ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಸುರತ್ಕಲ್‌ನ ಗೋವಿಂದದಾಸ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಸುರತ್ಕಲ್‌ನಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ ಆಳ್ವಾಸ್ ಪ.ಪೂ ಕಾಲೇಜು 8 ಚಿನ್ನ ಹಾಗೂ 3 ಬೆಳ್ಳಿಯೊಂದಿಗೆ ಒಟ್ಟು 11 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು. ಹುಡುಗಿಯರ ವಿಭಾಗದಲ್ಲೂ ಆಳ್ವಾಸ್ 6 ಚಿನ್ನ ಹಾಗೂ 3 ಕಂಚಿನೊಂದಿಗೆ ಒಟ್ಟು 9 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡು ಅವಳಿ ಪ್ರಶಸ್ತಿಗೆ ಭಾಜನವಾಯಿತು. ಹುಡುಗರ ವಿಭಾಗದಲ್ಲಿ ಆಳ್ವಾಸ್ ಸಾಧನೆ:61 ಕೆಜಿ – ಅರುಣ್ (ಪ್ರಥಮ), 65 ಕೆಜಿ – ಶಶಿಕುಮಾರ್ (ಪ್ರಥಮ), ರಂಜನ್ (ದ್ವಿತೀಯ), 70 ಕೆಜಿ – ಮನೋಜ್ (ಪ್ರಥಮ), 74 ಕೆಜಿ – ಶಿವರಾಜ್ ಕುಮಾರ್ (ಪ್ರಥಮ), ರಜತ್ ಬಾಸು (ದ್ವಿತೀಯ), 79 ಕೆಜಿ – ಸಂಕೇತ್ (ಪ್ರಥಮ), 86 ಕೆಜಿ – ಕುಶಾಲ್ (ಪ್ರಥಮ), 92 ಕೆಜಿ – ಶಮಂತ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊಗವೀರ ಯುವ ಸಂಘಟನೆ ರಿ., ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇವರ ನೇತೃತ್ವದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ ಉಡುಪಿ ಇವರ ಸಹಯೋಗದೊಂದಿಗೆ ಶಿಕ್ಷಕ ದಿನಾಚರಣೆ ಪ್ರಯುಕ್ತ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಗಣೇಶ್ ಮೊಗವೀರ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ ರಿ., ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ, ಮಾಜಿ ಅಧ್ಯಕ್ಷರಾದ ಎಂ.ಎ೦ ಸುವರ್ಣ, ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಬಿಆರ್ ನಾಯ್ಕ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ ಗೌರವಾಧ್ಯಕ್ಷ ಲೋಹಿತಾಶ್ವ ಆರ್ ಕುಂದರ್, ಕಾರ್ಯದರ್ಶಿ ಜಗದೀಶ ನೆಂಪು, ಮಾಜಿ ಅಧ್ಯಕ್ಷ ರಾಘವೇಂದ್ರ ನೆಂಪು, ಸಾಂಸ್ಕೃತಿಕ ಕಾರ್ಯದರ್ಶಿ ಜಯಂತ್ ಕುಂದರ್, ಜನಾರ್ದನ ಮೊಗವೀರ ತೊಪ್ಪು, ಗಣೇಶ್ ಕಾಂಚನ್, ರಾಘವೇ೦ದ್ರ ಚಂದನ್ ಹಾಗೂ ಸ್ತ್ರೀಶಕ್ತಿ ಬಗ್ವಾಡಿ ಹೋಬಳಿ ಇದರ ಅಧ್ಯಕ್ಷರಾದ ಶ್ಯಾಮಲ ಜಿ. ಚಂದನ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೀದರಿನ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ (ಎಚ್. ಕೆ. ಇ. ಸೊಸೈಟಿ ) ವಿಧ್ಯಾರ್ಥಿನಿ ಅನುಪಮ ಹೊಳ್ಳ ಅವರು ಇಂಗ್ಲೀಷ್ ವಿಜ್ಞಾನ ವಿಭಾಗ ಪ್ರಥಮ ವರ್ಷ (ಬಿ. ಎಡ್) ದಲ್ಲಿ 8.75 ಎಸ್. ಜಿ. ಪಿ. ಎ. ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅನುಪಮ ಹೊಳ್ಳ ಅವರು ಬೀದರಿನ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಸಾಹಿತಿ ಗೋಪಾಲಕೃಷ್ಣ ಹೊಳ್ಳ ವಂಡ್ಸೆ ಅವರ ಪುತ್ರಿ.ಇವರು ಮೂಲತಃ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಾಲಿಗ್ರಾಮದವರು. ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಹಪಾಟಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನರ ಮೇಲೆ ಜಿ ಎಸ್ ಟಿ ಹೊರೆ ಹೋರಿಸಿದ್ದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಸಾಧನೆಯಾದರೆ ಜನಸಾಮಾನ್ಯರಿಗೆ ಹೊರೆಯಾಗಿದ್ದ ಜಿಎಸ್‌ಟಿ ವಿರುದ್ಧ ನಿರಂತರವಾಗಿ ಧ್ವನಿ ಏತ್ತಿ, ಹೋರಾಟ ಮಾಡಿ ಇವತ್ತು ಜಿಎಸ್‌ಟಿ ಹೊರೆ ಕಡಿಯಾಗಲು ಕಾರಣ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಕೇಂದ್ರ ಸರ್ಕಾರ ಅವೈಜ್ಞಾನಿಕ ಹಾಗೂಅಸಮರ್ಪಕ ಜಿ ಎಸ್ ಟಿ ಯನ್ನು 2016 ರಲ್ಲಿ ಜಾರಿಗೆ ತಂದಾಗ ಅಂದೇ ರಾಹುಲ್ ಗಾಂಧಿ ಇದನ್ನು ವಿರೋಧಿಸಿದ್ದರು ಹಾಗೂ ನಾಲ್ಕು ಶ್ರೇಣಿಯಲ್ಲಿರುವ ಜಿಎಸ್‌ಟಿಯನ್ನು ಎರಡು ಶ್ರೇಣಿಗೆ ಮಿತಿಗೊಳಿಸಲು ಆಗೃಹ ಮಾಡಿದ್ದರು ಹಾಗೂ ಜಿ ಎಸ್ ಟಿ ಗರಿಷ್ಠ ಮಿತಿಯನ್ನು 18% ಗೆ ನಿಗದಿಗೊಳಿಸುವಂತೆ ಸಲಹೆ ನೀಡಿದ್ದರು, ಆದರೆ ಕೇಂದ್ರ ಸರ್ಕಾರ ಇಷ್ಟು ವರ್ಷಗಳ ಕಾಲ ಸುಮಾರು 28% ತನಕ ನಾಲ್ಕು ಶ್ರೇಣಿಯಲ್ಲಿ ಜಿಎಸ್‌ಟಿ ಯನ್ನು ಜನಸಾಮಾನ್ಯರ ಮೇಲೆ ಹೇರಿ, ತೆರಿಗೆ ಹೆಸರಿನಲ್ಲಿ ಜನಸಾಮಾನ್ಯರ ಮೇಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಉದ್ಯೋಗ ಮತ್ತು ತರಬೇತಿ ಘಟಕ ಹಾಗೂ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆಯ ಸಂಘದ ಸಹಯೋಗದೊಂದಿಗೆ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ‘ಫೈನಾನ್ಸಿಯಲ್ ಸ್ಕಿಲ್ ಡೆವಲಪ್ಮೆಂಟ್’ ಎನ್ನುವ ವಿಷಯದ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಬೆಂಗಳೂರಿನ ಎಂ.