ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಸಮುದ್ಯತಾ ಗ್ರೂಪ್ಸ್ ಕೋಟ ಇವರ ಸಹಯೋಗದೊಂದಿಗೆ ಕೋಟ ಗ್ರಾಮಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಕೋಟ ಇವರ ಸಂಯೋಜನೆಯೊಂದಿಗೆ 294ನೇ ಭಾನುವಾರದ ಸ್ವಚ್ಛತಾ ಕಾರ್ಯಕ್ರಮ ಮಣೂರು ಹಾಗೂ ಹರ್ತಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ತ್ಯಾಜ್ಯ ತೆರವು ಮಾಡುವ ಮೂಲಕ ಹಮ್ಮಿಕೊಂಡಿತು. ಅಭಿಯಾನಕ್ಕೆ ನಿವೃತ್ತ ಬಿಎಸ್‌ಎನ್‌ಎಲ್ ಅಧಿಕಾರಿ ಮಣೂರು ವಿಷ್ಣುಮೂರ್ತಿ ಮಯ್ಯ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೆದ್ದಾರಿ ಒಂದುವರೆ ಕಿಲೋಮೀಟರ್ ಒಂದು ಭಾಗ ಬಾರಿ ಪ್ರಮಾಣದಲ್ಲಿ ತ್ಯಾಜ್ಯವನ್ನು ತೆರವುಗೊಳಿಸಲಾಯಿತು. ಇದೇ ವೇಳೆ ಮಾತನಾಡಿದ ವಿಷ್ಣುಮೂರ್ತಿ ಮಯ್ಯ ರಾಷ್ಟ್ರೀಯ ಹೆದ್ದಾರಿ ತ್ಯಾಜ್ಯ ಎಸೆಯುವವರಿಗೆ ಕಠಿಣ ಕ್ರಮವನ್ನು ಸ್ಥಳೀಯಾಡಳಿತಗಳು ಕೈಗೊಳ್ಳಬೇಕು,ಪ್ರ ತಿ ಬಾರಿ ಪಂಚವರ್ಣದಂತಹ ಸಂಘಟನೆಗಳು ಸ್ವಚ್ಛಗೊಳಿಸಿದರೂ ಪುನಃ ಮಲಿಗೊಳಿಸುವ ಕಾರ್ಯ ನಡೆಯುತ್ತಿದೆ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಸಲಹೆ ನೀಡಿ ಸಂಬಂಧಿಸಿದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಘಟಿಕೋತ್ಸವವು ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಘಟಿಕೋತ್ಸವದ ಪ್ರಮಾಣ ಪತ್ರವನ್ನು ಬಿಡುಗಡೆಗೊಳಿಸಿದ ಮುಖ್ಯ ಅತಿಥಿ ಡಾ. ಚಿನ್ಮಯಿ ಪುತ್ರನ್ ಎಮ್.ಬಿ.ಬಿ.ಎಸ್ ಅವರು ಮಾತನಾಡಿ, ಹೆತ್ತವರು ತಮ್ಮ ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ಶ್ರಮಿಸುವುದರಿಂದ ಮಕ್ಕಳ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ ಎಂದು ತಿಳಿ ಹೇಳಿದರು. ವೇದಿಕೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ ಅವರು ಉಪಸ್ಥಿತರಿದ್ದರು. ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜ ಸ್ವಾಗತಿಸಿ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಆಡಿಗ ವಂದನಾರ್ಪಣೆ ಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ, ಮಾ.16: ಕಟಪಾಡಿ ಬಳಿ ಮಂಗಳೂರು ಉಡುಪಿ ಮಾರ್ಗದಲ್ಲಿ ಇಂದು ಹಿಂದುಸ್ಥಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮಧ್ಯ ರಸ್ತೆಯಲ್ಲಿ ಬಿದ್ದಿದ್ದು ಪರಿಣಾಮವಾಗಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶಿಸಿರುತ್ತಾರೆ. ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದು ರಾತ್ರಿ 8 ಗಂಟೆಯವರೆಗೆ ಈ ಕೆಳಕಂಡ ರಸ್ತೆಯಲ್ಲಿ ಸಂಚರಿಸುವಂತೆ ತಿಳಿಸಿದ್ದಾರೆ. ಮಂಗಳೂರಿನಿಂದ ಉಡುಪಿಗೆ ಹೋಗುವ ವಾಹನಗಳು ಕಾಪುವಿನಿಂದ ಶಿರ್ವಾ ಮೂಡುಬೆಳ್ಳೆ ಮಣಿಪುರ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ಹೋಗಬೇಕು ಅಥವಾ ಪಡುಬಿದ್ರೆ – ಬೆಳ್ಳಣ್ – ಶಿರ್ವಾ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ತಲುಪಬೇಕು. ಉಡುಪಿಯಿಂದ ಮಂಗಳೂರಿಗೆ ಹೋಗುವ ವಾಹನಗಳು ಮಣಿಪಾಲದಿಂದ ಮಣಿಪುರ – ಮೂಡುಬೆಳ್ಳೆ- ಶಿರ್ವಾ ಮಾರ್ಗವಾಗಿ ಕಾಪು ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ತೆರಳಬೇಕು ಅಥವಾ ಮಣಿಪಾಲದಿಂದ ಶಿರ್ವಾ – ಬೆಳ್ಳಣ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ, ಮಾ.16: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾಗಿ ಹೆದ್ದಾರಿಗೆ ಅಡ್ಡಲಾಗಿ ಮಗುಚಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ಸಮೀಪ ಸೋಮವಾರ ಸಂಭವಿಸಿದೆ. ಅಪಘಾತದ ಪರಿಣಾಮ ಟ್ಯಾಂಕರ್‌ನಿಂದ ಅನಿಲ ಸೋರಿಕೆ ಸಂಭವಿಸಬಹುದೆಂಬ ಭೀತಿಯಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ಹಿನ್ನೆಲೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ ಹೆದ್ದಾರಿಯಲ್ಲಿ ವಾಹನಗಳು ದೀರ್ಘ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿತು. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕಾರ್ಯಾಚರಣೆ ನಡೆಸಿದರು. ಇದೇ ವೇಳೆ ಕಾಪು ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಭದ್ರತಾ ಕ್ರಮಗಳನ್ನು ಕೈಗೊಂಡು ವಾಹನ ಸಂಚಾರವನ್ನು ನಿಯಂತ್ರಿಸಿದರು. ಅಪಘಾತದ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಆಯೋಜಿಸಲಾದ ಐದನೇ ಆವೃತ್ತಿಯ ‘ವಿ-ಗ್ರೋ ಬ್ಯುಸಿನೆಸ್ ಡೇ’ ಕಾರ್ಯಕ್ರಮದ ಮೊದಲನೇ ಹಂತದ ವ್ಯವಹಾರ ಯೋಜನೆಗಳ ಪ್ರಸ್ತುತಿ ಕಾರ್ಯಕ್ರಮ ವಿದ್ಯಾರ್ಥಿಗಳಿಂದ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಭಟ್ಕಳದ ದಿ ನ್ಯೂ ಇಂಗ್ಲೀಷ್ ಪಿ.