ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರಕಾರದ ಎನ್ಟಿಎ ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ 2026ರ ಪ್ರಥಮ ಹಂತದ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಸುಜಲ್ ಎಸ್. ತೋಳಾರ್ 98.17 ಪರ್ಸoಟೈಲ್ ಅಂಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಂಡ್ಸೆ ಮತ್ತು ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇವರ ಸಹಯೋಗದಲ್ಲಿ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರ ನೇತೃತ್ವದಲ್ಲಿ ಮಾರ್ಚ್ 3 ಮತ್ತು4 ನೇ ತಾರೀಕಿನಂದು ನಡೆಯುವ ವಾರಾಹಿ ಬಲದಂಡೆ ಯೋಜನೆ ಅನುಷ್ಠಾನ ಮತ್ತು ಸಿದ್ದಾಪುರ ಮತ್ತು ಸೌಕೂರು ಏತ ನೀರಾವರಿಯಲ್ಲಿ ಬಿಟ್ಟು ಹೋದ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಸರ್ಕಾರದ ಗಮನ ಸೆಳೆಯಲು ಕೈಗೊಂಡಿರುವ ಪಾದಯಾತ್ರೆಯಲ್ಲಿ ವಾರಾಹಿ ನದಿ ನೀರನ್ನು ಕುಡಿಯಲು ಮತ್ತು ಕೃಷಿಗೆ ಬಳಸುವ ಹಾಗೂ ಬಲದಂಡೆ ಯೋಜನೆಯ ಫಲಾನುಭವಿ ರೈತ ಬಂಧುಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ. 1979 ರಲ್ಲಿ ಅಂದಿನ ಮುಖ್ಯಮಂತ್ರಿ ದಿವಂಗತ ಗುಂಡೂರಾವ್ ರವರು ವಾರಾಹಿ ನೀರಾವರಿ ಯೋಜನೆಗೆ ಶಂಖುಸ್ಥಾಪನೆ ಮಾಡಿ ಸುಮಾರು ನಾಲ್ಕು ದಶಕಗಳೇ ಕಳೆದು ಅದೆಷ್ಟೋ ಜನಪ್ರತಿನಿದಿನಗಳು ಅಧಿಕಾರ ಅನುಭವಿಸಿದರೂ ಸಹ ಇಂದಿಗೂ ವಾರಾಹಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವ ಜನತೆ ಮಾದಕ ದ್ರವ್ಯ ದುಶ್ಚಟಕ್ಕೆ ಬಲಿಯಾಗುತ್ತಿರುವುದು ದೇಶದ ಭವಿಷ್ಯದ ದೃಷ್ಠಿಯಿಂದ ಅಪಾಯಕಾರಿಯಾದ ವಿದ್ಯಮಾನವಾಗಿದೆ. ದೇಶ ಸದೃಢವಾಗಿರಬೇಕಾದರೆ ಯುವ ಜನತೆ ವ್ಯಸನ ಮುಕ್ತರಾಗಿ ತಾನು, ತನ್ನ ಕುಟುಂಬ ಹಾಗೂ ಸಮಾಜವು ಆರೋಗ್ಯ ಪೂರ್ಣವಾಗಿರುವಂತೆ ಅರಿವು ಮತ್ತು ಜಾಗೃತಿ ಹೊಂದಬೇಕಾಗಿದೆ. ಈ ದಿಶೆಯಲ್ಲಿ ವಿದ್ಯಾರ್ಥಿಗಳು ಇಲಾಖೆಯೊಂದಿಗೆ ಕೈ ಜೋಡಿಸಿದಲ್ಲಿ ಭವ್ಯ ಭಾರತದ ನಿರ್ಮಾಣ ಸಾಧ್ಯವೆಂದು ಉಡುಪಿ ಜಿಲ್ಲೆ ಅಬಕಾರಿ ಉಪ ಆಯುಕ್ತ ಟಿ.