ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025 -26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1ರ ಫಲಿತಾಂಶವು ಪ್ರಕಟವಾಗಿದ್ದು, ಇದರಲ್ಲಿ ಬ್ಯಾರಿಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 100% ಫಲಿತಾಂಶದೊಂದಿಗೆ ಅತ್ಯುತ್ತಮ ಸಾಧನೆ ಮಾಡುವುದರ ಮೂಲಕ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ. ವಿಜ್ಞಾನ ವಿಭಾಗ, ವಾಣಿಜ್ಯ ವಿಭಾಗ ಹಾಗೂ ಕಲಾ ವಿಭಾಗದ ಒಟ್ಟು 92 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 62 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡು ವಿಶೇಷ ಸಾಧನೆ ಮಾಡಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ತ್ರಿಶಾ -577 (96.16%), ಮೊಹಮ್ಮದ್ ರಿಲಾ -564 (94%), ಇರ್ಫಾನ್ ಶರ್ಫುದ್ದಿನ್ -554 (92.33% ) ಫಾತಿಮಾ ನಿಶಾ -543 (90.5%), F M ಜಿಫಾನ್ -539 (89.83%), ಆಯಿಷಾತುಲ್ ಮುಜೈನ -530 (88.33%), ಆಫೀಯಾ -529 (88.16%), ಕೃಷ್ಣ -528 (88%) ಅಂಕಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ನಮಿಷ -570 (95%), ಕಶಿಫಾ – 556 (92.6%), ಅಸಿಫಾ – 542 (90.33%), ಡೆಲ್ ಸ್ಟನ್ -…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶ ಕಂಡ ಮಹಾನ್ ನಾಯಕ, ಭಾರತದ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಜೆಸಿಐ ಹಾಲಾಡಿ ವಾರಾಹಿ ಘಟಕದ ವತಿಯಿಂದ ಮಂಗಳವಾರ ಅಂಪಾರಿನ ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಚರಿಸಲಾಯಿತು. ಹಾಲಾಡಿ ಜೆಸಿಐನ ಅಧ್ಯಕ್ಷರಾದ ಜೆಸಿ ಪ್ರದೀಪ್ ಹಾಲಾಡಿ ಅವರು ದೀಪವನ್ನು ಬೆಳಗಿಸಿ, ಡಾ. ಬಿ.ಆರ್ .ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ವಿವಿಧ ಸಂಸ್ಕೃತಿ, ಧರ್ಮದವರು ನೆಲೆಸಿರುವ ಭಾರತ ದೇಶಕ್ಕೆ ಸಮರ್ಥವಾದ ಸಂವಿಧಾನವನ್ನು ಅಂಬೇಡ್ಕರ್ ನೀಡಿದ್ದಾರೆ. ಅವರ ಮಾದರಿ ಬದುಕು, ತತ್ವ, ಚಿಂತನೆಗಳು ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಬಹು ದೊಡ್ಡ ಆಸ್ತಿ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಮುಖ್ಯ ಶಿಕ್ಷಕಿ ಸರೋಜಾವರು ಮಾತನಾಡಿ, ಅಂಬೇಡ್ಕರ್ ಅವರು ದೇಶ ಕಂಡ ಮಹಾನ್ ಮಾನವತಾವಾದಿ ಎಂದು ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಜಯಕರ, ಸಹ ಶಿಕ್ಷಕಿಯರಾದ ಶೈಲಜಾ ಶೈಲಶ್ರೀ, ಸೌಭಾಗ್ಯಲಕ್ಷ್ಮಿ, ಆಶಾ, ಪ್ರತಿಮಾ, ಶೋಭ, ಶ್ವೇತಾ, ಭವ್ಯ ಮತ್ತು ಜೆಸಿಐ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಂಗಳೂರಿನ ಟೌನ್ ಹಾಲ್ ನಲ್ಲಿ ಎ.11 ರಿಂದ 12ರ ವರೆಗೆ ನಡೆದ ಕರ್ನಾಟಕ ಸ್ಟೇಟ್ ಆರ್ಮ್ ರಸ್ಲಿಂಗ್ ಚಾಂಪಿಯನ್ಶಿಪ್ – 2026ರಲ್ಲಿ 90 ಕೆಜಿ ವಿಭಾಗದಲ್ಲಿ ಬಲ ಕೈ ಹಾಗೂ ಎಡ ಕೈ ವಿಭಾಗದಲ್ಲಿ ಸುರೇಶ್ ಪೂಜಾರಿ ಪಾಂಡೇಶ್ವರ ಸ್ಪರ್ಧಿಸಿ ಎರಡರಲ್ಲೂ ಚಿನ್ನದ ಪದಕ ಪಡೆದು ಮೇ ತಿಂಗಳಿನಲ್ಲಿ ಗುಜರಾತ್ನಲ್ಲಿ ನಡೆಯುವ ರಾಷ್ಟ ಮಟ್ಟದ ಸ್ವರ್ಧೆಗೆ ಆಯ್ಕೆಯಾಗಿದ್ದಾರೆ. ಅವರು ಬ್ರಹ್ಮಾವರದ ಬಾಡಿ ಜೋನ್ ಜೀಮ್ ನಾ ಸದಸ್ಯರಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವು ಬಾರಿ ಪ್ರಶಸ್ತಿಗಳನ್ನು ಮಡಿಲಿಗೆರಿಸಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಶೋಕ್ ಕುಮಾರ್ ಮತ್ತು ಭರತನಾಟ್ಯ ಗುರುಗಳಾದ ವಿದುಷಿ ಪ್ರವಿತಾ ಅಶೋಕ್ ಅವರ ಪುತ್ರಿಯರಾದ ಪೂರ್ವಿಕಾ ಮತ್ತು ಗಾರ್ಗಿದೇವಿ ಇವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವು ಏಪ್ರಿಲ್ 18ರಂದು ಸಂಜೆ 4.00 ಗಂಟೆಗೆ ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗ ದಲ್ಲಿ ನಡೆಯಲಿದೆ. ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಫೌಂಡೇಶನ್ ನಿರ್ದೇಶಕರು ಡಾ. ಮೋಹನ ಆಳ್ವಾ, ನಾಟ್ಯನಿಕೇತನ, ಕೋಲ್ಯ ಸೋಮೇಶ್ವರದ ಕರ್ನಾಟಕ ಕಲಾತಿಲಕ ಗುರು ಉಳ್ಳಾಲ ಮೋಹನ ಕುಮಾರ್, ಚಿತ್ಕಲಾ ಸ್ಕೂಲ್ ಆಫ್ ನೃತ್ಯ, ಬೆಂಗಳೂರಿನ ಭರತನಾಟ್ಯ ಕಲಾವಿದ ಪ್ರವೀಣ ಕುಮಾರ್ ಭರತನಾಟ್ಯ ಕಲಾವಿದೆ, ವ್ಯಾಸ (ಡೀಮ್ಡ್ ವಿಶ್ವವಿದ್ಯಾನಿಲಯ) ಇಲ್ಲಿನ ಯೋಗ ಮತ್ತು ಮಾನವೀಯ ಅಧ್ಯಯನ ಬೆಂಗಳೂರು ಇಲ್ಲಿನ ಡೀನ್ ಡಾ. ಕರುಣಾ ವಿಜಯೇಂದ್ರ, ಕರ್ನಾಟಕ ಕಲಾಶ್ರೀ ವಿದ್ಯಾನ್ ಕೆ. ಚಂದ್ರಶೇಖರ ನಾವಡ ನಿರ್ದೇಶಕರು, ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ ಸುರತ್ಕಲ್ ಇವರುಗಳು ರಂಗಪ್ರವೇಶ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನೃತ್ಯ ಗುರು ವಿದುಷಿ ಪ್ರವಿತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಆನಂದ ಸಿ. ಕುಂದರ್ ಅವರ 78ನೇ ಹುಟ್ಟುಹಬ್ಬದ ಅಂಗವಾಗಿ “ಆನಂದದ ಸೃಷ್ಟಿ” ತಂಡದ ವತಿಯಿಂದ 99ನೇ ವಾರದ ಅಂಗವಾಗಿ ಮೀನುಗಾರಿಕಾ ರಸ್ತೆಯಲ್ಲಿ ಸ್ವಚ್ಛತಾ ಅಭಿಯಾನವನ್ನು ಭಾನುವಾರ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಜನತಾ ಪರಿವಾರ ಸದಸ್ಯರುಗಳಾದ ಆನಂದ ಸಿ. ಕುಂದರ್, ಪ್ರಶಾಂತ್ ಎ. ಕುಂದರ್, ರಕ್ಷಿತ್ ಎ ಕುಂದರ್ ಹಾಗೂ ದಿವ್ಯಾಲಕ್ಷ್ಮಿ ಪ್ರಶಾಂತ್ ಕುಂದರ್, ಜನತಾ ಫಿಷ್ ನೆಟ್ನ ಅರುಣ್, ತೋಳಾರ್ ಓಶಿಯನ್ ಪ್ರಾಡಕ್ಟ್ನ ಶೇಖರ್ ಮತ್ತು ಕರಾವಳಿ ಓಶಿಯನ್ ಪ್ರಾಡಕ್ಟ್ನ ಜಗನ್ನಾಥ ಕಾಂಚನ್ ಉಪಸ್ಥಿತರಿದ್ದರು. ಜನತಾ ಫಿಶ್ ಮೀಲ್, ಜನತಾ ಫಿಶ್ ನೆಟ್, ತೋಳಾರ್ ಓಷಿಯಾನ್ ಪ್ರಾಡಕ್ಟ್ಸ್, ಕಾರವಳಿ ಓಶಿಯನ್ ಪ್ರಾಡಕ್ಟ್ನ ಸುಮಾರು 180 ಅಧಿಕ ಸ್ವಯಂಸೇವಕರು 145 ಚೀಲದಷ್ಟು ಕಸವನ್ನು ಸಂಗ್ರಹಿಸಿ ಸೂಕ್ತ ವಿಲೇವಾರಿಗಾಗಿ ಕೋಟತಟ್ಟು ಎಸ್ಎಲ್ಆರ್ಎಮ್ ಘಟಕಕ್ಕೆ ಹಸ್ತಾಂತರಿಸಿದರು. ಸ್ವಚ್ಛತಾ ಅಭಿಯಾನವನ್ನು ಶ್ರೀನಿವಾಸ್ ಕುಂದರ್, ಮಿಥುನ್ ಕುಮಾರ್ ಸಂಯೋಜಿಸಿ ರವಿಕಿರಣ್ ಕೋಟ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸರಕಾರ ಪ್ರೌಢ ಶಾಲೆಯ ಧಕ್ಕೇರಬಾಳು ನಾರಾಯಣ ಕಾಮತ್ ಸುವರ್ಣ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸಿದ್ಧಾಪುರ ಅನಂತ ಕೃಷ್ಣ ಮಿತ್ಯಂತ, ಸಿದ್ಧಾಪುರ ಜಯರಾಮ ಆಚಾರ್ಯ, ಸಿದ್ಧಾಪುರ ಹಳವಿದ್ಯಾರ್ಥಿ ಸಂಘ ಸ. ಪ್ರೌಡ ಶಾಲೆಯ ಅಧ್ಯಕ್ಷ ಶ್ರೀಕಾಂತ್ ನಾಯಕ್, ಸಿದ್ಧಾಪುರ ಸರಕಾರಿ ಪ್ರೌಡ ಶಾಲೆಯ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ವಿಶ್ವನಾಥ ತುಂಬಿಕಲ್ಲಾಯ, ಸರಕಾರಿ ಪ್ರೌಢ ಶಾಲೆ ಶಿಕ್ಷಕರಾದ ರಾಘವೇಂದ್ರ ಬೆಚ್ಚಳ್ಳಿ ಹಾಗೂ ಉದಯ ಕುಮಾರ್ ಇವರುಗಳು ಶಿಬಿರಾರ್ಥಿಗಳಿಗೆ ಇಲ್ಲಿ ಕಲಿತ ಶಿಕ್ಷಣವನ್ನು ತಮ್ಮ ಮುಂದಿನ ಜೀವನದಲ್ಲಿ ಅಳವಡಿಸಿಕೊಂಡು ಯಶಸ್ಸನ್ನ ಸಾಧಿಸಿರಿ ಎಂದು ಶುಭ ಹಾರೈಸಿದರು. ಈ ಸಮಾರಂಭದಲ್ಲಿ ದೆಹಲಿಯಲ್ಲಿ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಭಾಗವಹಿದ ಸ. ಪ್ರೌಢ ಶಾಲೆಯ ಹಳೆವಿದ್ಯಾರ್ಥಿ ಪ್ರಿಯಾ ಜಿ. ಕಾಮತ್ ಳನ್ನು ಸನ್ಮಾನಿಸಲಾಯಿತು. ಸೇವಾಸಿಂಚನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಕ್ಕಾಡಿ ಸೈಟ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಸಿಮೆಂಟ್ ಚೀಲ ಮೈ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ಲಕ್ಷ್ಮವ್ವ ಮಾಲಪ್ಪ ಮೂಲಿಮನೆ (38) ಮೃತಪಟ್ಟವರು. ಕುಂದಾಪುರದ ವಕ್ವಾಡಿಯಲ್ಲಿ ಎ.9ರಂದು ಬೆಳಿಗ್ಗೆ 9 ಗಂಟೆಗೆ ಸೈಟ್ ನಲ್ಲಿ ಸಿಮೆಂಟ್ ಚೀಲವನ್ನು ತಲೆ ಮೇಲೆ ಹೊತ್ತುಕೊಂಡು ಕೂಲಿ ಕೆಲಸ ಮಾಡುತ್ತಿರುವ ಸಮಯ ಆಕಸ್ಮಿಕವಾಗಿ ಕಾಲು ಉಳುಕಿ ಸಿಮೆಂಟ್ ಚೀಲ ಮೈ ಮೇಲೆ ಬಿದ್ದು ಅಸ್ವಸ್ಥರಾಗಿ ಅವರನ್ನು ಬಾಗಲಕೋಟೆಯ ಗುಳೆಗಾ ಆಸ್ಪತ್ರೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ದಾರಿ ಮಧ್ಯದಲ್ಲಿ ಎ.12ರಂದು ರಾತ್ರಿ ಮೃತಪಟ್ಟಿರುದಾಗಿ ಹುಬ್ಬಳ್ಳಿಯ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯವರು ತಿಳಿಸಿರುತ್ತಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಾಳೆಬರೇ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟಿಯಲ್ಲಿ ಏಪ್ರಿಲ್ 9 ರಂದು ತಡೆಗೋಡೆಯೊಂದಿಗೆ ರಸ್ತೆ ಅಗಲೀಕರಣ ಕಾಮಗಾರಿಯ ಇನ್ನುಳಿದ ಭಾಗದ ತಳಪಾಯದ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದಲ್ಲಿ ಹಾಲಿ ಇರುವ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂ ಕುಸಿತ ಉಂಟಾಗಿ ಕಾಂಕ್ರೀಟ್ ರಸ್ತೆಯ ಮೇಲ್ಮೆನಲ್ಲಿ ಅಲ್ಲಲ್ಲಿ ಬಿರುಕುಗಳು ಕಂಡುಬಂದಿದೆ. ಸುರಕ್ಷತಾ ದೃಷ್ಟಿಯಿಂದ ಹುಲಿಕಲ್ ಘಾಟ್ ವ್ಯಾಪ್ತಿಯ ಹೇರ್ಪಿನ್ ತಿರುವಿನಲ್ಲಿ ಪ್ರಸ್ತುತ ಕೈಗೊಳ್ಳುತ್ತಿರುವ ರಕ್ಷಣಾತ್ಮಕ ಕಾಮಗಾರಿಯ ಪೂರ್ಣಗೊಳ್ಳುವವರೆಗೆ, ಸಾರ್ವಜನಿಕ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ನಿಯಮ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮವಾಳಿಗಳು 1989 ರ ನಿಯಮ 221 (ಎ )(2) & (5) ರನ್ವಯ ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ನ ಮೂಲಕ ಎಲ್ಲಾ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸದ್ರಿ ರಸ್ತೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: 2026 