ಯು. ಕಾಲೇಜಿನ ಪ್ರಾಂಶುಪಾಲರಾದ ಡಾ. ವೀರೇಂದ್ರ ವಿ. ಶ್ಯಾನುಭೋಗ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಆಧುನಿಕ ವಿದ್ಯುನ್ಮಾನ ಯುಗದ ಕೃತಕ ಬುದ್ಧಿಮತ್ತೆಯ ಈ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಅವಕಾಶಗಳು ಕಡಿಮೆಯಾಗಿದೆ ಎಂದು ಕೈಚಲ್ಲಿ ಕುಳಿತುಕೊಳ್ಳಬೇಕಾದ ಅಗತ್ಯವಿಲ್ಲ. ವರ್ತಮಾನದ ಅವಸರಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಸೃಜನಾತ್ಮಕ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯ. ಹೊಸ ಆಲೋಚನೆಗಳು, ನಾವಿನ್ಯತೆ ಹಾಗೂ ಕೌಶಲಾಭಿವೃದ್ಧಿ ವಿದ್ಯಾರ್ಥಿಗಳ ಭವಿಷ್ಯದ ಬೆಳವಣಿಗೆಗೆ ಪೂರಕ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿರುವ ವ್ಯವಹಾರ ಜ್ಞಾನವನ್ನು ಹೊಸ ಆಲೋಚನೆಗಳು ಮತ್ತು ಯೋಜನೆಗಳ ಮೂಲಕ ಪ್ರಸ್ತುತಪಡಿಸುವುದರಿಂದ ಅವರ ಕೌಶಲಾಭಿವೃದ್ಧಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಮಲು ಪದಾರ್ಥಗಳ ವ್ಯಸನವು ಸಾಮಾನ್ಯ ಸಾಮಾಜಿಕ ಪಿಡುಗಾಗಿದ್ದು, ಇದು ಕೇವಲ ದೈಹಿಕ ಸಮಸ್ಯೆಯಷ್ಟೇ ಅಲ್ಲದೆ ಮಾನಸಿಕ ಹಾಗೂ ಸಾಮಾಜಿಕ ಕಾಯಿಲೆಯೂ ಆಗಿದೆ ಎಂದು ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕರಾದ ಡಾ. ಸತೀಶ್ ರಾವ್ ಹೇಳಿದರು. ಅವರು ಆಳ್ವಾಸ್ ಪುನರ್ಜನ್ಮ ಸಮಗ್ರ ವೈದ್ಯಕೀಯ ಚಿಕಿತ್ಸೆಯ ದುಶ್ಚಟ ನಿವಾರಣಾ ಕೇಂದ್ರದ ಆರನೇ ವರ್ಷದ ವಾರ್ಷಿಕೋತ್ಸವ ಹಾಗೂ ಕುಟುಂಬ ಸಮ್ಮಿಲನ ಕಾರ್ಯಕ್ರಮವನ್ನು ಆಳ್ವಾಸ್ ಪುನರ್ಜನ್ಮ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಅಮಲು ಪದಾರ್ಥಗಳ ವ್ಯಸನದಿಂದ ವ್ಯಕ್ತಿಯ ಜೀವನದಲ್ಲಿ ಆರ್ಥಿಕ ಹಾಗೂ ಕೌಟುಂಬಿಕ ಸಂಕಷ್ಟಗಳು ಉಂಟಾಗುತ್ತವೆ. ಸಮಾಜ ಆರೋಗ್ಯಕರವಾಗಿರಬೇಕಾದರೆ ಇಂತಹ ದುಶ್ಚಟಗಳು ಇರಬಾರದು. ದುರದೃಷ್ಟವಶಾತ್ ಇಂದಿಗೂ ಸಮಾಜದಲ್ಲಿ ಈ ಸಮಸ್ಯೆ ಮುಂದುವರಿದಿರುವುದು ಆತಂಕಕಾರಿ ಸಂಗತಿ. ಸಾಮಾನ್ಯವಾಗಿ ಯುವಕರು ಸುಮಾರು ಇಪ್ಪತ್ತು ವರ್ಷದ ವಯಸ್ಸಿನಲ್ಲಿ ಕುತೂಹಲ, ಸ್ನೇಹಿತರ ಒತ್ತಡ (ಪೀರ್ ಪ್ರೆಷರ್) ಮುಂತಾದ ಕಾರಣಗಳಿಂದ ಅಮಲು ಪದಾರ್ಥಗಳತ್ತ ಆಕರ್ಷಿತರಾಗುತ್ತಾರೆ. ಆರಂಭದಲ್ಲಿ ನಾವು ಅದನ್ನು ಸೇವಿಸುತ್ತೇವೆ, ನಂತರ ಅದು ನಮ್ಮನ್ನೇ ಆಳುತ್ತದೆ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗೀತಾನಂದ ಪೌಂಡೇಶನ್ ಮಣೂರು ಮತ್ತು ಭಾರತೀಯ ಅಂಚೆ ಇಲಾಖೆ ಇವರ ಸಹಯೋಗದಲ್ಲಿ ಜನತಾ ಫಿಶ್‌ಮೀಲ್ ಸಹಕಾರದೊಂದಿಗೆ ಸಾರ್ವಜನಿಕರ ಸೌಲಭ್ಯಕ್ಕಾಗಿ ಆಯೋಜಿಸಲಾದ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಅಭಿಯಾನ ಮತ್ತು ಅಂಚೆ ಇಲಾಖೆಯ ವಿವಿಧ ಸೇವೆಗಳ ಮಾಹಿತಿ ಶಿಬಿರ ಕಾರ್ಯಕ್ರಮವು ಜನತಾ ಫಿಶ್ ಮೀಲ್ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗೀತಾನಂದ ಸಂಸ್ಥೆಯ ಪ್ರವರ್ತಕರಾದ ಆನಂದ ಸಿ. ಕುಂದರ್ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರು ಸರ್ಕಾರದ ಪ್ರಮುಖ ಗುರುತು ದಾಖಲೆಗಳಾದ ಆಧಾರ್ ಸೇವೆಗಳನ್ನು ಸುಲಭವಾಗಿ ಪಡೆಯುವಂತೆ ಇಂತಹ ಶಿಬಿರಗಳು ಸಹಾಯಕವಾಗುತ್ತವೆ ಎಂದು ಹೇಳಿದರು. ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಆಧಾರ್ ನವೀಕರಣ, ಮೊಬೈಲ್ ಸಂಖ್ಯೆ ತಿದ್ದುಪಡಿ, ವಿಳಾಸ ಬದಲಾವಣೆ, ಬಯೋಮೆಟ್ರಿಕ್ ಅಪ್ಡೇಟ್ ಸೇರಿದಂತೆ ಅಗತ್ಯ ಸೇವೆಗಳು ಇಂತಹ ಶಿಬಿರದ ಮೂಲಕ ಲಭ್ಯವಾಗುವುದು ಜನರಿಗೆ ಅನುಕೂಲಕರ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಅಂಚೆ ಇಲಾಖೆಯ ಉಡುಪಿ ವ್ರತ್ತದ ಅಂಚೆ ಅಧೀಕ್ಷಕ ರಮೇಶ್ ಪ್ರಭು, ಕುಂದಾಪುರ ದಕ್ಷಿಣ ಉಪ ವಲಯದ ಅಂಚೆ ನಿರೀಕ್ಷಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಂಗಿನ ಕಾಯಿ ಕೊಯ್ಯಲೆಂದು ಮರಕ್ಕೆ ಹತ್ತಿದ ವ್ಯಕ್ತಿಯೊಬ್ಬರು ಮರದಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ರವಿವಾರ ಬೆಳಿಗ್ಗೆ ತಾಲೂಕಿನ ಗುಲ್ವಾಡಿ ಗ್ರಾಮದ ಶೆಟ್ರಕಟ್ಟೆ ಎಂಬಲ್ಲಿ ಸಂಭವಿಸಿದೆ. ಶೆಟ್ರಕಟ್ಟೆಯ ನಿವಾಸಿ ಗೋಪಾಲ (66) ಮೃತಪಟ್ಟ ವ್ಯಕ್ತಿ. ಅವರು ಮರದಿಂದ ಬಿದ್ದು ಗಂಭೀರ ಗಾಯಗೊಂಡು ಅವರನ್ನು ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ಹಾಗೂ ಸಂಜಯ ಗಾಂಧಿ ಇಂಗ್ಲೀಷ್ ಮೀಡಿಯಂ ಶಾಲೆಯ ವತಿಯಿಂದ ವಿದ್ಯಾದಾಯಿನಿ ಸಭಾಭವನದಲ್ಲಿ ಶಾರದಾ ಪೂಜೆಯನ್ನು ಭಕ್ತಿಭಾವ ಹಾಗೂ ಅರ್ಥಪೂರ್ಣವಾಗಿ ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ “ಜ್ಞಾನವೃಕ್ಷ” ಎಂಬ ವಿಶಿಷ್ಟ ಪರಿಕಲ್ಪನೆಯನ್ನು ಪರಿಚಯಿಸಲಾಯಿತು. ವಿದ್ಯಾರ್ಥಿಗಳು ಒಟ್ಟಾಗಿ ಒಂದು ಸಸಿಯನ್ನು ನೆಟ್ಟು ಅದಕ್ಕೆ “ಜ್ಞಾನವೃಕ್ಷ”ಎಂದು ನಾಮಕರಣ ಮಾಡಿದರು. ಪ್ರತಿಯೊಂದು ತರಗತಿಯ ತರಗತಿ ನಾಯಕರು ಶಾಲೆ ಮತ್ತು ಶಿಕ್ಷಣದಿಂದ ನಮಗೆ ದೊರೆಯುವ ಮೌಲ್ಯಗಳನ್ನು ಪ್ರತಿಬಿಂಬಿಸುವ ಘೋಷವಾಕ್ಯಗಳನ್ನು ಆ ಸಸಿಗೆ ಕಟ್ಟುವ ಮೂಲಕ ಶಿಕ್ಷಣದ ಮಹತ್ವವನ್ನು ಪ್ರತಿಪಾದಿಸಿದರು. ಮುಂದೆ “ಪುಸ್ತಕ ಪೂಜೆ”ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಪುಸ್ತಕಗಳ ಮೇಲೆ ಹೂವು ಮತ್ತು ಅಕ್ಷತೆಗಳನ್ನು ಅರ್ಪಿಸಿ ನಮಸ್ಕಾರ ಸಲ್ಲಿಸಿ ಜ್ಞಾನಕ್ಕೆ ಗೌರವ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ “ಜ್ಞಾನ ಗೋಡೆ” ಎಂಬ ವಿನೂತನ ಕಲ್ಪನೆಯ ಮೂಲಕ ವಿದ್ಯಾರ್ಥಿಗಳು ಜ್ಞಾನ ಮತ್ತು ಶಿಕ್ಷಣವನ್ನು ಪ್ರೇರೇಪಿಸುವ ಅನೇಕ ಉಲ್ಲೇಖಗಳು ಹಾಗೂ ಚಿಂತನೆಗಳನ್ನು ಪ್ರದರ್ಶಿಸಿದರು. ಶಾರದಾ ಪೂಜೆಯ ಸಾಂಪ್ರದಾಯಿಕ ವಿಧಿವಿಧಾನಗಳನ್ನು ಶಾಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂಘ ಸಂಸ್ಥೆಗಳು ಗ್ರಾಮದ ಅಭಿವೃದ್ಧಿಗೆ ಪೂರಕ ವಾತಾವರಣ ಕಲ್ಲಿಸುತ್ತವೆ. ಇದಕ್ಕೆ ಇಲ್ಲಿನ ಕೋಡಿ ಶ್ರೀ ರಾಮ ಗೆಳೆಯರ ಬಳಗದ ಯೋಜನೆ ಯೋಚನೆ ಸಾಕ್ಷಿಯಾಗಿದೆ ಎಂದು ಕೋಟದ ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಹೇಳಿದರು. ಅವರು ಶನಿವಾರ ಕೋಡಿ ಕನ್ಯಾಣದಲ್ಲಿ ಶ್ರೀ ರಾಮ ಗೆಳೆಯರ ಬಳಗ ಇದರ ವಾರ್ಷಿಕೋತ್ಸವ ರಾಮ ಪರ್ವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜ ಕಟ್ಟುವ ಕಾಯಕ ಇಂದಿನ ಯುವ ಜನಾಂಗದಿಂದಾಗಬೇಕು. ಅಲ್ಲದೆ ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಕಾರ್ಯಕ್ರಮ ರೂಪಿಸಿ ಗ್ರಾಮೀಣ ಹಳ್ಳಿ ಭಾಗ ಕ್ಕೆ ಅತೀ ಅವಶ್ಯವಾದ ಕಾರ್ಯಕ್ಕೆ ಮುನ್ನುಡಿ ಬರೆಯುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ 27 ನಿವೃತ್ತ ಯೋಧರನ್ನು ಗೌರವಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೂರ್ತೆದಾರ ಸಂಘದ ಸ್ಥಾಪಕಾಧ್ಯಕ್ಷ ಕೊರಗ ಪೂಜಾರಿ, ಯಕ್ಷಗಾನ ಸಾಮಾಜಿಕ ಕ್ಷೇತ್ರದ ರಾಘವೇಂದ್ರ ಕರ್ಕೇರ ಅವರನ್ನು ಅಭಿನಂದಿಸಲಾಯಿತು. ಕೋಡಿ ಕನ್ಯಾಣ ಸರಕಾರಿ ಶಾಲೆಯ ದೈಹಿಕ ಶಿಕ್ಷಕ ವಿಜಯ ನಾಯರಿ…
