Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಜೀವನದಲ್ಲಿ ಶಿಸ್ತು ಎಂದರೆ ಕೇವಲ ನಿಯಮಗಳನ್ನು ಪಾಲಿಸುವುದು ಮಾತ್ರವಲ್ಲ; ಅದು ವ್ಯಕ್ತಿಯ ಚಿಂತನೆ, ವರ್ತನೆ ಮತ್ತು ಕಾರ್ಯಪದ್ಧತಿಯಲ್ಲಿರುವ ಸುವ್ಯವಸ್ಥೆ ಎಂದು ಚೆನ್ನೈ ಮೂಲದ 11 ವರ್ಷದ ಉದ್ಯಮಿ ಹಾಗೂ ಜೋಜೋ ಕನೆಕ್ಟ್ ಸ್ಥಾಪಕ ಅಥ್ವಿಕ್ ಅಮಿತ್ ಕುಮಾರ್ ಹೇಳಿದರು. ಅವರು ಆಳ್ವಾಸ್‌ನ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ರೋಸ್ಟ್ರಂ ಸ್ಪೀಕರ್ಸ್ ಕ್ಲಬ್ ವತಿಯಿಂದ ನಡೆದ “ತರಗತಿಯಿಂದ ಸಮ್ಮೇಳನದ ವರೆಗೆ ನನ್ನ ಉದ್ಯಮಶೀಲತಾ ಪ್ರಯಾಣ” ಪ್ರೇರಣಾದಯಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ತನ್ನ ತಂದೆಯ ಉದ್ಯಮಕ್ಕೆ ಸಂಬಂದಿಸಿದ ಸಭೆಗಳಲ್ಲಿ ಭಾಗಿಯಾದ್ದರಿಂದ ತನ್ನದೇ ಆದ ಉದ್ಯಮವನ್ನು ಪ್ರಾರಂಭಿಸಲು ಸ್ಫೂರ್ತಿಯಾಯಿತು ಎಂದರು. ಝೋಝೋ ಕನೆಕ್ಟ್ ವೃತ್ತಿಪರ ನೆಟ್‌ವರ್ಕಿಂಗ್ ಸೇವೆಗಳನ್ನು ಒದಗಿಸುವ ಸಂಸ್ಥೆಯಾಗಿದೆ, ಸಾಂಪ್ರದಾಯಿಕ ಬ್ಯುಸಿನೆಸ್ ಕಾರ್ಡ್ಗಳ ಬದಲಾಗಿ ಸ್ಕ್ಯಾನ್ ಮಾಡುವ ಮೂಲಕ ಡಿಜಿಟಲ್ ಕಾರ್ಡ್ ಆಗಿ ಪರಿವರ್ತಿಸುವ ಮೂಲಕ ಜೋಜೋ ಬ್ಯುಸಿನೆಸ್ ಕಾರ್ಡ್ ಕಾರ್ಯನಿರ್ವಹಿಸುತ್ತದೆ ಎಂದರು. ನಾನು ವ್ಯವಹಾರಿಕ ಸಮ್ಮೇಳನಗಳಲ್ಲಿ ಭಾಗಿಯಾಗವುದರ ಮೂಲಕ ಜಾಗತಿಕ ಹೂಡಿಕೆದಾರರು, ಉದ್ಯಮಿಗಳನ್ನು ವಿವಿಧ ಕಂಪನಿಗಳ ಸ್ಥಾಪಕರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕನ್ನಡ ಚಿತ್ರರಂಗದ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಉಪೇಂದ್ರ ತಮ್ಮ ಕುಟುಂಬದವರೊಂದಿಗೆ ಕುಲದೇವರಾದ  ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಳಕ್ಕೆ  ಮಂಗಳವಾರ ಭೇಟಿ ನೀಡಿ ಸೇವೆ ಸಲ್ಲಿಸಿದರು. ದೇಗುಲದ ವತಿಯಿಂದ ಪ್ರಸಾದ ವಿತರಿಸಿ ಶಾಲು ಹೋದಿಸಿ ಗೌರವಿಸಲಾಯಿತು. ಆಡಳಿತ ಮಂಡಳಿಯ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ಸದಸ್ಯರಾದ ಶ್ರೀಧರ ರಾವ್ ಕೇರಳ ಹಾಗೂ ದೇಗುಲದ ಮ್ಯಾನೇಜರ್ ಗಣೇಶ್ ಭಟ್ಟ ಮತ್ತಿತರರು ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.     ಉಡುಪಿ: ಜನ ಸಾಮಾನ್ಯರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದರೊಂದಿಗೆ ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮಾಡುವುದು ಸೂಕ್ತ. ಯಾವುದೇ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯಕೀಯ ನೆರವು ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಜನಸಾಮಾನ್ಯರಿಗೆ ಉತ್ತಮ ಅರೋಗ್ಯ ಸೇವೆಗಳನ್ನು ಒದಗಿಸಬೇಕೆಂಬ ಉದ್ದೇಶದಿಂದ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಅಗತ್ಯವಿರುವವರಿಗೆ ಅವಶ್ಯಕತೆಗನುಗುಣವಾಗಿ ತಲುಪಿಸುವ ಕೆಲಸವಾಗಬೇಕು ಎಂದರು. ಜಿಲ್ಲೆಯಲ್ಲಿ ಪ್ರತಿಯೊಬ್ಬ ಗರ್ಭಿಣಿ ಮಹಿಳೆಯರಿಗೆ ತಾಯಿ ಕಾರ್ಡ್‌ಗಳನ್ನು ನೀಡಬೇಕು. ಅವರುಗಳಿಗೆ ಆರೋಗ್ಯ ಶಿಕ್ಷಣ ನೀಡುವುದರ ಜೊತೆಗೆ ಕಾಲಕಾಲಕ್ಕೆ ನಿರಂತರ ವೈದ್ಯಕೀಯ ತಪಾಸಣೆ ನಡೆಸಬೇಕು. ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ ನಿಮ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್. ಟಿ. ಎ.) ವತಿಯಿಂದ ನಡೆಸಲಾದ ಜೆಇಇ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಜನವರಿ ಆವೃತ್ತಿಯ ಫಲಿತಾಂಶ ಪ್ರಕಟಗೊಂಡಿದ್ದು, ಕ್ರಿಯೇಟಿವ್ ಸಂಸ್ಥೆ ಅತ್ಯುತ್ತಮ ಫಲಿತಾಂಶವನ್ನು ಪಡೆದು ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ತನ್ನನ್ನು ಗುರುತಿಸಿಕೊಂಡಿದೆ. ನಾಗದೇವ್ ಎಂ.ಜಿ. ಬಿ.ಪ್ಲಾನಿಂಗ್ ನಲ್ಲಿ ಜನರಲ್ ಇಡಬ್ಲೂಎಸ್‌ (EWS) ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬಿ. ಪ್ಲಾನಿಂಗ್ ಫಲಿತಾಂಶ ಪಟ್ಟಿ: ನಾಗದೇವ್ ಎಂ.ಜಿ.- 99.9762662ಸುಕ್ಷಿತ್ ಗಿರೀಶ್ ಗೌಡ- 99.7769023ಅಭಿರಾಮ್ ಭಟ್ ಜಿ.ಪಿ.- 98.3718612ದಿಶಾಂತ್ ಎಂ. – 98.2152 181  ನಿಶಾಂತ್ ಹೊನ್ನಾವರ- 98.1107894ಸಂವಿತ್ ಅಮಿತ್ ಗೋಕರ್ಣ- 98.1107894ನಿನಾದ್ ರಾಜೇಶ್ ನಾಯ್ಕ್- 98.0490815 ಪರ್ಸೆಂಟೈಲನ್ನು ಪಡೆದುಕೊಂಡಿದ್ದಾರೆ. ಮಾತ್ರವಲ್ಲದೆ 95ಪರ್ಸೆಂಟೈಲ್ ಗಿಂತ 16 ಮಂದಿ ವಿದ್ಯಾರ್ಥಿಗಳು,  90 ಪರ್ಸೆಂಟೈಲ್ ಗಿಂತ 24 ಮಂದಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆದುಕೊಂಡಿದ್ದಾರೆ. ಬಿ. ಆರ್ಕ್ ಫಲಿತಾಂಶ ಪಟ್ಟಿ: ನಾಗದೇವ್ ಎಂ.ಜಿ- 99.8371909ಚೇತನಾ ಟಿ. ಪಿ.- 97. 6986711ಶಮಿತಾ ನಾಯಕ್- 97. 4918595ನಿಶಾಂತ್ ಹೊನ್ನಾವರ -…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಜೈಹಿಂದ್ ಕ್ರಿಕೆಟರ್ಸ್‌ ಮಣೂರು ಪಡುಕರೆ ಇವರ ಆಶ್ರಯದಲ್ಲಿ ಜೈಹಿಂದ್ ಪ್ರೀಮಿಯರ್ ಲಿಗ್ ಕ್ರಿಕೆಟ್ ಪಂದ್ಯಾಕೂಟ ಭಾನುವಾರ ಮಣೂರು ಪಡುಕರೆ ಪದವಿ ಕಾಲೇಜಿನ ಮೈದಾನದಲ್ಲಿ ಜರಗಿತು. ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅವರು ಕ್ರಿಕೆಟ್ ಪಂದ್ಯಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಜೈಹಿಂದ್ ಕ್ರಿಕೆಟರ್ಸ್ ಕ್ರೀಡೆಯ ಜತೆ ಸಾಮಾಜಿಕ ಕಾರ್ಯವನ್ನು ವಸ್ತುನಿಷ್ಠೆಯಾಗಿ ಸೇವೆ ಸಲ್ಲಿಸುತ್ತಿದೆ ಇದು ಶ್ಲಾಘನೀಯ ಕಾರ್ಯ, ಅಶಕ್ತರಿಗೆ ನೆರವು,ಅನಾರೋಗ್ಯ ಪೀಡಿತರಿಗೆ ಶೈಕ್ಷಣಿಕಸೇವೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಇಂಥಹ ಕ್ರೀಡಾ ಚಟುವಟಿಕೆಯ ಸಂಘಟನೆಗಳು ಗ್ರಾಮದಲ್ಲಿ ಪಸರಿಸಲಿ ಎಂದು ಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ಕೋಟ ಪಂಚಾಯತ್ ಸದಸ್ಯರಾದ ಜಯರಾಮ ಶೆಟ್ಟಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಮನೋವೈದ್ಯರಾದ ಡಾ. ಪ್ರಕಾಶ್ ತೋಳಾರ್, ಉದ್ಯಮಿ ಬೀಜುನಾಯರ್, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ, ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಎಚ್. ಕುಂದರ್, ಮಾಜಿ ತಾ.ಪಂ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್, ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ, ಜೈಹಿಂದ್ ಕ್ರಿಕೆಟಸ್೯…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಯಕ್ಷಗಾನ ವೇಷಭೂಷಣ ತಯಾರಿ ಮತ್ತು ಮುಖವರ್ಣಿಕೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಇತ್ತೀಚೆಗೆ ಯಡಾಡಿ-ಮತ್ಯಾಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 100 ಎನ್.ಎಸ್.ಎಸ್. ಸ್ವಯಂಸೇವಕರು ಯಕ್ಷಗಾನದ ವೇಷ ಭೂಷಣ ತಯಾರಿ ಮತ್ತು ಮುಖವರ್ಣಿಕೆಯ ಬಗ್ಗೆ ಅರಿತುಕೊಂಡರು. ಯಕ್ಷಗಾನ ವೇಷಭೂಷಣ ಮತ್ತು ಮುಖವರ್ಣಿಕೆಯ ಬಗ್ಗೆ ಗಣೇಶ್ ಬಳೆಗಾರ ಜನ್ನಾಡಿ, ಹಿರಿಯ ಯಕ್ಷಗಾನ ವೇಷದಾರಿ ಅಣ್ಣಪ್ಪ ಕುಲಾಲ್ ಜನ್ನಾಡಿ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ ನಿರ್ವಹಿಸಿದರು. ಶಿಬಿರಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಮತ್ತು ಪೂಜಾ ಕುಂದರ್, ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಹರೀಶ್ ಕಾಂಚನ್, ಕನ್ನಡ ಪ್ರಾಧ್ಯಾಪಕಿ ಪ್ರವೀಣಾ ಎಮ್. ಪೂಜಾರಿ, ಕುಶ ಪೂಜಾರಿ ಯಡಾಡಿ, ಮಂಜುನಾಥ್ ಮತ್ಯಾಡಿ ಉಪಸ್ಥಿತರಿದ್ದರು.  