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 600ರಲ್ಲಿ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿಶಾ ಪೂಜಾರಿಯ ಮುಂದಿನ ವಿದ್ಯಾಭ್ಯಾಸಕ್ಕೆ ಮಹತ್ವದ ಬೆಂಬಲ ಲಭಿಸಿದೆ. ವಿಶ್ವ ಬಂಟರ ಪ್ರತಿಷ್ಠಾನದ ಮಹಾಪೋಷಕರಾದ ಡಾ. ಬಿ. ಆರ್. ಶೆಟ್ಟಿ ಅವರು ದಿಶಾ ಪೂಜಾರಿಯ ಸಂಪೂರ್ಣ ವಿದ್ಯಾಭ್ಯಾಸದ ಖರ್ಚನ್ನು ಭರಿಸುವುದಾಗಿ ಭರವಸೆ ನೀಡಿದ್ದಾರೆ. ಸೋಮವಾರ ಸಂಜೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರ ಕಚೇರಿಯಲ್ಲಿ ವಿಶ್ವ ಬಂಟರ ಪ್ರತಿಷ್ಠಾನದ ವತಿಯಿಂದ ದಿಶಾ ಅವರನ್ನು ಗೌರವಿಸಲಾಯಿತು. ಅವಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ. ಬಿ. ಆರ್. ಶೆಟ್ಟಿ, ದೂರವಾಣಿ ಮೂಲಕ ದಿಶಾಳೊಂದಿಗೆ ಮಾತನಾಡಿ, ಅಭಿನಂದನೆ ಸಲ್ಲಿಸಿದರು. ಜೊತೆಗೆ, ದಿಶಾಳ ಆಯ್ಕೆಯಂತೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಬಿ.ಕಾಂ ಶಿಕ್ಷಣ ಹಾಗೂ ನಂತರದ ಕನಸಾದ ಚಾರ್ಟರ್ಡ್ ಅಕೌಂಟೆಂಟ್ ಆಗುವವರೆಗಿನ ಶಿಕ್ಷಣ, ಊಟ ಮತ್ತು ವಸತಿಯ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಗವಾನ್ ಬುದ್ಧ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಮೇ 01 ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ತಮ್ಮ ಕಚೇರಿಯಲ್ಲಿ ನಡೆದ ಭಗವಾನ್ ಬುದ್ಧ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಾಗೂ ಸಮಾಜಕ್ಕೆ ಕೊಡುಗೆ ನೀಡಿದ ಮಹನೀಯರ ಸಂದೇಶಗಳನ್ನು ಸಮಾಜಕ್ಕೆ ತಿಳಿಸಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡಲು ಹಾಗೂ ದಾರ್ಶನಿಕರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಜಯಂತಿ ಕಾರ್ಯಕ್ರಮಗಳನ್ನು ಆಚರಣೆ ಮಾಡಲಾಗುತ್ತಿದೆ ಎಂದರು. ಜಿಲ್ಲಾಡಳಿತ ಹಾಗೂ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಉಡುಪಿ ಇವರ ಸಹಯೋಗದಲ್ಲಿ ಮೇ.01ರಂದು ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮವನ್ನು ಉಡುಪಿಯ ಬೋರ್ಡ್ ಹೈಸ್ಕೂಲ್ ನಲ್ಲಿ ಬೆಳಗ್ಗೆ 10 ಗಂಟೆಗೆ ಆಚರಿಸಲಾಗುವುದು ಎಂದ ಅವರು, ಕಾರ್ಯಕ್ರಮದ ಯಶಸ್ಸಿಗೆ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳುವಂತೆ…
