ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ದಾನಿಗಳ ಸಹಕಾರದೊಂದಿಗೆ ರೂಪಾಯಿ 60 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕೊರಗ ಕಾಲೋನಿಯ ಎಂಟು ಹೊಸ ಮನೆ ನಿರ್ಮಾಣಕ್ಕೆ ರೋಟರಿ ಕ್ಲಬ್ ಕೋಟ ಸಿಟಿ ವತಿಯಿಂದ ಸಹಾಯಧನ ಚೆಕ್ ವಿತರಣೆ ಕಾರ್ಯಕ್ರಮ ಕೊರಗರ ಕಾಲೋನಿಯಲ್ಲಿ ನಡೆಯಿತು. ರೋಟರಿ ಕ್ಲಬ್ ಕೋಟ ಸಿಟಿಯ ಅಧ್ಯಕ್ಷ ಪ್ರಕಾಶ್ ಹಂದಟ್ಟು ಅವರು ಮಾತನಾಡಿ, ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೊರಗರ ಎಂಟು ಹೊಸ ಮನೆ ನಿರ್ಮಾಣ ಕಾರ್ಯ ಶ್ಲಾಘನೀಯ ನಮ್ಮ ರೋಟರಿ ಕ್ಲಬ್ ಕೋಟ ಸಿಟಿ ಸದಸ್ಯರ ಸಹಕಾರದೊಂದಿಗೆ ಇಂದು ಸಹಾಯ ಧನ ಚೆಕ್ ವಿತರಿಸುತ್ತಿರುವ ಬಗ್ಗೆ ಖುಷಿ ಇದೆ. ಇಲ್ಲಿಯ ಮೂಲ ನಿವಾಸಿಗಳಿಗೆ ಹೊಸ ಎಂಟು ಮನೆ ನಿರ್ಮಿಸಿ ಕೊಡುವ ಮೂಲಕ ಕೋಟತಟ್ಟು ಗ್ರಾಮ ಪಂಚಾಯತ್ ಇತರ ಗ್ರಾಮ ಪಂಚಾಯತ್‌ಗಳಿಗೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್ ಬಾರಿಕೆರೆ ಅವರು ಮಾತನಾಡಿ, ತಳಮಟ್ಟದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗುಜರಾತ್‌ನ ಸೂರತ್‌ನಲ್ಲಿ ನಡೆದ 4ನೇ ರಾಷ್ಟ್ರೀಯ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ತಾಲೂಕಿನ ಗೋಳಿಬೇರು ಗ್ರಾಮದ ಗೋಕುಲ್ ಪೂಜಾರಿ ಅವರು 4*400 ಮೀಟರ್ ರಿಲೇಯಲ್ಲಿ ಚಿನ್ನ, ಶಾಟ್‌ಪುಟ್, 400 ಮೀಟರ್, 200 ಮೀಟರ್ ಓಟ ಮತ್ತು 4*100 ಮೀಟರ್ ರಿಲೇಯಲ್ಲಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ರುಡ್‌ಸೆಟ್ ಆಸರೆ ಸಂಘಟನೆ ಇದರ 20ನೇ ವರ್ಷದ ಸವಿ ನೆನಪಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ರುಡ್‌ಸೆಟ್ ಕ್ರಾಸ್ ಬಳಿ ನೂತನವಾಗಿ ನಿರ್ಮಿಸಿರುವ ಬಸ್ಸು ತಂಗುದಾಣದ ಲೋಕಾರ್ಪಣೆಯನ್ನು ಮಾನ್ಯ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಎ. ಸುವರ್ಣ ಅವರು ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಉಡುಪಿ ಕೆನರಾ ಬ್ಯಾಂಕಿನ ಮಹಾಪ್ರಬಂಧಕರಾಗಿರುವ ಗಂಗಾಧರ್ ಎಚ್ ಕೆ. ಅವರು ಬಸ್ಸು ತಂಗುದಾಣದ ಶಿಲಾಫಲಕ ಅನಾವರಣಗೊಳಿಸಿ, ನಂತರ ನಡೆದ ಸಭೆಯಲ್ಲಿ ಮಾತನಾಡಿ, ಕೆನರಾ ಬ್ಯಾಂಕಿನ ಮಹಾಪ್ರಬಂಧಕರಾಗಿರುವ ಗಂಗಾಧರ್ ಎಚ್.ಕೆ. ಆಸರೆ ಸಂಘಟನೆಯ ಈ ಸಮಾಜಮುಖಿ ಕಾರ್ಯ ಮಾದರಿಯಾಗಿದೆ. ಇದೇ ರೀತಿ ಅನೇಕ ಸಮಾಜ ಮುಖಿ ಕಾರ್ಯಗಳನ್ನು ಸಂಘಟನೆಯಿಂದ ನಡೆಸುವಂತಾಗಲಿ,ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಕೆನರಾ ಬ್ಯಾಂಕ್ ಸದಾ ನಿಮ್ಮ ಜೊತೆಗೆ ಇರುತ್ತದೆ ಎಂದು ಸಭೆಯನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರಿಣಿ ಅಜಯ್ ರಾವ್ ಅಧ್ಯಕ್ಷರು ಆಸರೆ ಸಂಘಟನೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉಪ ಮಹಾ ಪ್ರಬಂಧಕರಾಗಿರುವ ಮಹಾಮಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಹುಬ್ಬಳ್ಳಿಯ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಐದು ಚಿನ್ನ ಹಾಗೂ ಒಂದು ಬೆಳ್ಳಿ ಪದಕದೊಂದಿಗೆ ಒಟ್ಟು ಆರು ಪದಕಗಳನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆಯುವಲ್ಲಿ ಮಹತ್ವದ ಕೊಡುಗೆ ನೀಡಿದರು.ಫಲಿತಾಂಶ:58 ಕೆಜಿ ವಿಭಾಗದಲ್ಲಿ – ಸ್ಪೂರ್ತಿ (ದ್ವಿತೀಯ), 77 ಕೆಜಿ ವಿಭಾಗದಲ್ಲಿ – ಪಾವನಿ ಜೆ ಆರ್ (ಪ್ರಥಮ) 56 ಕೆಜಿ ವಿಭಾಗದಲ್ಲಿ – ಪೃಥ್ವಿಕ್ (ಪ್ರಥಮ), 60 ಕೆಜಿ ವಿಭಾಗದಲ್ಲಿ – ಸುರೇಶ್ ವೈ ಎಮ್ (ಪ್ರಥಮ), 65 ಕೆಜಿ ವಿಭಾಗದಲ್ಲಿ – ಹಜರೇಸಾಬ್ – (ಪ್ರಥಮ), 71 ಕೆಜಿ ವಿಭಾಗದಲ್ಲಿ – ಪ್ರಫುಲ್ ರಾಜೇಶ್ (ಪ್ರಥಮ) ಸ್ಥಾನ ಪಡೆದರು. ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್‌ನ ಐವರು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಎಚ್‌ಐವಿ ಏಡ್ಸ್ ಜಾಗೃತಿ ಅಭಿಯಾನದ ಅಂಗವಾಗಿ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಫ್ಲ್ಯಾಶ್ ಮಾಬ್ ಮತ್ತು ಬೀದಿ ನಾಟಕವನ್ನು ನಡೆಸಿದರು. ಉಡುಪಿ ಜಿಲ್ಲಾಡಳಿತ ಸ್ಥಳೀಯ ಆರೋಗ್ಯ ಇಲಾಖೆಗಳು, ಭಾರತೀಯ ರೆಡ್ ಕ್ರಾಸ್, ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಮತ್ತು ಸನ್ ರೈಸ ರೋಟರಿ ಕ್ಲಬ್ ಕುಂದಾಪುರ ಜಂಟಿಯಾಗಿ ಆಯೋಜಿಸಿದ್ದ ಈ ಕಾರ್ಯಕ್ರಮವು ಐಸಿಟಿಸಿ ಜಾಗೃತಿಯನ್ನು ತೀವ್ರಗೊಳಿಸುವ ಗುರಿಯನ್ನು ಹೊಂದಿದೆ. ಈ ಕಾರ್ಯಕ್ರಮದಲ್ಲಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಚಂದ್ರ ಮರಕಾಲ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾಕ್ಟರ್ ಪ್ರೇಮಾನಂದ ತಾಲೂಕು ಆರೋಗ್ಯ ಅಧಿಕಾರಿ, ಜಯಕರ ಶೆಟ್ಟಿ ಅಧ್ಯಕ್ಷರು ರೆಡ್ ಕ್ರಾಸ್ ಸೊಸೈಟಿ ಕುಂದಾಪುರ, ಗುರುರಾಜ ರೋಟರಿ ಕ್ಲಬ್ ಸನ್ ರೈಸ್ ಕುಂದಾಪುರ, ಡಾಕ್ಟರ್ ಕರುಣ ಆರೋಗ್ಯ ಅಧಿಕಾರಿ ಎ ಆರ್ ಟಿ ಕುಂದಾಪುರ, ಪ್ರಾಂಶುಪಾಲರು ಜೆನಿಫರ್ ಫ್ರೀಡ ಮೆನೆಜೆಸ್ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಕುಂದಾಪುರ, ಶ್ರೀಕಾಂತ್ ರಾವ್ ಸಹಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿದ್ಯಾರ್ಥಿಗಳು ಪಿಯುಸಿ ನಂತರದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಬಹಳ ಎಚ್ಚರಿಕೆಯಿಂದ ಇರಬೇಕು. ಯಾವುದೇ ಕೋರ್ಸ್‌ಗಳನ್ನು ಸೇರುವ ಮುನ್ನ ಅದರ ಸಾಧಕ ಬಾದಕಗಳನ್ನು ತಿಳಿದುಕೊಂಡು ಸ್ವಯಂ ಆಸಕ್ತಿಯಿಂದ ಸೇರಿದಾಗಲೇ ಯಶಸ್ಸು ಸಾಧ್ಯವಾಗುತ್ತದೆ ಎಂದು ತ್ರಿಷಾ ವಿದ್ಯಾ ಕಾಲೇಜಿನ ಕನ್ನಡ ಉಪನ್ಯಾಸಕ ಧೀರಜ್ ಬೆಳ್ಳಾರೆ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್‌ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಥಾಮಸ್ ಪಿ.