಾ ಎ. ಶೆಟ್ಟಿ ಕಾರ್ಯಕ್ರಮವನ್ನುದ್ದೇಶಿಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಉದ್ಯೋಗವನ್ನು ಸರಿಯಾಗಿ ಆಯ್ಕೆ ಮಾಡಿಕೊಂಡು ಅದಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಸಹಾಯ ಮಾಡುವ ಸ್ಪರ್ಧಾತ್ಮಕ ಪರೀಕ್ಷೆಗಳು ಉದ್ಯೋಗವಕಾಶದ ಕುರಿತು ಮಾತನಾಡುತ್ತಾ ಕಾಲೇಜುಗಳಲ್ಲಿ ನಡೆಸುವ ಇಂತಹ ಕಾರ್ಯಕ್ರಮ ವಿದ್ಯಾರ್ಥಿಗಳ ವೃತ್ತಿ ಯೋಜನಾ ಮುಂದಾಳತ್ವ ಬೆಳೆಸುವುದಲ್ಲದೇ ಆತ್ಮವಿಶ್ವಾಸ ಮತ್ತು ಉತ್ತಮ ನಿರ್ಧಾರಗಳನ್ನು ಕಾಲೇಜು ದಿನಗಳಲ್ಲಿಯೇ ತೆಗೆದುಕೊಂಡಾಗ ಮಾತ್ರ ಭವಿಷ್ಯದ ಯಶಸ್ಸಿಗೆ ಒಂದು ನೆಲೆ ಸಿಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಶೆಟ್ಟಿ, ವಿದ್ಯಾರ್ಥಿಕ್ಷೇಮಪಾಲನ ಅಧಿಕಾರಿ ಸೂರಜ್ ಕುಮಾರ್ ಶೆಟ್ಟಿ, ಆಡಳಿತಾಧಿಕಾರಿ ಮೋಹನ ಕೆ. ಎನ್. ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕರಾದ ಡಾ. ವಿಶ್ವನಾಥ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಸದಸ್ಯರಾದ ಕಾರ್ಯಕ್ರಮದ ಸಂಯೋಜಕರಾದ ಕುಮಾರ ಪಿ. ಸ್ವಾಗತಿದರು. ವಿದ್ಯಾರ್ಥಿನಿ ಸಂಜನಾ ಧನ್ಯವಾದಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದದ ಮೀನುಗಾರರ ಸಹಕಾರ ಸಂಘಕ್ಕೆ ಉದ್ಯೋಗಿಗಳೇ ವಂಚಿಸಿರುವ ಘಟನೆ ನಡೆದಿದೆ. ಉಪ್ಪುಂದದಲ್ಲಿರುವ ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ನಾವುಂದ ನಿವಾಸಿ ಸುಭಾಶ್ಚಂದ್ರ ಪೂಜಾರಿ (39) ಮತ್ತು ಪ್ರಧಾನ ವ್ಯವಸ್ಥಾಪಕರಾಗಿದ್ದ ಮರವಂತೆ ನಿವಾಸಿ ದೀಪಕ್ ಕುಮಾರ್ (35) ಅವರು ಸೇರಿಕೊಂಡು ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು 2023-2024ನೇ ಸಾಲಿನಲ್ಲಿ ಒಟ್ಟು 80,91,996/- ಮೊತ್ತದ ಹಣವನ್ನು ತಮ್ಮ ಸ್ವಂತಕ್ಕೆ ದುರುಪಯೋಗಪಡಿಸಿಕೊಂಡು ಸಂಘಕ್ಕೆ ಮೋಸ ಮಾಡಿ ವಂಚಿಸಿರುವುದು 2023- 2024 ರ ಸಾಲಿನ ಲೆಕ್ಕ ಪರಿಶೋಧನಾವರದಿಯಲ್ಲಿ ಸಂಘದ ಗಮನಕ್ಕೆ ಬಂದಿರುವುದಾಗಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ಈ ಬಗ್ಗೆ ಮಾನ್ಯ ನ್ಯಾಯಾಲಯದ ಆದೇಶದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಇಡೀ ಮನೆ ಸುಟ್ಟು ಕರಕಲಾದ ಘಟನೆ ಶನಿವಾರ ತಡರಾತ್ರಿ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸಮೀಪದ ಹಂದಕುಂದ ಎಂಬಲ್ಲಿ ನಡೆದಿದೆ. ಹಂದಕುಂದ ಅರೆಕಲ್ಲು ಮನೆಯ ಗಣಪು ಶೆಡ್ತಿ ಎಂಬವರು ತನ್ನ ಮೊಮ್ಮಗನೊಂದಿಗೆ ಮನೆಯ ಹತ್ತಿರದ ಭಜನಾ ಕಾರ್ಯಕ್ರಮಕ್ಕಾಗಿ ಮನೆಗೆ ಬೀಗ ಹಾಕಿ ತೆರಳಿದ್ದರು. ರಾತ್ರಿ 12 ಗಂಟೆ ನಂತರ ಮನೆಯಲ್ಲಿನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ನಸುಕಿನ ವೇಳೆ 2 ಗಂಟೆಯ ಸುಮಾರಿಗೆ ಮನೆಯ ಹತ್ತಿರದ ದಾರಿಯಲ್ಲಿ ಹೋಗುತ್ತಿದ್ದವ ವ್ಯಕ್ತಿಯೊಬ್ಬರು ಇದನ್ನು ಗಮನಿಸಿ, ಎಲ್ಲರಿಗೂ ಮಾಹಿತಿ ನೀಡಿದ್ದಾರೆ. ಆದರೆ ಅದಾಗಲೇ ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ವ್ಯಾಪ್ತಿದ್ದು, ಮನೆಯ ಮಾಡು, ಗೋಡೆಗಳಿಗೆ ಹಾನಿಯಾಗಿದೆ. ಮನೆ ಒಳಗಿದ್ದ ಚಿನ್ನಾಭರಣ, ನಗದು, ಟಿವಿ, ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳು, ಬಟ್ಟೆ, ಬರೆ, ಪಾತ್ರೆಗಳೆಲ್ಲವೂ ಸುಟ್ಟು ಕರಕರಲಾಗಿದೆ. ಇದರಿಂದ ಸುಮಾರು 5 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಬಳಿಕ ಕುಂದಾಪುರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್ನಲ್ಲಿ “ಆಳ್ವಾಸ್ ಇಂಟಿಗ್ರೇಟೆಡ್ ಕ್ಲಿನಿಕಲ್ ಡಯಾಗ್ನಾಸ್ಟಿಕ್ಸ್ ಲ್ಯಾಬೋರೇಟರಿ” ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಆಲೈಡ್ ಹೆಲ್ತ್ ಸೈನ್ಸ್ಸ್ನ ಡೀನ್ ಡಾ. ಜಯಪ್ರಕಾಶ್ ಶೆಟ್ಟಿ ಕೆ. ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ಕೇಂದ್ರ ಪ್ರಯೋಗಾಲಯ ಮತ್ತು ರೇಡಿಯಾಲಜಿ ವಿಭಾಗಗಳು ಅತ್ಯಂತ ಪ್ರಮುಖ ಸ್ಥಾನವನ್ನು ಹೊಂದಿವೆ. ರಾಷ್ಟ್ರೀಯ ವೈದ್ಯಕೀಯ ಆಯೋಗ ಹಾಗೂ ಭಾರತೀಯ ವೈದ್ಯಕೀಯ ಮಂಡಳಿಯ ಪರಿಶೀಲನೆಗಳಲ್ಲಿ ಈ ಎರಡು ವಿಭಾಗಗಳು ಪ್ರಮುಖವಾಗಿ ಗಮನ ಸೆಳೆಯುತ್ತವೆ. ಯಾವುದೇ ವೈದ್ಯಕೀಯ ಸಂಸ್ಥೆಯ ಮೂಲಸೌಕರ್ಯ ಮತ್ತು ಗುಣಮಟ್ಟದ ಮೌಲ್ಯಮಾಪನದಲ್ಲಿ ಈ ವಿಭಾಗಗಳನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದರು. ಕೇಂದ್ರ ಪ್ರಯೋಗಾಲಯದ ಸ್ಥಾಪನೆ, ಕೇವಲ ಸೌಲಭ್ಯವಲ್ಲ, ಅದು ಒಂದು ಸಂಸ್ಥೆಯ ಶೈಕ್ಷಣಿಕ ಹಾಗೂ ವೈದ್ಯಕೀಯ ಗುಣಮಟ್ಟದ ಪ್ರತಿಬಿಂಬವಾಗಿದೆ. ಇಂತಹ ಪ್ರಯೋಗಾಲಯಗಳು ವಿದ್ಯಾರ್ಥಿಗಳ ಪ್ರಾಯೋಗಿಕ ಕಲಿಕೆಗೆ ಸಹಕಾರಿಯಾಗುವುದರ ಜೊತೆಗೆ, ರೋಗಿಗಳಿಗೆ ನಿಖರ ಮತ್ತು ವೇಗವಾದ ನಿರ್ಧಾರಾತ್ಮಕ ಸೇವೆಯನ್ನು ಒದಗಿಸುತ್ತದೆ ಎಂದರು. ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ಸ್ ಆ್ಯಂಡ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ “ಐಕ್ಯಂ 2025–26” ವಾರ್ಷಿಕ ಕ್ರೀಡೋತ್ಸವವನ್ನು ಸಂಭ್ರಮದಿಂದ ಆಯೋಜಿಸಲಾಯಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ದೈಹಿಕ ಸದೃಢತೆ, ಶಿಸ್ತು ಮತ್ತು ಕ್ರೀಡಾಮನೋಭಾವದ ಮಹತ್ವವನ್ನು ಎತ್ತಿ ತೋರಿಸಿತು. ಕಾರ್ಯಕ್ರಮವು ವಿದ್ಯಾರ್ಥಿಗಳ ಭವ್ಯವಾದ ಪಥ ಸಂಚಲನನೊಂದಿಗೆ ಪ್ರಾರಂಭವಾಯಿತು, ಇದು ಏಕತೆ ಮತ್ತು ಸಮನ್ವಯವನ್ನು ಪ್ರತಿಬಿಂಬಿಸಿತು. ತೃತೀಯ ಬಿಸಿಎ ವಿದ್ಯಾರ್ಥಿಗಳಾದ ಪ್ರವೀಶ್, ಹರ್ಷ, ದೀಕ್ಷಿತಾ, ವೈಭವಿ ಹಾಗೂ ದ್ವಿತೀಯ ಬಿಬಿಎ ವಿದ್ಯಾರ್ಥಿ ಅಬ್ದುಲ್ ಮಲ್ಲಿಕ್ ಕ್ರೀಡಾ ಜ್ಯೋತಿಯನ್ನು ಹೊತ್ತು ಮುಖ್ಯ ಅತಿಥಿಗಳಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಆರಂಭಿಸಲಾಯಿತು. ಮುಖ್ಯ ಅತಿಥಿ ಜೀವನ್ ಕುಮಾರ್ ಶೆಟ್ಟಿ ಅವರು ಸಭೆಯನ್ನು ಉದ್ದೇಶಿಸಿ, ದೈಹಿಕ ಶಕ್ತಿಯ ಮಹತ್ವವನ್ನು, ವಿಶೇಷವಾಗಿ ಪೊಲೀಸ್ ಮತ್ತು ರಕ್ಷಣೆಯಂತಹ ಸರ್ಕಾರಿ ಸೇವೆಗಳಿಗೆ ಸೇರಲು ಬಯಸುವ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು. ಇಂತಹ ವೃತ್ತಿಜೀವನದಲ್ಲಿ ಶೈಕ್ಷಣಿಕ ಅಂಕಗಳಿಗಿಂತ ದೈಹಿಕ ಸದೃಢತೆ ಹೆಚ್ಚು ನಿರ್ಣಾಯಕವಾಗಿದೆ, ಆದ್ದರಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಪ್ರೋತ್ಸಾಹಿಸಿದರು. ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ಭವಿಷ್ಯದಲ್ಲಿ ಯಶಸ್ಸು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಮಲ್ಪೆ ಬೀಚ್ ಹಾಗೂ ತ್ರಾಸಿ ಮರವಂತೆ ಬೀಚ್ಗಳಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿಯೋಜಿಸಲು ಉದ್ದೇಶಿಸಿದ್ದು, ಜಿಲ್ಲೆಯಲ್ಲಿ ಜೀವರಕ್ಷಕ ತರಬೇತಿ ಹೊಂದಿರುವ ಸಿಬ್ಬಂದಿಗಳಿಂದ ಸದರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 14,958 ವೇತನದೊಂದಿಗೆ ಪಿ.ಎಫ್ ಹಾಗೂ ಇ.ಎಸ್.ಐ ಸೌಕರ್ಯ ಕಲ್ಪಿಸಲಾಗುವುದು. ಬೀಚ್ ಜೀವರಕ್ಷಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವ ಕನಿಷ್ಟ 18 ರಿಂದ 40 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಕಛೇರಿ, ಪ್ರವಾಸೋದ್ಯಮ ಇಲಾಖೆ, ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್, ಎರಡನೇ ಮಹಡಿ, ಕೊಠಡಿ ಸಂಖ್ಯೆ: 303, ಮಣಿಪಾಲ ದೂರವಾಣಿ ಸಂಖ್ಯೆ: 0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕಳೆದುಕೊಂಡ ಮೊಬೈಲ್ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಮಾಡಲಾದ ವಾರೀಸುದಾರರಿಗೆ ಹಸ್ತಾಂತರಿಸುವ ಕಾರ್ಯಕ್ರಮ ಸೋಮವಾರ ಜರಗಿತು. ಮೊಬೈಲ್ ಕಳೆದುಕೊಂಡು ಸಿಇಐಆರ್ ಪೋರ್ಟಲ್ ಮೂಲಕ ದೂರು ದಾಖಲಿಸಿದ್ದ ಮೊಬೈಲ್ಗಳ ಪೈಕಿ ಕಳೆದ ಒಂದು ವಾರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿದ್ದು, ಆ ಮೊಬೈಲ್ಗಳನ್ನು ಜಿಲ್ಲೆಯ ಎಲ್ಲಾ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಮೂಲ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಹೀಗೆ ಜಿಲ್ಲೆಯಲ್ಲಿ ಒಟ್ಟು 241 ಮೊಬೈಲ್ಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.