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ವಿದ್ಯಾರ್ಥಿಗಳು ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಮುಖ್ಯ. ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಆದರೆ ಅದು ಬಹುದೊಡ್ಡ ಬದುಕಿನ ಪಾಠವನ್ನು ಕಲಿಸುತ್ತದೆ ಎಂದು ಅಮೇರಿಕನ್ ಏರ್ ಲೈನ್ಸ್ ಕಂಟ್ರಿ ಮ್ಯಾನೇಜರ್ ಸಂಧ್ಯಾ ರಾವ್ ಹೇಳಿದರು. ಅವರು ಇಲ್ಲಿನ ಮದರ್ ತೆರೆಸಾ ಶಾಲೆಯಲ್ಲಿ ಇತ್ತೀಚಿಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ಸಲುವಾಗಿ ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮವು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಶಮಿತಾ ರಾವ್ ಹಾಗೂ ರೇನಿಟಾ ಲೋಬೋ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳು, ತೀರ್ಪುಗಾರರೂ ಆಗಿರುವ ಸಂಧ್ಯಾ ರಾವ್( ಕಂಟ್ರಿ  ಮ್ಯಾನೇಜರ್ ಅಮೇರಿಕನ್ ಏರ್ ಲೈನ್ಸ್ ) ಯಶ್ ಆರ್ಯನ್ (ರಾಮಯ್ಯ ಯುನಿವರ್ಸಿಟಿ ಇನ್ ಟರ್ನ್ ಇಂಡಿಯಾ ಓಲ್ಡ್ಸ ಟ್ II ಎಸ್.ಸಿ  ಯುವ ಲ್ಯಾಬ್) ಹಾಗೂ ಅಲಿಟಾ ಡೇಸಾ (ಸಂಸ್ಕೃತಿ ಮತ್ತು ಭಾಷಾ ಅಭಿವೃದ್ಧಿ ನಿರ್ದೇಶಕರು) ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ಮಮತಾ ಪೂಜಾರಿ ಅವರು ಉಪಸ್ಥಿತರಿದ್ದರು.   ಅದೇ ರೀತಿಯಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಇಲ್ಲಿನ ಮೆಸ್ಕಾಂ ಸಿಬ್ಬಂದಿಯೊಬ್ಬರಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ, ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಮೂಲದ ಪರಶುರಾಮ್ ಲಮಾಣಿ (29) ಎಂಬವರಿಗೆ ಫೆ.18ರಂದು ಅಪರಿಚಿತರು ಕರೆ ಮಾಡಿ, ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ತಿಳಿಸಿದರು. ಇದನ್ನು ನಂಬಿದ ಅವರು, ವಿವಿಧ ಹಂತಗಳಲ್ಲಿ ಬೇರೆ ಬೇರೆ ಖಾತೆಗಳಿಗೆ ಒಟ್ಟು 5,39,200ರೂ. ಹಣವನ್ನು ಹೂಡಿಕೆ ಮಾಡಿದ್ದರು. ಆದರೆ ಆರೋಪಿಗಳು ಪರಶುರಾಮ್ ಅವರಿಗೆ ಯಾವುದೇ ಹಣವನ್ನು ನೀಡದೆ ವಂಚಿಸಿರುವುದಾಗಿ ದೂರಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅನುದಾನದ ಅಲಭ್ಯತೆಯ ನಡುವೆಯೂ ಪ್ರಮುಖ ಅವಶ್ಯತೆಗಳಿಗೆ ಅನುದಾನ ಹೊಂದಿಸಿಕೊಡಲಾಗುತ್ತಿದ್ದು ಈ ಭಾಗದ ಮೂಲಭೂತ ಅಭಿವೃದ್ಧಿ ಕಾಮಗಾರಿಗೆ ಸಾಕಷ್ಟು ಒತ್ತು ನೀಡಲಾಗಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆಧ್ಯತೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಭಾಗದ ಅವಶ್ಯಕ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಒದಗಿಸಿಕೊಡಲಾಗುವುದು ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡಿಕೆಕೊಡ್ಲು ರಸ್ತೆ ಕಾಂಕ್ರೇಟಿಕರಣಕ್ಕೆ ಶಾಸಕರ ಅನುದಾನದಲ್ಲಿ ರೂ.11 ಲಕ್ಷ ರೂ. ಮಂಜೂರಾಗಿದ್ದು, ಕಾಂಕ್ರೀಟಿಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿ.ಕೆ. ಶಿವರಾಮ ಶೆಟ್ಟಿ, ಬಿಜೆಪಿ ಮುಖಂಡರಾದ ದೀಪಕಕುಮಾರ್ ಶೆಟ್ಟಿ, ವೆಂಕಟೇಶ ಶೆಟ್ಟಿ ಅಬ್ಬಿ, ನಿರ್ಮಲ ವಂಡ್ಸೆ, ಸ್ಥಳೀಯ ಬೂತ್ ಅಧ್ಯಕ್ಷ ಗಣೇಶ ದೇವಾಡಿಗ, ಪಾರ್ವತಿ ಗಾಣಿಗ, ನಿತಿನ್ ಶೆಟ್ಟಿ, ಮಂಜುನಾಥ ಗಾಣಿಗ, ನಿವೃತ್ತ ಕೃಷಿ ಅಧಿಕಾರಿ ಸುಧಾಕರ ಶೆಟ್ಟಿ, ಚಂದ್ರ ದೇವಾಡಿಗ, ರಾಜೀವ ಶೆಟ್ಟಿ, ಗಿರಿಜಾ ಗಾಣಿಗ, ಗುಲಾಬಿ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೈತಕಾಯಕದಲ್ಲಿ ಹಿರಿಯ ತಲೆಮಾರಿನ ಕೊಡುಗೆ ಅನನ್ಯ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಣೂರು ಭಾಸ್ಕರ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ, ಸ್ನೇಹಕೂಟ ಮಣೂರು ಇವರುಗಳ ಸಹಯೋಗದೊಂದಿಗೆ 52ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದರು. ಕೃಷಿ ಕ್ಷೇತ್ರದಲ್ಲಿ ದಾರೋಜ್ಜಿಮನೆ ಕುಟುಂಬಿಕರ ಪಾತ್ರ ಅತ್ಯಂತ ಗಣನೀಯ ಪಾತ್ರ ವಹಿಸಿದೆ. ಅದರಲ್ಲೂ ಆನಂದ ಕಾಂಚನ್ ಎಂಬ ಹಿರಿಯ ಕೃಷಿಕರನ್ನು ಪಂಚವರ್ಣದವರು ಗುರುತಿಸಿ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದ್ದಾರೆ. ಒಂದು ಸರಕಾರ ಮಾಡಬೇಕಾದ ಕಾರ್ಯವನ್ನು ಪಂಚವರ್ಣ ಸಂಘಟನೆ ರೈತಾಪಿ ವರ್ಗಕ್ಕೆ ಮನೆಯಂಗಳಕ್ಕೆ ತೆರಳು ಪ್ರೋತ್ಸಾಹಿಸುವ ಕಾರ್ಯ ಅದರಲ್ಲೂ ನಿರಂತರವಾಗಿ ಸರಣಿ ಕಾರ್ಯಕ್ರಮದ ರೂಪದಲ್ಲಿ ನಿರ್ವಹಿಸುವುದು ಶ್ರೇಷ್ಠವಾದ ಕಾರ್ಯವಾಗಿದೆ ಎಂದರು. ಗೋ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.…

Read More