ಎ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ನಿರ್ಮಲಾ ಪೂಜಾರಿ ಶುಭ ಹಾರೈಸಿದರು. ವಿದ್ಯಾರ್ಥಿ ಪ್ರತಿನಿಧಿ ಸನ್ವಿತಾ ಎಂ. ಖಾರ್ವಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್. ಕೆ. ಉಪಸ್ಥಿತರಿದ್ದರು. ಎಸ್. ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್. ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಸುಪ್ರೀತಾ ಆಚಾರ್ಯ ಪ್ರಾರ್ಥಿಸಿದರು. ಪ್ರಥ್ವಿ ಸ್ವಾಗತಿಸಿ, ಶ್ರಾವ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮ ಪಂಚಾಯತ್ ಗುಜ್ಜಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ, ಗುಜ್ಜಾಡಿ ಗ್ರಾಪಂ. ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಕಾರದೊಂದಿಗೆ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಹಾಗೂ ಪೌಷ್ಟಿಕಾಂಶ ಆಹಾರಗಳ ಬಗ್ಗೆ ಮಾಹಿತಿ ಶಿಬಿರವು ಇಲ್ಲಿನ ಗುಜ್ಜಾಡಿ ಗ್ರಾಮ ಪಂಚಾಯತ್‌ನ ಸಭಾಭವನದಲ್ಲಿ ಶನಿವಾರ ನಡೆಯಿತು. ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರವು ಹಮ್ಮಿಕೊಂಡಿರುವ ಒಂದು ಪ್ರಮುಖ ಕಾರ್ಯಕ್ರಮವಾಗಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ಬೆಳವಣಿಗೆಯ ಕುಂಠಿತವನ್ನು ಕಡಿಮೆ ಮಾಡುವುದು. ಗರ್ಭಿಣಿಯರು, ಹದಿಹರೆಯದ ಹೆಣ್ಣುಮಕ್ಕಳು ಮತ್ತು ಮಕ್ಕಳಲ್ಲಿ ರಕ್ತಹೀನತೆಯನ್ನು ಕಡಿಮೆ ಮಾಡುವುದು. ಪೌಷ್ಟಿಕ ಆಹಾರದ ಬಗ್ಗೆ ಮತ್ತು ಅದರ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮ ಮುಖ್ಯ ಉದ್ದೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಹಿಳೆಯರು ತಮಗಿರುವ ಹಕ್ಕುಗಳನ್ನು ತಿಳಿದುಕೊಳ್ಳಬೇಕು. ಮುಖ್ಯವಾಗಿ ವೈಯಕ್ತಿಕ ನೆಲೆಯಲ್ಲಿ ಯೋಚಿಸಬೇಕು. ತನ್ನ ಬದುಕಿನುದ್ದಕ್ಕೂ ಬರುವಂತಹ ಸವಾಲುಗಳನ್ನು ಎದುರಿಸುವುದಕ್ಕೆ ಸಿದ್ಧವಾಗುವುದಕ್ಕೆ ತಯಾರಾಗಿರಬೇಕು ಎಂದು ಉಡುಪಿಯ ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ ಮತ್ತು ಸಲಹೆಗಾರರಾದ ಸೌಜನ್ಯ ಶೆಟ್ಟಿ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆದ “ಮಹಿಳಾ ಕಿರುಕುಳ ವಿರೋಧಿ ಕೋಶ 2025-26” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ, ಆರ್ಥಿಕ, ಸಾಮಾಜಿಕ, ಉದ್ಯೋಗ, ಕಾನೂನು ಜ್ಞಾನ ಇವೆಲ್ಲವುಗಳನ್ನು ತಿಳಿದಿರಬೇಕು. ಮುಖ್ಯವಾಗಿ ಯುವತಿಯರು