ಎಂ. ಶ್ರೀನಿವಾಸ ಹೇಳಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿ ಅಬಕಾರಿ ಇಲಾಖೆ, ಐಕ್ಯೂಎಸಿ, ಮಾದಕ ದ್ರವ್ಯ ತಡೆ ಘಟಕ, ಎನ್.ಎಸ್.ಎಸ್., ರೋವರ್ಸ್ ಮತ್ತು ರೇಜರ್ಸ್ ಘಟಕಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳು ಮತ್ತು ಎನ್.ಡಿ.ಪಿ.ಎಸ್. ಕಾಯ್ದೆ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ಉಪವಿಭಾಗದ ಅಬಕಾರಿ ಉಪಧೀಕ್ಷರಾದ ಪ್ರಭುಗೌಡ ಪಾಟೀಲ ಪ್ರಾತ್ಯಕ್ಷಿಕೆಯೊಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ರೀ ವಿನಾಯಕ ಸಭಾಭವನ ಯಡಾಡಿ-ಮತ್ಯಾಡಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ, ಉಡುಪಿ, ಶಿವಶಾಂತಿ ಲಯನ್ಸ್ ಕ್ಲಬ್, ಮೊಳಹಳ್ಳಿ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಡಾಡಿ-ಮತ್ಯಾಡಿ ಇವರ ಸಹಯೋಗದೊಂದಿಗೆ ನಡೆಯಿತು. ಉಡುಪಿ ತಾಲೂಕು ಆರೋಗ್ಯ ಅಧಿಕಾರಿಯವರ ಕಛೇರಿಯಲ್ಲಿ ವೈದ್ಯಾಧಿಕಾರಿಯಾಗಿರುವ ಡಾ| ಕೃತಿ ಆರ್. ಹೆಗ್ಡೆ ಯಡಾಡಿ-ಮತ್ಯಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಬಿದ್ಕಲ್ಕಟ್ಟೆ ಇಲ್ಲಿನ ವೈದ್ಯಾಧಿಕಾರಿಯಾದ ಡಾ| ಪೂರ್ಣಿಮಾ ಶೇಟ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಇದರ ಅಧ್ಯಕ್ಷರಾದ ಸಚಿನ್ ನಕ್ಕತ್ತಾಯ ಶುಭ ಹಾರೈಸಿದರು. ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ, ಉಡುಪಿ ಇದರ ವೈದ್ಯಕೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ನಿಂದ ಕೊರಗರ ಕುಟುಂಬಗಳಿಗೆ ಮನೆಯನ್ನು ನಿರ್ಮಿಸಿಕೊಡುವ ಮೂಲಕ ಮಹಾತ್ಕಾರ್ಯವನ್ನು ಮಾಡು ತ್ತಿದ್ದಾರೆ. ಸೊರಗುತ್ತಿರುವ ಸಮಾಜಕ್ಕೆ ಸೂರು ನಿರ್ಮಿಸಿಕೊಡುತ್ತಿರುವುದು ಪುಣ್ಯ ಕಾರ್ಯವೆಂದು ಉಡುಪಿ, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಅವರು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಇವರಿಂದ ಕುಂದಾಪುರ ತಾಲೂಕಿನ ಅಮಾಸೆಬೈಲು ಕೊರಗರ ಕಾಲೋನಿಯಲ್ಲಿ 2.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ 14 ಮನೆಗಳ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನೆ ನಿರ್ಮಾಣದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಡಾ. ಎಚ್.