ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.25: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ.30ರಂದು ಜರುಗಿದ್ದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಗುತ್ತಿಗೆದಾರ, ತೆಕ್ಕಟ್ಟೆ ಬೆಟ್ಟು ನಿವಾಸಿ ಸುರೇಂದ್ರ ದೇವಾಡಿಗ (43) ಮೃತಪಟ್ಟಿದ್ದಾರೆ. ಅಪಘಾತದಲ್ಲಿ ತಲೆ ಹಾಗೂ ಇತರ ಭಾಗಗಳಿಗೆ ಗಂಭೀರ ಗಾಯವಾಗಿತ್ತು. ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂರು ದಿನಗಳ ಬಳಿಕ ಅವರನ್ನು ಡಿಸ್ಚಾರ್ಜ್ ಕೂಡ ಮಾಡಲಾಗಿತ್ತು. ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅವರಿಗೆ ಮತ್ತೆ ತಲೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸುರೇಂದ್ರ ದೇವಾಡಿಗ ತೆಕ್ಕಟ್ಟೆ ಭಾಗದಲ್ಲಿ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಕೊಂಡಿದ್ದು ಈ ಭಾಗದಲ್ಲಿ ಜನಪ್ರಿಯರಾಗಿದ್ದರು. ಮೃತರು ಮಡದಿ, ಪೋಷಕರು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.14: ಮಾಜಿ ಶಾಸಕ, ಹಿರಿಯ ಮುತ್ಸದ್ದಿ ಎ.ಜಿ.ಕೊಡ್ಗಿ (93) ಅಂತ್ಯಸಂಸ್ಕಾರವು ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಗಳವಾರ ಅಮಾಸೆಬೈಲಿನಲ್ಲಿ ನಡೆಯಿತು. ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಗಣ್ಯರು, ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದ್ದರು. ಅಂತ್ಯಸಂಸ್ಕಾರಕ್ಕೂ ಮುನ್ನ ಸಾರ್ವಜನಿಕ ದರ್ಶನಕ್ಕೆ ಅವಕಾಶವನ್ನು ಅಮಾಸೆಬೈಲುವಿನ ಗೋಕುಲ್ ಇಂಡಸ್ಟ್ರೀಸ್ ವಠಾರದಲ್ಲಿ ಮಾಡಿಕೊಡಲಾಗಿತ್ತು. ► ಮಾಜಿ ಶಾಸಕ, ಆಧುನಿಕ ಅಮಾಸೆಬೈಲುವಿನ ನಿರ್ಮಾತೃ ಎ.ಜಿ. ಕೊಡ್ಗಿ ನಿಧನ – https://kundapraa.com/?p=59835 . ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಗೃಹ ಸಚಿವ ಅರಗ ಜ್ಞಾನೆಂದ್ರ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಶಾಸಕರಾದ ಲಾಲಾಜಿ ಆರ್. ಮೆಂಡನ್, ಹರೀಶ್ ಪೂಂಜಾ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಕುಂದಾಪುರ ತಹಶಿಲ್ದಾರ್ ಕಿರಣ್ ಗೌರಯ್ಯ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.13: ಸೋಮವಾರ ದೈವಾಧೀನರಾದ ಮಾಜಿ ಶಾಸಕ ಎ.ಜಿ ಕೊಡ್ಗಿಯವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಅಮಾಸೆಬೈಲುವಿನ ಗೋಕುಲ್ ಇಂಡಸ್ಟ್ರೀಸ್ ವಠಾರದಲ್ಲಿ ಇರಿಸಲಾಗಿದ್ದು, ಮಂಗಳವಾರ ವಿವಿಧ ಕ್ಷೇತ್ರಗಳ ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಗೃಹ ಸಚಿವ ಅರಗ ಜ್ಞಾನೆಂದ್ರ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಶಾಸಕರಾದ ಲಾಲಾಜಿ ಆರ್. ಮೆಂಡನ್, ಹರೀಶ್ ಪೂಂಜಾ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಕುಂದಾಪುರ ತಹಶಿಲ್ದಾರ್ ಕಿರಣ್ ಗೌರಯ್ಯ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್ ಸಹಿತ ಅನೇಕ ಗಣ್ಯರು ಭಾಗಿಯಾಗಿ ಅಂತಿಮ ನಮನ ಸಲ್ಲಿಸಿದ್ದರು. ಸರಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ:ಸಕಲ ಸರಕಾರಿ ಗೌರವದೊಂದಿಗೆ ಕೋವಿಡ್ ನಿಯಮ ಪಾಲಿಸಿಕೊಂಡು ಎ.ಜಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ನೀಟ್, ಸಿ.ಇ.ಟಿ, ಜೆ.ಇ.ಇ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ. ಶಶಿಕಾಂತ್ ಹತ್ವಾರ್ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಜಿ. ಎಂ. ಗೊಂಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ರಿತೇಶ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ವೈದ್ಯಕೀಯ ಸಂಘ ಕುಂದಾಪುರ ಘಟಕ ಹಾಗೂ ಕೆ.ಎಂ.ಸಿ ಮಣಿಪಾಲದ ಸಹಯೋಗದಲ್ಲಿ “ಬೆಸಿಕ್ಸ್ ಆಫ್ ಪಿಇಟಿ ಸಿಟಿ” ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಕೋಟೇಶ್ವರದ ಸಹನಾ ಹೋಟೆಲಿನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕೆಎಂಸಿ ಮಣಿಪಾಲದ ನ್ಯೂಕ್ಲಿಯರ್ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ. ಸುಮೀತ್ ಸುರೇಶ್ ಮಲಪೂರೆ ಅವರು ಭಾಗವಹಿಸಿದ್ದರು. ಐಎಂಎ ಕುಂದಾಪುರದ ಅಧ್ಯಕ್ಷರಾದ ಎಲುಬು ಕೀಲು ಶಸ್ತ್ರ ಚಿಕಿತ್ಸಾ ತಜ್ನ ಡಾ. ಸಂದೀಪ ನಾವಡ ಪಡುಕೋಣೆ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮಾನಸಿಕ ತಜ್ಞ ಡಾ. ರವೀಂದ್ರ ಮುನೊಳಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾಜಿ ಶಾಸಕ, ಮೂರನೇ ಹಣಕಾಸು ಆಯೋಗದ ಅಧ್ಯಕ್ಷ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (93) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಬಹು ಅಂಗಾಗಳ ವೈಫಲ್ಯಕ್ಕೆ ಒಳಗಾಗಿದ್ದರು. 5 ವರ್ಷಗಳ ಹಿಂದೆ ಎ.ಜಿ. ಕೊಡ್ಗಿ ಅವರೊಂದಿಗೆ ‘ಕುಂದಾಪ್ರ ಡಾಟ್ ಕಾಂ’ ನಡೆಸಿದ ಸಂದರ್ಶನ ► ಆಧುನಿಕ ಅಮಾಸೆಬೈಲುವಿನ ನಿರ್ಮಾತೃ ಎ.