ತಮ್ಮ ಹದಿಹರೆಯದಲ್ಲಿ ಬರುವಂತಹ ಸಮಸ್ಯೆಗಳು ಬರದಂತೆ ಜಾಗೃತರಾಗಬೇಕು. ಅಲ್ಲದೆ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಿಂದ ಮಹಿಳೆಯರು ಮತ್ತು ಯುವತಿಯರು ಮೋಸಕ್ಕೆ ಒಳಗಾಗುತ್ತಿರುವದು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆ ಇತಿಮಿತಿಯಲ್ಲಿರಲಿ. ಈಗಿನ ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಖಾಸಗಿ ಫೋಟೊ ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಪ ಲೋಡ್ ಮಾಡುವಾಗ ಸೊಸೆ ತುಂಬಾ ಜಾಗೃತರಾಗಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳ ಮೂಲಕ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬಂದಿರುವ ‘ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ’ವು ಪದವಿ ಪೂರ್ವ ವಿಭಾಗದಲ್ಲಿ ದಾಖಲಾತಿ ಬಯಸುವ ವಿದ್ಯಾರ್ಥಿಗಳಿಗಾಗಿ ವಿಶೇಷ ಶೈಕ್ಷಣಿಕ ವಿದ್ಯಾರ್ಥಿ ವೇತನವನ್ನು(ಆಸೆ) ಕಳೆದ ಎರಡು ವರ್ಷಗಳಿಂದ ಆಯೋಜಿಸುತ್ತಿದೆ. 10ನೇ ತರಗತಿ (ಎಸ್ಸೆಸ್ಸೆಲ್ಸಿ)ಯಲ್ಲಿ ಸಿಬಿಎಸ್‌ಇ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ), ಐಸಿಎಸ್‌ಇ (ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ)ದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹರಾದ ವಿದ್ಯಾರ್ಥಿಗಳು ಶ್ರೇಷ್ಠ ಗುಣಮಟ್ಟದ ಪದವಿಪೂರ್ವ ಶಿಕ್ಷಣವನ್ನು ಆಳ್ವಾಸ್ ಪದವಿ ಪೂರ್ವ ಕಾಲೇಜಿನಿಂದ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಷಯಗಳಲ್ಲಿ ಪಡೆಯಬಹುದು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದಾನಗಳಲ್ಲೇ ಅತ್ಯಂತ ಶ್ರೇಷ್ಠ ದಾನ ರಕ್ತದಾನ. ಒಬ್ಬ ವ್ಯಕ್ತಿಯು ನೀಡುವ ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಕಾರ್ಯಗಳಲ್ಲಿ ಕೈಜೋಡಿಸಿ ಜನರ ಜೀವ ಉಳಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರಕ್ತನಿಧಿ ಕೇಂದ್ರ, ಯೂತ್ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಪೂರ್ಣ ಪ್ರಜ್ಞ (ಸ್ವಾಯತ್ತ) ಕಾಲೇಜು, ಪೂರ್ಣ ಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ಪೂರ್ಣ ಪ್ರಜ್ಞ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್ ಇವರ ಸಂಯುಕ್ತ ಆಶ್ರಯದಲ್ಲಿ ಪೂರ್ಣ ಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನ ಪ್ರಜ್ಞ ಸಭಾಂಗಣದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ-2025 ಹಾಗೂ ರಕ್ತದಾನಿಗಳ ಸನ್ಮಾನ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಅತಿ…