ಎಸ್. ಶೆಟ್ಟಿ ಮಾತನಾಡಿ, ಟ್ರಸ್ಟ್ನಿಂದ ಕೊರಗ 100 ಮನೆಗಳ ಕುಟುಂಬಗಳಿಗೆ ನಿರ್ಮಾಣದ ಗುರಿ ಹೊಂದಿದ್ದು, ಅಮಾಸೆಬೈಲ್ನಲ್ಲಿ ಮೂರನೇ ಹಂತದ ಮನೆ ನಿರ್ಮಾಣ ಕಾರ್ಯವಾಗುತ್ತಿದೆ ಎಂದರು. ಶಾಸಕ ಕಿರಣ್ ಕುಮಾರ್ ಕೊಡ್ಲಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಂಸದ ವಿನಯ್ ಕುಮಾರ್ ಸೊರಕೆ, ಸಾಮಾಜಿಕ ಕಾರ್ಯಕರ್ತ ವಾದಿರಾಜ್ ಸಮನ್ವಯ ಬೆಂಗಳೂರು, ಕಮಲಶಿಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ಗುಜ್ಜಾಡಿ ಗ್ರಾಮದ ಕೊಡಪಾಡಿಯ ನಿವಾಸಿ ಸುಧಾಕರ ಶೇರುಗಾರ (37) ಅವರು ಫೆ.24 ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕೊಡಪಾಡಿಯ ತಂದೆಯ ಮನೆಯಲ್ಲಿದ್ದು, ಹೊಟೇಲ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ವಿಪರೀತ ಮದ್ಯ ಸೇವನೆ ಚಟದಿಂದ ಆರೋಗ್ಯದಲ್ಲಿ ಏರುಪೇರಾಗಿ ಅನಾರೋಗ್ಯದಿಂದ ಅಥವಾ ಬೇರೆ ಯಾವುದೋ ಕಾರಣದಿಂದ ಜೀವನದಲ್ಲಿ ಜುಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಕೂಟರ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಬಿದ್ದು ಸವಾರ ಮೃತಪಟ್ಟ ಘಟನೆ ಇಲ್ಲಿನ ಕೊರ್ಗಿ ಗ್ರಾಮದ ಚಾರುಕೊಟ್ಟಿಗೆ ಸಾಗಿನಗುಡ್ಡೆ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಚಾರುಕೊಟ್ಟಿಗೆ ಮೇಲ್ ಮನೆ ನಿವಾಸಿ ಪ್ರತಾಪ ಶೆಟ್ಟಿ (42) ಮೃತ ದುರ್ದೈವಿ. ಅವರು ಬ್ರಹ್ಮಾವರದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದು ಫೆ.24ರಂದು ರಾತ್ರಿ ಸುಮಾರು 8:30 ಗಂಟೆಯ ವೇಳೆಗೆ ಬ್ರಹ್ಮಾವರದಿಂದ ಮನೆ ಕಡೆಗೆ ಸ್ಕೂಟಿಯಲ್ಲಿ ಬರುತ್ತಿದ್ದರು. ಸ್ಕೂಟಿಯ ಹಿಂಭಾಗದಲ್ಲಿ ಕೃಷಿ ಸಾಮಗ್ರಿಗಳಾದ ಹಾರೆ, ಪಿಕಾಸೆ ಹಾಗೂ ಕೇಸರಿ ಬಣ್ಣದ ಪ್ಲಾಸ್ಟಿಕ್ ಬುಟ್ಟಿಯನ್ನು ಕಟ್ಟಿ, ತೆಕ್ಕಟ್ಟೆ-ದಪ್ಪೆಕಟ್ಟೆ ರಸ್ತೆಯಲ್ಲಿ ಸಂಚರಿಸುತ್ತಿದ್ದರು. ಕೊರ್ಗಿ ಗ್ರಾಮದ ಚಾರುಕೊಟ್ಟಿಗೆ ಸಾಗಿನಗುಡ್ಡೆ, ಬಸ್ ನಿಲ್ಯಾಣದ ಹತ್ತಿರ ತಲುಪುವಷ್ಟರಲ್ಲಿ ಸ್ಕೂಟಿ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆ ಬದಿಯ ಹೊಂಡದಂತಿರುವ ತೋಡಿಗೆ ಬಿದ್ದಿದ್ದಾರೆ. ಘಟನೆಯ ಬಗ್ಗೆ, ಮಾಹಿತಿ ತಿಳಿದ ರತ್ನಾಕರ್ ಶೆಟ್ಟಿ (56) ಅವರು ಸ್ಥಳಕ್ಕೆ ಧಾವಿಸಿ ನೋಡಿದಾಗ ಪ್ರತಾಪ ಶೆಟ್ಟಿ ತೋಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತ ಪ್ರತಿಷ್ಠಾನ ರಿ. ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಅಮೃತೇಶ್ವರಿ ಮಹಿಳಾ ಮೀನುಗಾರರ ಸಹಕಾರಿ ಸಂಘ ಕೋಟ, ನೆನಪು ಮತ್ತು ಉಸಿರು ಕೋಟ ಸಹಯೋಗದೊಂದಿಗೆ ವಿಶ್ವಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್ 15 ರಂದು ಅಪರಾಹ್ನ ಕೋಟದ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ 4ನೇ ಮಹಿಳಾ ಕಾಲಮಿತಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸವಿತಾ ಮಾಧವ ಶಾಸ್ತ್ರಿಯನ್ನು ಆಯ್ಕೆ ಮಾಡಲಾಗಿದೆ. ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಆನಂದ ಸಿ. ಕು೦ದರ್, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಪಂಚಾಯತ್ ಪಿಡಿಓ ರವೀ೦ದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್, ಕಾರ್ಯಕ್ರಮ ನಿರ್ದೇಶಕಿ ಸುಶೀಲಾ ಸೋಮಶೇಖರ್ ತಿಳಿಸಿದ್ದಾರೆ. ಸವಿತಾ ಮಾಧವ ಶಾಸ್ತಿ ಅವರು ಈ ತನಕ ಮೂರು ಕಥಾ ಸಂಕಲನ ಪ್ರಕಟಗೊಂಡಿವೆ. ಅವರು ಬರೆದಿರುವ ನೂರಾರು ಕಥೆಗಳು, ಹಾಸ್ಯ ಬರಹಗಳು ನಾಡಿನ ಪ್ರಸಿದ್ಧ ಪತ್ರಿಕೆಯಲ್ಲಿ ಪ್ರಕಟಗೊಂಡಿದೆ. ಹಲವಾರು ರಾಜ್ಯ ಮಟ್ಟದ ಸಾಹಿತ್ಯಕ ಸ್ಪರ್ಧೆಯಲ್ಲಿ ಪುರಸ್ಕಾರಗಳಿಸಿದ್ದಾರೆ. ಅವರ ಕಥೆ ತೆಲುಗಿಗೆ ಅನುವಾದಗೊಂಡಿದ್ದು, ಅವರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ನೀರು ತುಂಬಿ ಮುಳುಗಡೆಯಾದ ಘಟನೆ ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ಸಂಭವಿಸಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟಿನ ಮೀನುಗಾರರು ರಕ್ಷಿಸಿದ್ದಾರೆ. ಬೋಟಿನಲ್ಲಿದ್ದ ಮೀನುಗಾರರಾದ ಕುಮಟಾ ಮೂಲದವರಾದ ಪ್ರಕಾಶ್, ರಂಜಿತ್, ರಾಘವೇಂದ್ರ, ರಾಮ ಹಾಗೂ ಶ್ರೀನಿವಾಸ ಪಾರಾದವರು. ಫೆ.23ರ ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಕೆಮ್ಮಣ್ಣಿನ ನಾಗರಾಜ್ ಪುತ್ರನ್ ಅವರ ಶ್ರೀ ದುರ್ಗಾಪರಮೇಶ್ವರಿ ಬೋಟಿನ ಅಡಿಭಾಗಕ್ಕೆ ಫೆ.24ರಂದು ಸಮುದ್ರದಲ್ಲಿ ಯಾವುದೋ ವಸ್ತು ತಾಗಿ ಎಂಜಿನಿನ ಅಡಿ ಭಾಗದಲ್ಲಿ ನೀರು ಒಳ ಬರಲು ಆರಂಭಿಸಿತು. ನೀರು ತುಂಬಿ ಬೋಟಿನ ಎಂಜಿನ್ ಸ್ಥಗಿತಗೊಂಡಿದೆ. ಕೂಡಲೇ ಬೋಟಿನಲ್ಲಿದ್ದವರು ನೀರು ಖಾಲಿ ಮಾಡಲು ಪ್ರಯತ್ನಿಸಿದರೂ ಆಗಲಿಲ್ಲ. ಅನಂತರ ಸಹಾಯಕ್ಕಾಗಿ ಮಲ್ಪೆ ಬಂದರಿನಿಂದ ಶ್ರೀ ಕೃಷ್ಣ ಬೋಟಿನವರು ಹಾಗೂ ಕೋಸ್ಟ್ ಗಾರ್ಡ್ ನವರು ಬಂದು ಅದರಲ್ಲಿದ್ದವರನ್ನು ರಕ್ಷಿಸಿದ್ದಾರೆ. ಬಳಿಕ ಬೋಟನ್ನು ಶ್ರೀ ಕೃಷ್ಣ ಬೋಟಿನವರು ಹಗ್ಗ ಕಟ್ಟಿ ಎಳೆದು ಗಂಗೊಳ್ಳಿ ಬಂದರಿನಿಂದ ಸುಮಾರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇದೇ ಬರುವ ಮಾಚ್೯ 1ರಂದು ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದ ವತಿಯಿಂದ ನಡೆಯಲಿರುವ ಏಕ ಪವಿತ್ರ ನಾಗಮಂಡಲೋತ್ಸವ ಇದರ ಉಗ್ರಾಣ ಮುಹೂರ್ತ ಬುಧವಾರ ಜರಗಿತು. ವೇ.ಮೂ.ಮಧುಸೂದನ್ ಬಾಯರಿ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಸಮ್ಮುಖದಲ್ಲಿ ಜರಗಿತು. ಪೂರ್ವಾಹ್ನ ದೇಗುಲದ ದೇವಿ ಅಮೃತೇಶ್ವರೀ ಹಲವು ಮಕ್ಕಳ ತಾಯಿಗೆ ಪೂಜೆ ಸಲ್ಲಿಸಿ ಸ್ಥಳ ಸಾನಿಧ್ಯದ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಕೋಟದ ಗಾಂಧಿ ಮೈದಾನದಲ್ಲಿರುವ ಉಗ್ರಾಣ ಚಪ್ಪರದಲ್ಲಿ ಧಾರ್ಮಿಕ ಕಾರ್ಯಗಳನ್ನು ನೆರವೆರಿಸಲಾಯಿತು. ಡಾ.ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ನ ಮುಖ್ಯಸ್ಥ ನಾಡೋಜ ಡಾ.ಜಿ ಶಂಕರ್ ದೇಗುಲದ ನಾಗಮಂಡಲೋತ್ಸವ ವಿಶೇಷ ಹೊರೆಕಾಣಿಕೆಯನ್ನು ಸಹೋದರ ಶಿವ ಎಸ್. ಕರ್ಕೇರ ಮೂಲಕ ದೇಗುಲದ ಅಧ್ಯಕ್ಷರಿಗೆ ಸಮರ್ಪಿಸಿದರು. ಅನ್ನದಾಸೋಹಕ್ಕೆ ಚಪ್ಪರದಲ್ಲಿ ಅಗ್ನಿಸ್ಪರ್ಶ:ಕೋಟದ ಗಾಂಧಿ ಮೈದಾನದಲ್ಲಿರುವ ನಾಗಮಂಡಲದ ಅನ್ನದಾಸೋಹದ ಚಪ್ಪರದಲ್ಲಿ ಒಲೆ ಮುಹೂರ್ತ ಕೈಗೊಳ್ಳಲಾಯಿತು. ನಾಗಮಂಡಲದ ಅಡುಗೆಯ ಪಾಕತಜ್ಞ ಸುಂದರ್ ಭಟ್ ಮೂಲಕ ಅಗ್ನಿ ಸ್ಪರ್ಶಿಸಿ ದೇಗುಲದ…