ಎಫ್.ಕೆ ಫೌಂಡೇಶನ್ ನ ಸಾಂಸ್ಥಿಕ ಪಾಲುದಾರಿಕೆಗಳ ಮುಖ್ಯಸ್ಥೆ ಅರ್ಪಣಾ ಭಟ್ ನಡೆಸಿಕೊಟ್ಟರು. ಅವರು ಶೈಕ್ಷಣಿಕ ಕಲಿಕೆ ಮತ್ತು ಉದ್ಯಮದ ನಿರೀಕ್ಷೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಮಹತ್ವವನ್ನು ಒತ್ತಿ ಹೇಳಿದರು. ಕಾರ್ಪೊರೇಟ್ ಜಗತ್ತಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವಲ್ಲಿ ಪ್ರಾಯೋಗಿಕ ತರಬೇತಿ ಕೌಶಲ್ಯ ಮತ್ತು ವೃತ್ತಿಪರ ಸಂಪನ್ಮೂಲಗಳನ್ನು ಪಡೆದುಕೊಳ್ಳಬೇಕಾದ ಮಹತ್ವವನ್ನು ತಿಳಿಸಿದರು. ಕಾರ್ಯಾಗಾರದಲ್ಲಿ ಭಾಗವಹಿಸುವವರನ್ನು ಕಲಿಕೆ, ನಿರ್ವಹಣಾ ವ್ಯವಸ್ಥೆಗಳು (LMS) ಮತ್ತು ನೇರ ತರಬೇತಿ ಅವಧಿಗಳು ಸೇರಿದಂತೆ ಎಂ.ಎಫ್.ಕೆ ಯ ಉಚಿತ ಕೌಶಲ್ಯ ಅಭಿವೃದ್ಧಿ ಉಪಕ್ರಮಗಳನ್ನು ಪರಿಚಯಿಸಿದರು. ಕಾರ್ಯಕ್ರಮದ ಪ್ರಮುಖ ಭಾಗವಾಗಿ ಬೆಂಗಳೂರಿನ ಎಂ ಎಫ್ ಕೆ ಫೌಂಡೇಶನ್ ಮತ್ತು ಮೂಡ್ಲಕಟ್ಟೆ ಪದವಿ ಕಾಲೇಜಿನ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶುಕ್ರವಾರದಂದು ಶಿಕ್ಷಕರ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಅಂಗಡಿಯ ಕಾರ್ಯದರ್ಶಿಗಳು, ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ಶುಭಾಂಶು ಶುಕ್ಲಾ ಅವರು ಇಂದು ಭಾರತದ ಹೆಮ್ಮೆಯ ಪುತ್ರನಾಗಿದ್ದು, ಎಲ್ಲರಿಗೂ ತಿಳಿದ ವಿಷಯ. ಅವರು ಆ ಸಾಧನೆಯ ಶಿಖರದಲ್ಲಿದ್ದು ಮಾತಾಡುವಾಗ ಜೀವನಪಥದಲ್ಲಿ ಬೋಧಿಸಿದ ಶಿಕ್ಷಕರನ್ನು ಸ್ಮರಿಸಿದರು. ಪ್ರತಿಯೊಬ್ಬ ಸಾಧಕನ ಹಿಂದೆ ಕಾಣದ ಬಹಳಷ್ಟು ಜನರ ಪರಿಶ್ರಮ ಇದ್ದೇ ಇರುತ್ತದೆ. ಶಿಕ್ಷಕರು ಬಯಸಿದರೆ ಸಮಾಜವನ್ನೇ ಪರಿವರ್ತಿಸಬಹುದು. ವಿದ್ಯಾರ್ಥಿ ಶಿಕ್ಷಕರಿಂದ ಸದಾ ಸನ್ಮಾರ್ಗದರ್ಶನ ಪಡೆಯಬೇಕು. ತಂದೆ ತಾಯಿಯರಿಂದ ಆರಂಭಿಸಿ ನಮಗೆ ತಿಳಿಹೇಳಿದ ಎಲ್ಲರೂ ಶಿಕ್ಷಕರಾಗಿದ್ದು, ಅವರನ್ನು ಗೌರವಿಸುವುದನ್ನು ಮರೆಯಬಾರದು. ಎನ್ನುತ್ತಾ ಶಿಕ್ಷಕರಿಗೆ ಜವಾಬ್ದಾರಿಯನ್ನು ನೆನಪಿಸುತ್ತಾ, ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಬೋಧಿಸಿದರು. ಅತಿಥಿಗಳಾಗಿ ಆಗಮಿಸಿದ ರಾಘವೇಂದ್ರ ಭಾರತೀ ಸಂಸ್ಕೃತ ಮಹಾವಿದ್ಯಾಲಯ ಸುಬ್ರಹ್ಮಣ್ಯದ ನಿವೃತ್ತ ಪ್ರಾಂಶುಪಾಲರಾದ ವಿಶ್ವೇಶ್ವರ ಗೋಪಾಲ ಹೆಗಡೆ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಹಟ್ಟಿಯಂಗಡಿಯ ಪೂರ್ಣಚಂದ್ರನಂತೆ ಶೋಭಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಹಕಾರಿ ವ್ಯವಸಾಯಕ ಸಂಘದ ಅತ್ಯುತ್ತಮ ಕಾರ್ಯ ವೈಖರಿಯನ್ನು ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇವರು 2023-24ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ರಾಜ್ಯ ಮಟ್ಟದ ಅತ್ಯುತ್ತಮ ಸಾಧನಾ ಪ್ರಶಸ್ತಿ 2023-24 ನೀಡಿದ ಹಿನ್ನಲೆಯಲ್ಲಿ ಆ30.ರಂದು ಮಂಗಳೂರಿನಲ್ಲಿ ಜರಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯನ್ನು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ| ಕೃಷ್ಣ ಕಾಂಚನ್ ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಅವರಿಗೆ ಬ್ಯಾಂಕಿನ ಪರವಾಗಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎಚ್. ನಾಗರಾಜ ಹಂದೆ, ನಿಕಟಪೂರ್ವ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಮತ್ತು ಮಾಜಿ ನಿರ್ದೇಶಕರಾದ ಭಾಸ್ಕರ ಶೆಟ್ಟಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಪಾಠ – ಪ್ರವಚನದ ಜೊತೆಗೆ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅವಶ್ಯಕವಾಗಿದ್ದು, ತಮ್ಮ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಕೂಡ ಇದು ಸಹಾಯಕವಾಗುತ್ತದೆ ಎಂದು ಬೆಂಗಳೂರು ಮೆಂಟರ್ಸ್ ಫಾರ್ ಕಿಡ್ಸ್ ಫೌಂಡೇಶನ್ಸ್ನ ಅರ್ಪಣಾ ಭಟ್ ಹೇಳಿದರು. ಅವರು ಕೋಟೇಶ್ವರದ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಮೆಂಟರ್ಸ್ ಫಾರ್ ಕಿಡ್ಸ್ ಫೌಂಡೇಶನ್, ಬೆಂಗಳೂರು ಇವರ ಸಂಯುಕ್ತಾಶ್ರಯದೊಂದಿಗೆ ಉನ್ನತ ಕೌಶಲ್ಯದ ಕುರಿತು ನಡೆದ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಕೌಶಲ್ಯವು ಯುವ ಸಬಲೀಕರಣಕ್ಕೆ ನಾಂದಿಯಾಗಲಿದೆ. ಸಾಮಾನ್ಯರಿಂದ ವಿಶೇಷವಾಗಿ ಗುರುತಿಸಿಕೊಳ್ಳಲು ವಿದ್ಯಾರ್ಥಿಗಳು ನಿರಂತರ ಪ್ರಯತ್ನವನ್ನು ಮಾಡುತ್ತಲೇ ಇರಬೇಕು. ಹಾಗೂ ವಿವಿಧ ಸರ್ಟಿಫಿಕೇಟ್ ಪ್ರೋಗ್ರಾಂಗಳಲ್ಲಿ ಭಾಗವಹಿಸುವುದರ ಮೂಲಕ ಉದ್ಯೋಗ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಇದು ಉದ್ಯಮದ ಅಗತ್ಯವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಹಿಳಾ ವೇದಿಕೆ ಕೂಟ ಮಹಾ ಜಗತ್ತು ಸಾಲಿಗ್ರಾಮ ಅಂಗಸಂಸ್ಥೆ ಇದರ ರಜತ ವರ್ಷ ಸಂಭ್ರಮ ಸರಣಿ ಕಾರ್ಯಕ್ರಮ ಇತ್ತೀಚಿಗೆ ದೇವಸ್ಥಾನದ ಜ್ಞಾನ ಮಂದಿರದಲ್ಲಿ ಜರಗಿತು. ಇದೇ ವೇಳೆ ಸುಮನ ರವೀಂದ್ರ ಹೇರ್ಳೆ ಬರೆದಿರುವ ಶ್ರೀ ಗುರು ನರಸಿಂಹ ಕಾವ್ಯಧಾರೆ ಎನ್ನುವ ಪುಸ್ತಕ ಲೋಕಾರ್ಪಣೆಗೊಂಡಿತು. ಪುಸ್ತಕದ ಪರಿಚಯವನ್ನು ಸಾಹಿತಿ ಹರಿನರಸಿಂಹ ಉಪಾಧ್ಯಾಯ ಬೆಂಗಳೂರು ಅವರು ಮಾಡಿದರು. ಈ ಸಂದರ್ಭದಲ್ಲಿ ಸಾಹಿತಿ ಹರಿನರಸಿಂಹ ಉಪಾಧ್ಯಾಯ ಅವರನ್ನು ಗೌರವಿಸಲಾಯಿತು. ಲೇಖಕಿ ಸುಮನ ಹೆರ್ಳೆ ತನ್ನ ಅನಿಸಿಕೆ ಮತ್ತು ನೆರವಾದವರಿಗೆ ಕೃತಜ್ಞತೆ ಸಲ್ಲಿಸಿದರು. ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ.ಎಸ್ ಕಾರಂತ ಪುಸ್ತಕ ಬಿಡುಗಡೆಗೊಳಿಸಿ ಅತ್ಯುತ್ತಮ ಕೃತಿ ಗಾಗಿ ಶುಭ ಹಾರೈಸಿದರು. ಬಿಡುಗಡೆಯ ಸಂದರ್ಭದಲ್ಲಿ ಸಂಗೀತ ಶಿಕ್ಷಕಿ ಮಾಲಿನಿ ರಮೇಶ್ ಕೃತಿಯ ಆಯ್ದ ಕೆಲವು ಹಾಡುಗಳನ್ನು ಹಾಡಿದರು. ಇದೇ ಸಂದರ್ಭದಲ್ಲಿ ಸಾಹಿತ್ಯ ಅಭಿಮಾನಿ ಲೇಖಕಿ ವಿಮಲಾ ನಾವಡ ಕುಂದಾಪುರ ಇವರನ್ನು ಮಹಿಳಾ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಯ ಅನಾವರಣಕ್ಕಾಗಿ ಸಾಂಸ್ಕೃತಿಕ ತೇರು, ಕಲೆಗಳ ಮೇರು ಶೀರ್ಷಿಕೆಯಡಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಗುರುವಾರ ನೆರವೇರಿತು. ದೀಪ ಪ್ರಜ್ವಲನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆ ಜಗದಗಲ ಪಸರಿಸುವಂತಾಗಲಿ ಎನ್ನುವ ಸದಾಶಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಜಾನಪದ ಅಕಾಡೆಮಿ ಪುರಸ್ಕೃತರಾದ ಡಾ. ಗಣೇಶ್ ಗಂಗೊಳ್ಳಿ ಅವರು ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಕಲೆ, ಸಂಸ್ಕೃತಿಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ರಸಾಯನಶಾಸ್ತ್ರ ಉಪನ್ಯಾಸಕರಾದ ರಮಾಕಾಂತ್ ರೇವಣಕರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವೈವಿಧ್ಯಮಯ ಪ್ರತಿಭೆಗಳ ಪ್ರದರ್ಶನ ನೆರವೇರಿತು. ಇದು ಕೇವಲ ಸ್ಪರ್ಧೆಯಾಗಿರದೆ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಕಲಾಪ್ರತಿಭೆಯನ್ನು ಪ್ರದರ್ಶಿಸುವ ವೇದಿಕೆಯಾಗಿತ್ತು. ವಿದ್ಯಾರ್ಥಿಗಳಾದ ಪಂಚಮಿ…