ಜಿ. ಕೊಡ್ಗಿ – https://kundapraa.com/?p=3243 . ಕರಾವಳಿ ಜಿಲ್ಲೆಯ ರಾಜಕಾರಣದಲ್ಲಿ ಅಪರೂಪದ ರಾಜಕೀಯ ಚಾಣಾಕ್ಷನಾಗಿ ತೊಡಗಿಸಿಕೊಂಡು, ತಾನು ಗುರುತಿಸಿಕೊಂಡ ಪಕ್ಷದಲ್ಲಿ ನಿಷ್ಠೆ ಹಾಗೂ ಬದ್ಧತೆಯನ್ನು ತೋರಿಸಿ, ಪಕ್ಷಕ್ಕೆ ತನ್ನ ಅವಶ್ಯಕತೆಯಿಲ್ಲ ಎಂದೆನಿಸಿದಾಗ ರಾಜಕೀಯದಿಂದಲೇ ನಿವೃತ್ತಿ ಪಡೆದ ಅಪರೂಪದ ಮುತ್ಸದ್ದಿ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎ.ಜಿ. ಕೊಡ್ಗಿ). ಅವರು ರಾಜಕೀಯದಲ್ಲಿ ಮಾತ್ರ ತೊಡಗಿಸಿಕೊಳ್ಳದೇ ಕೃಷಿ, ಸಹಕಾರಿ ಕ್ಷೇತ್ರದಲ್ಲಿಯೂ ತಮ್ಮ ಛಾಪು ಮೂಡಿಸಿದವರು. 93ರ ವಯಸ್ಸಿನಲ್ಲಿಯೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.13: ಹಳೆ ವಿದ್ಯಾರ್ಥಿಗಳ ನೆನಪು ಹಾಗೂ ಚಟುವಟಿಕೆಗಳು ನೆನಪಿನ ಬುತ್ತಿಗಳಾಗಬೇಕಾದರೆ, ಅವುಗಳನ್ನು ಶಾಶ್ವತವಾಗಿ ಸಂಗ್ರಹಿಸಿಡುವ ಕಾರ್ಯಗಳು ನಡೆಯಬೇಕು. ಶಾಲೆಯ ಹಳೆಯ ವಿದ್ಯಾರ್ಥಿಗಳೇ ಆಯಾ ಶಿಕ್ಷಣ ಸಂಸ್ಥೆಗಳ ಶಾಶ್ವತ ಆಧಾರ ಸ್ತಂಭಗಳು ಎಂದು ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಸಿಇಓ ಮಹಾಬಲೇಶ್ವರ ಎಂ.ಎಸ್ ಹೇಳಿದರು ಇಲ್ಲಿನ ಕಲಾ ಮಂದಿರದಲ್ಲಿ ಬೋರ್ಡ್ ಹೈಸ್ಕೂಲ್ ಕುಂದಾಪುರ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಭಾನುವಾರ ನಡೆದ ಶತಮಾನೋತ್ತರ ಬೆಳ್ಳಿ ಹಬ್ಬ ಭವನ ಹಸ್ತಾಂತರ ಹಾಗೂ ಈ ಶಾಲೆಗೆ ತಂದ ನಂದಳಿಕೆ ಮುದ್ದಣ, ಡಾ. ಕೋಟ ಶಿವರಾಮ ಕಾರಂತ ಹಾಗೂ ಮೊಗೇರಿ ಗೋಪಾಲಕೃಷ್ಣ ಅಡಿಗರ ಪುತ್ಥಳಿ ಅನಾವರಣ ಮಾಡಿ ಅವರು ಮಾತನಾಡಿದರು. ವ್ಯಕ್ತಿಗಳು ಸಾಧನೆಯ ಮೂಲಕ ಸಮಾಜದ ಆಸ್ತಿಗಳಾಗಬೇಕು. ಸಾಹಿತ್ಯ ಕ್ಷೇತ್ರದ ಮೇರು ವ್ಯಕ್ತಿತ್ವ ರೂಪಿಸಿಕೊಂಡಿದ್ದ ಡಾ.ಕಾರಂತ, ಅಡಿಗ ಹಾಗೂ ಮುದ್ದಣ್ಣ ಅವರಂತಹ ಸಾಹಿತ್ಯ ರತ್ನಗಳು ಶಾಶ್ವತವಾಗಿ ಜನ ಮಾನಸದಲ್ಲಿ ಉಳಿಯುವಂತಹ ಕಾರ್ಯಗಳು ನಡೆಯಬೇಕು ಎಂದರು. ಶತಮಾನೋತ್ತರ ಬೆಳ್ಳಿ ಹಬ್ಬ ಸಮಿತಿ ಕಾರ್ಯಾಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲಾರದ ರಾಗಿಣಿಯವರು 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾಹಿತಿ ನೀಡಿದರು. ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೆಂಕಟರಮಣ ಪ್ರೌಢ ಶಾಲಾ ವಿಭಾಗದ ಮುಖ್ಯಸ್ಥರಾದ ಕೃಷ್ಣ ಅಡಿಗ, ವೆಂಕಟರಮಣ ಕಾಲೇಜಿನ ರಸಾಯನ ಶಾಸ್ತ್ರ ಉಪನ್ಯಾಸಕರರಾದ ರಮಾಕಾಂತ ರೇವಣಕರ್ ಸಭೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭಾಗ್ ಸ್ವಾಗತಿಸಿದರು. ಉಪ ಪ್ರಾಂಶುಪಾಲೆ ಮಮತಾ ರೈ ವಂದಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.13: ಕೇರಳದ ಮಲಪ್ಪುರಂನಿಂದ ಪವಿತ್ರ ಹಜ್ ಯಾತ್ರೆಗೆ ಹೊರಟಿರುವ ಯುವಕ ಶಿಹಾಬ್ ಚೊಟೂರು (30) ಅವರನ್ನು ಕುಂದಾಪುರ ಹಾಗೂ ಗಂಗೊಳ್ಳಿ ಭಾಗದಲ್ಲಿ ಮಸ್ಜಿದ್ ಕಮಿಟಿ ಹಾಗೂ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಸ್ವಾಗತಿಸಿಕೊಳ್ಳಲಾಯಿತು. ಜೂನ್ 2 ರಂದು ಶಿಹಾಬ್ ಮಲಪ್ಪುರಂನಿಂದ ಕಾಲ್ನಡಿಗೆಯಲ್ಲಿ ಹೊರಟ ಯುವಕ ಭಾನುವಾರ ಉಡುಪಿ ಮಸೀದಿ ತಲುಪಿದ್ದರು. ಬೆಳಿಗ್ಗೆ ಅಲ್ಲಿಂದ ಕಾಲ್ನಡಿಗೆಯಲ್ಲಿ ಹೊರಟು ಮದ್ಯಾಹ್ನ ಕೋಟ ಜಾಮಿಯಾ ಮಸೀದಿಯಲ್ಲಿ ಉಪಹಾರ ಸೇವಿಸಿ ಹೊರಟು ರಾತ್ರಿ ಕುಂದಾಪುರದ ಹಂಗಳೂರು ಮಸೀದಿಯಲ್ಲಿ ತಂಗಿದ್ದರು. ಸೋಮವಾರ ಬೆಳಿಗ್ಗೆ ಕುಂದಾಪುರದಿಂದ ಕಾಲ್ನಡಿಗೆಯಲ್ಲಿ ಹೊರಟು ಬೆಳಿಗ್ಗೆ ಗಂಗೊಳ್ಳಿ ಪ್ರಾಂತ್ಯದ ತ್ರಾಸಿ ಮಸೀದಿಗೆ ತಲುಪಿದ್ದರು. ತ್ರಾಸಿ ಮಸೀದಿಯಲ್ಲಿ ಜಮಾತುಲ್ ಮುಸ್ಲಿಮೀನ್ ಗಂಗೊಳ್ಳಿಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು ಶಾಲು ಹೊದಿಸಿ ಸನ್ಮಾನಿಸಿದರು. ಮುಂದೆ ನಾವುಂದ ಮಸೀದಿ ವ್ಯಾಪ್ತಿಯಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದ್ದಾರೆ. ಎಲ್ಲಾ ಭಾಗದಲ್ಲಿಯೂ ಅವರನ್ನು ಸ್ವಾಗತಿಸಿಕೊಳ್ಳಲಾಗುತ್ತಿದೆ. ಶಿಹಾಬ್ ಚೊಟೂರು ಅವರು ಕೇರಳ ರಾಜ್ಯದಿಂದ ಪ್ರಾರಂಭಿಸಿ ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ತಾನ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಸಾoವಿಧಾನಿಕ ಸಂಸ್ಥೆಗಳನ್ನು ವಿರೋಧ ಪಕ್ಷಗಳನ್ನು ಮಣಿಸಲು ಬಳಸಿಕೊಂಡ ಸ್ವಾತಂತ್ರ್ಯ ನಂತರದ ಪ್ರಥಮ ಪ್ರಧಾನಿ ನರೇಂದ್ರ ಮೋಧಿ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಆರೋಪಿಸಿದ್ದಾರೆ. ವಿರೋಧ ಪಕ್ಷಗಳ ಮಣಿಸಲು ಸ್ವಾಯತ್ತ ಸಂಸ್ಥೆಗಳಾದ ಐಟಿ ,ಇಡಿ ಮತ್ತು ಸಿಬಿಐ ಯಂತಹ ಸಂಸ್ಥೆಗಳನ್ನು ಕಳೆದ 8 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋಧಿ ಮತ್ತು ಗ್ರಹ ಸಚಿವ ಅಮಿತ್ ಷಾ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ದುರದ್ರಷ್ಟಕರ ಎಂದಿದ್ದಾರೆ. ಪ್ರಸ್ತುತ ದಿನಗಳಲ್ಲಿ ಕಾಂಗ್ರೆಸ್ ನಾಯಕರುಗಳನ್ನು ಮತ್ತು ದೇಶದ ವಿರೋಧ ಪಕ್ಷದ ಮುಖಂಡರನ್ನುಮಣಿಸಲು ಸ್ವಾಯತ್ತ ಸಂಸ್ಥೆ ಗಳ ದುರ್ಬಳಕೆ ಮಾಡಿ ದಾಳಿ ಮಾಡುವುದು ನಿರಂತರವಾಗಿ ನಡೆಯುತ್ತಾ ಬಂದಿದ್ದು, ಪ್ರಜೆಗಳ ಸ್ವಾತಂತ್ರ್ಯ ಕಿತ್ತುಕೊoಡು ಅಧಿಕಾರ ದುರ್ಬಳಕೆ ಮಾಡುತ್ತಿರುವುದು ಖಂಡನೀಯ. ಇಂತಹ ಸರ್ವಾಧಿಕಾರಿ ಆಡಳಿತಕ್ಕೆ ಮುಂದಿನ ದಿನಗಳಲ್ಲಿ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
