ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಫೋಟೋಗ್ರಫಿ ಮತ್ತು ಡಿಜಿಟಲ್ ಕ್ಲಬ್ ನ ಆಶ್ರಯದಲ್ಲಿ ಫೋಟೋಗ್ರಫಿ ಕುರಿತು ವಿಚಾರ ಸಂಕಿರಣ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಗಳಿಸಿದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನ ಜರುಗಿತು. ಅಂತರಾಷ್ಟ್ರೀಯ ವೇದಿಕೆಯಲ್ಲಿ ಸಾಕಷ್ಟು ಪ್ರಶಸ್ತಿಗಳನ್ನು ಗಳಿಸಿದ ವನ್ಯಜೀವಿ ಛಾಯಾಚಿತ್ರ ಗ್ರಾಹಕರಾದ ಸಂತೋಷ್ ಕುಂದೇಶ್ವರ್ ಅವರ ಛಾಯಾಚಿತ್ರ ಪ್ರದರ್ಶನಗೊಂಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾಲೇಜಿನ ಫೋಟೋಗ್ರಾಫಿ ಅಂಡ್ ಡಿಜಿಟಲ್ ಕ್ಲಬ್ ನ ವಾರ್ಷಿಕ ಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ತಮ್ಮ 25 ವರ್ಷದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು ಮತ್ತು ಫೋಟೋಗ್ರಾಫಿ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು. ಇದೇ ಸಂದರ್ಭದಲ್ಲಿ ಅವರ 30ಕ್ಕೂ ಹೆಚ್ಚಿನ ಪ್ರಶಸ್ತಿ ಗಳಿಸಿದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನಗೊಂಡಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಜಯ ಕರ್ನಾಟಕ ದಿನಪತ್ರಿಕೆಯ ಹಿರಿಯ ಸಂಪಾದಕರಾದ ಜಾನ್ ಡಿಸೋಜ ಅವರು ಮಾತನಾಡಿ, ಫೋಟೋಗ್ರಾಫಿ ಕುರಿತ ಆಸಕ್ತಿ ಮತ್ತು ಅನುಭವವನ್ನು ಹಂಚಿಕೊಂಡರು. ಅಂತರಾಷ್ಟ್ರೀಯ ಮಟ್ಟದಲ್ಲಿ ವನ್ಯಜೀವಿ ಛಾಯಾಚಿತ್ರ ಗ್ರಹಣದಲ್ಲಿ ಸಾಕಷ್ಟು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿದ್ಯಾರ್ಥಿಗಳು ಪಠ್ಯದ ಜೊತೆ ವ್ಯವಹಾರ ಜ್ಞಾನ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ಬದುಕಿನಲ್ಲಿ ಯಶಸ್ಸನ್ನು ಕಂಡುಕೊಳ್ಳಲು ಇದು ಅತಿ ಮುಖ್ಯವಾಗುತ್ತದೆ ಎಂದು ಉದ್ಯಮಿ ವಿಠ್ಠಲ ಬಿ ಶಣೈ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಎಸ್.ವಿ. ಕಾಮರ್ಸ್ ಕ್ಲಬ್ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿಯ ಉದ್ಯಮಿ ರೋಷನ್ ಖಾರ್ವಿ ಎಸ್. ವಿ ಕಾಮರ್ಸ್ ಕ್ಲಬ್ ಲಾಂಛನವನ್ನು ಬಿಡುಗಡೆಗೊಳಿಸಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್.ವಿ.ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪಿ ಪೈ ಮತ್ತು ಮುಖ್ಯ ಅತಿಥಿ ಪತ್ರಕರ್ತ ಬಿ ರಾಘವೇಂದ್ರ ಪೈ ಶುಭ ಹಾರೈಸಿದರು. ಎಸ್. ವಿ.ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್ ಗಂಗೊಳ್ಳಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯದಲ್ಲಿ ಕಳೆದ ಹಲವು ವರ್ಷಗಳಿಂದ ಬಿಸಿಯೂಟ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಾದ ಜಲಜ ಪೂಜಾರಿ, ಪದ್ಮಾವತಿ, ಶಾರದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ ) ಮತ್ತು ಸರಸ್ವತಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ವಿದ್ಯಾರ್ಥಿನಿಯರಾದ ಅಪೂರ್ವ ಮತ್ತು ರಿಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜು ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ. ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ 2025-26ನೇ ಶೈಕ್ಷಣಿಕ ವ?ದ ಚಟುವಟಿಕೆಗಳಿಗೆ ಶುಕ್ರವಾರ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪತ್ರಕರ್ತ ಧನಂಜಯ ಮೂಡಬಿದಿರೆ ಮಾತನಾಡಿ, ಕೆಂಪು ಬಣ್ಣವನ್ನು ಸಾಮಾನ್ಯವಾಗಿ ಭೀಕರ, ಭಯಂಕರ, ರುದ್ರ ಎಂಬ ಅರ್ಥದಲ್ಲಿ ಕಾಣಲಾಗುತ್ತದಾದರೂ, ಅದು ಮುಗ್ದತೆಯ ಸಂಕೇತವೂ ಹೌದು. ಆ ಮುಗ್ದತೆಯೊಳಗೆ ಸೇವಾ ಮನೋಭಾವವನ್ನು ರಕ್ತಗತ ಮಾಡಿಕೊಂಡಿರುವುದೇ ಜೂನಿಯರ್ ರೆಡ್ ಕ್ರಾಸ್ ಸಂಸ್ಥೆ ಎಂದರು. ರೆಡ್ ಕ್ರಾಸ್ ಸಂಸ್ಥೆಯ ಧ್ಯೇಯವಾದ ಮಾನವೀಯತೆ, ನಿಷ್ಪಕ್ಷಪಾತತೆ, ತಟಸ್ಥತೆ, ಸ್ವಯಂಸೇವೆ, ಸ್ವಾತಂತ್ರ್ಯ, ಏಕತೆ, ಶಾಂತಿ-ಸ್ನೇಹ ಹಾಗೂ ಪ್ರಾಮಾಣಿಕತೆಗಳನ್ನು ಪ್ರತಿಯೊಬ್ಬ ಸದಸ್ಯರೂ ಪಾಲಿಸಬೇಕು. ಪ್ರೀತಿ-ಸ್ನೇಹವನ್ನು ಉತ್ತೇಜಿಸುವ ಕಾರ್ಯಕ್ರಮಗಳ ಮೂಲಕ ಈ ಸಂಸ್ಥೆ ಜನಾನುರಾಗಿಯಾಗಿದೆ ಎಂದು ಹೇಳಿದರು. ಸಮಾಜದಲ್ಲಿ ಶಾಂತಿ ಮತ್ತು ಸಹಕಾರವನ್ನು ಕಾಪಾಡುವಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕಗಳು ಮಹತ್ವದ ಪಾತ್ರ ವಹಿಸುತ್ತಿವೆ. ಈ ಸಂಸ್ಥೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ನಾಗರಿಕರು, ಜವಾಬ್ದಾರಿ ಹೊಂದಿದ ನಾಯಕರು ಮತ್ತು ನಿಜವಾದ ಮಾನವೀಯತೆಯ ಸೇವಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಇತರೆ ಪಕ್ಷದವರು ಇಂದು ಬೇರೆ ರಾಜ್ಯಗಳಲ್ಲಿ ನಮ್ಮ ಯೋಜನೆಗಳನ್ನು ನಕಲು ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕಾರ್ಕಳದ ಮಂಜುನಾಥ್ ಪೈ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ತಾಲೂಕು ಆಶ್ರಯದಲ್ಲಿ ಕಾರ್ಕಳ ಪುರಸಭೆ ಹಾಗೂ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಹಾಗೂ ಗ್ಯಾರಂಟಿ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕರ್ನಾಟಕ ಮಾಡೆಲ್ ಯೋಜನೆಗಳನ್ನು ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಬದಲಿಸಿಕೊಂಡಿದ್ದಾರೆ ಎಂದರು. ಕರ್ನಾಟಕದ 1.24 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆ ಹಣ ಸಂದಾಯ ಆಗುತ್ತಿದೆ. ಆದರೆ, ಜಿಎಸ್ಟಿ, ಆದಾಯ ತೆರಿಗೆ ಸಮಸ್ಯೆಯಿಂದ ಸುಮಾರ ಎರಡು ಲಕ್ಷ ಮಹಿಳೆಯರಿಗೆ ಹಣ ಸಂದಾಯ ಆಗುತ್ತಿಲ್ಲ. ಈ ಪೈಕಿ 50 ಸಾವಿರ ಮಹಿಳೆಯರಿಗಿದ್ದ ಜಿಎಸ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಿ., ಕಾರ್ಕಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರದಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ”ವನ್ನು ಆಯೋಜಿಸಲಾಯಿತು. ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸಂತೋಷ್ ಶೆಟ್ಟಿ ಅವರು ಉದ್ಘಾಟಿಸಿ ಮಾತನಾಡಿ ‘ಸಮಾಜದ ಪ್ರಗತಿ ಆರೋಗ್ಯದ ಹಾದಿಯಲ್ಲೇ ಅಡಗಿದೆ. ಆರೋಗ್ಯದ ಅರಿವು ಬೆಳೆಯಲು ಜಾಗೃತಿ ಅತ್ಯವಶ್ಯಕ ‘ ಎಂದು ಕಿವಿ ಮಾತುಗಳನ್ನು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಪ್ರಾದೇಶಿಕ ಕಛೇರಿ, ಉಡುಪಿಯ ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯ ಅವರು ಮಾತನಾಡಿ, ಆರೋಗ್ಯದ ಅರಿವು ಬೆಳಗಿದಾಗ ಮಾತ್ರ ಸಮಾಜ ಶ್ರೇಯೋಭಿವೃದ್ಧಿಯ ಹಾದಿ ಹಿಡಿಯುತ್ತದೆ ‘ ಎಂಬ ಸತ್ಯವಾಕ್ಯವನ್ನು ತಮ್ಮ ನಿರರ್ಗಳ ನುಡಿಗಳೊಂದಿಗೆ ತಿಳಿಸಿಕೊಟ್ಟರು. ಅಲ್ಲದೇ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಬಿ. ಗಣನಾಥ ಶೆಟ್ಟಿ ಅವರು ‘ ಜಾಗೃತಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೈಂದೂರು ವಲಯ ಇವರ ವತಿಯಿಂದ ಉಪ್ಪುಂದ ಶಂಕರ ಕಲಾ ಮಂದಿರದಲ್ಲಿ ಕುಂದ ಅಧ್ಯಯನ ಕೇಂದ್ರ ಉಪ್ಪುಂದ ಮತ್ತು ಲಯನ್ಸ್ ಕ್ಲಬ್ ಉಪ್ಪುಂದ ಇವರ ಸಹಕಾರದಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ ಜರುಗಿತು. ಉಪ್ಪುಂದ ಚಂದ್ರಶೇಖರ್ ಹೊಳ್ಳ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪ್ರಾಚ್ಯ ವಸ್ತುಗಳ ಬಗ್ಗೆ ಅರಿವು ಮೂಡಿಸಬೇಕಾದದ್ದು ನಮ್ಮೆಲ್ಲರ ಹೊಣೆಯಾಗಿದೆ. ಆ ಮೂಲಕ ನಮ್ಮ ಸಂಸ್ಕೃತಿಯ ಪರಿಚಯವನ್ನು ಮಾಡುವುದು ಅಗತ್ಯವಾಗಿದೆ ಎಂದರು. ಸಭಾ ಅಧ್ಯಕ್ಷತೆಯನ್ನು ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರದೀಪ್ ಕುಮಾರ್ ಶೆಟ್ಟಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಉದಯ್ ಕುಮಾರ್, ಬೈಂದೂರು ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷರಾದ ಗಿರೀಶ್ ಶಾನುಭಾಗ್, ಬೈಂದೂರು ಶಿಕ್ಷಣ ಸಂಯೋಜಕರಾದ ಚಂದ್ರ ದೇವಾಡಿಗ, ಹೆಮ್ಮಾಡಿ ಶಿಕ್ಷಣ ಸಂಯೋಜಕರಾದ ಯೋಗಿಶ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ರಾಮಕೃಷ್ಣ ದೇವಾಡಿಗ, ಮಂಜುನಾಥ ದೇವಾಡಿಗ, ರಾಧಿಕಾ ಬಿಐಆರ್‌ಟಿ, ನಾಗರತ್ನ ಉಪಸ್ಥಿತರಿದ್ದರು. ಕುಂದಾ ಅಧ್ಯಯನ ಕೇಂದ್ರದ ಸಂಚಾಲಕರಾದ ಗಣಪತಿ ಹೋಬಳಿದಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಅನ್ನೋನ್ಯತಾ ಗೂಡ್ಸ್ ವಾಹನ ಚಾಲಕ ಮತ್ತು ಮಾಲಕರು ಸಾಸ್ತಾನ ಮತ್ತು ಚೇತನಾ ಸ್ಪ್ರೀಂಟರ್ಸ್ ಪಾಂಡೇಶ್ವರ ಇವರ ಸಹಯೋಗದೊಂದಿಗೆ ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಮ್ಯಾರಥ್ಯಾನ್ ಕಾರ್ಯಕ್ರಮ ಸಾಸ್ತಾನ ಬಸ್ ನಿಲ್ದಾಣದ ಹತ್ತಿರ ಇತ್ತೀಚಿಗೆ ಜರಗಿತು. ಕಾರ್ಯಕ್ರಮವು ಸಾಸ್ತಾನದಿಂದ ಆರಂಭಗೊಂಡ ಪಾಂಡೇಶ್ವರ ಮೂಲಕ ಬೆಣ್ಣೆಕುದ್ರು ಬಾರಕೂರು ಮೂಲಕ ಮರಳಿ ಸಾಸ್ತಾನಕ್ಕೆ ತಲುಪಲಾಯಿತು. ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಪಟು ಕೋಟ ದಿನೇಶ್ ಗಾಣಿಗ ಹಾಗೂ ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್, ಸಾಸ್ತಾನ ಸಿಎ ಬ್ಯಾಂಕ್ ನಿರ್ದೇಶಕಿ ಲಿಲಾವತಿ ಗಂಗಾಧರ್, ಉದ್ಯಮಿ ಅನ್ವರ್ ಮಟಪಾಡಿ, ರಾಷ್ಟ್ರೀಯ ಕ್ರೀಡಾಪಟು ವಿಠ್ಠಲ್ ಶೆಟ್ಟಿಗಾರ್, ಅನ್ನೋನ್ಯತಾ ಗೂಡ್ಸ್, ವಾಹನ ಚಾಲಕ ಮತ್ತು ಮಾಲಕರು ಸಾಸ್ತಾನ ಇದರ ಅಧ್ಯಕ್ಷ ಸಂಜೀವ ಪೂಜಾರಿ, ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ರೋಟರಿ ಕ್ಲಬ್ ಹಂಗಾರಕಟ್ಟೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನ ಸಾಮಾನ್ಯರಿಗೆ ಉತ್ತಮ ಸೇವೆಗಳು ಲಭಿಸಿದರಷ್ಟೇ, ವಿಧಾನ ಸೌಧದ ಮಟ್ಟದಲ್ಲೂ ತ್ವರಿತಗತಿಯಲ್ಲಿ ಕೆಲಸಗಳಾಗುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿಪ್ರಾಯಪಟ್ಟರು. ಅವರು ಅಂದು ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕಾರ್ಕಳ ತಾಲೂಕು ಪಂಚಾಯತ್ ವತಿಯಿಂದ ಮಹಿಳಾ ಸ್ನೇಹಿ ನೀರೆ ಗ್ರಾಮ ಪಂಚಾಯತ್ ನ ನೂತನ ಕಟ್ಟಡ, ಸಭಾಭವನ, ಸಂಜೀವಿನಿ ಸಭಾಭವನ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಚೇರಿಯನ್ನು ಉದ್ಘಾಟಿಸಿ, ಮಾತನಾಡಿ, , ಭ್ರಷ್ಟಾಚಾರವನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಿತ್ತುಹಾಕಬೇಕು, ಆಗಷ್ಟೇ ಜನ ಸಾಮಾನ್ಯರಿಗೆ ನ್ಯಾಯ ಸಿಗುತ್ತದೆ ಎಂದರು. ಉಡುಪಿ ಜಿಲ್ಲೆಯ ಜನರು ಸಾಂಸ್ಕೃತಿಕ ರಾಯಭಾರಿಗಳು, ಬೇರೆ ಊರುಗಳಲ್ಲಿ ನೆಲೆಸಿದ್ದರೂ ಊರ ದೇವಸ್ಥಾನಗಳು, ಶಾಲೆಗಳ, ಹಾಗೂ ಗ್ರಾಮ ಪಂಚಾಯತಿ ಕಟ್ಟಡಗಳ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದಾರೆ. ಸರ್ಕಾರದ ಅನುದಾನಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ, ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟ 2025-26ರ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜು ತಂಡ ಹಾಗೂ ಕಾರ್ಕಳ ಶ್ರೀ ಭುವನೇಂದ್ರ ಕಾಲೇಜು ತಂಡ ಕ್ರಮವಾಗಿ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಟೆನ್ನಿಕಾಯ್ಟ್‌ನಲ್ಲಿ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ತಂಡ ಮತ್ತು ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಗಂಗೊಳ್ಳಿಯ ಎಸ್.ವಿ.…
